Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಮನ್ನಾ ಮಾಡುವ ವಿಚಾರವನ್ನು ಸಚಿವ ಸಂಪುಟದ ಮುಂದೆ ಇಟ್ಟು ತುರ್ತು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರದಲ್ಲಿ ಆಗ್ರಹಿಸಿದ್ದಾರೆ. ಇಂದು ಪತ್ರ ಬರೆದಿರುವಂತ ಅವರು, ಮಂಡ್ಯದ ರೈತರ ಜೀವನಾಡಿಯಾಗಿರುವ ಮೈ ಶುಗರ್ ಫ್ಯಾಕ್ಟರಿಯು ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಕಾರ್ಖಾನೆಯಾಗಿದೆ. ದೇಶದ ಮಾತ್ರವಲ್ಲ ಇಡೀ ಏಷ್ಯಾ ಖಂಡದಲ್ಲೇ ಮೊದಲು ಎಂದರೆ, 1932 ರಲ್ಲಿ ಈ ಕಾರ್ಖಾನೆಯು ಪ್ರಾರಂಭವಾಯಿತು. ಇದು ಮಂಡ್ಯ ಜಿಲ್ಲೆಯ ಹಾಗೂ ಕರ್ನಾಟಕದ ಹೆಮ್ಮೆಯಾಗಿದೆ. ಆದರೆ, ಇದೀಗ ಕಳೆದ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ. ಇದರಿಂದ ಪಾರು ಮಾಡುವ ಗುರುತರ ಜವಾಬ್ದಾರಿ ಸರ್ಕಾರದ ಮೇಲಿದ್ದು, ಸಂಪುಟ ಸಭೆ ಕರೆದು ಬಾಕಿ ಇರುವ ವಿದ್ಯುತ್ ಬಿಲ್ 52.25 ಕೋಟಿ ರೂಪಾಯಿಯನ್ನು ಮನ್ನಾ…
ಬೆಂಗಳೂರು: ಕೆ.ಸಿ ಜನರಲ್ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಟ್ರಾಮಾ ಕೇರ್ ಸೆಂಟರ್ ನ ಕಾಮಗಾರಿ ಪರಿಶೀಲಿಸಿದರು. 35 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 50 ಬೆಡ್ ಸಾಮರ್ಥ್ಯದ ಟ್ರಾಮಾ ಸೆಂಟರ್ ಕಾಮಗಾರಿಯನ್ನ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಚಿವರು ಸೂಚನೆ ನೀಡಿದರು. ಅಲ್ಲದೇ ಆಸ್ಪತ್ರೆಗೆ ತುರ್ತು ಚಿಕಿತ್ಸಾ ಘಟಕವನ್ನ ನೂತನವಾಗಿ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡುವ ಬಗ್ಗೆ ಚರ್ಚೆ ನಡೆಸಿದರು. ಕೆ.ಸಿ ಜನರಲ್ ಆಸ್ಪತ್ರೆಗೆ ಕಾಯಕಲ್ಪ ಒದಗಿಸುವ 150 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕೆ.ಸಿ ಜನರಲ್ ಜನಪ್ರೀಯ ಆಸ್ಪತ್ರೆಯನ್ನಾಗಿ ರೂಪಿಸಲು ಎಲ್ಲರು ಶ್ರಮ ವಹಿಸಬೇಕು ಎಂದರು. ಕೆ.ಸಿಜನರಲ್ ಆಸ್ಪತ್ರೆಯ ಆವರಣದಲ್ಲಿ ಹೊಸದಾಗಿ 66.78 ಕೋಟಿ ವೆಚ್ಚದಲ್ಲಿ 200 ಬೆಡ್ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಕಾಮಗಾರಿ ಪ್ರಾರಂಭಿಸುವ ನಿಟ್ಟಿನಲ್ಲಿ ಗುದ್ದಲಿ ಪೂಜೆಗೆ ಅಣಿ ಮಾಡಿಕೊಳ್ಳಲು ಸಚಿವರು ಸೂಚನೆ ನೀಡಿದರು.…
ಉಡುಪಿ: ಜಿಲ್ಲೆಯಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕೆರೆಗೆ ಎಸೆದು, ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ದುರಂತದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ರೇ, ತಾಯಿಯನ್ನು ರಕ್ಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದ ನಂದ್ರೋಳಿ ಎಂಬಲ್ಲಿನ ಕೆರೆಯಲ್ಲಿ ತಾಯಿಯೊಬ್ಬಳು ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೊದಲು ಇಬ್ಬರು ಮಕ್ಕಳನ್ನು ಕೆರೆಯ ನೀರಿಗೆ ಹಾಕಿ, ತಾನು ಆತ್ಮಹತ್ಯೆಗಾಗಿ ನೀರಿಗೆ ಧುಮುಕಿದ್ದಾರೆ. ಕೆರೆಗೆ ಮಹಿಳೆಯೊಬ್ಬರು ಹಾರಿದಂತದ್ದು ಗಮನಿಸಿದಂತ ಸ್ಥಳೀಯರು ಕೂಡಲೇ ಆಕೆಯನ್ನು ರಕ್ಷಣೆ ಮಾಡಲಾಗಿದೆ. ಆದ್ರೇ ಇಬ್ಬರು ಮಕ್ಕಳು ಆ ವೇಳೆಗಾಗಲೇ ಕೆರೆಯ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/for-the-first-time-in-kmfs-history-milk-procurement-crosses-1-crore-litre-mark/ https://kannadanewsnow.com/kannada/sda-accepts-bribe-through-phonepe-in-education-ministers-constituency/
ಬೆಂಗಳೂರು: ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಿದ ಎರಡು ದಿನಗಳ ಬಳಿಕ, ಕೆಎಂಎಫ್ ಹೊಸ ದಾಖಲೆ ಬರೆದಿದೆ. ಅದೇ 1 ಕೋಟಿ ಲೀಟರ್ ಗಡಿಯನ್ನು ಹಾಲಿನ ಸಂಗ್ರಹಣೆಯಲ್ಲಿ ಬರೆದಿದೆ. ರಾಜ್ಯ ಸರ್ಕಾರದಿಂದ ಈ ಮಾಹಿತಿ ಹಂಚಿಕೊಂಡಿದ್ದು, ನಂದಿನಿಯಿಂದ ಹಸನಾದ ಹೈನುಗಾರಿಕೆಯನ್ನು ನಡೆಸಲಾಗುತ್ತಿದೆ. 1 ಕೋಟಿಗೂ ಹೆಚ್ಚು ಲೀಟರ್ ದಾಖಲೆಯ ಪ್ರಮಾಣದ ಹಾಲಿನ ಸಂಗ್ರಹಣವನ್ನು ಜೂನ್.28ರಂದು ಮಾಡಿದೆ ಎಂದಿದೆ. ಕೆಎಂಎಫ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಹಾಲಿನ ಸಂಗ್ರಹಣೆ 1 ಕೋಟಿ ಲೀಟರ್ ಜೂನ್.28, 2024ರಂದು ದಾಟಿದೆ. ರಾಜ್ಯ ಸರ್ಕಾರ ಹೈನುಗಾರಿಕೆಯ ರೈತರಿಗೆ ನೀಡಿದ ಪ್ರೋತ್ಸಾಹವೇ ಇದಕ್ಕೆ ಕಾರಣ. ರೈತರ ಬದುಕಿಗೆ ಆರ್ಥಿಕ ಚೈತನ್ಯ ತುಂಬುವುದೇ ಸರ್ಕಾರದ ಆದ್ಯತೆ ಅಂತ ತಿಳಿಸಿದೆ. https://twitter.com/KarnatakaVarthe/status/1806999429603582061 https://kannadanewsnow.com/kannada/amit-shah-pressurised-action-against-yediyurappa-in-pocso-case-explosive-details-revealed/ https://kannadanewsnow.com/kannada/sda-accepts-bribe-through-phonepe-in-education-ministers-constituency/
ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ( Ex CM BS Yediyurappa ) ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವಾಲಯ (Union Ministry of Home Affairs -MHA) ಕರ್ನಾಟಕ ಪೊಲೀಸರಿಗಿಂತ ( Karnataka police ) ಹೆಚ್ಚಿನ ಉದಾಸೀನತೆಯನ್ನು ತೋರಿಸಿದೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕರ್ನಾಟಕ ಪೊಲೀಸರು ( Karnataka State Police ) ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸುವ ಮೊದಲು, ಗೃಹ ಸಚಿವಾಲಯವು ಕರ್ನಾಟಕ ಗೃಹ ಕಾರ್ಯದರ್ಶಿಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು ಎಂಬ ಸ್ಪೋಟಕ ಮಾಹಿತಿಯು ದಾಖಲೆಗಳಿಂದ ಬಹಿರಂಗಗೊಂಡಿದೆ. ಫೆಬ್ರವರಿ 23, 2024 ರಂದು, ದೂರುದಾರರು ಗೃಹ ಸಚಿವಾಲಯಕ್ಕೆ ಪತ್ರ ಬರೆದು ಯಡಿಯೂರಪ್ಪ ಅವರು ತಮ್ಮ ಮಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿವರಿಸಿದ್ದಾರೆ. ಗೃಹ ಸಚಿವಾಲಯದ ಕಾನೂನು ಅಧಿಕಾರಿ ಆರ್.ವಿ.ಯಾದವ್ ಅವರು ಫೆಬ್ರವರಿ 29 ರಂದು ಕರ್ನಾಟಕ ಗೃಹ ಕಾರ್ಯದರ್ಶಿಗೆ ಪತ್ರವನ್ನು ರವಾನಿಸಿದ್ದು,…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಇಂದು ಡಿಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಫಲಿತಾಂಶವನ್ನು ಕೆಇಎ https://kea.kar.nic.in ವೆಬ್ ಸೈಟ್ ಗೆ ಭೇಟಿ ನೀಡಿ ವೀಕ್ಷಿಸುವಂತೆ ತಿಳಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಸಿಇಟಿ-2024 ರ ಫಲಿತಾಂಶವನ್ನು ದಿನಾಂಕ 29-06-2024 ರ ಮಧ್ಯಾಹ್ನ 2.00 ರ ನಂತರ ಪ್ರಕಟಿಸಲಾಗುವುದು. ಡಿಪ್ಲೊಮ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಇರುವ ಮತ್ತು ಡಿಸಿಇಟಿ ಪರೀಕ್ಷೆಗೆ ಹಾಜರಾಗಿ ಬ್ಯಾಂಕ್ ಪ್ರಕಟವಾಗದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಡಿಪ್ಲೊಮ ಅಂಕ ಮತ್ತು ಅಂಕಪಟ್ಟಿಗಳನ್ನು ಪಿಡಿಎಫ್ ಫಾರ್ಮಾಟ್ ನಲ್ಲಿ ಪ್ರಾಧಿಕಾರದ ಇಮೇಲ್ keaugcet24@gmail.com ಸಲ್ಲಿಸಿದಲ್ಲಿ ಅರ್ಹತೆಯನ್ನು ಪರಿಶೀಲಿಸಿ ನಿಯಮಾನುಸಾರ ಬ್ಯಾಂಕ್ ನೀಡಲಾಗುವುದು ಎಂದಿದೆ. ಎರಡನೇ ವರ್ಷದ / ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗೆ ಹಾಗು ಮೊದಲನೇ ವರ್ಷದ ಆರ್ಕಿಟೆಕ್ಟರ್ ಕೋರ್ಸಿಗೆ ಅರ್ಹತೆಯನ್ನು ಪಡೆಯುವುದಕ್ಕಾಗಿ ದಾಖಲಾತಿ ಪರಿಶೀಲನೆಯನ್ನು ಈ ಕೆಳಕಂಡ ವೇಳಾಟೆಯಂತೆ ನಡೆಸಲಾಗುವುದು ಅಂತ ತಿಳಿಸಿದೆ. ಅಭ್ಯರ್ಥಿಗಳು, ದಾಖಲೆಗಳ ಪರಿಶೀಲನೆಗೆ ಸಂಬಂಧಿಸಿದಂತೆ ಈ ಕೆಳಗೆ ಗೊತ್ತುಪಡಿಸಿರುವ ವೇಳಾಪಟ್ಟಿ ಪ್ರಕಾರ ರಾಜ್ಯದಲ್ಲಿನ…
ಬೆಂಗಳೂರು: 2024 ಜೂನ್ 29: ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು ಜುಲೈ 1ರಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪೂರ್ವಭಾವಿಯಾಗಿ ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಹಾಗೂ ಜನನ, ಮರಣ ಉಪ ನೋಂದಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಡೇಟಾ ಎಂಟ್ರಿ ಆಪರೇಟರ್ಗಳಿಗೆ ಜನನ, ಮರಣ ನೋಂದಣಿಗೆ ಸಂಬಂಧಿಸಿದ ಅಧಿನಿಯಮ ಹಾಗೂ ನಿಯಮಗಳು ಮತ್ತು ನೋಂದಣಿಗೆ ಬಳಸಲಾಗುತ್ತಿರುವ ಇ-ಜನ್ಮ ತಂತ್ರಾಂಶದ ಬಗ್ಗೆ ತರಬೇತಿಯನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಘಟಿಸುವ ಜನನ, ಮರಣ ಘಟನೆಗಳು ಸಂಭವಿಸಿದ 21 ದಿನಗಳೊಳಗೆ ಜನನ, ಮರಣ ಘಟನೆಗಳನ್ನು ನೋಂದಣಿ ಮಾಡಿದ…
ಬೆಂಗಳೂರು: 2024ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ 15-07-2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಶಾಲಾ ಶಿಕ್ಷಣ ಕ್ಷೇತ್ರಕ್ಕೆ ಮತ್ತು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ದೇಶದಾದ್ಯಂತ ಶಿಕ್ಷಕರು ನೀಡಿರುವ ಅನನ್ಯ ಸೇವೆಯನ್ನು ಸ್ಮರಿಸಿ, ಅಂತಹ ಅತ್ಯುತ್ತಮ ಶಿಕ್ಷಕರನ್ನು ಗೌರವಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ವತಿಯಿಂದ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರತಿ ವರ್ಷ ಪ್ರದಾನ ಮಾಡಲಾಗುತ್ತಿದೆ. ಅದರಂತೆ, 2024 ನೇ ಸಾಲಿನ “ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಅರ್ಹ ಶಿಕ್ಷಕರು / ಉಪನ್ಯಾಸಕರು / ಮುಖ್ಯ ಶಿಕ್ಷಕರು / ಪ್ರಾಂಶುಪಾಲರು ಆನ್ ಲೈನ್ ಪೋರ್ಟಲ್ (https://nationalawardstoteachers.education.gov.in) ಮೂಲಕ ಅರ್ಜಿ ಸಲ್ಲಿಸಲು ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯದ ವ್ಯಾಪ್ತಿಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಉಲ್ಲೇಖಿತ ಪತ್ರ & ಅದರೊಂದಿಗಿನ ಪೂರಕ ದಾಖಲೆಗಳ…
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಹೆಗ್ಗನಹಳ್ಳಿ ಕ್ರಾಸ್ ನಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿನ ಬಸ್ಸುಗಳಿಗೆ ಬೆಂಕಿ ತಗುಲಿದ ಪರಿಣಾಮ ಐದು ಬಸ್ಸುಗಳು ಬೆಂಕಿಗೆ ಆಹುತಿಯಾಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ಖಾಸಗಿ ನರ್ಸಿಂಗ್ ಹೋಂ ಕಾಲೇಜು ಬಳಿ ನಿಲ್ಲಿಸಿದ್ದ ಐದು ಬಸ್ ಗಳಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಮಧ್ಯಾಹ್ನ 2:40 ರ ಸುಮಾರಿಗೆ ಈ ಘಟನೆ ನಡೆದಿದ್ದು, ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳದ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿದವು. ಕಾಲೇಜಿಗೆ ಸೇರಿದ ಜಾಗದಲ್ಲಿ ನಿಲ್ಲಿಸಿದ್ದ ಬಸ್ ಗಳು ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗಿವೆ ಎಂದು ವರದಿಯಾಗಿದೆ. ಬೆಂಕಿಯು ನಿಂತಿದ್ದ ಬಸ್ಸಿನಿಂದ ಪಕ್ಕದ ವಾಹನಗಳಿಗೆ ವೇಗವಾಗಿ ಹರಡಿತು, ಕಾಲೇಜು ಅಧಿಕಾರಿಗಳು ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ಸ್ಥಳೀಯ ಅಗ್ನಿಶಾಮಕ ದಳದ ಸಿಬ್ಬಂದಿ ತ್ವರಿತವಾಗಿ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ಹಾನಿ ಸಂಭವಿಸುವ ಮೊದಲು ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದರು. ರಾಜಗೋಪಾಲ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು…
ಬೆಂಗಳೂರು: ಎಸ್ಐಟಿ ವಶದಲ್ಲಿದ್ದಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರನ್ನು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ನಾಲ್ಕನೇ ಪ್ರಕರಣದಲ್ಲಿ ತಮ್ಮ ವಶಕ್ಕೆ ಪಡೆದಿದ್ದಂತ ಪ್ರಜ್ವಲ್ ರೇವಣ್ಣ ಅವರನ್ನು ಹಾಜರು ಪಡಿಸಿದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಜುಲೈ.8ರವಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಇದೇ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡುವಂತೆ ಅವರ ಪರ ವಕೀಲ ಅರುಣ್ ನ್ಯಾಯಾಲಯಕ್ಕೆ ಮನವಿ ಮಾಡಿದರು. ಆ ಮನವಿಯನ್ನು ಜೈಲು ಅಧಿಕಾರಿಗಳಿಗೆ ಸಲ್ಲಿಸುವಂತೆ ಕೋರ್ಟ್ ಸೂಚಿಸಿತು. ಅಲ್ಲದೇ ಈ ಪ್ರಕರಣವನ್ನು ಸೋಮವಾರ ಮತ್ತೆ ವಿಚಾರಣೆಗೆ ಕೈಗೆತ್ತಿಕೊಳ್ಳುತ್ತೇನೆ. ಜೈಲು ಅಧಿಕಾರಿಗಳು ಮನವಿ ಸ್ವೀಕರಿಸದೇ ಇದ್ದರೇ ತಿಳಿಸುವಂತೆ ಹೇಳಿದೆ. https://kannadanewsnow.com/kannada/sda-accepts-bribe-through-phonepe-in-education-ministers-constituency/