Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ಮತ್ತಷ್ಟು ಪ್ರಶಸ್ತಿಗಳ ಸರಮಾಲೆಯೇ ಬಂದಿದೆ. 7 ರಾಷ್ಟ್ರೀಯ, ವಿಶ್ವ ನಾವೀನ್ಯತೆಯ ಪ್ರಶಸ್ತಿಗಳು ಕೆ ಎಸ್ ಆರ್ ಟಿಸಿಗೆ ಬಂದಿವೆ. ಈ ಬಗ್ಗೆ ನಿಗಮದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕೆಎಸ್‌ಆರ್‌ಟಿಸಿ ಅನುಷ್ಠಾನಗೊಳಿಸಿರುವ ಉಪಕ್ರಮಗಳಿಗೆ ರಾಷ್ಟ್ರೀಯ ಹಾಗೂ ವಿಶ್ವ ನಾವೀನ್ಯತೆ ಪ್ರಶಸ್ತಿಗಳು ಈ ಕೆಳಕಂಡ ವರ್ಗಗಳಲ್ಲಿ ಲಭಿಸಿರುತ್ತದೆ ಎಂದಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ.17, 18 ಮತ್ತು 21, 2025ರಂದು ಮುಂಬೈನಲ್ಲಿ ನಡೆಯಲಿದೆ ಎಂದು ತಿಳಿಸಿದೆ. ಹೀಗಿದೆ ಕೆ ಎಸ್ ಆರ್ ಟಿಸಿಗೆ ಬಂದಿರುವಂತ ಪ್ರಶಸ್ತಿಗಳ ಪಟ್ಟಿ 1. ಉತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ 2. ಕನಸುಗಳ ಕಂಪನಿಗಳು – ಉದ್ಯೋಗದಲ್ಲಿ ಆರೋಗ್ಯ ನಿರ್ವಹಣೆಗೆ ಗೌರವ 3. ವರ್ಷದ ವ್ಯವಹಾರ ನಾಯಕ ಪ್ರಶಸ್ತಿ – ಕಾರ್ಯಸ್ಥಳ ಮತ್ತು ಜನಸಂಪತ್ತು ಅಭಿವೃದ್ಧಿ 4. ವಿಶ್ವ ಆರೈಕೆ ಪ್ರಶಸ್ತಿ – ಉತ್ತಮ ಸಾರ್ವಜನಿಕ ಆರೋಗ್ಯ ಉಪಕ್ರಮ 5. ವಿಶ್ವ ನಾವಿನ್ಯತೆ ಪ್ರಶಸ್ತಿ – ಆರೋಗ್ಯ ತಂತ್ರಜ್ಞಾನದಲ್ಲಿ ಉತ್ತಮ…
ಬಾಗಲಕೋಟೆ : ಮಕ್ಕಳನ್ನು ಮೊಬೈಲಿಗೆ, ಟಿವಿಗೆ ಅಂಟಿಸುವ ಬದಲಿಗೆ ಪುಸ್ತಕಗಳಿಗೆ, ಮಣ್ಣಿನಲ್ಲಿ ಆಡಲು, ಆಟದ ಮೈದಾನಗಳಿಗೆ ಹೆಚ್ಚೆಚ್ಚು ತೊಡಗಿಸಿದರೆ ಮಕ್ಕಳ ಸೃಜನಶೀಲತೆ, ಕ್ರಿಯಾಶೀಲತೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ ನೀಡಿದರು. ಹೊಳೆ ಹುಚ್ಚೇಶ್ವರ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಶಾಲೆಗಳ ವಾರ್ಷಿಕ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಂಗಡಿಯಲ್ಲಿ ಸಿಗುವ ಪ್ಲಾಸ್ಟಿಕ್ ಆಟದ ವಸ್ತುಗಳಿಗೆ ಮಕ್ಕಳು ಅಂಟಿಕೊಂಡರೆ ಮಕ್ಕಳಲ್ಲಿ ಸೃಜನಶೀಲತೆ ಸತ್ತು ಹೋಗುತ್ತದೆ. ಮಕ್ಕಳು ತಮ್ಮ ಆಟದ ವಸ್ತುವನ್ನು ತಾವೇ ಸೃಷ್ಟಿಸಿಕೊಳ್ಳುವುದರಿಂದ ಸೃಜನಶೀಲತೆ ಚಿಗುರುತ್ತದೆ ಎಂದರು. ಸಮಾಜದಿಂದ ಬಂದಿದ್ದು ವಾಪಾಸ್ ಸಮಾಜಕ್ಕೆ ಹಂಚುವ ಕನಸು ಕಟ್ಟಿಕೊಂಡು ಹೊಳೆ ಹುಚ್ಚೇಶ್ವರ ಸಂಸ್ಥೆ ಕ್ರಿಯಾಶೀಲವಾಗಿ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಶ್ರಮಿಸುತ್ತಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಪಾರವಾಗಿ ಪ್ರೀತಿಸುವ, ಬೆಂಬಲಿಸುವ ಶರಣರ ಜಿಲ್ಲೆ ಬಾಗಲಕೋಟೆ ಅಂದರೆ ನನಗೆ ಅತೀವ ಪ್ರೀತಿ. ಈ ಜಿಲ್ಲೆಯ ಹೊಳೆ ಹುಚ್ಚೇಶ್ವರ ಸಂಸ್ಥೆ ಅನ್ನ-ಅಕ್ಷರ ದಾಸೋಹದಲ್ಲಿ ಅಪಾರ ಕೆಲಸ ಮಾಡುತ್ತಿದೆ ಎಂದು…
ಬೆಂಗಳೂರು: ನಾಳೆಯಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ 2025ರ ಪ್ರದರ್ಶನ ಆರಂಭಗೊಳ್ಳಲಿದೆ. ಬಾನಂಗಳದಲ್ಲಿ ಬಗೆ ಬಗೆಯ ಲೋಹದ ಹಕ್ಕಿಗಳು ತಮ್ಮ ಆಕರ್ಷಕ ಪ್ರದರ್ಶನವನ್ನು ನೀಡಲಿದ್ದಾವೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ವಾಹನ ಸವಾರರಿಗೆ ಸಂಚಾರ ಪೊಲೀಸರು ಮಹತ್ವದ ಅಪ್ ಡೇಟ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಯಲಹಂಕ ವಾಯುಸೇನಾ ನೆಲೆಯಲ್ಲಿ ದಿನಾಂಕ: 10-02-2025 ರಿಂದ ದಿನಾಂಕ:14-02-2025 ರವರೆಗೆ ಪ್ರತಿಷ್ಠಿತ ಏರೋ ಇಂಡಿಯಾ- 2025 ವೈಮಾನಿಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿರುತ್ತದೆ ಎಂದು ತಿಳಿಸಿದೆ. ದಿನಾಂಕ:10-02-2025 ರ ಬೆಳಿಗ್ಗೆ ಸದರಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಹಲವಾರು ಗಣ್ಯರು ಹಾಗು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ನಡೆಯುವ ಸ್ಥಳವು ಯಲಹಂಕ ವಾಯುಸೇನಾ ನೆಲೆಯು ಬೆಂಗಳೂರು-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ-44 (ಅಂತರಾಷ್ಟ್ರೀಯ ಏರ್‌ಮೊರ್ಟ್ ರಸ್ತೆ)…
ಹಾವೇರಿ : ಸಂಘರ್ಷದಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಕೇಂದ್ರ ಸರಕಾರದ ಜತೆ ಸಂಘರ್ಷ ನಡೆಸುವುದರಿಂದ ರಾಜ್ಯದ ಯಾವುದೇ ಸಮಸ್ಯೆ, ವಿವಾದ ಬಗೆಹರಿಯುವುದೂ ಇಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು. ಹಾವೇರಿ ಜಿಲ್ಲೆಯ ರಾಣಿಬೆನ್ನೂರುನಲ್ಲಿ ಕರ್ನಾಟಕ ವೈಭವ ವೈಚಾರಿಕ ಹಬ್ಬದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಭಾಷಣ ಮಾಡಿದರು. ಕರ್ನಾಟಕದ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರಕಾರ ಬದ್ಧವಾಗಿದೆ. ನಾನು ಸೇರಿದಂತೆ ಕೇಂದ್ರದಲ್ಲಿರುವ ರಾಜ್ಯ ಎಲ್ಲಾ ಸಚಿವರು ಕೆಲಸ ಮಾಡಲು ತಯಾರಿದ್ದಾರೆ. ಆದರೆ, ದಿನಕ್ಕೊಂದು ತಂಟೆ ತಕರಾರು ಮಾಡಿಕೊಂಡು ರಾಜ್ಯ ಸರಕಾರ ಅಮೂಲ್ಯ ಅವಕಾಶವನ್ನು ಹಾಳು ಮಾಡಿಕೊಳ್ಳುತ್ತಿದೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು. ರಾಷ್ಟ್ರಕವಿ ಕುವೆಂಪು ಅವರು ‘ಜಯಭಾರತ ಜನನಿಯ ತನುಜಾತೆ’ ಎಂದು ಬರೆದಿದ್ದಾರೆ. ಕುವೆಂಪು ಅವರು ಭಾರತವನ್ನು ತಾಯಿಯಾಗಿ ಮತ್ತು ಕರ್ನಾಟಕವನ್ನು ಆಕೆಯ ಮಗಳಂತೆ ಭಾವಿಸಿದ್ದಾರೆ. ಇಂತಹ ಮಹೋನ್ನತ ವಿಶಾಲ ದೃಷ್ಟಿಕೋನ ಅವರದ್ದು ಎಂಬುದನ್ನು ಈ ಒಂದು ಸಾಲಿನ ಮೂಲಕ ಅರ್ಥ ಮಾಡಿಕೊಳ್ಳಬಹುದು. ಆದರೆ, ರಾಜ್ಯ ಸರಕಾರ…
ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಮಂಗಳವಾರ (ಫೆ. 11) ಮಧ್ಯಾಹ್ನ ನಡೆಯಲಿರುವ ಭವ್ಯ ಉದ್ಘಾಟನಾ ಸಮಾರಂಭವು ನಾಲ್ಕು ದಿನಗಳ ಹೂಡಿಕೆ ಉತ್ಸವಕ್ಕೆ ಮುನ್ನುಡಿ ಬರೆಯಲಿದೆ. ʼಈ ಹೂಡಿಕೆದಾರರ ಸಮಾವೇಶವು, ಕರ್ನಾಟಕವನ್ನು ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ. ನಾವೀನ್ಯತೆ, ಕೈಗಾರಿಕಾ ಪ್ರಗತಿ ಮತ್ತು ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ ಸೌಲಭ್ಯಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸಲಿದೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಹೇಳಿದ್ದಾರೆ. ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆ ಇದು ವೇದಿಕೆ ಒದಗಿಸಲಿದೆ. ವಿವಿಧ ಕ್ಷೇತ್ರಗಳ ದಿಗ್ಗಜರು ಕರ್ನಾಟಕದಲ್ಲಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕಾ ಪ್ರಗತಿಯ ಭವಿಷ್ಯ ರೂಪಿಸಲು ತಮ್ಮ ಒಳನೋಟಗಳನ್ನು ನೀಡಲಿದ್ದಾರೆ. ಸಮಾವೇಶದ ವಿವಿಧ ಕಾರ್ಯಕ್ರಮಗಳ ವಿವರ ಹೀಗಿದೆ: ಮೊದಲ ದಿನ. ಫೆಬ್ರುವರಿ 12: * ಬೆಳಿಗ್ಗೆ 10:35 – 11:05 | ಸಭಾಂಗಣ…
ಬೆಂಗಳೂರು: ನಾಳೆಯಿಂದ ಬೆಂಗಳೂರಲ್ಲಿ ಏರೋ ಇಂಡಿಯಾ 2025 ಆರಂಭಗೊಳ್ಳಲಿದೆ. ಇಂತಹ ಏರ್ ಶೋ ಆತ್ಮನಿರ್ಭಾರ್ ಭಾರತದ ಉತ್ಪನ್ನಗಳ ಪ್ರದರ್ಶನವಾಗಿದೆ ಅಂತ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಏರೋ ಇಂಡಿಯಾದ 15 ನೇ ಆವೃತ್ತಿಯಾದ ಏರೋ ಇಂಡಿಯಾ 2025 ಅನ್ನು ಏರೋಸ್ಪೇಸ್ ಮತ್ತು ರಕ್ಷಣಾ ತಂತ್ರಜ್ಞಾನದಲ್ಲಿ ಹೊಸ ಪ್ರದೇಶಗಳನ್ನು ಪಟ್ಟಿ ಮಾಡುವಾಗ ಅದರ ಹಿಂದಿನವರ ಯಶಸ್ಸನ್ನು ಬಳಸಿಕೊಳ್ಳುವ ಹೆಗ್ಗುರುತು ಆವೃತ್ತಿಯಾಗಿ ವಿನ್ಯಾಸಗೊಳಿಸಲಾಗಿದೆ. ಏರೋ ಇಂಡಿಯಾ 2025 ಫೆಬ್ರವರಿ 10 ರಿಂದ 14 ರವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿದೆ. ಮೊದಲ ಮೂರು ದಿನಗಳು ವ್ಯಾಪಾರ ಸಂದರ್ಶಕರಿಗೆ ಮೀಸಲಾಗಿದ್ದರೆ, ಕೊನೆಯ ಎರಡು ದಿನಗಳು ಸಾರ್ವಜನಿಕರಿಗೆ ತೆರೆದಿರುತ್ತವೆ ಎಂದರು. 2026 ರ ಆರ್ಥಿಕ ವರ್ಷದ ವೇಳೆಗೆ ದೇಶೀಯ ಉತ್ಪಾದನೆಯಲ್ಲಿ 1.60 ಲಕ್ಷ ಕೋಟಿ ರೂ.ಗಳ ಗುರಿಯನ್ನು ಹೊಂದಿರುವ ಭಾರತವು ತನ್ನ ರಕ್ಷಣಾ ಉತ್ಪಾದನೆಯನ್ನು ಹೆಚ್ಚಿಸುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ 15 ನೇ ಏರೋ ಇಂಡಿಯಾ 2025ದ ಪ್ರದರ್ಶನಕ್ಕೂ ಮುನ್ನಾ…
ಹಾವೇರಿ : ಒಂದು ಕಡೆ ಗ್ಯಾರಂಟಿ ಕೊಡುತ್ತೇವೆ ಎಂದು ಜನರ ಕಣ್ಣೊರೆಸುವ ನಾಟಕ ಆಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರ; ಇನ್ನೊಂದು ಕಡೆ ಜನರಿಂದ ದರ ಏರಿಸಿ ಸುಲಿಗೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಪಟ್ಟಣದಲ್ಲಿ ಜಾತ್ಯತೀತ ಜನತಾದಳ ಕಚೇರಿಗೆ ಭೇಟಿ ನೀಡಿ ಅವರು ಮಾತನಾಡಿದರು. ಅಧಿಕಾರಕ್ಕೆ ಬಂದ ಮೇಲೆ ಒಂದಾದ ಮೇಲೆ ಒಂದರಂತೆ ಗ್ಯಾರಂಟಿಗಳನ್ನೇನೋ ರಾಜಯ ಸರಕಾರ ಕೊಟ್ಟಿದೆ. ಆದರೆ, ಗ್ಯಾರಂಟಿ ಹಣವನ್ನು ಜನರಿಂದಲೇ ವಸೂಲಿ ಮಾಡಿ ಖಜಾನೆ ತುಂಬಿಸಿಕೊಳ್ಳುತ್ತಿದೆ. ಮುದ್ರಾಂಕ ಶುಲ್ಕ, ಮಾರ್ಗದರ್ಶಿ ಮೌಲ್ಯ ಏರಿಕೆ, ಮದ್ಯದ ದರ ಏರಿಕೆ, ಬಸ್ ದರ ಏರಿಕೆ ಸೇರಿದಂತೆ ಸಿಕ್ಕ ಸಿಕ್ಕ ಕಡೆಯೆಲ್ಲಾ ಸರಕಾರ ದರ ಏರಿಕೆ ದಂಡ ಪ್ರಯೋಗ ಮಾಡುತ್ತಿದೆ. ಈಗ ಬೆಂಗಳೂರು ನಗರದ ಮೆಟ್ರೋ ರೈಲು ಪ್ರಯಾಣ ದರವನ್ನು ಜನರೇ ಬೆಚ್ಚಿ ಬೀಳುವಷ್ಟರ ಮಟ್ಟಿಗೆ ಶೇ.40ರಿಂದ 50ರಷ್ಟು ಏರಿಕೆ ಮಾಡಿದೆ ಎಂದು ಕೇಂದ್ರ ಸಚಿವರು ಕಟುವಾಗಿ ಟೀಕಿಸಿದರು. ಅಭಿವೃದ್ಧಿ ಎಂದರೆ…
ಬೆಂಗಳೂರು: ರಾಜ್ಯ ಸರಕಾರವು ಬೆಲೆ ಏರಿಕೆ, ದರ ಹೆಚ್ಚಳದ ಅಭಿಯಾನವನ್ನೇ ಕೈಗೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಹಿಂದೆ ಬಸ್ ಪ್ರಯಾಣದರ ಹೆಚ್ಚಿಸಿದ್ದರು. ಈಗ ಮೆಟ್ರೋ ಪ್ರಯಾಣ ದರ ಹೆಚ್ಚಿಸಿದ್ದಾರೆ. ಈ ರೀತಿ ಹೆಚ್ಚಳದಿಂದ ಮೆಟ್ರೋ, ಬಸ್ ಪ್ರಯಾಣ ಕೈಬಿಟ್ಟು ಸ್ವಂತ ವಾಹನದಲ್ಲಿ ಓಡಾಡಲು ಇನ್ನೂ ಹೆಚ್ಚು ಖರ್ಚಾಗಲಿದೆ ಎಂದು ವಿಶ್ಲೇಷಿಸಿದರು. ಜನರು ಅತಿ ಹೆಚ್ಚು ಅಸಹಾಯಕ ಪರಿಸ್ಥಿತಿಗೆ ಹೋಗುತ್ತಿದ್ದಾರೆ. ಈಗ ಮೆಟ್ರೋ ಪ್ರಯಾಣದರ ಎಷ್ಟು ಹೆಚ್ಚಿಸಿದ್ದಾರೆ ಎಂದರೆ, ಬೆಂಗಳೂರಿನಲ್ಲಿ 25- 30 ಕಿಮೀ ಒಂದು ಕಡೆಯಿಂದ ಇನ್ನೊಂದು ಕಡೆಗೆ ಪ್ರಯಾಣ ಮಾಡಿದರೆ ಹಿಂದೆ 60 ರೂ. ಇತ್ತು. ಈಗ ಅದು 90 ರೂ. ಆಗಿದೆ ಎಂದು ಆಕ್ಷೇಪಿಸಿದರು. 100 ರೂ. ಇದ್ದರೆ ಈಗ 146 ರೂ. ಅಂದರೆ ಶೇ 46 ಏರಿಕೆ ಆಗಿದೆ ಎಂದು ಟೀಕಿಸಿದರು. ಟ್ರಾಫಿಕ್ ಕಡಿಮೆ ಮಾಡಲು…
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಅದರಂತೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಜ್ಯಪಾಲರು ಮಸೂದೆಯನ್ನು ವಾಪಾಸ್ ಕಳುಹಿಸಿದ್ದರು. ಹೀಗಾಗಿ ನಾಳೆ ರಾಜ್ಯ ಸರ್ಕಾರದಿಂದ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಕಾಯ್ದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಮರು ರವಾನೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದಿಂದ ರಾಜ್ಯಪಾಲರು ವಾಪಾಸ್ಸು ಕಳುಹಿಸಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ಕಾನೂನು ಇಲಾಖೆಯಿಂದ ಸೂಕ್ತ ಸ್ಪಷ್ಟೀಕರಣ ಸಿದ್ಧಪಡಿಸಲಾಗಿದೆ. ಈ ಸ್ಪಷ್ಟೀಕರಣದೊಂದಿಗೆ ನಾಳೆ ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ ರಾಜ್ಯಪಾಲರಿಗೆ ಮರು ರವಾನೆ ಮಾಡಲಾಗುತ್ತಿದೆ. ಈಗಾಗಲೇ ಸಿಎಂ ಕಚೇರಿಗೆ ಕಾನೂನು ಇಲಾಖೆಯು ಮೈಕ್ರೋ ಫೈನಾನ್ಸ್ ತಡೆ ಸುಗ್ರೀವಾಜ್ಞೆಗೆ ಸ್ಪಷ್ಟೀಕರಣ ಸಿದ್ಧಪಡಿಸಿ ಸಿದ್ಧರಾಮಯ್ಯ ಅವರ ಅವಗಾಹನೆಗೆ ಕಳುಹಿಸಲಾಗಿದೆ. ಈ ಕರಡನ್ನು ಸಿಎಂ ಕಚೇರಿಯಿಂದ ಅಂತಿಮಗೊಳಿಲಿ, ನಾಳೆ ರಾಜ್ಯಪಾಲರಿಗೆ ಕಳುಹಿಸಲಾಗುತ್ತದೆ. ಈ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುತ್ತಾರೋ ಅಥವಾ ಮತ್ತೆ…
ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ ಭಯವಿದೆ,ಆದರೆ ಇನ್ನೂ ಕೆಲವರು ಇವುಗಳಲ್ಲಿ ನಂಬಿಕೆ ಇಟ್ಟಿರುತ್ತಾರೆ. ಎಲ್ಲವೂ ಅವರವರ ನಂಬಿಕೆಗೆ ಬಿಟ್ಟಿದ್ದುಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಇದ್ರೆ ಇವೆಲ್ಲಾ ಮಾಟದ ಸಂಕೇತನಿಮ್ಮ ಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಯಾರಾದ್ರೂ ಇಟ್ಟು ಹೋದ್ರೆ ನೋ ಡೌಟ್ ನಿಮ್ಮ ಹಾಗೂ ನಿಮ್ಮ ಮನೆ ಮೇಲೆ ಮಾಟ ಮಂತ್ರ ವಶೀಕರಣವಾಗಿದೆ ಎಂದರ್ಥ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ. ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ,…