Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಗುಣಮಟ್ಟದ ಶಿಕ್ಷಣ, ಪೌಷ್ಠಿಕ ಆಹಾರ ಎಲ್ಲಾ ವರ್ಗದ ಮಕ್ಕಳಿಗೂ ದೊರೆಯಬೇಕೆಂಬ ಆಶಯದಿಂದ ರಾಜ್ಯ ಸರ್ಕಾರ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಟ್ಟೆಗಾರಪಾಳ್ಯದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಹೊಸದಾಗಿ ಆರಂಭಿಸಿದ ಸರ್ಕಾರಿ ಮಾಂಟೆಸ್ಸರಿ – ಪೂರ್ವ ಪ್ರಾಥಮಿಕ ಕೇಂದ್ರ (ಎಲ್ ಕೆಜಿ, ಯುಕೆಜಿ ತರಗತಿಗಳಿಗೆ ಚಾಲನೆ ನೀಡಿದ ನಂತರ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. ನಮ್ಮ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಮಕ್ಕಳ ಆರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಒತ್ತು ನೀಡಿದೆ. ನಮ್ಮ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಿ – ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲು ಸರ್ಕಾರ ಮುಂದಾಗಿದೆ ಎಂದರು. ಅಂಗನವಾಡಿ…
ಬೆಂಗಳೂರು : ಸರ್ಕಾರಕ್ಕೆ ಏನೇ ಸವಾಲುಗಳು ಎದುರಾದರೂ ಸಹ ಮುಂದಿನ ಮೂರು ವರ್ಷದಲ್ಲಿ ಎಲ್ಲಾ 64 ಹೊಸ ತಾಲೂಕುಗಳಿಗೂ ಸ್ವಂತ ಆಡಳಿತ ಕಚೇರಿ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು. ವಿಧಾನಸಭೆಯಲ್ಲಿ ಸೋಮವಾರ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಅವರ ಗಮನ ಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಅವರು, “ಹೊಸ ತಾಲೂಕುಗಳಲ್ಲಿ ಎಲ್ಲಾ ಇಲಾಖೆಗಳ ಕಚೇರಿಗಳನ್ನು ಆರಂಭಿಸುವ ಬಗ್ಗೆ ನಾನು ಉತ್ತರ ನೀಡುವುದು ಸಮಂಜವಲ್ಲ. ಮುಖ್ಯಮಂತ್ರಿಯವರ ಕಡೆಯಿಂದ ಉತ್ತರ ಕೊಡಿಸಲು ಪ್ರಯತ್ನಿಸುತ್ತೇನೆ. ಆದರೆ, ಹೊಸ ತಾಲೂಕುಗಳಿಗೆ ಸ್ವಂತ ಆಡಳಿತ ಕಚೇರಿ ನಿರ್ಮಾಣದ ಬಗ್ಗೆ ಸರ್ಕಾರ ಗಂಭೀರವಾಗಿದ್ದು, ಮುಂದಿನ ಮೂರು ವರ್ಷದಲ್ಲಿ ಪೂರೈಸಲಾಗುವುದು. ಹೊಸ ತಾಲೂಕುಗಳು ರಚನೆಯಾಗಿ 6 ವರ್ಷಗಳಾಗಿದ್ದರೂ 14 ತಾಲೂಕುಗಳಲ್ಲಿ ಮಾತ್ರ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಉಳಿದ ತಾಲೂಕುಗಳಿಗೆ ಇನ್ನೂ ಸರ್ಕಾರಿ ಕಟ್ಟಡಗಳು ಮಂಜೂರೇ ಆಗಿಲ್ಲ. ಈ ಬಗ್ಗೆ ನಾನು ಹಿಂದಿನ ಅಧಿವೇಶನದಲ್ಲೇ ಹೇಳಿದ್ದೇನೆ. ಮುಂದಿನ ಮೂರು ವರ್ಷದಲ್ಲಿ ಎಲ್ಲಾ ಹೊಸ ತಾಲೂಕುಗಳಿಗೂ ತಾಲೂಕು ಆಡಳಿತ…
ಬೆಂಗಳೂರು: ಇಂದು ಬೆಂ.ಮ.ಸಾ.ಸಂಸ್ಥೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅನುಕಂಪದ ಆಧಾರದಡಿಯಲ್ಲಿ ಮೃತರ ಅವಲಂಬಿತರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದರು. ಬಿ.ಎಂ.ಟಿ..ಸಿ ಯಲ್ಲಿ ಕಳೆದ ಒಂದು ವರ್ಷದಲ್ಲಿ ಒಟ್ಟು 298 ಮೃತ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡಲಾಗಿದೆ. ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿಗಾಗಿ ನಿರೀಕ್ಷಣೆಯಲ್ಲಿದ್ದ ಮೃತಾವಲಂಭಿತ ಅಭ್ಯರ್ಥಿಗಳ ಪೈಕಿ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಈ ಹಿಂದೆ ಸುಮಾರು 250 ಮೃತಾವಲಂಭಿತರುಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ. ಪ್ರಸ್ತುತ ಖಾಲಿ ಇರುವ ಕ.ರಾ.ಸಾ. ಪೇದೆ, ತಾಂತ್ರಿಕ ಸಹಾಯಕ ಮತ್ತು ಸಹಾಯಕ (ಕಛೇರಿ) ಒಟ್ಟು 48 ಹುದ್ದೆಗಳಿಗೆ ಅನುಕಂಪದ ಆಧಾರದ ಮೇಲೆ ಇಂದು ನೇಮಕಾತಿ ಮಾಡಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ರಾಮಚಂದ್ರನ್.ಆರ್, ಭಾ.ಆ.ಸೇ, ಬೆಂ.ಮ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ಮಾಹಿತಿ ತಂತ್ರಜ್ಞಾನದ ನಿರ್ದೇಶಕರು ಶಿಲ್ಪ.ಎಂ, ಭಾ.ಆ.ಸೇ, ಎಲ್ಲಾ ಇಲಾಖಾ ಮುಖ್ಯಸ್ಥರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಬೆಂ.ಮ.ಸಾ.ಸಂಸ್ಥೆಯು ಕೈಗೊಂಡಿರುವ ಕಾರ್ಮಿಕ ಕಲ್ಯಾಣ ಕಾರ್ಯಗಳು • ಈ ಸಾಲಿನಲ್ಲಿ 2500 ನಿರ್ವಾಹಕರ ನೇಮಕಾತಿ…
ಬೆಂಗಳೂರು: ನಗರದಲ್ಲಿ ಕಾರು ಚಾಲನಾ ತರಬೇತಿದಾರರೊಬ್ಬರು ಯುವತಿಯೊಂದಿಗೆ ವಿಕೃತಿ ಮೆರೆದಿದ್ದರು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಆ ಡ್ರೈವಿಂಗ್ ಸ್ಕೂಲ್ ಲೈಸೆನ್ಸ್, ಚಾಲಕನ ಲೈಸೆನ್ಸ್ ರದ್ದು ಮಾಡಲು ಆದೇಶಿಸಿದ್ದಾರೆ. ಬೆಂಗಳೂರು ಬಸವೇಶ್ವರನಗರದ ಮಾರುತಿ ಡ್ರೈವಿಂಗ್ ಸ್ಕೂಲ್ ನ ತರಬೇತುದಾರ ಅಣ್ಣಪ್ಪ ಎಂಬಾತನು ಕಾರು ಚಾಲನೆ ಕಲಿಯಲು ಬಂದ ಯುವತಿಯನ್ನು ಜೂನ್-7 ರಂದು ಬೆಳಗ್ಗೆ 06.00 ಗಂಟೆಗೆ ಬಸವೇಶ್ವರನಗರ ನ್ಯಾಷನಲ್ ಶಾಲೆ ಮೆಲ್ಸೇತುವೆಯಲ್ಲಿ ಕಾರು ಚಾಲನೆ ಮಾಡುವ ವೇಳೆ ಪಕ್ಷದ ಅಸನದಲ್ಲಿ ಕುಳಿತಿದ್ದ ಅಣ್ಣಪ್ಪ ಅಸಭ್ಯ ವರ್ತನೆ ಆರಂಭಿಸಿ, ಕಾರು ಚಾಲನೆ ತರಬೇತಿ ನೆಪದಲ್ಲಿ ಅನುಚಿತವಾಗಿ ವರ್ತಿಸಿ ಮುಜಗರ ಉಂಟು ಮಾಡಿರುವುದರ ಬಗ್ಗೆ ಕಾನೂನು ಕ್ರಮಕ್ಕೆ ಯುವತಿಯು ದೂರು ಸಲ್ಲಿಸಿರುವುದಾಗಿ ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ. ಈ ವಿಷಯವನ್ನು ತೀರಾ ಗಂಭಿರವಾಗಿ ಪರಿಗಣಿಸಿರುವ ಮಾನ್ಯ ಸಾರಿಗೆ ಸಚಿವರು ಬಸವೇಶ್ವರ ನಗರದ ಮಾರುತಿ ಡೈವಿಂಗ್ ಸ್ಕೂಲ್ ನ ಪರವಾನಗಿಯನ್ನು ಕೂಡಲೇ ರದ್ದುಪಡಿಸಿ, ಚಾಲಕ ಅಣ್ಣಪ್ಪರವರ ಚಾಲನಾ ಪರವಾನಗಿಯನ್ನು ಸಹ ರದ್ದುಪಡಿಸುವಂತೆ ಹಾಗೂ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವಂತ ನಟ ದರ್ಶನ್ ಅವರು, ತಮಗೆ ಜೈಲೂಟ ಬೇಡ, ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೇ ಕೋರ್ಟ್ ವಾದ- ಪ್ರತಿವಾದವನ್ನು ಆಲಿಸಿದ ನಂತ್ರ, ತೀರ್ಪನ್ನು ಜುಲೈ.25ಕ್ಕೆ ಕಾಯ್ದಿರಿಸಿದೆ. ಹೀಗಾಗಿ ನಟ ದರ್ಶನ್ ಗೆ ಜೈಲೂಟವೇ ಗತಿ ಎನ್ನುವಂತೆ ಆಗಿದೆ. ಇಂದು ನಟ ದರ್ಶನ್ ಪರ ವಕೀಲರು ಜೈಲೂಟದಿಂದ ತಮ್ಮ ಕಕ್ಷಿದಾರರು ತೂಕ ಇಳಿಕೆಯಾಗಿದ್ದಾರೆ. ಅವರಿಗೆ ಮನೆಯೂಟಕ್ಕೆ ಅವಕಾಶ ನೀಡಬೇಕು. ಓದೋದಕ್ಕೆ ಪುಸ್ತಕ, ಹಾಸಿಗೆ ಅವಕಾಶ ನೀಡಬೇಕು ಅಂತ ನ್ಯಾಯಪೀಠವರನ್ನು ಕೋರಿದರು. ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ಈ ್ಪರಕರಣದ ಅರ್ಜಿಯ ವಿಚಾರಣೆ ನಡೆಯಿತು. ಪೊಲೀಸರ ಪರ ಜೈಲು ನಿಯಮಾವಳಿಗಳಲ್ಲಿ ಮನೆಯೂಟಕ್ಕೆ ಅವಕಾಶವಿಲ್ಲ. ಅವಕಾಶ ನೀಡಿದರೂ 15 ದಿನಗಳ ಕಾಲ ಮಾತ್ರವೇ ಅವಕಾಶ ನೀಡಲು ನಿಯಮಾವಳಿಯಿದೆ ಅಂತ ಮನವರಿಕೆ ಮಾಡಿದರು. ಈ ವಾದ ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು, ನಟ ದರ್ಶನ್ ಅವರು ಜೈಲೂಟ ಬೇಡ,…
ಮಂಡ್ಯ: ಕಾವೇರಿ ನದಿಗೆ ವಾರಾಣಸಿಯಲ್ಲಿನ ಗಂಗಾ ನದಿಗೆ ಮಾಡಲಾಗುವ ಗಂಗಾ ಆರತಿಯ ಮಾದರಿಯಲ್ಲಿ ಆರತಿ ಕಾರ್ಯಕ್ರಮ ಆಯೋಜಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೆ, ಇದಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಶಾಸಕರು, ಅಧಿಕಾರಿಗಳ ಸಮಿತಿಯನ್ನು ರವಿಸುವುದಾಗಿಯೂ ಘೋಷಿಸಿದ್ದಾರೆ. ಈ ಸಂಬಂಧ ಶಾಸಕ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದನ್ನು ಸಹ ಡಿಸಿಎಂ ಪ್ರಸ್ತಾಪ ಮಾಡಿದ್ದು, ಕೂಡಲೇ ಸ್ಪಂದಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಕಾವೇರಿ ನೀರಾವರಿ ನಿಗಮದ ವತಿಯಿಂದ ಸೋಮವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದು, ಗಂಗಾ ಆರತಿಯ ಅಧ್ಯಯನಕ್ಕೆ ತಂಡ ರಚಿಸುವುದಾಗಿ ಘೋಷಿಸಿದರು. ಡಿಸಿಎಂಗೆ ಮನವಿ ಮಾಡಿದ ಶಾಸಕ ದಿನೇಶ್ ಗೂಳಿಗೌಡ ದೇಶದ ಪವಿತ್ರ ನದಿಗಳಲ್ಲಿ ಕಾವೇರಿ ಕೂಡ ಒಂದು. ಭಾಗಮಂಡಲದಲ್ಲಿ ಉದಯವಾಗಿ ತಮಿಳುನಾಡಿನ ಮಾಯಿಲಾಡುತುರೈ ಜಿಲ್ಲೆಯ ಪುಂಪುರಃ ಎಂಬಲ್ಲಿ ಬಂಗಾಳಕೊಲ್ಲಿ ಸೇರುತ್ತದೆ. ನದಿಯು ರಾಜ್ಯದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ವ್ಯವಸಾಯ ಮಾಡಲು ಅನುಕೂಲವಾಗುತ್ತಿದೆ. ಕಾವೇರಿಯಿಂದ ಬೆಂಗಳೂರು, ಮೈಸೂರು, ಮಂಡ್ಯ, ಬೆಂಗಳೂರು…
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ. ಅಂದಹಾಗೇ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಸಂಬಂಧ ಎರಡು ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಭೇಟಿಯಾಗಬಾರದು. ಅರ್ಜಿದಾರರು ಇದೇ ರೀತಿಯ ಅಪರಾಧವನ್ನು ಮಾಡಬಾರದು. ಅರ್ಜಿದಾರರು ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಸೇರಿದಂತೆ ವಿವಿಧ ಷರತ್ತುಗಳನ್ನು ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಾನಪರಿಷತ್ ಸದಸ್ಯ ಸೂರಜ್…
ಬೆಂಗಳೂರು: ಕೃಷಿಭೂಮಿ ಪರಿವರ್ತೆ ಆಗದಿದ್ದರೂ ನಿವೇಶನಗಳಾಗಿ ನೋಂದಣಿಯಾಗುತ್ತಿದ್ದು, ಇಂತಹ ಅನಧಿಕೃತ ಬಡಾವಣೆಗಳ ನೋಂದಣಿಗೆ ಕಡಿವಾಣ ಹಾಕುವ ನಿರ್ಧಾರದಿಂದ ನಮ್ಮ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ಸೋಮವಾರ ಸಬ್ ರಿಜಿಸ್ಟ್ರಾರ್ಗಳ ವರ್ಗಾವಣೆ ಹಾಗೂ ಅನಧಿಕೃತ ಬಡಾವಣೆಗಳ ನೋಂದಣಿಗೆ ಸಂಬಂಧಿಸಿ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ಕಾನೂನು ಬದ್ಧವಾಗಿ ಪರಿವರ್ತನೆ ಆಗದಿದ್ದರೂ ಕೃಷಿಭೂಮಿಗಳನ್ನು ನಿವೇಶನಗಳನ್ನಾಗಿ ಅನಧಿಕೃತ ನೋಂದಣಿ ಮಾಡಲಾಗುತ್ತಿದೆ ಎಂಬುದು ನಿಜ. ಹೀಗೆ ಹೇಳಲು ನಮಗೂ ವಿಷಾದವಿದೆ. ಏಕೆಂದರೆ, ಕೆಲವರು ಅಕ್ರಮವನ್ನು ಕ್ರಮಬದ್ಧವಾಗಿ ಮಾಡುತ್ತಿದ್ದಾರೆ. ಆದರೆ, ಕಳೆದ ಅಧಿವೇಶನದಲ್ಲಿ ನೀಡಿದ ಮಾತಿನಂತೆ ಈ ಅಕ್ರಮಗಳನ್ನು ತಡೆಯಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಭರವಸೆ ನೀಡಿದರು. “ಈ ಅಕ್ರಮವನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರೂ ಸಹ ಸಂಕಲ್ಪ ಮಾಡಿದ್ದಾರೆ. ಆದರೆ, ನಾನೇ ಹೋಗಿ ನಿಲ್ಲಿಸುತ್ತೇನೆ ಎಂಬುದು ಸಾಧ್ಯವಿಲ್ಲ. ಏಕೆಂದರೆ ನಾವು ಚಾಪೆ ಕೆಳಗೆ ನುಸುಳಿದರೆ, ರಂಗೋಲಿ…
ಬೆಂಗಳೂರು: ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಗೆ ( Yuvanidhi Scheme ) ನೋಂದಣೆ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನೋಂದಣಿ ಆಹ್ವಾನಿಸಿದೆ. 2022-23ನೇ ಹಾಗೂ ನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ರೂ. 3000/- (ಪದವೀಧರ ನಿರುದ್ಯೋಗಿಗಳು) ಹಾಗೂ ರೂ. 1500/- (ಡಿಪ್ಲೋಮಾ ಪಡೆದ ನಿರುದ್ಯೋಗಿಗಳು) ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ಗ್ರಾಮ ಒನ್, ಶಿವಮೊಗ್ಗ ಒನ್ ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳು ನೇರ ನಗದು ಖಾತಗೆ ಜಮಾ ಆಗುವುದಿಲ್ಲ. ಆದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಸ್ವಯಂ ಘೋಷಣೆ ಮಾಡುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ…
ನವದೆಹಲಿ: ಭಾರತ ಸೇರಿದಂತೆ ವಿಶ್ವದಾಧ್ಯಂತ ಮೈಕ್ರೋಸಾಫ್ಟ್ ಬಳಿಕ, ಈಗ ಯೂಟ್ಯೂಬ್ ( YouTube ) ಸರ್ವರ್ ಡೌನ್ ಆಗಿರುವುದಾಗಿ ವರದಿಯಾಗಿದೆ. ಯೂಟ್ಯೂಬ್ ಡೌನ್ ಆಗಿರುವ ಕಾರಣ, ಬಳಕೆದಾರರು ಪರದಾಡುವಂತಾಗಿದೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿವೆ. ಯೂಟ್ಯೂಬ್ ಭಾರತದಲ್ಲಿ ಹಲವಾರು ಬಳಕೆದಾರರಿಗೆ ಸ್ಥಗಿತವನ್ನು ಅನುಭವಿಸುತ್ತಿದೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ ವರದಿಗಳು ಹೊರಬರಲು ಪ್ರಾರಂಭಿಸಿದವು, ಅನೇಕ ಬಳಕೆದಾರರು ತಮ್ಮ ಹತಾಶೆಯನ್ನು ವ್ಯಕ್ತಪಡಿಸಲು ಮತ್ತು ಉತ್ತರಗಳನ್ನು ಹುಡುಕಲು ಸಾಮಾಜಿಕ ಮಾಧ್ಯಮವನ್ನು (ಮುಖ್ಯವಾಗಿ ಎಕ್ಸ್- ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ತೆಗೆದುಕೊಂಡರು. ಸ್ಥಗಿತ ವರದಿಗಳು ಮತ್ತು ಬಳಕೆದಾರ ಪ್ರತಿಕ್ರಿಯೆಗಳು ಇಂದು ಕಾಣಿಸಿಕೊಂಡ ಸ್ಥಗಿತವು ಹಲವಾರು ಭಾರತೀಯ ಬಳಕೆದಾರರ ಮೇಲೆ ಪರಿಣಾಮ ಬೀರುತ್ತಿದೆ. ಕೆಲವರು ಯಾವುದೇ ಸಮಸ್ಯೆಗಳಿಲ್ಲದೆ ಸೈಟ್ ಅನ್ನು ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದರೇ, ಕೆಲವರು ವೀಡಿಯೊಗಳನ್ನು ಲೋಡ್ ಮಾಡುವಾಗ ಅಥವಾ ಪ್ಲಾಟ್ಫಾರ್ಮ್ ಅನ್ನು ಸಂಪೂರ್ಣವಾಗಿ ಪ್ರವೇಶಿಸುವಾಗ ಸಮಸ್ಯೆಗಳನ್ನು ಎದುರಿಸುತ್ತಿರುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. https://twitter.com/Network10Update/status/1815318391034630640 #YouTubeDown ನಂತಹ ಹ್ಯಾಶ್ ಟ್ಯಾಗ್ ಎಕ್ಸ್ ಪ್ಲಾಟ್ ಫಾರ್ಮ್ ಗಳಲ್ಲಿ…