Author: kannadanewsnow09

ಬೆಂಗಳೂರು: ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ದಾಖಲಾಗಿದ್ದಂತ ಜಾತಿ ನಿಂದನೆ ಪ್ರಕರಣದಲ್ಲಿ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ನಡೆಸಿದರು. ಒಂದು ಲಕ್ಷ ರೂಪಾಯಿ ಮೌಲ್ಯದ ಬಾಂಡ್, ಇಬ್ಬರ ಶ್ಯೂರಿಟಿ, ಸಾಕ್ಷ್ಯ ನಾಶ ಮಾಡಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಎಂಬ ಷರತ್ತು ವಿಧಿಸಿ ನಿರೀಕ್ಷೆಣಾ ಜಾಮೀನು ನೀಡಿದೆ. ಅಂದಹಾಗೇ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ರಾಜಶೇಖರ ತಳವಾರ ಎಂಬುವರು ದಾಖಲಿಸಿದ್ದಂತ ದೂರನ್ನು ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು. ಈ ಪ್ರಕರಣದಲ್ಲಿ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಿ ರಮೇಶ್ ಕತ್ತಿಗೆ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. https://kannadanewsnow.com/kannada/private-hospitals-will-have-their-licenses-revoked-if-they-demand-advance-payment-for-this-treatment-state-government-warns/ https://kannadanewsnow.com/kannada/good-news-for-the-rural-people-of-the-state-fishing-will-now-be-allowed-in-the-lakes/

Read More

ಮಂಡ್ಯ : ಮದ್ದೂರು ನಗರದ ದೊಡ್ಡಿ ಬೀದಿಯ ಗ್ಯಾಸ್ ಚಂದ್ರು ಅವರ ಮನೆಯಲ್ಲಿ ನಡೆದಿದ್ದಂತಹ ಲಕ್ಷಾಂತರ ರೂಪಾಯಿ ಚಿನ್ನಾಭರಣಗಳ ಕಳವು ಪ್ರಕರಣವನ್ನು ಭೇದಿಸುವಲ್ಲಿ ಮದ್ದೂರು ಪೋಲೀಸರು ಯಶಸ್ವಿಯಾಗಿದ್ದು, ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಾಜಿ ಪುರಸಭಾ ಅಧ್ಯಕ್ಷ ಎಂ.ಕೆ.ಮರೀಗೌಡನನ್ನು ಬಂಧಿಸಿ ಸುಮಾರು 15 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ 26-8-25 ರಂದು ಸಂಜೆ ಮದ್ದೂರು ನಗರದ ದೊಡ್ಡಿಬೀದಿಯ ಗ್ಯಾಸ್ ಚಂದ್ರು ಅವರ ಮನೆಗೆ ಮುಸುಕುಧಾರಿಯೊಬ್ಬ ನುಗ್ಗಿ ಅವರ ಪತ್ನಿ ಸುಶೀಲಮ್ಮ ಅವರನ್ನು ಬೆದರಿಸಿ ಮೈ ಮೇಲಿದ್ದ ವಜ್ರದ ಓಲೆ, ಬಳೆ ಸೇರಿದಂತೆ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದ. ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಕೃತ್ಯಕ್ಕೆ ಸಂಬಂಧಿಸಿದಂತೆ ಪೋಲೀಸರು ತನಿಖೆ ಕೈಗೊಂಡಿದ್ದ ವೇಳೆಗೆ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಪರಿಣಾಮ ಹಿಂದೂ ಮುಸ್ಲಿಂ ಗಲಭೆ ನಡೆದ ಹಿನ್ನೆಲೆಯಲ್ಲಿ ಕೆಲ ಪೋಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಪರಿಣಾಮ…

Read More

ಮಂಡ್ಯ : ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ಅರಿವಿಟ್ಟುಕೊಂಡು ಪ್ರತಿ ಗ್ರಾಮಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದೇನೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು. ಮದ್ದೂರು ತಾಲೂಕಿನ ಕೊತ್ತನಹಳ್ಳಿ, ಹೊಸಕೆರೆ, ನಿಲುವಾಗಿಲು, ಸೀನಪ್ಪನದೊಡ್ಡಿ ಹಾಗೂ ಎನ್.ಕೋಡಿಹಳ್ಳಿ ಗ್ರಾಮಗಳಲ್ಲಿ ಅಂದಾಜು 2.50 ಕೋಟಿ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ಅರಿವಿಟ್ಟುಕೊಂಡು ಹಗಲು-ರಾತ್ರಿ ಎನ್ನದೇ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗಿದ್ದೇನೆ. ಯಾರು ಕೂಡ ನನಗೆ ಅರ್ಜಿ ಕೊಟ್ಟು ನಮ್ಮ ಗ್ರಾಮಗಳ ಅಭಿವೃದ್ಧಿ ಮಾಡಿ ಎಂದು ಕೇಳಿಲ್ಲ. ಆದರೆ ಕ್ಷೇತ್ರದ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಒತ್ತಡ ಹೇರಿ 1500 ಕೋಟಿಗೂ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇನೆ. ಜನ ನನ್ನ ಮೇಲೆ ಪ್ರೀತಿ ವಿಶ್ವಾಸ ಅಭಿಮಾನ ಇಟ್ಟಿರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ಸದಾ ಸಿದ್ಧನಿದ್ದೇನೆ ಎಂದರು. ರಾಜಕಾರಣ ಶಾಶ್ವತವಲ್ಲ ಅಭಿವೃದ್ಧಿ ಕಾರ್ಯಗಳೇ…

Read More

ಮುಂಬೈ: ನಗರದಲ್ಲಿ ರಾಸಾಯನಿಕ ಸೋರಿಕೆಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಅಸ್ವಸ್ಥಗೊಂಡಿರುವಂತ ಘಟನೆ ನಡೆದಿದೆ. ಮುಂಬೈ ನಗರದ ಮೂರು ಅಂತಸ್ಥಿನ ಕಟ್ಟಡದಲ್ಲಿ ರಾಸಾಯನಿಕ ಸೋರಿಕೆಯಾಗಿ ಘೋರ ದುರಂತವೇ ಸಂಭವಿಸಿದೆ. ರಾಸಾಯನಿಕ ಸೋರಿಕೆಯಿಂದಾಗಿ ವಿಷಾನಿಲ ಸೇವಿಸಿದಂತ ಓರ್ವ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಇನ್ನೂ ಅಸ್ವಸ್ಥಗೊಂಡಿರುವಂತ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-the-rural-people-of-the-state-fishing-will-now-be-allowed-in-the-lakes/ https://kannadanewsnow.com/kannada/private-hospitals-will-have-their-licenses-revoked-if-they-demand-advance-payment-for-this-treatment-state-government-warns/

Read More

ಮಂಡ್ಯ : ವಿಶೇಷ ಚೇತನ ಮಕ್ಕಳೆಂದು ಪೋಷಕರು ಕೀಳರಿಮೆ ತೋರಬೇಡಿ. ವಿಶೇಷ ಚೇತನ ಮಕ್ಕಳು ಇತರೆ ಮಕ್ಕಳಿಗಿಂತ ವಿಶಿಷ್ಟ ಬುದ್ದಿಶಕ್ತಿಯನ್ನು ಹೊಂದಿದ್ದು, ಅವರಿಗೆ ಆತ್ಮಸ್ಥೈರ್ಯ ಮತ್ತು ಸರ್ಕಾರದ ಸವಲತ್ತುಗಳನ್ನು ಒದಗಿಸಿದರೆ ಇತರರಂತೆ ಸಕ್ರಿಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾರೆಂದು ಶಾಸಕ ಕೆ.ಎಂ.ಉದಯ್ ಆತ್ಮಸ್ಥೈರ್ಯ ತುಂಬಿದರು. ಮದ್ದೂರು ನಗರದ ಕಸ್ತೂರಬಾ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಸಹಯೋಗದಲ್ಲಿ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರ ಹಾಗೂ ಹಲವು ಸ್ವಯಂ ಸೇವಾ ಸಂಸ್ಥೆಗಳು ವಿಶೇಷ ಚೇತನ ಮಕ್ಕಳಿಗೆ ನಾನಾ ರೀತಿಯ ನೆರವು ನೀಡುತ್ತಿದ್ದು ಶಾಲೆಗಳಿಗೆ ದಾಖಲಾಗುವ ತಮ್ಮ ಮಗುವಿನ ಸಂಪೂರ್ಣ ವಿವರವನ್ನು ಶಿಕ್ಷಕರಿಗೆ ತಿಳಿಸಿ ಇಂಥಹ ಶಿಬಿರಗಳಲ್ಲಿ ಅವರಿಗೆ ದೊರೆಯಬಹುದಾದ ಸಾಧನ ಸಲಕರಣೆಗಳು ಹಾಗೂ ಹೆಚ್ಚಿನ ಚಿಕಿತ್ಸೆ ಸೇರಿದಂತೆ ಅಗತ್ಯ ನೆರವನ್ನು ಪಡೆಯಬಹುದಾಗಿದೆ. ಪೋಷಕರು ಇಂಥಹ ಮಕ್ಕಳನ್ನು ನಿರ್ಲಕ್ಷಿಸದೇ ದೇವರು ಕೊಟ್ಟ ವರ ಎಂದು ಭಾವಿಸಿ…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆಗಳು ನಡೆಯುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರದಂದು ಜೆಡಿಎಸ್ ಪಕ್ಷದ ಬೆಳ್ಳಿಹಬ್ಬದ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ ಇವತ್ತು ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ನೋಡಿದರೆ ಮುಂದಿನ ದಿನಗಳಲ್ಲಿ ಯಾರೂ ಕೂಡ ನಿರೀಕ್ಷೆ ಮಾಡದಂತಹ ಬೆಳವಣಿಗೆಗಳು ನಡೆಯಲಿವೆ ಎಂದು ಭವಿಷ್ಯ ನುಡಿದರು. ರಾಜಕೀಯದಲ್ಲಿ ಯಾರು ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಹೇಳಲಿಕ್ಕೆ ಆಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಟಿ ಆಗಿದೆ. ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ಮತ್ತು ಸ್ಪೋಟಕ ಬೆಳವಣಿಗೆಗಳು ನಡೆಯಲಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಪರೋಕ್ಷವಾಗಿ ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಬೊಟ್ಟು ಮಾಡಿದ ಅವರು; ದಿನಕ್ಕೊಂದು, ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆ ನಡೆಯುತ್ತಿರುವುದು ನೋಡಿದರೆ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ರಾಜಕೀಯ ಕ್ರಾಂತಿಯೇ ಆಗುವ ಸಾಧ್ಯತೆ ಇದೆ. ಹೀಗಾಗಿ ಕಾರ್ಯಕರ್ತರು ಮತ್ತು ಮುಖಂಡರು ಜನರ ಜತೆಯೇ ಇರಬೇಕು. ಜನರ ಕಷ್ಟಗಳಿಗೆ ಸ್ಪಂದಿಸಬೇಕು…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಕಾಮಗಾರಿಯಲ್ಲಿ ಗೋಲ್ ಮಾಲ್ ಬಗ್ಗೆ ಕನ್ನಡ ನ್ಯೂಸ್ ನೌ ವರದಿ ಪ್ರಕಟಿಸಿತ್ತು. ಸುದ್ದಿ ಪ್ರಕಟವಾದ ಎರಡೇ ದಿನದಲ್ಲಿ ಕಲ್ಮನೆ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದ್ದಂತ ತನಿಖಾಧಿಕಾರಿಗಳು ಇಂಚಿಂಚೂ ಪರಿಶೀಲನೆ ನಡೆಸಿದ್ದರು. ಆ ಬಳಿಕ ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿವೆ. ಹಾಗಾದ್ರೇ ತನಿಖಾಧಿಕಾರಿಗಳ ವರದಿಯಲ್ಲಿ ಏನಿದೆ ಎನ್ನುವ ಬಗ್ಗೆ ಸಂಪೂರ್ಣ ರಿಪೋರ್ಟ್ ಮುಂದಿದೆ ಓದಿ. ನಿಮ್ಮ ಕನ್ನಡ ನ್ಯೂಸ್ ನೌ ಕೆಲ ತಿಂಗಳ ಹಿಂದೆ ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ ಜಮಾ ಎಂಬುದಾಗಿ ಸುದ್ದಿ ಪ್ರಕಟಿಸಿತ್ತು. ಈ ಸುದ್ದಿಯ ಬೆನ್ನಲ್ಲೇ ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಹಗರಣ: ತನಿಖೆ ನಡೆಸಿ ವರದಿ ನೀಡಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದರ ಬಗ್ಗೆಯೂ ವರದಿ ಮಾಡಿತ್ತು. ಆ ಬಳಿಕ ಸಾಗರದ ‘ಕಲ್ಮನೆ ಗ್ರಾಮ ಪಂಚಾಯ್ತಿ’ ನರೇಗಾ ಹಗರಣ: ಇಂದು ಇಂಚಿಂಚೂ…

Read More

ವಿಷ್ಣುವನ್ನು ಶ್ರೀಹರಿ, ವೆಂಕಟೇಶ್ವರ, ಲಕ್ಷ್ಮೀ ಪತಿ ಹೀಗೆ ನಾನಾ ಹೆಸರುಗಳಿಂದ ಕರೆಯುತ್ತಾರೆ. ಶ್ರೀಹರಿಯನ್ನು ಆತನಿಗೆ ಪ್ರಿಯವಾದ ಹೂವುಗಳಿಂದ ಪೂಜಿಸಿದರೆ ಲಕ್ಷ್ಮಿ ದೇವಿಯ ಅನುಗ್ರಹ ದೊರೆಯುತ್ತದೆ, ಮರಣಾ ನಂತರ ವೈಕುಂಠ ಪ್ರಾಪ್ತವಾಗುತ್ತದೆ, ಪಾಪಗಳಿಂದ ಮುಕ್ತಿ ದೊರೆಯುತ್ತದೆ ಎನ್ನುವ ನಂಬಿಕೆಯಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಹಾಗಾದರೆ, ಶ್ರೀಹರಿ ವಿಷ್ಣುವಿಗೆ ಪ್ರಿಯವಾದ ಹೂವುಗಳಾವುವು..? ವಿಷ್ಣು ಪೂಜೆಯಲ್ಲಿ ಮರೆಯದೇ ಈ ಹೂವುಗಳನ್ನು ಬಳಸಿ.. ಚಂಪಾ ಹೂವು: ಚಂಪಾ ಹೂವು ಭಗವಾನ್ ವಿಷ್ಣು ಮತ್ತು ಶ್ರೀ ಕೃಷ್ಣನಿಗೆ ಬಹಳ ಪ್ರಿಯವಾದ ಹೂವುಗಳಾಗಿದೆ. ಗುರುವಾರದಂದು ಶ್ರೀಹರಿಯನ್ನು ಪೂಜಿಸುವಾಗ ಆತನಿಗೆ ಪೂಜೆಯಲ್ಲಿ ಚಂಪಾ ಹೂವುಗಳನ್ನು ಅರ್ಪಿಸಿದರೆ ವೈಕುಂಠ ಪ್ರಾಪ್ತಿಯಾಗುತ್ತದೆ ಎನ್ನುವ ನಂಬಿಕೆಯಿದೆ. ಆದ್ದರಿಂದ ಶ್ರೀಹರಿಯನ್ನು ಪೂಜಿಸುವಾಗ ಒಂದಾದರೂ ಚಂಪಾ ಹೂವನ್ನು ಆತನಿಗೆ ಅರ್ಪಿಸಿ. ಅಶೋಕ…

Read More

ಮಂಗಳೂರು: ಜಾತಿ, ಧರ್ಮದ ಗಡಿಯೊಳಗೆ ಸಿಲುಕಿ ಮನುಷ್ಯರು ದ್ವೀಪವಾಗುತ್ತಿರುವ ಈ ತಲ್ಲಣದ ಹೊತ್ತಿನಲ್ಲಿ ‘ದೈವವೆಂಬ ದೀವಿಗೆ’ಯು ಎಲ್ಲರನ್ನು ಒಗ್ಗೂಡಿಸಿ, ಎಲ್ಲರೊಳಗೂ ಬೆಳಕು ತುಂಬಬಲ್ಲದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಉಮೇಶ್ ಪಂಬದ ಸನ್ಮಾನ ಸಮಿತಿ, ಜಾರಪ್ಪ ಪಂಬದ ಸಂಸ್ಮರಣಾ ಸಮಿತಿ ಮತ್ತು ಅರಸು ಧರ್ಮ ಜಾರಂದಾಯ, ಬಂಟ ಮತ್ತು ವಾರಾಹಿ ದೇವಸ್ಥಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಉಮೇಶ್ ಪಂಬದ ಮತ್ತಿತರರನ್ನು ಸನ್ಮಾನಿಸಿ ಮಾತನಾಡಿದರು. ಬದುಕು ನೀಡುವ ಸಂಕಟ, ನೋವಿಗೆ ದೈವದ ನುಡಿಗಳು ಮದ್ದಾಗುತ್ತವೆ ಎಂಬುದು ಸದಾ ಕಾಲದ ನಂಬಿಕೆಯೇ ಆಗಿದೆ ಎಂದರು. ಸರ್ಕಾರಿ ಕೆಲಸವನ್ನು ಬಿಟ್ಟು ಉಮೇಶ್ ಪಂಬದ ಅವರು ದೈವದ ಚಾಕರಿಗೆ ನಿಂತು, ದೈವವಾಡುವ ನುಡಿಗಳನ್ನಾಡುತ್ತಲೇ ಪರೋಕ್ಷವಾಗಿ ಹಲವು ಕುಟುಂಬಗಳಿಗೆ ಸಂತೈಸುವ ಶಕ್ತಿಯಾಗಿದ್ದಾರೆ. ಇಂಥವರನ್ನು ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿರುವುದು ಅತ್ಯಂತ ಔಚಿತ್ಯಪೂರ್ಣ ಸಂಗತಿ ಎಂದರು. ದೈವವೆಂಬುದು ಕುಟುಂಬದ ಬೆನ್ನಿಗೆ ಸದಾ…

Read More

ಬೆಂಗಳೂರು: ನಗರದಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ಎಟಿಎಂ ವಾಹನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ಧಾಪುರ ಪೊಲೀಸರು ಭೇಟೆ ಮುಂದುವರೆಸಿದ್ದಾರೆ. ಹೈದರಾಬಾದಿನ ಲಾಡ್ಜ್ ನಲ್ಲಿ ತರೆಮರೆಸಿಕೊಂಡಿದ್ದಂತ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈಗಾಗಲೇ ಪೊಲೀಸರು ಕಿಂಗ್ ಪಿನ್ ರವಿ, ಪೊಲೀಸ್ ಪೇದೆ ಅಣ್ಣಪ್ಪ ಸೇರಿದಂತೆ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದರಿಂದಾಗಿ ಬಹುತೇಕ ಆರೋಪಿಗಳನ್ನು ಬಂಧಿಸಿದಂತೆ ಆಗಿದೆ. https://kannadanewsnow.com/kannada/stpi-established-in-davangere-land-allotment-order-copy-handed-over/ https://kannadanewsnow.com/kannada/private-hospitals-will-have-their-licenses-revoked-if-they-demand-advance-payment-for-this-treatment-state-government-warns/

Read More