Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಈ ತಿಂಗಳಿನಿಂದಲೇ ಹೆಚ್ಚುವರಿ ಐದು ಕೆಜಿ ಅಕ್ಕಿಗೆ ನೀಡಲಾಗುತ್ತಿದ್ದಂತ ಹಣದ ಬದಲಾಗಿ ಅಕ್ಕಿ ಕೊಡೋದಾಗಿ ಸರ್ಕಾರ ಹೇಳಿತ್ತು. ಆದರೇ ಈ ತಿಂಗಳು ಇಲ್ಲ. ಏಪ್ರಿಲ್ ನಿಂದ ಕೊಡುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳುವ ಮೂಲಕ, ಶಾಕ್ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಮ್ಮ ಬಳಿ ಅಕ್ಕಿ ಇದೆ. ಕೇಂದ್ರ ಸರ್ಕಾರವೂ ಅಕ್ಕಿ ಕೊಡಲು ಸಿದ್ಧವಿದೆ. ಆದರೇ ಈ ತಿಂಗಳ ಬದಲಾಗಿ ಏಪ್ರಿಲ್ ನಿಂದ ಬಿಪಿಎಲ್ ಕಾರ್ಡ್ ದಾರರಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ತಿಳಿಸಿದರು. ಕಳೆದ ತಿಂಗಳಿನಿಂದ ನಮ್ಮ ಬಳಿ ಅಕ್ಕಿ ಇದೆ. ನಾವು ನಿರ್ಣಯ ಮಾಡಿದಂತೆ ಹೆಚ್ಚುವರಿ ಅಕ್ಕಿಗೆ ಅಕ್ಕಿ ಕೊರತೆಯ ಕಾರಣ ಹಣ ನೀಡಲಾಗಿತ್ತು. ಈಗ ಅಕ್ಕಿ ನಮ್ಮ ಬಳಿಯಿದೆ. ಕೇಂದ್ರ ಸರ್ಕಾರವೂ ಅಕ್ಕಿ ಕೊಡೋದಕ್ಕೆ ಸಿದ್ಧವಿದೆ. ಈ ಹಿನ್ನಲೆಯಲ್ಲಿ ಏಪ್ರಿಲ್ ನಿಂದ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದರು. https://kannadanewsnow.com/kannada/anganwadi-ration-found-in-cowshed/ https://kannadanewsnow.com/kannada/legal-battle-against-state-govts-conspiracy-hd-kumaraswamy/
ಬೆಂಗಳೂರು: ನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಭೂಮಿ ಒತ್ತುವರಿ ಸೇರಿದಂತೆ ನಾನು ಯಾವ ಅಕ್ರಮವನ್ನೂ ಮಾಡಿಲ್ಲ, ಮಾಡುವುದೂ ಇಲ್ಲ. ನಾನು ಒಬ್ಬ ರೈತನಾಗಿ ಬದುಕಲು 40 ವರ್ಷಗಳ ಹಿಂದೆ ಖರೀದಿಸಿರುವ ಜಮೀನು ಅದು. ಒಬ್ಬ ಸಾಮಾನ್ಯ ಪ್ರಜೆಗೆ ಯಾವುದೇ ತೆರವು ಮಾಡಬೇಕು ಎಂದರೂ ಕಾನೂನು ಪ್ರಕಾರ ಹದಿನೈದು ದಿನಗಳ ಮೊದಲೇ ನೋಟಿಸ್ ನೀಡಬೇಕು. ಅದರೆ ನನಗೆ ಈವರೆಗೆ ಯಾವುದೇ ಮಾಹಿತಿ ಅಥವಾ ನೋಟಿಸ್ ನೀಡಿಲ್ಲ ಎಂದು ಅವರು ದೂರಿದರು. ಈ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆ ಏನು ಎಂದು ಎಲ್ಲರಿಗೂ ಗೊತ್ತಿದೆ. ಈ ಸರ್ಕಾರ ಬೆಂಗಳೂರು ನಗರವನ್ನು…
ಉತ್ತರ ಕನ್ನಡ: ಜಿಲ್ಲೆಯಲ್ಲಿ ಅಕ್ರಮವಾಗಿ ಅಂಗನವಾಡಿ ರೇಷನ್ ಅನ್ನು ದನದ ಕೊಟ್ಟಿಗೆಯಲ್ಲಿ ಸಂಗ್ರಹಿಸಿಟ್ಟಿದ್ದನ್ನು ತಹಶೀಲ್ದಾರ್ ನೇತೃತ್ವದ ತಂಡವು ಪತ್ತೆಹಚ್ಚಿದೆ. ಆ ನಂತ್ರ ಮಕ್ಕಳಿಗೆ ಕೊಡುವ ರೇಷನ್ ಅಕ್ರಮವಾಗಿ ಸಂಗ್ರಹಿಸಿದ್ದನ್ನು ಕಂಡು ಶಾಕ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಕೆ.ಜಿ ಹಳ್ಳಿಯಲ್ಲಿ ಅಕ್ರಮವಾಗಿ ಅಂಗನವಾಡಿ ರೇಷನ್ ಸಂಗ್ರಹಿಸಿರುವಂತ ವಿಷಯ ತಹಶೀಲ್ದಾರ್ ಪ್ರವೀಣ್ ಹುಚ್ಚಣ್ಣನವರಿಗೆ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ಪೊಲೀಸರೊಂದಿಗೆ ಸಹದೇವ ರುದ್ರಪ್ಪ ಎನ್ನುವವರ ದನದ ಕೊಟ್ಟಿಗೆಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ಸಂದರ್ಭದಲ್ಲಿ 1 ಲಕ್ಷದ 52 ಸಾವಿರ ಮೌಲ್ಯದ 35 ಹಾಲಿನ ಪುಡಿಯ ಚೀಲಗಳು ಪತ್ತೆಯಾಗಿವೆ. ಅಲ್ಲದೇ 97 ಪ್ಯಾಕೇಟ್ ಪೌಷ್ಠಿಕ ಆಹಾರವೂ ಪತ್ತೆಯಾಗಿದೆ. ಈ ಸಂಬಂಧ ಸಹದೇವ ರುದ್ರಪ್ಪ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ. ‘ಯಶವಂತಪುರ ಮಾರುಕಟ್ಟೆ’ಯಿಂದ ನಾಲ್ಕು ಉತ್ಪನ್ನಗಳ ವಹಿವಾಟು ‘ದಾಸನಪುರಕ್ಕೆ ಶಿಫ್ಟ್’ ಬೆಂಗಳೂರು: ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು…
ಬೆಂಗಳೂರು: ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ವಿಧಾನಪರಿಷತ್ತಿಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿಯನ್ನು ಯಶವಂತಪುರ ಮುಖ್ಯ ಮಾರುಕಟ್ಟೆ ಪ್ರಾಂಗಣದಿಂದ ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ನಾಲ್ಕು ಉತ್ಪನ್ನಗಳನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಿರುವ ಸರ್ಕಾರದ ಕ್ರಮವನ್ನು ಕೆಲವು ವರ್ತಕರು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು. ನ್ಯಾಯಾಲಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದ್ದು, ಸರ್ಕಾರ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿ ವರ್ತಕರಿಗೆ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಮಳಿಗೆ ಹಂಚಿಕೆ ಮಾಡಲಿದೆ ಎಂದು ತಿಳಿಸಿದರು. ಯಶವಂತಪುರ ಎಪಿಎಂಸಿಯಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಣ ಹಾಗೂ ರೈತರ ಹಿತದೃಷ್ಟಿಯಿಂದ ದಾಸನಪುರದಲ್ಲಿ 67.25 ಎಕರೆ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಲಾಗಿದೆ. ಈ ಪ್ರದೇಶದಲ್ಲಿ ರೂ 306.50 ಕೋಟಿ ವೆಚ್ಚದಲ್ಲಿ…
ನವದೆಹಲಿ: ಮಂಗಳವಾರದ ಇಂದು ಷೇರು ಮಾರುಕಟ್ಟೆಯಲ್ಲಿ ಕೊಂಚ ಏರಿಕೆಯನ್ನು ಕಂಡಿದೆ. ಬಿಎಸ್ಇ ಸೆನ್ಸೆಕ್ಸ್ 1131.31 ಪಾಯಿಂಟ್ಸ್ ಏರಿಕೆಗೊಂಡು 75,301.26 ಕ್ಕೆ ತಲುಪಿದ್ದರೆ, ಎನ್ಎಸ್ಇ ನಿಫ್ಟಿ 50 325.55 ಪಾಯಿಂಟ್ಸ್ ಏರಿಕೆಗೊಂಡು 22,834.30 ಕ್ಕೆ ತಲುಪಿದೆ. ಹೂಡಿಕೆದಾರರಿಗೆ ಮತ್ತೊಂದು ಪ್ರಮುಖ ಪರಿಹಾರವೆಂದರೆ ದಲಾಲ್ ಸ್ಟ್ರೀಟ್ನಲ್ಲಿನ ರ್ಯಾಲಿ ವಿಶಾಲ ಆಧಾರಿತವಾಗಿತ್ತು, ಸ್ಮಾಲ್ಕ್ಯಾಪ್ ಮತ್ತು ಮಿಡ್ಕ್ಯಾಪ್ ಷೇರುಗಳು ಸಹ ದೊಡ್ಡ ಲಾಭವನ್ನು ದಾಖಲಿಸಿವೆ. ಷೇರು ಮಾರುಕಟ್ಟೆಯ ಚಂಚಲತೆಯಲ್ಲಿನ ಕುಸಿತವು ದಿನವನ್ನು ಇನ್ನಷ್ಟು ಉತ್ತಮಗೊಳಿಸಿತು. ಐಸಿಐಸಿಐ ಬ್ಯಾಂಕ್, ಮಹೀಂದ್ರಾ ಆಂಡ್ ಮಹೀಂದ್ರಾ, ಶ್ರೀರಾಮ್ ಫೈನಾನ್ಸ್, ಎಲ್ ಅಂಡ್ ಟಿ ಮತ್ತು ಟಾಟಾ ಮೋಟಾರ್ಸ್ ನಿಫ್ಟಿ 50 ನಲ್ಲಿ ಹೆಚ್ಚು ಲಾಭ ಗಳಿಸಿದ ಕೆಲವು ಷೇರುಗಳಾಗಿವೆ. ಬಜಾಜ್ ಫಿನ್ ಸರ್ವ್, ಭಾರ್ತಿ ಏರ್ ಟೆಲ್, ಟೆಕ್ ಮಹೀಂದ್ರಾ, ರಿಲಯನ್ಸ್ ಮತ್ತು ಐಟಿಸಿ ಹೆಚ್ಚು ನಷ್ಟ ಅನುಭವಿಸಿದ ಷೇರುಗಳಾಗಿವೆ. ಪ್ರಗತಿಶೀಲ ಷೇರುಗಳ ನಿರ್ದೇಶಕ ಆದಿತ್ಯ ಗಗ್ಗರ್ ಮಾತನಾಡಿ, “ಈ ದಿನ ಬುಲ್ಸ್ ಪ್ರಾಬಲ್ಯ ಸಾಧಿಸಿತು, ಸೂಚ್ಯಂಕವು ಆರಂಭದಲ್ಲಿ ಏರಿತು ಮತ್ತು…
ಬೆಂಗಳೂರು: ಕೈಮಗ್ಗ ನೇಕಾರರ ಆತ್ಮಹತ್ಯೆ ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ರೂ 5 ಲಕ್ಷ ಪರಿಹಾರ ವಿತರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಅವರು ವಿಧಾನಪರಿಷತ್ತಿಗೆ ಭರವಸೆ ನೀಡಿದ್ದಾರೆ. ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕರಾದ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಭಿಮಾ ಯೋಜನೆಯಲ್ಲಿ ರೂ 2 ಲಕ್ಷ ಪರಿಹಾರ ವಿತರಣೆ ಯೋಜನೆ ಜಾರಿಯಲ್ಲಿದ್ದು, ಈ ಯೋಜನೆಯ ವಿಮಾ ಕಂತನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಈ ರೂ 2 ಲಕ್ಷ ಗಳೊಂದಿಗೆ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದಲೂ ರೂ 3 ಲಕ್ಷ ಪರಿಹಾರ ವಿತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು. ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ವಿತರಣೆ ಮಾಡುವ ಯೋಜನೆ ಜಾರಿಯಲ್ಲಿ ಇರಲಿಲ್ಲ. ಆದರೆ ಕೋವಿಡ್ ಅವಧಿಯಲ್ಲಿ 25 ಮೃತ ನೇಕಾರರ ಕುಟುಂಬಗಳಿಗೆ ತಲಾ ರೂ 5 ಲಕ್ಷಗಳಂತೆ ರೂ 1.25 ಕೋಟಿ ಪರಿಹಾರ…
ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ, ವಿವಿಧ ನದಿ ಯೋಜನೆಗಳ ಆರಂಭಕ್ಕೆ ಆಗ್ರಹಿಸಿ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಮಾ.22ರ ಅಖಂಡ ಕರ್ನಾಟಕ ಬಂದ್ ವೇಳೆ ಏನಿರುತ್ತೆ.? ಏನಿರಲ್ಲ ಅಂತ ಮುಂದೆ ಓದಿ. ಬೆಳಗಾವಿಯಲ್ಲಿನ ಮರಾಠಿಗಳ ಪುಂಡಾಟಿಕೆ, ಅಟ್ಟಹಾಸ, ಎಂಇಎಸ್ ನಿಷೇಧಿಸಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ ತನಿಖೆ ಆಗಬೇಕು. ಮೇಕೆದಾಟು ಬಗ್ಗ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ನೀತಿ ವಿರೋಧಿಸಿ ಹಾಗೂ ಚಾಲಕರಿಗೆ ಶಕ್ತಿ ತುಂಬಲು ದಿನಾಂಕ 22-03-2025ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಚಳುವಳಿಯ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಇದಕ್ಕೂ ಪೂರ್ವದಲ್ಲಿ ಈ ಅಖಂಡ ಕರ್ನಾಟಕ ಬಂದ್ ಬಗ್ಗೆ ಇಂದು ಬೆಂಗಳೂರಿನ ವುಡ್ ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ಕನ್ನಡಪರ ಸಂಘಟನೆಗಳ ನಾಯಕರೊಂದಿಗೆ ಸಭೆಯನ್ನು…
ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದಂತ ಆರೋಪದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ ರೇವಣ್ಣಗೆ ಕಾನೂನು ಸಂಕಷ್ಟ ಎದುರಾಗಿದೆ. ಈ ಸಂಬಂಧ ಕಾಂಗ್ರೆಸ್ ಕಾರ್ಯಕರ್ತೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ನಿನ್ನೆ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ನಡೆದಂತ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಎಂಬುವರು ಭಾಗಿಯಾಗಿದ್ದರು. ಈ ಸಭೆಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ ನಡೆಸುತ್ತಿದ್ದರು. ಈ ವೇಳೆಯಲ್ಲಿ ಸಮಸ್ಯೆ ಹೇಳೋದಕ್ಕೆ ಮುಂದಾದಂತ ನಂದಿನಿ ನಾಗರಾಜ್ ಅವರ ಮಾತನ್ನು ಆಲಿಸಲಿಲ್ಲ. ಸಾರ್ ನೋಡಿ ಸಾರ್ ಒಮ್ಮೆ ಅಂತ ಪದೇ ಪದೇ ಕೇಳಿದ್ದಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ ರೇವಣ್ಣ ಅವರು ಸಿಟ್ಟಾಗಿ, ಮಹಿಳೆ ಎನ್ನದೇ ನಂದಿನಿ ನಾಗರಾಜ ಮೇಲೆ ಹಲ್ಲೆ ಮಾಡಿರೋ ವೀಡಿಯೋ ವೈರಲ್ ಆಗಿದೆ. ಈ ವೀಡಿಯೋ ಆಧರಿಸಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಅವರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿಯನ್ನು ಭೇಟಿಯಾಗಿ ಹೆಚ್ ಎಂ ರೇವಣ್ಣ…
ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…
ಇಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಂಸತ್ತಿನಲ್ಲಿ ರೈಲ್ವೆ ಬಜೆಟ್ ಕುರಿತಂತೆ ಮತದಾನ ಪ್ರಕ್ರಿಯೆಗೆ ಸಂಬಂಧಿಸಿದ ವಿಚಾರಗಳನ್ನು ಮಂಡಿಸಿದರು. ಅವರ ಮಾತಿನ ಸಂಪೂರ್ಣ ಹೈಲೈಟ್ಸ್ ಮುಂದಿದೆ ಓದಿ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ಭಾರತೀಯ ರೈಲ್ವೆ ಕಳೆದ ಹತ್ತು ವರ್ಷಗಳಲ್ಲಿ ಅಪಾರ ಬಂಡವಾಳ ಹೂಡಿಕೆಯನ್ನು ಕಂಡಿದೆ. ಹಿಂದಿನ ದಿನಗಳಲ್ಲಿ ರೈಲ್ವೆಗೆ ಸರಾಸರಿ ₹25,000 ಕೋಟಿ ಬಂಡವಾಳ ನೆರವು ಲಭ್ಯವಾಗುತ್ತಿತ್ತು, ಆದರೆ ಇಂದು ₹2.50 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಪ್ರಯಾಣಿಕರ ಭಾರ ಕಡಿಮೆ ಮಾಡಲು, ರೈಲ್ವೆ ಹಲವಾರು ತಂತ್ರಗಳನ್ನು ಅನುಸರಿಸುತ್ತಿದೆ. ನಮ್ಮ ದೇಶದಲ್ಲಿ ರೈಲು ಪ್ರಯಾಣ ದರಗಳು ಹಿತಕರವಾಗಿದ್ದು, ಪಾಶ್ಚಿಮಾತ್ಯ ದೇಶಗಳಿಗಿಂತ 10-20 ಪಟ್ಟು ಕಡಿಮೆ ದರದಲ್ಲಿ ಉತ್ತಮ ಮತ್ತು ಸುರಕ್ಷಿತ ಸೇವೆಯನ್ನು ಒದಗಿಸಲಾಗುತ್ತಿದೆ. ಮಾರ್ಚ್ 31ಕ್ಕೆ ಕೊನೆಗೊಳ್ಳುವ 2023-24ನೇ ಹಣಕಾಸು ವರ್ಷದಲ್ಲಿ, ಭಾರತೀಯ ರೈಲ್ವೆ 1.6 ಬಿಲಿಯನ್ ಟನ್ ಸರಕು ಸಾಗಣೆಯನ್ನು ಸಾಧಿಸಿ, ಚೀನಾ ಮತ್ತು ಅಮೆರಿಕದೊಂದಿಗೆ ಜಾಗತಿಕವಾಗಿ ಅಗ್ರ ಮೂರನೇ ಸ್ಥಾನವನ್ನು…












