Author: kannadanewsnow09

ಬೆಂಗಳೂರು: ಬುದ್ದಿಮಾಂದ್ಯತೆ ಹೊಂದಿರುವ ಶೇ. 60ರಷ್ಟು ಜನರು ತಮ್ಮ ಇಳಿವಯಸ್ಸಿನಲ್ಲಿ ಅಲ್ಜೈಮರ್‌ ಕಾಯಿಲೆಗೆ ಒಳಗಾಗುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ನರವಿಜ್ಞಾನ ಎಪಿಲೆಪ್ಟಾಲಜಿ ಮತ್ತು ಸ್ಲೀಪ್ ಮೆಡಿಸಿನ್‌ನ ಮುಖ್ಯಸ್ಥ ಮತ್ತು ಸಲಹೆಗಾರ ಡಾ. ಪ್ರಮೋದ್ ಕೃಷ್ಣನ್ ಹೇಳಿದ್ದಾರೆ. “ವಿಶ್ವ ಅಲ್ಜೈಮರ್ ದಿನ”ದ ಪ್ರಯುಕ್ತ ಮಣಿಪಾಲ್ ಆಸ್ಪತ್ರೆ ಹಾಗೂ ರೋಚೆ ಡಯಾಗ್ನೋಸ್ಟಿಕ್ಸ್ ಇಂಡಿಯಾ ಸಹಯೋಗದೊಂದಿಗೆ ಆಯೋಜಿಸಿದ್ದ #MemoryVault ಅಭಿಯಾನದ ಭಾಗವಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು. ನಾವು ನೋಡಿದ ಎಲ್ಲಾ ಬುದ್ಧಿಮಾಂದ್ಯತೆಯ ರೋಗಿಗಳಲ್ಲಿ ಶೇ.60 ರಷ್ಟು ಜನರು ಆಲ್ಝೈಮರ್ ಕಾಯಿಲೆಗೆ ತುತ್ತಾಗಿದ್ದಾರೆ, ಇದರಲ್ಲಿ ಶೇ.70 ಕ್ಕಿಂತ ಹೆಚ್ಚು ಜನರು 2-3 ವರ್ಷಗಳ ರೋಗಲಕ್ಷಣದ ಕಂಡು ಬಂದ ಬಳಿಕ ಆಸ್ಪತ್ರೆಗೆ ಬರುತ್ತಿದ್ದಾರೆ ಎಂದು ಹೇಳಿದರು. “ಅಲ್ಜೈಮರ್ ರೋಗಲಕ್ಷಣಗಳನ್ನು ಮೊದಲೇ ಗುರುತಿಸುವುದರಿಂದ ಅದನ್ನು ಚಿಕಿತ್ಸೆಮಾಡಲು ಅವಕಾಶ ದೊರೆಯಲಿದೆ. CSF ಬಯೋಮಾರ್ಕರ್‌ಗಳಂತಹ ನಿಖರ ಪರೀಕ್ಷೆ ನಡೆಸಿ, ಸೂಕ್ತ ಚಿಕಿತ್ಸೆ ನೀಡುವ ಮೂಲಕ ರೋಗವನ್ನು ನಿಧಾನಗೊಳಿಸುವ ಜೊತೆಗೆ ರೋಗಿಯ ಜೀವನದ ಗುಣಮಟ್ಟವನ್ನು ಸುಧಾರಿಸಬಹುದು. ARDSI ಅಧ್ಯಕ್ಷೆ ರೇಣು ವೋಹ್ರಾ ಮಾತನಾಡಿ, ಅಲ್ಜೈಮರ್‌…

Read More

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ; ಈ ಆಯೋಗವನ್ನು ಆಯೋಗದಲ್ಲಿ ಇರುವವರೇ ನಡೆಸುತ್ತಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇನ್ನೂ 15 ಜಾತಿಗಳಿಗೆ ಕ್ರೈಸ್ತ ಟ್ಯಾಗ್ ನೀಡಿರುವುದನ್ನು ರದ್ದು ಮಾಡಬೇಕೆಂದು ಬಿಜೆಪಿ ನಿಯೋಗ ಒತ್ತಾಯಿಸಿತು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಿನ್ನೆ ಪ್ರಾರಂಭವಾಗಿದೆ. ಈ ಸಮೀಕ್ಷೆ ಒಂದು ಗೊಂದಲದ ಗೂಡು ಎಂದು ಟೀಕಿಸಿದರು. ಇದು ಹಿಂದುತ್ವ ವಿರೋಧ ನೀತಿ ಎಂದು ಆರೋಪಿಸಿದರು. ಗೊಂದಲ ಪರಿಹರಿಸಲು ಕೋರಿ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಕೊಟ್ಟಿದ್ದೇವೆ. ಬ್ರಾಹ್ಮಣ ಕ್ರೈಸ್ತರು, ಲಿಂಗಾಯತ ಕ್ರೈಸ್ತರು, ಒಕ್ಕಲಿಗ, ವೀರಶೈವ ಮೊದಲಾದ ಎಲ್ಲರನ್ನೂ ಕ್ರೈಸ್ತ ಎಂದು ಹೆಸರಿಸಿದ್ದಾರೆ. ಹೊಲೆಯ, ಮಾದಿಗ, ಬಂಜಾರ ಕ್ರೈಸ್ತ, ಬೋವಿ ಕ್ರೈಸ್ತ ಎಲ್ಲವನ್ನೂ ಸೇರಿಸಿದ್ದರು ಎಂದು ಆಕ್ಷೇಪಿಸಿದರು. ಹೋರಾಟಗಳು ನಡೆದು ಪ್ರಭಾವಿ…

Read More

ದಕ್ಷಿಣ ಕನ್ನಡ: ಮಹೇಶ್ ಶೆಟ್ಟಿ ತಿಮರೋಡಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಲಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ಎಸಿ ಆದೇಶಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ 32ಕ್ಕೂ ಹೆಚ್ಚು ಪ್ರಕರಣಗಳು ವಿವಿಧ ಠಾಣೆಗಳಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಎಸಿ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಎಸಿ ಸ್ಟೆಲ್ಲಾ ವರ್ಗೀಸ್ ಅವರು ಒಂದು ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶಿಸಿದ್ದಾರೆ.

Read More

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ ಸುಧಾರಣೆ ತಂದಿದೆ. ರಾಜ್ಯದಲ್ಲಿ ತೆರಿಗೆ ಏರಿಕೆಯಾಗಿದ್ದರೆ, ಕೇಂದ್ರ ಸರ್ಕಾರ ತೆರಿಗೆ ಕಡಿಮೆ ಮಾಡಿ ಜನರಿಗೆ ಆರ್ಥಿಕ ಚೈತನ್ಯ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯದಶಮಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಜಿಎಸ್‌ಟಿಯನ್ನು ಸರಳೀಕರಣ ಮಾಡಿ ಜನರಿಗೆ ಕೊಡುಗೆ ನೀಡಿದ್ದಾರೆ. ಶೇ.18 ರ ತೆರಿಗೆಯನ್ನು ಶೇ.5 ಕ್ಕೆ ತಂದಿದ್ದಾರೆ. ಕೆಲವು ಸರಕು, ಸೇವೆಗಳಲ್ಲಿ ತೆರಿಗೆ ವಿನಾಯಿತಿ ನೀಡಿದ್ದಾರೆ. ನಾನು ಆರ್ಥಿಕ ಸ್ಥಾಯಿ ಸಮಿತಿಯಲ್ಲಿ ಕೆಲಸ ಮಾಡುತ್ತಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿದಿರಲಿಲ್ಲ. ಮಧ್ಯಮವರ್ಗ ಹಾಗೂ ಬಡಜನರ ಪರವಾಗಿ ನಾನು ವಿಶೇಷವಾದ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ರೈತರು ಬಳಕೆ ಮಾಡುವ ಟ್ರ್ಯಾಕ್ಟರ್‌, ರಸಗೊಬ್ಬರ, ಹನಿ ನೀರಾವರಿ ಉಪಕರಣಗಳ ತೆರಿಗೆಯನ್ನು ಶೇ.5 ರ ವ್ಯಾಪ್ತಿಗೆ ತರಲಾಗಿದೆ. ಯುಪಿಎ ಅವಧಿಯಲ್ಲಿ ಎಲ್ಲ ಸರಕು, ಸೇವೆಗಳ ಮೇಲೆ ಶೇ.30 ರಷ್ಟು ತೆರಿಗೆ ಇತ್ತು.…

Read More

ಮೈಸೂರು : ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು. ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ- 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು, ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು, ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಲು ಸಹಾಯ ಮಾಡಬೇಕು ಎಂಬ ಚಿಂತನೆಯನ್ನು ಇಟ್ಟುಕೊಂಡು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರನ್ನು ಕೇಂದ್ರೀಕೃತವಾಗಿ ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೋಟ್ಯಾಂತರ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದರು. ಶೀಘ್ರವೇ ಗೃಹಲಕ್ಷ್ಮಿ ಹೆಸರಲ್ಲಿ ಸಹಕಾರ ಸಂಘಗಳ ಸ್ಥಾಪನೆ ಮಹಿಳೆಯರಿಗೆ ಬ್ಯಾಂಕ್ ಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ. ಇದರ ಪರಿಣಾಮ ಸ್ವಾವಲಂಬಿಯಾಗಿ ಜೀವನ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು…

Read More

ದೇಹದ ಪ್ರತಿಯೊಂದು ಜೀವಕೋಶಕ್ಕೂ ಪ್ರತಿಯೊಂದು ಅಂಗಕ್ಕೂ ಶಕ್ತಿ,ಪೋಷಕಾಂಶ, ಚೈತನ್ಯ ನೀಡುವುದು ಆಹಾರ.ಆಹಾರವು ವಿವಿಧ ಜೀವ ಕೋಶಗಳಿಗೆ ಪೋಷಕಾಂಶಗಳನ್ನು ನೀಡುವ ಮೊದಲು ಪೂರ್ವಭಾವಿಯಲ್ಲಿ ಜಾಠರಾಗ್ನಿಯ( Digestive fire) ಸಹಾಯದಿಂದ ಪಚನಗೊಂಡು,ಧಾತ್ವಗ್ನಿಯ ಸಹಕಾರದೊಂದಿಗೆ ಚಯಾಪಚಯನಗೊಳ್ಳುತ್ತದೆ(metabolism) ಮತ್ತು ಈ ಅಗ್ನಿಯು ಆಹಾರ ರಸವನ್ನು ಸಾರಭಾಗ ಅಂದರೆ ಪೋಷಣ ಭಾಗ ಮತ್ತು ಕಿಟ್ಟ ಭಾಗ (Waste) ವಾಗಿ ಬೇರ್ಪಡಿಸುತ್ತದೆ.ಸಾರಭಾಗವೂ ಜೀವಕೋಶಗಳಿಗೆ ಪೋಷಕಾಂಶ ನೀಡಿದರೇ, ಕಿಟ್ಟ ಭಾಗವು ಮಲಮೂತ್ರಾದಿಗಳ ಮುಖಾಂತರ ವಿಸರ್ಜನೆ ಆಗುತ್ತದೆ. ಆಯುರ್ವೇದದ ಪ್ರಕಾರ “ರೋಗಃ ಸರ್ವೇ ಅಪಿ ಮಂದಾಗ್ನೋ” ಅಂದರೆ ದುರ್ಬಲವಾದ ಅಗ್ನಿಯೇ ಎಲ್ಲಾ ರೋಗಗಳ ಉದ್ಭವಕ್ಕೆ ಕಾರಣ ಎಂದರ್ಥ. ಜಠರಾಗ್ನಿಯ ದುರ್ಬಲದಿಂದಾಗಿ ಸೇವಿಸಿದ ಆಹಾರ ಪರಿಪೂರ್ಣವಾಗಿ ಪಚನವಾಗದೆ ಅಪಕ್ವವಾದ ಆಹಾರ ರಸವು ಉತ್ಪತ್ತಿಯಾಗುತ್ತದೆ. ಈ ಅಪಕ್ವವಾದ ಆಹಾರ ರಸವನ್ನು “ಆಮ” ಎಂದು ಕರೆಯುತ್ತಾರೆ.ಈ ಆಮವು ತ್ರಿದೋಷಗಳಾದ ವಾತ,ಪಿತ್ತ, ಕಫ ದೋಷಗಳನ್ನು ಪ್ರಕೋಪಗೊಳಿಸಿ ರೋಗಗಳ ಉದ್ಭವಕ್ಕೆ ಕಾರಣವಾಗುತ್ತದೆ. ಅಗ್ನಿಯ ದುರ್ಬಲಕ್ಕೆ ಕಾರಣಗಳು : ಅತಿಯಾದ ತಣ್ಣನೆಯ ನೀರನ್ನು ಕುಡಿಯುವುದು. ಖಾಲಿ ಹೊಟ್ಟೆಯಲ್ಲಿ ಚಹಾ ಅಥವಾ ಕಾಫಿಯನ್ನು…

Read More

ಬೆಂಗಳೂರು : ಜೈನ ಮಂದಿರಗಳ ಪ್ರಧಾನ ಅರ್ಚಕರು ಹಾಗೂ ಸಹಾಯಕ ಅರ್ಚಕರುಗಳಿಗೆ ವೇತನ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದ 1043 ಜೈನ ಮಂದಿರಗಳ ಪ್ರಧಾನ ಅರ್ಚಕರಿಗೆ ತಲಾ 6 ಸಾವಿರ ರೂ., ಸಹಾಯಕ ಅರ್ಚಕರುಗಳಿಗೆ 5 ಸಾವಿರ ರೂ. ವೇತನ ನೀಡಲಾಗುವುದು. ಇದೇ ಮೊದಲ ಬಾರಿಗೆ ಜೈನ ಮಂದಿರಗಳ ವೇತನ ನಿಗದಿ ಸಂಬಂಧ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ವೇತನಕ್ಕಾಗಿ ಇದುವರೆಗೂ ಜಿಲ್ಲೆಗಳಿಂದ 1043 ಪ್ರಸ್ತಾವನೆ ಬಂದಿದ್ದು, ಸಚಿವ ಜಮೀರ್ ಅಹಮದ್ ಖಾನ್ ಅವರು ಎಲ್ಲ ಪ್ರಸ್ತಾವನೆ ಗೆ ಒಪ್ಪಿಗೆ ನೀಡಿ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಗಳೂರು ಗಾಂಧಿ ನಗರದ ಮಹಾಬೋಧಿ ಸೊಸೈಟಿ ಅಭಿವೃದ್ಧಿ ಗೆ ಒಂದು ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಜಮೀರ್ ಅಹ್ಮದ್ ಖಾನ್ ಆದೇಶ ಹೊರಡಿಸಿದರು.

Read More

ಉತ್ತರ ಕನ್ನಡ: ಮುರುಡೇಶ್ವರ ಕಡಲ ತೀರದಲ್ಲಿ ಇಬ್ಬರು ಕೊಚ್ಚಿ ಹೋಗಿದ್ದ ಇಬ್ಬರಲ್ಲಿ, ಓರ್ವ ಬಾಲಕ ಸಮುದ್ರಪಾಲಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ 8 ವರ್ಷದ ಕೃತಿಕ್ ರೆಡ್ಡಿ ಸಮುದ್ರಪಾಲಾಗಿದ್ದಾರೆ. ಅದೃಷ್ಟವಶಾತ್ 27 ವರ್ಷದ ವಸಂತಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ 8 ಜನರು ಮುರಡೇಶ್ವರ ಕಡಲ ತೀರಕ್ಕೆ ಪ್ರವಾಸಕ್ಕೆ ತೆರಳಿದ್ದರು. ಬೆಳಗ್ಗೆ 6 ಗಂಟೆ ಸುಮಾರಿಗೆ ಮುರ್ಡೇಶ್ವರ ಕಡಲ ತೀರಕ್ಕೆ ತೆರಳಿದ್ದರು. ಸಮುದ್ರಕ್ಕೆ ಇಳಿದಿದ್ದ ಕೃತಿಕ್ ರೆಡ್ಡಿ ಸಾವನ್ನಪ್ಪಿದ್ದರೇ, ವಸಂತಾ ಅಪಾಯದಿಂದ ಪಾರಾಗಿದ್ದಾರೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/good-news-for-priests-of-jain-temples-in-the-state-government-issues-official-order-fixing-salaries/ https://kannadanewsnow.com/kannada/prime-minister-modi-wrote-an-emotional-letter-to-the-people-of-the-country-calling-for-this-oath/

Read More

ನವದೆಹಲಿ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿಯವರು ಭಾವನಾತ್ಮಕ ಪತ್ರ ಬರೆದಿದ್ದಾರೆ. ನಾವು ಹೆಮ್ಮೆಯಿಂದ ಹೇಳೋಣ – ನಾವು ಸ್ವದೇಶಿ ಉತ್ಪನ್ನಗಳನ್ನು ಖರೀದಿಸುತ್ತೇವೆ. ನಾವು ಹೆಮ್ಮೆಯಿಂದ ಹೇಳೋಣ – ನಾವು ಸ್ವದೇಶಿ ಉತ್ಪನ್ನಗಳನ್ನು ಮಾರಾಟ ಮಾಡುತ್ತೇವೆ ಎಂಬುದಾಗಿ ಶಪಥ ಮಾಡಲು ಕರೆ ನೀಡಿದ್ದಾರೆ. ಆ ಭಾವನಾತ್ಮಕ ಪತ್ರ ಮುಂದಿದೆ ಓದಿ. ನನ್ನ ಪ್ರೀತಿಯ ದೇಶಬಾಂಧವರೇ, ನಮಸ್ಕಾರ! ದೇಶಾದ್ಯಂತ ನವರಾತ್ರಿ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ, ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ. ಈ ಹಬ್ಬವು ಎಲ್ಲರಿಗೂ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಈ ವರ್ಷದ ಹಬ್ಬದ ಋತುವು, ಸಂಭ್ರಮಿಸಲು ಮತ್ತೊಂದು ಕಾರಣವನ್ನು ತಂದಿದೆ. ಸೆಪ್ಟೆಂಬರ್ 22ರಿಂದ ಮುಂದಿನ ಪೀಳಿಗೆಯ ಜಿ.ಎಸ್.ಟಿ ಸುಧಾರಣೆಗಳು ಜಾರಿಗೆ ಬಂದಿವೆ, ಇದು ದೇಶಾದ್ಯಂತ “ಜಿ.ಎಸ್.ಟಿ ಉಳಿತಾಯ ಉತ್ಸವ”ದ ಆರಂಭವನ್ನು ಗುರುತಿಸುತ್ತದೆ. ಈ ಸುಧಾರಣೆಗಳು ಉಳಿತಾಯವನ್ನು ಹೆಚ್ಚಿಸುತ್ತವೆ ಮತ್ತು ರೈತರು, ಮಹಿಳೆಯರು, ಯುವಜನರು, ಬಡವರು, ಮಧ್ಯಮ ವರ್ಗ, ವ್ಯಾಪಾರಿಗಳು ಹಾಗೂ ಎಂ.ಎಸ್.ಎಂ.ಇ. ಗಳಂತಹ ಸಮಾಜದ ಪ್ರತಿಯೊಂದು…

Read More

ಮಂಡ್ಯ : ರಾಮನಗರದ ಅರ್ಕಾವತಿ ನದಿಯನ್ನು ಥೇಮ್ಸ್ ನದಿ ಮಾದರಿಯಲ್ಲಿ ಅಭಿವೃದ್ಧಿಗೆ ಮುಂದಾಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರವರು ಮೊದಲು ಮೇಕೆದಾಟು ಯೋಜನೆಗೆ ಕೇಂದ್ರದಿಂದ ಅನುಮತಿ ಕೊಡಿಸಲಿ ಎಂದು ಸಚಿವ ಎನ್.ಚಲುವರಾಯಸ್ವಾಮಿ ಸೋಮವಾರ ಸವಾಲು ಹಾಕಿದರು. ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಕೊಪ್ಪ, ಬಿದರಕೋಟೆ ಗ್ರಾಮಗಳಲ್ಲಿ 3 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಲೋಕಸಭಾ ಚುನಾವಣೆಯ ವೇಳೆ ನಾನು ಜಯಭೇರಿಯಾದರೇ ಮೇಕೆದಾಟು ಯೋಜನೆಗೆ ಐದು ನಿಮಿಷದಲ್ಲಿಯೇ ಕೇಂದ್ರದಿಂದ ಅನುಮತಿ ಕೊಡಿಸುತ್ತೇನೆ ಎಂದು ಜಿಲ್ಲೆಯ ಜನತೆಗೆ ಹೇಳಿದವರು ವರ್ಷಗಳು ಕಳೆಯುತ್ತಿವೆ. ಈಗ ರಾಮನಗರ ಜಿಲ್ಲೆಯನ್ನು ಅಭಿವೃದ್ಧಿ ಮಾಡಲು ಮುಂದಾಗಿದ್ದಾರೆ ಎಂದು ಟೀಕಿಸಿದರು. ಕೇಂದ್ರ ಕೈಗಾರಿಕಾ ಸಚಿವರಾಗಿ ಸಿಎಸ್ಆರ್ ನಿಧಿಯಿಂದ ಮಾತ್ರ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದಾರೆ. ಅದನ್ನು ಹೊರತುಪಡಿಸಿ ಜಿಲ್ಲೆಯ ಅಭಿವೃದ್ಧಿಗೆ ಬೇರೆ ಎಷ್ಟು ಅನುದಾನ ತಂದಿದ್ದಾರೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಆರಂಭವಾಗಿರುವ ಜಾತಿ ಸಮೀಕ್ಷೆಯ ವಿಷಯದಲ್ಲಿ ವಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ. ಸಾಮಾಜಿಕ…

Read More