Author: kannadanewsnow09

ನವಗ್ರಹ ಸಮಿಧೆಗಳು ಸೂರ್ಯನಿಗೆ ಅರ್ಕ (ಎಕ್ಕ) *ಚಂದ್ರನಿಗೆ ಪಲಾಶ (ಮುತ್ತುಗ) *ಕುಜನಿಗೆ ಖದಿರ, *ಬುಧನಿಗೆ ಉತ್ತರಣೆ *ಗುರುವಿಗೆ ಅಶ್ವತ್ಥ, *ಶುಕ್ರನಿಗೆ ಔದುಂಬರ (ಅತ್ತಿ) *ಶನಿಗೆ ಶಮೀ, *ರಾಹುವಿಗೆ ಕುಶ *ಕೇತುವಿಗೆ ಗರಿಕೆ ನಿರ್ದಿಷ್ಟ ಗ್ರಹವೊಂದರಿಂದ ಸೂಚಿತವಾದ ದೋಷದ ನಿವೃತ್ತಿಗಾಗಿ ಪ್ರತ್ಯೇಕ ಪ್ರತ್ಯೇಕವಾಗಿ ಗ್ರಹಗಳನ್ನು ಸ್ತುತಿಸುವ ಸ್ತೋತ್ರಗಳೂ ಇವೆ. ವೇದ ಮಂತ್ರದ ಬಗ್ಗೆ ತಿಳಿಯದವರೂ ಈ ಗ್ರಹ ಸ್ತೋತ್ರವನ್ನು ನಿತ್ಯವೂ ಪಠಿಸುವುದರ ಮೂಲಕ ಗ್ರಹ ದೋಷವನ್ನು ಪರಿಹರಿಸಿ ಕೊಳ್ಳ ಬಹುದು. ಅಂತಹ ಸುಲಭವಾಗಿ ಪಠಿಸ ಬಹುದಾದ ಚಿಕ್ಕ ಶ್ಲೋಕಗಳನ್ನು ಇಲ್ಲಿ ಕೊಟ್ಟಿದೆ: ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು,…

Read More

ನವದೆಹಲಿ: ಇತ್ತೀಚೆಗೆ ತಿದ್ದುಪಡಿ ಮಾಡಲಾದ ಮಾಹಿತಿ ತಂತ್ರಜ್ಞಾನ ನಿಯಮಗಳ ಅಡಿಯಲ್ಲಿ ತನ್ನ ವ್ಯವಹಾರಕ್ಕೆ ಸಂಬಂಧಿಸಿದ ಸಾಮಾಜಿಕ ಮಾಧ್ಯಮಗಳಲ್ಲಿನ ವಿಷಯವನ್ನು ಮೇಲ್ವಿಚಾರಣೆ ಮಾಡಲು ಸತ್ಯಶೋಧನಾ ಘಟಕವನ್ನು (fact-checking unit -FCU) ಸ್ಥಾಪಿಸಲು ಕೇಂದ್ರ ಸರ್ಕಾರ ಬುಧವಾರ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರದಿಂದ ಐಟಿ ನಿಯಮಗಳ ಅಡಿಯಲ್ಲಿ ಪಿಐಪಿ ಫ್ಯಾಕ್ಟ್ ಚೆಕ್ ಘಟಕವನ್ನು ಸ್ಥಾಪಿಸಿ, ಅಧಿಕೃತವಾಗಿ ಇಂದು ಅಧಿಸೂಚನೆ ಹೊರಡಿಸಿದೆ. ಈ ಮೂಲಕ ದೇಶದಲ್ಲಿ ಫ್ಯಾಕ್ ಚೆಕ್ ಘಟಕ ಸ್ಥಾಪನೆಯಾದಂತೆ ಆಗಿದೆ. https://twitter.com/ANI/status/1770436047584772165 ಅಂದಹಾಗೇ ಐಟಿ ನಿಯಮದ ಅಡಿಯಲ್ಲಿ ಪಿಐಬಿ ಫ್ಯಾಕ್ಟ್ ಚೆಕ್ ಘಟಕ ಕೆಲಸ ಮಾಡಲಿದೆ. ಸೋಷಿಯಲ್ ಮೀಡಿಯಾ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುವಂತ ಸುದ್ದಿ, ವೀಡಿಯೋಗಳ ಸತ್ಯಾಸತ್ಯತೆಯನ್ನು ಚೆಕ್ ಮಾಡಿ ನೈಜತೆಯನ್ನು ಜನರ ಮುಂದೆ ತೆರೆದಿಡುವಂತ ಕೆಲಸವನ್ನು ಇದು ಮಾಡಲಿದೆ ಎನ್ನಲಾಗುತ್ತಿದೆ. ಒಟ್ಟಾರೆಯಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪಿಐಬಿ ಅಡಿಯಲ್ಲಿ ಫ್ಯಾಕ್ಟ್ ಚೆಕ್ ಘಟಕವನ್ನು ಕೇಂದ್ರ ಸರ್ಕಾರದ ಫ್ಯಾಕ್ಟ್ ಚೆಕ್ ಘಟಕವಾಗಿ ಕೇಂದ್ರವು ಅಧಿಸೂಚನೆ ಹೊರಡಿಸಿದೆ https://kannadanewsnow.com/kannada/complaint-filed-against-tejasvi-surya-shobha-karandlaje-suresh-kumar/ https://kannadanewsnow.com/kannada/public-beware-all-these-are-prohibited-during-the-code-of-conduct-if-violated-case-will-be-fixed/

Read More

ಬೆಂಗಳೂರು: ನಗರದ ನಗರತ್ ಪೇಟೆಯಲ್ಲಿ ಹನುಮಾನ್ ಚಾಲೀಸ ಗಲಾಟೆ ಪ್ರಕರಣ ಸಂಬಂಧ ಕೋಮುದ್ವೇಷ ಹೆಚ್ಚಿಸಿ, ಗಲಭೆ ಎಬ್ಬಿಸಲು ಪ್ರಯತ್ನಿಸಿದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಸುರೇಶ್ ಕುಮಾರ್ ವಿರುದ್ಧ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಕುರಿತಂತೆ ಇಂದು ಜಾಗೃತ ನಾಗರೀಕರು ಕರ್ನಾಟಕದಿಂದ ಚುನಾವಣಾ ಆಯುಕ್ತರಿಗೆ ದೂರು ನೀಡಲಾಗಿದೆ. ಅದರಲ್ಲಿ ದೇಶದ ಸಂವಿಧಾನವನ್ನು ಗೌರವಿಸುವ ಕರ್ನಾಟಕದ ಸಮಾನ ಮನಸ್ಕರನ್ನೊಳಗೊಂಡಿರುವ ಜಾಗೃತ ನಾಗರಿಕರು ಕರ್ನಾಟಕ ವೇದಿಕೆಯ ಮೂಲಕ ಈ ಪತ್ರವನ್ನು ತಮ್ಮಗೆ ಸಲ್ಲಿಸ ಬಯಸುತ್ತೇವೆ. ಮತ್ತು ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಿದೆ. ದಿನಾಂಕ 17-03-2024ರಂದು ಬೆಂಗಳೂರಿನ ನಗರ್ತಪೇಟೆ ಪ್ರದೇಶದಲ್ಲಿ ನಡೆಯಿತನ್ನಲಾದ ಒಂದು ಘಟನೆಯನ್ನಾಧರಿಸಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಹಾಲಿ ಸಂಸದರು ಮತ್ತು ಸಂಭಾವ್ಯ ಅಭ್ಯರ್ಥಿಯಾದ ತೇಜಸ್ವಿ ಸೂರ್ಯ ಕೇಂದ್ರದ ಸಚಿವರಾದ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಯಾದ ಶೋಭಾ ಕರಂದ್ಲಾಜೆಯವರು ಹಾಗೂ ಬೆಂಗಳೂರು ರಾಜಾಜಿನಗರದ ಶಾಸಕರೂ ಆಗಿರುವ ಸುರೇಶ್…

Read More

ನವದೆಹಲಿ: ಜನಪ್ರಿಯ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ( Popular spiritual guru Sadhguru Jaggi Vasudev ) ಅವರು ದೆಹಲಿಯ ಅಪೋಲೋದಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ವರದಿಗಳ ಪ್ರಕಾರ, ಮಾರ್ಚ್ 17 ರಂದು ಮೆದುಳಿನಲ್ಲಿ ಭಾರಿ ಊತ ಮತ್ತು ರಕ್ತಸ್ರಾವ ಪತ್ತೆಯಾದ ನಂತರ ಅವರನ್ನು ದೆಹಲಿಯ ಅಪೊಲೊಗೆ ದಾಖಲಿಸಲಾಯಿತು. ಪತ್ರಕರ್ತ ಆನಂದ್ ನರಸಿಂಹನ್ ಅವರು ಸದ್ಗುರು ಅವರ ಆರೋಗ್ಯದ ಬಗ್ಗೆ ನವೀಕರಣವನ್ನು ಹಂಚಿಕೊಂಡಿದ್ದು, ಕಳೆದ ಹಲವಾರು ದಿನಗಳಿಂದ ಸದ್ಗುರುಗಳು ತೀವ್ರ ತಲೆನೋವಿನಿಂದ ಬಳಲುತ್ತಿದ್ದರು ಎಂದು ಹೇಳಿದ್ದಾರೆ. ವರದಿಗಳ ಪ್ರಕಾರ, ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಡಾ.ವಿನೀತ್ ಸೂರಿ ಪರೀಕ್ಷಿಸಿದರು ಮತ್ತು ಎಂಆರ್ಐಗೆ ಸಲಹೆ ನೀಡಿದರು, ಅಲ್ಲಿ ಅವರ ಮೆದುಳಿನಲ್ಲಿ ಭಾರಿ ರಕ್ತಸ್ರಾವ ಪತ್ತೆಯಾಗಿದೆ. https://twitter.com/AnchorAnandN/status/1770407780723384798 ಅವರ ಆರೋಗ್ಯವು ವೇಗವಾಗಿ ಹದಗೆಟ್ಟಿತು. ಮಾರ್ಚ್ 17 ರಂದು, ಪುನರಾವರ್ತಿತ ವಾಂತಿ ಮತ್ತು ಉಲ್ಬಣಗೊಂಡ ತಲೆನೋವಿನ ನಂತರ ಅವರನ್ನು ದಾಖಲಿಸಲಾಯಿತು. ಸಿಟಿ ಸ್ಕ್ಯಾನ್ ರಕ್ತಸ್ರಾವದ ಜೊತೆಗೆ ಅವರ ಮೆದುಳಿನಲ್ಲಿ ಗಂಭೀರ ಊತವನ್ನು…

Read More

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರು ಅಂಚೆ ಮತದಾನ ಮಾಡುವ ಸಲುವಾಗಿ ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆ ಭೇಟಿಗೆ ಬಿಬಿಎಂಪಿ ನಿಯೋಜಿಸಿದೆ. ಅಲ್ಲದೇ 85 ವರ್ಷ ಮೇಲ್ಪಟ್ಟವರು ಅಂಚೆ ಮತದಾನಕ್ಕಾಗಿ ಹೇಗೆ ನೋಂದಾಯಿಸಿಕೊಳ್ಳಬೇಕು ಎನ್ನುವ ಬಗ್ಗೆ ಮಹತ್ವದ ಮಾಹಿತಿ ನೀಡಲಾಗಿದೆ. ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಅವರ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಸೇರಿದಂತೆ 3 ಲೋಕಸಭಾ ಕ್ಷೇತ್ರಗಳಲ್ಲಿ ಬರುವ ಮತದಾರರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ(AVSC) ಹಾಗೂ ವಿಶೇಷ ಚೇತನರು(ಶೇ.40ಕ್ಕಿಂತ ಹೆಚ್ಚು ಅಂಗವಿಲತೆ ಉಳ್ಳವರು[ಮತದಾರರ ಪಟ್ಟಿಯಲ್ಲಿ ಗುರುತಿಸಿರುವ]-PWD) ಅಂಚೆ ಮತದಾನ ಮೂಲಕ ಅವಕಾಶ ಕಲ್ಪಿಸಲಾಗುತ್ತದೆ. ಸಾರ್ವತ್ರಿಕಾ ಲೋಕಸಭಾ ಚುನಾವಣೆ-2024ರ ಹಿನ್ನೆಲೆ ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರು ಅಂಚೆ ಮತದಾನ ಮಾಡುವ ನಿಟ್ಟನಲ್ಲಿ ಬೂತ್ ಮಟ್ಟದ ಅಧಿಕಾರಿಗಳು ದಿನಾಂಕ: 21-03-2024 ರಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ…

Read More

ವಿಜಯಪುರ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದ ನಂತ್ರ ಮಾದರಿ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಪಾಲಿಸೋ ಕ್ರಮ ಕೈಗೊಳ್ಳಲಾಗಿದೆ. ಇಂದು ಚುನಾವಣಾಧಿಕಾರಿಗಳು ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ 4.5 ಲಕ್ಷ ಹಣ ಜಪ್ತಿ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೊಳಖೇಡ ಬಳಿಯಲ್ಲಿ ಚುನಾವಣಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಂತ ಸಂದರ್ಭದಲ್ಲಿ ಕಾರೊಂದರಲ್ಲಿ 4.5 ಲಕ್ಷ ಹಣ ಪತ್ತೆಯಾಗಿದೆ. ಈ ಹಣದ ಬಗ್ಗೆ ಕಾರಿನಲ್ಲಿದ್ದಂತ ಚಾಲಕ ರೋಷನ್ ಗಜಾನನ್ ಎಂಬುವರನ್ನು ಪ್ರಶ್ನಿಸಿದಾಗ ಸರಿಯಾದ ಮಾಹಿತಿ ನೀಡಿಲ್ಲ. ಈ ಹಿನ್ನಲೆಯಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದಂತ 4.5 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಹಣವನ್ನು ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಮಹಾರಾಷ್ಟ್ರದ ಔರಂಗಾಬಾದ್ ಮೂಲದ ರೋಷನ್ ಗಜಾನನ್ ಎಂಬಾತನನ್ನು ವಶಕ್ಕೆ ಪಡೆದಿರುವಂತ ಝಳಕಿ ಠಾಣೆಯ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/i-didnt-hold-a-meeting-of-anganwadi-workers-minister-laxmi-hebbalkar/ https://kannadanewsnow.com/kannada/public-beware-all-these-are-prohibited-during-the-code-of-conduct-if-violated-case-will-be-fixed/

Read More

ಬೆಂಗಳೂರು: ಒಂದು ಸರಕಾರ ಗರಿಷ್ಠ ಪ್ರಮಾಣದ ಕೆಲಸ ಮಾಡಿದ್ದರೆ ಅದು ನರೇಂದ್ರ ಮೋದಿಯವರ ಸರಕಾರ ಎನ್ನಲು ನನಗೆ ಅತ್ಯಂತ ಹೆಮ್ಮೆ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಸುನೀಲ್ ಕುಮಾರ್ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ರಾಜ್ಯ ಪ್ರಕೋಷ್ಠಗಳ ಸಭೆಯಲ್ಲಿ ಮಾತನಾಡಿದ ಅವರು, 2014ರಲ್ಲಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗ ಎಲ್ಲರ ಮನೆಗಳಿಗೆ ದೀನದಯಾಳ್ ಉಪಾಧ್ಯಾಯ ಯೋಜನೆಯಡಿ ವಿದ್ಯುತ್ ಕೊಡುವುದಾಗಿ ಹೇಳಿದ್ದರು. ಸ್ವಾತಂತ್ರ್ಯಾನಂತರ ಯಾರೂ ಇಂಥ ಘೋಷಣೆ ಮಾಡಿರಲಿಲ್ಲ. 2018ರೊಳಗೆ ಇಡೀ ದೇಶದ ಎಲ್ಲ ಗ್ರಾಮಗಳು, ಮನೆಗಳಿಗೆ ವಿದ್ಯುತ್ ಸಂಪರ್ಕ ಕೊಟ್ಟು ಅವರು ಯಶಸ್ಸನ್ನು ಕಂಡರು ಎಂದು ವಿವರಿಸಿದರು. ಅದಾದ ಬಳಿಕ ಮಹಿಳೆಯರ ಆರೋಗ್ಯ ಮತ್ತು ಮಹಿಳೆಯರಿಗೆ ಸುಲಭ ಆಗಬೇಕೆಂಬ ದೃಷ್ಟಿಯಿಂದ ಎಲ್ಲ ಮನೆಗೂ ಎಲ್‍ಪಿಜಿ ಸಿಲಿಂಡರ್ ಸಂಪರ್ಕ ಒದಗಿಸುವುದಾಗಿ ಹೇಳಿದರು. ಉಜ್ವಲ ಯೋಜನೆಯಡಿ 12 ಕೋಟಿಗೂ ಹೆಚ್ಚು ಮನೆಗಳಿಗೆ ಗ್ಯಾಸ್ ಸಂಪರ್ಕ ಕೊಡಲಾಯಿತು. ಕೋವಿಡ್ ಸಂದರ್ಭದಲ್ಲಿ ಎಲ್ಲ ವ್ಯಕ್ತಿಗಳಿಗೆ ಲಸಿಕೆ…

Read More

ಬೆಳಗಾವಿ : ಅಂಗನವಾಡಿ ಕಾರ್ಯಕತೆರ್ಯರಿಗೆ ಇತ್ತೀಚೆಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಅವರ ಕೆಲಸದ ಒತ್ತಡವನ್ನು ನಿವಾರಿಸಬೇಕೆಂದು ಮನವಿ ಪತ್ರ ನೀಡಲು ಬಂದಿದ್ದರು. ಚುನಾವಣೆಗೆ ಸಂಬಂಧಪಟ್ಟಂತೆ ನಾನು ಸಭೆ ನಡೆಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿ ಸಚಿವರು ಅಂಗವಾಡಿ ಕಾರ್ಯಕರ್ತೆಯರ ಸಭೆ ನಡೆಸಿದ್ದಾರೆ ಎಂದು ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಇತ್ತೀಚೆಗೆ ಪಲ್ಸ್ ಪೊಲೀಯೋ, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ವೆ ಮಾಡಿದ್ದರು. ಈಗ ಬಿಎಲ್‌ಒ ಆಗಿ ಕೆಲಸ ಮಾಡ್ತಿದ್ದಾರೆ. ಬಿಎಲ್‌ಒ ಆಗಲು ನಮಗೆ ತೊಂದರೆ ಆಗುತ್ತಿದೆ ಎಂದು ನನಗೆ ಹೇಳಲು ಬಂದಿದ್ದಾರೆ. ಆದರೆ, ನಾನೇ ಅವರಿಗೆ ತಿಳಿ ಹೇಳಿ ಕೆಲಸ ಮಾಡಲು ಸೂಚಿಸಿದೆ ಎಂದರು. ನಿಯಮ ಉಲ್ಲಂಘಿಸಿಲ್ಲ ಚುನಾವಣೆ ವೇಳೆ ದೂರು ನೀಡುವುದು ಸರ್ವೆ ಸಾಮಾನ್ಯ. ದೂರು ಕೊಡಲಿ, ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ನಾನು ನಿಯಮ ಉಲ್ಲಂಘಿಸಿಲ್ಲ. ನಾನು ದೇಶದ ಕಾನೂನಿಗೆ…

Read More

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗದ ಅನುಮೋದನೆ ಕೋರಲು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಿ ಆದೇಶಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ  ಲೋಕಸಭಾ ಸಾರ್ವತ್ರಿಕ ಚುನಾವಣೆಗಳನ್ನು ಭಾರತ ಚುನಾವಣಾ ಆಯೋಗವು ದಿನಾಂಕ: 16.03.2024, ಶನಿವಾರದಂದು ಘೋಷಿಸಿದ್ದು, ಮಾದರಿ ನೀತಿ ಸಂಹಿತೆಯು ಅಂದಿನಿಂದಲೇ ಜಾರಿಗೆ ಬಂದಿರುತ್ತದೆ. ಜಾರಿಯಾಗಿರುವ ಚುನಾವಣಾ ಮಾದರಿ ನೀತಿ ಸಂಹಿತೆಯು ಉಲ್ಲಂಘನೆಯಾಗದಂತೆ ಇಲಾಖೆಗಳು ಜಾಗ್ರತೆ ವಹಿಸುವುದು ಅವಶ್ಯವಾಗಿರುತ್ತದೆ. ಮಾದರಿ ನೀತಿ ಸಂಹಿತೆ ವಿನಾಯಿತಿ ಬೇಕಾದ ಪ್ರಸ್ತಾವನೆಗಳಿಗೆ ಭಾರತ ಚುನಾವಣಾ ಆಯೋಗದ ಅನುಮೋದನೆ ಕೋರಲು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ (Screening Committee)ಯನ್ನು ರಚಿಸಲಾಗಿದೆ. ಭಾರತ ಚುನಾವಣಾ ಆಯೋಗವು ಹೊರಡಿಸಿರುವ ಮಾದರಿ ನೀತಿ ಸಂಹಿತೆ ಕುರಿತಾದ ಸೂಚನೆಗಳನ್ನು ಆಡಳಿತ ಇಲಾಖೆಗಳು ಗಮನದಲ್ಲಿಟ್ಟುಕೊಂಡು, ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ಬೇಕಾಗಿರುವ ತುರ್ತು ಪ್ರಸ್ತಾವನೆಗಳನ್ನು ಲಗತ್ತಿಸಿರುವ ನಮೂನೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಪರಿಶೀಲನಾ ಸಮಿತಿಗೆ ಸಂಬಂಧಿಸಿದ…

Read More

ಬಳಾರಿ : ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ವಿವಿಧ ಚುನಾವಣಾ ಕಾರ್ಯಗಳಿಗೆ ನಿಯೋಜಿಸಿದ ಅಧಿಕಾರಿಗಳು ಮತ್ತು ಖಾಸಗಿ ವಲಯಗಳ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಕಡ್ಡಾಯವಾಗಿ ಮತದಾನ ಮಾಡಬೇಕು. ಯಾರೂ ಮತದಾನದಿಂದ ಹೊರಗುಳಿಯಬಾರದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಅಂಚೆ ಮತಪತ್ರ ವಿತರಣೆ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣೆಯು ಪ್ರಜಾಪ್ರಭುತ್ವ ಹಬ್ಬವಿದ್ದಂತೆ. ಚುನಾವಣಾ ಕರ್ತವ್ಯದಲ್ಲಿ ತೊಡಗಿರುವ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯವರೆಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಬೇಕೆಂದು ಎಂದು ಸೂಚಿಸಿದರು. ಚುನಾವಣಾ ಆಯೋಗವು ಅಗತ್ಯ ಸೇವೆಗಳ ಇಲಾಖೆಗಳಿಗೆ ಮಾತ್ರ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದೆ. ಅದರಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಇಲಾಖೆ ಮತ್ತು ಆಕಾಶವಾಣಿ, ಬಿ.ಎಸ್.ಎನ್.ಎಲ್ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೂ ಅಂಚೆ ಮತಚೀಟಿ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ ಎಂದರು. ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಚುನಾವಣಾ…

Read More