Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಸಿಸ್ಟಂಗಳನ್ನು ಸುರಕ್ಷಿತವಾಗಿ ಆನ್ ಲೈನ್ ಗೆ ತರಲು ಕೆಲಸ ಮಾಡುತ್ತಿದ್ದೇವೆ. ಆ ಕೆಲಸ ನಡೆಯುತ್ತಿದ್ದು, ಶೀಘ್ರವೇ ತಾಂತ್ರಿಕ ಸಮಸ್ಯೆ ಸರಿ ಪಡಿಸಲಾಗುತ್ತದೆ ಎಂಬುದಾಗಿ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಹೇಳಿದ್ದಾರೆ. ಮೈಕ್ರೋಸಾಫ್ಟ್ ಸ್ಥಗಿತದ ನಂತ್ರ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವಂತ ಅವರು, ನಿನ್ನೆ, ಕ್ರೌಡ್ ಸ್ಟ್ರೈಕ್ ಜಾಗತಿಕವಾಗಿ ಐಟಿ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿದ ನವೀಕರಣವನ್ನು ಬಿಡುಗಡೆ ಮಾಡಿತು. ನಾವು ಈ ಸಮಸ್ಯೆಯ ಬಗ್ಗೆ ತಿಳಿದಿದ್ದೇವೆ ಮತ್ತು ಗ್ರಾಹಕರಿಗೆ ತಮ್ಮ ವ್ಯವಸ್ಥೆಗಳನ್ನು ಸುರಕ್ಷಿತವಾಗಿ ಆನ್ ಲೈನ್ ಗೆ ತರಲು ತಾಂತ್ರಿಕ ಮಾರ್ಗದರ್ಶನ ಮತ್ತು ಬೆಂಬಲವನ್ನು ಒದಗಿಸಲು ಕ್ರೌಡ್ ಸ್ಟ್ರೈಕ್ ಮತ್ತು ಉದ್ಯಮದಾದ್ಯಂತ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. https://twitter.com/satyanadella/status/1814329337451344250 ಜಾಗತಿಕ ಸ್ಥಗಿತದ ಬಗ್ಗೆ ಸತ್ಯ ನಾದೆಲ್ಲಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಾಮಾಜಿಕ ಮಾಧ್ಯಮ ದೈತ್ಯ ಎಕ್ಸ್ ಸಿಇಒ ಎಲೋನ್ ಮಸ್ಕ್, “ಇದು ಆಟೋಮೋಟಿವ್ ಸರಪಳಿಯನ್ನು ಮುಟ್ಟುಗೋಲು ಹಾಕಿಕೊಂಡಂತೆ ಆಗಿದೆ ಎಂದು ಹೇಳಿದರು. https://twitter.com/elonmusk/status/1814334171701014848
ಬೆಂಗಳೂರು: ಡಿಸೆಂಬರ್.20ರಿಂದ ಮೂರು ದಿನಗಳ ಕಾಲ ಮಂಡ್ಯದಲ್ಲಿ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸಲು ನಿಗದಿ ಪಡಿಸಲಾಗಿದೆ. ಇಂತಹ ಸಮ್ಮೇಳನ ಪೂರ್ವದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿಧಾನಸೌಧದಲ್ಲಿ ಬಿಡುಗಡೆಗೊಳಿಸಿದರು. ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಡಿಸೆಂಬರ್.20 ರಿಂದ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕೆಲ ದಿನಗಳ ಹಿಂದೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅಧ್ಯಕ್ಷತೆಯಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್.20 ರಿಂದ ಮೂರು ದಿನಗಳವರೆಗೆ ನಡೆಸಲು ನಿರ್ಧರಿಸಲಾಗಿತ್ತು. ಬರದ ಹಿನ್ನೆಲೆಯಲ್ಲಿ ಕಳೆದ ವರ್ಷ ಮಂಡ್ಯದಲ್ಲಿ ನಡೆಯಬೇಕಿದ್ದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತು ಮುಂದೂಡಿತ್ತು. ಇದೀಗ ಡಿಸೆಂಬರ್ 20 ರಿಂದ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ…
ಬೆಂಗಳೂರು: “ಸರ್ಕಾರದ ಮೇಲೆ ಆರೋಪ ಮಾಡಿದ ಬಿಜೆಪಿಯವರಿಗೆ ಉತ್ತರವನ್ನು ಕೇಳುವ ಸಹನೆ, ಸಂಯಮ ಇರಲಿಲ್ಲ. ಅವರ ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗಲಾಟೆ ಮಾಡಿ ಸದನದ ಬಾವಿಗೆ ಇಳಿದರು. ಮುಖ್ಯಮಂತ್ರಿಗಳು ಉತ್ತರವನ್ನು ಕೊಡಬೇಕಾದರೆ ತೊಂದರೆ ಮಾಡಿದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶುಕ್ರವಾರ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದಲ್ಲಿ ಕೆಲವು ಹಗರಣಗಳನ್ನು ಮುಚ್ಚಿಹಾಕಿದ್ದಾರೆ, ಮುಚ್ಚಿಹಾಕಲು ಪ್ರಯತ್ನ ಪಟ್ಟಿದ್ದಾರೆ. ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ಬಯಲಿಗೆ ಎಳೆದಿದ್ದಾರೆ. ಪರಶುರಾಮ ಥೀಮ್ ಪಾರ್ಕ್ ಹಗರಣ, ಗಂಗಾಕಲ್ಯಾಣ ಅಕ್ರಮ, ಬಿಟ್ ಕಾಯಿನ್ ಹಗರಣ, ಪಿಎಸ್ ಐ ಹಗರಣ ಸೇರಿದಂತೆ ಅನೇಕ ಹಗರಣಗಳು ನಡೆದಿವೆ” ಎಂದು ಹೇಳಿದರು. ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆಯಲ್ಲಿ 750 ಕೋಟಿಗೂ ಹೆಚ್ಚು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಅನೇಕ ಅಕ್ರಮಗಳ ದಾಖಲೆಗಳು ದೊರೆತಿವೆ. ಯಡಿಯೂರಪ್ಪ ಅವರ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಹಗರಣಗಳನ್ನು ಪ್ರಶ್ನಿಸಿದ ಪ್ರತಿಪಕ್ಷಗಳನ್ನು ವಿಧಾನಮಂಡಲದಲ್ಲಿ ಹತ್ತಿಕ್ಕಲಾಯಿತು! ಸತ್ಯಶೋಧನೆಯಲ್ಲಿ ನಿರತರಾದ RTI ಕಾರ್ಯಕರ್ತರನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ದಮನ ಮಾಡಲಾಗುತ್ತಿದೆ!! ಎಂದು ಹರಿಹಾಯ್ದಿದ್ದಾರೆ. ಮುಖ್ಯಮಂತ್ರಿಗಳ ಕುಟುಂಬ ಮೈಸೂರಿನ ಮೂಡಾದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರನ್ನು ಕಾಂಗ್ರೆಸ್ ಗುರಿ ಮಾಡಿಕೊಂಡಿದೆ. ಆರೋಪಿತ ಸ್ಥಾನದಲ್ಲಿರುವ ಸಿಎಂ ಪರಿವಾರವನ್ನು ರಕ್ಷಿಸುವ ಏಕೈಕ ದುರುದ್ದೇಶದಿಂದ ಕಾಂಗ್ರೆಸ್ಸಿಗರು RTI ಕಾರ್ಯಕರ್ತರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕುಂಬಳಕಾಯಿ ಕಳ್ಳ ಹೆಗಲು ಮುಟ್ಟಿ ನೋಡಿಕೊಂಡ ಎಂಬಂತಿದೆ ಈ ನಾಟಕ ಎಂದು ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದ್ದಾರೆ. ಪೊಲೀಸ್ ಬಲ ಬಳಸಿ ಸತ್ಯದ ಕತ್ತು ಹಿಚುಕಲು ಸಾಧ್ಯವೇ ಇಲ್ಲ. ಹಾದಿಬೀದಿಯಲ್ಲಿ ಜನರ…
ನವದೆಹಲಿ: ರಿಲಯನ್ಸ್ ಜಿಯೋದ 2024-25ನೇ ಸಾಲಿನ ಪ್ರಥಮ ತ್ರೈಮಾಸಿಕದ, ಅಂದರೆ ಏಪ್ರಿಲ್ ನಿಂದ ಜೂನ್ ತಿಂಗಳ ತನಕದ ಹಣಕಾಸು ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಕಳೆದ ತ್ರೈಮಾಸಿಕದಲ್ಲಿ 5,337 ಕೋಟಿ ರೂಪಾಯಿಯ ನಿವ್ವಳ ಲಾಭ ಘೋಷಿಸಿದ್ದ ಕಂಪನಿಯು ಈ ತ್ರೈಮಾಸಿಕದಲ್ಲಿ 5,445 ಕೋಟಿ ರೂಪಾಯಿ ನಿವ್ವಳ ಲಾಭವನ್ನು ಗಳಿಸಿದೆ. ರಿಲಯನ್ಸ್ ಜಿಯೋ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಮತ್ತೆ ಮುಂದುವರಿದಿದೆ. ಜೂನ್ ಗೆ ಕೊನೆಯಾದ ತ್ರೈಮಾಸಿಕದಲ್ಲಿ 90 ಲಕ್ಷ ಬಳಕೆದಾರರು ಸೇರ್ಪಡೆಯಾಗಿದ್ದಾರೆ. ಅಂದ ಹಾಗೆ ವರ್ಷದ ಹಿಂದಿನ ಇದೇ ಹಣಕಾಸು ತ್ರೈಮಾಸಿಕದಲ್ಲಿ ಜಿಯೋ 4,863 ಕೋಟಿ ರೂಪಾಯಿ ಲಾಭ ಗಳಿಸಿತ್ತು. ಕಾರ್ಯಾಚರಣೆ ಮೂಲಕ ಬರುವಂಥ ಆದಾಯವು 26,478 ಕೋಟಿ ರೂಪಾಯಿಗೆ ಹೆಚ್ಚಳವಾಗಿದೆ. ಕಳೆದ ತ್ರೈಮಾಸಿಕದಲ್ಲಿ ಕಾರ್ಯಾಚರಣೆ ಮೂಲಕವಾಗಿ 25,959 ಕೋಟಿ ರೂಪಾಯಿ ಆದಾಯ ಬಂದಿತ್ತು. ವರ್ಷದ ಹಿಂದಿನ ಇದೇ ಅವಧಿಯಲ್ಲಿ 24,042 ಕೋಟಿ ರೂಪಾಯಿ ಕಾರ್ಯಾಚರಣೆ ಮೂಲಕ ಆದಾಯ ಪಡೆದದ್ದನ್ನು ಇಲ್ಲಿ ಉಲ್ಲೇಖಿಸಬಹುದು. ಇನ್ನು ತಿಂಗಳಿಗೆ ಪ್ರತಿ ಬಳಕೆದಾರರಿಂದ ಬರುವಂಥ ಸರಾಸರಿ ಆದಾಯದಲ್ಲಿ, ಅಂದರೆ…
ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಪೌಷ್ಠಿಕತೆಯ ಕೊರತೆ ನೀಗಿಸಲು ಸರ್ಕಾರ ವಾರದಲ್ಲಿ 6 ದಿನವೂ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ನಾಳೆ ಶಾಲಾ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರವನ್ನು ವಾರದಲ್ಲಿ 6 ದಿನ ಉಚಿತವಾಗಿ ವಿತರಿಸುವಂತ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಅಜೀಂ ಪ್ರೇಮ್‌ಜೀ ಫೌಂಡೇಷನ್, ಬೆಂಗಳೂರು ಇವರ ಸಹಭಾಗಿತ್ವದಲ್ಲಿ ರಾಜ್ಯ ಸರ್ಕಾರದ ಅಕ್ಷರ ದಾಸೋಹ- ಮಧ್ಯಾಹ್ನ ಉಪಹಾರ ಯೋಜನೆಯಡಿ ಶಾಲಾ ಮಕ್ಕಳ ಪೌಷ್ಠಿಕತೆ ವೃದ್ಧಿಸಲು 2024-25 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರವನ್ನು ವಾರದಲ್ಲಿ 6 ದಿನಗಳಂದು ಉಚಿತವಾಗಿ ವಿತರಿಸುವ ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ:20.07.2024 ರಂದು ಬೆಳಿಗ್ಗೆ 10.30 ಗಂಟೆಗೆ ಹೋಟೆಲ್ ರಾಡಿಸನ್ ಬ್ಲ್ಯೂ (ಹೋಟೆಲ್…
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸಾಗರ ತಾಲ್ಲೂಕು ತಹಶೀಲ್ದಾರ್ ಆದೇಶ ಹೊರಡಿಸಿದ್ದು, ಸಾಗರ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದಾಗಿ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ದಿನಾಂಕ 20-07-2024ರ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಅಂತ ತಿಳಿಸಿದ್ದಾರೆ. ಸಾಗರ ತಾಲ್ಲೂಕಿನಲ್ಲಿ ಮಳೆಯ ಪ್ರಮಾಣ ನಾಳೆ ಕೂಡ ಹೆಚ್ಚು ಇರಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ನಾಳೆ ಎಲ್ಲಾ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು , ಪದವಿ ಕಾಲೇಜು, ಡಿಪ್ಲೊಮೊ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂಬುದಾಗಿ ಆದೇಶದಲ್ಲಿ ಹೇಳಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/soraba-taluka-to-remain-closed-on-july-20-due-to-heavy-rains/ https://kannadanewsnow.com/kannada/sringeri-sharadambe-temple-to-have-dress-code-in-place-from-august-15/
ಶಿವಮೊಗ್ಗ: ಇಂದು ಬೆಳಿಗ್ಗೆಯಿಂದ ಎಡಬಿಡದೇ ಮಳೆ ಸೊರಬ ತಾಲ್ಲೂಕಿನಲ್ಲಿ ಸುರಿಯುತ್ತಿದೆ. ಜನರು ಮನೆಯಿಂದ ಹೊರ ಬರಲಾಗದಂತೆ ಭಾರೀ ಮಳೆಯಾಗುತ್ತಿದೆ. ನಾಳೆಯು ಮಳೆಯಾಗುವ ಮುನ್ಸೂಚನೆಯ ಕಾರಣ, ಸೊರಬ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಸೊರಬ ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸೊರಬ ತಾಲ್ಲೂಕಿನಾಧ್ಯಂತ ತೀವ್ರ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಇಂದು ರಜೆ ನೀಡಲಾಗಿತ್ತು ಎಂದಿದ್ದಾರೆ. ಇನ್ನೂ ದಿನಾಂಕ 20-07-2024ರ ನಾಳೆ ಕೂಡ ಸೊರಬ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ನಾಳೆ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಸದರಿ ರಜೆ ದಿನದಂದು ನಡೆಯಬೇಕಿದ್ದ ಪಾಠ-ಪ್ರವಚನಗಳನ್ನು ಮುಂದಿನ ರಜಾ ದಿನಗಳಲ್ಲಿ ನಡೆಸಿ, ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/valmiki-nigam-scam-govt-fully-confident-in-sit-probe-says-siddaramaiah/ https://kannadanewsnow.com/kannada/sringeri-sharadambe-temple-to-have-dress-code-in-place-from-august-15/
ಉಡುಪಿ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದು ಶೃಂಗೇರಿಯ ಶಾರಾಂಬೆಯ ಶ್ರೀಮಠ. ಆಗಸ್ಟ್.15ರಿಂದ ಇಲ್ಲಿಗೆ ಭೇಟಿ ನೀಡುವಂತ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅವುಗಳ ಹೊರತಾಗಿ ಬೇರೆ ಉಡುಪು ಧರಿಸಿ ಬಂದ್ರೆ ಶ್ರೀಮಠಕ್ಕೆ ಎಂಟ್ರಿ ಇರೋದಿಲ್ಲ. ಈ ಬಗ್ಗೆ ಶೃಂಗೇರಿಯ ದಕ್ಷಿಣಾಮ್ನಾಯ ಶ್ರೀಶಾರದಾ ಪೀಠದ ಆಡಳಿತಾಧಿಕಾರಿ ಮತ್ತು ಸಿಇಓ ಪಿ.ಎ ಮುರಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮಠ ಶೃಂಗೇರಿಗೆ ಆಗಮಿಸುವ ಎಲ್ಲಾ ಭಕ್ತರು, ಆಗಸ್ಟ್.15, 2024ರಿಂದ ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ವಿನಂತಿಸಿದ್ದಾರೆ. ಶ್ರೀ ಶಾರದಾಂಬೆಯ ದರ್ಶನಕ್ಕೆ ಬರುವಂತವರು ನಿಗದಿತ ಉಡುಪುಗಳನ್ನು ಹೊರತುಪಡಿಸಿ ಇತರೆ ಉಡುಪುಗಳನ್ನು ಧರಿಸುವ ವ್ಯಕ್ತಿಗಳಿಗೆ ಮಹಾಮಂಟಪದಿಂದ ದರ್ಶನವನ್ನು ಪಡೆಯಲು ಅವಕಾಶವಿರುವುದಿಲ್ಲ. ಅವರು ಹೊರ ಪ್ರಾಕಾರದಿಂದ ದರ್ಶನ ಪಡೆಯಬಹುದಾಗಿದೆ ಎಂದಿದ್ದಾರೆ. ಗುರು ನಿವಾಸದಲ್ಲಿ ಪಾದ ಪೂಜೆ ಮತ್ತು ಜಗದ್ಗುರುಗಳ ದರ್ಶನಕ್ಕೆ ನಿಗದಿತ ಉಡುಪುಗಳನ್ನು ಹೊರತು ಪಡಿಸಿ, ಇತರ ಉಡುಪುಗಳನ್ನು ಧರಿಸಿದವರಿಗೆ ಗುರು ನಿವಾಸದ ಒಳಗೆ ಪ್ರವೇಶವಿರುವುದಿಲ್ಲ ಅಂತ ತಿಳಿಸಿದ್ದಾರೆ. ಈ ಸಾಂಪ್ರದಾಯಿಕ ಉಡುಪು ಧರಿಸುವುದು…
ಬೆಂಗಳೂರು : ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕೌಂಟ್ ಸುಪರಿಡೆಂಟ್ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರ ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಮೇ 31ರಂದು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದ್ದು, ಇದರಲ್ಲಿ ನಾಲ್ಕು ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳು ಇದ್ದಾರೆ. ಯೂನಿಯನ್ ಬ್ಯಾಂಕ್ ಅಫ್ ಇಂಡಿಯಾದ ಅಧಿಕಾರಿ ಮಹೇಶ್ ಎಂಬವರ ದೂರಿನ ಮೇರೆಗೆ ಸಿಬಿಐ ತನಿಖೆಯನ್ನು ಕೈಗೊಂಡಿದ್ದು, ಇಡಿ ಸ್ವಯಂ ಪ್ರೇರಿತವಾಗಿ ತನಿಖೆಯನ್ನು ನಡೆಸುತ್ತಿದೆ. ಎಸ್‌ಐಟಿ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಬಂಧಿಸಿದ್ದು, 34 ಕೋಟಿ ರೂ. ನಗದು ವಶಪಡಿಸಿಕೊಂಡಿದೆ. ವಿವಿಧ ಬ್ಯಾಂಕ್…