Author: kannadanewsnow09

ಬೆಂಗಳೂರು: ಕಂದಾಯ ಇಲಾಖೆಯ ( Revenue Department ) ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ( Village Accountants Recruitment – VA ) ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು. “ತಾಲೂಕುಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ನೌಕರರನ್ನು ಬೇರೆಡೆ ನಿಯೋಜನೆಗೊಳಿಸಲಾಗುತ್ತಿದೆ. ಉದ್ಯೋಗಿಗಳ ಕೊರತೆಯಿಂದಾಗಿ ಕಂದಾಯ ಇಲಾಖೆಯಲ್ಲಿ ಜನರಿಗೆ ಸರಿಯಾದ ಸಮಯಕ್ಕೆ ಕೆಲಸವಾಗುತ್ತಿಲ್ಲ” ಎಂದು ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೂಡ್ಲಿ ಅವರು ಪ್ರಶ್ನಿಸಿದ್ದರು. ಶಾಸಕರಾದ ಕಿರಣ್ ಕುಮಾರ್ ಕೂಡ್ಲಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ನಿಮ್ಮ ಪರ ನಾವಿದ್ದೇವೆ. ಇದರಲ್ಲಿ ಯಾವುದೂ ರಾಜಕೀಯ ಇಲ್ಲ. ಕುಂದಾಪುರ ತಾಲೂಕಿನಲ್ಲಿ ಕಂದಾಯ ಇಲಾಖೆಯ 110 ಹುದ್ದೆಗಳ ಪೈಕಿ 70 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ. ಅಂದರೆ, ಶೇ.65ರಷ್ಟು ಸ್ಥಾನಗಳನ್ನು ಭರ್ತಿ…

Read More

ಬೆಂಗಳೂರು : ಸಾಗುವಳಿ ಭೂ ಮಂಜೂರಾತಿಗಾಗಿ ಬಗರ್ ಹುಕುಂ (ಅಕ್ರಮ ಸಕ್ರಮ) ಯೋಜನೆಯ ಅಡಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ಭರವಸೆ ನೀಡಿದರು. ಸೋಮವಾರ ಪ್ರಶ್ನೋತ್ತರ ಅವಧಿಯ ವೇಳೆ ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಬಗರ್ ಹುಕುಂ ಯೋಜನೆ ಅಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಅನರ್ಹಗೊಂಡ ಅರ್ಜಿಗಳ ಸಂಖ್ಯೆ ಎಷ್ಟು? ಮತ್ತು ಅನರ್ಹಗೊಳಿಸಲು ಕಾರಣವೇನು? ಎಂದು ಪ್ರಶ್ನಿಸಿದ್ದರು. ಈ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಬಗರ್ ಹುಕುಂ ಕಾನೂನನ್ನು ಜಾರಿಗೆ ತಂದಿರುವುದೇ ಬಡವರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ. ಅರ್ಹ ಫಲಾನುಭವಿಗಳಿಗೆ ಭೂ ಮಂಜೂರು ಮಾಡುವುದು ಸರ್ಕಾರದ ಕರ್ತವ್ಯವೂ ಹೌದು. ಹೀಗಾಗಿ ತಿರಸ್ಕೃತ ಅಥವಾ ಅನರ್ಹಗೊಂಡ ಬಗರ್ ಹುಕುಂ ಅರ್ಜಿಗಳಲ್ಲಿ ತಪ್ಪಾಗಿದ್ದರೆ, ನಿಯಮ ಮೀರಿ ಅನರ್ಹಗೊಂಡಿದ್ದರೆ ಮತ್ತೊಮ್ಮೆ ಪುನರ್ ಪರಿಶೀಲನೆಗೆ ಸೂಚಿಸಲಾಗುವುದು” ಎಂದು ಭರವಸೆ ನೀಡಿದರು. ಬಗರ್ ಹುಕುಂ ಅರ್ಜಿಗಳನ್ನು ಅನರ್ಹಗೊಳಿಸಲು ಕಾರಣವೇನು? ಎಂಬ ಬಗ್ಗೆಯೂ ಮಾಹಿತಿ ನೀಡಿದ ಸಚಿವರು,”ಗೋಮಾಳ ಜಮೀನಿನ…

Read More

ಪಶ್ಚಿಮ ಬಂಗಾಳ: ರಿಪಬ್ಲಿಕ್ ಟಿವಿ ಪತ್ರಕರ್ತ ಸಂತು ಪಾನ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಸೋಮವಾರ ಸಂದೇಶ್ಖಾಲಿಯಲ್ಲಿ ಬಂಧಿಸಿದ್ದಾರೆ. ಈ ವಿಷಯವನ್ನು ಎಕ್ಸ್ (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ಬಂಗಾಳ ಬಿಜೆಪಿ ರಾಜ್ಯ ಅಧ್ಯಕ್ಷ ಡಾ.ಸುಕಾಂತ ಮಜುಂದಾರ್, “ಸ್ಥಳೀಯರು ಎದುರಿಸುತ್ತಿರುವ ದೌರ್ಜನ್ಯಗಳ ಬಗ್ಗೆ ವರದಿ ಮಾಡಿದ್ದಕ್ಕಾಗಿ ಪಶ್ಚಿಮ ಬಂಗಾಳ ಪೊಲೀಸರು ಸಂದೇಶ್ಖಾಲಿಯಿಂದ ವರದಿಗಾರ ಸಂತು ಪಾನ್ ಅವರನ್ನು ಇಂದು ಬಂಧಿಸಿದ್ದಾರೆ. ಇದು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭದ ಮೇಲಿನ ಬೃಹತ್, ಅಮಾನವೀಯ ಮತ್ತು ನೇರ ದಾಳಿಯಾಗಿದೆ. https://twitter.com/DrSukantaBJP/status/1759583400342822973 ಪಾನ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ, “ನನ್ನ ವರದಿಗಾರನಿಗೆ ಸಾರ್ವಜನಿಕ ಸಾರಿಗೆಯಲ್ಲಿ ಹೋಗಲು ಅವಕಾಶ ನೀಡಲಿಲ್ಲ, ಒಂದೇ ಸ್ಥಳದಲ್ಲಿ ಮೂರರಿಂದ ನಾಲ್ಕು ಗಂಟೆಗಳ ಕಾಲ ನಿಲ್ಲುವಂತೆ ಮಾಡಲಾಯಿತು. ನಂತರ ಯಾವುದೇ ನೋಟಿಸ್ ನೀಡದೆ ಅವರನ್ನು ದೈಹಿಕವಾಗಿ ಎಳೆದೊಯ್ದರು. ಕೊಲೆಗಾರನಿಗೂ ತನ್ನ ನಿರಪರಾಧಿತ್ವವನ್ನು ಸಾಬೀತುಪಡಿಸಲು ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ. ಸಂದೇಶ್ಖಾಲಿ ಪ್ರಕರಣದಲ್ಲಿ ಸತ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ರಿಪಬ್ಲಿಕ್ ಬಾಂಗ್ಲಾ ವರದಿಗಾರನನ್ನು…

Read More

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ರಾತ್ರಿ ಲಘು ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 5.5 ರಷ್ಟಿತ್ತು ಎಂದು ಕಾಶ್ಮೀರ ಹವಾಮಾನ ಇಲಾಖೆ ತಿಳಿಸಿದೆ. ಭೂಕಂಪದ ಆಳ 10 ಕಿ.ಮೀ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ 9ಎನ್ಸಿಎಸ್ ಪ್ರಕಾರ, ಭೂಕಂಪದ ಕೇಂದ್ರಬಿಂದು ಲಡಾಖ್ನ ಕಾರ್ಗಿಲ್ನ ವಾಯುವ್ಯಕ್ಕೆ 148 ಕಿ.ಮೀ ದೂರದಲ್ಲಿದೆ. ಶ್ರೀನಗರದಲ್ಲೂ ಭೂಕಂಪದ ಅನುಭವವಾಗಿದೆ. ಭೂಕಂಪನದ ನಂತರ ಈ ಪ್ರದೇಶವನ್ನು ಭೀತಿ ಆವರಿಸಿದೆ. ಭೂಕಂಪದಿಂದಾಗಿ ಯಾವುದೇ ಗಾಯಗಳು ಅಥವಾ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/ANI/status/1759614105881555355

Read More

ನವದೆಹಲಿ: ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಪ್ರತಿಭಟನಾ ನಿರತ ರೈತರು ಕೇಂದ್ರ ಸರ್ಕಾರ ಮುಂದಿನ ಐದು ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ಐದು ಬೆಳೆಗಳನ್ನು ಖರೀದಿಸುವುದಾಗಿ ರೈತರ ಮುಂದಿಟ್ಟ ಪ್ರಸ್ತಾವನೆಯನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದಾರೆ. ಈ ಕುರಿತಂತೆ ಶಂಭು ಗಡಿಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್, “… ಎರಡೂ ವೇದಿಕೆಗಳ ಚರ್ಚೆಯ ನಂತರ, ನೀವು ವಿಶ್ಲೇಷಿಸಿದರೆ, ಸರ್ಕಾರದ ಪ್ರಸ್ತಾಪದಲ್ಲಿ ಏನೂ ಇಲ್ಲ ಎಂದು ನಿರ್ಧರಿಸಲಾಗಿದೆ… ಇದು ರೈತರ ಪರವಾಗಿಲ್ಲ. ನಾವು ಅದನ್ನು ತಿರಸ್ಕರಿಸುತ್ತೇವೆ ಎಂದಿದ್ದಾರೆ. https://twitter.com/ANI/status/1759610633937408178 ಮುಂದಿನ ಐದು ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್ಪಿ) ಐದು ಬೆಳೆಗಳನ್ನು ಖರೀದಿಸುವ ಕೇಂದ್ರದ ಪ್ರಸ್ತಾಪವನ್ನು ರೈತ ಮುಖಂಡರು ಸೋಮವಾರ ಸಂಜೆ ತಿರಸ್ಕರಿಸಿದರು ಮತ್ತು ಫೆಬ್ರವರಿ 21 ರಂದು ಪಂಜಾಬ್-ಹರಿಯಾಣ ಶಂಭು ಗಡಿಯಿಂದ ರಾಷ್ಟ್ರ ರಾಜಧಾನಿಗೆ ತಮ್ಮ ‘ದೆಹಲಿ ಚಲೋ’ ಮೆರವಣಿಗೆಯನ್ನು ಪುನರಾರಂಭಿಸುವುದಾಗಿ ಘೋಷಿಸಿದರು.

Read More

ಬೆಂಗಳೂರು: ಅನಾರೋಗ್ಯದಿಂದ ಅಕಾಲಿಕ ಮರಣಕ್ಕೆ ತುತ್ತಾದ ಈ ಬಡತಾಯಿಯ ಮಗನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ‘ಗೃಹಲಕ್ಷ್ಮಿ ಯೋಜನೆ ದುಡ್ಡು ನಿನಗೆ ಬರುತ್ತೆ, ನಾನಿಲ್ಲ ಎಂದು ಚಿಂತಿಸಬೇಡ’ ಎಂದು ಮಗನ ಮಾತನ್ನು ನೆನಪು ಮಾಡಿಕೊಂಡು ಆತನ ಶವದೆದುರು ತಾಯಿ ರೋದಿಸುತ್ತಿರುವುದನ್ನು ನೋಡಿ ಎದೆ ಭಾರವಾಯಿತು. ಯಾವ ತಾಯಿಗೂ ಎದೆಯೆತ್ತರಕ್ಕೆ ಬೆಳೆದ ಮಗನ ಚಿತೆಗೆ ಅಗ್ನಿಸ್ಪರ್ಶ ಮಾಡುವ ಸ್ಥಿತಿ ಬಾರದಿರಲಿ ಎಂದು ಕಂಬನಿ ಮಿಡಿದ್ದಾರೆ. ನಾವು ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿದ ದಿನದಿಂದ ಇಂದಿನ ವರೆಗೆ ಕೆಲವರಿಂದ ಅಪಪ್ರಚಾರ, ಟೀಕೆ, ವ್ಯಂಗ್ಯಗಳು ವ್ಯಕ್ತವಾಗುತ್ತಲೇ ಇದೆ, ಇದಾವುದಕ್ಕೂ ನಾನು ತಲೆಕೆಡಿಕೊಂಡಿಲ್ಲ. ಕಾರಣ ಇಂತಹ ಲಕ್ಷಾಂತರ ಬಡತಾಯಂದಿರಿಗೆ ನಮ್ಮ ಯೋಜನೆ ಮೂರು ಹೊತ್ತು ನೆಮ್ಮದಿಯ ಅನ್ನ ನೀಡಿ ಬದುಕಿಗೆ ಆಧಾರವಾಗಿದೆ. ಬಡತನ, ಹಸಿವು, ಅನಾಥಭಾವ ಅನುಭವಿಸಿದವರಿಗಷ್ಟೇ ಅದರ ನೋವು, ಹತಾಶೆ ಅರಿವಾಗಲು ಸಾಧ್ಯ ಎಂದಿದ್ದಾರೆ. ಈ ತಾಯಿಯ ಜೊತೆ ನಮ್ಮ ಸರ್ಕಾರ ಇದೆ, ಮಗನ…

Read More

ಬೆಂಗಳೂರು: ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಬಗ್ಗೆ ಮಹತ್ವದ ಮಾಹಿತಿಯನ್ನು ನಾಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಹಂಚಿಕೊಳ್ಳಲಿದ್ದಾರೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದಂತ ಮಧು ಬಂಗಾರಪ್ಪನವರು ದಿನಾಂಕ 20-02-2024ರಂದು ಬೆಳಿಗ್ಗೆ 11.30 ಗಂಟೆಗೆ ಕೊಠಡಿ ಸಂಖ್ಯೆ 112, ವಿಕಾಸಸೌಧ, ಬೆಂಗಳೂರು ಇಲ್ಲಿ 2024ರ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಕುರಿತು ವಿವರ ನೀಡುವರು. ನಾಳೆ ಬೆಳಿಗ್ಗೆ 11.30ಕ್ಕೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಬಗ್ಗೆ ಮಹತ್ವದ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ಹಂಚಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. https://kannadanewsnow.com/kannada/here-are-the-highlights-of-the-monkey-disease-control-meeting-chaired-by-todays-minister-dinesh-gundu-rao/ https://kannadanewsnow.com/kannada/hc-issues-notice-to-self-styled-godman-nithyananda-for-allegedly-holding-devotee-hostage-at-ashram/

Read More

ಬೆಂಗಳೂರು: ಇಂದು ರಾಜ್ಯದ ಮಲೆನಾಡಿನ ಬಾಗದಲ್ಲಿ ಹೆಚ್ಚಾಗುತ್ತಿರುವಂತ ಮಂಗನ ಕಾಯಿಲೆ ನಿಯಂತ್ರಣ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಏನೆಲ್ಲ ಚರ್ಚೆ ಆಯ್ತು ಅನ್ನೋ ಬಗ್ಗೆ ಹೈಲೈಟ್ಸ್ ಮುಂದೆ ಓದಿ. ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ತಾಲೂಕುಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಮಲೆನಾಡು ಭಾಗದ ಶಾಸಕರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಮಹತ್ವದ ಸಭೆ ನಡೆಸಿದರು. ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ ಸಚಿವರು, ಕಾಯಿಲೆ ನಿಯಂತ್ರಣಕ್ಕೆ ಹೆಚ್ಚಿನ ಕ್ರಮಗಳ ಕುರಿತು ಶಾಸಕರ ಅಭಿಪ್ರಾಯ ಆಲೀಸಿದರು. ಮಂಗನ ಕಾಯಿಲೆ ರೋಗಲಕ್ಷಣಗಳು ಕಂಡುಬಂದ ತಕ್ಷಣ ಟೆಸ್ಟಿಂಗ್ ಶೀಘ್ರಗತಿಯಲ್ಲಿ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ ಕೆಎಫ್.ಡಿ ಪಾಸಿಟಿವ್ ಬಂದವರನ್ನ ಕಡ್ಡಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.‌…

Read More

ಬೆಂಗಳೂರು: ಇತ್ತೀಚೆಗೆ ವಿಧಾನಸೌಧ ಮುಂಭಾಗ ನಡೆದ ಮಾನ್ಯ ಮುಖ್ಯಮಂತ್ರಿಯವರ ಜನಸ್ಪಂದನ ಕಾರ್ಯಕ್ರಮವು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಸ್ವೀಕರಿಸಿದ ಅರ್ಜಿಗಳ ಸಕಾರಾತ್ಮಕ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಅವರು ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜನಸ್ಫಂದನ ಕಾರ್ಯಕ್ರಮದ ಪರಾಮರ್ಶೆಗಾಗಿ, ಆಯೋಜನೆಯಲ್ಲಿ ಭಾಗಿಯಾದ ಅಧಿಕಾರಿಗಳ ಸಭೆ ನಡೆಸಿ ಈ ಸೂಚನೆ ನೀಡಿದರು. ಜನಸ್ಪಂದನ ಕಾರ್ಯಕ್ರಮದ ಯಶಸ್ಸಿನ ಕುರಿತು ಮಾನ್ಯ ಮುಖ್ಯಮಂತ್ರಿಯವರೂ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರು ಇದಕ್ಕೆ ಸಾಂಸ್ಥಿಕ ರೂಪ ನೀಡಿ ಇನ್ನಷ್ಟು ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಸಬೇಕೆಂದು ಅಪೇಕ್ಷಿಸಿದ್ದಾರೆ ಎಂದರು. ವಿಭಾಗ ಮಟ್ಟದಲ್ಲಿ ಜನಸ್ಪಂದನ ಜನಸ್ಪಂದನ ಕಾರ್ಯಕ್ರಮವನ್ನು ವಿಭಾಗ ಮಟ್ಟದಲ್ಲಿ ನಡೆಸುವ ಕುರಿತೂ ಸಹ ಚಿಂತನೆ ನಡೆದಿದೆ. ಮೊದಲಿಗೆ ಕಲಬುರ್ಗಿಯಲ್ಲಿ ವಿಭಾಗಮಟ್ಟದ ಜನಸ್ಪಂದನ ನಡೆಸಲು ಉದ್ದೇಶಿಸಿದೆ. ವಿಭಾಗ ಮಟ್ಟದಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಖುದ್ದು ಭಾಗವಹಿಸಲು ಸೂಚಿಸಲಾಗುವುದು ಎಂದು ತಿಳಿಸಿದರು. 11 ದಿನದಲ್ಲಿ 4321 ಅರ್ಜಿ ವಿಲೇವಾರಿ ಮೊನ್ನೆ ಸ್ವೀಕರಿಸಲಾದ 14,685 ಅರ್ಜಿಗಳ ಪೈಕಿ 4321 ಅರ್ಜಿಗಳನ್ನು ಈಗಾಗಲೇ ವಿಲೇವಾರಿ…

Read More

ತುಳಸಿ ಗಿಡವನ್ನು ಪ್ರತಿಯೊಬ್ಬರೂ ಪೂಜೆ ಮಾಡುತ್ತಾರೆ.ಬೆಳಗಿನ ಜಾವ ನೀರನ್ನು ಅರ್ಪಿಸಿ ಸಂಜೆಯ ವೇಳೆ ದೀಪವನ್ನು ಉರಿಸುತ್ತಾರೆ.ತುಳಸಿ ಪ್ರಭಾವವು ಅಧಿಕ ಪ್ರಭಾವ ಬಿರುತ್ತದೆ ಹಾಗೂ ತುಳಸಿ ಪೂಜೆ ಮಾಡುವುದರಿಂದ ಮನೆಯಲ್ಲಿ ಧನ ಸಂಪತ್ತು, ಸುಖ, ಶಾಂತಿ, ವೃದ್ಧಿಯಾಗುತ್ತದೆ. ಭಗವಂತನಾದ ಶ್ರೀವಿಷ್ಣು ಹಾಗೂ ತಾಯಿ ಲಕ್ಷ್ಮಿ ದೇವಿಯ ಕೃಪೆ ಆ ಮನೆಯಲ್ಲೂ ಕೂಡ ಇರುತ್ತದೆ.ಯಾರ ಮನೆಯಲ್ಲಿ ತುಳಸಿ ಇರುತ್ತದೆಯೋ ಹಾಗೂ ತುಳಸಿ ಪೂಜೆ ಮಾಡಿದರೆ ಅವರ ಮೇಲೆ ಎಲ್ಲಾ ದೇವನು ದೇವತೆಗಳ ಕೃಪೆ ಇರುತ್ತದೆ ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ…

Read More