Author: kannadanewsnow09

ಶಿವಮೊಗ್ಗ: ವನ್ಯಜೀವಿಗಳು ಮತ್ತು ಪ್ರಾಣಿಸಂಕುಲದ ಬಗ್ಗೆ ಅರಿವು ಮೂಡಿಸಲು ಪರಿಸರ ಪ್ರವಾಸೋದ್ಯಮವು ಅತ್ಯವಶ್ಯವಾಗಿದೆ. ಇದನ್ನು ಉತ್ತೇಜಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಹೆಚ್ಚುವರಿ ಮುಖ್ಯ ಸಂರಕ್ಷಣಾಧಿಕಾರಿ ಹಾಗು ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್ ಪುಷ್ಕರ್ ಅಭಿಪ್ರಾಯಪಟ್ಟರು. ಭದ್ರಾ ಹುಲಿ ಸಂರಕ್ಷಿತ ಅರಣ್ಯ 25ನೇ ವರ್ಷದ ವಿಶೇಷ ಸಂದರ್ಭದಲ್ಲಿ ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ, ಭದ್ರಾ ಹುಲಿ ಸಂರಕ್ಷಿತ ಅರಣ್ಯ ಮಂಡಳಿ ಹಾಗು ಕುವೆಂಪು ವಿ ವಿ ಸಂಸ್ಥೆಗಳು ಜಂಟಿಯಾಗಿ 11ನೇ ಹಕ್ಕಿ ಹಬ್ಬವನ್ನು ಭದ್ರಾ ಹುಲಿ ಸಂರಕ್ಷಿತ ಅರಣ್ಯ ಚಿಕ್ಕಮಗಳೂರಿನಲ್ಲಿ ಜೂ. 14-16 ರ ವರೆಗೆ 3 ದಿನಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿವಿಯ ಬಸವ ಸಭಾ ಭವನದಲ್ಲಿ ಶುಕ್ರವಾರ ಹಕ್ಕಿ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರ ಪ್ರವಾಸೋದ್ಯಮ ನೀತಿಯನ್ನು ರೂಪಿಸಿದ್ದು ಸದ್ಯದಲ್ಲೇ ಅನುಮೋದನೆ ಪಡೆಯಲಾಗುವುದು ಜೊತೆಗೆ ಪರಿಸರ ಪ್ರವಾಸೋದ್ಯಮದ ಕುರಿತು ಸಂಶೋಧನೆಗಳನ್ನು ನಡೆಸಲಾಗುತ್ತಿದೆ.…

Read More

ಬೆಂಗಳೂರು: “ಪಕ್ಷದ ಮೂಲ ಸಿದ್ಧಾಂತವನ್ನು ಯಾವ ಕಾರಣಕ್ಕೂ ಕೈ ಬಿಡಬಾರದು ಎಂದು ಹಿರಿಯ ನಾಯಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಪಕ್ಷದ ಹಿರಿಯ ನಾಯಕರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್ ಅವರು ಹೇಳಿದ್ಧಿಷ್ಟು; “ಕಾಂಗ್ರೆಸ್ ಅನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಲು ಹಾಗೂ ತಳಮಟ್ಟದಿಂದ ಪಕ್ಷ ಬಲಪಡಿಸುವ ಬಗ್ಗೆ ನಮ್ಮ ನಾಯಕರು ಸಲಹೆ ನೀಡಿದ್ದಾರೆ. ಪಕ್ಷ ಸಂಘಟನೆ ಬಗ್ಗೆಯೂ ಮಾರ್ಗದರ್ಶನಗಳನ್ನು ನೀಡಿದ್ದಾರೆ. ಕೆಲವೊಬ್ಬರು ಟ್ರ್ಯಾಪ್ ಮಾಡಲು ಪ್ರಯತ್ನ ಪಡುತ್ತಾರೆ ನಿಗಮ ಮಂಡಳಿಗಳ ಅಧ್ಯಕ್ಷರುಗಳ ಸಭೆ ಕರೆದಿದ್ದು. ಜನರ ಭಾವನೆ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು. ಜನರ ಬಳಿ ವರ್ತನೆ ಹೇಗಿರಬೇಕು, ಕೆಲಸಗಳನ್ನು ಹೇಗೆ ಮುನ್ನಡೆಸಿಕೊಂಡು ಹೋಗಬೇಕು ಎಂದು ಸಲಹೆ ನೀಡಲಾಗುವುದು. ಕೆಲವೊಂದಷ್ಟು ಜನ ಟ್ರ್ಯಾಪ್ ಮಾಡಲು ಪ್ರಯತ್ನ ಮಾಡುತ್ತಿರುತ್ತಾರೆ. ಬಹಳ ಬುದ್ದಿವಂತಿಕೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಲಾಗುವುದು” ಎಂದರು. ಯಡಿಯೂರಪ್ಪ ಅವರ ವಿರುದ್ಧ ದ್ವೇಷ ರಾಜಕಾರಣ ಮಾಡಲಾಗುತ್ತಿದೆ…

Read More

ಬೆಂಗಳೂರು: “ಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಕೇಸು ದಾಖಲಿಸಿರುವುದು ಯಾವ ರಾಜಕಾರಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಕಬ್ಬನ್ ಪಾರ್ಕಿನ ಬಾಲಭವನ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಯಡಿಯೂರಪ್ಪ ಅವರ ವಿರುದ್ಧ ಕಾನೂನು ಪ್ರಕ್ರಿಯೆ ದ್ವೇಷದ ರಾಜಕಾರಣ, ರಾಹುಲ್ ಗಾಂಧಿ ಅವರು ಬಂದ ನಂತರ ಈ ಬೆಳವಣಿಗೆ ನಡೆಯುತ್ತಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, ಅವರು ಉತ್ತರಿಸಿದ್ದು ಹೀಗೆ; “ನಾನು ಆ ಪ್ರಕರಣದ ಬಗ್ಗೆ ಹೆಚ್ಚು ಮಾಹಿತಿ ಪಡೆದಿಲ್ಲ. ಕಾಂಗ್ರೆಸ್ ಪಕ್ಷ ಯಾರ ಮೇಲೂ ದ್ವೇಷ ಮಾಡುವುದಿಲ್ಲ. ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಿದರೆ ವಿಚಾರ ಎಲ್ಲೆಲ್ಲೋ ಹೋಗುತ್ತದೆ. ಈ ವಿಚಾರದಲ್ಲಿ ನನಗೂ ಅಯ್ಯೋ ಎನಿಸುತ್ತದೆ. ಇಂತಹ ಕಠಿಣ ಪರಿಸ್ಥಿತಿಯನ್ನು ನಾವು ಅನುಭವಿಸಿದ್ದೇವೆ. ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದು ನ್ಯಾಯಾಲಯದ ಮುಂದೆ ಹಾಜರಾದರು. ಅವರ ವಿರುದ್ಧ ಕೇಸು ಹಾಕಿರುವುದು ಯಾವ ರಾಜಕಾರಣ? ಬಿಜೆಪಿಯ ವಿರುದ್ಧದ ಜಾಹೀರಾತಿಗೂ ರಾಹುಲ್…

Read More

ಬೆಂಗಳೂರು: 82 ವರ್ಷದ ಯಡಿಯೂರಪ್ಪ ಅವರ ಮೇಲೆ ಕಾಂಗ್ರೆಸ್‌ ಸೇಡಿನ ರಾಜಕಾರಣ ಮಾಡುತ್ತಿದೆ. ರಾಜ್ಯದ ರೈತ ನಾಯಕ ಯಡಿಯೂರಪ್ಪ ಅವರ ಮೇಲೆ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಅವರನ್ನು ಜೈಲಿಗೆ ಕಳಿಸಲೇಬೇಕು ಎಂಬಂತೆ ಕಾಂಗ್ರೆಸ್‌ ಕೆಲಸ ಮಾಡುತ್ತಿದೆ. ಯಡಿಯೂರಪ್ಪ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿ ಯುವ ಕೆಲಸ ಮಾಡಲಾಗುತ್ತಿದೆ. ಅವರ ಪ್ರಯತ್ನ ಫಲಪ್ರದ ಆಗುವುದಿಲ್ಲ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ಕೇಂದ್ರ ಸಚಿವರಾದ ಮೇಲೆ ರಾಜ್ಯಕ್ಕೆ ಮೊದಲ ಭೇಟಿ ಕೊಟ್ಟ ವೇಳೆ ಜಾತ್ಯತೀತ ಜನತಾದಳ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಬೇಕು ಎನ್ನುವ ಷಡ್ಯಂತ್ರ ಆಯಿತು ಈಗ ಯಡಿಯೂರಪ್ಪ ಅವರ ಕುಟುಂಬವನ್ನು ರಾಜಕೀಯವಾಗಿ ಮುಗಿಸುವ ಕುತಂತ್ರ ಆರಂಭವಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ನಾಲ್ಕು ತಿಂಗಳ ಹಿಂದಿನ ಪ್ರಕರಣ ಇದು. ಇವತ್ತು ಯಡಿಯೂರಪ್ಪ ಅವರ ಮೇಲೆ ಜಾಮೀನು ರಹಿತ ಕೇಸ್ ಹಾಕಲು ಹೊರಟಿದ್ದಾರೆ.…

Read More

ಬೆಂಗಳೂರು: ನಾನು ಕೇಂದ್ರ ಸಚಿವನಾದ ಮೇಲೆ ಕೆಲವರಿಗೆ ನಿದ್ದೆ ಬರುತ್ತಿಲ್ಲ, ಊಟ ಸೇರುತ್ತಿಲ್ಲ. ನಾನು ಯಾರ ಮೇಲೂ ದ್ವೇಷ ಸಾಧಿಸಲ್ಲ. ಆ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಕೇಂದ್ರ ಸಚಿವರಾದ ಮೇಲೆ ರಾಜ್ಯಕ್ಕೆ ಮೊದಲ ಭೇಟಿ ಕೊಟ್ಟ ವೇಳೆ ಜಾತ್ಯತೀತ ಜನತಾದಳ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ನಾನು ಕೇಂದ್ರ ಸರಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವನಾಗಿರಬಹುದು. ರಾಜ್ಯದ ಹಿತವನ್ನು ಎಂದಿಗೂ ಮರೆಯಲಾರೆ. ಬನ್ನಿ, ಯಾವುದೇ ಇಲಾಖೆಯ ಏನೇ ಕೆಲಸಗಳು ಇದ್ದರೂ ಮಾಡಿಕೊಡುತ್ತೇನೆ. ನನಗೆ ಸ್ವಲ್ಪ ಸಮಯ ಬೇಕು ಎಂದು ಹೇಳಿದರು. ರಾಜಕೀಯದಲ್ಲಿ ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ನೆರೆಯ ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಹಿಂದಿನ ಚುನಾವಣೆಯಲ್ಲಿ ಎಷ್ಟು ಸ್ಥಾನಗಳನ್ನು ಗೆದ್ದಿದ್ದರು? ಕಡೆಗೆ ಅನೇಕ ಶಾಸಕರು ಅವರನ್ನು ಬಿಟ್ಟು ಹೋದರು. ಅವರನ್ನು ಜೈಲಿಗೂ ಕಳಿಸಿದರು. ಈಗ ಮತ್ತೆ ಎಷ್ಟು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದರು ಎನ್ನುವುದನ್ನು ಗಮನಿಸಬೇಕು. ಕರ್ನಾಟಕದಲ್ಲಿಯೂ…

Read More

ಹಾವೇರಿ: ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೋರ್ಟ್ ಜಾಮೀನು ನೀಡಿರುವುದು ನ್ಯಾಯಸಮ್ಮತವಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಆ ತರಹದ ವಿಚಾರದಲ್ಲಿ ಭಾಗಿಯಾಗಿಲ್ಲ. ಅವರ ವಿರುದ್ದ ಷಡ್ಯಂತ್ರ ಮಾಡಿದ್ದು ಅಧಿಕಾರಿಗಳು ಕರೆದಾಗ ಹೋಗಿ ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ. ಯಡಿಯೂರಪ್ಪನವರಿಗೆ ಸನ್ನಡತೆಯಿದೆ. ಕೋರ್ಟ್ ಇದನ್ನು ಒಪ್ಪಿಕೊಂಡು ಸದ್ಯ ರಿಲೀಪ್ ಕೊಟ್ಟಿದ್ದು ನ್ಯಾಯಸಮ್ಮತವಾಗಿದೆ ನಾವು ಸ್ವಾಗತ ಮಾಡುತ್ತೇವೆ. ಮುಂದೆಯು ಕಾನೂನು ಹೋರಾಟದಲ್ಲಿ ಯಡಿಯೂರಪ್ಪ ನವರು ವಿಜಯಶಾಲಿಯಾಗುವ ವಿಶ್ವಾಸವಿದೆ ಎಂದು ಹೇಳಿದರು. ಇದಕ್ಕೂ ಮೊದಲು ಮಾತನಾಡಿದ ಅವರು, ಯಡಿಯೂರಪ್ಪ ಅವರ ವಿರುದ್ದದ ಪ್ರಕರಣ ನೋಡಿದರೆ ಇದೊಂದು ರಾಜಕೀಯ ಪಿತೂರಿ, ಖಂಡಿತವಾಗಿಯೂ ಷಂಡ್ಯಂತ್ರ. ಅದು ಸಂಪೂರ್ಣ ಕೇಸ್ ಪಾಲೋ ಮಾಡಿದರೆ, ಅದರ ಹಿನ್ನಲೆ ನೋಡಿದರೆ ಷಂಡ್ಯಂತ್ರ ಇದೆ. ಮೂರು ತಿಂಗಳ ಬಿಟ್ಟು, ಈಗ ಒಂದೇ ದಿನಕ್ಕೆ ಸಮಯ ಕೊಟ್ಟು, ವಾರೆಂಟ್ ನೀಡುವುದು ಬಹಳಷ್ಟು ಲ್ಯಾಪ್ಸ ಇದೆ. ಅವರ ವಿರುದ್ದ ಈ ಹಿಂದೆ…

Read More

ನವದೆಹಲಿ: ಲೇಖಕಿ ಅರುಂಧತಿ ರಾಯ್ ಮತ್ತು ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಶೇಖ್ ಶೌಕತ್ ಹುಸೇನ್ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಶುಕ್ರವಾರ ಅನುಮೋದನೆ ನೀಡಿದ್ದಾರೆ. 2010ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ ನಿವಾಸ್ ಅಧಿಕಾರಿಗಳು ಶುಕ್ರವಾರ ದೃಢಪಡಿಸಿದ್ದಾರೆ. ನವದೆಹಲಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ದೇಶನದ ಮೇರೆಗೆ ರಾಯ್ ಮತ್ತು ಹುಸೇನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಪ್ರಸ್ತುತ, ಈ ಬೆಳವಣಿಗೆಗೆ ಸಂಬಂಧಿಸಿದಂತೆ ರಾಯ್ ಅಥವಾ ಹುಸೇನ್ ಅವರಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. https://twitter.com/ANI/status/1801611262196904130 ಕಾಶ್ಮೀರದ ಸಾಮಾಜಿಕ ಕಾರ್ಯಕರ್ತ ಸುಶೀಲ್ ಪಂಡಿತ್ ಅವರು 2010ರ ಅಕ್ಟೋಬರ್ 28ರಂದು ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಅರುಂಧತಿ ರಾಯ್ ಮತ್ತು ಕಾಶ್ಮೀರದ ಕೇಂದ್ರೀಯ ವಿಶ್ವವಿದ್ಯಾಲಯದ ಅಂತರರಾಷ್ಟ್ರೀಯ ಕಾನೂನಿನ ಮಾಜಿ ಪ್ರಾಧ್ಯಾಪಕ ಡಾ.ಶೇಖ್ ಶೌಕತ್ ಹುಸೇನ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ…

Read More

ಚಿತ್ರದುರ್ಗ: ನಿನ್ನೆಯಷ್ಟೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ8ನೇ ಆರೋಪಿಯಾಗಿದ್ದಂತವರೊಬ್ಬರು ಡಿವೈಎಸ್ಪಿ ಕಚೇರಿಗೆ ತೆರಳಿ ಶರಣಾಗಿದ್ದರು. ಈ ಬೆನ್ನಲ್ಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹೀಗೆ ಬಂಧಿಸಲ್ಪಟ್ಟ ಪುತ್ರನ ಸುದ್ದಿ ಕೇಳಿ ಅವರ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿ ತಲೆ ಮರೆಸಿಕೊಂಡಿದ್ದಂತ ಮತ್ತಿಬ್ಬರನ್ನು ಚಿತ್ರದುರ್ಗದ ಡಿವೈಎಸ್ಪಿ, ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಎಡೆಮುರಿಕಟ್ಟಿ ಬಂದಿಸಿದ್ದಾರೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ.6 ಆರೋಪಿಯಾಗಿದ್ದಂತ ಜಗ್ಗ ಆಲಿಯಾಸ್ ಜಗದೀಶ್ ಹಾಗೂ ಎ.7 ಆರೋಪಿಯಾಗಿದ್ದಂತ ಅನು ಆಲಿಯಾಸ್ ಅನುಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ಚಿತ್ರದುರ್ಗ ನಗರದಿಂದ ಬಂಧಿಸಿ, ಆ ನಂತ್ರ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಈ ಬೆನ್ನಲ್ಲೇ ಪುತ್ರ ಹಾಗೂ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವಂತ ಅನುಕುಮಾರ್ ಬಂಧನದ ಸುದ್ದಿ ಕೇಳಿದಂತ ಅವರ ತಂದೆ ಚಂದ್ರಣ್ಣ(60) ಹೃದಯಾಘಾತದಿಂದ ನಿಧನರಾಗಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/farmers-is-your-crop-infested-with-military-worms-just-take-this-control-measure/

Read More

ಬೆಂಗಳೂರು: ಖಾಸಗಿ ಅನುದಾನರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಇಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಕಾಲೇಜುಗಳಲ್ಲಿ ‍ವೃತ್ತಿಪರ ಕೋರ್ಸುಗಳ ಶುಲ್ಕವನ್ನು ಶೇಕಡ 10% ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶಪಾಟೀಲ್‌ ಅವರು ಖಾಸಗಿ ಅನುದಾನಿತ, ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಇಂದು ನಡೆದ ಒಮ್ಮತಾಭಿಪ್ರಾಯ ಕುರಿತು ಚರ್ಚೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. ಖಾಸಗಿ ಶಿಕ್ಷಣ  ಸಂಸ್ಥೆಗಳ ಒಕ್ಕೂಟವು ಶೇಕಡ 15% ರಷ್ಟು ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಸುಧೀರ್ಘವಾಗಿ ನಡೆದ ಮಾತುಕತೆಯಲ್ಲಿ ಅಂತಿಮವಾಗಿ ಕಳೆದ ವರ್ಷ ನಿಗದಿಪಡಿಸಿದ್ದ ಶುಲ್ಕಕ್ಕೆ ಶೇಕಡ 10ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ಒಮ್ಮತ ಬರಲಾಯಿತು. ಈ ಸಂಬಂದಪಟ್ಟಂತೆ ಸರ್ಕಾರದ ಅಧಿಕೃತ ಆದೇಶ ಶೀಘ್ರ ಹೊರಬೀಳಲಿದೆ. ಈ ಸಭೆಯಲ್ಲಿ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳು ‍ಶ್ರೀಕರ್‌, ತಾಂತ್ರಿಕ ಶಿಕ್ಷಣ  ಇಲಾಖೆಯ ಆಯುಕ್ತರಾದ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಆರಂಭದಲ್ಲಿ 13 ಆರೋಪಿಗಳನ್ನು ಬಂಧಿಸಲಾಗಿತ್ತು. ಈಗ ಬಂಧಿತ ಆರೋಪಿಗಳ ಸಂಖ್ಯೆ ಏರಿಕೆಯಾಗಿದೆ. ಬರೋಬ್ಬರಿ 19 ಆರೋಪಿಗಳನ್ನು ಪೊಲೀಸರು ಎಡೆಮುರಿಕಟ್ಟಿ ಬಂಧಿಸಿದ್ದಾರೆ. ಹಾಗಾದ್ರೇ ಆ ಬಗ್ಗೆ ಮುಂದೆ ಓದಿ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕಿಡ್ನ್ಯಾಪ್ ಮಾಡಿಕೊಂಡು ಬಂದು, ನಟ ದರ್ಶನ್ ಅಂಡ್ ಗ್ಯಾಂಗ್ ತೀವ್ರವಾಗಿ ಹಲ್ಲೆ ನಡೆಸಿ, ಮರ್ಮಾಂಗಕ್ಕೆ ಒದ್ದು ಹತ್ಯೆಗೈದಿತ್ತು. ಆ ಬಳಿಕ ಶವವನ್ನು ಮೋರಿಗೆ ಎಸೆದಿತ್ತು. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇಂದು ಚಿತ್ರದುರ್ಗದಲ್ಲಿ ಇಬ್ಬರು, ಬೆಂಗಳೂರಲ್ಲಿ ಮತ್ತಿಬ್ಬರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ 19ಕ್ಕೆ ಏರಿಕೆಯಾದಂತೆ ಆಗಿದೆ. ಯಾರು ಯಾರು ಆ 19 ಆರೋಪಿಗಳು.? A1 ಪವಿತ್ರ : ಬಂಧಿತ A2 ದರ್ಶನ್ : ಬಂಧಿತ A3 ಪವನ್ :…

Read More