Subscribe to Updates
Get the latest creative news from FooBar about art, design and business.
Author: kannadanewsnow09
ಆ ಸಮಸ್ಯೆಯ ಬಗ್ಗೆ ಹೊರಗೆ ಯಾರಿಗೂ ಹೇಳಲೂ ಆಗದ ಹಾಗೆ ಸಿಕ್ಕಿಹಾಕಿಕೊಳ್ಳುತ್ತೇವೆ. ದೇವರನ್ನು ಬಿಟ್ಟು ಬೇರೆ ಯಾರೂ ಇದನ್ನು ಪರಿಹರಿಸಲು ಸಾಧ್ಯವಿಲ್ಲ ಎಂಬ ಹಂತಕ್ಕೆ ನಾವು ತಲುಪುತ್ತೇವೆ. ಆ ಹಂತವನ್ನು ತಲುಪಿದ ನಂತರ, ವಾರಾಹಿ ಅಮ್ಮನ ಬಗ್ಗೆ ಯೋಚಿಸಿ ಮತ್ತು ಮೂರು ದಿನಗಳವರೆಗೆ ಪ್ರತಿದಿನ ಈ ಒಂದು ವಿಷಯವನ್ನು ಬರೆಯಿರಿ, ವಾರಾಹಿ ಅಮ್ಮನವರು ನಿಮ್ಮ ಪರಿಹರಿಸಲಾಗದ ಸಮಸ್ಯೆಗಳನ್ನು ಪರಿಹರಿಸುವ ಮಾರ್ಗಗಳನ್ನು ನೀಡುತ್ತಾರೆ. ಅಂತಹ ಆರಾಧನೆಯ ಬಗ್ಗೆ ನಾವು ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನೋಡಲಿದ್ದೇವೆ. ವಾರಾಹಿ ದೇವಿಯನ್ನು ಪೂಜಿಸಿದರೆ ನಮಗೆ ಹಲವಾರು ಲಾಭಗಳು ಸಿಗುತ್ತವೆ. ಜೀವನದಲ್ಲಿ ಶತ್ರುಗಳ ಕಾಟ, ಸಾಲದ ಬಾಧೆಯಿಂದ ನರಳುತ್ತಿರುವವರು ವಾರಾಹಿ ಅಮ್ಮನವರಿಗೆ ಮನಃಪೂರ್ವಕವಾಗಿ ಅರ್ಪಿಸಿದರೆ ಕ್ರಮೇಣ ಕಷ್ಟಗಳೆಲ್ಲ ಮಾಯವಾದಂತೆ ಅನಿಸುತ್ತದೆ. ಅಂತಹ ವಾರಾಹಿ ಅಮ್ಮನವರನ್ನು ಆಲೋಚಿಸಿ ಮಾಡಬಹುದಾದ ಸರಳ ಪರಿಹಾರವನ್ನು ನೋಡೋಣ. ಈ ಪರಿಹಾರವನ್ನು ಯಾವುದೇ ದಿನದಲ್ಲಿ ಮಾಡಬಹುದು. ನೀವು ಯಾವಾಗ ಬೇಕಾದರೂ ಮಾಡಬಹುದು. ನಮಗೆ ಬೇಕಾಗಿರುವುದು ಪೆನ್ನು ಮತ್ತು ಕಾಗದ. ಬೇರೇನೂ ಬೇಕಾಗಿಲ್ಲ. ಪೂಜೆ ಮಾಡುವ ಕೋಣೆಯಲ್ಲಿ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಸಿದ್ದು ನಾವಲ್ಲ. ಅದಕ್ಕಾಗಿಯೇ ಇರುವಂತ ಸಮಿತಿಯಾಗಿದೆ. ಬಿಜೆಪಿಯರು ಸುಖಾ ಸುಮ್ಮನೇ ನಮ್ಮ ಕಡೆಗೆ ಬೆಟ್ಟು ಮಾಡಿ ತೋರಿಸುತ್ತಿದ್ದಾರೆ ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಇಂದು ಮೆಟ್ರೋ ಟಿಕೆಟ್ ದರ ಏರಿಕೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿದೆ ಎನ್ನುವ ಬಿಜೆಪಿಯವರ ಆರೋಪದ ಬಗ್ಗೆ ಕೇಳಿದಾಗ, “ಬಿಜೆಪಿಯವರಿಗೆ ರಾಜಕೀಯ ಹೊರತಾಗಿ ಬೇರೇನೂ ಗೊತ್ತಿಲ್ಲ. ಯಾರು ಬೇಕಾದರೂ ಸಂಸತ್ತಿನಲ್ಲಿ ಮಾತನಾಡಲಿ, ಇಲ್ಲಿ ಪ್ರತಿಭಟನೆ ಮಾಡಲಿ, ಗಲಾಟೆ ಮಾಡಲಿ. ಆದರೆ ಮೆಟ್ರೋ ಯೋಜನೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಶೇ 50:50 ಅನುಪಾತದಲ್ಲಿ ಮಾಡಲಾಗಿರುತ್ತದೆ. ದರ ಏರಿಕೆಗೆ ಒಂದು ಸಮಿತಿ ಮಾಡಲಾಗಿದೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಸಮಿತಿ ಮಾಡಿರುತ್ತಾರೆ. ಆ ಸಮಿತಿಯ ತೀರ್ಮಾನ ನಮ್ಮ ಗಮನಕ್ಕೂ ಬರುವುದಿಲ್ಲ. ದರ ಏರಿಕೆ ತೀರ್ಮಾನ ಅವರು ಮಾಡುತ್ತಾರೆ” ಎಂದರು. “ಡಬಲ್ ಡೆಕ್ಕರ್ ಸೇರಿದಂತೆ ಬೆಂಗಳೂರಿನ ಮೆಟ್ರೋವನ್ನು ಇನ್ನೂ ಹೆಚ್ಚಿನ ಭಾಗಕ್ಕೆ ವಿಸ್ತರಣೆ ಮಾಡಬೇಕಿದೆ. ಮೆಟ್ರೋ ಜೊತೆಗೆ ಮೇಲ್ಸೆತುವೆ ನಿರ್ಮಾಣಕ್ಕೆ…
ಮೈಸೂರು/ ಬೆಂಗಳೂರು: “ಉದಯಗಿರಿಯಲ್ಲಿ ಕಲ್ಲು ತೂರಾಟ ಮಾಡಿರುವವರು 15- 16 ವರ್ಷದ ಹುಡುಗರು. ಈ ವೇಳೆ ಪೊಲೀಸರು ಅತ್ಯುತ್ತಮವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಯಾರಿಗೂ ಅಪಾಯವಾಗದ ರೀತಿಯಲ್ಲಿ ಪರಿಸ್ಥಿತಿ ನಿಭಾಯಿಸಿದ ಎಲ್ಲ ಅಧಿಕಾರಿಗಳಿಗೆ ಅಭಿನಂದನೆ ತಿಳಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಮೈಸೂರಿನ ಗಲಭೆ ಪೀಡಿತ ಪ್ರದೇಶ ಉದಯಗಿರಿಗೆ ಬುಧವಾರ ಭೇಟಿ ನೀಡಿದ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು, “ಇಲ್ಲಿ ಯಾರೇ ತಪ್ಪು ಮಾಡಿದ್ದರೂ ತಪ್ಪು. ಯಾವುದೇ ರೀತಿಯ ತಪ್ಪು ನಡೆದಿದ್ದರೂ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ನಾನು ಪೊಲೀಸರಿಂದ ವರದಿ ತರಿಸಿಕೊಂಡಿದ್ದೇನೆ. ಘಟನೆ ನಡೆದ ತಕ್ಷಣ ಮುಸಲ್ಮಾನ ಸಮುದಾಯದ ಹಿರಿಯ ಮುಖಂಡರುಗಳು ಬಂದು ಪರಿಸ್ಥಿತಿ ನಿಭಾಯಿಸಿದ್ದಾರೆ. ಗಲಾಟೆ ತಡೆಯಲು ಬಂದ ಮುಸ್ಲಿಂ ಮುಖಂಡರಿಗೂ ಏಟುಗಳು ಬಿದ್ದಿವೆ. ಪೊಲೀಸ್ ಅಧಿಕಾರಿ ಮುತ್ತುರಾಜ್ ಅವರ ಕಾಲಿಗೂ ಏಟಾಗಿದೆ. ಈ ವಿಡಿಯೋವನ್ನು ನಾನು ನೋಡಿದ್ದೇನೆ” ಎಂದು ಹೇಳಿದರು. ಮೈಸೂರಿನ ಉದಯಗಿರಿಯಲ್ಲಿನ ಗಲಭೆ ಹಾಗೂ ಈ ಪ್ರಕರಣದಲ್ಲಿ ಪೊಲೀಸರದ್ದೇ ತಪ್ಪಿದೆ ಎನ್ನುವ ಸಚಿವ ಕೆ.ಎನ್.ರಾಜಣ್ಣ…
ಬೆಂಗಳೂರು: ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯದ ಪ್ರಾದೇಶಿಕ ಚಲನಚಿತ್ರ ಸೆನ್ಸಾರ್ ಮಂಡಳಿಯ ಸದಸ್ಯರನ್ನಾಗಿ ಹಿರಿಯ ರಂಗಕರ್ಮಿ, ಪತ್ರಕರ್ತ ವೈದ್ಯನಾಥ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಶಿವಮೊಗ್ಗ ಬೆಳ್ಳಿಮಂಡಲ, ಸಿನಿಮೊಗೆ – ಶಿವಮೊಗ್ಗ ಚಿತ್ರ ಸಮಾಜದ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಅವರು, ಹಿರಿಯ ಪತ್ರಕರ್ತರು, ರಂಗಕರ್ಮಿಗಳು, ಚಲನಚಿತ್ರ ಸಂಘಟಕರು, ಕಲಾವಿದರು ಆದ ವೈದ್ಯನಾಥ್ ಅವರು ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯದ ಪ್ರಾದೇಶಿಕ ಚಲನಚಿತ್ರ ಸೆನ್ಸಾರ್ ಮಂಡಳಿ ಸದಸ್ಯರಾಗಿ ನೇಮಕ ಗೊಂಡಿದ್ದಾರೆ ಎಂದಿದ್ದಾರೆ. ಜೊತೆಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಆಯ್ಕೆ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರನ್ನು ಶಿವಮೊಗ್ಗ ಬೆಳ್ಳಿಮಂಡಲ, ಸಿನಿಮೊಗೆ – ಶಿವಮೊಗ್ಗ ಚಿತ್ರಸಮಾಜದ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್ ಅವರು ಮತ್ತು ಪದಾಧಿಕಾರಿಗಳು ಅಭಿನಂದಿಸಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ 290 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಈಗಾಗಲೇ 6.25 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ 180 ಕೋಟಿ ರೂ. ವರ್ಗಾವಣೆ ಮಾಡಲಾಗಿದ್ದು, 1.60 ಲಕ್ಷ ವಿದ್ಯಾರ್ಥಿಗಳಿಗೆ 100 ಕೋಟಿ ರೂ. ಅನುದಾನ ಅಗತ್ಯ ಇರುವ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ವಿದ್ಯಾಸಿರಿ ಯೋಜನೆಯಡಿಯಲ್ಲಿ ಜನವರಿ ಅಂತ್ಯ ದವರೆಗೆ ಹಾಸ್ಟೆಲ್ ಗಳಲ್ಲಿ 23 ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದ್ದು, ಹಾಸ್ಟೆಲ್ ನಲ್ಲಿ ಪ್ರವೇಶ ಸಿಗದ 5753 ವಿದ್ಯಾರ್ಥಿಗಳಿಗೆ ಮಾಸಿಕ 1500 ರೂ. ನಂತೆ ಹತ್ತು ತಿಂಗಳ ಮೊತ್ತ 15 ಸಾವಿರ ರೂ. ವರ್ಗಾವಣೆ ಮಾಡಲಾಗಿದೆ. ಅದಕ್ಕಾಗಿ 8.63 ಕೋಟಿ ರೂ. ವೆಚ್ಚ. ಮಾಡಲಾಗಿದೆ. ಇನ್ನು 200 ವಿದ್ಯಾರ್ಥಿಗಳ ಆಧಾರ್ ಲಿಂಕ್ ಸಮಸ್ಯೆ ಇದ್ದು ಅದು ಸರಿ ಹೋದ ನಂತರ ಅವರಿಗೂ…
ನವದೆಹಲಿ: ಚುನಾವಣೆಗೆ ಮುಂಚಿತವಾಗಿ ಉಚಿತ ಕೊಡುಗೆಗಳನ್ನು ಘೋಷಿಸುವುದರ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಈ ಅಭ್ಯಾಸವು ಜನರಿಗೆ ಉಚಿತ ಪಡಿತರ ಮತ್ತು ಹಣವನ್ನು ಪಡೆಯುತ್ತಿರುವುದರಿಂದ ಕೆಲಸ ಮಾಡಲು ಬಯಸಲು ಅವಕಾಶ ನೀಡುತ್ತಿಲ್ಲ ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಅಗಸ್ಟಿನ್ ಜಾರ್ಜ್ ಮಾಸಿಹ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ನಗರ ಪ್ರದೇಶಗಳಲ್ಲಿ ವಸತಿರಹಿತರ ಆಶ್ರಯ ಹಕ್ಕಿಗೆ ಸಂಬಂಧಿಸಿದ ವಿಷಯದ ವಿಚಾರಣೆಯ ಸಂದರ್ಭದಲ್ಲಿ ಚುನಾವಣೆಗೆ ಮೊದಲು ಉಚಿತ ಕೊಡುಗೆಗಳನ್ನು ನೀಡುವ ಅಭ್ಯಾಸದ ಬಗ್ಗೆ ಅಸಮ್ಮತಿ ವ್ಯಕ್ತಪಡಿಸಿದೆ ಎಂದು ವರದಿ ತಿಳಿಸಿದೆ. ಸುಪ್ರೀಂ ಕೋರ್ಟ್ ಹೇಳಿದ್ದೇನು? “ದುರದೃಷ್ಟವಶಾತ್, ಈ ಉಚಿತಗಳಿಂದಾಗಿ … ಜನರು ಕೆಲಸ ಮಾಡಲು ಸಿದ್ಧರಿಲ್ಲ. ಅವರು ಉಚಿತ ಪಡಿತರವನ್ನು ಪಡೆಯುತ್ತಿದ್ದಾರೆ. ಅವರು ಯಾವುದೇ ಕೆಲಸ ಮಾಡದೆ ಹಣವನ್ನು ಪಡೆಯುತ್ತಿದ್ದಾರೆ” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದರು. ಮನೆಯಿಲ್ಲದ ಜನರನ್ನು ಸಮಾಜದ ಮುಖ್ಯವಾಹಿನಿಗೆ ಸೇರಿಸಬೇಕು ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶ ನೀಡಬೇಕು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. “ಅವರ…
ಎಷ್ಟೇ ದುಡಿದರೂ ಕೈಯಲ್ಲಿ ಹಣವಿಲ್ಲ ಎಂಬ ಕೊರಗು ಇರುವವರಿಗೆ ಭರತ ಪೌರ್ಣಮಿಯ ದಿನ ಈ ಮೂರು ವಸ್ತುಗಳನ್ನು ಒಟ್ಟಿಗೆ ಇಟ್ಟರೆ ಧನಸ್ಸು ಸೃಷ್ಟಿಯಾಗುತ್ತದೆ. ಕಷ್ಟಪಟ್ಟು ದುಡಿದ ಹಣವೂ ಕೈ ಹಿಡಿಯಲು ಶುರುವಾಗುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ…
ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಪ್ರಕಟಿಸಿತ್ತು. ಅದರಂತೆ ಸಚಿವ ಸಂಪುಟ ಸಭೆಯಲ್ಲೂ ಅನುಮೋದಿಸಿ, ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಸೂಚಿಸಿದ್ದಾರೆ. ಈ ಬೆನ್ನಲ್ಲೇ ಸರ್ಕಾರವು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಯ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಿದೆ. ಇಂದು ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ ಫೆಬ್ರವರಿ ತಿಂಗಳ 12ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧ್ಯಾದೇಶ ಸಂಖ್ಯೆ : 02 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ ಎಂದು ಹೇಳಿದೆ. ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು…
ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು ‘IAS ಅಧಿಕಾರಿ’ಗಳ ವರ್ಗಾವಣೆ | IAS Officer Transfer
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಂಬಂಧ, ಮೂವರು ಐಎಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಬೆಂಗಳೂರಿನ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಪಿ., ಐಎಎಸ್ (ಕೆಎನ್: 1998) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ. ಮುಂದಿನ ಆದೇಶದವರೆಗೆ ಐಎಎಸ್ ಅಧಿಕಾರಿ ಡಾ.ಅಜಯ್ ನಾಗಭೂಷಣ್ ಎಂ.ಎನ್ ಅವರನ್ನು ಕೇಂದ್ರ ಸರ್ಕಾರಿ ಸೇವೆಗೆ ಡೆಪ್ಯುಟೇಶನ್ ಮೇಲೆ ಬಿಡುಗಡೆ ಮಾಡಲಾಗಿದೆ. ಇನ್ನೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಐಎಎಸ್ (ಕೆಎನ್: 2004) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಿ ಆದೇಶಿಸಿದೆ. ಮನೋಜ್ ಜೈನ್, ಐಎಎಸ್ (ಕೆಎನ್: 2006), ಸರ್ಕಾರದ ಕಾರ್ಯದರ್ಶಿ,…
ಬೆಂಗಳೂರು: ನಗರದಲ್ಲಿ ಒಡಿಶಾದ ಖ್ಯಾತ ರ್ಯಾಪರ್ ಅಭಿನವ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕಾಡುಬೀಸರಹಳ್ಳಿಯ ಅಪಾರ್ಮೆಂಟ್ ನಲ್ಲಿದ್ದಂತ ಒಡಿಶಾದ ಖ್ಯಾತ ರ್ಯಾಪರ್ ಅಭಿನವ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಪತ್ನಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಎಂಬುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಅಂದಹಾಗೇ ಅಭಿನವ್ ಸಿಂಗ್ ಅವರು ಒಡಿಶಾದಲ್ಲಿ ಖ್ಯಾತ ರ್ಯಾಪರ್ ಆಗಿ ಗುರ್ತಿಸಿಕೊಂಡಿದ್ದರು. ಬೆಂಗಳೂರಿನ ಕಾಡುಬೀಸರಹಳ್ಳಿಯಲ್ಲಿ ಅಪಾರ್ಮೆಂಟ್ ನಲ್ಲಿ ವಾಸವಿದ್ದರು. ಇಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. https://kannadanewsnow.com/kannada/good-news-for-sc-st-community-candidates-in-the-state-apply-for-free-kas-mains-training/ https://kannadanewsnow.com/kannada/2nd-international-airport-to-be-set-up-in-bengaluru-to-be-announced-in-next-two-days-dk-shivakumar/