Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕುಂಭಮೇಳದಲ್ಲಿ ಪವಿತ್ರ ಸ್ನಾನಕ್ಕಾಗಿ ಪ್ರಯಾಗ್ ರಾಜ್ ಗೆ ಆಗಮಿಸಿದ್ದಾರೆ. ದೆಹಲಿಯಿಂದ ಪ್ರಯಾಗ್ ರಾಜ್ ಗೆ ಆಗಮಿಸಿರುವಂತ ಅವರು ಕೆಲವೇ ಕ್ಷಣಗಳಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ. ದೆಹಲಿಯಿಂದ ಪ್ರಯಾಗ್ ರಾಜ್ ಗೆ ವಿಶೇಷ ವಿಮಾನದಲ್ಲಿ ಆಗಮಿಸಿದಂತ ಪ್ರಧಾನಿ ನರೇಂದ್ರ ಮೋದಿಯವರು, ಪ್ರಯಾಗ್ ರಾಜ್ ಸಂಘಮ್ ಘಾಟ್ ಗೆ ತೆರಳುತ್ತಿದ್ದಾರೆ. ಪ್ರಧಾನಿ ಮೋದಿಗೆ ಯುವಿ ಸಿಎಂ ಯೋಗಿ ಆದಿತ್ಯನಾಥ್ ಸಾಥ್ ನೀಡಿದ್ದಾರೆ. ಪ್ರಯಾಗ್ ರಾಜ್ ನಿಂದ ಸಂಗಮ್ ಘಾಟ್ ಗೆ ತೆರಳುತ್ತಿರುವಂತ ಪ್ರಧಾನಿ ನರೇಂದ್ರ ಮೋದಿಯವರು, ಅಲ್ಲಿ ಕುಂಭಮೇಳದ ಪ್ರಯುಕ್ತ ಪವಿತ್ರ ಸ್ನಾನವನ್ನು ಮಾಡಲಿದ್ದಾರೆ.
ನವದೆಹಲಿ : ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ನೂತನ ಮುಖ್ಯ ಮಾರುಕಟ್ಟೆ ಅಧಿಕಾರಿ ಮತ್ತು ಸ್ಟ್ರಾಟೆಜಿಕ್ ಇನಿಶಿಯೇಟಿವ್ಸ್ನ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ಗಾಯತ್ರಿ ವಾಸುದೇವ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಯಾದವ್ ಅವರು ಪೀಕ್ ಎಕ್ಸ್ ವಿ ಪಾರ್ಟ್ನರ್ಸ್ನಿಂದ (ಹಿಂದೆ ಸಿಕ್ವೊಯಾ ಇಂಡಿಯಾ ಮತ್ತು ಎಸ್ಇಎ) ನಮ್ಮ ಕಂಪನಿಗೆ ಸೇರಿದ್ದಾರೆ ಎಂದು ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಪುತ್ರಿ ಮತ್ತು ಕಂಪನಿಯ ಮಂಡಳಿಯ ನಿರ್ದೇಶಕಿ ಇಶಾ ಅಂಬಾನಿ ಹೇಳಿದರು. ರಿಲಯನ್ಸ್ನ ಅಧ್ಯಕ್ಷರ ಕಚೇರಿಯ ಗ್ರೂಪ್ ಚೀಫ್ ಮಾರ್ಕೆಟಿಂಗ್ ಆಫೀಸರ್ ಮತ್ತು ಇವಿಪಿ ಸ್ಟ್ರಾಟೆಜಿಕ್ ಇನಿಶಿಯೇಟಿವ್ಸ್ನ ಹೊಸ ಪಾತ್ರದಲ್ಲಿ, ಗಾಯತ್ರಿ ನಮ್ಮ ಅಧ್ಯಕ್ಷರು, ರಿಲಯನ್ಸ್ ಫೌಂಡೇಶನ್ ಅಧ್ಯಕ್ಷರು, ಆಕಾಶ್, ಅನಂತ್, ಇ.ಸಿ. ಮತ್ತು ನನ್ನೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಾರೆ ಎಂದು ಇಶಾ ತಿಳಿಸಿದರು. ‘ಗಾಯತ್ರಿ ನಮ್ಮ ತಂಡಗಳನ್ನು ಪ್ರೇರೇಪಿಸಲು ಹೊಸ ದೃಷ್ಟಿಕೋನಗಳು ಮತ್ತು ಕ್ರಿಯಾತ್ಮಕ ನಾಯಕತ್ವವನ್ನು ತರಲಿದ್ದಾರೆ. ಹೆಚ್ಚಿನ ಯಶಸ್ಸು ಮತ್ತು ಬೆಳವಣಿಗೆಯನ್ನು ಸಾಧಿಸಲು ಸಹಾಯ ಮಾಡುವ ವಿಶ್ವಾಸವಿದೆ’ ಎಂದು ಅವರು ಹೇಳಿದರು. https://kannadanewsnow.com/kannada/rahul-dravids-car-collides-with-goods-auto-in-bengaluru/…
ಬೆಂಗಳೂರು: ನಗರದಲ್ಲಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಕಾರಿಗೆ ಹಿಂಬದಿಯಿಂದ ಗೂಡ್ಸ್ ಆಟೋವೊಂದು ಡಿಕ್ಕಿಯಾಗಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಕನ್ನಿಗ್ಯಾಂಮ್ ರಸ್ತೆಯಲ್ಲಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಕಾರಿಗೆ ಹಿಂಬದಿಯಿಂದ ಗೂಡ್ಸ್ ಆಟೋವೊಂದು ಡಿಕ್ಕಿಯಾಗಿದೆ. ಈ ಘಟನೆಯಿಂದಾಗಿ ಕಾರಿನಿಂದ ಕೆಳಗಿಳಿದು ರಾಹುಲ್ ದ್ರಾವಿಡ್ ಪರಿಶೀಲಿಸಿದರು ಎನ್ನಲಾಗಿದೆ. ಇದಷ್ಟೇ ಅಲ್ಲದೇ ಗೂಡ್ಸ್ ಆಟೋ ಚಾಲಕ ಹಾಗೂ ರಾಹುಲ್ ದ್ರಾವಿಡ್ ನಡುವೆ ಕೆಲ ಕಾಲ ವಾಗ್ವಾದ ಕೂಡ ನಡೆದಿದೆ. ಆ ಬಳಿಕ ಹೈಗ್ರೌಂಡ್ ಠಾಣೆಗೆ ತೆರಳಿ ಗೂಡ್ಸ್ ಆಟೋ ಚಾಲಕನ ನಂಬರ್ ಪಡೆದು ಅಲ್ಲಿಂದ ತೆರಳಿದ್ದಾರೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. https://kannadanewsnow.com/kannada/home-minister-m-b-patil-invites-rajnath-singh-hdk-joshi-for-investors-meet/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/
ನವದೆಹಲಿ: ಇದೇ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ವಿ.ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ. ಮೊದಲಿಗೆ ಸೋಮಣ್ಣ ಅವರ ನಿವಾಸಕ್ಕೆ ಭೇಟಿ ಮಾಡಿದ ಸಚಿವರು, ನಂತರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಅಲ್ಲಿಂದ ಜೋಶಿ ಅವರ ಸಂಸತ್ತಿನ ಕಚೇರಿಗೆ ತೆರಳಿದ ಪಾಟೀಲರು, ಅವರ ಕಚೇರಿಯಲ್ಲಿ ಸಮಾವೇಶ ಕುರಿತು ರಾಜ್ಯದ ನಾಯಕರೊಂದಿಗೆ ಸಭೆ ನಡೆಸಿದರು. ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕಂಡ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದರು. ಪಾಟೀಲ ಅವರು ಬುಧವಾರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರ ಕೇಂದ್ರ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ, ಸಮಾವೇಶಕ್ಕೆ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮೈಕ್ರೋ ಫೈನಾನ್ಸ್ ಕಾಟಕ್ಕೆ ಬೇಸತ್ತಿದ್ದ ಮತ್ತೊಂದು ಕುಟುಂಬಕ್ಕೆ ನೆರವಾಗಿದ್ದಾರೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಸರಿಕಟ್ಟಿಯ ಬಸವರಾಜ ಮಾರುತಿ ಕೊಂಡಸ್ಕೊಪ್ಪ ಅವರು ಖಾಸಗಿ ಹಣಕಾಸು ಸಂಸ್ಥೆಯಿಂದ 7 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಸಾಲ ಮರುಪಾವತಿಸಲು ವಿಫಲರಾದ ಹಿನ್ನೆಲೆಯಲ್ಲಿ ಖಾಸಗಿ ಹಣಕಾಸು ಸಂಸ್ಥೆಯವರು 3 ತಿಂಗಳ ಹಿಂದೆ ಬಸವರಾಜ ಅವರ ಮನೆಗೆ ಬೀಗ ಹಾಕಿದ್ದರು. ಮೈಕ್ರೋ ಫೈನಾನ್ಸ್ ಅವರ ಕಾಟಕ್ಕೆ ಬೇಸತ್ತ ಬಸವರಾಜ ಸಚಿವರ ಬಳಿಕ ತಮ್ಮ ಅಳಲು ತೋಡಿಕೊಂಡಿದ್ದರು. ನೊಂದ ರೈತನ ಮನವಿ ಸ್ವೀಕರಿಸಿದ ಸಚಿವರು, ತಮ್ಮ ಆಪ್ತ ಸಹಾಯಕ ಮಹಾಂತೇಶ್ ಹಿರೇಮಠ ಮೂಲಕ ಖಾಸಗಿ ಹಣಕಾಸು ಸಂಸ್ಥೆ ಸಿಬ್ಬಂದಿ ಜೊತೆ ಮಾತುಕತೆ ನಡೆಸಿ, ಸಾಲ ಮರು ಪಾವತಿಸಲು ಎರಡು ತಿಂಗಳ ಸಮಯಾವಕಾಶ ಕೊಡಿಸಿದರು. ಜೊತೆಗೆ ಅನಾವಶ್ಯಕವಾಗಿ ಸಾಲಗಾರರಿಗೆ ಕಾಟ ನೀಡದಂತೆ ಖಾಸಗಿ ಹಣಕಾಸು ಸಂಸ್ಥೆಯವರಿಗೆ ಸಚಿವರು ತಾಕೀತು ಮಾಡಿದರು. ಕಳೆದ ವಾರವಷ್ಟೇ ಬೆಳಗಾವಿ ತಾಲೂಕಿನ…
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) ಜಂಟಿ ಪ್ರವೇಶ ಪರೀಕ್ಷೆ ( Joint Entrance Exam -JEE) ಮೇನ್ 2025 ಸೆಷನ್ 1 ರ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಜೆಇಇ ಮೇನ್ 2025 ಉತ್ತರ ಕೀಯನ್ನು ಅಧಿಕೃತ ವೆಬ್ಸೈಟ್ – jeemain.nta.nic.in ನಿಂದ ಪರಿಶೀಲಿಸಬಹುದು ಮತ್ತು ಡೌನ್ಲೋಡ್ ಮಾಡಬಹುದು. ಏಜೆನ್ಸಿಯು ಅಭ್ಯರ್ಥಿಗಳ ಪ್ರತಿಕ್ರಿಯೆ ಪತ್ರಿಕೆಗಳನ್ನು ಸಹ ಬಿಡುಗಡೆ ಮಾಡಿದೆ. ಕೀ ಉತ್ತರಕ್ಕೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 6, 2025, ರಾತ್ರಿ 11:50 ರವರೆಗೆ. ಅಭ್ಯರ್ಥಿಗಳು ಪ್ರತಿ ಪ್ರಶ್ನೆಗೆ 200 ರೂ. ಜೆಇಇ ಮೇನ್ 2025 ಕೀ ಉತ್ತರಗಳನ್ನು ಡೌನ್ಲೋಡ್ ಮಾಡುವುದು ಹೇಗೆ? ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಬಳಸಿಕೊಂಡು ಅಧಿಕೃತ ವೆಬ್ಸೈಟ್ -jeemain.nta.nic.in ಮೂಲಕ ತಾತ್ಕಾಲಿಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಲು ಸಾಧ್ಯವಾಗುತ್ತದೆ. ಹಂತ 1: ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ…
ಬೆಂಗಳೂರು: ನಗರದಲ್ಲಿ ಅಪ್ಪ-ಮಗನಿಂದಲೇ ಬರೋಬ್ಬರಿ 93 ಮೊಬೈಲ್ ಕದ್ದು ಪೊಲೀಸರಿಗೆ ಸಿಕ್ಕಿಬಿದ್ದಿರುವಂತ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ತಂದೆ-ಮಗ ಸೇರಿದಂತೆ ಸ್ನೇಹಿತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಮಹದೇವಪುರ ಪೊಲೀಸರಿಂದ ಮೊಬೈಲ್ ಕಳ್ಳತನ ಪ್ರಕರಣ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 30 ಲಕ್ಷ ಮೌಲ್ಯದ 93 ಮೊಬೈಲ್ ಪೋನ್ ಗಳನ್ನು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿಗಳು ಫಾರೂಕ್, ಅವರ ಪುತ್ರ ಸಲ್ಮಾನ್ ಹಾಗೂ ಸ್ನೇಹಿತ ಸಾಜಿದ್ ಎಂಬುವರಾಗಿದ್ದಾರೆ. ಮಹದೇವಪುರ ವ್ಯಾಪ್ತಿಯಲ್ಲಿ ವಾಕಿಂಗ್ ಮಾಡುವ ಹಾಗೂ ರಸ್ತೆಯಲ್ಲಿ ಹೋಗುವವರನ್ನೇ ಟಾರ್ಗೆಟ್ ಮಾಡಿ ಅವರಿಂದ ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದರು. ಅಂದಹಾಗೇ ಸ್ನೇಹಿತ ಸಾಜಿದ್ ಜೊತೆ ಸೇರಿ ಸನ್ಮಾನ್ ಕದಿಯುತ್ತಿದ್ದನು. ಕದ್ದ ಪೋನ್ ಗಳನ್ನು ತಂದೆ ಫಾರೂಖ್ ಗೆ ನೀಡಲಾಗುತ್ತಿತ್ತು. ಅವುಗಳನ್ನು ಫಾರೂಕ್ ಮಾರಾಟ ಮಾಡುತ್ತಿದ್ದರು. ಇದೀಗ ಮಹದೇವಪುರ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂದಿಸಿ, ಜೈಲಿಗಟ್ಟಿದ್ದಾರೆ. https://kannadanewsnow.com/kannada/student-injured-after-boiler-drum-falls-on-him-in-davanagere-dies/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/
ದಾವಣಗೆರೆ: ಜಿಲ್ಲೆಯಲ್ಲಿ ನಿನ್ನೆ ಟೆರೇಸ್ ನಲ್ಲಿದ್ದಂತ ಬಾಯ್ಲರ್ ಡ್ರಮ್ ಬಿದ್ದು ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದನು. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೇ ಇಂದು ಚಿಕಿತ್ಸೆ ಫಲಿಸದೇ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ನಗರದ ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವಂತ ಮಂಜುನಾಥ್ ವಸತಿ ಶಾಲೆಯಲ್ಲಿ ನಿನ್ನೆ ಟೆರೇಸ್ ನಲ್ಲಿದ್ದ ಬಾಯ್ಲರ್ ಡ್ರಮ್ ಬಿದ್ದು ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದಂತ ರಂಗನಾಥ್(9) ಗಂಭೀರವಾಗಿ ಗಾಯಗೊಂಡಿದ್ದನು. ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೇ ಚಿಕಿತ್ಸೆ ಫಲಿಸದೇ ಹರಿಹರ ತಾಲ್ಲೂಕಿನ ಜಿಗಳಿ ಗ್ರಾಮ ನಿವಾಸಿ 4ನೇ ತರಗತಿ ವಿದ್ಯಾರ್ಥಿ ರಂಗನಾಥ್ ಸಾವನ್ನಪ್ಪಿದ್ದಾರೆ. https://kannadanewsnow.com/kannada/gst-council-to-decide-on-rates-slab-numbers-soon-nirmala-sitharaman/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/
ನವದೆಹಲಿ: ಪರಿಶೀಲನಾ ಕಾರ್ಯಗಳು ಬಹುತೇಕ ಪೂರ್ಣಗೊಂಡಿರುವುದರಿಂದ ಕಡಿಮೆ ಮತ್ತು ಕಡಿಮೆ ದರಗಳನ್ನು ಹೊಂದುವ ಬಗ್ಗೆ ಜಿಎಸ್ಟಿ ಕೌನ್ಸಿಲ್ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ನಾಲ್ಕು ಹಂತದ ತೆರಿಗೆ ರಚನೆಯಾಗಿದ್ದು, ಪ್ರಸ್ತುತ ಶೇಕಡಾ 5, 12, 18 ಮತ್ತು 28 ರ ಸ್ಲ್ಯಾಬ್ಗಳನ್ನು ಹೊಂದಿದೆ. ಬಜೆಟ್ ನಂತರದ ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಜಿಎಸ್ಟಿ ಮತ್ತು ಕೌನ್ಸಿಲ್ನಲ್ಲಿರುವ ಸಚಿವರಿಗೆ ನ್ಯಾಯಯುತವಾಗಿರಲು, ಜಿಎಸ್ಟಿ ದರಗಳನ್ನು ತರ್ಕಬದ್ಧಗೊಳಿಸುವ ಮತ್ತು ಸರಳಗೊಳಿಸುವ ಕೆಲಸ ಈಗಾಗಲೇ ಪ್ರಾರಂಭವಾಗಿದೆ ಎಂದರು. ವಾಸ್ತವವಾಗಿ, ಇದು ಸುಮಾರು ಮೂರು ವರ್ಷಗಳ ಹಿಂದೆ ಪ್ರಾರಂಭವಾಯಿತು” ಎಂದು ಸೀತಾರಾಮನ್ ಹೇಳಿದರು, ನಂತರ ವ್ಯಾಪ್ತಿಯನ್ನು ವಿಸ್ತರಿಸಲಾಯಿತು ಮತ್ತು ಈಗ ಕೆಲಸವು ಬಹುತೇಕ ಪೂರ್ಣಗೊಂಡಿದೆ ಎಂದರು. ನಾವು ಅವಕಾಶವನ್ನು ಕಳೆದುಕೊಳ್ಳಬಾರದು, ನಾವು ದರಗಳ ಸಂಖ್ಯೆಯನ್ನು ಸಹ ಕಡಿಮೆ ಮಾಡಬಹುದು ಎಂಬುದು ಮುಖ್ಯವಾಗಿತ್ತು. ಇದು ನಾವು ಕಡಿಮೆ ದರಗಳು ಮತ್ತು ಕಡಿಮೆ…
ಸ್ವೀಡನ್: ಸ್ಟಾಕ್ಹೋಮ್ನಿಂದ ಪಶ್ಚಿಮಕ್ಕೆ 200 ಕಿ.ಮೀ ದೂರದಲ್ಲಿರುವ ಒರೆಬ್ರೊ ನಗರದ ಶಾಲೆಯೊಂದರಲ್ಲಿ ಐವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ವೀಡನ್ ಪೊಲೀಸರು ಮಂಗಳವಾರ ತಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಉಲ್ಲೇಖಿಸಿದೆ. ಸ್ಥಳೀಯ ಕಾಲಮಾನ 13:00 ಕ್ಕಿಂತ ಮೊದಲು ಈ ಘಟನೆ ನಡೆದಿದ್ದು, ಅಧಿಕಾರಿಗಳು ನಿವಾಸಿಗಳನ್ನು ಶಾಲೆಯಿಂದ ದೂರವಿರಲು ಒತ್ತಾಯಿಸುತ್ತಿದ್ದಾರೆ. ಐದು ಜನರಿಗೆ ಗುಂಡು ಹಾರಿಸಲಾಗಿದೆ ಎಂದು ದೃಢಪಡಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಇದನ್ನು ಪ್ರಸ್ತುತ ಕೊಲೆ ಯತ್ನ, ಅಗ್ನಿಸ್ಪರ್ಶ ಮತ್ತು ಉಲ್ಬಣಗೊಂಡ ಶಸ್ತ್ರಾಸ್ತ್ರಗಳ ಅಪರಾಧವೆಂದು ಕರೆಯಲಾಗಿದೆ. ಆಂಬ್ಯುಲೆನ್ಸ್ಗಳು, ರಕ್ಷಣಾ ಸೇವೆಗಳು ಮತ್ತು ಪೊಲೀಸರು ಆನ್ಸೈಟ್ನಲ್ಲಿದ್ದಾರೆ ಎಂದು ಸ್ಥಳೀಯ ರಕ್ಷಣಾ ಸೇವೆಗಳ ವಕ್ತಾರರು ತಿಳಿಸಿದ್ದಾರೆ. https://kannadanewsnow.com/kannada/bomb-threat-e-mail-to-another-school-in-the-state/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/