Author: kannadanewsnow09

ನವದೆಹಲಿ: ಬಹು ಚರ್ಚಿತ ವಕ್ಫ್ ತಿದ್ದುಪಡಿ ಮಸೂದೆ 2024 ಇಂದು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ವಿವಿಧ ರಾಜಕೀಯ ಗುಂಪುಗಳಿಂದ ನಿರೀಕ್ಷಿತ ಚರ್ಚೆ ಮತ್ತು ವಿರೋಧದ ನಡುವೆಯೂ ಲೋಕಸಭೆಯಲ್ಲಿ ವಕ್ಪ್ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ನೀಡಲಾಗಿದೆ. ಭಾರತದಲ್ಲಿ ವಕ್ಫ್ ಆಸ್ತಿಗಳ ನಿರ್ವಹಣೆಯನ್ನು ನಿಯಂತ್ರಿಸುವ 1995 ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ನಿಟ್ಟಿನಲ್ಲಿ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಸರ್ಕಾರ ಮಂಡಿಸಲಾಗಿತ್ತು. ಈ ವೇಳೆ ಮಾತನಾಡಿದಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಂಟಿ ಸಂಸದೀಯ ಸಮಿತಿಯನ್ನು ರಚಿಸಬೇಕು ಎಂಬುದು ನಿಮ್ಮ (ಪ್ರತಿಪಕ್ಷ) ಒತ್ತಾಯವಾಗಿತ್ತು. ಕಾಂಗ್ರೆಸ್ ನಂತಹ ಸಮಿತಿ ನಮ್ಮಲ್ಲಿಲ್ಲ. ನಾವು ಪ್ರಜಾಪ್ರಭುತ್ವ ಸಮಿತಿಯನ್ನು ಹೊಂದಿದ್ದೇವೆ. ಅದು ಚಿಂತನ ಮಂಥನ ನಡೆಸುತ್ತದೆ. ‘ಕಾಂಗ್ರೆಸ್ ನ ಜಮಾನೆ ಮೇನ್ ಕಮಿಟಿ ಹೋತಿ ಥಿ ಜೋ ಥಪ್ಪ ಲಗತಿ ಥೀ’. ನಮ್ಮ ಸಮಿತಿಯು ಚರ್ಚೆಗಳ ಆಧಾರದ ಮೇಲೆ ಚರ್ಚಿಸುತ್ತದೆ. ಚರ್ಚಿಸುತ್ತದೆ ಮತ್ತು ಬದಲಾವಣೆಗಳನ್ನು ಮಾಡುತ್ತದೆ. ಬದಲಾವಣೆಗಳನ್ನು ಒಪ್ಪಿಕೊಳ್ಳದಿದ್ದರೆ, ಸಮಿತಿಯ ಅರ್ಥವೇನು?” ಎಂದು ಪ್ರಶ್ನಿಸಿದ್ದಾರೆ. https://twitter.com/ANI/status/1907327177223442459 ವಕ್ಫ್…

Read More

ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸುವ ಕುರಿತ ಗೌರವಾನ್ವಿತ ಸ್ಪೀಕರ್ ಅವರ ನಿರ್ಧಾರವು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಆಡಳಿತ ಪಕ್ಷದ ಹಿರಿಯ ಸಚಿವರಾದ ರಾಜಣ್ಣ ಅವರು ಸದನದ ಒಳಗೆ ಬಂದು ಅಂಗಲಾಚಿದ್ದಾರೆ. ಹನಿಟ್ರ್ಯಾಪ್ ಗೆ ಒಳಗಾಗಿದ್ದೇನೆ; ರಾಜ್ಯ ಹಾಗೂ ದೇಶದ 48ಕ್ಕೂ ಹೆಚ್ಚು ರಾಜಕಾರಣಿಗಳು ಹನಿಟ್ರ್ಯಾಪ್‍ಗೆ ಒಳಗಾಗಿದ್ದಾರೆ ಎಂದು ಬಹಿರಂಗವಾಗಿ ಸದನದಲ್ಲಿ ತಿಳಿಸಿದ ಸಂದರ್ಭದಲ್ಲಿ ಆ ಸಚಿವರಿಗೆ ರಕ್ಷಣೆ ಕೊಡುವ ಕರ್ತವ್ಯ ಸಭಾನಾಯಕರಾದ ಮುಖ್ಯಮಂತ್ರಿಗಳದು; ಅದೇ ರೀತಿ ಮಾನ್ಯ ಸಭಾಪತಿಗಳದ್ದು ಎಂದರು. ಸದನದ 224 ಶಾಸಕರ ಮೇಲೂ ಕಳಂಕ ಬಂದಿದೆ. ಈ 224 ಶಾಸಕರಿಗೆ ರಕ್ಷಣೆ ಕೊಡುವ ಸ್ಥಾನದಲ್ಲಿ ಸಭಾಧ್ಯಕ್ಷರು ಕುಳಿತಿದ್ದಾರೆ. ನಮಗೆ ರಕ್ಷಣೆ ಕೊಡಿ ಎಂದು ವಿಪಕ್ಷವಾಗಿ ನಾವು ಸಚಿವರ ಪರವಾಗಿ ಹೋರಾಟ ಮಾಡಿದರೆ ನಮ್ಮನ್ನು ಕತ್ತು ಹಿಡಿದು ಹೊರದಬ್ಬುವ ಕೆಲಸ ಮಾಡಿದ್ದು ಇದು ಖಂಡಿತ ಸರಿಯಲ್ಲ ಎಂದು…

Read More

ಬೆಳಗಾವಿ: ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಅವರು ಇಂದು ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಆಶೋಕ್ ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ? ಅವರು ಸುಳ್ಳೇ ಹೇಳುವುದು. ಮೂಲ ಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ರಾಹುಲ್ ಗಾಂಧಿಯವರಿಗೆ ನಾವು ಪತ್ರ ಬರೆದಿಲ್ಲ ಆದರೆ ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆ ಎಂದರು. ಜಾತಿಗಣತಿ: ಸಚಿವರ ಅಭಿಪ್ರಾಯದ ನಂತರ ಅಂತಿಮ ತೀರ್ಮಾನ ಕಾಂಗ್ರೆಸ್ ಶಾಸಕರೇ ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಸುದ್ದಿಗಾರರ…

Read More

ಬೆಳಗಾವಿ : ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದರು. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 6928 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿವೆ ಎಂದರು. ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು. https://kannadanewsnow.com/kannada/minister-laxmi-hebbalkar-slams-bjp-for-calling-caste-census-unscientific/ https://kannadanewsnow.com/kannada/big-news-going-somewhere-and-dying-is-not-abetment-to-suicide-hc/

Read More

ಬೆಳಗಾವಿ: ಜಾತಿ ಗಣತಿ ವರದಿ ಅವೈಜ್ಞಾನಿಕ ಎಂದಿರುವ ಬಿಜೆಪಿ ವಿರುದ್ಧ ಕಿಡಿಕಾರಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬಿಜೆಪಿ ನಾಯಕರು ರಾಜ್ಯದ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲೇ. ಜಾತಿ ಗಣತಿ ಅಧ್ಯಯನ ಮಾಡಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲೇ. ಆಗಲೇ ಬಿಜೆಪಿಯವರೇ ಜಾತಿಗಣತಿಯನ್ನು ತಿರಸ್ಕರಿಸಬಹುದಿತ್ತು. ಆದರೀಗ ಬಿಜೆಪಿ ನಾಯಕರು ಜಾತಿಗಣತಿಯನ್ನು ಅವೈಜ್ಞಾನಿಕ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಕಿಡಿಕಾರಿದರು. ಪೂರ್ಣ ಚರ್ಚೆಯ ಬಳಿಕವಷ್ಟೇ ಪ್ರತಿಕ್ರಿಯಿಸುವೆ ಜಾತಿ ಗಣತಿ ವರದಿ ಇನ್ನೂ ಚರ್ಚೆಯ ಹಂತದಲ್ಲಿದೆ. ಮೊನ್ನೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆಯಷ್ಟೇ ಆಗಿದೆ. ಇದರ ಬಗ್ಗೆ ಇನ್ನಷ್ಟು ಚರ್ಚೆ ಆಗಬೇಕಿದೆ. ಸಂಪೂರ್ಣವಾಗಿ ಕ್ಯಾಬಿನೆಟ್ ನಲ್ಲಿ ಚರ್ಚೆ ಆದ ಬಳಿಕವಷ್ಟೇ ಪ್ರತಿಕ್ರಿಯಿಸುವುದಾಗಿ ಹೇಳಿದರು. ಜಾತಿಗಣತಿ ವರದಿ ಬಗ್ಗೆ…

Read More

ಬೆಳಗಾವಿ: ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದರು. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 6928 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿವೆ ಎಂದರು. ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.

Read More

ನವದೆಹಲಿ: ಇತ್ತೀಚೆಗೆ, ಭಾರತ ಸರ್ಕಾರದ ಹೊಸ ಯೋಜನೆ ‘ಪಿಎಂ ಮೋದಿ ಎಸಿ ಯೋಜನೆ 2025’ ಬಗ್ಗೆ ಮಾತನಾಡುವ ಹೊಸ ಪೋಸ್ಟ್ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ವೈರಲ್ ಆಗುತ್ತಿದೆ. ಇದರ ಅಡಿಯಲ್ಲಿ 1.5 ಕೋಟಿ 5-ಸ್ಟಾರ್ ಹವಾನಿಯಂತ್ರಣಗಳನ್ನು ಉಚಿತವಾಗಿ ವಿತರಿಸಲಾಗುವುದು. 30 ದಿನಗಳಲ್ಲಿ ಹೊಸ ಎಸಿಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿ ತ್ವರಿತವಾಗಿ ಅರ್ಜಿ ಸಲ್ಲಿಸುವಂತೆ ಪೋಸ್ಟ್ ಜನರನ್ನು ಒತ್ತಾಯಿಸಲಾಗಿತ್ತು. ಆದರೇ ಇದರ ಹಿಂದಿನ ಅಸಲಿ ಸತ್ಯ ಏನು ಅಂತ ಮುಂದೆ ಓದಿ. ಈ ಕುರಿತಂತೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು ಪಿಎಂ ಮೋದಿ ಎಸಿ ಯೋಜನೆ-2025 ಎಂಬುದು ಯಾವುದೇ ಯೋಜನೆ ಇಲ್ಲ. ಇದೊಂದು ಸುಳ್ಳು ಸುದ್ದಿಯಾಗಿದೆ. ಯಾವುದೇ ಫೈವ್ ಸ್ಟಾರ್ ರೇಟಿಂಗ್ ಹೊಂದಿರುವಂತ ಎಸಿಯನ್ನು ಈ ಯೋಜನೆಯ ಅಡಿಯಲ್ಲಿ ಉಚಿತವಾಗಿ ಜನರಿಗೆ ನೀಡಲಾಗುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಏನಿದು ಕ್ಲೈಮ್? ಇನ್ಸ್ಟಾಗ್ರಾಮ್ ಮತ್ತು ವಾಟ್ಸಾಪ್ನಂತಹ ಪ್ಲಾಟ್ಫಾರ್ಮ್ಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ಈ ಹೇಳಿಕೆಯು ಸರ್ಕಾರವು ಮೇ 2025 ರಲ್ಲಿ ಉಚಿತ ಎಸಿ ಯೋಜನೆಯನ್ನು ಹೊರತರಲಿದೆ…

Read More

ಬೆಂಗಳೂರು: ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಗೆ ಜನಿವಾರ ತೆಗೆಸಿದ ಘಟನೆ ಶಿವಮೊಗ್ಗ, ಬೀದರ್ ನಲ್ಲಿ ವರದಿಯಾಗಿತ್ತು. ಈ ಕಾರಣದಿಂದ ಪರೀಕ್ಷೆ ಬರೆಯದೇ ಅಭ್ಯರ್ಥಿಗಳು ವಾಪಾಸ್ ಆಗಿದ್ದರು. ಈ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಸಿಇಟಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ತಿಳಿಸಿದ್ದಾರೆ. ಲೋಪಗಳಾಗದಂತೆ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿತ್ತು. ಆದರೆ, ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯದ ಕಾರಣ ಪರೀಕ್ಷೆಗೆ ಅನುಮತಿ ನೀಡದಿರುವುದು ಖಂಡನೀಯ. ಎಲ್ಲಾ ಸಂಪ್ರದಾಯಗಳನ್ನು ನಾವು ಗೌರವಿಸಬೇಕು ಎಂದಿದ್ದಾರೆ. ಈ ನಡೆಯನ್ನು ನಮ್ಮ ಸರ್ಕಾರ ಒಪ್ಪುವುದಿಲ್ಲ. ಈಗಾಗಲೇ ವರದಿ ಕಳಿಸುವಂತೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳಿಂದ ವರದಿ ಬಂದ ಬಳಿಕ ವಿದ್ಯಾರ್ಥಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. https://twitter.com/KarnatakaVarthe/status/1913591617673404545

Read More

ಬೆಳಗಾವಿ: ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಈ ವೇಳೆಯಲ್ಲಿ ವಿದ್ಯಾರ್ಥಿಯೊಬ್ಬ ನನ್ನ ಲವರ್ ಎಸ್ ಎಸ್ ಎಲ್ ಸಿ ಪಾಸ್ ಆದ್ರೆ ಮಾತ್ರ ಲವ್ ಮಾಡ್ತೀನಿ ಅಂತ ಹೇಳಿದ್ದಾಳೆ. ನನ್ನ ಪ್ರೀತಿ ನಿಮ್ಮ ಕೈಯಲ್ಲಿದೆ. ಪ್ಲೀಸ್ ಪಾಸ್ ಮಾಡಿ ಅಂತ 500 ರೂಪಾಯಿ ನೋಟು ಇರಿಸಿರೋ ವಿಚಿತ್ರ ಘಟನೆ ವರದಿಯಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೌಲ್ಯ ಮಾಪನ ಕೇಂದ್ರದಲ್ಲಿ ಇಂತದ್ದೊಂದು ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಎಸ್ ಎಸ್ ಎಲ್ ಸಿ ಉತ್ತರ ಪರೀಕ್ಷೆಯ ಮೌಲ್ಯ ಮಾಪನದ ವೇಳೆಯಲ್ಲಿ ವಿದ್ಯಾರ್ಥಿಯೊಬ್ಬನ ವಿಚಿತ್ರ ಪತ್ರ ಪತ್ತೆಯಾಗಿದೆ. ಹೀಗಿದೆ ಪತ್ರದಲ್ಲಿನ ವಿದ್ಯಾರ್ಥಿ ಬೇಡಿಕೆ ಸರ್ ರೀ, ಮೇಡಂ ರೀ, ನಿಮ್ಮ ಕಾಲ ಬೀಳತ್ತೀನೆ. ನನ್ನ ಲವ್ ನಿಮ್ಮ ಕೈಯಾಗ ಅಯಿತಿ ರೀ. ನಾ ಪೇಪರ್ ದಾಗ ಪಾಸ್ ಆದರ ಅಷ್ಟೇ ಲವ್ ಮಾಡತ್ತನೆ ಅಂದಾಳ ರೀ ನನ್ನ ಹುಡುಗಿ. ಈ 500…

Read More

ಬೆಂಗಳೂರು: ಬೀದರ್ ನಗರದಲ್ಲಿ ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಗೆ ಜನಿವಾರ ತೆಗೆಸಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಜಿಲ್ಲಾಧಿಕಾರಿಗಳು ಕೆಇಎಗೆ ವರದಿಯಲ್ಲಿ ನೀಡಿದ್ದರು. ಈ ವರದಿ ಆಧರಿಸಿ ತಪ್ಪಿತಸ್ಥ ಪ್ರಿನ್ಸಿಪಾಲ್, ತಪಾಸಣಾ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಕೆ.ಜಿ ಜಗದೀಶ್ ಆದೇಶಿಸಿದ್ದಾರೆ. ಬೀದರ್ ನಗರದ ಸಾಯಿ ಸ್ಪೂರ್ತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದಂತ ಸಿಇಟಿ ಪರೀಕ್ಷೆ ವೇಳೆಯಲ್ಲಿ ಜನಿವಾರ ತೆಗೆಸಿದ ಆರೋಪ ಕೇಳಿ ಬಂದಿತ್ತು. ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದಂತ ಅಭ್ಯರ್ಥಿಯು ಜನಿವಾರ ತೆಗೆಯದ ಕಾರಣ ಸಾಯಿ ಸ್ಪೂರ್ತಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಚಂದ್ರಶೇಖರ ಬಿರಾದಾರ್ ಹಾಗೂ ತಪಾಸಣಾ ಸಿಬ್ಬಂದಿ ಸತೀಶ್ ಪವಾರ್ ಸಿಇಟಿ ಪರೀಕ್ಷೆಗೆ ಅವಕಾಶ ನೀಡಿರಲಿಲ್ಲ. ಇದು ವಿವಾದಕ್ಕೆ ಕಾರಣವಾಗಿತ್ತು. ಇಂದು ಈ ಘಟನೆ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬೀದರ್ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದರು. ಈ ವರದಿಯನ್ನು ಆಧರಿಸಿ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಕೆ.ಜಿ ಜಗದೀಶ್ ಅವರು…

Read More