Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಜಾತ್ಯಾತೀತವಾಗಿ, ಪಕ್ಷಾತೀತವಾಗಿ, ನಾವೆಲ್ಲಾ ಒಂದೇ ತಾಯಿಯ ಮಕ್ಕಳಂತೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ರವರು ತೋರಿಸಿರುವ ಹಾದಿಯಲ್ಲಿ ಒಟ್ಟಾಗಿ ನಡೆಯೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೋಮವಾರ ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ರವರ 134 ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂಘಟನೆಯಿAದ ಮಾತ್ರ ಶಕ್ತಿ ಎಂದು ಅಂಬೇಡ್ಕರ್ರವರು ತೋರಿಸಿದ್ದಾರೆ. ಸಂಘಟನೆ ರೂಪ ಬೇರೆ ಬೇರೆಯಾಗಿದ್ದರೂ ಉದ್ದೇಶ ಒಂದೇ ಇರುತ್ತದೆ. ಅಂದು ಬ್ರಿಟಿಷರಿಗೆ ಹೆಚ್ಚಿನ ಶಕ್ತಿ ಇರಲಿಲ್ಲ. ಬದಲಾಗಿ ಅವರು ನಮ್ಮನ್ನು ಒಡೆದು ಆಳುವ ನೀತಿಯನ್ನು ಅನುಸರಿಸಿದ್ದರಿಂದ ಹಾಗೆ ಕಂಡರು. ಎಲ್ಲರನ್ನು ಒಗ್ಗೂಡಿಸುವ ಕೆಲಸವನ್ನು ಅಂಬೇಡ್ಕರ್ರAತಹ ಮಹನೀಯರು ಮಾಡಿದರು. ವೈವಿಧ್ಯತೆಯಿಂದ ಕೂಡಿರುವ ನಮ್ಮ ದೇಶಕ್ಕೆ ಅದ್ಭುತವಾದ ಸಂವಿಧಾನ ನೀಡುವಲ್ಲಿ ಬಹು…
ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯುತ್ತದೆ. ಬಂಧೂಗಳೇ ಪ್ರತಿಯೊಬ್ಬ ಮನುಷ್ಯನೂ ಮುಂದುವರೆಯ ಬೇಕು ಎಂದರೆ ಮಹಾ ಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ ಆಗುತ್ತದೆ ಯಾವುದೇ ಒಂದು ಕ್ಷೇತ್ರದಲ್ಲಿ ನೋಡಿದರೂ ಹಣ ಬೇಕೆ ಬೇಕು ಎಂತಹ ಕ್ಷೇತ್ರದಲ್ಲಿ ಅಂತಿಮವಾಗಿ ಹಣವೇ ಒಂದು ಅಂತಿಮವಾಗಿ ಗೋಚರಿಸುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ…
ಬೆಂಗಳೂರು: ನಗರದಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ, ಪರಾರಿಯಾಗಿದ್ದಂತ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಂತೋಷ್ ಎಂಬುದಾಗಿ ಗುರುತಿಸಲಾಗಿದೆ. ಏಪ್ರಿಲ್.3ರಂದು ಬೆಂಗಳೂರಿನ ಎಸ್ ಜಿ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾನೆ ಯುವತಿಯ ಮೇಲೆ ಎರಗಿದ್ದಂತ ಕಾಮುಕ ಆರೋಪಿ ಸಂತೋಷ್, ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದನು. ಕಳೆದ 10 ದಿನಗಳಿಂದ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ಇಂದು ಕೇರಳದಲ್ಲಿ ಆರೋಪಿ ಸಂತೋಷ್ ನನ್ನು ಬಂಧಿಸಿರುವಂತ ಎಸ್ ಜಿ ಪಾಳ್ಯ ಪೊಲೀಸರು, ಬೆಂಗಳೂರಿಗೆ ಕರೆತರುತ್ತಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಏಪ್ರಿಲ್.3ರಂದು ತನ್ನ ಸ್ನೇಹಿತೆ ಜೊತೆಗೆ ಯುವತಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ಲೈಂಗಿಕ ದೌರ್ಜನ್ಯವನ್ನು ಎಸಗಿ ಆರೋಪಿ ಪರಾರಿಯಾಗಿದ್ದನು. ಸಂತ್ರಸ್ತೆ ಹಾಗೂ ಆರೋಪಿಗೂ ಯಾವುದೇ ಪರಿಚಯ ಇರಲಿಲ್ಲ. ಘಟನೆಯ ಬಳಿಕ ಬೆಂಗಳೂರು ನಗರ ತೊರೆದು ಪರಾರಿಯಾಗಿದ್ದನು. ಈ ಘಟನೆಯ ಸಂಬಂಧ ಸ್ಥಳೀಯ ನಿವಾಸಿಯೊಬ್ಬರು ಎಸ್ ಜಿ ಪಾಳ್ಯ ಠಾಣೆಯ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆದರಿಸಿ ಡಿಸಿಪಿ ಸಾರಾ…
ಲಿಂಗಸುಗೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿತ್ತಿದ್ದಂತ ವೇಳೆಯಲ್ಲೇ ವೇದಿಕೆಯ ಕಡೆಗೆ ವ್ಯಕ್ತಿಯೊಬ್ಬ ಮಚ್ಚು ಹಿಡಿದು ನುಗ್ಗಿ, ಆತಂಕ ಸೃಷ್ಠಿಸಿದಂತ ಘಟನೆ ನಡೆದಿದೆ. ಲಿಂಗಸುಗೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶ್ರೀರಾಮ ಸೇನೆಯಿಂದ ಹಮ್ಮಿಕೊಂಡಿದ್ದಂತ ಸಮಾರಂಭದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಗಿಯಾಗಿದ್ದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕ ಯತ್ನಾಶ್ ಮಾತನಾಡೋದಕ್ಕೆ ಪ್ರಾರಂಭಿಸಿದ ಬಳಿಕ, ವೇದಿಕೆಯ ಹಿಂಭಾಗದಿಂದ ದಿಢೀರ್ ಮಚ್ಚು ಹಿಡಿದು ವ್ಯಕ್ತಿಯೊಬ್ಬ ನುಗ್ಗಿದ್ದಾನೆ. ವೇದಿಕೆಯ ಮೇಲೆ ದಿಢೀರ್ ಹಿಂದಿನಿಂದ ಮಚ್ಚು ಹಿಡಿದು ನುಗ್ಗಿ ಬಂದಂತ ವ್ಯಕ್ತಿಯನ್ನು ಗಮನಿಸಿದಂತ ಕಾರ್ಯಕರ್ತರು, ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ದಿಢೀರ್ ನಡೆದಂತ ಈ ಘಟನೆಯಿಂದ ಕೆಲ ಕಾಲ ಆಂತಕಕ್ಕೂ ಕಾರಣವಾಗಿತ್ತು. ಶಾಸಕ ಯತ್ನಾಳ್ ಕೂಡ ಗಲಿಬಿಲಿಗೊಂಡಿದ್ದರು. https://kannadanewsnow.com/kannada/bjp-files-complaint-against-kanhaiya-kumar-for-derogatory-remarks-against-rss-pm-modi/ https://kannadanewsnow.com/kannada/mayawati-rejoins-bsp-nephew-akash-anand/
ನವದೆಹಲಿ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಕ್ಷಮಿಸಿ, “ಪಕ್ಷದ ಹಿತಾಸಕ್ತಿಗಿಂತ ಹೆಚ್ಚು ಮುಖ್ಯವೆಂದು ಪರಿಗಣಿಸಲಾದ ಅವರ ಮಾವನ ನಿರಂತರ ಪ್ರಭಾವಕ್ಕೆ ಒಳಗಾಗಿದ್ದಕ್ಕಾಗಿ” ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಂತರ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡರು. X ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ತಮ್ಮ ಸೋದರಳಿಯನಿಗೆ ಅವರಿಗೆ ಇನ್ನೂ ಒಂದು ಅವಕಾಶ ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಆಕಾಶ್ ಆನಂದ್ ಅವರು ಇಂದು X ನಲ್ಲಿ ತಮ್ಮ ತಪ್ಪುಗಳನ್ನು ಒಪ್ಪಿಕೊಂಡರು. ಹಿರಿಯ ನಾಯಕರ ಬಗ್ಗೆ ಸಂಪೂರ್ಣ ಗೌರವವನ್ನು ವ್ಯಕ್ತಪಡಿಸಿದರು ಮತ್ತು ಭವಿಷ್ಯದಲ್ಲಿ ತಮ್ಮ ಮಾವನಿಂದ ಪ್ರಭಾವಿತರಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು. ಇದರಲ್ಲಿ ಅವರು ತಮ್ಮ ತಪ್ಪುಗಳನ್ನು ಒಪ್ಪಿಕೊಂಡರು. ಹಿರಿಯ ನಾಯಕರ ಬಗ್ಗೆ ಸಂಪೂರ್ಣ ಗೌರವವನ್ನು ವ್ಯಕ್ತಪಡಿಸಿದರು. ಅವರಿಗೆ ಇನ್ನೂ ಒಂದು ಅವಕಾಶ ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಯಾವತಿ ಹೇಳಿದರು. https://twitter.com/Mayawati/status/1911432602566672637 ನನ್ನ ವಿಷಯದಲ್ಲಿ, ನಾನು…
ನವದೆಹಲಿ: ಹಿಂದಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕಾಂಗ್ರೆಸ್ ಮುಖಂಡರು ಪ್ರಧಾನಿಯನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ ಮತ್ತು ಆರ್ಎಸ್ಎಸ್ ಕಾರ್ಯಕರ್ತರಿಗೆ ಆಕ್ಷೇಪಾರ್ಹ ಭಾಷೆಯನ್ನು ಬಳಸಿದ್ದಾರೆ ಎಂದು ಬಿಹಾರ ಬಿಜೆಪಿ ಹೇಳಿದೆ. ಅಲ್ಲದೇ ಆರ್ ಎಸ್ ಎಸ್, ಬಿಜೆಪಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಕನ್ಹಯ್ಯ ಕುಮಾರ್ ವಿರುದ್ಧ ದೂರು ನೀಡಿದೆ. ಭಾರತೀಯ ಜನತಾ ಪಕ್ಷದ ಬಿಹಾರ ರಾಜ್ಯ ಮಾಧ್ಯಮ ಉಸ್ತುವಾರಿ ಡ್ಯಾನಿಶ್ ಇಕ್ಬಾಲ್ ಅವರು ಪಾಟ್ನಾದ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ ದೂರಿನ ಮೇರೆಗೆ ಬಿಹಾರ ಪೊಲೀಸರು ಭಾನುವಾರ (ಏಪ್ರಿಲ್ 13, 2025) ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದ್ದಾರೆ. ಹಿಂದಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕನ್ಹಯ್ಯ ಕುಮಾರ್ ಅವರು ಪ್ರಧಾನಿಯನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕರ್ತರಿಗೆ ಆಕ್ಷೇಪಾರ್ಹ ಭಾಷೆಯನ್ನು ಬಳಸಿದ್ದಾರೆ ಎಂದು ದೂರಿನಲ್ಲಿ ಇಕ್ಬಾಲ್ ಆರೋಪಿಸಿದ್ದಾರೆ. ದೇಶದ ಪ್ರಜಾಪ್ರಭುತ್ವ ರಚನೆಯಲ್ಲಿ ಆಯ್ಕೆಯಾದ ಪ್ರಧಾನಿಯನ್ನು ಭಯೋತ್ಪಾದಕ ಎಂದು…
ಬೆಂಗಳೂರು: ನಗರದಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ನಡೆದಿದೆ. ಬೆಂಗಳೂರಲ್ಲಿ ಅಪಾರ್ಮೆಂಟ್ 4ನೇ ಮಹಡಿಯಿಂದ ಜಿಗಿದು ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಅಪಾರ್ಮೆಂಟ್ ಒಂದರ 4ನೇ ಮಹಡಿಯಿಂದ ಜಿಗಿದು ದಂತ ವೈದ್ಯಕೀಯ ವಿದ್ಯಾರ್ಥಿನಿ ಸೌಮ್ಯ(19) ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಪರೀಕ್ಷೆ ವಿಚಾರವಾಗಿ ಭಯಗೊಂಡಿದ್ದಂತ ವಿದ್ಯಾರ್ಥಿನಿ ಸೌಮ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗುತ್ತಿದೆ. ಈ ಹಿಂದೆಯೂ ಆತ್ಮಹತ್ಯೆಗೆ ಡೆಂಟಲ್ ವಿದ್ಯಾರ್ಥಿನಿ ಸೌಮ್ಯ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/india-successfully-test-fires-laser-based-weapons-for-the-first-time/ https://kannadanewsnow.com/kannada/5-year-old-girls-murder-case-in-hubballi-accused-shot-dead-by-police/
ಹುಬ್ಬಳ್ಳಿ: ಇಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರ ಮೂಲದ ರಿತೇಶ್ ಎಂಬಾತ ಕರೆದೊಯ್ದು ಹತ್ಯೆ ಮಾಡಿದ್ದನು. ಇಂದು ಆತನನ್ನು ಬಂಧಿಸೋದಕ್ಕೆ ತೆರಳಿದ್ದಂತ ಸಂದರ್ಭದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳೋದಕ್ಕೆ ಹಲ್ಲೆಗೆ ಮುಂದಾಗಿದ್ದನು. ಈ ವೇಳೆ ಪೊಲೀಸರು ನಡೆಸಿದಂತ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಇಡೀ ರಾಜ್ಯವೇ ಮಮ್ಮಲ ಮರುಗಿದ್ದಂತ ಹುಬ್ಬಳ್ಳಿಯ 5 ವರ್ಷದ ಬಾಲಕಿ ಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ಬಂಧಿಸೋದಕ್ಕೆ ತೆರಳಿದಂತ ವೇಳೆಯಲ್ಲಿ ಬಿಹಾರ ಮೂಲದ ಆರೋಪಿ ರಿತೇಶ್ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದನು. ಈ ಸಂದರ್ಭದಲ್ಲಿ ಓರ್ವ ಪಿಎಸ್ಐ, ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದರು. ಪೊಲೀಸರು ಆತ್ಮ ರಕ್ಷಣೆಗಾಗಿ ನಡೆಸಿದಂತ ಗುಂಡಿನ ದಾಳಿಯಲ್ಲಿ ಆರೋಪಿ ರಿತೇಶ್ ಎದೆ ಸೀಳಿತ್ತು. ಹೀಗಾಗಿ ಸ್ಥಳದಲ್ಲೇ ಹುಬ್ಬಳ್ಳಿಯ 5 ವರ್ಷದ ಬಾಲಕಿ ಹತ್ಯೆ ಆರೋಪಿ ಬಲಿಯಾಗಿದ್ದಾನೆ.
ನವದೆಹಲಿ: ವೈಮಾನಿಕ ಬೆದರಿಕೆಗಳ ವಿರುದ್ಧ ಲೇಸರ್ ಆಧಾರಿತ ಶಸ್ತ್ರಾಸ್ತ್ರವನ್ನು ಪರೀಕ್ಷಿಸಿದ ಭಾರತವು ಮೊದಲ ಬಾರಿಗೆ ಯುಎಸ್, ಚೀನಾ ಮತ್ತು ರಷ್ಯಾದೊಂದಿಗೆ ಸೇರಿಕೊಂಡಿದೆ. ಪ್ರಮುಖ ತಾಂತ್ರಿಕ ಪ್ರಗತಿಯಲ್ಲಿ, ಡ್ರೋನ್ಗಳು ಮತ್ತು ಇತರ ವೈಮಾನಿಕ ಬೆದರಿಕೆಗಳನ್ನು ತಟಸ್ಥಗೊಳಿಸಲು ಹೆಚ್ಚಿನ ಶಕ್ತಿಯ ಲೇಸರ್ ಶಸ್ತ್ರಾಸ್ತ್ರಗಳನ್ನು ನಿಯೋಜಿಸುವ ಸಾಮರ್ಥ್ಯ ಹೊಂದಿರುವ ಆಯ್ದ ರಾಷ್ಟ್ರಗಳ ಗುಂಪಿಗೆ ಭಾರತ ಸೇರಿಕೊಂಡಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ತನ್ನ ದೇಶೀಯವಾಗಿ ಅಭಿವೃದ್ಧಿಪಡಿಸಿದ ಎಂಕೆ -2 (ಎ) ಲೇಸರ್-ಡೈರೆಕ್ಟ್ ಎನರ್ಜಿ ವೆಪನ್ (ಡಿಇಡಬ್ಲ್ಯು) ವ್ಯವಸ್ಥೆಯನ್ನು ಕರ್ನೂಲ್ನ ರಾಷ್ಟ್ರೀಯ ಮುಕ್ತ ವಾಯು ಶ್ರೇಣಿಯಲ್ಲಿ (ಎನ್ಒಎಆರ್) ಯಶಸ್ವಿಯಾಗಿ ಪ್ರದರ್ಶಿಸಿತು. https://twitter.com/ANI/status/1911368349537181977 ಸುದ್ದಿ ಸಂಸ್ಥೆ ಎಎನ್ಐ ಉಲ್ಲೇಖಿಸಿದ ಡಿಆರ್ಡಿಒ ಅಧಿಕಾರಿಗಳ ಪ್ರಕಾರ, 30 ಕಿಲೋವ್ಯಾಟ್ ಲೇಸರ್ ಕಿರಣದಿಂದ ಚಾಲಿತವಾದ ಈ ವ್ಯವಸ್ಥೆಯು ಸ್ಥಿರ-ರೆಕ್ಕೆ ಡ್ರೋನ್ಗಳು, ಸಮೂಹ ಡ್ರೋನ್ಗಳು, ಕಣ್ಗಾವಲು ಸಂವೇದಕಗಳು ಮತ್ತು ಆಂಟೆನಾಗಳನ್ನು ಮಿಂಚಿನ ವೇಗ ಮತ್ತು ನಿಖರತೆಯೊಂದಿಗೆ ತೊಡಗಿಸಿಕೊಳ್ಳಬಹುದು ಮತ್ತು ನಾಶಪಡಿಸಬಹುದು. ಈ ಯಶಸ್ವಿ ಪ್ರಯೋಗವು ಇದೇ ರೀತಿಯ ಉನ್ನತ-ಶಕ್ತಿಯ ಲೇಸರ್ ಸಾಮರ್ಥ್ಯಗಳನ್ನು…
ಕೊಪ್ಪಳ: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್ ಕಾಂತರಾಜು ನೇತೃತ್ವದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವರದಿ ಬಗ್ಗೆ ವಾಸ್ತವ ಸತ್ಯ ತಿಳಿಯದೆ ಮಾತನಾಡುವುದು ಸರಿಯಲ್ಲ. ಎಲ್ಲಾ ಸಚಿವರಿಗೂ ವರದಿ ಪ್ರತಿ ಕಳುಹಿಸಲಾಗುತ್ತಿದೆ. ವರದಿ ಓದಿ ತಿಳಿದುಕೊಳ್ಳಬೇಕು ಎಂದುಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣತಿ ವಾಸ್ತವ ಸತ್ಯ ಯಾರಿಗೂ ಗೊತ್ತಿಲ್ಲ. ಈಗಾಗಲೇ 26 ಮಂತ್ರಿಗಳಿಗೆ ವರದಿ ಪ್ರತಿ ಕಳುಹಿಸಲಾಗಿದೆ. ಎಲ್ಲಾ ಮಂತ್ರಿಗಳಿಗೂ ಪ್ರತಿ ಕಳುಹಿಸಲಾಗುವುದು. ಜಾತಿ ಲೆಕ್ಕ ಹಾಕಲು ಗಣತಿ ಮಾಡಿಲ್ಲ. ಎಲ್ಲ ಸಮುದಾಯಗಳಲ್ಲಿ ವಿದ್ಯಾವಂತರು, ಅವಿದ್ಯಾವಂತರು ಎಷ್ಟಿದ್ದಾರೆ? ಆಸ್ತಿ ಎಷ್ಟಿದೆ? ಬಡವರು ಎಷ್ಟಿದ್ದಾರೆ? ಉದ್ಯೋಗದಲ್ಲಿ ಎಷ್ಟು ಮಂದಿ ಇದ್ದಾರೆ ಇತ್ಯಾದಿ ಮಾಹಿತಿ ಸಂಗ್ರಹಿಸಲು ಈ ಜಾತಿ ಗಣತಿ ಮಾಡಿಸಲಾಗಿದೆ ಎಂದು ತಿಳಿಸಿದರು. ಇಲ್ಲಿ ನಮಗೆ ಜಾತಿ ಲೆಕ್ಕವಲ್ಲ. ರಾಜ್ಯದ ಪ್ರತಿ ವಿಧಾನಸಭಾವಾರು ಸಮುದಾಯಗಳ ಸ್ಥಿತಿಗತಿ ಕುರಿತ ಮಾಹಿತಿ ಒಳಗೊಂಡ 50…














