Author: kannadanewsnow09

ಬೆಂಗಳೂರು: ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹನಿಟ್ರ್ಯಾಪ್ ಯತ್ನ ಆರೋಪದ ಸಂಬಂಧ ದೂರು ನೀಡದಂತ ಎಂಎಲ್ಸಿ ರಾಜೇಂದ್ರ ಅವರು, ನನ್ನ ಕೊಲೆಗೆ ಯತ್ನ ನಡೆದಿದೆ ಎಂಬುದಾಗಿ ಡಿಜಿ-ಐಜಿಪಿಗೆ ದೂರು ನೀಡಿದ್ದಾರೆ. ಇಂದು ಬೆಂಗಳೂರಲ್ಲಿ ಡಿಜಿ-ಐಜಿಪಿ ಅಲೋಕ್ ಮೋಹನ್ ಅವರನ್ನು ಭೇಟಿಯಾಗಿರುವಂತ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ನನ್ನ ಕೊಲೆಗೆ ಯತ್ನ ನಡೆದಿದೆ ಎಂಬುದಾಗಿ ದೂರು ನೀಡಿದ್ದಾರೆ. ದೂರಿನ ಜೊತೆಗೆ ಆಡಿಯೋ ಕ್ಲಿಪ್ ಗಳನ್ನು ನೀಡಿದ್ದಾರೆ. ಅಲ್ಲದೇ ನಮ್ಮ ಮನೆಗೆ ಶಾಮಿಯಾನ ಹಾಕಲು ಬಂದಿದ್ದವರು ನನ್ನ ಕೊಲೆಗೆ ಯತ್ನ ಮಾಡಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಎಂಎಲ್ಸಿ ರಾಜೇಂದ್ರ ಅವರಿಗೆ ತುಮಕೂರು ಎಸ್ಪಿಗೆ ದೂರು ನೀಡುವಂತೆ ಡಿಜಿ-ಐಜಿಪಿ ಅಲೋಕ್ ಮೋಹನ್ ಅವರು ಸೂಚಿಸಿದ್ದಾರೆ. ಹೀಗಾಗಿ ನಾಳೆ ತುಮಕೂರು ಎಸ್ಪಿ ಭೇಟಿಯಾಗಿ ಈ ಸಂಬಂಧ ದೂರು ನೀಡುವುದಾಗಿ ಎಂಎಲ್ಸಿ ರಾಜೇಂದ್ರ ತಿಳಿಸಿದ್ದಾರೆ. https://kannadanewsnow.com/kannada/nandini-milk-price-hiked-by-rs-4-per-litre-state-cabinet/ https://kannadanewsnow.com/kannada/breaking-mp-priyanka-gandhi-visits-sitadevi-love-kush-temple-in-kerala-watch-video/

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಇಂದಿನ ರಾಜ್ಯ ಸಚಿವ ಸಂಪು ಸಭೆಯಲ್ಲಿ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡುವಂತ ನಿರ್ಧಾರ ಕೈಗೊಳ್ಳಲಾಗಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ. ಕೆಲ ದಿನಗಳ ಹಿಂದೆ ಕೆ ಎಂ ಎಫ್ ಜೊತೆಗೆ ಸಿಎಂ ಸಿದ್ಧರಾಮಯ್ಯ ಸಭೆ ನಡೆಸಿದ್ದರು. ಅಂದು ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಆ ಸಭೆಯ ಬಳಿಕ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳೋದಾಗಿ ತಿಳಿಸಿದ್ದರು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಗ್ರಾಹಕರಿಗೆ ಬಿಗ್ ಶಾಕ್ ಎನ್ನುವಂತೆ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ದಿನೇ ದಿನೇ ರಾಜ್ಯದ ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗುವಂತೆ ಆಗಿದೆ. ಮೆಟ್ರೋ, ಬಿಎಂಟಿಸಿ, ಕೆ ಎಸ್…

Read More

ಬೆಂಗಳೂರು: ರಾಜ್ಯದ ಜನತೆಗೆ ಬಿಗ್ ಶಾಕ್ ಎನ್ನುವಂತೆ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಏರಿಕೆ ಮಾಡಲಾಗಿದೆ. ಈ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯದಲ್ಲಿ ನಂದಿನಿ ಹಾಲಿನದರವನ್ನು ಪ್ರತಿ ಲೀಟರ್ ಗೆ 4 ರೂಪಾಯಿ ಏರಿಕೆ ಮಾಡುವುದಕ್ಕೆ ಅನುಮೋದಿಸಿದೆ. ಕೆಲ ದಿನಗಳ ಹಿಂದೆ ಕೆಎಂಎಫ್ ಅಧ್ಯಕ್ಷರು, ಹಾಲಿನ ಒಕ್ಕೂಟದೊಂದಿಗೆ ಸಿಎಂ ಸಿದ್ಧರಾಮಯ್ಯ ಸಭೆ ನಡೆಸಿದ್ದರು. ಈ ಸಭೆಯಲ್ಲಿ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಬಳಿಕ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ.

Read More

ಯಾವುದೇ ಜೀವನದಲ್ಲಿ ಪ್ರಗತಿಯು ಜೀವನ ನೀಡಬಹುದು. ನಿಂತ ನೀರಿನಂತೆ ಜೀವ ಒಂದೆಡೆ ನಿಂತರೆ ಪಾಚಿಯಂತೆ ಕೊಳೆಯುತ್ತದೆ. ನಿಮ್ಮ ಜೀವನವು ಹರಿಯುವ ಸ್ಪಷ್ಟ ಹೊಳೆಯಂತೆ ಭವ್ಯವಾಗಲು, ಪ್ರಗತಿಗೆ ಪೂರ್ವಜರ ಆಶೀರ್ವಾದ ಖಂಡಿತವಾಗಿಯೂ ಬೇಕು. ನಿಮ್ಮ ಪೂರ್ವಜರ ಆಶೀರ್ವಾದ ಪಡೆಯಲು ನೀವು ಎಲ್ಲಿ ದೀಪವನ್ನು ಹಚ್ಚುತ್ತೀರಿ? ಅದನ್ನೇ ನಾವು ಈ ಆಧ್ಯಾತ್ಮಿಕ ದಾಖಲೆಯ ಮೂಲಕ ತಿಳಿಯಲಿದ್ದೇವೆ . ನಮ್ಮ ಪೂರ್ವಜರ ಆಶೀರ್ವಾದವಿಲ್ಲದೆ ನಾವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂಬುದು ಸತ್ಯ. ಮನೆಯಲ್ಲಿ ಪೂರ್ವಿಕರ ಶಾಪವಿದ್ದರೆ ಪಿತೃ ದೋಷ ಕಾಡುತ್ತದೆ, ಏನೇ ಪ್ರಯತ್ನ ಮಾಡಿದರೂ ಜೀವನದಲ್ಲಿ ಪ್ರಗತಿ ಕಾಣುವುದಿಲ್ಲ ಎಂಬುದು ನಿಯಮ. ಇದರಿಂದ ಸುಲಭವಾಗಿ ಮುಕ್ತಿ ಹೊಂದಲು ಪ್ರತಿ ಅಮಾವಾಸ್ಯೆಯಲ್ಲಿ ಈ ಸರಳ ಪೂಜೆಯನ್ನು ಮಾಡಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ…

Read More

ಬೆಂಗಳೂರು : ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1976ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, “ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ” ಎಂದು ಘನ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿರುವುದನ್ನು ಉಲ್ಲೇಖಿಸಿದ್ದಾರೆ. ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿರುವುದನ್ನೂ ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿರುವ ಸಚಿವರು, ಅಕ್ರಮ ಮರಗಳ ಕಡಿತಲೆಗೆ ವಿಧಿಸುವ ದಂಡದ ಪ್ರಮಾಣ ಹೆಚ್ಚಳದ ಅಗತ್ಯ ಪ್ರತಿಪಾದಿಸಿದ್ದಾರೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ,…

Read More

ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ನೌಕರರು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ಪದೋನ್ನತಿ ಪಡೆಯುವ ಸಂಬಂಧ ಕಡ್ಡಾಯವಾಗಿ ನಿಗದಿಪಡಿಸಿದ ತರಬೇತಿಯನ್ನು ಪೂರ್ಣಗೊಳಿಸಬೇಕು ಎಂಬುದಾಗಿ ಆದೇಶಿಸಿದೆ. ಈ ಮೂಲಕ ಪದೋನ್ನತಿ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುಮ ಬಿ.ಎಸ್ ಅವರು, ರಾಜ್ಯ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳ ಎಲ್ಲಾ ಅಧಿಕಾರಿ / ನೌಕರರು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ಪದೋನ್ನತಿ ಪಡೆಯುವ ಪೂರ್ವದಲ್ಲಿ ಕಡ್ಡಾಯವಾಗಿ ನಿಗದಿಪಡಿಸಿದ ತರಬೇತಿಯನ್ನು ಪೂರ್ಣಗೊಳಿಸಿದ್ದಲ್ಲಿ ಮಾತ್ರ ಮುಂದಿನ ಹುದ್ದೆಗೆ ಪದೋನ್ನತಿ ಪಡೆಯಲು ಅರ್ಹತೆಯನ್ನು ನಿಗದಿಪಡಿಸುವ ಸಂಬಂಧ ‘ಕರ್ನಾಟಕ ರಾಜ್ಯ ನಾಗರಿಕ ಸೇವಾ (ಮುಂಬಡ್ತಿ ಹೊಂದಲು ತರಬೇತಿ ಕಡ್ಡಾಯ) ನಿಯಮಗಳು, 2025″ ಎಂಬ ಕರಡು ನಿಯಮವನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಸದರಿ…

Read More

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟಂತ ಪ್ರಯಾಣಿಕರಿಗೆ ಗುಡ್ ನ್ಯೂಸ್ ಅನ್ನು ಕೆ ಎಸ್ ಆರ್ ಟಿಸಿ ನೀಡಿದೆ. ಯುಗಾದಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ದಿನಾಂಕ: 30.03.2025 ರಂದು ಚಂದ್ರಮಾನ ಯುಗಾದಿ, ದಿನಾಂಕ 31.03.2025ರಂದು ರಂಜಾನ್ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:28.03.2025 ರಿಂದ 30.03.2025 gವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:31.03.2025ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ,…

Read More

ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ನೌಕರರು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ಪದೋನ್ನತಿ ಪಡೆಯುವ ಸಂಬಂಧ ಕಡ್ಡಾಯವಾಗಿ ನಿಗದಿಪಡಿಸಿದ ತರಬೇತಿಯನ್ನು ಪೂರ್ಣಗೊಳಿಸಬೇಕು ಎಂಬುದಾಗಿ ಆದೇಶಿಸಿದೆ. ಈ ಮೂಲಕ ಪದೋನ್ನತಿ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುಮ ಬಿ.ಎಸ್ ಅವರು, ರಾಜ್ಯ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳ ಎಲ್ಲಾ ಅಧಿಕಾರಿ / ನೌಕರರು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ಪದೋನ್ನತಿ ಪಡೆಯುವ ಪೂರ್ವದಲ್ಲಿ ಕಡ್ಡಾಯವಾಗಿ ನಿಗದಿಪಡಿಸಿದ ತರಬೇತಿಯನ್ನು ಪೂರ್ಣಗೊಳಿಸಿದ್ದಲ್ಲಿ ಮಾತ್ರ ಮುಂದಿನ ಹುದ್ದೆಗೆ ಪದೋನ್ನತಿ ಪಡೆಯಲು ಅರ್ಹತೆಯನ್ನು ನಿಗದಿಪಡಿಸುವ ಸಂಬಂಧ ‘ಕರ್ನಾಟಕ ರಾಜ್ಯ ನಾಗರಿಕ ಸೇವಾ (ಮುಂಬಡ್ತಿ ಹೊಂದಲು ತರಬೇತಿ ಕಡ್ಡಾಯ) ನಿಯಮಗಳು, 2025″ ಎಂಬ ಕರಡು ನಿಯಮವನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಸದರಿ…

Read More

ಬೆಂಗಳೂರು: ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಮಧ್ಯ ರೈಲ್ವೇಯು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮುಂಬೈ ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ 13 ಟ್ರಿಪ್‌ಗಳ ಬೇಡಿಕೆಯ ಮೇರೆಗೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಸಂಚರಿಸಲು ನಿರ್ಧರಿಸಿದೆ. ಈ ವಿಶೇಷ ರೈಲು ಸೇವೆಗಳ ವಿವರಗಳು ಹೀಗಿವೆ: ರೈಲು ಸಂಖ್ಯೆ 01013/01014 ಸಿಎಸ್ಎಂಟಿ ಮುಂಬೈ-ಎಸ್ಎಂವಿಟಿ ಬೆಂಗಳೂರು-ಸಿಎಸ್ಎಂಟಿ ಮುಂಬೈ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಖ್ಯೆ 01013 ಸಿಎಸ್ಎಂಟಿ ಮುಂಬೈ – ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 5, 12, 19, 26; ಮೇ 3, 10, 17, 24, 31; ಮತ್ತು ಜೂನ್ 7, 14, 21, 28 (ಶನಿವಾರ) ರಂದು ಸಿಎಸ್ಎಂಟಿ ಮುಂಬೈನಿಂದ 00:30 ಗಂಟೆಗೆ ಹೊರಟು, ಅದೇ ದಿನ 23:55 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ತಲುಪಲಿದೆ. ರೈಲು ಸಂಖ್ಯೆ 01014 ಎಸ್ಎಂವಿಟಿ ಬೆಂಗಳೂರು – ಸಿಎಸ್ಎಂಟಿ ಮುಂಬೈ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 6, 13, 20,…

Read More

ನವದೆಹಲಿ: ದೇಶಾದ್ಯಂತ ಹಲವಾರು ಗ್ರಾಹಕರು ಎಲ್ಲಾ ಅಪ್ಲಿಕೇಶನ್‌ಗಳಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಗಳಲ್ಲಿ ಸ್ಥಗಿತಗೊಂಡ ಸಮಯವನ್ನು ಅನುಭವಿಸಿದ್ದಾರೆ. ಸಂಜೆ 7:50 ರ ಹೊತ್ತಿಗೆ, ಡೌನ್‌ಡೆಕ್ಟರ್ UPI ಸಮಸ್ಯೆಯ ಕುರಿತು 2,750 ದೂರುಗಳನ್ನು ಸ್ವೀಕರಿಸಿದೆ. ವೆಬ್‌ಸೈಟ್ ಪ್ರಕಾರ, Google Pay ಗ್ರಾಹಕರು 296 ದೂರುಗಳನ್ನು ವರದಿ ಮಾಡಿದ್ದಾರೆ. ಅದೇ ರೀತಿ, Paytm ಅಪ್ಲಿಕೇಶನ್‌ಗೆ ಸಂಬಂಧಿಸಿದಂತೆ 119 ದೂರುಗಳು ಬಂದಿದ್ದರೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ಸ್ಥಗಿತಗೊಂಡಿರುವ ಬಗ್ಗೆ 376 ಗ್ರಾಹಕರು ದೂರು ನೀಡಿದ್ದಾರೆ. ಹೆಚ್ಚಿನ SBI ಗ್ರಾಹಕರು ತಮ್ಮ ನಗದು ವರ್ಗಾವಣೆ ಮತ್ತು ಆನ್‌ಲೈನ್ ಬ್ಯಾಂಕಿಂಗ್ ಸೇವೆಗಳು ಅಡ್ಡಿಪಡಿಸಲ್ಪಟ್ಟಿವೆ ಎಂದು ಹೇಳಿಕೊಂಡಿದ್ದಾರೆ. “ನನ್ನ ಜೀವನದಲ್ಲಿ ಮೊದಲ ಬಾರಿಗೆ ನಾನು UPI ಸ್ಥಗಿತಗೊಂಡಿರುವ ಸಮಯವನ್ನು ಅನುಭವಿಸಿದ್ದೇನೆ. ಬ್ಯಾಂಕ್‌ಗಳು ಅಥವಾ ಗೇಟ್‌ವೇಗಳಲ್ಲ, ಆದರೆ @UPI_NPCI ಸ್ವತಃ btw, ಫೆಬ್ರವರಿಯಲ್ಲಿ ಅಪ್‌ಟೈಮ್ 100% ಆಗಿತ್ತು,” ಎಂದು X ಬಳಕೆದಾರರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು X ನಲ್ಲಿ ಪೋಸ್ಟ್ ಮಾಡಿದ್ದಾರೆ, “ಇದು…

Read More