Author: kannadanewsnow09

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕಂತನಹಳ್ಳಿ ಗ್ರಾಮದಲ್ಲಿ ಮರಗಳ ಮಾರಣಹೋಮವೇ ನಡೆದಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವರದಿಯ ನಂತ್ರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದರು. ಈ ಆದೇಶದಂತೆ ತನಿಖಾ ವರದಿಯನ್ನು ಡಿಎಫ್ಓ ಸಿದ್ಧಪಡಿಸಿದ್ದು, ಸಲ್ಲಿಕೆ ಮಾತ್ರವೇ ಬಾಕಿ ಇದೆ. ವರದಿ ಸಲ್ಲಿಕೆಯಾದ ನಂತ್ರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮವಾಗೋದು ಗ್ಯಾರಂಟಿ ಎನ್ನಲಾಗುತ್ತಿದೆ. ದಿನಾಂಕ 24-01-2025ರಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು. ಅದರಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಕಂತನಹಳ್ಳಿ ಗ್ರಾಮದ ಸರ್ವೆ ನಂಂಬರ್ 8ರ ನಿತ್ಯ ಹರಿದ್ವರ್ಣದ ಸಮೃದ್ಧ ಕಾಡಿನಲ್ಲಿ ಅಪಾರ ಪ್ರಮಾಣದ ಬೆಲೆಬಾಳುವ ಪಾರಂಪರಿಕ ವೃಕ್ಷಗಳನ್ನು ಕಡಿದು ನಾಶಪಡಿಸಲಾಗಿದೆ ಎಂಬ ಸಚಿತ್ರ ದೂರು ಕಚೇರಿಗೆ ಬಂದಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದಿದ್ದರು. ಕಂತನಹಳ್ಳಿ ಸನಂ 8ರಲ್ಲಿ…

Read More

ಬೆಂಗಳೂರು: ಅವಿವಾಹಿತರಿಗಾಗಿ ಇರುವ “ಟಿಂಡರ್‌” ಡೇಟಿಂಗ್‌ ಆಪ್‌, ಬಳಕೆದಾರರ ಸುರಕ್ಷತೆಯ ದೃಷ್ಟಿಯಿಂದ ಟಿಂಡರ್‌ ಡೇಟಿಂಗ್‌ ಸುರಕ್ಷತಾ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕನ್ನಡ ಭಾಷೆಯಲ್ಲೂ ಲಭ್ಯವಿದೆ. ಟಿಂಡರ್‌ ತನ್ನ ಸಿಎಸ್‌ಆರ್‌ ಅಡಿಯಲ್ಲಿ ಡೇಟಿಂಗ್‌ ಸುರಕ್ಷತಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯು, ಕನ್ನಡ, ಹಿಂದಿ, ಮರಾಠಿ, ಬೆಂಗಾಲಿ ಭಾಷೆಯಲ್ಲೂ ಲಭ್ಯವಿದ್ದು, ನಿಮ್ಮ ಪ್ರಾದೇಶಿಕಭಾಷೆಯಲ್ಲೇ ಸುರಕ್ಷತೆಯ ಮಾರ್ಗಸೂಚಿಯನ್ನು ತಿಳಿದುಕೊಳ್ಳಬಹುದು. ಈ ಕುರಿತು ಮಾತನಾಡಿದ ಟಿಂಡರ್‌ನ ಮಾತೃ ಸಂಸ್ಥೆಯಾದ ಮ್ಯಾಚ್ ಗ್ರೂಪ್‌ನ ಸುರಕ್ಷತೆ ವಿಭಾಗದ ಉಪಾಧ್ಯಕ್ಷ ಯೋವೆಲ್ ರಾತ್, ಇಂದಿನ ಇಂಟರ್ನೆಂಟ್‌ ಯುಗದಲ್ಲಿ ಪ್ರತಿಯೊಂದು ಆಪ್‌ ದುರುಪಯೋಗ ಆಗುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ಸಿಎಸ್‌ಆರ್ ಇಂಡಿಯಾ ಸಹಯೋಗದೊಂದಿಗೆ ಮಹಿಳೆಯರ ಮೇಲಿನ ಹಿಂಸೆ ತಡೆಯುವ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲಾಯಿತು. ಈ ಮಾರ್ಗಸೂಚಿಗೆ ಸುರಕ್ಷತೆ ಪ್ರಯತ್ನಗಳನ್ನು ರೂಪಿಸುವಲ್ಲಿ ಈ ಸಹಭಾಗಿತ್ವವು ಪ್ರಮುಖ ಪಾತ್ರವನ್ನು ವಹಿಸಿದೆ. ಅಲ್ಲದೆ, ಭಾರತದಲ್ಲಿ ಆನ್‌ಲೈನ್ ಡೇಟಿಂಗ್ ಸುರಕ್ಷತೆಯ ಬಗ್ಗೆ ಶಿಕ್ಷಣ ಮತ್ತು ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿಯೂ ಹೆಜ್ಜೆ ಇಡಲಾಗಿದೆ. ಇತ್ತೀಚಿನ ಟಿಂಡರ್ ಸಮೀಕ್ಷೆಯಲ್ಲಿ, ಡೇಟಿಂಗ್…

Read More

ಬೆಂಗಳೂರು : “ಮೆಟ್ರೋ ದರ ಇಳಿಸಬೇಕು ಎಂದು ನಮ್ಮ ಸರ್ಕಾರ ಅಭಿಪ್ರಾಯವನ್ನು ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಬಿಎಂಆರ್ ಸಿಎಲ್ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ನಮಗೂ ಅದಕ್ಕೂ ಸಂಬಂಧವಿಲ್ಲ. ಈ ವಿಚಾರ ರಾಜ್ಯ ಸರ್ಕಾರದ ಸುಪರ್ದಿಗೆ ಬರಲ್ಲ, ಇದಕ್ಕಾಗಿಯೇ ಕೇಂದ್ರ ಸಮಿತಿ ರಚಿಸಲಾಗಿದೆ. ಜನರ ಮನವಿ ಆಲಿಸಿ ಮುಖ್ಯಮಂತ್ರಿಗಳು ಮೆಟ್ರೋ ದರ ಇಳಿಸುವ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ. ಜನಸಾಮಾನ್ಯರು ಹಾಗೂ ಮೆಟ್ರೋ ಹಿತಾಸಕ್ತಿ ಕಾಯಲು ಯಾವ ನಿರ್ಧಾರ ಮಾಡುತ್ತಾರೋ ಮಾಡಲಿ. ಈ ದರ ನಿಗದಿಗೆ ನ್ಯಾಯಾಧೀಶರ ನೇತೃತ್ವದ ಪ್ರತ್ಯೇಕ ಕೇಂದ್ರ ಸಮಿತಿ ಮಾಡಲಾಗಿದೆ. ಆ ಸಮಿತಿಗೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ, ಅಂತಿಮ ನಿರ್ಧಾರ ಅವರದು” ಎಂದು ತಿಳಿಸಿದರು. “ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ಜತೆ ಬೆಳಗ್ಗೆ ಚರ್ಚೆ ಮಾಡಿದ್ದು,…

Read More

ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಅಂಕುಶ ಬಿದ್ದಿದೆ. ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ಬ್ರೇಕ್ ಹಾಕಿದೆ. ಇದೀಗ ಜಾರಿಗೊಳಿಸಿರುವಂತ ಸುಗ್ರೀವಾಜ್ಞೆಯ ಪ್ರಮುಖ ಹೈಲೈಟ್ಸ್ ಮುಂದೆ ಓದಿ. ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ರ ಮುಖ್ಯಾಂಶಗಳು:- 1. ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ. 2. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ. 3. ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ. 4. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಆದೇಶಿಸಲಾಗಿದೆ. 5. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು…

Read More

ಮ್ಯೂನಿಚ್: ಚಾಲಕನೊಬ್ಬ ಜನರ ಗುಂಪಿನ ಮೇಲೆ ವಾಹನವನ್ನು ಚಲಾಯಿಸಿದ ಪರಿಣಾಮ 15 ಜನರು ಗಾಯಗೊಂಡಿದ್ದಾರೆ ಎಂದು ಜರ್ಮನ್ ಪೊಲೀಸರು ತಿಳಿಸಿದ್ದಾರೆ. ನಗರದ ಕೇಂದ್ರ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ದೊಡ್ಡ ಪ್ರಮಾಣದ ಪೊಲೀಸ್ ಕಾರ್ಯಾಚರಣೆಗೆ ಕಾರಣವಾಗಿದೆ. ಅಧಿಕಾರಿಗಳು ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂದಿತ ಆರೋಪಿ ಇನ್ನು ಮುಂದೆ ಹೀಗೆ ಮಾಡುವುದಿಲ್ಲ ಎಂಬುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಅಪಘಾತವು ಉದ್ದೇಶಪೂರ್ವಕವಾಗಿದೆಯೇ ಎಂಬ ಬಗ್ಗೆ ಪೊಲೀಸರು ಇನ್ನೂ ವಿವರಗಳನ್ನು ನೀಡಿಲ್ಲ. ಆದಾಗ್ಯೂ, ಗಾಯಗೊಂಡ ವ್ಯಕ್ತಿಗಳು ವರ್ಡಿ ಯೂನಿಯನ್ ಆಯೋಜಿಸಿದ್ದ ಮುಷ್ಕರಕ್ಕೆ ಸಂಬಂಧಿಸಿದ ಪ್ರದರ್ಶನದಲ್ಲಿ ಭಾಗವಹಿಸುತ್ತಿದ್ದರು ಎಂದು ಸ್ಥಳೀಯ ಪ್ರಸಾರಕ ಬೇಯರ್ಸ್ಚರ್ ರುಂಡ್ಫಂಕ್ ವರದಿ ಮಾಡಿದೆ. ಘಟನೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಒಕ್ಕೂಟ ಹೇಳಿದೆ. ಆದಾಗ್ಯೂ, ಅಪಘಾತದ ಸ್ಥಳದ ಬಳಿ ಸಂಚಾರ ಅಡೆತಡೆಗಳು ಉಂಟಾಗುತ್ತವೆ ಎಂದು ಮ್ಯೂನಿಚ್ ಪೊಲೀಸರು ಹೇಳಿದ್ದಾರೆ ಮತ್ತು ಈ ಪ್ರದೇಶವನ್ನು ತಪ್ಪಿಸಲು ನಾಗರಿಕರನ್ನು ಒತ್ತಾಯಿಸಿದರು. https://kannadanewsnow.com/kannada/drunk-man-hijacks-chennai-mtc-bus-to-take-revenge-from-conductor/ https://kannadanewsnow.com/kannada/new-income-tax-bill-introduced-in-lok-sabha/

Read More

ಚೆನ್ನೈ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಚೆನ್ನೈ ಮಹಾನಗರ ಸಾರಿಗೆ ನಿಗಮದ (Chennai Metropolitan Transport Corporation -MTC) ಬಸ್ ಅನ್ನು ಅಪಹರಿಸಿ ಲಾರಿಗೆ ಡಿಕ್ಕಿ ಹೊಡೆದ ಘಟನೆ ಅಕ್ಕರೈ ಪ್ರದೇಶದ ಬಳಿ ನಡೆದಿದೆ. ಆರೋಪಿಯನ್ನು ಗುಡುವಾಂಚೇರಿಯ ಬೆಸೆಂಟ್ ನಗರದ ನಿವಾಸಿ ಅಬ್ರಹಾಂ ಎಂದು ಗುರುತಿಸಲಾಗಿದ್ದು, ಕಾರಿನ ಇಂಟೀರಿಯರ್ ಡೆಕೊರೇಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ಕೆಲವು ದಿನಗಳ ಹಿಂದೆ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ ಬಸ್ ಕಂಡಕ್ಟರ್ ವಿರುದ್ಧ ಸೇಡು ತೀರಿಸಿಕೊಳ್ಳಲು ಆತ ಕೆಲಸ ಮಾಡುತ್ತಿದ್ದಂತ ಬಸ್ ಅನ್ನು ತೆಗೆದುಕೊಂಡಿದ್ದಾನೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಗುರುವಾರ ಮುಂಜಾನೆ 2 ಗಂಟೆ ಸುಮಾರಿಗೆ ತಿರುವನ್ಮಿಯೂರ್ ಬಸ್ ಟರ್ಮಿನಲ್ನಿಂದ ಬ್ರಾಡ್ವೇಯಿಂದ ಕೋವಲಂಗೆ ಚಲಿಸುತ್ತಿದ್ದ ಬಸ್ ಅನ್ನು ಕದ್ದೊಯ್ದಿದ್ದಾನೆ ಎಂಬುದಾಗಿ ವರದಿಯಾಗಿದೆ. ಮದ್ಯದ ಅಮಲಿನಲ್ಲಿ, ಅವರು ಬಸ್ ಅನ್ನು ಟರ್ಮಿನಸ್ನಿಂದ ಹೊರಗೆ ಸರಿಸಿ ಈಸ್ಟ್ ಕೋಸ್ಟ್ ರಸ್ತೆಯ ಕಡೆಗೆ ತೆರಳಿದರು. ಅಂತಿಮವಾಗಿ, ಅಜಾಗರೂಕ ಚಾಲನೆಯು ಅಕ್ಕರೈ ಚೆಕ್ ಪೋಸ್ಟ್ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿಗೆ ಡಿಕ್ಕಿ ಹೊಡೆಯಲು…

Read More

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಉಂಟಾಗಿದೆ. ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಕಾಣಿಸಿಕೊಂಡಿರುವಂತ ಬೆಂಕಿಯೊಂದರಿಂದಾಗಿ ಧಗ ಧಗಿಸಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿನ ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಉಂಟಾಗಿದೆ. ಇದರಿಂದಾಗಿ ಪ್ಲಾಸ್ಟಿಕ್ ಕಾರ್ಖಾನೆ ಹೊತ್ತಿ ಉರಿಯುತ್ತಿದೆ. ಸ್ಥಳಕ್ಕೆ ಆಗಮಿಸಿರುವಂತ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿಯ ಹೊಗೆ ಸುತ್ತಮುತ್ತಲ ವ್ಯಾಪ್ತಿಗೆ ಆವರಿಸಿದ್ದು, ಜನರು ಭಯಭೀತರಾಗಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. https://kannadanewsnow.com/kannada/bjp-state-president-by-vijayendra-takes-holy-dip-at-kumbh-mela-in-prayagraj/ https://kannadanewsnow.com/kannada/new-income-tax-bill-introduced-in-lok-sabha/

Read More

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳಕ್ಕೆ ತೆರಳಿರುವಂತ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ವಿವಿಧ ಗಣ್ಯರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದರು. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದರು. ಇನ್ನೂ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಇಂದು ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಇಡೀ ವಿಶ್ವದ ಧರ್ಮಾತೀತ ಆಸ್ತಿಕರನ್ನು ಸೂಜಿಗಲ್ಲಿನಂತೆ ಬರಸೆಳೆದು ಜಾಗತಿಕ ಇತಿಹಾಸ ಬರೆಯುತ್ತಿರುವ 144 ವರ್ಷಗಳ ನಂತರ ನಡೆಯುತ್ತಿರುವ ಪ್ರಯಾಗ್ ರಾಜ್ ನ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಮಿಂದದ್ದು ಪುನೀತ ಭಾವ ಮೂಡಿಸಿತು ಎಂದಿದ್ದಾರೆ. ಜಾಗತಿಕ ಶಾಂತಿಗಾಗಿ, ದೇಶದ ಕಲ್ಯಾಣಕ್ಕಾಗಿ ಕರುನಾಡ ಜನರ ಒಳಿತಿಗಾಗಿ ಪ್ರಾರ್ಥಿಸಲಾಯಿತು.…

Read More

ಚಿಕ್ಕಮಗಳೂರು: ರಾಜ್ಯದಲ್ಲಿ ಸರ್ಕಾರಿ ನೌಕರರ ಆತ್ಮಹತ್ಯೆ ಪ್ರಕರಣ ಮುಂದುವರೆದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸರ್ವೇ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಗರದಲ್ಲಿ ಸರ್ವೇ ಅಧಿಕಾರಿ ಶಿವಕುಮಾರ್(45) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಡಿಗೆರೆಯ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಮೀಪದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಗುಬ್ಬಿ ಮೂಲದ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡಿಗೆರೆಯಲ್ಲಿ ಸರ್ವೆ ಅಧಿಕಾರಿಯಾಗಿ ಮೃತ ಶಿವಕುಮಾರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲದೇ ಚಿಕ್ಕಮಗಳೂರು ನೌಕರರ ಸಂಘದ ನಿರ್ದೇಶಕರಾಗಿದ್ದರು. ಸರ್ವೆ ಅಧಿಕಾರಿ ಶಿವಕುಮಾರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. https://kannadanewsnow.com/kannada/namma-metro-fare-hike-reduced-to-70-per-cent-revised-fares-to-come-into-effect-from-tomorrow/ https://kannadanewsnow.com/kannada/new-income-tax-bill-introduced-in-lok-sabha/

Read More

ಬೆಂಗಳೂರು: ಸ್ಟೇಜ್ ಬೈ ಸ್ಟೇಜ್ ನಮ್ಮ ಮೆಟ್ರೋ ಪ್ರಯಾಣದ ದರದಲ್ಲಿ ಶೇ.100ರಷ್ಟು ಹೆಚ್ಚಳವಾಗಿದ್ದನ್ನು ಕಡಿಮೆ ಮಾಡಲು ಬಿ ಎ ಆರ್ ಸಿ ಎಲ್ ನಿರ್ಧರಿಸಿದೆ. ನಮ್ಮ ಮೆಟ್ರೋ ಪ್ರಯಾಣದ ಗರಿಷ್ಠ ದರ ಹೆಚ್ಚಳ ಶೇ.70ಕ್ಕೆ ಇಳಿಕೆ ಮಾಡಲು ತೀರ್ಮಾನಿಸಲಾಗಿದ್ದು, ನಾಳೆಯಿಂದಲೇ ಪರಿಷ್ಕೃತ ಪ್ರಯಾಣದ ಇಳಿಕೆ ದರಗಳು ಜಾರಿಗೊಳ್ಳಲಿದ್ದಾವೆ. ಇಂದು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ ರಾವ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮೆಟ್ರೋ ದರದ ಗರಿಷ್ಠ ಹೆಚ್ಚಳವನ್ನು ಶೇಕಡಾ 70 ಕ್ಕೆ ನಿಗದಿಪಡಿಸಲಾಗಿದೆ. ಈ ಬದಲಾವಣೆಗಳು ಫೆಬ್ರವರಿ 14ರ ನಾಳೆಯಿಂದಲೇ ಜಾರಿಗೆ ಬರಲಿವೆ ಎಂದು ಘೋಷಿಸಿದರು. ಇತ್ತೀಚೆಗೆ ಮೆಟ್ರೋ ಪ್ರಯಾಣ ದರ ಏರಿಕೆ ಮಿತಿಮೀರಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶಿಸಿದ್ದರು. ಮೆಟ್ರೋ ರೈಲು ದರದಲ್ಲಿನ ಅಸಂಗತತೆಗಳನ್ನು ಸರಿಪಡಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಕ್ಕೆ ನಿರ್ದೇಶನ ನೀಡಿದ್ದೇನೆ ಎಂದು ಅವರು ಎಕ್ಸ್ ನಲ್ಲಿ ಹೇಳಿದರು. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಬೆಂಗಳೂರು ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯನ್ನು ಜಾರಿಗೆ…

Read More