Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಮೊಗವೀರ ಮಹಾಜನ ಸಂಘದಿಂದ ಜೂ.17ರಂದು ವಾರ್ಷಿಕ ಮಹಾಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಸಭೆಯಲ್ಲೇ ನೋಟ್ ಬುಕ್ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಕೂಡ ನಡೆಯಲಿದೆ. ಈ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಸಾಗರ ತಾಲ್ಲೂಕು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ನಾಗರಾಜ್ ಆರ್ ಜಲಗುಂಜಿ ಅವರು, 2024-25ನೇ ಸಾಲಿನ ವಾರ್ಷಿಕ ಮಹಾ ಸಭೆಯನ್ನು ದಿನಾಂಕ 17-06-2024ರಂದು ನಡೆಸಲು ನಿಗದಿ ಪಡಿಸಲಾಗಿದೆ. ಸಾಗರದ ಮಾಧವ ಮಂಗಲ ಸಭಾ ಭವನದಲ್ಲಿ ಸಭೆ ನಡೆಸಲು ನಿಗದಿ ಪಡಿಸಲಾಗಿದೆ ಎಂದರು. ಈ ಮಹಾಸಭೆಯ ಕಾರ್ಯಕ್ರಮವನ್ನು ಉಡುಪಿಯ ಡಾ.ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿಯ ನಾಡೋಜ ಡಾ.ಜಿ ಶಂಕರ್ ಅವರು ಉದ್ಘಾಟಿಸಲಿದ್ದಾರೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದಂತ ಜಯ ಸಿ ಕೋಟ್ಯಾನ್ ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು. ಜೂನ್.17ರ ಸಂಘದ ಸಭೆಯ ವೇಳೆಯಲ್ಲಿ 2024-25ನೇ ಸಾಲಿನಲ್ಲಿ ಮೊಗವೀರ ಸಮುದಾಯದ ವಿದ್ಯಾರ್ಥಿಗಳಿಗೆ ನೋಟ್…
ಶಿವಮೊಗ್ಗ: ಈ ಹಿಂದೆ 2019ರಲ್ಲಿ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ, ಪರಿಶಿಷ್ಟ ಪಂಗಡದ ಬುಡಕಟ್ಟು ಜನಾಂಗದವರಿಗೆ ಪೌಷ್ಟಿಕ ಆಹಾರ ಯೋಜನೆ ಅನುಷ್ಠಾನಗೊಳಿಸಲಾಗಿತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಸಿದ್ಧರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿಯೇ ಅವರ ಮಹತ್ವಾಕಾಂಕ್ಷೆಯ ಯೋಜನೆ ಸ್ಥಗಿತಗೊಂಡಿದೆ. ಈ ಪೌಷ್ಟಿಕ ಆಹಾರ ಯೋಜನೆಯನ್ನು ಪುನರ್ ಪ್ರಾರಂಭಿಸುವಂತೆ ಕರ್ನಾಟಕ ಅರಣ್ಯ ಮೂಲ ಬುಡಕಟ್ಟುಗಳ ಒಕ್ಕೂಟ ಆಗ್ರಹಿಸಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಸಾಮಾಜಿಕ ಹೋರಾಟಗಾರ ಶಿವಾನಂದ ಕುಗ್ವೆ ಅವರು, ಹೆಚ್. ಆನಂಜನೇಯ ಸಮಾಜ ಕಲ್ಯಾಣ ಸಚಿವರಾಗಿದ್ದಂತ ಸಂದರ್ಭದಲ್ಲಿ, ಸಿಎಂ ಸಿದ್ಧರಾಮಯ್ಯ ಅವರು ಅರಣ್ಯ ಹಾಗೂ ಅರಣ್ಯಗಳ ಅಂಚಿನಲ್ಲಿ ವಾಸ ಮಾಡುತ್ತಾ, ಭೂಹೀನ ಕೃಷಿ ಕಾರ್ಮಿಕರಾಗಿರುವ ಹಸಲರು ಜನಾಂಗಕ್ಕೆ ಪೌಷ್ಟಿಕ ಆಹಾರ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಆದ್ರೇ ಈ ಯೋಜನೆ ಈಗ ಸ್ಥಗಿತಗೊಂಡಿದ್ದು, ಹಸಲರು ಸಮುದಾಯದವರಿಗೆ ಒಂದೊತ್ತಿನ ಊಟಕ್ಕೂ ಸಮಸ್ಯೆ ಉಂಟಾಗಿದೆ ಎಂದರು. 2019ರಲ್ಲಿ ಸಿಎಂ ಸಿದ್ಧರಾಮಯ್ಯ ಜಾರಿಗೊಳಿಸಿದ್ದಂತ ಯೋಜನೆಯನ್ನು ಕಳೆದ ನಾಲ್ಕು…
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ( PDO) ವೃಂದದ ರಾಜ್ಯ ಮಟ್ಟದ ಕರಡು ಜೇಷ್ಟತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವೃಂದದ ದಿನಾಂಕ: 31.12.2011ರಲ್ಲಿದ್ದಂತೆ, ಅಂತಿಮ ಜೇಷ್ಟತಾ ಪಟ್ಟಿಯನ್ನು ಉಲ್ಲೇಖಿತ (1)ರ ಸರ್ಕಾರದ ಆದೇಶದಲ್ಲಿ ಪುಕಟಿಸಲಾಗಿರುತ್ತದೆ ಎಂದಿದ್ದಾರೆ. ಜೇಷ್ಕೃತೆ ನಿರ್ಧರಣೆ ಸಂಬಂಧವಾಗಿ ಬಾಧಿತರಾದ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಹಲವು ರಿಟ್ ಅರ್ಜಿಗಳನ್ನು ಸಲ್ಲಿಸಿ ಪ್ರಶ್ನಿಸಿದ್ದರು. ಮಾನ್ಯ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ ಸಂಖ್ಯೆ: 4524/2021 (ORE DEF GEF 26196 of 2019, 33613 of 2019, 201903 of 2019, 224 of 2021, 200780 of 2022, 3036 of 2023) O: 22.06.2023 dow ಹೊರಡಿರುವ…
ನವದೆಹಲಿ: ಬಹುತೇಕರು ಎರಡು ಇಲ್ಲವೇ ಅದಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಗಳನ್ನು ಬಳಕೆ ಮಾಡುತ್ತಿರುತ್ತಾರೆ. ಹೀಗೆ ಒಂದಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಬಳಕೆ ಮಾಡೋರಿಗೆ ಬಳಕೆದಾರರ ಶುಲ್ಕವನ್ನು ಟ್ರಾಯ್ಡ್ ವಿಧಿಸಲಿದೆ ಎಂಬುದಾಗಿ ಸುದ್ದಿಯೊಂದು ಹರಿದಾಡುತ್ತಿತ್ತು. ಅದರ ಅಸಲಿ ಸತ್ಯ ಏನು ಅಂತ ಮುಂದೆ ಓದಿ. ಅನೇಕರು ಎರಡು ಮೊಬೈಲ್ ಗಳನ್ನು ಬಳಕೆ ಮಾಡುತ್ತಿರುತ್ತಾರೆ. ಒಂದೊಂದರಲ್ಲಿ ಎರಡು ಎರಡು ಸಿಮ್ ಕಾರ್ಡ್ ಅಂದ್ರೂ ನಾಲ್ಕು ಸಿಮ್ ಕಾರ್ಡ್ ಬಳಕೆ ಮಾಡೋರು ಇದ್ದಾರೆ. ಇನ್ನೂ ಕೆಲವರು ಇದಕ್ಕಿಂತ ಹೆಚ್ಚು ಮಾಡುತ್ತಲೂ ಇರಬಹುದು. ಆದ್ರೇ ಇವರಿಗೆ ಆತಂಕ ಹುಟ್ಟಿಸಿದ್ದು, ಇನ್ಮೇಲೆ ಒಂದಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಬಳಕೆ ಮಾಡೋರಿಗೆ ಬಳಕೆದಾರರ ಶುಲ್ಕ ವಿಧಿಸುತ್ತೆ ಟ್ರಾಯ್ಡ್ ಎಂಬುದಾಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ವೈರಲ್ ಆಗಿ, ಒಂದಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಬಳಕೆ ಮಾಡುತ್ತಿದ್ದವರು ಆತಂಕ, ಗಾಬರಿಗೂ ಕಾರಣವಾಗಿತ್ತು. ಅಯ್ಯೋ ಇದೇನಪ್ಪ ಈಗಾಗಲೇ ಕರೆನ್ಸಿ ಹಾಕಿಸೋದಕ್ಕೆ ಕಷ್ಟವಾಗಿದೆ. ಇದರ ನಡುವೆ ಈ ಶುಲ್ಕ ವಿಧಿಸುತ್ತಿರುವಂತ ಸುದ್ದಿ ಓದಿ, ಶಾಕ್…
ಮೈಸೂರು : ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಗ್ಯಾರಂಟಿಗಳನ್ನು ಮರುಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ನ್ಯಾಯಾಲಯದ ಆದೇಶದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ನ್ಯಾಯಾಲಯದ ಆದೇಶದ ಮೇಲೆ ನಾನು ಪ್ರತಿಕ್ರಿಯೆ ಎಂದರು. ಬಿಜೆಪಿ ಹಾಗೂ ಜೆಡಿಎಸ್ ಈ ಪ್ರಕರಣದಲ್ಲಿ ಕಾಂಗ್ರೆಸ್ನದ್ದು ರಾಜಕೀಯ ಷಡ್ಯಂತರ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ ದೂರು ನೀಡಿರುವವರು ಯಾರು? ಸರ್ಕಾರವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ಧ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೋಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದರು. ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ ದೇವೇಗೌಡರ ಕುಟುಂಬವನ್ನು ನಾಶ…
ಉತ್ತರ ಪ್ರದೇಶ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಭವ್ಯವಾದ ರಾಮ ಮಂದಿರವು ಜೈಶ್-ಎ-ಮೊಹಮ್ಮದ್ (ಜೆಎಂ) ಅನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಆಡಿಯೋ ಕ್ಲಿಪ್ ವೈರಲ್ ಆಗಿದ್ದು, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯು ಅಯೋಧ್ಯೆ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದೆ ಎಂದು ದೈನಿಕ್ ಜಾಗರಣ್ ಮೂಲ ಆಧಾರಿತ ವರದಿಯಲ್ಲಿ ತಿಳಿಸಿದೆ. ಆದಾಗ್ಯೂ, ಆಡಿಯೊ ಕ್ಲಿಪ್ನ ಸತ್ಯಾಸತ್ಯತೆಯನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ. ವೈರಲ್ ಆಗಿರುವ ಆಡಿಯೊ ಕ್ಲಿಪ್ನಲ್ಲಿ ಜೆಇಎಂ ಕಾರ್ಯಕರ್ತನೊಬ್ಬ ದೇವಾಲಯದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ. ದೇವಾಲಯವನ್ನು ನೆಲಸಮಗೊಳಿಸಬೇಕಾಗಿದೆ ಎಂದು ಹೇಳುವ ಮೊದಲು ಅವರು ಮೂವರು ಸಹ ಭಯೋತ್ಪಾದಕರ ಹತ್ಯೆಯನ್ನು ಉಲ್ಲೇಖಿಸುವುದನ್ನು ಕೇಳಬಹುದು. ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಬಿಗಿ ಭದ್ರತೆ ಆಡಿಯೊ ಕ್ಲಿಪ್ ಹೊರಬಂದ ನಂತರ, ಭದ್ರತಾ ಮತ್ತು ಗುಪ್ತಚರ ಸಂಸ್ಥೆಗಳು ಜಾಗರೂಕತೆಯನ್ನು ಹೆಚ್ಚಿಸಿವೆ ಎಂದು ದೈನಿಕ್ ಜಾಗರಣ್ ತನ್ನ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಭವ್ಯವಾದ ರಾಮ ಮಂದಿರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆಯನ್ನು…
ಮಂಡ್ಯ: ಜೂನ್.16ರಂದು ಮಂಡ್ಯದಲ್ಲಿ ಕೃತಜ್ಞತಾ ಸಮಾವೇಶದ ಮೂಲಕ ಕೇಂದ್ರ ಸಚಿವರಾದಂತ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಲು ನಿಗದಿಯಾಗಿದ್ದ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಮಾಜಿ ಸಿಎಂ ಯಡಿಯೂರಪ್ಪಗೆ ಕಾನೂನು ಸಂಕಷ್ಟ ಹಿನ್ನಲೆಯಲ್ಲಿ ಹೆಚ್ಡಿಕೆ ಕೃತಜ್ಞತಾ ಸಮಾವೇಶ ಮುಂದೂಡಲಾಗಿದೆ. ಭಾನುವಾರ ಮಂಡ್ಯದಲ್ಲಿ ನಡೆಯಬೇಕಿದ್ದ ಹೆಚ್ಡಿಕೆ ಕೃತಜ್ಞತಾ ಸಮಾವೇಶ ನಡೆಸಲು ನಿಗದಿಯಾಗಿತ್ತು. ಜೂನ್ 16ರ ಸಂಜೆ 5 ಗಂಟೆಗೆ ಮಂಡ್ಯದ ಸ್ಟೇಡಿಯಂನಲ್ಲಿ ಏರ್ಪಡಿಸಿದ್ದ ಬೃಹತ್ ಅಭಿನಂದನಾ ಸಮಾರಂಭ. ನೆನ್ನೆಯಷ್ಟೆ ಕಾರ್ಯಕ್ರಮದ ಬಗ್ಗೆ ಮಂಡ್ಯದಲ್ಲಿ ಜೆಡಿಎಸ್ ನಾಯಕರ ಸುದ್ದಿಗೋಷ್ಠಿ ನಡೆಸಿದ್ದರು. ಇದೀಗ ಮಾಜಿ ಸಿಎಂ ಯಡಿಯೂರಪ್ಪಗೆ ಕಾನೂನು ಸಂಕಷ್ಟ ಹಿನ್ನಲೆ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ. ಹೆಚ್ಡಿಕೆ ಕೃತಜ್ಞತಾ ಸಮಾವೇಶಕ್ಕೆ ಯಡಿಯೂರಪ್ಪರನ್ನ ಆಹ್ವಾನವನ್ನು ದಳಪತಿಗಳಿಗೆ ನೀಡಲಾಗಿತ್ತು. ಬೃಹತ್ ಕೃತಜ್ಞತಾ ಸಮಾವೇಶ ಮುಂದೂಡಿ ಸರಳವಾಗಿ ಕಾರ್ಯಕ್ರಮ ಆಯೋಜನೆಯಾಗಿದೆ. ನಾಳೆ ಮಂಡ್ಯಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆಗಮಿಸಲಿದ್ದಾರೆ. ನಾಳೆ ನೂತನ ಸಂಸದರ ಕಚೇರಿ ಉದ್ಘಾಟನೆ ಕೂಡ ಮಾಡಲಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರ ಕಚೇರಿಯಾಗಿದೆ. ನಾಳೆ ಮಂಡ್ಯಕ್ಕೆ ಕೇಂದ್ರ…
ಬೆಂಗಳೂರು: ಕೆಲವು ನಾಯಕರು ನನ್ನ ಮುಗಿಸುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಅವರ ಪ್ರಯತ್ನ ಅವರು ಮಾಡಲಿ. ನನ್ನ ಮೇಲೆ ಯಾವುದಾದರೂ ಕೇಸ್ ಇದೆಯಾ ಎಂದು ಹುಡುಕುತ್ತಿದ್ದಾರೆ. ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಪ್ರಯತ್ನ ನಡೆಯುತ್ತಿದೆ. ಯಾವುದೋ ಹಳೇ ಕೇಸ್ ಹುಡುಕುತ್ತಿದ್ದಾರೆ. ಅವರಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಕುಮಾರಸ್ವಾಮಿಯನ್ನು ಹೇಗೆ ಮುಗಿಸಿಬೇಕು ಎಂಬುದು ಪ್ಲಾನ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯಪಾಲರನ್ನು ಭೇಟಿಯಾದ ರಾಜಭವನದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ದೇವೆಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಿದ್ದು ಆಯಿತು. ಈಗ ಯಡಿಯೂರಪ್ಪ ಅವರನ್ನು ಮುಗಿಸಲು ಹೊರಟಿದ್ದಾರೆ. ಅದಾದ ಮೇಲೆ ನನ್ನನ್ನು ಗುರಿ ಮಾಡಿದ್ದಾರೆ ಎಂದು ದೂರಿದರು. ಯಡಿಯೂರಪ್ಪ ಅವರ ವಿಚಾರದಲ್ಲಿ ರಾಜ್ಯ ಸರ್ಕಾರ ಬಹಳ ಸಂಶಯಾಸ್ಪದವಾಗಿ ನಡೆದುಕೊಳ್ಳುತ್ತಿದೆ. ನನಗೆ ಈ ಸರ್ಕಾರದ ನಾಲ್ಕು ತಿಂಗಳ ನಡುವಳಿಕೆ ಮೇಲೆ ರಾಜ್ಯವೇ ಅನುಮಾನ ಪಡುವಂತೆ ಕಾಣುತ್ತಿದೆ. ಈ ಸರ್ಕಾರದಲ್ಲಿ ಕಾನೂನು ಪಂಡಿತರು ಬಹಳ ಜನ…
ಬೆಂಗಳೂರು: ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡು, ಜನಪರ ಕೆಲಸದಲ್ಲಿ ತೊಡಗಿರುವಂತ ಹೆಚ್.ಡಿ ಕುಮಾರಸ್ವಾಮಿ ಅವರು, ನಾಳೆ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದು ಈಗ ಹೆಚ್.ಡಿ ಕುಮಾರಸ್ವಾಮಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿದ್ದಾರೆ. ಈ ಹಿನ್ನಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಕಡ್ಡಾಯವಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿರುವ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ಸಾದಹಳ್ಳಿ ಗೇಟ್ ಟೋಲ್ ಬಳಿಗೆ ಆಗಮಿಸಿದ ಕೇಂದ್ರ ಸಚಿವರನ್ನು ಬೃಹತ್ ಸೇಬಿನ ಹಾರ, ಹೂವಿನ ಹಾರ ಹಾಕಿ ಸ್ವಾಗತ ಮಾಡಿದರು ಕಾರ್ಯಕರ್ತರು. ಪಕ್ಷದ ಕಚೇರಿಯಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ…
ಬೆಂಗಳೂರು: ನಾನು ಕೇಂದ್ರ ಸಚಿವನಾಗಿದ್ದು ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರಕ್ಕೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ನನ್ನ ವಿರುದ್ಧ ಒಳಸಂಚು ನಡೆಸುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ರಾಜ್ಯಪಾಲರನ್ನು ಭೇಟಿಯಾದ ರಾಜಭವನದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ದೇವೆಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಿದ್ದು ಆಯಿತು. ಈಗ ಯಡಿಯೂರಪ್ಪ ಅವರನ್ನು ಮುಗಿಸಲು ಹೊರಟಿದ್ದಾರೆ. ಅದಾದ ಮೇಲೆ ನನ್ನನ್ನು ಗುರಿ ಮಾಡಿದ್ದಾರೆ ಎಂದು ದೂರಿದರು. ಯಡಿಯೂರಪ್ಪ ಅವರ ವಿಚಾರದಲ್ಲಿ ರಾಜ್ಯ ಸರ್ಕಾರ ಬಹಳ ಸಂಶಯಾಸ್ಪದವಾಗಿ ನಡೆದುಕೊಳ್ಳುತ್ತಿದೆ. ನನಗೆ ಈ ಸರ್ಕಾರದ ನಾಲ್ಕು ತಿಂಗಳ ನಡುವಳಿಕೆ ಮೇಲೆ ರಾಜ್ಯವೇ ಅನುಮಾನ ಪಡುವಂತೆ ಕಾಣುತ್ತಿದೆ. ಈ ಸರ್ಕಾರದಲ್ಲಿ ಕಾನೂನು ಪಂಡಿತರು ಬಹಳ ಜನ ಇದ್ದಾರೆ. ಅವರಿಗೆ ಹೇಳಿ, ಕುಮಾರಸ್ವಾಮಿಯದ್ದು ಏನಾದರೂ ಸಿಗುತ್ತದೆಯಾ ನೋಡಿ ಎಂದು ಕೆದಕಲು ಹೇಳಿದ್ದಾರೆ. ಅಂತಹ ಸಿಎಂ ಸಿದ್ದರಾಮಯ್ಯ ಅವರು ಈಗ ನಾಲ್ಕು ತಿಂಗಳ ನಂತರ ಯಡಿಯೂರಪ್ಪ ಅವರ ಕೇಸ್ ಕೆದಕ್ಕಿದ್ದಾರೆ. ನನ್ನ ಮುಗಿಸಲು ಪ್ರಯತ್ನ ಮಾಡ್ತಿದ್ದಾರೆ…