Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಟ ದರ್ಶನ್ ಪ್ರಕರಣವನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನ್ಯಾಯ ಪ್ರಕ್ರಿಯೆ ಕೂಡ ನಡೆಯುತ್ತಿದೆ. ಹೀಗಾಗಿ ನಾನು ಯಾವುದೇ ಕಾರಣಕ್ಕೂ ನಟ ದರ್ಶನ್ ಪ್ರಕರಣದಲ್ಲಿ ಹಸ್ತ ಕ್ಷೇಪ ಮಾಡುವುದಿಲ್ಲ. ಕಾನೂನಿನ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಟ ದರ್ಶನ್ ಗೆ ಅನ್ಯಾಯ ಆಗಿದ್ದರೆ ನ್ಯಾಯ ಕೊಡಿಸಲಾಗುವುದು ಎಂದು ರಾಮನಗರದಲ್ಲಿ ನೀಡಿದ ಹೇಳಿಕೆಯ ಬಗ್ಗೆ ಮಾಧ್ಯಮದವರು ಕೇಳಿದಾಗ, “ನಿನ್ನೆ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ, ವಿಜಯಲಕ್ಷ್ಮಿ ಅವರು ನನ್ನನ್ನು ಭೇಟಿ ಮಾಡಲು ಬಂದಿದ್ದರು. ಎಲ್ಲೆಂದರಲ್ಲಿ ಭೇಟಿ ಮಾಡಲು ಸಾಧ್ಯವಿಲ್ಲ. ಮನೆಗೆ ಬಂದು ಭೇಟಿ ಮಾಡಿ ಎಂದು ಇಂದು ಬೆಳಗ್ಗೆ ಸಮಯಾವಕಾಶ ನೀಡಿದ್ದೆ. ಅವರು ನಿನ್ನೆ ಭೇಟಿಗೆ ಯತ್ನಿಸಿದಾಗ ಬಹುಶಹ ದರ್ಶನ್ ಪ್ರಕರಣದ ವಿಚಾರವಾಗಿ ಮಾತನಾಡಲು ಬರುತ್ತಾರೆ ಎಂದು ಭಾವಿಸಿದ್ದೆ” ಎಂದರು. “ಮಂಗಳವಾರ ರಾತ್ರಿ ರಾಮನಗರದಲ್ಲಿ ನಡೆದ ಚಾಮುಂಡೇಶ್ವರಿ ಕರಗ ಸಮಾರಂಭದಲ್ಲಿ ನೆರೆದಿದ್ದ ಯುವಕರು ದರ್ಶನ್ ಮೇಲಿನ ಅಭಿಮಾನದಿಂದ ನ್ಯಾಯ ಕೊಡಿಸಿ ಎಂದು…
ಬೆಂಗಳೂರು : “ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಸಂಬಂಧ ನನ್ನನ್ನು ಭೇಟಿ ಮಾಡಿದ್ದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸಕ್ಕೆ ವಿಜಯಲಕ್ಷ್ಮಿ ಅವರು ಬಂದ ಕಾರಣ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಶಿವಕುಮಾರ್ ಅವರು “ದರ್ಶನ್, ವಿಜಯಲಕ್ಷ್ಮೀ ಪುತ್ರ ಈ ಮೊದಲು ನಮ್ಮ ಶಾಲೆಯಲ್ಲಿ ಓದುತ್ತಿದ್ದರು. ಕಾರಣಾಂತರಗಳಿಂದ ನಮ್ಮ ಶಾಲೆ ತೊರೆದು ಬೇರೆ ಶಾಲೆ ಸೇರಿದ್ದರು. ಈಗ ಮತ್ತೆ ಮರಳಿ ನಮ್ಮ ಶಾಲೆಗೆ ಸೇರಿಸಿಕೊಳ್ಳುವಂತೆ ಮನವಿ ಮಾಡಲು ಬಂದಿದ್ದರು. ನಮ್ಮ ಶಾಲೆಯ ಪ್ರಾಂಶುಪಾಲರು ಪ್ರವೇಶ ಅವಕಾಶ ನಿರಾಕರಿಸಿದ್ದರಿಂದ ನನ್ನ ಬಳಿ ಸೀಟು ಕೇಳಲು ಬಂದಿದ್ದರು” ಎಂದು ಹೇಳಿದರು. “ಶಾಲೆಯ ದಾಖಲಾತಿಗೆ ಒಂದಷ್ಟು ನಿಯಮಾವಳಿಗಳಿವೆ. ನಾನು ಶಾಲೆಗೆ ಅಷ್ಟಾಗಿ ಭೇಟಿ ನೀಡುತ್ತಿಲ್ಲ. ಶಾಲೆಯ ಆಡಳಿತ ಜವಾಬ್ದಾರಿಯನ್ನು ಸಂಪೂರ್ಣವಾಗಿ ಮಕ್ಕಳಿಗೆ ವಹಿಸಿದ್ದೇನೆ. ವಿಜಯಲಕ್ಷ್ಮಿ ಅವರು ಮಗನ ಭವಿಷ್ಯದ ದೃಷ್ಟಿಯಿಂದ ಬಂದಿದ್ದರು. ಜತೆಗೆ ನಮ್ಮ ಶಾಲೆಯ ಪಕ್ಕದಲ್ಲೇ ಅವರ ನಿವಾಸವಿದೆ. ನಾನು…
ನವದೆಹಲಿ : ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯನ್ನು ಘೋಷಿಸಿದ್ದರು, ಇದರ ಅಡಿಯಲ್ಲಿ 75,000 ಕೋಟಿ ರೂ.ಸಬ್ಸಿಡಿಯೊಂದಿಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ಇದರ ಅಡಿಯಲ್ಲಿ, 1 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗುವ ಯೋಜನೆ ಇದೆ. ಅಲ್ಲದೆ, ಉಳಿದ ವಿದ್ಯುತ್ತನ್ನು ಮಾರಾಟ ಮಾಡುವ ಮೂಲಕ ನೀವು ಪ್ರಯೋಜನ ಪಡೆಯಬಹುದು. ಇದಲ್ಲದೆ, ಕೇಂದ್ರ ಸರ್ಕಾರವು ಈ ಯೋಜನೆಯಡಿ ಸಬ್ಸಿಡಿಯನ್ನು ಸಹ ನೀಡುತ್ತದೆ. ನೀವು ಸಹ ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯ ಲಾಭವನ್ನು ಪಡೆಯಲು ಬಯಸಿದರೆ, ನೀವು ಸೌರ ಫಲಕಗಳನ್ನು ಸ್ಥಾಪಿಸಬೇಕು. ಆದಾಗ್ಯೂ, ಸೌರ ಫಲಕವನ್ನು ಸ್ಥಾಪಿಸುವ ಮೊದಲು, ಕೆಲವು ವಿಶೇಷ ವಿಷಯಗಳನ್ನು ವಿವರವಾಗಿ ತಿಳಿದುಕೊಳ್ಳಬೇಕು. ಇದರಿಂದ ಯೋಜನೆಯ ಲಾಭವನ್ನು ಪಡೆಯುವಲ್ಲಿ ನೀವು ಯಾವುದೇ ರೀತಿಯ ಸಮಸ್ಯೆಯನ್ನು ಎದುರಿಸುವುದಿಲ್ಲ. ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳೋಣ… ಇದಕ್ಕೆ ಎಷ್ಟು ವೆಚ್ಚವಾಗುತ್ತದೆ? ನೀವು ಸೌರ ಫಲಕಗಳನ್ನು ಸ್ಥಾಪಿಸಲು ಹೊರಟರೆ, ಅದರ ವೆಚ್ಚವು…
ಶಿವಮೊಗ್ಗ: ಜಿಲ್ಲೆಯಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಲ್ಯಾಬ್ ಟೆಕ್ನೀಷಿಯನ್ ಒಬ್ಬರು ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದರು. ಈ ಬೆನ್ನಲ್ಲೇ ಸರ್ಕಾರಿ ಆಸ್ಪತ್ರೆಯ ಸ್ಟಾಫ್ ನರ್ಸ್ ಒಬ್ಬರು ಇಂದು ಬಲಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಹೇಮಾ(45) ಎಂಬುವರು ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಂತ ಅವರಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಲ್ಲಿ ತಿಳಿದು ಬಂದಿತ್ತು. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೇಮಾ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಮೆಗ್ಗಾನ್ ಆಸ್ಪತ್ರೆಯ ಸ್ಟಾಫ್ ನರ್ಸ್ ಹೇಮಾ ಅವರು ಇಂದು ಶಂಕಿತ ಡೆಂಗ್ಯೂವಿನಿಂದ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಶಂಕಿತ ಡೆಂಗ್ಯೂಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸ್ಟಾಫ್ ನರ್ಸ್ ಬಲಿಯಾದಂತೆ ಆಗಿದೆ. https://kannadanewsnow.com/kannada/good-news-for-anganwadi-workers-honorarium-to-be-hiked-soon/ https://kannadanewsnow.com/kannada/breaking-bengaluru-man-kills-girlfriend-by-entering-pg/
ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (Central Board of Secondary Education -CBSE) ಜುಲೈ 2024 ರ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ ( Central Teacher Eligibility Test -CTET) ಯ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ತನ್ನ ಅಧಿಕೃತ ವೆಬ್ಸೈಟ್ನಲ್ಲಿ, ctet.nic.in, ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳು ಉತ್ತರ ಕೀಯನ್ನು ಡೌನ್ಲೋಡ್ ಮಾಡಬಹುದು ಮತ್ತು ಅಗತ್ಯವಿದ್ದರೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಸಿಬಿಎಸ್ಇ ಸಿಟಿಇಟಿ ಉತ್ತರ ಕೀ 2024 ( CBSE CTET answer key 2024 ) ಪಡೆಯಲು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಪ್ರವೇಶಿಸಲು ತಮ್ಮ ಹುಟ್ಟಿದ ದಿನಾಂಕ ಮತ್ತು ರೋಲ್ ಸಂಖ್ಯೆಯನ್ನು ನಮೂದಿಸಬೇಕು. ಸಿಟಿಇಟಿ 2024 ಜುಲೈ 7 ರಂದು ದೇಶಾದ್ಯಂತ 136 ನಗರಗಳಲ್ಲಿ ಇಪ್ಪತ್ತು ಭಾಷೆಗಳಲ್ಲಿ ಎರಡು ಪಾಳಿಗಳಲ್ಲಿ ನಡೆಯಿತು. ಪ್ರತಿ ಪ್ರಶ್ನೆಗೆ 1000 ರೂ.ಗಳ ಸಂಸ್ಕರಣಾ ಶುಲ್ಕವನ್ನು (ಮರುಪಾವತಿಸಲಾಗದ) ಉತ್ತರಗಳನ್ನು ವಾದಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಪಾವತಿಸಬೇಕು. ಶುಲ್ಕವಿಲ್ಲದೆ ಅಥವಾ ಇತರ ಯಾವುದೇ ವಿಧಾನದಿಂದ…
ಬೆಂಗಳೂರು : “ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೇಂದ್ರದ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬುಧವಾರ ಉತ್ತರಿಸಿದ ಶಿವಕುಮಾರ್ ಅವರು, “ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ. ರಾಜ್ಯಕ್ಕೆ ಯಾವುದೇ ಯೋಜನೆ ಸಿಕ್ಕಿಲ್ಲ. ರಾಜ್ಯಕ್ಕೆ ಬಜೆಟ್ ನಲ್ಲಿ ಸರಿಯಾದ ಪ್ರಾತಿನಿದ್ಯ ಸಿಕ್ಕಿಲ್ಲದ ಕಾರಣ, ಪಕ್ಷದ ನಾಯಕರು ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದಾರೆ” ಎಂದು ತಿಳಿಸಿದರು. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಬಗ್ಗೆ ಕೇಳಿದಾಗ, “ಈ ವಿಚಾರದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ. ನಾನು ಯಾವುದನ್ನೂ ಆತುರದಲ್ಲಿ ಮಾಡುವುದಿಲ್ಲ. ನಾನು ವಿಧೇಯಕ ಮಂಡನೆ ಮಾಡಿದ್ದೇನೆ. ಅವರು ಅದನ್ನು ಸಂಪೂರ್ಣವಾಗಿ ಪರಾಮರ್ಶಿಸಿ ಚರ್ಚೆ ಮಾಡಲಿ. ಬೆಂಗಳೂರು ಅನಿಯಂತ್ರಿತವಾಗಿ ಬೆಳೆಯುತ್ತಿದ್ದು, 1.40 ಕೋಟಿ ಜನಸಂಖ್ಯೆ ಇದೆ.…
ಬೆಂಗಳೂರು: ರಾಜ್ಯದ ಅನುದಾನಿತ ಪ್ರೌಢ ಶಾಲೆಯ ಶಿಕ್ಷಕರು ಕೂಡ ಓಪಿಎಸ್ ಜಾರಿಗಾಗಿ ಕಾಯುತ್ತಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಇಂತಹ ಶಿಕ್ಷಕರಿಗೆ ಬಿಗ್ ಶಾಕ್ ನೀಡಲಾಗಿದೆ. ಅದೇ ಓಪಿಎಸ್ ಜಾರಿಯಿಲ್ಲ ಅಂತ ಸ್ಪಷ್ಟ ಪಡಿಸಿದೆ. ಆ ಬಗ್ಗೆ ಮುಂದೆ ಓದಿ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಪತ್ರವನ್ನು ಬರೆಯಲಾಗಿದೆ. ಅದರಲ್ಲಿ ದಿನಾಂಕ:01.04.2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ನೌಕರರನ್ನು ಹಳಯ ಡಿಫೈನ್ ಪಿಂಚಿಣಿ ಸೌಲಭ್ಯಕ್ಕ ಒಳಪಡಿಸುವ ಸಂಬಂಧ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ಈ ಕುರಿತು ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಇವರು ಈ ಕಛೇರಿಗೆ ಮನವಿ ಸಲ್ಲಿಸಿ ದಿನಾಂಕ:01.04.2006ರ ಪೂರ್ವದಲ್ಲಿ ಅನುದಾನಿತ ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ತದನಂತರ ಸರ್ಕಾರಿ ಪ್ರೌಢಶಾಲೆಗಳಿಗೆ ನಿಯಮಾನುಸಾರ ಸೇರ್ಪಡೆಗೊಂಡ ಶಿಕ್ಷಕರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಅನುಕೂಲ…
ಬೆಂಗಳೂರು: ಜಿಲ್ಲೆಯಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಜುಲೈ.24ರ ಇಂದು ಹಾಗೂ ಜುಲೈ.25ರ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಸ್ಕಾಂ(BESCOM), ದಿನಾಂಕ 24.07.2024 (ಬುಧವಾರ) ಹಾಗೂ ದಿನಾಂಕ 25-07-2024ರ (ಗುರುವಾರ) ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆಯವರೆಗೆ 66/11ಕೆ.ವಿ ಎನ್.ಜಿ.ಇ.ಎಫ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ ಅಂತ ಹೇಳಿದೆ. ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಎಸ್ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್ಎಎಲ್ 2ನೇ ಹಂತ, ಹಲಸೂರು, ಹಳೆ ಮದ್ರಾಸ್ ರಸ್ತೆ, ಬೆನ್ನಿಗಾನಹಳ್ಳಿ, ಎ ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ ನಗರ, ಪೈ ಲೇಔಟ್, ಬೈರಸಂದ್ರ, ಸಿ.ವಿ. ರಾಮನಗರ, ಎನ್ಜಿಇಎಫ್ ಲೇಔಟ್ನ ಪರ್ವ, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ಹೊಯ್ಸಳನಗರ, ಮುನೇಶ್ವರನಗರ, ಬಿಡಿಎ ಲೇಔಟ್, ಮುನಿನಂಜಪ್ಪ ಲೇಔಟ್ ಕರೆಂಟ್…
ನವದೆಹಲಿ: ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಹಠಾತ್ತನೆ ಹದಗೆಟ್ಟಿದೆ. ಅವರನ್ನು ದೆಹಲಿ ಏಮ್ಸ್ ಗೆ ದಾಖಲಿಸಲಾಗಿದೆ. ವೈದ್ಯರ ಮೇಲ್ವಿಚಾರಣೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಕುಟುಂಬ ಸದಸ್ಯರು ಆಸ್ಪತ್ರೆಯಲ್ಲಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಜುಲೈ 27 ರಂದು ದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನಿರ್ಧರಿಸಿದ್ದಾರೆ. ಕೇಂದ್ರ ಬಜೆಟ್ನಲ್ಲಿ ಆಯಾ ರಾಜ್ಯಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಸಿದ್ದರಾಮಯ್ಯ ಮತ್ತು ಸ್ಟಾಲಿನ್ ಇಬ್ಬರೂ ಆರೋಪಿಸಿದರು. ಕೇರಳ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳು ಇದನ್ನು ಅನುಸರಿಸುತ್ತಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಸ್ಟಾಲಿನ್ ಮೊದಲು ಘೋಷಿಸಿದರು. “ರಾಜ್ಯಕ್ಕೆ ಯಾವುದೇ ವಿಶೇಷ ಯೋಜನೆ ಇಲ್ಲ. ನಮ್ಮ ಯಾವುದೇ ಬೇಡಿಕೆಗಳು ಈಡೇರಿಲ್ಲ. ಪ್ರಧಾನಿ ಮೋದಿ ಅವರು ಪ್ರೀತಿಸುವುದಾಗಿ ಹೇಳಿದ್ದ ತಮಿಳುನಾಡು ಮತ್ತು ತಿರುಕ್ಕುರಲ್ ಎರಡನ್ನೂ ಬಜೆಟ್ ನಲ್ಲಿ ಉಲ್ಲೇಖಿಸಲಾಗಿಲ್ಲ. ಆಘಾತಕಾರಿ ಸಂಗತಿಯೆಂದರೆ, ಈ ಹಿಂದೆ ತಮ್ಮ ಬಜೆಟ್ ಭಾಷಣಗಳನ್ನು ‘ತಿರುಕ್ಕುರಲ್’ ನೊಂದಿಗೆ ಪ್ರಾರಂಭಿಸಿದ ಕೇಂದ್ರ ಹಣಕಾಸು ಸಚಿವರ ಸಂಪೂರ್ಣ ಬಜೆಟ್ ಭಾಷಣದಲ್ಲಿ ‘ತಮಿಳು’ ಅಥವಾ ‘ತಮಿಳುನಾಡು’ ಎಂಬ ಪದಗಳು ಒಮ್ಮೆಯೂ ಕಾಣಿಸಿಕೊಂಡಿಲ್ಲ” ಎಂದು ಸ್ಟಾಲಿನ್ ಹೇಳಿದರು. “ಕರ್ನಾಟಕದ ಅಗತ್ಯ ಅಗತ್ಯಗಳ ಬಗ್ಗೆ…