Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಎಲ್ಲವನ್ನೂ ಸಚಿವ ನಾಗೇಂದ್ರ ಅವರ ತಲೆಗೆ ಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಅಕ್ರಮದಲ್ಲಿ ಸರ್ಕಾರದ ಇಡೀ ಸಂಪುಟವೇ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಎಲ್ಲಾ ನಿಗಮ ಮಂಡಳಿಗಳಲ್ಲಿ ಇರುವ ಹಣದ ಬಗ್ಗೆ ಜನರ ಮುಂದೆ ಲೆಕ್ಕ ಇಡಬೇಕು ಎಂದು ಒತ್ತಾಯ ಮಾಡಿದರು. ನಿಗಮದ ಹಣ ಹಲವಾರು ನಕಲಿ ಖಾತೆಗಳಿಗೆ ವರ್ಗಾವಣೆ ಆಗಿದೆ. ಈ ಬಗ್ಗೆ ದಾಖಲೆಗಳೇ ಬಹಿರಂಗ ಆಗಿವೆ. ಕೇವಲ ತೆಲಂಗಾಣಕ್ಕೆ ಮಾತ್ರ ಈ ಹಣ ಯಾಕೆ ಹೋಯಿತು? ಯಾರು ವರ್ಗಾವಣೆ ಮಾಡಿಸಿದರು? ಇಲ್ಲಿ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಅದ ಕೆಲ ಹೊತ್ತಿನಲ್ಲಿ ನಕಲಿ ಬ್ಯಾಂಕ್ ಖಾತೆಗಳಿಂದ ರಾಕೆಟ್ ವೇಗದಲ್ಲಿ ಅಷ್ಟೂ ದೊಡ್ಡ ಮೊತ್ತ ಹಣವನ್ನು ಡ್ರಾ ಮಾಡಲಾಗಿದೆ. ಇದು…
ಇಸ್ಲಾಮಾಬಾದ್: ಹಲವಾರು ಆರೋಪಗಳಲ್ಲಿ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ( Pak Former prime minister Imran Khan ) ವಿರುದ್ಧದ ದೇಶದ್ರೋಹ ಪ್ರಕರಣವನ್ನು ಇಸ್ಲಾಮಾಬಾದ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ ಎಂದು ಎಎಫ್ಪಿ ವರದಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ನೇತೃತ್ವದ ಇಸ್ಲಾಮಾಬಾದ್ ಹೈಕೋರ್ಟ್ನ ದ್ವಿಸದಸ್ಯ ಪೀಠ ಈ ನಿರ್ಧಾರವನ್ನು ಪ್ರಕಟಿಸಿದೆ ಎಂದು ವರದಿ ತಿಳಿಸಿದೆ. ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ವಕೀಲ ಸಲ್ಮಾನ್ ಸಫ್ದರ್ ಖುಲಾಸೆಯನ್ನು ದೃಢಪಡಿಸಿದ್ದಾರೆ. ಒಟ್ಟಾರೆಯಾಗಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ ಎನ್ನುವಂತೆ ಅವರ ವಿರುದ್ಧದ ದೇಶ ದ್ರೋಹ ಪ್ರಕರಣದಲ್ಲಿ ವಿಧಿಸಲಾಗಿದ್ದಂತ ಶಿಕ್ಷೆಯನ್ನು ಕೋರ್ಟ್ ಖುಲಾಸೆಗೊಳಿಸಿದೆ. https://kannadanewsnow.com/kannada/fire-breaks-out-in-four-coaches-of-taj-express-in-delhi/ https://kannadanewsnow.com/kannada/wont-be-surprised-if-siddaramaiah-govt-brands-peddler-as-innocent-just-because-he-is-brother-bjp/
ನವದೆಹಲಿ: ಆಗ್ನೇಯ ದೆಹಲಿಯ ಸರಿತಾ ವಿಹಾರ್ ನಲ್ಲಿ ಸೋಮವಾರ ತಾಜ್ ಎಕ್ಸ್ ಪ್ರೆಸ್ ರೈಲಿನ ನಾಲ್ಕು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ನಮಗೆ 4 ಗಂಟೆಗೆ ಕರೆ ಬಂತು. ತಾಜ್ ಎಕ್ಸ್ಪ್ರೆಸ್ ರೈಲಿನ ನಾಲ್ಕು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಂಟು ಅಗ್ನಿಶಾಮಕ ಟೆಂಡರ್ಗಳನ್ನು ಸೇವೆಗೆ ಒತ್ತಾಯಿಸಲಾಗಿದ್ದು, ಬೆಂಕಿಯನ್ನು ನಂದಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈವರೆಗೆ ಯಾವುದೇ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. https://twitter.com/ANI/status/1797597185242226774 https://kannadanewsnow.com/kannada/modi-will-become-pm-again-polls-will-never-go-wrong-chetan/ https://kannadanewsnow.com/kannada/workers-you-will-get-all-these-facilities-from-the-state-government/
ಮಡಿಕೇರಿ: ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಯಾವತ್ತಿಗೂ ತಪ್ಪಾಗೋದಿಲ್ಲ. ಎನ್ ಡಿಎ ಪಕ್ಷ ಹೆಚ್ಚು ಸ್ಥಾನ ಗಳಿಸಲಿದೆ. ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಅಂತ ನಟ ಚೇತನ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು 2014-2019ರಲ್ಲಿ ಇದ್ದ ಮೋದಿ ಅಲೆ ಈಗ ಇಲ್ಲ. ಮೋದಿ ಬ್ರ್ಯಾಂಡ್ ಕಡಿಮೆ ಆಗಿರಬಹುದು. ಆದ್ರೇ ಬಿಜೆಪಿಗೆ ದೊಡ್ಡ ಮಟ್ಟದ ಫಲಿತಾಂಶ ಬರಲಿದೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ. ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯದ ನಂತ್ರ ಚುನಾವಣೋತ್ತರ ಸಮೀಕ್ಷೆಗಳ ವರದಿಯನ್ನು ನೋಡಿದ್ರೇ, ಎಲ್ಲಾ ಸಮೀಕ್ಷೆ ಒಂದೇ ರೀತಿಯಲ್ಲಿ ಇದೆ. ಅದರಲ್ಲಿ ಯಾವುದೇ ಗೊಂದಲಗಳಿಲ್ಲ. ಈ ಸಮೀಕ್ಷೆಗಳು ಯಾವತ್ತಿಗೂ ತಪ್ಪಾಗುವುದಿಲ್ಲ ಎಂದರು. 2004ರ ಸಮೀಕ್ಷೆಯಲ್ಲಿ ದೊಡ್ಡ ಮಟ್ಟದಲ್ಲಿ ಬಿಜೆಪಿಗೆ ಸ್ಥಾನ ಬರಲಿದೆ ಎಂಬುದಾಗಿ ಹೇಳಲಾಗಿತ್ತು. ಅದರಂತೆಯೇ ಆಯ್ತು. ಈಗ ಚುನಾವಣೋತ್ತರ ಸಮೀಕ್ಷೆಯಲ್ಲಿ 2019ರ ಚುನಾವಣೆಗಿಂತ ಹೆಚ್ಚು ಸ್ಥಾನ ಬರಲಿದೆ ಅಂತ ಸಮೀಕ್ಷೆಗಳು ಹೇಳಿದ್ದಾವೆ. ಅದೇ ರೀತಿ ಫಲಿತಾಂಶ ಬರಲಿದೆ ಎಂದರು. ಲೋಕಸಭಾ ಚುನಾವಣೋತ್ತರ ಸಮೀಕ್ಷಾ ವರದಿ ಪ್ರಕಾರ 370ಕ್ಕೂ ಹೆಚ್ಚು ಸ್ಥಾನ ಎನ್ ಡಿಎ…
ಬೆಂಗಳೂರು: ಕೇರಳದಲ್ಲಿ ಕೇರಳ ಕುರಿ, ಕೋಳಿ, ಮೇಕೆ, ಎಮ್ಮೆ ಬಲಿಯ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಇನ್ನೊಂದು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಇವರು ಪ್ರತಿಯೊಂದಕ್ಕೂ ಎಸ್ ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತಾರೆ, ಅಲ್ಲವೇ? ಬಲಿ ವಿಷಯಕ್ಕೂ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದರು. ಇದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ನೀಡಿಕೆ ಅಲ್ಲವೇ? ನಾನು ಮಾಧ್ಯಮಗಳ ಮೂಲಕವೇ ಗಮನಿಸಿದೆ. ಸಿಎಂ ಮತ್ತು ನನ್ನ ವಿರುದ್ಧ ಮಾಡಿಸುತ್ತಿರುವ ಶತ್ರು ಭೈರವಿ ಯಾಗ ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ ವಿರುದ್ಧ ವಾಮಾಚಾರ ಎಂದರೆ ಸಾಮಾನ್ಯವೇ? ಹಾಗಾಗಿ ಅದರ ತನಿಖೆಗೂ ಒಂದು ಎಸ್ಐಟಿ ರಚನೆ ಮಾಡಲಿ ಎಂದು ಅವರು ಹೇಳಿದರು. ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ಡಿಸಿಎಂ ಅವರು ಹೇಳಿದ್ದಾರೆ. ಇದು ಮಾಟ ಮಂತ್ರ ಎಂದು ಕಥೆ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮುನ್ನವೇ ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸೋ ಸಂಬಂಧ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮತದಾರರ ಪಟ್ಟಿ ನೋಟಿಸು ಪ್ರಕಟಿಸಲಾಗಿದೆ. ಅದರಲ್ಲಿ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ನಿರ್ಣಯದಂತೆ 2024-29ನೇ ಸಾಲಿನ ಅವಧಿಗೆ ಎಲ್ಲಾ ಹಂತದ ಪ್ರಕ್ರಿಯೆಗಳನ್ನು ಕಗೊಳ್ಳಲು ಸಂಘದ ಬೈಲಾ ನಿಯಮದಂತೆ ಕರಡು ಮತದಾರರ ಪಟ್ಟಿಯನ್ನು ಹೊರಡಿಸಿ, ಈ ಸಂಬಂದ ಸಂಘದ ಸದಸ್ಯರಿಂದ ಸ್ವೀಕೃತವಾಗಬಹುದಾದ ಮನವಿ, ಆಕ್ಷೇಪಣೆಗಳಿಗೆ ಮುಕ್ತ ಅವಕಾಶ ಕಲ್ಪಿಸಿದೆ ಎಂದಿದೆ. ಈ ಹಿನ್ನಲೆಯಲ್ಲಿ ಕರಡು ಮತದಾರರ ಪಟ್ಟಿ ಸಿದ್ಧಪಡಿಸೋದಕ್ಕೆ ದಿನಾಂಕ ನಿಗದಿ ಗೊಳಿಸಲಾಗಿದೆ. ತಾಲೂಕು ಶಾಖೆಗಳ ಮತಕ್ಷೇತ್ರಗಳು, ಯೋಜನಾ ಶಾಖೆಗಳ ಮತಕ್ಷೇತ್ರಗಳು, ಜಿಲ್ಲಾ ಶಾಖೆಗಳ ಮತ ಕ್ಷೇತ್ರಗಳು, ಬೆಂಗಳೂರು ನಗರ ರಾಜ್ಯ ಪರಿಷತ್ ಮತಕ್ಷೇತ್ರಗಳು ಕರಡು ಮತದಾರರ ಪಟ್ಟಿ ಸಿದ್ಧಪಡಿಸಲು ದಿನಾಂಕ 08-06-2024ರಿಂದ 30-06-2024ರವರೆಗೆ ಅವಕಾಶ ನೀಡಲಾಗಿದೆ. ಕರಡು ಮತದಾರರ ಪಟ್ಟಿಯನ್ನು ದಿನಾಂಕ 01-07-2024ರಂದು ಪ್ರಕಟಿಸಲಾಗುತ್ತದೆ. ಆಕ್ಷೇಪಣೆಗಳನ್ನು ದಿನಾಂಕ 02-07-2024ರಿಂದ 10-07-2024ರ…
ಬೆಂಗಳೂರು: ನಾಳೆ ಲೋಕಸಭಾ ಚುನಾವಣೆಗೆ ಮತ ಏಣಿಕೆ ಕಾರ್ಯ ನಡೆಯಲಿದೆ. ಬೆಂಗಳೂರಿನ ಮೂರು ಕೇಂದ್ರಗಳಲ್ಲಿ ಮತಎಣಿಕೆ ಕಾರ್ಯ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿರುವಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು, ಬೆಂಗಳೂರಿನ ಮೂರು ಕೇಂದ್ರಗಳಲ್ಲಿ ನಾಳೆ ಲೋಕಸಭಾ ಚುನಾವಣೆಯ ಮತಏಣಿಕೆ ಕಾರ್ಯ ನಡೆಯಲಿದೆ. ಎಲ್ಲಾ ಕೇಂದ್ರಗಳ ಬಳಿಯಲ್ಲೂ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು. ಬೆಂಗಳೂರಿನಲ್ಲಿ 1524 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. 13 ಕೆ ಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ. ಈಗಾಗಲೇ 512 ಪೊಲೀಸ್ ಸಿಬ್ಬಂದಿ ಸ್ಟ್ರಾಂಗ್ ರೂಂ ಬಳಿಯಲ್ಲಿ ಭದ್ರತಾ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು. 3 ಶಿಫ್ಟ್ ಗಳಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮತ ಏಣಿಕೆ ಕೇಂದ್ರದ ಸುತ್ತ 400 ಸಂಚಾರ ಪೊಲೀಸರನ್ನು ಸುಗಮ ಸಂಚಾರಕ್ಕಾಗಿ ನಿಯೋಜಿಸಲಾಗಿದೆ. ಯಾವುದೇ ಕಾನೂನು ಮತ್ತು ಸುವ್ಯವಸ್ಥತೆಯಲ್ಲಿ ಲೋಪವಾಗದಂತೆ ಭದ್ರತಾ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದರು. ಮತಏಣಿಕೆ ಕೇಂದ್ರದ ಒಳಗೆ ಗುರುತಿನ ಚೀಟಿ…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಡಿ ಸಚಿವ ನಾಗೇಂದ್ರರ ರಾಜೀನಾಮೆ ಪಡೆಯುವವರೆಗೆ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ದಲಿತರ 187 ಕೋಟಿ ಹಣವನ್ನು ನುಂಗಿ ನೀರು ಕುಡಿದಿದೆ ಎಂದು ಆಕ್ಷೇಪಿಸಿದರು. ಸಿದ್ದರಾಮಯ್ಯನವರು ಸಚಿವರ ರಾಜೀನಾಮೆ ಪಡೆಯದೆ ಭಂಡತನ ಮೆರೆಯುತ್ತಿದ್ದಾರೆ ಎಂದು ಟೀಕಿಸಿದರು. ಮತ್ತೆ ಮೋದಿಯವರು ಪ್ರಧಾನಿ ಆಗಲಿದ್ದು, ಆಮೇಲೆ ತೀರ್ಮಾನ ಮಾಡೋಣ ಎಂದು ಕಾಂಗ್ರೆಸ್ಸಿಗರು ಕಾಯುತ್ತಿದ್ದಾರೆ ಎಂದರು. ಕಳ್ಳ- ಖದೀಮರಾದ ಕಾಂಗ್ರೆಸ್ಸಿಗರು ಒಂದು ದಿನದ ಹೋರಾಟಕ್ಕೆ ಬಗ್ಗುವುದಿಲ್ಲ. ಆದ್ದರಿಂದ ರಾಜ್ಯಪಾಲರ ಭೇಟಿ, ಶಾಸಕರಿಂದ ಗಾಂಧಿ ಪ್ರತಿಮೆ ಎದುರು ಹೋರಾಟ, ಜಿಲ್ಲೆ, ಜಿಲ್ಲೆಗಳಲ್ಲಿ ಹೋರಾಟ ಮಾಡುವ ಕುರಿತು ಚರ್ಚೆ ಮಾಡಿದ್ದೇವೆ ಎಂದು ವಿವರಿಸಿದರು. ಸಿ.ಟಿ.ರವಿ, ಎನ್.ರವಿಕುಮಾರ್, ಎಂ.ಜಿ.ಮುಳೆ ಅವರ ಆಯ್ಕೆ ಕುರಿತು ಮಾತನಾಡಿ, ಪಕ್ಷಕ್ಕಾಗಿ ದುಡಿದವರಿಗೆ ಆದ್ಯತೆ ಕೊಟ್ಟಿದ್ದಾಗಿ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ನಮ್ಮ ಧ್ವನಿ ಹೆಚ್ಚಾಗಲು ಇವರನ್ನು ಆಯ್ಕೆ ಮಾಡಿದ್ದಾಗಿ…
ನವದೆಹಲಿ: ಟೀಂ ಇಂಡಿಯಾದ ಆಲ್ರೌಂಡರ್ ಕೇದಾರ್ ಜಾಧವ್ ( Indian all-rounder Kedar Jadhav ) ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಅಲ್ ರೌಂಡರ್ ಕೇದಾರ್ ಜಾಧವ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. 39 ವರ್ಷದ ಧೋನಿ ಜೂನ್ 3 ರ ಸೋಮವಾರ ತಮ್ಮ ಅಧಿಕೃತ ‘ಎಕ್ಸ್’ ಖಾತೆಯಿಂದ ಟ್ವೀಟ್ ಮೂಲಕ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಕೇದಾರ್ ಜಾಧವ್ ಏಕದಿನ ಪಂದ್ಯಗಳಲ್ಲಿ 73 ಬಾರಿ ಮತ್ತು ಟಿ 20 ಐನಲ್ಲಿ 9 ಬಾರಿ ಭಾರತವನ್ನು ಪ್ರತಿನಿಧಿಸಿದ್ದಾರೆ. https://twitter.com/JadhavKedar/status/1797561520609780069 https://twitter.com/mufaddal_vohra/status/1797562469306732823 https://kannadanewsnow.com/kannada/ex-brahmos-aerospace-engineer-nishant-agarwal-sentenced-to-life-imprisonment/ https://kannadanewsnow.com/kannada/workers-you-will-get-all-these-facilities-from-the-state-government/
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಪಾಕಿಸ್ತಾನದ ಐಎಸ್ಐ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಮಾಜಿ ಬ್ರಹ್ಮೋಸ್ ಏರೋಸ್ಪೇಸ್ ಎಂಜಿನಿಯರ್ ನಿಶಾಂತ್ ಅಗರ್ವಾಲ್ಗೆ ನಾಗ್ಪುರ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ. 2018 ರಲ್ಲಿ ಬಂಧಿಸಲ್ಪಟ್ಟ ಅಗರ್ವಾಲ್, ಬ್ರಹ್ಮೋಸ್ ಕ್ಷಿಪಣಿಯ ಬಗ್ಗೆ ರಹಸ್ಯ ಮಾಹಿತಿಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಬಹಿರಂಗಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಭೂಮಿ, ವಾಯು, ಸಮುದ್ರ ಮತ್ತು ನೀರೊಳಗಿನ ವೇದಿಕೆಗಳ ಮೂಲಕ ನಿಯೋಜಿಸಬಹುದಾದ ಭಾರತದ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ತಂತ್ರಜ್ಞಾನದ ಮೇಲೆ ಕೇಂದ್ರೀಕರಿಸಿದ ಡಿಆರ್ಡಿಒ ಮತ್ತು ರಷ್ಯಾದ ಎನ್ಪಿಒ ಮಶಿನೋಸ್ಟ್ರೋಯೆನಿಯಾ ನಡುವಿನ ಸಹಯೋಗದ ಪ್ರಯತ್ನವಾದ ಬ್ರಹ್ಮೋಸ್ ಏರೋಸ್ಪೇಸ್ನಲ್ಲಿ ಸಿಸ್ಟಮ್ ಎಂಜಿನಿಯರ್ ಆಗಿ ಅವರು ಹಿರಿಯ ಸ್ಥಾನವನ್ನು ಹೊಂದಿದ್ದರು. 2018 ರ ಪ್ರಕರಣವು ಬ್ರಹ್ಮೋಸ್ ಏರೋಸ್ಪೇಸ್ ಮೇಲೆ ಪರಿಣಾಮ ಬೀರಿದ ಮೊದಲ ಗೂಢಚರ್ಯೆ ಹಗರಣವಾಗಿದೆ. ಪಾಕಿಸ್ತಾನದ ಗುಪ್ತಚರ ಏಜೆಂಟರು ಇಸ್ಲಾಮಾಬಾದ್ನಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ನಂಬಲಾದ ನೇಹಾ ಶರ್ಮಾ ಮತ್ತು ಪೂಜಾ ರಂಜನ್ ಎಂಬ ಎರಡು ಫೇಸ್ಬುಕ್ ಪ್ರೊಫೈಲ್ಗಳ ಮೂಲಕ ಅಗರ್ವಾಲ್ ಶಂಕಿತ ಪಾಕಿಸ್ತಾನಿ…