Author: kannadanewsnow09

ಚಿತ್ರದುರ್ಗ : ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಡಿ.13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನೇರ ನೇಮಕಾತಿ ಸಂದರ್ಶನ ನಡೆಯಲಿದೆ. ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೋಮೋ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಪೋಟೊಗಳೊಂದಿಗೆ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 9964528212, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ. https://kannadanewsnow.com/kannada/st-community-students-applications-invited-for-pre-matric-post-matric-scholarships/ https://kannadanewsnow.com/kannada/good-news-for-high-school-co-teachers-in-the-state-minister-madhu-bangarappa/

Read More

ಬಳ್ಳಾರಿ : ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಎಸ್‌ಎಸ್‌ಪಿ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟಿನ https://ssp.postmatric.karnataka.gov.in ಲಿಂಕ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಳ್ಳಾರಿ ತಾಲ್ಲೂಕಿನ ಸರ್ಕಾರಿ, ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಏನಾದರೂ ತಾಂತ್ರಿಕ ತೊಂದರೆಗಳಾದಲ್ಲಿ ಎಸ್‌ಎಸ್‌ಪಿ ಸಹಾಯವಾಣಿ ಸಂಖ್ಯೆ 080-22261789 ಗೆ ಕರೆಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ವಾಲ್ಮೀಕಿ ಭವನದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಗಳ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/good-news-for-high-school-co-teachers-in-the-state-minister-madhu-bangarappa/ https://kannadanewsnow.com/kannada/people-of-bengaluru-note-there-will-be-no-electricity-in-these-areas-tomorrow/

Read More

ಶಿವಮೊಗ್ಗ: ವಿವಿಧ ಪ್ರಕಾರದ ಜನಪದ ಕಲೆಗಳು ನಮ್ಮ ಬೇರಾಗಿದ್ದು ಅವನ್ನು ಕಲಿಯುವುದು ಜ್ಞಾನ, ಗೌರವ, ಹಣಗಳಿಕೆ ಎಲ್ಲಕ್ಕೂ ದಾರಿ ಎಂದು ಜನಪದ ಹಾಡುಗಾರ ಮಳವಳ್ಳಿ ಮಹದೇವಸ್ವಾಮಿ ಸಲಹೆಯಿತ್ತರು. ಇಲ್ಲಿನ ಕುವೆಂಪು ವಿಶ್ವವಿದ್ಯಾಲಯ ಪಠ್ಯೇತರ ಚಟುವಟಿಕೆ ವಿಭಾಗದ ವತಿಯಿಂದ ವಿಶ್ವವಿದ್ಯಾಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ‘ಸಹ್ಯಾದ್ರಿ ಉತ್ಸವ- 2024’ಅನ್ನು ಡಿ.09-11ರ ವರೆಗೆ ಆಯೋಜಿಸಲಾಗಿದ್ದು, ವಿಶ್ವವಿದ್ಯಾಲಯದ ಬಸವ ಸಭಾ ಭವನದಲ್ಲಿ ಸೋಮವಾರ ಸಂಜೆ 4.30ಗಂಟೆಗೆ ಕಾರ್ಯಕ್ರಮದಲ್ಲಿ ಮುಖ್ಯಅತಿಥಿ ಭಾಷಣದಲ್ಲಿ ಅವರು ಮಾತನಾಡಿದರು. ಜನಪದ ಸಾಹಿತ್ಯ, ಹಾಡನ್ನು ಸಿನಿಮಾದವರು ಬಳಸಿದ್ದಾರೆ, ಆದರೆ ಸಿನಿಮಾದಿಂದ ಜನಪದ ಏನನ್ನೂ ಪಡೆದಿಲ್ಲ. ಜನಪದ ಸಶಕ್ತ ಮಾಧ್ಯಮ ಅದನ್ನು ಕಲಿಯಿರಿ ಎಂದರು. ಮತ್ತೋರ್ವ ಅತಿಥಿ ನಟಿ ಅದಿತಿ ಶೆಟ್ಟಿ ಮಾತನಾಡಿ, ಕಾಲೇಜು ದಿನಗಳಲ್ಲಿ ಕಲಿಯುವ ಕಲೆ, ಗಳಿಸಿದ ಜ್ಞಾನ, ರೂಪಿಸಿಕೊಂಡ ಮೌಲ್ಯಗಳು ಇಂದಿಗೂ ಸಿನಿಮಾರಂಗದಲ್ಲಿ ನಮಗೆ ಸಹಾಯಕವಾಗಿವೆ. ಹೀಗಾಗಿ ಶಿಕ್ಷಣ ಮತ್ತು ಶಿಕ್ಷಣದ ಸಂದರ್ಭದ ಹಲವು ಬಗೆಯ ಕಲಿಕೆ ಮುಖ್ಯ ಎಂದು ತಿಳಿಸಿದರು. ವಿವಿಯ ಕುಲಪತಿ ಪ್ರೊ ಶರತ್ ಅನಂತಮೂರ್ತಿ…

Read More

ನವದೆಹಲಿ: ಜಾನಿ ಮಾಸ್ಟರ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ನೃತ್ಯ ಸಂಯೋಜಕ ಶೇಖ್ ಜಾನಿ ಬಾಷಾ ಅವರನ್ನು ಲೈಂಗಿಕ ಕಿರುಕುಳದ ಆರೋಪದ ನಂತರ ಡ್ಯಾನ್ಸರ್ಸ್ ಮತ್ತು ಡ್ಯಾನ್ಸ್ ಡೈರೆಕ್ಟರ್ಸ್ ಅಸೋಸಿಯೇಷನ್ನಿಂದ ಶಾಶ್ವತವಾಗಿ ಹೊರಹಾಕಲಾಗಿದೆ ಎಂದು ವರದಿಯಾಗಿದೆ. ಡಿಸೆಂಬರ್ 6 ರಂದು ನಡೆದ ಚುನಾವಣೆಯಲ್ಲಿ ನೃತ್ಯ ಸಂಯೋಜಕ ಜೋಸೆಫ್ ಪ್ರಕಾಶ್ ಅವರನ್ನು ಹೊಸ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಇದು ಪ್ರಕಾಶ್ ಅವರ ಐದನೇ ಅವಧಿ ಮತ್ತು ಜಾನಿ ಮಾಸ್ಟರ್ ಅವರು ಸಂಘದಿಂದ ಶಾಶ್ವತವಾಗಿ ನಿರ್ಗಮಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಸ್ತ್ರೀ 2 ನೃತ್ಯ ಸಂಯೋಜಕಿ 21 ವರ್ಷದ ಸಹೋದ್ಯೋಗಿಯೊಬ್ಬರು ಲೈಂಗಿಕ ದೌರ್ಜನ್ಯದ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ವರದಿಗಳ ಪ್ರಕಾರ, ಸಂತ್ರಸ್ತೆ ಅಪ್ರಾಪ್ತ ವಯಸ್ಕನಾಗಿದ್ದಾಗ ಸಂಭವಿಸಿದ ಘಟನೆಗಳು ಸೇರಿದಂತೆ ಪದೇ ಪದೇ ಹಲ್ಲೆಗಳನ್ನು ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ), 506 (ಕ್ರಿಮಿನಲ್ ಬೆದರಿಕೆ) ಮತ್ತು 323 ರ ಅಡಿಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಆರೋಪಗಳನ್ನು…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆಯಿಂದ ಈ ರೈಲುಗಳಿಗೆ ತಾತ್ಕಾಲಿಕವಾಗಿ ಎಸಿ ಬೋಗಿ ಜೋಡಣೆ ಮಾಡಲಾಗಿದೆ. ಈ ಕೆಳಗಿನ ರೈಲುಗಳಿಗೆ ತಲಾ ಒಂದು ಫಸ್ಟ್ ಕಮ್ ಸೆಕೆಂಡ್ ಎಸಿ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಜೋಡಿಸಲಾಗುತ್ತಿದೆ, ಈ ಕೆಳಗಿನ ದಿನಾಂಕಗಳಿಂದ ಜಾರಿಗೆ ಬರಲಿದೆ: 1. ಜನವರಿ 4 ರಿಂದ ಮೇ 3, 2025 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಡೈಲಿ ಎಕ್ಸ್ ಪ್ರೆಸ್. 2. ಜನವರಿ 1 ರಿಂದ ಏಪ್ರಿಲ್ 30, 2025 ರವರೆಗೆ ರೈಲು ಸಂಖ್ಯೆ 17302 ಬೆಳಗಾವಿ-ಮೈಸೂರು ಡೈಲಿ ಎಕ್ಸ್ ಪ್ರೆಸ್. 3. ಜನವರಿ 2 ರಿಂದ ಮೇ 1, 2025 ರವರೆಗೆ ರೈಲು ಸಂಖ್ಯೆ 17307 ಮೈಸೂರು-ಬಾಗಲಕೋಟೆ ಬಸವ ಡೈಲಿ ಎಕ್ಸ್ ಪ್ರೆಸ್. 4. ಜನವರಿ 3 ರಿಂದ ಮೇ 2, 2025 ರವರೆಗೆ ರೈಲು ಸಂಖ್ಯೆ 17308 ಬಾಗಲಕೋಟೆ-ಮೈಸೂರು ಬಸವ ಡೈಲಿ ಎಕ್ಸ್ ಪ್ರೆಸ್. Good News : ‘ಬಿಮಾ ಸಖಿ ಯೋಜನೆ’ಗೆ ಮೋದಿ…

Read More

ಮಂಡ್ಯ : ಜಿಲ್ಲೆಯ ರೈತರಿಗೆ ಕಂಬೈಂಡ್ ಹಾರ್ವೆಸ್ಟರ್ ಯಂತ್ರಗಳ ಮೂಲಕ ಭತ್ತ ಹಾಗೂ ರಾಗಿ ಬೆಳೆಗಳ ಕಟಾವಿನ ಬಾಡಿಗೆ ದರ ನಿಗಧಿಯ ಬಗ್ಗೆ ಪತ್ರಿಕೆ ಹಾಗೂ ನಾಮಫಲಕಗಳಲ್ಲಿ ಹೆಚ್ಚು ಪ್ರಚಾರವಾಗಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಕೃಷಿ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಸಭೆ ನಡೆಸಿ ಮಾತನಾಡಿದರು. 2024 -25 ನೇ ಸಾಲಿನಲ್ಲಿ ಮಂಡ್ಯ ಜಿಲ್ಲೆಯ ನೆರೆಯ ಜಿಲ್ಲೆಗಳ ವ್ಯಾಪ್ತಿಯಲ್ಲಿ ಭತ್ತ ಕಂಬೈಂಡ್ ಹಾರ್ವೆಸ್ಟರ್ಗಳ ಬಾಡಿಗೆ ದರಗಳನ್ನು ನಿಗದಿಪಡಿಸಿದರು. ಚೈನ್ ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ 2,500 ರೂಗಳು, ಟೈರ್ (ಗ್ರೀಪ್) ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ 2000 ರೂ, ಟೈರ್ (ಸಾಮಾನ್ಯ) ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ 1,800 ರೂ ಹಾಗೂ ರಾಗಿ ಯಂತ್ರಕ್ಕೆ ಪ್ರತಿ ಗಂಟೆಗೆ 2,900 ರೂ ಗಳನ್ನು ನಿಗಧಿ ಪಡಿಸಿದರು. ಜಿಲ್ಲೆಯಲ್ಲಿ 2024-25…

Read More

ಪುಣೆ: ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು. ಬೆಳಗಾವಿಯಲ್ಲಿನ ಮರಾಠಿಗರನ್ನು ತುಳಿಯುವ ಕೆಲಸ ಆಗುತ್ತಿದೆ. ಅಲ್ಲಿನ ಜನರ ಸ್ಥಿತಿ ಚಿಂತಾಜನಕವಾಗಿದೆ ಎಂಬುದಾಗಿ ಮಹಾರಾಷ್ಟ್ರ ಮಾಜಿ ಸಚಿವ ಆದಿತ್ಯ ಠಾಕ್ರೆ ಆರೋಪಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಈ ಹಿಂದೆ ಬೆಳಗಾವಿಯಲ್ಲಿನ ಮರಾಠಿಗರ ಅಭಿವೃದ್ಧಿಗಾಗಿ ಹೆಚ್ಚುವರಿ ಅನುದಾನ ನೀಡುವುದಾಗಿ ಅಸಾಂವಿಧಾನಿಕ ಸಿಎಂ ಭರವಸೆ ನೀಡಿದ್ದರು. ಆದರೇ ಅದು ಆಗಲೇ ಇಲ್ಲ ಎಂಬುದಾಗಿ ಕಿಡಿಕಾರಿದರು. ಬೆಳಗಾವಿಯಲ್ಲಿ ಮರಾಠಿಗರ ಸ್ಥಿತಿ ಚಿಂತಾಜನಕವಾಗಿದೆ. ಕರ್ನಾಟಕ ಸರ್ಕಾರ ಬೆಳಗಾವಿಗೆ ಮಹಾರಾಷ್ಟ್ರ ನಾಯಕರ ಪ್ರವೇಶವನ್ನು ನಿರ್ಬಂಧಿಸಿದೆ. ಇದು ಸರಿಯಲ್ಲ ಎಂಬುದಾಗಿ ಹೇಳಿದರು. ಬೆಳಗಾವಿಯಲ್ಲಿನ ಮರಾಠಿಗರ ಅಭಿವೃದ್ಧಿಯಾಗಬೇಕು ಅಂದ್ರೆ ಕೇಂದ್ರಾಡಳಿತ ಪ್ರದೇಶ ಆಗಬೇಕು ಎಂಬುದಾಗಿ ಒತ್ತಾಯಿಸಿದರು. Good News : ‘ಬಿಮಾ ಸಖಿ ಯೋಜನೆ’ಗೆ ಮೋದಿ ಚಾಲನೆ ; ಮಹಿಳೆಯರಿಗೆ ತಿಂಗಳಿಗೆ 7,000 ರೂ. ಲಭ್ಯ, ನೀವೂ ಅರ್ಜಿ ಸಲ್ಲಿಸಿ! – Kannada News | India News | Breaking news | Live news | Kannada | Kannada News…

Read More

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿ ಈವರೆಗೂ 1,81,699 ಪದವೀಧರರು ಯುವನಿಧಿ ಯೋಜನೆ ಅಡಿ ನೋಂದಣಿ ಮಾಡಿಕೊಂಡಿದ್ದು, ನೋಂದಣಿ ಮಾಡಿಕೊಂಡವರಲ್ಲಿ ಈವರೆವಿಗೂ 1,45,978 ಪದವೀಧರರಿಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ಸದಸ್ಯ ಕೆ.ಎಸ್.ನವೀನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಯುವನಿಧಿ ಯೋಜನೆ ಅಡಿ ನೋಂದಾಯಿಸಿದ ಅರ್ಹ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಈ ಯೋಜನೆ ತಲುಪುತ್ತಿದೆ ಎಂದರು. ಯುವನಿಧಿ ಯೋಜನೆ ಅಡಿಯಲ್ಲಿ ನೋಂದಾಯಿಸಿದ ಅಭ್ಯರ್ಥಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ಇದನ್ನು ನೀಡದೆ ಇದ್ದಲ್ಲಿ ಭತ್ಯೆ ಸ್ಥಗಿತಗೊಳ್ಳಲಿದೆ ಎಂದರು. Good News : ‘ಬಿಮಾ ಸಖಿ ಯೋಜನೆ’ಗೆ ಮೋದಿ ಚಾಲನೆ ; ಮಹಿಳೆಯರಿಗೆ ತಿಂಗಳಿಗೆ 7,000 ರೂ. ಲಭ್ಯ, ನೀವೂ ಅರ್ಜಿ ಸಲ್ಲಿಸಿ! -…

Read More

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿ ಔಷಧ ಪರವಾನಗಿ ಇಲ್ಲದೆ ಅನಧಿಕೃತವಾಗಿ ಔಷಧ ಅಂಗಡಿಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ ಮತ್ತು ನಿಯಮಾವಳಿಗಳನ್ವಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ವಿಧಾನ ಪರಿಷತ್‌ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಪ್ರಸ್ತುತ 37,130 ಖಾಸಗಿ ಔಷಧ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 07 ಜತನಾ ಬಜಾರ್‌ಗಳು, 23 ಜನ ಸಂಜೀವಿನಿ ಕೇಂದ್ರಗಳು ಹಾಗೂ 178 ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದರು. 2023-24 ರಲ್ಲಿ ದೈನಂದಿನ ಪರಿವೀಕ್ಷಣೆಯಲ್ಲಿ ಇಲಾಖೆಯ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಿದ 1245 ಪರವಾನಿಗೆಗಳನ್ನು ಅಮಾನತ್ತುಗೊಳಿಸಿದ್ದು, 292 ಪರವಾನಿಗೆಗಳನ್ನು ರದ್ದುಗೊಳಿಸಲಾಗಿದೆ. ಇಲಾಖೆಯ ಅಧಿಕಾರಿಗಳು ಮಾದಕ ಔಷಧಿಗಳ ದಾಸ್ತಾನು ಮತ್ತು ಮಾರಾಟಗಳ ಬಗ್ಗೆ ನಿಗಾವಹಿಸುತ್ತಿದ್ದು ಮತ್ತು ಖಾಸಗಿ ಔಷಧ ಇದು ಮಳಿಗೆಗಳಲ್ಲಿ ಮಾದಕ ವಸ್ತುಗಳು ನಿಯಾಮಬಾಹಿರ ಮಾರಾಟಗಳ ಬಗ್ಗೆ ಪರಿವೀಕ್ಷಣೆಗಳನ್ನು ಕೈಗೊಂಡು…

Read More

ಬೆಳಗಾವಿ ಸುವರ್ಣಸೌಧ : ಅನರ್ಹರು ಬಿಪಿಎಲ್ ಕಾರ್ಡಗಳನ್ನು ಬಳಸುತ್ತಾರೆ ಎನ್ನುವ ದೂರನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದರು. ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 09 ರಂದು ಪರಿಷತ್ ಸದಸ್ಯರಾದ ಕೆ ಎ ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಹಾಗೂ ವಿರೋದ ಪಕ್ಷದ ಕೆಲ ಸದಸ್ಯರು ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದಲ್ಲಿ ಸುಮಾರು ಶೇಕಡ 65 ರಿಂದ 75ರಷ್ಟು ಜನಸಂಖ್ಯೆ ಬಡತನ ರೇಖೆಗಿಂತ ಕೆಳಗಿದ್ದಾರೆ ಎನ್ನುವ ಮಾಹಿತಿ ಇದೆ. ಬಡತನದಲ್ಲಿ ಇರುವ ಜನತೆಗೆ ಅನ್ಯಾಯ ಮಾಡಲು ಬಿಡುವುದಿಲ್ಲ ಎಂದು ಭರವಸೆ ನೀಡಿದ ಸಚಿವರು ಇನ್ನಷ್ಟು ಸಮಯ ಪಡೆದುಕೊಂಡು ಬಿಪಿಎಲ್ ಪಡಿತರದಾರರಿಗೆ ತೊಂದರೆಯಾಗದ ಹಾಗೆ ಎಪಿಎಲ್ ಕಾರ್ಡ್ಗೆ ಅರ್ಹ ಇರುವವರನ್ನು ಬಿಪಿಎಲ್‌ನಿಂದ ಬೇರ್ಪಡಿಸಲಾಗುವುದು ಎಂದು ತಿಳಿಸಿದರು. ಪ್ರಸ್ತುತ ಈಗಿರುವ ಬಿಪಿಎಲ್ ಕಾರ್ಡ್…

Read More