Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಅಂತೂ ಇಂತೂ ಬಿಜೆಪಿಯೊಂದಿಗೆ ಕೆ ಆರ್ ಪಿ ಪಿ ಪಕ್ಷ ವಿಲೀನಕ್ಕೆ ಸರ್ವಸಮ್ಮತದ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಅಲ್ಲದೇ ಪದಾಧಿಕಾರಿಗಳು, ಬೆಂಬಗಲಿರೊಂದಿಗೆ ಬಿಜೆಪಿ ಪಕ್ಷವನ್ನು ಶಾಸಕ ಜನಾರ್ಧನ ರೆಡ್ಡಿ ನಾಳೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ಇಂದು ಈ ಸಂಬಂಧ ತಮ್ಮ ನಿವಾಸದಲ್ಲಿ ಸಭೆ ನಡೆಸಿದಂತ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಶಾಸಕ ಜನಾರ್ಧನರೆಡ್ಡಿ ಅವರು, ಬಿಜೆಪಿ ಪಕ್ಷದೊಂದಿಗೆ ಕೆ ಆರ್ ಪಿ ಪಿ ಪಕ್ಷ ವಿಲೀನಕ್ಕೆ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ. ಹೀಗಾಗಿ ನಾಳೆ ಬಿಜೆಪಿ ಪಕ್ಷದೊಂದಿಗೆ ಕೆ ಆರ್ ಪಿಪಿ ಪಕ್ಷವನ್ನು ವೀಲನಗೊಳಿಸೋದಾಗಿ ತಿಳಿಸಿದರು. ನಾಳೆ ಪಕ್ಷವನ್ನು ಬಿಜೆಪಿಜೊತೆಗೆ ವಿಲೀನಗೊಳಿಸೋದರ ಜೊತೆಗೆ, ಪದಾಧಿಕಾರಿಗಳು, ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷವನ್ನು ತಾವು ಸೇರ್ಪಡೆಯಾಗಲಿದ್ದೇನೆ. ಬೆಳಿಗ್ಗೆ 10 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿರೋದಾಗಿ ತಿಳಿಸಿದರು. https://kannadanewsnow.com/kannada/nikhil-kumaraswamy-seeks-a-days-time/ https://kannadanewsnow.com/kannada/lok-sabha-elections-2024-how-much-money-and-goods-have-been-seized-in-the-state-so-far-here-are-the-details/
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಒಂದು ದಿನ ಕಾಲಾವಕಾಶ ಕೊಡಿ ಎಂಬುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮಂಡ್ಯ ಕಾರ್ಯಕರ್ತರಾದ ತಾವೆಲ್ಲರೂ ಬಂದು ಒತ್ತಾಯ ಮಾಡುತ್ತಿದ್ದೀರಿ. ನಾಳೆ ಚನ್ನಪಟ್ಟಣ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮಂಡ್ಯದಲ್ಲಿ ತಂದೆಯವರೇ ಚುನಾವಣೆಗೆ ನಿಲ್ಲಲಿ ಎಂದು ಒತ್ತಡ ಇದೆ. ನಮ್ಮ ಕುಟುಂಬದಿಂದ ಚುನಾವಣೆ ಸ್ಪರ್ಧೆ ಬೇಡ ಅಂದುಕೊಂಡಿದ್ದೆವು. ಆದರೆ ಮಂಡ್ಯದ ಪರಿಸ್ಥಿತಿಯೇ ಬೇರೆ ಇದೆ. ಹೀಗಾಗಿ ಕುಮಾರಣ್ಣ ಅವರ ಮೇಲೆ ನೀವೆಲ್ಲಾ ಒತ್ತಡ ಹಾಕುತ್ತಿದ್ದೀರಿ. ತಂದೆಯವರು ಒಂದು ದಿನದ ಸಮಯಾವಕಾಶ ಕೇಳಿದ್ದಾರೆ. ನಾಳೆ (ಸೋಮವಾರ) ಸಂಜೆಯೊಳಗೆ ಅಭ್ಯರ್ಥಿ ಯಾರೆಂದು ಅಂತಿಮ ಆಗಬಹುದು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು. 2019ರ ಲೊಕಸಭೆ ಚುನಾವಣೆಯಲ್ಲಿ ನನಗೆ ಕೆಲವರ ಕುತಂತ್ರದಿಂದ ಸೋಲಾಯಿತು. ಚಿತಾವಣೆಯಿಂದಲೇ ನಾನು ಸೋತೆ. ಹಾಗಾಗಿ ಜಿಲ್ಲೆಯ ಜನರು, ಕಾರ್ಯಕರ್ತರು ನಾನು ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಕಳೆದ ಬಾರಿ ಸೊತಿದ್ದೀರಿ,…
ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯ ಮಾಡಿದ ಸಕ್ಕರೆನಾಡಿನ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು; ಜೆ.ಪಿ.ನಗರದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ನಿವಾಸದ ಎದುರಿನ ರಸ್ತೆಯಲ್ಲಿಯೇ ಕೂತು ಘೋಷಣೆ ಕೂಗಿದ ಘಟನೆ ನಡೆಯಿತು. ಚೆನ್ನೈನಲ್ಲಿ ಮೂರನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ಅವರನ್ನು ನೋಡಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಜಮಾಯಿಸಿದ ಮಂಡ್ಯ ಜಿಲ್ಲೆಯ ಕಾರ್ಯಕರ್ತರು, ಮುಖಂಡರು ಕುಮಾರಸ್ವಾಮಿ ಅವರೇ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಬೇಕು ಎಂದು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ತಂದೆಯವರು ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಈಗಷ್ಟೇ ಮನೆಗೆ ಬಂದಿದ್ದಾರೆ. ಅವರಿಗೆ ಒಂದು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿಕೊಂಡರು. ನಿಖಿಲ್ ಅವರ ಮಾತಿನ ನಡುವೆಯೇ ಕುಮಾರಸ್ವಾಮಿ ಅವರೇ…
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬಿಜೆಪಿಗೆ ಮತ್ತಷ್ಟು ಬೆಂಬಲ ದೊರೆತಿದೆ. ನಾಳೆ ಬಿಜೆಪಿಯೊಂದಿಗೆ ಕೆಆರ್ ಪಿಪಿ ಪಕ್ಷ ವಿಲೀನಕ್ಕೆ ಶಾಸಕ ಜನಾರ್ಧನ ರೆಡ್ಡಿ ನಿರ್ಧಾರ ಕೈಗೊಂಡಿದ್ದಾರೆ. ಅಲ್ಲದೇ ಬಿಜೆಪಿ ಪಕ್ಷಕ್ಕೆ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷವನ್ನು ಸೇರ್ಪಡೆ ನಿರ್ಧಾರ ಕೈಗೊಳ್ಳಲಾಗಿದೆ. ಇಂದು KRPP ಸಂಸ್ಥಾಪಕ ಜನಾರ್ಧನ ರೆಡ್ಡಿ ನಾಳೆ ಬಿಜೆಪಿ ಸೇರ್ಪಡೆ ಹಿನ್ನೆಲೆ, ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದರು. ಜನಾರ್ಧನ ರೆಡ್ಡಿ ಬೆಂಬಲಿಗರು, ಪದಾಧಿಕಾರಿಗಳು, ಆಪ್ತರ ಜೊತೆ ಜನಾರ್ದನ ರೆಡ್ಡಿ ಸಭೆ ನಡೆಸಲಿದ್ದಾರೆ.ಈ ವೇಳೆ ಜನಾರ್ದನ ರೆಡ್ಡಿ ಬಿಜೆಪಿ ಸೇರುವ ಬಗ್ಗೆ ಬೆಂಬಲಿಗರ ಅಭಿಪ್ರಾಯವನ್ನು ಪಡೆದರು. ಅಂತಿಮವಾಗಿ ನಾಳೆ ಕೆಆರ್ ಪಿಪಿ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಅಲ್ಲದೇ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗೋದಕ್ಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಗಾಲಿ ಜನಾರ್ಧನ ರೆಡ್ಡಿ ಅವರು, ಬಿಜೆಪಿ ನಾಯಕರ ಆಹ್ವಾನದ ಮೇರೆಗೆ ನಾಳೆ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದೇನೆ. ಬಿವೈ ವಿಜಯೇಂದ್ರ ಸಮ್ಮುಖದಲ್ಲಿ…
ಚಿತ್ರದುರ್ಗ: ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ, ಮತಬೇಟೆಯಲ್ಲಿ ತೊಡಗಿದ್ದಾವೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಅಲ್ಲಲ್ಲಿ ಘಟಿಸುತ್ತಿವೆ. ಹೀಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಸಂಸದ ಬಿವೈ ರಾಘವೇಂದ್ರ ವಿರುದ್ಧ FIR ದಾಖಲಾಗಿದೆ. ಚಿತ್ರದುರ್ಗದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ವಿರುದ್ಧ ಚಿತ್ರದುರ್ಗದಲ್ಲಿ ಎಫ್ಐಆರ್ ದಾಖಲಾಗಿದೆ. ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ. ಅವರ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಸಂಬಂಧ ದೂರು ನೀಡಲಾಗಿತ್ತು. ಈ ದೂರು ಆಧರಿಸಿ, ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. https://twitter.com/ANI/status/1771847474488975833 https://kannadanewsnow.com/kannada/yo-barkolayya-shivamogga-nandu-shivannas-mass-dialogue-sparks-fidaa/ https://kannadanewsnow.com/kannada/lok-sabha-elections-2024-how-much-money-and-goods-have-been-seized-in-the-state-so-far-here-are-the-details/
ಬೆಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಳೆದ 24 ಗಂಟೆಗಳಲ್ಲಿ 6.13 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮಾರ್ಚ್ 16 ರಂದು ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ಕರ್ನಾಟಕದಲ್ಲಿ ವಶಪಡಿಸಿಕೊಂಡ ಒಟ್ಟು ನಗದು ಮೊತ್ತ 15.78 ಕೋಟಿ ರೂ.ಗೆ ತಲುಪಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗದ ಅಧಿಕಾರಿಗಳ ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ, ಫ್ಲೈಯಿಂಗ್ ಸ್ಕ್ವಾಡ್ಗಳು, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 15.78 ಕೋಟಿ ನಗದು, 17.3 ಲಕ್ಷ ಮೌಲ್ಯದ ಉಚಿತ ವಸ್ತುಗಳು, 23.37 ಕೋಟಿ ರೂ.ಗೂ ಹೆಚ್ಚು ಮೌಲ್ಯದ 7.41 ಲಕ್ಷ ಲೀಟರ್ ಮದ್ಯ, 65 ಲಕ್ಷ ರೂ.ಗೂ ಹೆಚ್ಚು ಮೌಲ್ಯದ 66.34 ಕೆಜಿ ಮಾದಕ ವಸ್ತುಗಳು ಮತ್ತು 43 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅಮೂಲ್ಯ ಲೋಹಗಳನ್ನು ವಶಪಡಿಸಿಕೊಂಡಿದ್ದಾರೆ.…
ಮೈಸೂರು: ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದ್ದು, ಈ ಬಾರಿ ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.. ಅವರು ಇಂದು ಮೈಸೂರಿನ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಕಗ್ಗಂಟಿಲ್ಲ ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿ ಪಕ್ಷದವರ ಹಾಗೆ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಸುಳ್ಳು ಹೇಳುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಮೈಸೂರು , ಚಾಮರಾಜನಗರ ಕ್ಷೇತ್ರವನ್ನೂ ಸೇರಿಸಿದಂತೆ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದೆ ಎಂದರು. ನಾವು ಬಿಜೆಪಿಯಂತೆ ಸುಳ್ಳು ಹೇಳುವುದಿಲ್ಲ ಗ್ಯಾರಂಟಿಯೋಜನೆಗಳು ಕಾಂಗ್ರೆಸ್ ಪಕ್ಷದ ನೆರವಿಗೆ ಬರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ನಮ್ಮ…
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾವುದೇ ಅಕ್ರಮ ನಡೆಸದಂತೆ ಚುನಾವಣಾ ಆಯೋಗವು ಕಟ್ಟು ನಿಟ್ಟಿನ ನಿಯಂತ್ರಣ ಕ್ರಮ ಕೈಗೊಂಡಿದೆ. ಇದರ ನಡುವೆ ಅಕ್ರಮ ನಡೆಸೋದಕ್ಕೆ ಪ್ರಯತ್ನ ಪಟ್ಟಂತವರಿಗೆ ಚುನಾವಣಾಧಿಕಾರಿಗಳು ಶಾಕ್ ಮೇಲೆ ಶಾಕ್ ನೀಡಿದ್ದಾರೆ. ಹಾಗಾದ್ರೇ ರಾಜ್ಯಾಧ್ಯಂತ ಇದುವರೆಗೆ ಎಷ್ಟು ಹಣ, ವಸ್ತು ಸೀಜ್ ಅನ್ನೋ ಬಗ್ಗೆ ಮಾಹಿತಿ ಮುಂದೆ ಓದಿ. ರಾಜ್ಯ ಚುನಾವಣಾಧಿಕಾರಿಗಳು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ ಒಟ್ಟು 15,78,61,211 ಹಣವನ್ನು ಜಪ್ತಿ ಮಾಡಿದ್ದಾರೆ. ಇದಲ್ಲದೇ ಮತದಾರರಿಗೆ ಹಂಚೋದಕ್ಕೆ ತಂದಿದ್ದಂತ 700 ವಾಲ್ ಕ್ಲಾಕ್ ಸೇರಿದಂತೆ ರೂ.17,35,475 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದಂತ ಬರೊಬ್ಬರಿ 23,37,95,611 ಮೌಲ್ಯದ ಮದ್ಯವನ್ನು ಜಪ್ತಿ ಮಾಡಿದ್ದಾರೆ. 66.35 ಕೆಜಿಯ ರೂ.65,71,600 ಮೌಲ್ಯದ ಮಾದಕ ವಸ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ ಈವರೆಗೆ ಎಫ್ ಎಸ್, ಎಸ್ ಎಸ್ ಟಿ, ಪೊಲೀಸ್ ಅಧಿಕಾರಿಗಳಿಂದ 1.10 ಕೆಜಿ ಬಂಗಾರ, ಆದಾಯ ತೆರಿಗೆ ಇಲಾಖೆಯಿಂದ 0.98 ಕೆಜಿ ಬಂಗಾರ ಸೇರಿದಂತೆ ಒಟ್ಟಾರೆ…
ಮೈಸೂರು: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರಿದೆ. ತನ್ನ ತವರು ಕ್ಷೇತ್ರದಲ್ಲಿನ ಅಭ್ಯರ್ಥಿಗಳ ಗೆಲುವಿಗಾಗಿ ಸಿಎಂ ಸಿದ್ಧರಾಮಯ್ಯ ಅವರು ನೇರವಾಗೇ ಕಣಕ್ಕೆ ಇಳಿದಿದ್ದಾರೆ. ಇಂದಿನಿಂದ ನಾಲ್ಕು ದಿನಗಳ ಕಾಲ ಮೈಸೂರಲ್ಲೇ ವಾಸ್ತವ್ಯ ಹೂಡಲಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಲೋಕಸಭಾ ಚುನಾವಣೆಯಲ್ಲಿ ಕಣದಲ್ಲಿರುವಂತ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ತಂತ್ರಗಾರಿಕೆ ರೂಪಿಸಲಿದ್ದಾರೆ. ಮೈಸೂರಿನಲ್ಲಿ ಸರಣಿ ಸಭೆಯನ್ನು ನಡೆಸುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಲೋಕಸಭಾ ಚುನಾವಣೆಯಲ್ಲಿ ತವರು ಕ್ಷೇತ್ರದಲ್ಲೇ ಅಭ್ಯರ್ಥಿಗಳ ಗೆಲುವಿಗೆ ರಾಜಕೀಯ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ. ಶಾಸಕರು, ಕಾರ್ಯಕರ್ತರು, ಪರಾಜಿತ ಅಭ್ಯರ್ಥಿಗಳಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡುತ್ತಿರುವಂತ ಅವರು, ಗೊಂದಲ ಅಸಮಾಧಾನವಿದ್ದರೇ, ಆ ನಾಯಕರನ್ನು ಕರೆದು ಮಾತನಾಡುವ ಕೆಲಸ ಮಾಡುತ್ತಿದ್ದಾರೆ. https://kannadanewsnow.com/kannada/sonu-gowda-illegally-adopted-child-police-conduct-spot-mahazar/ https://kannadanewsnow.com/kannada/no-property-tax-hike-bbmp-clarifies-reports-circulating/
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 1ನೇ ಏಪ್ರಿಲ್ 2024ರಿಂದ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದು ಕೆಲವು ಸುಳ್ಳು ಸುದ್ದಿಯ ವಿಡಿಯೋಗಳು ಹರಿದಾಡುತ್ತಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಲ್ಲಿ ಯಾವುದೇ ಹೆಚ್ಚಳ ಮಾಡುತ್ತಿಲ್ಲ ಎಂದು BBMP ಸ್ಪಷ್ಟಪಡಿಸಲಾಗಿದೆ. Index.daily ಎಂಬ ಇನ್ಸ್ ಸ್ಟಾಗ್ರಾಮ್ ಪೇಜ್ (https://www.instagram.com/reel/C4c-4klyOlJ/?igsh=ajc0dHVwdjJ3YTBr) ನಲ್ಲಿ ಅನುರಾಗ್ ಸಿಂಗ್ ಎಂಬುವವರು 13ನೇ ಮಾರ್ಚ್ 2024ರಂದು ಕರ್ನಾಟಕದಲ್ಲಿ ಬಾರಿ ತೆರಿಗೆ ಹೆಚ್ಚಳವಾಗಲಿದೆ ಎಂಬ ವೀಡಿಯೋ ಒಂದನ್ನು ಹರಿದುಬಿಟ್ಟಿದ್ದಾರೆ. ಸದರಿ ವಿಡಿಯೋದಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯು ಬಾಡಿಗೆ ಮನೆಗಳ ಮೇಲಿನ ಆಸ್ತಿ ತೆರಿಗೆಯನ್ನು 2 ಪಟ್ಟು ಮತ್ತು ವಾಣಿಜ್ಯ ಸಂಸ್ಥೆಗಳಿಗೆ 3-5 ಪಟ್ಟು ಹೆಚ್ಚಿಸುವುದು ಸೇರಿದಂತೆ ಇನ್ನಿತರೆ ವಿಷಗಳ ಕುರಿತು ಮಾತನಾಡಿರುತ್ತಾರೆ. ಇನ್ಸ್ ಸ್ಟಾಗ್ರಾಮ್ ನಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ಹೇಳಿರುವ ಅಂಶಗಳು ಸತ್ಯಕ್ಕೆ ದೂರವಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 1ನೇ ಏಪ್ರಿಲ್ 2024ರಿಂದ ಯಾವುದೇ ಆಸ್ತಿ ತೆರಿಗೆ ಯನ್ನು ಹೆಚ್ಚಳ ಮಾಡುವುದಿಲ್ಲ. ಆಸ್ತಿ ತೆರಿಗೆಯನ್ನು 2016ರಲ್ಲಿ ಪರಿಷ್ಕರಿಸಲಾಗಿದ್ದು, ಆ ದರದಂತೆಯೇ ಪ್ರಸ್ತುತ…