Author: kannadanewsnow09

ಬೆಂಗಳೂರು: ಮೋದಿ ಅವರು ಮುಖ್ಯಮಂತ್ರಿಯಿಂದ ಪ್ರಧಾನಮಂತ್ರಿಯಾಗಬೇಕು ಎಂದು ತೀರ್ಮಾನ ಮಾಡಿದ ನಂತರ ಕಳೆದ 15 ವರ್ಷಗಳ ಹಿಂದೆ ಬಹಳ ವಿಶಿಷ್ಟವಾದ ಸುಳ್ಳಿನ ಕಾರ್ಖಾನೆ ಆರಂಭಿಸಿದರು. ತಪ್ಪು ಮಾಹಿತಿ, ನಕಲಿ ಮಾಹಿತಿ, ಸುಳ್ಳು ಮಾಹಿತಿ, ಸುಳ್ಳು ಸುದ್ದಿಯ ಕಾರ್ಖಾನೆ ಆರಂಭಿಸಿದರು. ಇದರಲ್ಲಿ ಮೋದಿ ಹಾಗೂ ಅಮಿತ್ ಶಾ ಅವರು ಪಾಲುದಾರರು ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಾಗ್ಧಾಳಿ ನಡೆಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಈ ಕಾರ್ಖಾನೆಗೆ ಕೆಲಸಕ್ಕೆ ಬಾರದ ಅಮಿತ್ ಮಾಳವಿಯಾ ಎಂಬಾತನನ್ನು ಮ್ಯಾನೇಜರ್ ಆಗಿದ್ದಾರೆ. ಈ ಕಾರ್ಖಾನೆ ನಡೆಸಲು ಕೆಲವು ಜೀತದಾಳುಗಳನ್ನು ಇಟ್ಟಿದ್ದಾರೆ. ಹಲವು ರಾಜ್ಯಗಳಲ್ಲಿ ವಕ್ತಾರರು, ಶಾಸಕರು, ಸಂಸದರು ಈ ಕೆಲಸ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಸಂಸದರು ಹಾಗೂ ಬಾಡಿಗೆ ಭಾಷಣಕಾರರನ್ನು ಇಟ್ಟುಕೊಂಡಿದ್ದಾರೆ ಎಂದರು. ಸುಳ್ಳು ಸುದ್ದಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಚರ್ಚೆಯಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಬಹಳ ಅಪಾಯಕಾರಿ ಎಂದು ನಿವೃತ್ತ ನ್ಯಾಯಮೂರ್ತಿ ಹೇಳಿದ್ದರು. ಮುಖ್ಯ ಚುನಾವಣಾ ಆಯುಕ್ತರು ಕೂಡ ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ…

Read More

ಬೆಂಗಳೂರು : ತುರ್ತು ವಿದ್ಯುತ್ ನಿರ್ವಹಣೆ ಕಾಮಗಾರಿಯನ್ನು ನವೆಂಬರ್ 10ರಂದು ಕೈಗೊಳ್ಳುತ್ತಿರುವುದರಿಂದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಂಗಳೂರು 23: 220/66/11 kV ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 10.11.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 03:30 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಪ್ರದೇಶಗಳಲ್ಲಿ ಪವರ್ ಕಟ್ ಗೃಹಲಕ್ಷ್ಮಿ-ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್‌.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್,…

Read More

ಬಾಗಲಕೋಟೆ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ತಂದಿರುವ ಗೃಹಲಕ್ಷ್ಮಿ ಯೋಜನೆಯು ಬಡವರ ಬದುಕಿಗೆ ಬಹಳಷ್ಟು ಅನುಕೂಲವಾಗಿದೆ. ಗೃಹಲಕ್ಷ್ಮಿ ಯೋಜನೆ ತಂದವರಿಗೆ ಪುಣ್ಯ ಬರಲಿ ಎಂದು ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಕೊರ್ತಿ ಗ್ರಾಮದ ಗಂಗವ್ವ ಬಿರಾದಾರ ಆಶಿಸಿದ್ದಾರೆ. ಮಾಧ್ಯಮಗಳೊಂದಿಗೆ ತಮ್ಮ ಸಂತಸ ಹಂಚಿಕೊಂಡಿರುವ ಗಂಗವ್ವ ಬಿರಾದಾರ ಅವರು, ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿರುವ ಸಚಿವೆ ತಾಯಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಕೊರ್ತಿ ಗ್ರಾಮದ ಗಂಗವ್ವ ಬಿರಾದಾರ ಅವರು ಗೃಹಲಕ್ಷ್ಮಿ ಯೋಜನೆಯ ಒಟ್ಟು 12 ತಿಂಗಳ 24 ಸಾವಿರ ರೂಪಾಯಿ ಹಣವನ್ನು ಕೂಡಿಟ್ಟು, ಅದರಲ್ಲಿ 8 ಸಾವಿರ ರೂಪಾಯಿ ಹಣದಲ್ಲಿ ಮೊಮ್ಮಕ್ಕಳಿಗಾಗಿ ಹೊಲಿಗೆ ಯಂತ್ರ ಖರೀದಿಸಿದ್ದಾರೆ. ಗಂಗವ್ವ ಬಿರಾದಾರ ಅವರು ಓದು ಬರಹ ಕಲಿತಿಲ್ಲ. ಆದರೆ, ಹೊಲಿಗೆ ತರಬೇತಿ ಪಡೆದಿದ್ದಾರೆ. ತನ್ನ ಮೊಮ್ಮಕ್ಕಳಿಗೆ, ನೆರೆಹೊರೆಯವರಿಗೆ ಹೊಲಿಗೆಯ ತರಬೇತಿ ನೀಡಿ ಅವರ ಭವಿಷ್ಯಕ್ಕೆ ಬೆಳಕಾಗಾಗಲಿ ಎಂದು ಹೊಲಿಗೆ ಯಂತ್ರ ಖರೀದಿಸಿದ್ದಾರೆ. ಅಲ್ಲದೇ, 12 ಸಾವಿರ ರೂಪಾಯಿ ಹಣವನ್ನು ತನ್ನ ಮೊಮ್ಮಗನ ವಿದ್ಯಾಬ್ಯಾಸದ…

Read More

ಮಂಡ್ಯ: ಚನ್ನಪಟ್ಟಣ ಚುನಾವಣೆ ಪ್ರಚಾರದಲ್ಲಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟಿರುವ ಮಾಜಿ ಪ್ರಧಾನಿ ದೇವೇಗೌಡರು; ನಮ್ಮ ವಂಶ ಬಡತನದಿಂದ ಕಷ್ಟಸುಖ ಅರಿತು ಮೇಲೆ ಬಂದಿದೆ. ನಮ್ಮ ವಂಶಕ್ಕೆ ಈ ಕಣ್ಣೀರು ಬಳುವಳಿಯಾಗಿ ಬಂದಿದೆ ಎಂದರು. ಪಾಂಡವಪುರದ ಚಿನಕುರುಳಿ ಗ್ರಾಮದಲ್ಲಿ ಮಾಜಿ ಪ್ರಧಾನಿಗಳು ಮಾಧ್ಯಮಗಳ ಜತೆ ಮಾತನಾಡಿದರು. ಕಣ್ಣೀರ ಬಗ್ಗೆ ವ್ಯಂಗ್ಯವಾಡ್ತಿರೋ ಕೈ ನಾಯಕರ ವಿರುದ್ದ ಹರಿಹಾಯ್ದ ದೇವೇಗೌಡರು; ತಮ್ಮ ಬದುಕಿನ ಹಸಿವು, ಕಣ್ಣೀರನ್ನು ಅವರು ನೆನಪು ಮಾಡಿಕೊಂಡರು. ನಮಗೆ ರೈತರ, ಬಡ ಜನರ ಕಷ್ಟ ಸುಖಗಳ ಅರಿವಿದೆ. ಅವರ ಕಷ್ಟಕ್ಕೆ ಸ್ಪಂದಿಸುವ ಹೃದಯ ಯಾರಿಗಿರುತ್ತೋ ಅವರಿಗೆ ಮಾತೃ ಹೃದಯ ಇರುತ್ತೆ. ಕಣ್ಣೀರಿನ ಬಗ್ಗೆ ವ್ಯಂಗ್ಯ ಮಾಡುವ ಜನರಿಗೆ ನಾನು ಇನ್ನೇನು ಹೇಳಲು ಬಯಸುವುದಿಲ್ಲ ಎಂದು ಅವರು ಹೇಳಿದರು. ನಾನು ನನ್ನ ಕಡೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರ್ತಿನಿ. ಮೊಮ್ಮಗನಿಗಾಗಿ ಈಗ ನಾನು ರಾಜಕೀಯಕ್ಕೆ ಬಂದಿಲ್ಲ. ಒಂದು ಪ್ರಾದೇಶಿಕ ಪಕ್ಷ ಉಳಿಸಲು…

Read More

ಮಂಡ್ಯ : ಕ್ರೀಡೆ, ಸಂಸ್ಕೃತಿ ಉಳಿಸುವ ಜತೆಗೆ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ನವಂಬರ್ 9 ರಂದು ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಅರ್ಜುನಪುರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘವನ್ನು ಉದ್ಘಾಟಿಸಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಎನ್.ಆರ್.ಪ್ರಸನ್ನ ತಿಳಿಸಿದರು. ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿಕ್ಷಣದ ಜತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ವಿಚಾರಗಳು ಎಲ್ಲರಿಗೂ ಮುಖ್ಯವಾಗಿರುವುದರಿಂದ ಕ್ರೀಡಾಪಟುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸಂಘವನ್ನು ಉದ್ಘಾಟನೆ ಮಾಡಲಾಗುತ್ತಿದೆ ಎಂದರು. ಸಂಘದ ವತಿಯಿಂದ ತಾಲೂಕಿನ ಎಲ್ಲಾ ಕ್ರೀಡಾಪಟುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ ಹಾಗೂ ಮುಂದಿನ ದಿನಗಳಲ್ಲಿ ತಾಲೂಕಿನ ಆಸಕ್ತಿಯುಳ್ಳ ವಿದ್ಯಾರ್ಥಿಗಳಿಗೆ ನೀಟ್, ಕೆಎಎಸ್, ಐಪಿಎಸ್ ಸೇರಿದಂತೆ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಉಚಿತವಾಗಿ ತರಬೇತಿ ಕೊಡಿಸುವುದು ಸಂಘದ ಮುಖ್ಯ ಉದ್ದೇಶವಾಗಿದೆ ಎಂದರು. ಮದ್ದೂರು ತಾಲೂಕಿನಿಂದ ಆಯ್ಕೆಯಾದ ಜಿಲ್ಲಾ, ರಾಜ್ಯ ಮಟ್ಟದ ಕ್ರೀಡಾಪಟುಗಳಿಗೆ ಯಾವುದೇ ಕ್ರೀಡೆ ಆದರೂ ಸಹ ಅವರಿಗೆ…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಆಗಸ್ಟ್ 2023ರಿಂದ ಈವರೆಗೆ ಬರೋಬ್ಬರಿ 1.22 ಕೋಟಿ ಮಹಿಳೆಯರಿಗೆ 30,285 ಕೋಟಿ ಧನಸಹಾಯ ನೀಡಲಾಗಿದೆ. ಈ ಬಗ್ಗೆ ರಾಜ್ಯ ವಾರ್ತಾ ಇಲಾಖೆಯಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ರಾಜ್ಯ ಸರ್ಕಾರ ಸ್ತ್ರೀ ಸ್ವಾಲಂಬನೆಯತ್ತ ದಿಟ್ಟ ಹೆಜ್ಜೆ ಇರಿಸಲಾಗಿದೆ ಎಂದಿದೆ. ಅಲ್ಲದೇ ಗೃಹ ಲಕ್ಷ್ಮಿ ಯೋಜನೆಯಡಿ ಆಗಸ್ಟ್ 2023ರಿಂದ ಈವರೆಗೆ ಪ್ರತಿ ಮನೆಯ ಯಜಮಾನಿಯ ಖಾತೆಗೆ ಮಾಸಿಕ 2000 ರೂ.ನಂತೆ 1.22 ಕೋಟಿ ಮಹಿಳೆಯರಿಗೆ ಒಟ್ಟು 30,285 ಕೋಟಿ ಧನಸಹಾಯ ನೀಡಲಾಗಿದೆ ಎಂದಿದೆ. ಇದಲ್ಲದೇ ಆರೋಗ್ಯ ಪುಷ್ಟಿ ಯೋಜನೆಯನ್ನು ಪ್ರಾಯೋಗಿಕವಾಗಿ ರಾಜ್ಯದ 102 ತಾಲ್ಲೂಕುಗಳಲ್ಲಿ ಜಾರಿಗೊಳಿಸಿದ್ದು, ಅರ್ಹ ವಿವಾಹಿತ ಮಹಿಳೆಯರಿಗೆ ಪೌಷ್ಟಿಕ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದೆ. ಮಾಜಿ ದೇವದಾಸಿಯರಿಗೆ ಉತ್ಪನ್ನಗಳ ಮಾರಾಟಕ್ಕಾಗಿ ಸವದತ್ತಿಯಲ್ಲಿ 48 ಮಾರಾಟ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿ ಎಂದು ತಿಳಿಸಲಾಗಿದೆ. https://twitter.com/KarnatakaVarthe/status/1854846263692505366 https://kannadanewsnow.com/kannada/suriyas-kangua-to-release-on-november-14-censor-board-gives-u-a-certificate/ https://kannadanewsnow.com/kannada/conspiracy-to-make-vijayapura-a-laboratory-of-hindutva-in-the-name-of-waqf-minister-m-b-patil-on-bjp/

Read More

ನವದೆಹಲಿ: ನಟ ಸೂರ್ಯ ( Actor Suriya ) ಅವರ ಇತ್ತೀಚಿನ ಪ್ಯಾನ್-ಇಂಡಿಯಾ ಚಿತ್ರ ಕಂಗುವಾವನ್ನು ( Pan-India film Kanguva ) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (Central Board of Film Certification – CBFC) ಯು / ಎ ರೇಟಿಂಗ್ನೊಂದಿಗೆ ತೆರವುಗೊಳಿಸಿದೆ. ಚಿತ್ರದ ತಯಾರಕರು ನವೆಂಬರ್ 8 ರ ಶುಕ್ರವಾರ ಸಂಜೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಈ ಸುದ್ದಿಯನ್ನು ಘೋಷಿಸಿದರು. ಸಂಭ್ರಮಾಚರಣೆಯ ಪೋಸ್ಟ್ ಸೃಜನಶೀಲ ಪ್ರಕಟಣೆಯನ್ನು ಮಾಡಿತು, ತಯಾರಕರು ಬರೆದಿದ್ದಾರೆ, “ನಮ್ಮೆಲ್ಲರಿಗೂ ‘ಯು’ಎನ್ ಪ್ಯಾರಲೆಲ್ಡ್ ‘ಆ’ ಸಾಹಸ ಕಾಯುತ್ತಿದೆ. ನಮ್ಮ ಮ್ಯಾಗ್ನಮ್ ಓಪಸ್ #Kanguva ಯುಎ ಸೆನ್ಸಾರ್ ಆಗಿದೆ! ಅದನ್ನು 3D ಯಲ್ಲಿ ಅನುಭವಿಸಲು ಸಿದ್ಧರಾಗಿ ಎಂದಿದ್ದಾರೆ. https://twitter.com/StudioGreen2/status/1854841290728653109 ಶಿವ ನಿರ್ದೇಶನದ ಇದು ವರ್ಷದ ಬಹು ನಿರೀಕ್ಷಿತ ತಮಿಳು ಬಿಡುಗಡೆಗಳಲ್ಲಿ ಒಂದಾಗಿದೆ. ಈ ಚಿತ್ರವು ಮಧ್ಯಕಾಲೀನ ಅವಧಿಯ ಫ್ಯಾಂಟಸಿ ಆಕ್ಷನ್ ಸಾಹಸವಾಗಿದ್ದು, ಸೂರ್ಯ ಬುಡಕಟ್ಟು ಯೋಧನಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವು ನಟ ಬಾಬಿ ಡಿಯೋಲ್ ಅವರ…

Read More

ವಿಜಯಪುರ: ಕಳೆದ ಹತ್ತು ವರ್ಷಗಳಿಂದ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗ ವಕ್ಫ್ ಆಸ್ತಿ ರಕ್ಷಣೆ ಕುರಿತು ಅಪಾರ ಕಾಳಜಿ ತೋರಿದ ಬಿಜೆಪಿ ಈಗ ವಿಜಯಪುರವನ್ನು ಹಿಂದುತ್ವದ ಪ್ರಯೋಗ ಶಾಲೆಯನ್ನಾಗಿ ಮಾಡಲು ಹೊರಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಆರೋಪಿಸಿದ್ದಾರೆ. ಶುಕ್ರವಾರ ಅವರು ಇಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಬಿಜೆಪಿ ಅಧಿಕಾರದ ಅವಧಿಯಲ್ಲಿ ವಕ್ಫ್ ಆಸ್ತಿ ರಕ್ಷಣೆಗೆ ಹೊರಡಿಸಿದ ಹತ್ತಾರು ಸುತ್ತೋಲೆಗಳನ್ನು ಬಿಡುಗಡೆ ಮಾಡಿದರು. ಕಳೆದ ಒಂದೆರಡು ವಾರಗಳಿಂದ ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಆದರೆ, ತಾವೇ ಅಧಿಕಾರದಲ್ಲಿ ಇದ್ದಾಗ ರೈತರು, ಧಾರ್ಮಿಕ ಸ್ಥಳಗಳ ಹಾಗೂ ಎಲ್ಲ ಧರ್ಮೀಯರ ಆಸ್ತಿಯನ್ನು ವಕ್ಫ್ ಗೆ ಹಿಂಪಡೆದಿದೆ ಎಂದು ಅವರು ದೂರಿದರು. ರಾಜ್ಯದಲ್ಲಿ 2019ರಲ್ಲಿ ಬಿಜೆಪಿಯೇ ಅಧಿಕಾರದಲ್ಲಿ ಇತ್ತು. ಆ ವರ್ಷದ ಸೆ.17ರಂದು ದೇವರಹಿಪ್ಪರಗಿ ತಾಲೂಕಿನ ಮಣೂರ ಗ್ರಾಮದ ಮುರುಘೇಂದ್ರ ಶಿವಬಸಪ್ಪ ಖ್ಯಾಡಿ, ಮಾಶಾಬಿ ಮೌಲಾಸಾಬ ಮುಲ್ಲಾ, ಸುಭಾಷ ಧರ್ಮಣ್ಣ ಆನೆಗುಂದಿ ಅವರ ಆಸ್ತಿಗಳನ್ನು…

Read More

ಬೆಂಗಳೂರು: ನಗರದ 18 ರಸ್ತೆಗಳನ್ನು ವೈಟ್‌ ಟಾಪಿಂಗ್‌ ಮಾಡಲಾಗುತ್ತಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ಅವರು ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯ ರಾಜರಾಜೇಶ್ವರಿ ನಗರ ವಲಯದಲ್ಲಿ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದಡಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಶವಂತಪುರದ ಎಂಇಐ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪರಿಶೀಲನೆ: ಯಶವಂತಪುರದ 950 ಮೀ. ಉದ್ದ ಎಂಇಐ ರಸ್ತೆಯಲ್ಲಿ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಎಂಇಐ ರಸ್ತೆಯಲ್ಲಿ ಸಂಚಾರಿ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದು ಕಳೆದ 1 ತಿ‌ಂಗಳಿಂದ ವೈಟ್ ಟಾಪಿಂಗ್ ಕಾಮಾಗರಿ ಪ್ರಾರಂಭಿಸಲಾಗಿದೆ. ಒಂದು ಬದಿಯ ರಸ್ತೆಯನ್ನು ಸಂಪೂರ್ಣ ಮುಚ್ಚಿ ಕಾಮಗಾರಿ ನಡೆಸಲಾಗುತ್ತಿದೆ. ಸದರಿ ರಸ್ತೆಯಲ್ಲಿ ನೀರುಗಾಲುವೆ, ಸ್ಯಾನಿಟರಿ ಲೈನ್, ಡಕ್ಟ್ ಅಳವಡಿಕೆ, ಚೇಂಬರ್, ಪಾದಚಾರಿ ಮಾರ್ಗ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿಗೆ ವೇಗ ನೀಡಿ, ಕಾಮಗಾರಿಯ ನಡೆಯುತ್ತಿರುವ ಬಗ್ಗೆ…

Read More

ರಾಮನಗರ: ನಾನು ಇಂಧನ ಸಚಿವನಾಗಿದ್ದಾಗ 10 ಕಡೆಗಳಲ್ಲಿ ವಿದ್ಯುತ್ ಕೇಂದ್ರಗಳನ್ನು ಸ್ಥಾಪಿಸಿದ್ದೇನೆ. ಪ್ರತಿ ಹಳ್ಳಿಯಲ್ಲಿ ಪ್ರತಿ ಇಬ್ಬರು ರೈತರಿಗೆ ಹೆಚ್ ವಿಡಿ ಯೋಜನೆಯಡಿ ಟ್ರಾನ್ಸ್ ಫಾರ್ಮರ್ಸ್ ಅಳವಡಿಸಿಕೊಟ್ಟಿದ್ದೇನೆ. ಈ ಕೆಲಸ ಕುಮಾರಸ್ವಾಮಿಯಿಂದ ಯಾಕೆ ಸಾಧ್ಯವಾಗಿಲ್ಲ? ಕುಮಾರಸ್ವಾಮಿ ಕ್ಷೇತ್ರದಲ್ಲಿ ಯಾರಿಗಾದರೂ ಒಬ್ಬರಿಗೆ ನಿವೇಶನ ಹಂಚಿದ್ದಾರಾ? ನಾವು ನಿವೇಶನ ನೀಡಲು ಬಂದಾಗ, ಜಿಲ್ಲಾಧಿಕಾರಿಗೆ ಕರೆ ಮಾಡಿ ನನ್ನ ಅವಧಿಯಲ್ಲಿ ಈ ಕೆಲಸ ಮಾಡಲು ಆಗಿಲ್ಲ, ಈಗ ಯಾಕೆ ಮಾಡುತ್ತಿದ್ದೀರಾ ಎಂದು ಬೆದರಿಕೆ ಹಾಕಿದ್ದಾರೆ. ಕುಮಾರಣ್ಣ ನಿನಗೆ ಬಡವರ ಬಗ್ಗೆ ವಿಶ್ವಾಸ ಇರಲಿಲ್ಲ, ಅದಕ್ಕೆ ನೀನು ಮಾಡಲಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗಿದರು. ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿ ಮಾತನಾಡಿದಂತ ಅವರು, ಮಹಿಳೆಯರದ್ದು ಹೆಂಗರುಳು, ಅವರಿಗೆ ಸಹಾಯ ಮಾಡಿದರೆ ಅವರು ಋಣ ತೀರಿಸುತ್ತಾರೆ. ಹೀಗಾಗಿ ಅವರಿಗೆ ಹೆಚ್ಚು ಕಾರ್ಯಕ್ರಮ ನೀಡಿದ್ದೇವೆ. ರಾಮಲಿಂಗಾ ರೆಡ್ಡಿ ಅವರು ಶಕ್ತಿ ಯೋಜನೆ ನೀಡಿದ್ದು, ನೀವು ಯಾವುದೇ ಪುಣ್ಯಕ್ಷೇತ್ರಕ್ಕೆ ಉಚಿತವಾಗಿ ಹೋಗಬಹುದು. ಈ ಯೋಜನೆಯಿಂದ ನಮ್ಮ ದೇವಾಲಯಗಳ ಹುಂಡಿಯಲ್ಲಿ ಹಣ ಹೆಚ್ಚಾಗುತ್ತಿದೆ ಎಂದು…

Read More