Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಲಾಟೆ ಮಾಡಿಕೊಂಡು. ASI ಮೇಲೆ, HC ಹಲ್ಲೆಗೂ ಯತ್ನಿಸಿದ್ದಾರೆ ಎನ್ನಲಾದಂತ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿತ್ತು. ಈ ಘಟನೆ ಸಂಭಂದ ASI, HC ಅಮಾನತುಗೂಳಿಸಿ ಡಿಸಿಪಿ ಆದೇಶಿಸಿದ್ದಾರೆ. ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಎಸ್ಐ ಮಂಜುನಾಥ್ ಹಾಗೂ ಹೆಚ್ ಕಾನ್ಸ್ ಸ್ಟೇಬಲ್ ಅಂಜನಾಮೂರ್ತಿ ನಡುವೆ ಗಲಾಟೆಯಾಗಿದೆ ಎಂದು ಹೇಳಲಾಗುತ್ತಿದೆ. ಜುಲೈ.16ರಂದು ಪ್ರಕರಣವೊಂದರ ಬಗ್ಗೆ ಎಎಸ್ಐ ಮಂಜುನಾಥ್ ಅವರು ಬೇರೆ ಸಿಬ್ಬಂದಿಗಳೊಂದಿಗೆ ಮಾತನಾಡುತ್ತಿದ್ದಂತ ಸಂದರ್ಭದಲ್ಲಿ ಹೆಚ್ ಸಿ ಅಂಜನಾಮೂರ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದಷ್ಟೇ ಅಲ್ಲದೇ ಎಎಸ್ಐ ಮಂಜುನಾಥ್ ಮೇಲೆ ಹೆಡ್ ಕಾನ್ಸ್ ಸ್ಟೇಬಲ್ ಅಂಜನಾಮೂರ್ತಿ ಅವರು ಹಲ್ಲೆಗೂ ಮುಂದಾಗಿದ್ದಾರೆ. ಈ ವೇಳೆಯಲ್ಲಿ ಠಾಣೆಯಲ್ಲಿದ್ದಂತ ಇತರೆ ಸಿಬ್ಬಂದಿಗಳು ಜಗಳ ಬಿಡಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಘಟನೆಯಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವಂತ ಎಎಸ್ಐ ಮಂಜುನಾಥ್ ಆಘಾತಕ್ಕೊಳಗಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈಗಾಗಲೇ ಎಎಸ್ಐ ಮಂಜುನಾಥ್ ಎರಡು ಸ್ಟಂಟ್ ಅಳವಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತಂತೆ ಕನ್ನಡ…
ಉತ್ತರ ಕನ್ನಡ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಶಿರೂರು ಬಳಿಯಲ್ಲಿ ಗುಡ್ಡ ಕುಸಿತಗೊಂಡಿತ್ತು. ಎರಡು ಕುಟುಂಬಗಳು ಸಹಿತ ವಾಹನ ಸವಾರರು ಕೂಡ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ಇದುವರೆಗೂ 6 ಜನರ ಮೃತದೇಹಗಳು ಪತ್ತೆಯಾಗಿದ್ದವು. ಇಂದು ಛಿದ್ರ ಛಿದ್ರವಾಗಿರುವಂತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಹೀಗಾಗಿ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಇನ್ನು ಈ ಘಟನೆಯಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್(11) ಸೇರಿ ಟ್ರಕ್ ಚಾಲಕನ ಶವ ಪತ್ತೆಯಾಗಿದೆ. ಈ ನಾಲ್ವರ ಮೃತದೇಹಗಳು ಗೋಕರ್ಣ ಸಮೀಪ ಸಿಕ್ಕಿದೆ. ಇನ್ನು ಕುಮಟಾ ಸರ್ಕಾರಿ ಅಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ. ಇಂದು ಬೆಳಂಬಾರ ಕಡಲತೀರದಲ್ಲಿ ಛಿದ್ರ ಛಿದ್ರವಾಗಿರುವಂತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.…
ಶಿವಮೊಗ್ಗ: ಜಿಲ್ಲೆಯಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ನಾಳೆ ಕೂಡ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜಾ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು, ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ ಅಂತ ತಿಳಿಸಿದ್ದಾರೆ. ಅಂದಹಾಗೇ ಈ ಮೊದಲು ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ಹಾಗೂ ಸೊರಬ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಆಯಾ ತಾಲ್ಲೂಕಿನ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದರು. ಇದೀಗ ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಭಾರೀ ಮಳೆಯ…
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಮೈಸೂರು-ಮೈಲಾಡುತುರೈ ಎಕ್ಸ್ ಪ್ರೆಸ್ ರೈಲು ಕಡಲೂರು ಪೋರ್ಟ್ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ್ ಕನಮಡಿ ಅವರು ಮಾಹಿತಿ ನೀಡಿದ್ದು, ಮಯಿಲಾಡುತುರೈ-ಮೈಸೂರು ನಿಲ್ದಾಣಗಳ ನಡುವೆ ಪ್ರತಿದಿನ ಚಲಿಸುವ ಎಕ್ಸ್ ಪ್ರೆಸ್ ರೈಲುಗಳ ಸೇವೆಯನ್ನು ಕಡಲೂರು ಪೋರ್ಟ್ವರೆಗೆ ವಿಸ್ತರಿಸಲು ದಕ್ಷಿಣ ರೈಲ್ವೆಯು ಸೂಚಿಸಿದೆ. ವಿಸ್ತೃತ ರೈಲು ಸೇವೆಯು ಎರಡೂ ಕಡೆಯಿಂದ ಜುಲೈ 19, 2024 ರಿಂದ ಪ್ರಾರಂಭವಾಗಲಿದೆ ಎಂದಿದ್ದಾರೆ. ವಿಸ್ತರಣೆಗೊಂಡ ಭಾಗದ ರೈಲಿನ ನಿಲುಗಡೆ ಮತ್ತು ಸಮಯವನ್ನು ಈ ಕೆಳಗಿನಂತಿವೆ:- 1. ರೈಲು ಸಂಖ್ಯೆ 16232 ಮೈಸೂರು-ಕಡಲೂರು ಪೋರ್ಟ್ ಡೈಲಿ ಎಕ್ಸ್ ಪ್ರೆಸ್: • ಮಯಿಲಾಡುತುರೈಗೆ 06:45 ಗಂಟೆಗೆ ಆಗಮಿಸಿ, 07:00 ಗಂಟೆಗೆ ನಿರ್ಗಮಿಸಲಿದೆ. • ಸಿರ್ಕಾಝಿಗೆ 07:23 ಗಂಟೆಗೆ ಆಗಮಿಸಿ, 07:24 ಗಂಟೆಗೆ ನಿರ್ಗಮಿಸಲಿದೆ. • ಚಿದಂಬರಂಗೆ 07:41 ಗಂಟೆಗೆ ಆಗಮಿಸಿ, 07:42 ಗಂಟೆಗೆ ನಿರ್ಗಮಿಸಲಿದೆ. • ಕಡಲೂರು ಪೋರ್ಟ್…
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…
ಮಡಿಕೇರಿ : ಮಾನವ ಸಂಪನ್ಮೂಲ ಇಲಾಖೆಯಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಈಗಾಗಲೇ ಆಹ್ವಾನಿಸಿದ್ದು, ಅರ್ಜಿಯನ್ನು ಸೆಪ್ಟೆಂಬರ್, 16 ರೊಳಗೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊಡಗು ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರಾಥಮಿಕ ಶಾಲೆಯಲ್ಲಿ ಐದನೆಯ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ಪಾಲಕರು ಕೊಡಗು ಜಿಲ್ಲೆಯ ನಿವಾಸಿಯಾಗಿದ್ದು, ವಿದ್ಯಾರ್ಥಿಯೂ ಕೂಡಾ ಕೊಡಗು ಜಿಲ್ಲೆಯಲ್ಲೇ ಓದುತ್ತಿರಬೇಕು. ಅಭ್ಯರ್ಥಿ 2023 ರ ಮೇ, 01 ರಿಂದ 2025 ರ ಜುಲೈ, 31 ರೊಳಗೆ ಜನಿಸಿದವರಾಗಿರಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 16 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು https://navodaya.gov.in ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗಳನ್ನು ಅಪ್‍ಲೋಡ್ ಮಾಡಬಹುದು ಎಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಪಂಕಜಾಕ್ಷನ್…
ಬೆಂಗಳೂರು : “ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆಯಲ್ಲಿ ತಪ್ಪು ಮಾಡಿರುವುದು ಬ್ಯಾಂಕ್ ಮ್ಯಾನೇಜರ್. ಇದಕ್ಕೆ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ಕೊಡಬೇಕು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಖಾರವಾಗಿ ಪ್ರಶ್ನಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು “ಹಗರಣಕ್ಕೂ ಸಿದ್ದರಾಮಯ್ಯ ಅವರಿಗೂ ಏನು ಸಂಬಂಧವಿದೆ? ಅಧಿಕಾರಿ ತಪ್ಪು ಮಾಡಿದರೆ ಮುಖ್ಯಮಂತ್ರಿಗಳು ಜವಾಬ್ದಾರರಾಗುತ್ತಾರೆಯೇ? ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಆರೋಪಿಗಳಿಗೆ ಸಾಲ ಮಂಜೂರು ಮಾಡಿದ್ದಾರೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆಯೇ?” ಎಂದು ಖಡಕ್ಕಾಗಿ ಉತ್ತರಿಸಿದರು. ಪ್ರತಿಪಕ್ಷಗಳಿಗೆ ಸದನದ ಕಲಾಪಗಳು ನಡಾವಳಿಗಳ ತಿಳುವಳಿಕೆಯಿಲ್ಲ. ಅವರಿಗೆ ನಾವು ಮಾತನಾಡಲು ಅವಕಾಶ ನೀಡಿದ್ದೇವೆ. ಮುಖ್ಯಮಂತ್ರಿಗಳಿಗೆ ಮಾತನಾಡಲು ಅವಕಾಶ ನೀಡಬೇಕಿತ್ತು ಆದರೆ ನೀಡಿಲ್ಲ. ಈ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿದ್ದು, ನಮಗೂ ರಾಜಕೀಯ ಮಾಡಲು ಬರುತ್ತದೆ” ಎಂದರು. ನಾವು ಯಾವುದೇ ತಪ್ಪು ಮಾಡಿಲ್ಲ, ಸರ್ಕಾರ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಕೆಲವು ಅಧಿಕಾರಿಗಳು ತಪ್ಪು ಮಾಡಿದ್ದು, ಇದನ್ನು ರಾಜಕೀಯವಾಗಿ ನಮ್ಮ ವಿರುದ್ಧ ಬಳಸಿಕೊಳ್ಳುತ್ತಿದ್ದಾರೆ. ಎಸ್ ಐಟಿ…
ಶಿವಮೊಗ್ಗ: ದೇಶದ ಇತಿಹಾಸವನ್ನು ಬರೆಯಬೇಕಾದಂತ ಮಾಧ್ಯಮ ಇಂದು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂಬುದಾಗಿ ಚಿಂತಕ, ಬರಹಕಾರ, ಸಾಮಾಜಿಕ ಹೋರಾಟಗಾರ ಶಿವಸುಂದರ್ ಕಳವಳ ವ್ಯಕ್ತ ಪಡಿಸಿದ್ದಾರೆ. ಇಂದು ಸಾಗರದಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಕುವೆಂಪು ವಿವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಐಕ್ಯು ಎಸಿ, ಕನ್ನಡ ಮತ್ತು ಇಂಗ್ಲೀಷ್ ವಿಭಾಗಗಳು ಹಾಗೂ ಡಿಜಿಟಲ್ ಮೀಡಿಯಾ ಪ್ರೆಸ್ ಕ್ಲಬ್ ಸಹಯೋಗದಲ್ಲಿ ನಡೆದಂತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗದಂತ ಅವರು, ಮಾಧ್ಯಮ ಅಂದು-ಇಂದು ಎನ್ನುವ ವಿಷಯದ ಕುರಿತು ಮಾತನಾಡಿದರು. ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ನಾವೆಲ್ಲರೂ ಒಂದು ಎನ್ನುವ ಬಂಧುತ್ವ ಭಾವವನ್ನು ವ್ಯಕ್ತಿಗತ ತತ್ವವನ್ನು ರೂಢಿಸಿಕೊಳ್ಳಬೇಕು. ಈ ದೇಶದಲ್ಲಿ ಅಸಮಾನತೆಯೇ ದೈವದತ್ತ ನಿರ್ಣಯವೆಂದೇ ಭಾವಿಸಲಾಗಿತ್ತು. ಇದು ನಮ್ಮ ನಮ್ಮ ಮನೆಗಳಲ್ಲಿ ಗೋಚರಿಸುತ್ತಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಬೇಕು. ಸಾಮಾಜಿಕ ಸಮಾನತೆಯನ್ನು ಮನೆಯೊಳಗೂ ಕಾಪಾಡಬೇಕು ಎಂದರು. ಗಂಟೆಗೆ ಇಬ್ಬರು ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ದೇಶದಲ್ಲಿ ಈವರೆಗೆ 75,000 ಯುವಕರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತ…
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಹವಾಮಾನ ಇಲಾಖೆಯಿಂದ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸಾಗರ ತಹಶೀಲ್ದಾರ್ ಅವರು, ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು ಶಾಲಾ ಮಕ್ಕಳ ಹಿತದೃಷ್ಟಿಯಿಂದ ನಾಳೆ ದಿನಾಂಕ 19-07-2024 ರ ಶುಕ್ರವಾರದಂದು ಎಲ್ಲಾ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ಗಳಿಗೆ ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ ಅಂತ ತಿಳಿಸಿದ್ದಾರೆ. ಶಾಲಾ ಮಕ್ಕಳ ಹಿತದೃಷ್ಠಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಮುಂಜಾಗ್ರತೆಯ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಎಂಬುದಾಗಿ ಹೇಳಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/soraba-taluka-to-remain-closed-on-july-19-due-to-heavy-rains/ https://kannadanewsnow.com/kannada/sc-directs-nta-to-declare-neet-ug-results-of-all-candidates-by-friday/
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಇಂದು ಸೊರಬ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ನಾಳೆ ಕೂಡ ಭಾರೀ ಮಳೆಯ ಕಾರಣ ಸೊರಬ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಸೊರಬ ತಾಲ್ಲೂಕಿನ ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳಾದ ಮಂಜುಳಾ ಹೆಗಡಾಳ್ ಅವರು, ಸೊರಬ ತಾಲ್ಲೂಕಿನಾಧ್ಯಂತ ತೀವ್ರ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಇಂದು ರಜೆ ನೀಡಲಾಗಿತ್ತು ಎಂದಿದ್ದಾರೆ. ಇನ್ನೂ ದಿನಾಂಕ 19-07-2024ರ ನಾಳೆ ಕೂಡ ಸೊರಬ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ನಾಳೆ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಸದರಿ ರಜೆ ದಿನದಂದು ನಡೆಯಬೇಕಿದ್ದ ಪಾಠ-ಪ್ರವಚನಗಳನ್ನು ಮುಂದಿನ ರಜಾ ದಿನಗಳಲ್ಲಿ ನಡೆಸಿ, ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/linemen-should-take-this-necessary-precautions-while-working-on-electricity/ https://kannadanewsnow.com/kannada/important-information-for-railway-passengers-these-trains-cancelled-temporary-change-in-route/