Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿಯವರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ 17ನೇ ಲೋಕಸಭೆಯನ್ನು ವಿಸರ್ಜಿಸುವಂತೆ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗಳಿಗೆ ಮೋದಿ ಸಲ್ಲಿಸಿದ್ದಾರೆ. ಎಬಿಪಿ ನ್ಯೂಸ್ ಮೂಲಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಲು ಮತ್ತು 17 ನೇ ಲೋಕಸಭೆಯನ್ನು ವಿಸರ್ಜಿಸಲು ಮನವಿ ಮಾಡಲು ರಾಷ್ಟ್ರಪತಿ ಭವನಕ್ಕೆ ತಲುಪಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ 17 ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಿದೆ. ಮೂಲಗಳ ಪ್ರಕಾರ, ಸಂಭಾವ್ಯ “ಕಿಂಗ್ ಮೇಕರ್ಸ್” ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾದಳ-ಯುನೈಟೆಡ್ (ಜೆಡಿಯು) ಹಸಿರು ನಿಶಾನೆ ತೋರಿದ್ದರಿಂದ, ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಸರ್ಕಾರ ರಚನೆ ಮತ್ತು ಪ್ರಧಾನಿ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೂನ್ 8 ರಂದು ನಡೆಯುವ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇದೀಗ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದಾರೆ. ಮೂರನೇ ಬಾರಿಗೆ ಪ್ರಧಾನಿಯಾಗಿ ಪದಗ್ರಹಣ ಮಾಡೋದಕ್ಕೆ ಸರ್ಕಾರ ರಚನೆಯ ಬಗ್ಗೆ ಹಕ್ಕು ಮಂಡನೆ ಮಾಡಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯದೇ ಹೋದರೂ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಬೆಂಬಲದೊಂದಿಗೆ 3ನೇ ಅವಧಿಗೆ ಮೋದಿ ಪ್ರಧಾನಿಯಾಗುವತ್ತ ಹೆಜ್ಜೆ ಹಾಕಿದ್ದಾರೆ. ಜೂನ್.8ರಂದು 3ನೇ ಬಾರಿಗೆ ಮೋದಿಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂಬುದಾಗಿ ಬಿಜೆಪಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಈ ಬೆನ್ನಲ್ಲೇ ನವದೆಹಲಿಯಲ್ಲಿನ ರಾಷ್ಟ್ರಪತಿ ಭವನಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಅಲ್ಲಿ ರಾಷ್ಟ್ರಪತಿಯವನ್ನು ಭೇಟಿಯಾಗಲಿರುವಂತ ಅವರು, ಸರ್ಕಾರ ರಚನೆ ಬಗ್ಗೆ ಹ್ಕಕು ಮಂಡನೆ ಮಾಡಲಿದ್ದಾರೆ. https://kannadanewsnow.com/kannada/do-you-know-the-demands-made-by-chandrababu-naidu-and-nitish-kumar-to-support-the-nda/
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಕಳಪೆ ಪ್ರದರ್ಶನದ ನಂತರ ಚುನಾವಣಾ ಪಂಡಿತರು ‘ಕಿಂಗ್ ಮೇಕರ್ಸ್’ ಎಂದು ಕರೆಯುತ್ತಿರುವ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಕೇಂದ್ರದಲ್ಲಿ ತಮ್ಮ ಮೂರನೇ ಸರ್ಕಾರವನ್ನು ರಚಿಸುವ ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನಗಳನ್ನು ಬೆಂಬಲಿಸುವ ಬಗ್ಗೆ ದೊಡ್ಡ ಸುಳಿವುಗಳನ್ನು ನೀಡಿದ್ದಾರೆ. ಜೊತೆ ಜೊತೆಗೆ ಮೋದಿ ಮುಂದೆ ಕೆಲ ಷರತ್ತು, ಬೇಡಿಕೆಗಳನ್ನು ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಅವುಗಳು ಏನು ಅಂತ ಮುಂದೆ ಓದಿ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಭೆಯಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಗೆ ಆಗಮಿಸಿದ ನಿತೀಶ್ ಕುಮಾರ್, ಸರ್ಕಾರ ರಚಿಸಲಾಗುವುದು ಎಂದು ಹೇಳಿದರು. “ಸರ್ಕಾರ್ ತೋ ಅಬ್ ಬನೇಗಿ ಹೈ” ಎಂದು ಅವರು ಹೇಳಿದರು. ನಿತೀಶ್ ಕುಮಾರ್ ಅವರ ನಿಕಟವರ್ತಿ, ಜೆಡಿಯು ನಾಯಕ ಕೆ.ಸಿ.ತ್ಯಾಗಿ ಅವರು ಬಿಜೆಪಿ ನೇತೃತ್ವದ ಸರ್ಕಾರವನ್ನು ದೃಢವಾಗಿ ಬೆಂಬಲಿಸಲಿದ್ದಾರೆ ಎಂದು ಹೇಳಿದರು. “ಇದು ಕೇವಲ ವದಂತಿ ಹಬ್ಬ. ನಾವು ಎನ್ಡಿಎ ಭಾಗವಾಗಿದ್ದೇವೆ…
ಡೆಹ್ರಾಡೂನ್: ಉತ್ತರಾಖಂಡಕ್ಕೆ ಚಾರಣಕ್ಕೆಂದು ಕರ್ನಾಟಕದ ನಾಲ್ವರು ಸೇರಿದಂತೆ 9 ಮಂದಿ ಚಾರಣಿಗರು ತೆರಳಿದ್ದರು. ಇಂತಹ 9 ಮಂದಿ ಹವಾಮಾನ ವೈಪರಿತ್ಯದಿಂದಾಗಿ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಾಹಿತಿ ಹಂಚಿಕೊಂಡಿದ್ದು, ಉತ್ತರಾಖಂಡಕ್ಕೆ ಚಾರಣಕ್ಕೆ ತೆರಳಿದ್ದಂತ ಕರ್ನಾಟಕದ ಚಾರಣಿಗರು ಹವಾಮಾನ ವೈಪರಿತ್ಯದಿಂದ ಸಂಕಷ್ಟಕ್ಕೆ ಸಿಲುಕಿರೋದಾಗಿ ತಿಳಿದು ಬಂದಿದೆ. ಅವರನ್ನು ಸುರಕ್ಷತೆಗಾಗಿ ಕ್ರಮ ವಹಿಸಲಾಗಿದೆ. ಉತ್ತರಾಖಂಡ ಸರ್ಕಾರ ಹಾಗೂ ಕೇಂದ್ರ ಗೃಹ ಸಚಿವಾಲಯದೊಂದಿಗೆ ಮಾತನಾಡಿದ್ದೇವೆ ಎಂಬುದಾಗಿ ತಿಳಿಸಿದ್ದರು. ಈ ಬೆನ್ನಲ್ಲೇ ಹವಾಮಾನ ವೈಪರಿತ್ಯದಿಂದಾಗಿ ಉತ್ತರಾಖಂಡದಲ್ಲಿ ಕರ್ನಾಟಕದ ನಾಲ್ವರು ಸೇರಿದಂತೆ 9 ಮಂದಿ ಚಾರಣಿಗರು ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ(35), ಚಿತ್ರಾ (48), ಸಿಂಧು (45), ವೆಂಕಟೇಶ್ ಪ್ರಸಾದ್ (52), ಅನಿತಾ (61), ಆಶಾ ಸುಧಾಕರ್ (72) ಹಾಗೂ ಪದ್ಮನಾಭ್ ಕೆಪಿಎಸ್(50) ವಿನಾಯಕ್ ಎಂಬುವರು ಸಾವನ್ನಪ್ಪಿರೋದಾಗಿ ಹೇಳಲಾಗುತ್ತಿದೆ. ಅಂದಹಾಗೇ ಇವರೆಲ್ಲರೂ ಬೆಂಗಳೂರಿನಿಂದ 18 ಜನರು ಚಾರಣಕ್ಕೆ ಉತ್ತರಾಖಂಡಕ್ಕೆ ತೆರಳಿದ್ದರು. ಇವರೊಂದಿಗೆ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಅವಧಿಗೆ ಪ್ರಧಾನಿ ಗದ್ದುಗೆಗೇರಲು ಮುಹೂರ್ತ ಫಿಕ್ಸ್ ಆಗಿದೆ. ಜೂನ್.8ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಕೀಯವಾಗಿ ಮಹತ್ವದ ಹಿಂದಿ ಭಾಷಿಕ ರಾಜ್ಯಗಳಲ್ಲಿ ಬಿಜೆಪಿ ಮೈತ್ರಿಕೂಟ ಮಂಗಳವಾರ ಗಮನಾರ್ಹ ಪುನರುಜ್ಜೀವನ ಕಂಡಿದೆ. ಮೈತ್ರಿಕೂಟದ ಅಂಗಪಕ್ಷವಾದ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಗಣನೀಯ ಲಾಭವನ್ನು ಗಳಿಸಿದರೆ, ರಾಜಸ್ಥಾನ, ಬಿಹಾರ, ಹರಿಯಾಣ ಮತ್ತು ಜಾರ್ಖಂಡ್ನಲ್ಲಿಯೂ ಬಣವು ಪ್ರಗತಿ ಸಾಧಿಸಿದೆ. ವಿವಿಧ ಚುನಾವಣೋತ್ತರ ಸಮೀಕ್ಷೆಗಳು ಊಹಿಸಿದ ಬಹುಮತವಿಲ್ಲದೆ, ಪ್ರಧಾನಿ ಮೋದಿಯವರ ಬಿಜೆಪಿ ನೇತೃತ್ವದ ಮೈತ್ರಿಕೂಟವು ಸತತ ಮೂರನೇ ಅವಧಿಗೆ ಅಧಿಕಾರವನ್ನು ಪಡೆಯಲು ಸಜ್ಜಾಗಿದೆ. ಫಲಿತಾಂಶಗಳು ಮತ್ತು ಪ್ರವೃತ್ತಿಗಳು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು 291 ಲೋಕಸಭಾ ಸ್ಥಾನಗಳನ್ನು ಪಡೆಯಲು ಸಜ್ಜಾಗಿದ್ದರೆ, ಎನ್ಡಿಎ ಮೈತ್ರಿಕೂಟವು 234 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ. 2024 ರ ಲೋಕಸಭಾ ಚುನಾವಣೆಯ ಫಲಿತಾಂಶವು ಬಿಜೆಪಿಗೆ ಗಂಭೀರವಾದ ವಾಸ್ತವವನ್ನು ಪ್ರಸ್ತುತಪಡಿಸುತ್ತದೆ, ಇದು ಆಡಳಿತ ಮೈತ್ರಿಕೂಟವು ಸರ್ಕಾರ ರಚಿಸಲು ಸಿದ್ಧವಾಗಿದ್ದರೂ ಬಹುಮತದ 272 ಕ್ಕಿಂತ ಕಡಿಮೆಯಾಗಿದೆ. ಇದು 2019…
ಜೀವನದಲ್ಲಿ ಎಲ್ಲ ರೀತಿಯ ಸವಲತ್ತುಗಳನ್ನು ಪಡೆದು ಮಾನಸಿಕ ಸಂತೋಷದಿಂದ ಬದುಕುವವನು ಸಕಲ ಸಂಪತ್ತಿನಿಂದ ಬಾಳುತ್ತಾನೆ ಎಂದು ಹೇಳಲಾಗುತ್ತದೆ. ಯಶಸ್ಸಿನ ನಂತರ ನಾವು ಎಲ್ಲಾ ಸಂಪತ್ತು ಮತ್ತು ಯಶಸ್ಸನ್ನು ಪಡೆಯಲು ವಿವಿಧ ರೀತಿಯ ಪೂಜೆಗಳಿವೆ. ಅದರಲ್ಲಿ ಡಂಬಳ ದೀಪಾರಾಧನೆಯೂ ಒಂದು. ಈ ಪೂಜೆಯನ್ನು ಸರಿಯಾಗಿ ನಡೆಸುವುದು ಹೇಗೆ ಎಂದು ನೋಡೋಣ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ…
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಸ್ಟಾರ್ ಚಂದ್ರು ಸೋಲು ಕಂಡಿದ್ದಾರೆ. ಹಾಗಾದರೆ ಈ ಗೆಲುವು, ಸೋಲಿಗೆ ಕಾರಣ ಏನು ಗೊತ್ತಾ.? ಮುಂದೆ ಓದಿ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗೆಲುವಿಗೆ ಕಾರಣಗಳು * ಕುಮಾರಸ್ವಾಮಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಆಗಿದ್ದು. * ಕುಮಾರಸ್ವಾಮಿ ಅವರ ವರ್ಚಸ್ಸು. * ಮಂಡ್ಯ ಜೆಡಿಎಸ್ ನ ಭದ್ರಕೋಟೆ. * ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗಿದ್ದು. * ಒಕ್ಕಲಿಗರು ಸೇರಿದಂತೆ ಇತರೆ ವರ್ಗದವರು ಕೈ ಹಿಡಿದಿದ್ದು. * ದಳಪತಿಳ ಒಗ್ಗಟಿನ ಮಂತ್ರ ಪಠಣ. * ಮೈತ್ರಿ ನಾಯಕರ ಸಾಂಘಿಕ ಹೋರಾಟ. * ಮಾಜಿ ಶಾಸಕರ ಅವಿರತ ಶ್ರಮ. * ಗೆದ್ದರೇ ಕೇಂದ್ರ ಸಚಿವರಾಗುತ್ತಾರೆ ಎಂಬ ಘೋಷಣೆ. * ಆಡಳಿತ ವಿರೋಧಿ ಅಲೆ. * ಹೃದಯ ಶಸ್ತ್ರ ಚಿಕಿತ್ಸೆ ಬಗ್ಗೆ ಅನುಕಂಪ ಹಾಗೂ ವಿರೋಧ ಪಕ್ಷದ ನಾಯಕರ ಹೇಳಿಕೆ. * ಗ್ಯಾರಂಟಿ ಯೋಜನೆಗಳು ಕೈ ಹಿಡಿಯುವಲ್ಲಿ ವಿಫಲ. * ಕಾವೇರಿ…
ವಾರಣಾಸಿ: ಲೋಕಸಭಾ ಚುನಾವಣೆಯಲ್ಲಿ ವಾರಣಾಸಿ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಂತ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬರೋಬ್ಬರಿ 6,12,970 ಮತಗಳನ್ನು ಪಡೆದಿದ್ದಾರೆ.
ಬೀದರ್: ಕಲ್ಯಾಣ ಕರ್ನಾಟಕದ ಎಲ್ಲ ಐದು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿರುವ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ, ಕ.ಕ. ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಚುನಾವಣೆ ಫಲಿತಾಂಶದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದಿಂದ ಜಯ ಸಾಧಿಸಿದ ಎಲ್ಲರಿಗೂ ಅಭಿನಂದನೆ ತಿಳಿಸಿದ್ದಾರೆ. ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಂದೂಕಾಲು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ನೀಡಿದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ಸಾಗರ್ ಖಂಡ್ರೆ ಅವರನ್ನು 18ನೇ ಲೋಕಸಭೆಯಲ್ಲಿ ಅತ್ಯಂತ ಕಿರಿಯ ಸಂಸತ್ ಸದಸ್ಯರೆಂಬ ಹೆಗ್ಗಳಿಕೆಗೆ ಪಾತ್ರರಾಗುವಂತೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದ ಎಲ್ಲ ಮತದಾರರಿಗೆ ಅದರಲ್ಲೂ ಮಾತೆಯರಿಗೆ, ಸೋದರಿಯರಿಗೆ ಮತ್ತು ಯುವ ಮತದಾರರಿಗೆ ನಾನು ತುಂಬು ಹೃದಯದ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ದಾರೆ. ಪ್ರಜಾಪ್ರಭುತ್ವದ ಮಹಾ ಹಬ್ಬ ಸಾರ್ವತ್ರಿಕ ಚುನಾವಣೆ ಯಶಸ್ವಿಯಾಗಿ ಪೂರ್ಣವಾಗಲು ಸಹಕರಿಸಿದ ರಾಜ್ಯದ ಎಲ್ಲ ಮತದಾರರಿಗೆ, ಚುನಾವಣಾ ಆಯೋಗಕ್ಕೆ, ಚುನಾವಣಾ ಕಾರ್ಯದಲ್ಲಿ ನಿರತರಾದ ಎಲ್ಲರಿಗೂ ಕಾಂಗ್ರೆಸ್ ಪಕ್ಷದ ಪರವಾಗಿ ನಾನು…
ಬೆಂಗಳೂರು: ಬಿಜೆಪಿ ಮತ್ತು ಎನ್ಡಿಎ ಮಿತ್ರ ಕೂಟ 295ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಸ್ವಾತಂತ್ರ್ಯ ಬಂದ ಬಳಿಕ ಕಾಂಗ್ರೆಸ್ಸೇತರ ಪಕ್ಷ ಬಿಜೆಪಿ ಸತತವಾಗಿ ಮೂರನೇ ಬಾರಿಗೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವುದು ಪ್ರತಿಯೊಬ್ಬರೂ ಸಂತೋಷ ಪಡುವ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲೂ ಬಿಜೆಪಿ- ಜೆಡಿಎಸ್ ಪಕ್ಷ ಒಟ್ಟಾಗಿ ಚುನಾವಣೆ ಎದುರಿಸಿದ್ದು, 17 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷ ಗೆದ್ದಿವೆ. ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದೆ ಎಂದು ವಿಶ್ಲೇಷಿಸಿದರು. ತಮ್ಮ ಗ್ಯಾರಂಟಿಗಳ ಮೂಲಕ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಕಾಂಗ್ರೆಸ್ಸಿಗರ ಕನಸು ಇವತ್ತು ಭಗ್ನವಾಗಿದೆ ಎಂದ ಅವರು, ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಎರಡೂ ಪಕ್ಷಗಳ ಮುಖಂಡರು,…