Author: kannadanewsnow09

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಅಧಿಕಾರ ಅಧಿಕಾರಿಗಳ ಕೈಯಲ್ಲೇ ಇದ್ದು, ಸಚಿವರು ಮನೆಯಲ್ಲಿ ಮಜಾ ಮಾಡುತ್ತಿದ್ದಾರೆ. ವಸತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ವಾಣಿಯನ್ನು ಬದಲಿಸಿದ ಅಧಿಕಾರಿಯ ವಿರುದ್ಧ ಕೂಡಲೇ ಕ್ರಮ ವಹಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳು ಹುಚ್ಚುಚ್ಚಾಗಿ ಮನಸ್ಸಿಗೆ ಬಂದಂತೆ ಕೆಲಸ ಮಾಡುತ್ತಿದ್ದಾರೆ. ವಿಧಾನಸೌಧದ ಮುಂಭಾಗ ‘ಸರ್ಕಾರದ ಕೆಲಸ ದೇವರ ಕೆಲಸ’ ಎಂಬ ಘೋಷವಾಕ್ಯವಿದೆ. ಯಾರೋ ಕಾರ್ಯದರ್ಶಿಗಳು ಬಂದು ಅದನ್ನು ತೆಗೆದುಹಾಕಿ ಎಂದರೆ ಹೇಗಿರುತ್ತದೆ? ಶಾಲೆಯಲ್ಲಿ ಕೈ ಮುಗಿದು ಒಳಗೆ ಬನ್ನಿ ಎಂದರೆ ತಪ್ಪೇನು? ಬೇರೆ ದೇಶದ ಅಧ್ಯಕ್ಷರು ನಮ್ಮ ದೇಶಕ್ಕೆ ಬಂದರೆ ಕೈ ಮುಗಿಯುತ್ತಾರೆ. ಇದೇ ನಮ್ಮ ಸಂಸ್ಕೃತಿ ಎಂದರು. ಈ ಕಾಂಗ್ರೆಸ್‌ ಸರ್ಕಾರಕ್ಕೆ ಕೇಡುಗಾಲ ಬಂದಿದೆ. ಯಾವುದೇ ಆದೇಶವೇ ಇಲ್ಲದೆ ಈ ಘೋಷವಾಕ್ಯವನ್ನು ಬದಲಿಸಿದ್ದಾರೆ. ಇಲ್ಲಿ ಸರ್ಕಾರ ಸತ್ತಿದೆಯೇ ಬದುಕಿದೆಯೇ ಎಂದು ಗೊತ್ತಿಲ್ಲ. ಕಳೆದ ಬಾರಿ ಇದ್ದ ಸಿದ್ದರಾಮಯ್ಯ ಈಗ ಇಲ್ಲ. ಅವರಿಗೆ ಸರ್ಕಾರದ ಮೇಲೆ ಯಾವುದೇ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ BMTC ನೌಕರರ ಕುಟುಂಬಕ್ಕೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಬೆಂ.ಮ.ಸಾ.ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಅವಲಂಬಿತರಿಗೆ ಆರ್ಥಿಕ ಭದ್ರತೆ ಒದಗಿಸುವ ಹಿತದೃಷ್ಟಿಯಿಂದ ರೂ.1.00 ಕೋಟಿಯ ವಿಮಾ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಮೃತ ಸಿಬ್ಬಂದಿಗಳ ಅವಲಂಬಿತ ಕುಟುಂಬದವರಿಗೆ ಅನುಕೂಲವಾಗುವಂತೆ ಇಲಾಖಾ ಗುಂಪು ವಿಮಾ ಪರಿಹಾರ ರೂ.3.00 ಲಕ್ಷಗಳ ವಿಮಾ ಪರಿಹಾರವನ್ನು 2008ನೇ ಸಾಲಿನಿಂದ ಜಾರಿಗೆ ತರಲಾಗಿದ್ದು, ಪ್ರಸ್ತುತ ಈ ಯೋಜನೆಯು ಜಾರಿಯಲ್ಲಿರುತ್ತದೆ ಎಂದಿದೆ. ದೇಶದ ರಸ್ತೆ ಸಾರಿಗೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕೆನರಾ ಬ್ಯಾಂಕ್‌ನಲ್ಲಿ ವೇತನ ಖಾತೆ ಹೊಂದಿ ರಸ್ತೆ ಅಪಘಾತದಿಂದ ಮರಣ ಹೊಂದಿದ ಸಿಬ್ಬಂದಿಗಳ ಕುಟುಂಬದವರಿಗೆ ರೂ.30.00 ಲಕ್ಷಗಳ ವಿಮಾ ಪರಿಹಾರವನ್ನು ಪಾವತಿಸಲು ದಿನಾಂಕ:10.08.2022 ರಂದು ಕೆನರಾ ಬ್ಯಾಂಕ್ ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಒಟ್ಟು 06 ಮೃತ ಸಿಬ್ಬಂದಿಗಳ ಅವಲಂಬಿತ ಕುಟುಂಬದವರಿಗೆ ರೂ.30.00 ಲಕ್ಷಗಳಂತೆ ವಿಮಾ ಪರಿಹಾರ ಮೊತ್ತವನ್ನು…

Read More

ಬೆಂಗಳೂರು: ಕೆಎಸ್ ಆರ್ ಟಿ ಸಿ ಬಸ್ಸಿನ ಅಪಘಾತದಲ್ಲಿ‌ ಮೃತಪಟ್ಟ ಪ್ರಯಾಣಿಕರ ಅವಲಂಬಿತರಿಗೆ ಮೊದಲ ಬಾರಿಗೆ ರೂ.10 ಲಕ್ಷ ಅಪಘಾತ ಪರಿಹಾರ ಚೆಕ್ ವಿತರಣೆ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ನಿಗಮವು, ಇಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ  ಅವರು ಹಾಗೂ ಅಧ್ಯಕ್ಷರು ಕ ರಾ ರ ಸಾ ನಿಗಮ ಎಸ್ ಆರ್ ಶ್ರೀನಿವಾಸ್(ವಾಸು) ಅವರು, ನಿಗಮದ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಪ್ರಯಾಣಿಕರು ಅಪಘಾತದಲ್ಲಿ ಮೃತಪಟ್ಟ ಹಿನ್ನಲೆಯಲ್ಲಿ ಮೃತರ ಅವಲಂಬಿತರಿಗೆ ರೂ 10 ಲಕ್ಷ ಅಪಘಾತ ಪರಿಹಾರದ ಚೆಕ್ ಅನ್ನು ವಿತರಿಸಿದರು ಎಂದು ತಿಳಿಸಿದೆ. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬಸ್ಸಿನ ಅಪಘಾತದಲ್ಲಿ ಮೃತಪಟ್ಟಲ್ಲಿ ಪ್ರಯಾಣಿಕರ ಅವಲಂಬಿತರಿಗೆ ಈ ಹಿಂದೆ ರೂ. 3 ಲಕ್ಷ ಪರಿಹಾರ ಚೆಕ್ ಅನ್ನು ನೀಡಲಾಗುತ್ತಿತ್ತು. ಅವಲಂಭಿತರಿಗೆ ಹೆಚ್ಚಿನ ಆರ್ಥಿಕ ಸೌಲಭ್ಯವನ್ನು ಒದಗಿಸುವ ದೃಷ್ಟಿಯಿಂದ ದಿನಾಂಕ 01/01/2024 ರಿಂದ ಜಾರಿಗೆ ಬರುವಂತೆ ಈ ಪರಿಹಾರ ಮೊತ್ತವನ್ನು ರೂ. 10 ಲಕ್ಷಗಳಿಗೆ ಹೆಚ್ಚಿಸಲಾಗಿರುತ್ತದೆ ಎಂದು…

Read More

ಬೆಂಗಳೂರು: ಕಳೆದ ಸರ್ಕಾರ ತುಂಬಾ ಜನರನ್ನು ಬೇರೆಡೆ ನಿಯೋಜನೆ ಮಾಡಿದ್ದಾರೆ. ನನಗೂ ಕನಿಷ್ಠ 2000 ಉದ್ಯೋಗಿಗಳ ನಿಯೋಜನೆಗೆ ಮನವಿ ಸಲ್ಲಿಸಲಾಗಿದೆ. ಆದರೆ, ನಾನು ಈವರೆಗೆ ಒಬ್ಬರನ್ನೂ ನಿಯೋಜನೆ ಮಾಡಿಲ್ಲ. ಯಾರನ್ನೂ ಮೂಲ ಸ್ಥಾನದಿಂದ ನಿಯೋಜನೆಗೊಳಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದ್ದಾರೆ. ತಾಲೂಕುಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ನೌಕರರನ್ನು ಬೇರೆಡೆ ನಿಯೋಜನೆಗೊಳಿಸಲಾಗುತ್ತಿದೆ. ಉದ್ಯೋಗಿಗಳ ಕೊರತೆಯಿಂದಾಗಿ ಕಂದಾಯ ಇಲಾಖೆಯಲ್ಲಿ ಜನರಿಗೆ ಸರಿಯಾದ ಸಮಯಕ್ಕೆ ಕೆಲಸವಾಗುತ್ತಿಲ್ಲ” ಎಂದು ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೂಡ್ಲಿ ಅವರು ಪ್ರಶ್ನಿಸಿದ್ದರು. ಈ ಪ್ರಶ್ನೆಗೆ ಉತ್ತರಿಸಿದಂತ ಅವರು, “ನಿಮ್ಮ ಪರ ನಾವಿದ್ದೇವೆ. ಇದರಲ್ಲಿ ಯಾವುದೂ ರಾಜಕೀಯ ಇಲ್ಲ. ಕುಂದಾಪುರ ತಾಲೂಕಿನಲ್ಲಿ ಕಂದಾಯ ಇಲಾಖೆಯ 110 ಹುದ್ದೆಗಳ ಪೈಕಿ 70 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ. ಅಂದರೆ, ಶೇ.65ರಷ್ಟು ಸ್ಥಾನಗಳನ್ನು ಭರ್ತಿ ಮಾಡಲಾಗಿದೆ. ಉಳಿದ ಸ್ಥಾನಗಳನ್ನೂ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು” ಎಂದು…

Read More

ನವದೆಹಲಿ: ಪಶ್ಚಿಮ ಬಂಗಾಳದ ಸಂದೇಶ್ಕಾಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಸಂತ್ರಸ್ತರ ಪರವಾಗಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಯ ಸಮಯದಲ್ಲಿ ತಿರಸ್ಕರಿಸಲಾಯಿತು, ಅರ್ಜಿದಾರರು ಮನವಿಯನ್ನು ಹಿಂತೆಗೆದುಕೊಳ್ಳಲು ಪ್ರೇರೇಪಿಸಿದರು. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಾಸಿಹ್ ಅವರನ್ನೊಳಗೊಂಡ ನ್ಯಾಯಪೀಠವು ಸಂದೇಶ್ಕಾಲಿ ಪ್ರಕರಣವನ್ನು ಮಣಿಪುರದ ಪರಿಸ್ಥಿತಿಗೆ ಹೋಲಿಸುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತು. ಈ ವಿಷಯವನ್ನು ಈಗಾಗಲೇ ಸ್ವಯಂಪ್ರೇರಿತವಾಗಿ ಪರಿಗಣಿಸಿರುವ ಹೈಕೋರ್ಟ್, ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಸಮಗ್ರ ತನಿಖೆಗೆ ಆದೇಶಿಸಲು ಸೂಕ್ತವಾಗಿದೆ ಎಂದು ಅವರು ಒತ್ತಿ ಹೇಳಿದರು. ವಿಷಯದ ಗಂಭೀರತೆಯನ್ನು ಒಪ್ಪಿಕೊಂಡ ಹೈಕೋರ್ಟ್, ಪರಿಸ್ಥಿತಿಯನ್ನು ಸ್ವತಂತ್ರವಾಗಿ ನಿರ್ಣಯಿಸಲು ಉಪಕ್ರಮ ಕೈಗೊಂಡಿದೆ. ಎಸ್ಐಟಿ ತನಿಖೆಗೆ ಆದೇಶಿಸುವ ಸಾಮರ್ಥ್ಯವನ್ನು ಗುರುತಿಸಿದ ಹೈಕೋರ್ಟ್, ಸಂತ್ರಸ್ತರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಸುಪ್ರೀಂ ಕೋರ್ಟ್ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರು, ಅರ್ಜಿಯನ್ನು ಹಿಂತೆಗೆದುಕೊಂಡರು. ಪ್ರಕರಣದ ಉಸ್ತುವಾರಿಯನ್ನು ಹೈಕೋರ್ಟ್ಗೆ ವಹಿಸಲು ಅವಕಾಶ ನೀಡಿದರು. ಈ ಕ್ರಮಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿತು. ಸಂದೇಶ್ಕಾಲಿ…

Read More

ಬೆಂಗಳೂರು: ರಾಜ್ಯ ಸರ್ಕಾರ ವಸತಿ ಶಾಲೆಗಳಲ್ಲಿ ಇದುವರೆಗೂ ಇದ್ದ ಜ್ಞಾನ ದೇಗುಲವಿದು ಕೈಮುಗಿದು ಬಾ ಎಂಬ ವಾಕ್ಯವನ್ನು ಜ್ಞಾನ ದೇಗುಲವಿದು ಪ್ರಶ್ನೆ ಮಾಡಿ ಎಂದು ಮಕ್ಕಳ ಮನಸಲ್ಲಿ ಸಂಘರ್ಷ ಮೂಡಿಸುವ ಕೆಲಸ ಮಾಡಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಸಮಾಜದಲ್ಲಿ ಮಕ್ಕಳಿಂದ ಹಿಡಿದು ಎಲ್ಲರಲ್ಲಿಯೂ ಸಂಘರ್ಷ ಉಂಟು ಮಾಡಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಸರ್ಕಾರದ ವಸತಿ ಶಾಲೆಗಳಲ್ಲಿ ಅಕ್ಕಿ ಸಿಗುತ್ತಿಲ್ಲ. ಅದೇ ಕಾರಣಕ್ಕೆ ನಾವು ಖಜಾನೆ ಖಾಲಿ ಇದೆ ಅಂತ ಹೇಳುತ್ತಿದ್ದೇವೆ‌. ಅಭಿವೃದ್ಧಿಗೆ ಹಣ ಕೊಡುವುದಿಲ್ಲ. ಹಸಿವು ಮುಕ್ತ ಕರ್ನಾಟಕ ಅಂತ ಬೋರ್ಡ್ ಹಾಕಿಕೊಂಡಿದ್ದಾರೆ. ಮೊದಲು ನಿಮ್ಮ ಶಾಲಾ ಮಕ್ಕಳಿಗೆ ಅನ್ನ ಕೊಡಿ ವಿದ್ಯೆ ಕೊಡಿ. ಬಡವರಿಗೆ ಅಕ್ಕಿಯನ್ನು ನರೇಂದ್ರ ಮೋದಿ ಸರ್ಕಾರ ಕೊಡುತ್ತಿದೆ. ಅದನ್ನೂ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಅದೇ ರೀತಿ ವಿದ್ಯಾರ್ಥಿಗಳಿಗೆ ನೀಡುವ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.…

Read More

ಬೆಂಗಳೂರು: ನಗರದ ಜಾಲಹಳ್ಳಿ ಕ್ರಾಸ್ ಬಳಿಯಲ್ಲಿರುವಂತ ರಾಕ್ ಲೈನ್ ಮಾಲ್ ಗೆ ಬಿಬಿಎಂಪಿಯಿಂದ ತೆರಿಗೆ ಪಾವತಿಸದ ಕಾರಣ ಬೀಗ ಮುದ್ರೆ ಜಡಿಯಲಾಗಿತ್ತು. ಇಂತಹ ಬೀಗ ಮುದ್ರೆಯನ್ನು ತೆರವುಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ. ದಿನಾಂಕ 14-02-2024ರಂದು ಬೆಂಗಳೂರಿನ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ರಾಕ್‌ಲೈನ್ ಮಾಲ್ ಬಾಕಿ ತೆರಿಗೆ ಪಾವತಿಸದ ಕಾರಣ ಪಾಲಿಕೆ ಕಂದಾಯ ಅಧಿಕಾರಿಗಳು ಸೀಜ್ ಮಾಡಿದ್ದರು. ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರು ತೆರಿಗೆಯನ್ನು ಪಾವತಿಸಿರುವುದಿಲ್ಲ. ಹೀಗಾಗಿ ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ ಅನ್ನು ಸೀಜ್ ಮಾಡಿದ್ದರು. ಬಿಬಿಎಂಪಿ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ರಾಕ್ ಲೈನ್ ಮಾಲ್ ಮಾಲೀಕರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಬಿಬಿಎಂಪಿ ಬೀಗ ಮುದ್ರೆಯನ್ನು ತೆರವುಗೊಳಿಸುವಂತೆ ಅರ್ಜಿಯಲ್ಲಿ ಕೋರಿದ್ದರು. ಇದೀಗ ಹೈಕೋರ್ಟ್ ರಾಕ್ ಲೈನ್…

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಅಪಘಾತ ವಿಮಾ ಪರಿಹಾರವನ್ನು 1 ಕೋಟಿಗೆ ಹೆಚ್ಚಳ ಮಾಡಲಾಗಿತ್ತು. ಈ ಬೆನ್ನಲ್ಲೇ ಬಿಎಂಟಿಸಿ ನೌಕರರಿಗೂ 3 ಲಕ್ಷ ಇದ್ದಂತ ಅಪಘಾತ ವಿಮಾ ಪರಿಹಾರ ಮೊತ್ತವನ್ನು 1 ಕೋಟಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಬಿಎಂಟಿಸಿ ಎಂ.ಡಿ ರಾಮಚಂದ್ರನ್ ಅವರು, ಬಿಎಂಟಿಸಿ ನೌಕರರಿಗೆ ಅಪಘಾತ ವಿಮಾ ಪರಿಹಾರದ ಮೊತ್ತವನ್ನು 1 ಕೋಟಿಗೆ ಹೆಚ್ಚಳ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕೆಎಸ್ ಆರ್ ಟಿಸಿ ನೌಕರರಂತೆ ಬಿಎಂಟಿಸಿ ನೌಕರರಿಗೂ ಅಪಘಾತ ವಿಮಾ ಪರಿಹಾರದ ಮೊತ್ತವನ್ನು 1 ಕೋಟಿಗೆ ಹೆಚ್ಚಿಸೋದಕ್ಕೆ ಸೂಚಿಸಿದ್ದರು. ಅವರ ಸೂಚನೆ ಮೇರೆಗೆ ಹೆಚ್ಚಳ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಂದಹಾಗೇ ಈಗಾಗಲೇ ಕೆ ಎಸ್ ಆರ್ ಟಿ ಸಿ ನೌಕರರಿಗೆ ಕರ್ತವ್ಯ ನಿರತರಾದಂತ ಸಂದರ್ಭದಲ್ಲಿಯೇ ಅಪಘಾತದಿಂದ ಮೃತಪಟ್ಟರೇ ಅವರ ಅವಲಂಬಿತರು, ಕುಟುಂಬಸ್ಥರಿಗೆ 1 ಕೋಟಿ ಅಪಘಾತ ವಿಮಾ ಪರಿಹಾರವನ್ನು ಜಾರಿಗೊಳಿಸಲಾಗಿದೆ. ಆ…

Read More

ಬೆಂಗಳೂರು: ನಾವು ಕುವೆಂಪು ಅವರ ತತ್ವ ಸಿದ್ಧಾಂತ ಪಾಲನೆ, ಪ್ರಚಾರ ಮಾಡುತ್ತಿರುವವರು. ಈ ಘೋಷವಾಕ್ಯ ಬದಲಾವಣೆ ಅಗತ್ಯವೇನಿದೆ ಎಂದು ಕೇಳಿದಾಗ, “ಶಾಲೆಗಳಿಗೆ ಕೈಮುಗಿದು ಹೋಗುವುದರಲ್ಲಿ ತಪ್ಪೇನಿಲ್ಲ. ಹನುಮಂತಯ್ಯನವರು ಸರ್ಕಾರಿ ಕೆಲಸ ದೇವರ ಕೆಲಸ ಎಂದು ಹೇಳಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಾವು ಕುವೆಂಪು ಅವರ ಆಚಾರ, ವಿಚಾರ ಪ್ರಚಾರ ಮಾಡುತ್ತಿದ್ದೇವೆ. ಕುವೆಂಪು ಅವರ “ಭಾರತ ಜನನಿಯ ತನುಜಾತೆ…”, “ಸರ್ವಜನಾಂಗದ ಶಾಂತಿಯ ತೋಟ…” ಸಂದೇಶವನ್ನು ಪ್ರತಿನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯದ ಜನರಿಗೆ ಹೇಳುತ್ತಾ ಬಂದಿದ್ದೇವೆ. ಕುವೆಂಪು ಅವರ ತತ್ವ ಸಿದ್ಧಾಂತಗಳನ್ನು ನಾವು ಪಾಲಿಸಿ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಎಲ್ಲದರಲ್ಲೂ ತಪ್ಪು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಜನರ ಬದುಕಿನ ಬಗ್ಗೆ…

Read More

ಬೆಂಗಳೂರು: ಸಾಗುವಳಿ ಭೂ ಮಂಜೂರಾತಿಗಾಗಿ ಬಗರ್ ಹುಕುಂ (ಅಕ್ರಮ ಸಕ್ರಮ) ಯೋಜನೆಯ ಅಡಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ಭರವಸೆ ನೀಡಿದರು. ಅಲ್ಲದೇ ಬಗರ್ ಹುಕುಂ ಅಡಿ ಒಬ್ಬರಿಂದಲೇ 25 ಅರ್ಜಿ ಸಲ್ಲಿಸಿರೋ ಶಾಕಿಂಗ್ ಮಾಹಿತಿಯನ್ನು ಸದನದ ಮುಂದೆ ಬಿಚ್ಚಿಟ್ಟರು. ಸೋಮವಾರ ಪ್ರಶ್ನೋತ್ತರ ಅವಧಿಯ ವೇಳೆ ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಬಗರ್ ಹುಕುಂ ಯೋಜನೆ ಅಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಅನರ್ಹಗೊಂಡ ಅರ್ಜಿಗಳ ಸಂಖ್ಯೆ ಎಷ್ಟು? ಮತ್ತು ಅನರ್ಹಗೊಳಿಸಲು ಕಾರಣವೇನು? ಎಂದು ಪ್ರಶ್ನಿಸಿದ್ದರು. ಬಗರ್ ಹುಕುಂ ದುರುಯೋಗ: ಸಚಿವರು ವಿಷಾದ ಬಡವರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಜಾರಿಗೆ ತಂದಿರುವ ಬಗರ್ ಹುಕುಂ ಯೋಜನೆಯನ್ನು ಅನೇಕರು ಉದ್ದೇಶಪೂರ್ವಕವಾಗಿ ದುರುಪಯೋಗಗೊಳಿಸುತ್ತಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಷಾದ ವ್ಯಕ್ತಪಡಿಸಿದರು. ಕೆಲವರು ಬಗರ್ ಹುಕುಂ ಜಮೀನು ಮಂಜೂರಾತಿಗೆ 25ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಕಾನೂನಿನ ಪ್ರಕಾರ ಅರ್ಜಿದಾರರಿಗೆ 2005ಕ್ಕೆ ಕನಿಷ್ಠ 18 ವರ್ಷವಾಗಿರಬೇಕು.…

Read More