Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಜೈನ ಮಂದಿರಗಳ ಪ್ರಧಾನ ಅರ್ಚಕರು ಹಾಗೂ ಸಹಾಯಕ ಅರ್ಚಕರುಗಳಿಗೆ ವೇತನ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದ 1043 ಜೈನ ಮಂದಿರಗಳ ಪ್ರಧಾನ ಅರ್ಚಕರಿಗೆ ತಲಾ 6 ಸಾವಿರ ರೂ., ಸಹಾಯಕ ಅರ್ಚಕರುಗಳಿಗೆ 5 ಸಾವಿರ ರೂ. ವೇತನ ನೀಡಲಾಗುವುದು. ಇದೇ ಮೊದಲ ಬಾರಿಗೆ ಜೈನ ಮಂದಿರಗಳ ವೇತನ ನಿಗದಿ ಸಂಬಂಧ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ವೇತನಕ್ಕಾಗಿ ಇದುವರೆಗೂ ಜಿಲ್ಲೆಗಳಿಂದ 1043 ಪ್ರಸ್ತಾವನೆ ಬಂದಿದ್ದು, ಸಚಿವ ಜಮೀರ್ ಅಹಮದ್ ಖಾನ್ ಅವರು ಎಲ್ಲ ಪ್ರಸ್ತಾವನೆ ಗೆ ಒಪ್ಪಿಗೆ ನೀಡಿ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಗಳೂರು ಗಾಂಧಿ ನಗರದ ಮಹಾಬೋಧಿ ಸೊಸೈಟಿ ಅಭಿವೃದ್ಧಿ ಗೆ ಒಂದು ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಜಮೀರ್ ಅಹ್ಮದ್ ಖಾನ್ ಆದೇಶ ಹೊರಡಿಸಿದರು.
ಉತ್ತರ ಕನ್ನಡ: ಮುರುಡೇಶ್ವರ ಕಡಲ ತೀರದಲ್ಲಿ ಇಬ್ಬರು ಕೊಚ್ಚಿ ಹೋಗಿದ್ದ ಇಬ್ಬರಲ್ಲಿ, ಓರ್ವ ಬಾಲಕ ಸಮುದ್ರಪಾಲಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ 8 ವರ್ಷದ ಕೃತಿಕ್ ರೆಡ್ಡಿ ಸಮುದ್ರಪಾಲಾಗಿದ್ದಾರೆ. ಅದೃಷ್ಟವಶಾತ್ 27 ವರ್ಷದ ವಸಂತಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ 8 ಜನರು ಮುರಡೇಶ್ವರ ಕಡಲ ತೀರಕ್ಕೆ ಪ್ರವಾಸಕ್ಕೆ ತೆರಳಿದ್ದರು. ಬೆಳಗ್ಗೆ 6 ಗಂಟೆ ಸುಮಾರಿಗೆ ಮುರ್ಡೇಶ್ವರ ಕಡಲ ತೀರಕ್ಕೆ ತೆರಳಿದ್ದರು. ಸಮುದ್ರಕ್ಕೆ ಇಳಿದಿದ್ದ ಕೃತಿಕ್ ರೆಡ್ಡಿ ಸಾವನ್ನಪ್ಪಿದ್ದರೇ, ವಸಂತಾ ಅಪಾಯದಿಂದ ಪಾರಾಗಿದ್ದಾರೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/good-news-for-priests-of-jain-temples-in-the-state-government-issues-official-order-fixing-salaries/ https://kannadanewsnow.com/kannada/prime-minister-modi-wrote-an-emotional-letter-to-the-people-of-the-country-calling-for-this-oath/
ನವದೆಹಲಿ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿಯವರು ಭಾವನಾತ್ಮಕ ಪತ್ರ ಬರೆದಿದ್ದಾರೆ. ನಾವು ಹೆಮ್ಮೆಯಿಂದ ಹೇಳೋಣ – ನಾವು ಸ್ವದೇಶಿ ಉತ್ಪನ್ನಗಳನ್ನು ಖರೀದಿಸುತ್ತೇವೆ. ನಾವು ಹೆಮ್ಮೆಯಿಂದ ಹೇಳೋಣ – ನಾವು ಸ್ವದೇಶಿ ಉತ್ಪನ್ನಗಳನ್ನು ಮಾರಾಟ ಮಾಡುತ್ತೇವೆ ಎಂಬುದಾಗಿ ಶಪಥ ಮಾಡಲು ಕರೆ ನೀಡಿದ್ದಾರೆ. ಆ ಭಾವನಾತ್ಮಕ ಪತ್ರ ಮುಂದಿದೆ ಓದಿ. ನನ್ನ ಪ್ರೀತಿಯ ದೇಶಬಾಂಧವರೇ, ನಮಸ್ಕಾರ! ದೇಶಾದ್ಯಂತ ನವರಾತ್ರಿ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ, ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ. ಈ ಹಬ್ಬವು ಎಲ್ಲರಿಗೂ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಈ ವರ್ಷದ ಹಬ್ಬದ ಋತುವು, ಸಂಭ್ರಮಿಸಲು ಮತ್ತೊಂದು ಕಾರಣವನ್ನು ತಂದಿದೆ. ಸೆಪ್ಟೆಂಬರ್ 22ರಿಂದ ಮುಂದಿನ ಪೀಳಿಗೆಯ ಜಿ.ಎಸ್.ಟಿ ಸುಧಾರಣೆಗಳು ಜಾರಿಗೆ ಬಂದಿವೆ, ಇದು ದೇಶಾದ್ಯಂತ “ಜಿ.ಎಸ್.ಟಿ ಉಳಿತಾಯ ಉತ್ಸವ”ದ ಆರಂಭವನ್ನು ಗುರುತಿಸುತ್ತದೆ. ಈ ಸುಧಾರಣೆಗಳು ಉಳಿತಾಯವನ್ನು ಹೆಚ್ಚಿಸುತ್ತವೆ ಮತ್ತು ರೈತರು, ಮಹಿಳೆಯರು, ಯುವಜನರು, ಬಡವರು, ಮಧ್ಯಮ ವರ್ಗ, ವ್ಯಾಪಾರಿಗಳು ಹಾಗೂ ಎಂ.ಎಸ್.ಎಂ.ಇ. ಗಳಂತಹ ಸಮಾಜದ ಪ್ರತಿಯೊಂದು…
ಮಂಡ್ಯ : ರಾಮನಗರದ ಅರ್ಕಾವತಿ ನದಿಯನ್ನು ಥೇಮ್ಸ್ ನದಿ ಮಾದರಿಯಲ್ಲಿ ಅಭಿವೃದ್ಧಿಗೆ ಮುಂದಾಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರವರು ಮೊದಲು ಮೇಕೆದಾಟು ಯೋಜನೆಗೆ ಕೇಂದ್ರದಿಂದ ಅನುಮತಿ ಕೊಡಿಸಲಿ ಎಂದು ಸಚಿವ ಎನ್.ಚಲುವರಾಯಸ್ವಾಮಿ ಸೋಮವಾರ ಸವಾಲು ಹಾಕಿದರು. ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಕೊಪ್ಪ, ಬಿದರಕೋಟೆ ಗ್ರಾಮಗಳಲ್ಲಿ 3 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಲೋಕಸಭಾ ಚುನಾವಣೆಯ ವೇಳೆ ನಾನು ಜಯಭೇರಿಯಾದರೇ ಮೇಕೆದಾಟು ಯೋಜನೆಗೆ ಐದು ನಿಮಿಷದಲ್ಲಿಯೇ ಕೇಂದ್ರದಿಂದ ಅನುಮತಿ ಕೊಡಿಸುತ್ತೇನೆ ಎಂದು ಜಿಲ್ಲೆಯ ಜನತೆಗೆ ಹೇಳಿದವರು ವರ್ಷಗಳು ಕಳೆಯುತ್ತಿವೆ. ಈಗ ರಾಮನಗರ ಜಿಲ್ಲೆಯನ್ನು ಅಭಿವೃದ್ಧಿ ಮಾಡಲು ಮುಂದಾಗಿದ್ದಾರೆ ಎಂದು ಟೀಕಿಸಿದರು. ಕೇಂದ್ರ ಕೈಗಾರಿಕಾ ಸಚಿವರಾಗಿ ಸಿಎಸ್ಆರ್ ನಿಧಿಯಿಂದ ಮಾತ್ರ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದಾರೆ. ಅದನ್ನು ಹೊರತುಪಡಿಸಿ ಜಿಲ್ಲೆಯ ಅಭಿವೃದ್ಧಿಗೆ ಬೇರೆ ಎಷ್ಟು ಅನುದಾನ ತಂದಿದ್ದಾರೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಆರಂಭವಾಗಿರುವ ಜಾತಿ ಸಮೀಕ್ಷೆಯ ವಿಷಯದಲ್ಲಿ ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ. ಸಾಮಾಜಿಕ…
ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು. ರಸ್ತೆ ಗುಂಡಿ ಮುಚ್ಚದ ಗುತ್ತಿಗೆದಾರರ ಟೆಂಡರ್ ರದ್ದುಗೊಳಿಸುವುದಾಗಿ ಕೇಂದ್ರ ನಗರ ಪಾಲಿಕೆ ಆಯುಕ್ತರಾದಂತ ರಾಜೇಂದ್ರ ಚೋಳನ್ ಎಚ್ಚರಿಕೆ ನೀಡಿದ್ದಾರೆ. ಇಂದು ಎಂ.ಜಿ. ರಸ್ತೆಯಲ್ಲಿನ ಪಿ.ಯು.ಬಿ. ಕಟ್ಟಡದ 10ನೇ ಮಹಡಿಯಲ್ಲಿರುವ ನಗರಪಾಲಿಕೆ ಸಭಾಂಗಣದಲ್ಲಿ ಕೇಂದ್ರ ನಗರ ಪಾಲಿಕೆಯ ಎಲ್ಲಾ ಇಂಜಿನೀಯರ್ ಗಳು ಹಾಗೂ ಗುತ್ತಿಗೆದಾರರೊಂದಿಗೆ ಸಭೆ ನಡೆಸಿದ ವೇಳೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೊನ್ನೆ ನಡೆದ ಸಭೆಯಲ್ಲಿ ನಗರ ವ್ಯಾಪ್ತಿಯಲ್ಲಿ ನಾಗರೀಕರ ಸಂಚಾರಕ್ಕೆ ತೊಂದರೆಯಾಗದಂತೆ ಮೋಟಾರೇಬಲ್ ರಸ್ತೆಗಳನ್ನು ನಗರ ನಾಗರೀಕರಿಗೆ ಲಭ್ಯವಾಗುವಂತೆ ಮಾಡಲು ಕಟ್ಟುನಿಟ್ಟಿನ ಆದೇಶ ನೀಡಿರುತ್ತಾರೆ. ಅದರಂತೆ ಮಾನ್ಯ ಉಪ ಮುಖ್ಯಮಂತ್ರಿಯವರು ಸಹ ನಗರದಲ್ಲಿನ ರಸ್ತೆಗುಂಡಿಗಳನ್ನು ಮುಚ್ಚಲು ನಿರಂತರವಾಗಿ ನಿರ್ದೇಶನಗಳನ್ನು ನೀಡುತ್ತಿದ್ದು, ಅವರುಗಳ ಆದೇಶದಂತೆ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದ್ದು, ಅದರನ್ವಯ ಗುತ್ತಿಗೆದಾರರು ತುರ್ತಾಗಿ ಕಾಮಗಾರಿಗಳನ್ನು ನಿರ್ವಹಣೆ ಮಾಡಲು ಸೂಚಿಸಿದರು. ಮುಂದುವರೆದು, ಬಿಸ್ಮೈಲ್ ವತಿಯಿಂದ ರೇಸ್ ಕೋರ್ಸ್ ರಸ್ತೆ, ಕಬ್ಬನ್ ರಸ್ತೆ ಹಾಗೂ ಇತರೆ ಪ್ರಮುಖ…
ಮೈಸೂರು : ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪುರಸ್ಕಾರ ಆಗಿರುವುದು ಕೇವಲ ಅವರ ಸಂಗೀತ ಸಾಧನೆಗೆ ಸಿಕ್ಕ ಗೌರವ ಅಲ್ಲ, ನಮ್ಮನ್ನು ನಾವೇ ಗೌರವಿಸಿಕೊಂಡಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ ವ್ಯಕ್ತಪಡಿಸಿದರು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ದಸರಾ ಪ್ರಯುಕ್ತ ಪ್ರತಿ ವರ್ಷ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಬಾರಿ ಪುಟ್ಟರಾಜ ಗವಾಯಿಗಳ ಗರಡಿಯಲ್ಲಿ ಪಳಗಿದ ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ನೀಡಲಾಗಿದೆ. ಅತಿ ಬಡತನದ ಕುಟುಂಬದಿಂದ ಬಂದು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಂಗೀತ ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ ವೆಂಕಟೇಶ್ ಕುಮಾರ್ ಸಂಗೀತ ವಿದ್ವಾನ್ ಪುರಸ್ಕಾರಕ್ಕೆ ಅತೀ ಅರ್ಹರು. ಇದು ನಮಗೇ ಸಲ್ಲುವ ಗೌರವ ಎಂದರು. ಸಂಗೀತಕ್ಕೆ ಆಸಕ್ತಿ , ಶ್ರದ್ದೆ, ಏಕಾಗ್ರತೆ, ಶ್ರಮ ಅಗತ್ಯ. ಇಷ್ಟು ಇದ್ದರೆ ಸಂಗೀತ ಸಾಧನೆ ಸಾಧ್ಯ ಎಂದರು. ಕಲಾನಿಧಿ ವಿದ್ವಾನ್ ವಾಸುದೇವಾಚಾರ್ಯ ಅವರ…
ಬೆಂಗಳೂರು: ನಮ್ಮ ಮೆಟ್ರೋ ( Namma Metro ) ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ರೈಲು ( Metro Train ) ಸಂಚಾರವು ಸ್ಥಗಿತಗೊಂಡಿದೆ. ಹೀಗಾಗಿ ಪ್ರಯಾಣಿಕರು ಪರದಾಡುವಂತೆ ಆಗಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಾಂತ್ರಿಕ ಸಮಸ್ಯೆಯಿಂದಾಗಿ, ಹಳದಿ ಮಾರ್ಗದಲ್ಲಿ (ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರಕ್ಕೆ) ಮೆಟ್ರೋ ರೈಲುಗಳು ಸಂಜೆ 7:00 ಗಂಟೆಯಿಂದ ವೇಳಾಪಟ್ಟಿಯಂತೆ ಚಲಿಸುತ್ತಿಲ್ಲ. ಈ ಸೇವೆಗಳು ರಾತ್ರಿ 9:00 ಗಂಟೆಯ ವೇಳೆಗೆ ನಿಯಮಿತ ವೇಳಾಪಟ್ಟಿಗೆ ಮರಳುವ ನಿರೀಕ್ಷೆಯಿದೆ ಎಂದು ಹೇಳಿದೆ. ಈ ಅನಾನುಕೂಲತೆಗೆ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಮತ್ತು ನಿಮ್ಮ ತಾಳ್ಮೆ ಮತ್ತು ತಿಳುವಳಿಕೆಯನ್ನು ನಿಜವಾಗಿಯೂ ಪ್ರಶಂಸಿಸುತ್ತೇವೆ ಎಂಬುದಾಗಿ ಹೇಳಿದೆ. https://kannadanewsnow.com/kannada/thief-snatches-old-womans-gold-necklace-and-escapes-on-pretext-of-asking-for-address-in-mandya/ https://kannadanewsnow.com/kannada/watch-video-congress-releases-ai-against-pm-modi-another-video/
ಮಂಡ್ಯ : ವಿಳಾಸ ಕೇಳುವ ನೆಪದಲ್ಲಿ ವೃದ್ದೆಯೊಬ್ಬರ ಕರಿಮಣಿ ಸರವನ್ನು ಕಿತ್ತುಕೊಂಡು ಬೈಕಿನಲ್ಲಿ ಕಳ್ಳ ಪರಾರಿಯಾಗಿರುವ ಘಟನೆ ಸೋಮವಾರ ಜರುಗಿದೆ. ಮದ್ದೂರು ತಾಲೂಕಿನ ಕೊಪ್ಪ ಪೋಲೀಸ್ ಠಾಣಾ ವ್ಯಾಪ್ತಿಯ ತರೀಕೆರೆ ಗ್ರಾಮದ ವರಲಕ್ಷ್ಮಿ ಎಂಬ ಮಹಿಳೆಯಾಗಿದ್ದಾರೆ. ಮನೆ ಮುಂದೆ ಕುಳಿತಿದ್ದ ವರಲಕ್ಷ್ಮಿ ಎಂಬ ಮಹಿಳೆಯನ್ನು ದುಷ್ಕರ್ಮಿಯೊಬ್ಬ ಸ್ಕೂಟಿ ಗಾಡಿಯಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ಕರಿಮಣಿ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಕರಿಮಣಿ ಸರದಲ್ಲಿ 1 ತಾಳಿ, 2 ಚಿನ್ನದ ಕಾಸು ಹಾಗೂ 7 ಗ್ರಾ ತೂಕದ ಚಿನ್ನದ ಗುಂಡುಗಳು ಇದ್ದವು. ಕರಿಮಣಿ ಅಪಹರಣದ ವೇಳೆ 3 ಗ್ರಾಂ ತೂಕದ ಚಿನ್ನದ ಗುಂಡುಗಳನ್ನು ಮಾತ್ರ ಅಪಹರಿಸಲಾಗಿದೆ. ಇನ್ನು ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಎಎಸ್ಪಿ ಗಂಗಾಧರ ಸ್ವಾಮಿ, ಮದ್ದೂರು ಗ್ರಾಮಾಂತರ ಇನ್ಸ್ಪೆಕ್ಟರ್ ವೆಂಕಟೇಗೌಡ, ಕೊಪ್ಪ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಿಳೆಗೆ ಸಾಂತ್ವನ ಹೇಳಿದರು. ಗ್ರಾಮಾಂತರ ಪ್ರದೇಶದ ಮಹಿಳೆಯರು ಜಮೀನುಗಳ ಕಡೆ ಹಾಗೂ ಒಬ್ಬಂಟಿಗಳಾಗಿ ಹೋಗುವಾಗ ಚಿನ್ನಾಭರಣಗಳ…
ಶಿವಮೊಗ್ಗ: ಮಲೆನಾಡಿನ ಜನರ ಆರಾಧ್ಯ ದೈವ ಶ್ರೀ ಸಿಗಂದೂರೇಶ್ವರಿ ಅಮ್ಮನವರ ಕೃಪೆಯಿಂದ ನಾಡಿನೆಲ್ಲೆಡೆ ಸಕಾಲದಲ್ಲಿ ಮಳೆಯಾಗಿದ್ದು, ಕೆರೆ ಕಟ್ಟೆ ಕಾಲುವೆಗಳು ಭರ್ತಿಯಾಗಿವೆ ಮಾತ್ರವಲ್ಲ ಉತ್ತಮ ಬೆಳೆ ಬರುವ ನಿರೀಕ್ಷೆ ಇದೆ. ಇದರಿಂದಾಗಿ ಸಹಜವಾಗಿ ಸಂತಸ ಮೂಡಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಸಾಗರ ತಾಲೂಕಿನ ಸಿಗಂದೂರಿನ ಶ್ರೀ ಚೌಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಅಂಗವಾಗಿ ಏರ್ಪಡಿಸಲಾಗಿದ್ದ ಸಿಗಂದೂರು ದಸರಾ ಸಂಭ್ರಮ 25 ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶ್ರೀಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ನೆರವು ಮತ್ತು ಸಹಕಾರವನ್ನು ನೀಡುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿವೆ. ಎಂದಿನಂತೆ ಮುಂದೆಯೂ ಶ್ರೀ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ನೆರವು ನೀಡಲಾಗುವುದು ಎಂದರು. ಹಲವು ದಶಕಗಳಿಂದ ಇತ್ಯರ್ಥವಾಗದೇ ಉಳಿದಿರುವ ಶರಾವತಿ ಸಂತ್ರಸ್ತರು, ಅರಣ್ಯ ಭೂಮಿ ಸಾಗುವಳಿದಾರರ ಹಿತ ಕಾಯಲು ಸರ್ಕಾರ ಹಿಂದೆ ಹೇಳಿದ…
ಮಂಡ್ಯ: ಇಂದು ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಉತ್ಸವ ಹಾಗೂ ಶ್ರೀರಂಗಪಟ್ಟಣ ದಸರಾ ಉತ್ಸವದ ಅಂಗವಾಗಿ ವಿಶ್ವಪ್ರಸಿದ್ದ ಕೃಷ್ಣರಾಜ ಸಾಗರ ಜಲಾಶಯ ಹಾಗೂ ಬೃಂದಾವನದ ದೀಪಾಲಂಕಾರವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಉದ್ಘಾಟಿಸಿದರು. ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಲೇಖಕಿ ಬಾನು ಮುಷ್ತಾಕ್ ಉದ್ಘಾಟಿಸಿದರು. ಈ ಬಳಿಕ ರಾಜ್ಯದ ವಿವಿಧೆಡೆ ದಸರಾ ಉತ್ಸವಕ್ಕೆ ಚಾಲನೆ ದೊರೆತಿದೆ. ಇತ್ತ ಶ್ರೀ ರಂಗಪಟ್ಟಣ ಉತ್ಸವದ ಅಂಗವಾಗಿ ವಿಶ್ವ ಪ್ರಸಿದ್ಧ ಕೆ ಆರ್ ಎಸ್ ಜಲಾಶಯ ಹಾಗೂ ಬೃಂದಾವನದ ದೀಪಾಲಾಂಕರವನ್ನು ಎಂಎಲ್ಸಿ ದಿನೇಶ್ ಗೂಳಿಗೌಡ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಡಾ.ರಾಮ್ ಪ್ರಸಾದ್ ಮನೋಹರ್, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸೂಪರಿಂಟೆಂಡೆಂಟ್ ಇಂಜಿನಿಯರ್ ರಘುರಾಮ್, ಎಕ್ಸಿಕ್ಯುಟಿವ್ ಇಂಜಿನಿಯರ್ ಜಯಂತ್ ಸೇರಿದಂತೆ ನಾನಾ ಗಣ್ಯರು ಉಪಸ್ಥಿತರಿದ್ದರು. https://kannadanewsnow.com/kannada/nava-durga-has-the-spirit-of-navagraha-worship-her-like-this-to-receive-the-grace-of-mother-earth/…