Author: kannadanewsnow09

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದ್ದಕ್ಕೆ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಈ ನಡುವೆ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಏನು ಹೇಳಿದ್ರು ಅಂತ ಮುಂದೆ ಓದಿ. ಇಂದು ಸಿ.ಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಗೆ ಬಂದರೆ ಸ್ವಾಗತ ಎಂದು ಸಿಎಂ ಹಾಗೂ ಮಾಜಿ ಸಂಸದ ಸುರೇಶ್ ಅವರು ಹೇಳಿರುವ ಬಗ್ಗೆ ಕೇಳಿದಾಗ, ಈ ವಿಚಾರ ನನಗೆ ಗೊತ್ತಿಲ್ಲ. ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಓದಿದ್ದೇನೆ. ಚನ್ನಪಟ್ಟಣದಲ್ಲಿ ಇಂದು ಸಭೆ ನಡೆಸುತ್ತಿದ್ದಾರೆ ಎಂದು ನಮ್ಮ ಮುಖಂಡರು ಕರೆ ಮಾಡಿ ತಿಳಿಸಿದರು ಎಂದರು. ಬಿಜೆಪಿಯವರು ಕೂಡ ಯೋಗೇಶ್ವರ್ ಅವರ ಜತೆ ಚರ್ಚೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅವರು ಬಿಜೆಪಿ ಬಿಟ್ಟ ನಂತರ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇನೆ.…

Read More

ಬೆಂಗಳೂರು: “ಕಳೆದ 48 ಗಂಟೆಗಳಿಂದ ನಮ್ಮ ಅಧಿಕಾರಿಗಳ ತಂಡ ಮಳೆ ಪೀಡಿತ ಪ್ರದೇಶಗಳಲ್ಲಿ ನಿರಂತರವಾಗಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈಗ ಪರಿಹಾರ ಕಾರ್ಯ ನಡೆಯುವುದು ಮುಖ್ಯವೇ ಹೊರತು, ನಾನು ಸ್ಥಳಕ್ಕೆ ಭೇಟಿ ನೀಡುವುದಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು. ಬೆಂಗಳೂರಿನಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, ನೀವು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ ಎನ್ನುವ ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, “ನಾನು ಭೇಟಿ ನೀಡುವುದಷ್ಟೇ ಮುಖ್ಯವಲ್ಲ. ಕೆಲಸಗಳು ಆಗಬೇಕು. ನಾನು ಭೇಟಿ ಮಾಡಿದರೆ ಪ್ರಚಾರ ಸಿಗುತ್ತದೆ. ನಮಗೆ ಪ್ರಚಾರ ಮುಖ್ಯವಲ್ಲ. ಇಂತಹ ಪರಿಸ್ಥಿತಿ ಎದುರಿಸುತ್ತಿರುವ ಸ್ಥಳಗಳನ್ನು ಗುರುತಿಸಿ ಶಾಶ್ವತ ಪರಿಹಾರ ನೀಡಲು ನಾವು ಸಮಿತಿ ರಚಿಸಲಾಗಿದೆ. ಆ ಸಮಿತಿ ವರದಿ ನೀಡಲಿದೆ” ಎಂದು ತಿಳಿಸಿದರು. “ನಾನು ಕೂಡ ಸೋಮವಾರ ಸಂಜೆ ಮಳೆಯಲ್ಲಿ ಸಿಲುಕಿದ್ದೆ. ಚಳ್ಳಕೆರೆಯಿಂದ ಬರುವಾಗ ನೆಲಮಂಗಲದ ಬಳಿ ಸೇತುವೆ ಮೇಲೆ 2 ಅಡಿ ನೀರಿತ್ತು. ನಮ್ಮ ಅಧಿಕಾರಿಗಳು…

Read More

ನವದೆಹಲಿ: ಪೂರ್ವ ಲಡಾಖ್ನಲ್ಲಿ ಉಭಯ ಸೇನೆಗಳ ನಡುವಿನ ಬಿಕ್ಕಟ್ಟನ್ನು ಕೊನೆಗೊಳಿಸಲು ಭಾರತದೊಂದಿಗೆ ಒಪ್ಪಂದಕ್ಕೆ ಬಂದಿರುವುದಾಗಿ ಚೀನಾ ಮಂಗಳವಾರ ದೃಢಪಡಿಸಿದೆ. “ಇತ್ತೀಚಿನ ಅವಧಿಯಲ್ಲಿ, ಚೀನಾ-ಭಾರತ ಗಡಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚೀನಾ ಮತ್ತು ಭಾರತ ರಾಜತಾಂತ್ರಿಕ ಮತ್ತು ಮಿಲಿಟರಿ ಮಾರ್ಗಗಳ ಮೂಲಕ ನಿಕಟ ಸಂವಹನ ನಡೆಸುತ್ತಿವೆ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು. ಆದಾಗ್ಯೂ, ಅವರು ವಿವರಗಳನ್ನು ನೀಡಲು ನಿರಾಕರಿಸಿದರು. ರಷ್ಯಾದ ಕಜಾನ್ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಕ್ಸಿ ಜಿನ್ಪಿಂಗ್ ನಡುವಿನ ದ್ವಿಪಕ್ಷೀಯ ಸಭೆಯ ಬಗ್ಗೆ ಮಾತನಾಡಿದ ಅವರು, “ಏನಾದರೂ ಬಂದರೆ ನಾವು ನಿಮಗೆ ಮಾಹಿತಿ ನೀಡುತ್ತೇವೆ” ಎಂದು ಹೇಳಿದರು. ನವದೆಹಲಿ: ಪೂರ್ವ ಲಡಾಖ್ನ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಗಸ್ತು ತಿರುಗುವ ಬಗ್ಗೆ ಚೀನಾದೊಂದಿಗೆ ಒಪ್ಪಂದಕ್ಕೆ ಬಂದಿರುವುದಾಗಿ ಭಾರತ ಸೋಮವಾರ ಘೋಷಿಸಿದೆ, ಇದು ಉಭಯ ಸೇನೆಗಳ ನಡುವಿನ ನಾಲ್ಕು ವರ್ಷಗಳ ಮಿಲಿಟರಿ ನಿಲುವನ್ನು ಕೊನೆಗೊಳಿಸುವಲ್ಲಿ ಪ್ರಮುಖ…

Read More

ಬೆಂಗಳೂರು: ಕರ್ನಾಟಕದ ತಲಾವಾರು ಜಿಎಸ್‌ಡಿಪಿಯು ಭಾರತದಲ್ಲೇ ಅತ್ಯಧಿಕವಾಗಿದೆ, ಇದು ನಮ್ಮ ಸಮರ್ಥ ಆಡಳಿತ ಶಕ್ತಿಯ ಪ್ರತಿಬಿಂಬವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ಜಾಗತಿಕ ಆರ್ಥಿಕ ಸವಾಲುಗಳ ಹೊರತಾಗಿಯೂ 2023-24ರ ಹಣಕಾಸು ವರ್ಷದಲ್ಲಿ ನಮ್ಮ ರಾಜ್ಯದ ಆರ್ಥಿಕತೆಯು ಶೇ. 10.2 ರಷ್ಟು ಬೆಳವಣಿಗೆ ಸಾಧಿಸಿ ರಾಷ್ಟ್ರೀಯ ಸರಾಸರಿಯ ಶೇ. 8.2 ಪ್ರಮಾಣವನ್ನು ಮೀರಿಸಿದೆ ಎಂದಿದ್ದಾರೆ. ರಾಜ್ಯದ ಪ್ರಬಲ ಆರ್ಥಿಕ ಕಾರ್ಯಕ್ಷಮತೆಯ ಸೂಚ್ಯಂಕವನ್ನು ಮೊದಲಿದ್ದ ಶೇ. 4ರಿಂದ ಶೇ. 13.1ಗೆ ಪರಿಷ್ಕರಿಸಲಾಗಿದೆ. ಇದು ರಚನಾತ್ಮಕ ಆಡಳಿತ ಮತ್ತು ವೈವಿಧ್ಯಮಯ ಬೆಳವಣಿಗೆಗೆ ಮುಖ್ಯ ಕಾರಣವಾಗಿದೆ. ಕರ್ನಾಟಕವು ಜಿಎಸ್‌ಟಿ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ ಶೇ. 10 ಏರಿಕೆ ಕಂಡಿದೆ ಮತ್ತು ಸ್ಟಾಂಪ್ ಡ್ಯೂಟಿ ಆದಾಯದಲ್ಲಿ ಶೇ. 24ರಷ್ಟು ಹೆಚ್ಚಳ ದಾಖಲಿಸಿದೆ ಎಂದು ತಿಳಿಸಿದ್ದಾರೆ. ರಾಷ್ಟ್ರೀಯ ಅಂಕಿಅಂಶಗಳ ಅಂದಾಜು (NSE) ಪ್ರಕಾರ 2024-25 ಸಾಲಿನಲ್ಲಿ ಜಿಎಸ್‌ಡಿಪಿ (GSDP)ಬೆಳವಣಿಗೆ ಶೇ. 9.4 ತಲುಪುವ ನಿರೀಕ್ಷೆ ಇದೆ. ಆದರೆ ಹಣಕಾಸು ಸಚಿವಾಲಯದ…

Read More

ಬೆಂಗಳೂರು: ಪಾರದರ್ಶಕ ನೇಮಕಾತಿಯ ಮೂಲಕ ನಮ್ಮ ಸರ್ಕಾರ ಅರ್ಹ ಪ್ರತಿಭಾವಂತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಹಿಂದೆ ನಾನು ಹಗರಣವನ್ನು ಬಯಲಿಗೆಳೆದಾಗ ಸಿಐಡಿ ಮೂಲಕ ನೋಟಿಸ್ ನೀಡಿತ್ತು ಅಂದಿನ ಬಿಜೆಪಿ ಸರ್ಕಾರ, ನನ್ನ ಮೇಲಿನ ಬಿಜೆಪಿಯವರ ದಾಳಿಗೆ 545 ಪಿಎಸ್ಐ ಹುದ್ದೆಗಳ ನೇಮಕದ ಮೂಲಕ ಉತ್ತರ ನೀಡಿದ್ದೇವೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟ ವ್ಯವಸ್ಥೆಯಿಂದಾಗಿ ಪ್ರತಿಭಾವಂತ ಪಿಎಸ್ಐ ಅಭ್ಯರ್ಥಿಗಳು ಕಟ್ಟಿಕೊಂಡಿದ್ದ ಕನಸು ಕಮರಿಹೋಗಿತ್ತು,PSI ನೇಮಕಾತಿಯ ಬೃಹತ್ ಹಗರಣವನ್ನು ಬಯಲಿಗೆಳೆಯುವ ನನ್ನ ಮೊದಲ ಹೆಜ್ಜೆಯಿಂದಲೇ ಪ್ರತಿಭಾವಂತರಿಗೆ ನ್ಯಾಯ ದೊರೆಯುವ ವಿಶ್ವಾಸವಿತ್ತು, ನಮ್ಮ ಹೋರಾಟದಲ್ಲಿ ಬದ್ಧತೆಯೂ ಇತ್ತು ಎಂದು ಹೇಳಿದ್ದಾರೆ. ನಾವು ಈ ಹಗರಣವನ್ನು ಬಿಚ್ಚಿಟ್ಟಾಗ ಅಂದಿನ ಬಿಜೆಪಿ ಸರ್ಕಾರದ ಗೃಹಸಚಿವರಾದಿಯಾಗಿ ಬಿಜೆಪಿ ನಾಯಕರೆಲ್ಲರೂ ಸದನದಲ್ಲಿ “ಹಗರಣ ನಡೆದೇ ಇಲ್ಲ” ಎನ್ನುವ ಶತಮಾನದ ಹಸಿ ಸುಳ್ಳನ್ನು ಸತ್ಯದ ತಲೆಯ ಮೇಲೆ ಸುತ್ತಿಗೆಯಲ್ಲಿ ಹೊಡೆದಂತೆ ಹೇಳಿದ್ದರು. ಇಷ್ಟೂ ಸಾಲದೆಂಬಂತೆ, ನನ್ನ ಬಾಯಿ ಮುಚ್ಚಿಸಲು…

Read More

ಬೆಂಗಳೂರು : “ಕಾಂಗ್ರೆಸ್ ಪಕ್ಷ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲಲಿದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯಿಸಿದರು. ಕಾರ್ಯಕರ್ತರು ನಿಮ್ಮ ಸ್ಪರ್ಧೆಗೆ ಹೆಚ್ಚಿನ ಒತ್ತಡ ಹಾಕುತ್ತಿದ್ದಾರೆ, ಚನ್ನಪಟ್ಟಣದಲ್ಲಿ ಗೆಲ್ಲುವ ವಿಶ್ವಾಸವಿದೆಯೇ ಎಂದು ಕೇಳಿದ ಪ್ರಶ್ನೆಗೆ, “ನನ್ನ ಮುಕ್ತವಾದ ಅಭಿಪ್ರಾಯಗಳನ್ನು ಪಕ್ಷದ ವರಿಷ್ಠರಿಗೆ ತಿಳಿಸುತ್ತೇನೆ. ಅವರು ತೀರ್ಮಾನ ಮಾಡಿದ ನಂತರ ನಾನು ತೀರ್ಮಾನ ಮಾಡುತ್ತೇನೆ. ಪಕ್ಷದ ಆದೇಶವನ್ನು ನಾನು ಪಾಲಿಸಬೇಕು, ನಮ್ಮ ಮುಖಂಡರೂ ಪಾಲಿಸಬೇಕು” ಎಂದರು. ಯೋಗೇಶ್ವರ್ ಅವರು ಕಾಂಗ್ರೆಸ್ ಸೇರುವ ಚರ್ಚೆಯ ಬಗ್ಗೆ ಕೇಳಿದಾಗ, “ಯೋಗೇಶ್ವರ್ ಅವರು ಪರಿಷತ್ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು ಹಾಗೂ ಅದು ಅಂಗೀಕಾರವಾಗಿರುವ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದಿದ್ದೇನೆ. ಅವರು ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಚನ್ನಪಟ್ಟಣದಲ್ಲಿ ಇಂದು ಸಭೆ ಮಾಡುತ್ತಿರುವುದು ಗೊತ್ತಿದೆ. ಇದರ ಹೊರತಾಗಿ ಅವರು ಕಾಂಗ್ರೆಸ್ ಸೇರುವ ಕುರಿತು ಯಾವುದೇ ವಿಚಾರ ಗೊತ್ತಿಲ್ಲ” ಎಂದು ತಿಳಿಸಿದರು. ಸೋಮವಾರ ರಾತ್ರಿ…

Read More

ನವದೆಹಲಿ : ಕೇಂದ್ರ ಮೀಸಲು ಪೊಲೀಸ್ ಪಡೆ (Central Reserve Police Force -CRPF) ಶಾಲೆಗಳಿಗೆ ಮಂಗಳವಾರ ಹುಸಿ ಬಾಂಬ್ ಬೆದರಿಕೆಗಳು ಬಂದಿವೆ. ಅವುಗಳಲ್ಲಿ ಎರಡು ಶಾಲೆಗಳು ದೆಹಲಿ ಮತ್ತು ಹೈದರಾಬಾದ್ ನಲ್ಲಿವೆ. ಸೋಮವಾರ ರಾತ್ರಿ ಈ ಶಾಲೆಗಳ ಆಡಳಿತ ಮಂಡಳಿಗೆ ಇಮೇಲ್ ಮೂಲಕ ಹುಸಿ ಬೆದರಿಕೆ ಕಳುಹಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ. ಈ ಘಟನೆಯು ಮೇ ತಿಂಗಳಲ್ಲಿ ದೆಹಲಿಯ 131 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ಗಳನ್ನು ಸ್ವೀಕರಿಸಿದಾಗ ಕಂಡುಬಂದ ಇದೇ ಮಾದರಿಯನ್ನು ಅನುಸರಿಸುತ್ತದೆ. ಇಸ್ಲಾಮಿಕ್ ಪ್ರಚಾರವನ್ನು ಉತ್ತೇಜಿಸಲು ಇಸ್ಲಾಮಿಕ್ ಸ್ಟೇಟ್ 2014 ರಿಂದ ಬಳಸುತ್ತಿರುವ ಅರೇಬಿಕ್ ಪದ ‘ಸ್ವರೈಮ್’ ಎಂಬ ಪದವನ್ನು ಇಮೇಲ್ಗಳು ಒಳಗೊಂಡಿವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಎಚ್ಚರಿಕೆಯ ಹೊರತಾಗಿಯೂ, ಗೃಹ ಸಚಿವಾಲಯ (ಎಂಎಚ್ಎ) ತ್ವರಿತವಾಗಿ ಹೇಳಿಕೆ ನೀಡಿ, ಬೆದರಿಕೆಗಳು ಹುಸಿಗಳಾಗಿ ತೋರುತ್ತಿದೆ ಎಂದು ಸಾರ್ವಜನಿಕರಿಗೆ ಭರವಸೆ ನೀಡಿತು. “ಭಯಪಡುವ ಅಗತ್ಯವಿಲ್ಲ. ಮೇಲ್ ಒಂದು ಹುಸಿ ಎಂದು ತೋರುತ್ತದೆ. ದೆಹಲಿ ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳು…

Read More

ಬೆಂಗಳೂರು: ಡ್ರೈವಿಂಗ್ ಕಲಿಯಬೇಕು ಎಂಬುದು ಅನೇಕರ ಆಸೆ. ಆದ್ರೆ ಡ್ರೈವಿಂಗ್ ಶಾಲೆಗೆ ದುಬಾರಿ ಫೀಸ್ ಕಟ್ಟಿ ಹೋಗಿ ಕಲಿಯೋದು ಕಷ್ಟ. ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಬಿಎಂಟಿಸಿಯಿಂದ ಉಚಿತ ಲಘು ಹಾಗೂ ಭಾರೀ ಚಾಲನಾ ವಾಹನ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೆಂ.ಮ.ಸಾ.ಸಂಸ್ಥೆಯು, ಕರ್ನಾಟಕ ಸರ್ಕಾರದ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿ.ಎಸ್.ಪಿ) ಯೋಜನೆಯಡಿ ಪರಿಶಿಷ್ಟ ಜಾತಿ (ಎಸ್.ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್.ಟಿ)ಗಳ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಯ (ವಸತಿ ಸಹಿತ / ವಸತಿ ರಹಿತ) ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ. ಸದರಿ ತರಬೇತಿಯನ್ನು ಪಡೆಯಲು ಇಚ್ಚಿಸುವ ಪರಿಶಿಷ್ಟ ಜಾತಿ(ಎಸ್.ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್.ಟಿ)ಗಳ ಅಭ್ಯರ್ಥಿಗಳು ಹೊಂದಿರಬೇಕಾದ ಕನಿಷ್ಠ ಅರ್ಹತೆಗಳು/ಸಲ್ಲಿಸಬೇಕಾಗಿರುವ ದಾಖಲಾತಿಗಳ ವಿವರ ಇದರ ಜೊತೆ ಇರುವ ಚಿತ್ರದಲ್ಲಿ ನೀಡಲಾಗಿದೆ. ಆಸಕ್ತಿ ಇರುವ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್(https://sevasindhuservices.karnataka.gov.in) ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Read More

ಬೆಂಗಳೂರು: ಇಂದು ವ್ಯಾಪಕ ಮಳೆಯ ಮುನ್ಸೂಚನೆಯ ಕಾರಣಕ್ಕೆ ನಗರದ ಶಾಲಾ, ಕಾಲೇಜುಗಳಿಗೆ ರಜೆಯನ್ನು ನೀಡಲಾಗಿತ್ತು. ಆದರೇ ನಾಳೆ ಬೆಂಗಳೂರಿನ ಶಾಲಾ, ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಇಲ್ಲ ಎಂಬುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು, ನಾಳೆ ಬೆಂಗಳೂರಿನ ಶಾಲಾ, ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿಲ್ಲ. ನಾಳೆ ಶಾಲೆ, ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆಯಿಲ್ಲ ಎಂಬುದಾಗಿ ತಿಳಿಸಿದರು. ನಾಳೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆಯಿಂದ ನೀಡಲಾಗಿಲ್ಲ. ಈ ಹಿನ್ನಲೆಯಲ್ಲಿ ನಾಳೆ ಬೆಂಗಳೂರು ನಗರದ ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ನೀಡುತ್ತಿಲ್ಲ ಎಂಬುದಾಗಿ ಹೇಳಿದರು. https://kannadanewsnow.com/kannada/indira-gandhi-first-grade-college-in-sagar-accredited-naac-principal-dr-rajeshwari/ https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿರುವ ಉರ್ದು, ಕೊರಗ, ಕೊಡವ, ಬಡಗ, ಸಿದ್ಧಿ, ಕುರುಬ, ವಲಿ, ಚೆಂಚು, ಇರುಳ, ಗೌಳಿ, ಯೆರವ, ಸೋಲಿಗ, ಬ್ಯಾರಿ ಮೊದಲಾದ ಸಣ್ಣ ಸಣ್ಣ ಭಾಷೆಗಳನ್ನು ಸಂರಕ್ಷಿಸಿಕೊಳ್ಳಲು ಕರ್ನಾಟಕಕ್ಕೊಂದು ಸಶಕ್ತವಾದ ಭಾಷಾ ನೀತಿಯನ್ನು ರಚಿಸಿ, ವರದಿಯನ್ನು ಸಿದ್ಧಪಡಿಸಲು ತಜ್ಞರ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕಕ್ಕೊಂದು ಸಶಕ್ತವಾದ ಭಾಷಾ ನೀತಿಯನ್ನು ರಚಿಸಿ, ವರದಿಯನ್ನು ಸಿದ್ಧಪಡಿಸಲು ಈ ಕೆಳಕಂಡ ತಜ್ಞರ ಸಮಿತಿಯನ್ನು ರಚಿಸಿರುವುದಾಗಿ ತಿಳಿಸಿದ್ದಾರೆ. ಕರ್ನಾಟಕಕ್ಕೊಂದು ಸಶಕ್ತವಾದ ಭಾಷಾ ನೀತಿ ರೂಪಿಸಲು ವರದಿ ನೀಡಲು ರಚಿಸಿರುವಂತ ತಜ್ಞರ ಸಮಿತಿಯ ಅಧ್ಯಕ್ಷರನ್ನಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದಂತ ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ಪ್ರಧಾನ ಸಂಪಾದಕರನ್ನಾಗಿ ನೇಮಿಸಿದ್ದಾರೆ. ಗೌರವ ಸಂಪಾದಕರನ್ನಾಗಿ ಧಾರವಾಡದ ಪ್ರೊ.ಜಿಎನ್ ದೇವಿ ಅವರನ್ನು, ಸದಸ್ಯರನ್ನಾಗಿ ಬೆಂಗಳೂರಿನ ಡಾ.ಇಂದಿರಾ ಹೆಗ್ಗಡೆ, ಮಂಗಳೂರಿನ ಡಾ.ಸವಿತಾ ಕೊರಗ, ಮೈಸೂರಿನ ಡಾ.ಕಾಳೇಗೌಡ ನಾಗವಾರ, ಕಲಬುರ್ಗಿಯ ಡಾ.ಸಣ್ಣೀರಪ್ಪ ದೊಡ್ಡಮನಿ, ಬೆಂಗಳೂರಿನ ಪ್ರೊ.ಅಬ್ದುಲ್ ಬಷೀರ್…

Read More