Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : “4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ನಗರದಲ್ಲಿ 1650 ಕಿ.ಮೀ ಉದ್ದದ ಪ್ರಮುಖ ರಸ್ತೆಗಳಿದ್ದು, ಹೊಸದಾಗಿ 104 ಕಿಮೀ ರಸ್ತೆಗೆ ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು. “ವೈಟ್ ಟಾಪಿಂಗ್ ರಸ್ತೆಗಳು ಸುಮಾರು 25-30 ವರ್ಷಗಳ ಕಾಲ ಬಾಳಿಕೆ ಬರುತ್ತವೆ. ಈಗಾಗಲೇ 148 ಕಿ.ಮೀ ಉದ್ದದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಒಟ್ಟು 83 ರಸ್ತೆಗಳ ಅಭಿವೃದ್ದಿಗೆ 1,800 ಕೋಟಿ ಹಣ ವ್ಯಯಿಸಲಾಗುತ್ತಿದೆ. 350 ಕಿಲೋ ಮೀಟರ್ ಉದ್ದದ 182 ರಸ್ತೆಗಳಲ್ಲಿ ಬ್ಲಾಕ್ ಟಾಪಿಂಗ್ ಕಾಮಗಾರಿ ನಡೆಯುತ್ತಿದೆ. ಇದಕ್ಕೆ 695 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ. ಮುಖ್ಯಮಂತ್ರಿಯವರು ಹೊಸದಾಗಿ 1100 ಕೋಟಿ ರೂಪಾಯಿ ಅನುದಾನ ನೀಡಿದ್ದು, ಇದರಿಂದ…
ಬೆಂಗಳೂರು: ಮೊಬೈಲ್ ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡು ಬಹುಅಂಗಾಂಗ ಹಾನಿಗೊಳಗಾಗಿದ್ದ 19 ವರ್ಷದ ಯುವಕನನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ನಗರದ ಸ್ಪರ್ಶ್ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. ತನ್ನ ಮನೆಯಲ್ಲಿ ಮೊಬೈಲ್ ನೋಡುತ್ತಿದ್ದಾಗ 19 ವರ್ಷದ ಯುವಕ ಪ್ರಥಮ್ (ಹೆಸರು ಬದಲಿಸಲಾಗಿದೆ) ಮೊಬೈಲ್ ಅಕಸ್ಮಾತ್ ಸ್ಫೋಟಿಸಿತ್ತು.. ಮಧುಮೇಹದಿಂದಲೂ ಬಳಲುತ್ತಿದ್ದ ಪ್ರಥಮ್ರನ್ನು ತಕ್ಷಣ ಇನ್ಫ್ಯಾಂಟ್ರಿ ರಸ್ತೆಯ ಸ್ಪರ್ಶ್ ಆಸ್ಪತ್ರೆಗೆ ಕರೆ ತರಲಾಗಿತ್ತು. ತಮ್ಮ ಪುತ್ರ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಆತನ ಮುಖದ ತುಂಬಾ ಕಪ್ಪು ಮಸಿ ತುಂಬಿಕೊಂಡು ಮುಖದ ತುಂಬ ಗಾಯಗಳಾಗಿ ಬಲ ಗೈ ಊದಿಕೊಂಡಿದ್ದನ್ನು ಕಂಡ ಪ್ರಥಮ್ ತಂದೆ ಆಸ್ಪತ್ರೆಗೆ ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತವಾದ ಸ್ಪರ್ಶ್ ಆಸ್ಪತ್ರೆಯ ಬಹು ವಿಭಾಗೀಯ ತಜ್ಞ ವೈದ್ಯರ ತಂಡ ಯುವಕನು ಮೊಬೈಲ್ ಸ್ಫೋಟದಿಂದಾಗಿ ಡಯಾಬಿಟಿಕ್ ಕೀಟೋ ಅಸಿಡೋಸಿಸ್ ಎಂಬ ಮಾರಣಾಂತಿಕ ಸ್ಥಿತಿಗೆ ತಲುಪಿದ್ದನ್ನು ಪತ್ತೆ ಮಾಡಿದರು. ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ತುತು ಚಿಕಿತ್ಸಾ ತಜ್ಞರು, ಮೂಳೆ ತಜ್ಷರು ಹಾಗೂ ಪ್ಲಾಸ್ಟಿಕ್ ಸರ್ಜರಿ ವೈದ್ಯರ ತಂಡ ಚಿಕಿತ್ಸೆ ಆರಂಭಿಸಿತು.…
ಬೆಂಗಳೂರು: ಮಹಾರಾಷ್ಟ್ರ ಸರ್ಕಾರದ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರಾದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಮೀರ್ ಕುಮಾರ್ ಬಿಸ್ವಾಸ್ ಅವರು ಎರಡನೇ ಬಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮಂಗಳವಾರ ಭೇಟಿ ನೀಡಿ, ರಾಜ್ಯದಲ್ಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮತ್ತು ಸೀಟು ಹಂಚಿಕೆ ಪ್ರಕ್ರಿಯೆ ಬಗ್ಗೆ ಪೂರ್ಣ ಮಾಹಿತಿ ಪಡೆದರು. ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿಯನ್ನು ನೀಡಿದರು. ವೈದ್ಯಕೀಯ, ಎಂಜಿನಿಯರಿಂಗ್, ಕೃಷಿ ವಿಜ್ಞಾನ, ನರ್ಸಿಂಗ್.. ಹೀಗೆ ಒಟ್ಟು 21 ವಿವಿಧ ಬಗೆಯ ಕೋರ್ಸ್ ಗಳಿಗೆ ಸೀಟು ಹಂಚಿಕೆಯನ್ನು ಕೆಇಎ ಏಕಕಾಲದಲ್ಲಿ ಮಾಡುತ್ತಿದ್ದು, ಅದರ ಪೂರ್ಣ ಮಾಹಿತಿಯನ್ನು ಗದ್ಯಾಳ ಅವರು ಬಿಸ್ವಾಸ್ ಅವರಿಗೆ ಎಳೆ ಎಳೆಯಾಗಿ ವಿವರಿಸಿದರು. ಬಿಸ್ವಾಸ್ ಅವರ ನೇತೃತ್ವದ ನಿಯೋಗ ಜೂನ್ 23ರಂದು ಕೂಡ ಕೆಇಎ ಗೆ ಭೇಟಿ ನೀಡಿ ಮಾಹಿತಿ ಪಡೆದಿತ್ತು. ಇವತ್ತಿನ ಭೇಟಿ ಎರಡನೇಯದಾಗಿದ್ದು ಅನೇಕ ಅನುಮಾನ/ಸಂದೇಹಗಳಿಗೆ ಪರಿಹಾರವನ್ನು ಬಿಸ್ವಾಸ್ ಅವರು ಪಡೆದರು. ಮಹಾರಾಷ್ಟ್ರದಲ್ಲಿ ಒಟ್ಟು…
ಬೆಂಗಳೂರು: ದಸರಾ ಮತ್ತು ದೀಪಾವಳಿ ಅವಧಿಯಲ್ಲಿ ರಾಜ್ಯದ ಹೆಮ್ಮೆಯ “ನಂದಿನಿ” ಬ್ರಾಂಡ್ನಿಂದ ದಾಖಲೆಯ ಸಿಹಿ ಮಾರಾಟವಾಗಿದೆ. ಬರೋಬ್ಬರಿ ದಸರಾ, ದೀಪಾವಳಿಯಲ್ಲಿ 1,100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳು ಮಾರಾಟವಾಗಿವೆ. ಈ ಕುರಿತಂತೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ರು ಮಾಹಿತಿ ನೀಡಿದ್ದು, ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಕಳೆದ ಐದು ದಶಕಗಳಿಂದ ರಾಜ್ಯದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಹಾಲು ಉತ್ಪಾದಕರ ರೈತರ ಹಿತದೃಷ್ಟಿಯಿಂದ ರಾಜ್ಯದ ಹೈನು ಸಹಕಾರ ಚಳುವಳಿಯನ್ನು ಬಲಪಡಿಸುವಲ್ಲಿ ಮುಂಚೂಣಿಯಲ್ಲಿದೆ ಎಂದಿದ್ದಾರೆ. ಪ್ರತಿದಿನ ರಾಜ್ಯದ ವಿವಿಧ ಹೈನುಗಾರ ರೈತರಿಂದ ಸರಾಸರಿ 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದ್ದು, ಅದರಲ್ಲಿ ಸುಮಾರು 65 ಲಕ್ಷ ಲೀಟರ್ ಹಾಲು, ಮೊಸರು ಹಾಗೂ ಯುಎಚ್ಟಿ ಹಾಲು ಉತ್ಪನ್ನಗಳನ್ನು ರಾಜ್ಯ ಮತ್ತು ಹೊರರಾಜ್ಯ ಮಾರುಕಟ್ಟೆಗಳಲ್ಲಿ ಗ್ರಾಹಕರಿಗೆ ತಲುಪಿಸಲಾಗುತ್ತಿದೆ. “ನಂದಿನಿ” ಬ್ರಾಂಡ್ನಡಿಯಲ್ಲಿ ಹಾಲಿನೊಂದಿಗೆ ತುಪ್ಪ, ಬೆಣ್ಣೆ, ಪನೀರ್, ಸಿಹಿತಿನಿಸುಗಳು, ಹಾಲಿನ ಪುಡಿ, ಪಾನೀಯಗಳು…
ಹಾಸನ: ಹಾಸನಾಂಬೆ ದೇವಿಯ ದರ್ಶನ ಬಹಳ ಸರಾಗವಾಗಿ ನಡೆಯುತ್ತಿದೆ. ನಿನ್ನೆ ಸುಮಾರು 2 ಲಕ್ಷ ಜನರು ದರ್ಶನ ಪಡೆದಿದ್ದಾರೆ. ಪ್ರಸ್ತುತ ವರ್ಷ ಇಲ್ಲಿಯವರೆಗೆ 23,00,000 ಜನರು ದರ್ಶನ ಪಡೆದಿದ್ದಾರೆ. ಕಳೆದ ವರ್ಷದ ಒಟ್ಟಾರೆ 17,46,000 ಜನ ದರ್ಶನ ಪಡೆದಿದ್ದಾರೆ ಎಂಬುದಾಗಿ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಈ ವರ್ಷ ₹ 300/1000 ಟಿಕೆಟ್ ಸಾಲಿನಲ್ಲಿ 3,40,260 ಜನರು ದರ್ಶನ ಪಡೆದಿದ್ದಾರೆ. ಕಳೆದ ವರ್ಷ ಈ ಸಾಲಿನಲ್ಲಿ ಒಟ್ಟಾರೆ 1,29,956 ಜನ ದರ್ಶನ ಪಡೆದಿದ್ದರು. ಇಂದು ಮತ್ತು ನಾಳೆ ದರ್ಶನ ಲಭ್ಯವಿದೆ. ಇಂದು ಮಧ್ಯಾಹ್ನ 2 ರಿಂದ 3.30 ರವರೆಗೆ ನೈವೇದ್ಯ ಇರುವುದರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದಿದ್ದಾರೆ. ಇಂದು ಕ್ಯೂ ಲೈನ್ಗಳ ಪ್ರವೇಶ ದ್ವಾರಗಳು ರಾತ್ರಿ 9 ಗಂಟೆಗೆ ಮುಚ್ಚಲ್ಪಡುತ್ತವೆ ಮತ್ತು ದರ್ಶನ ಮಧ್ಯರಾತ್ರಿ 12 ಗಂಟೆಗೆ ನಿಲ್ಲುತ್ತದೆ ಎಂದು ತಿಳಿಸಿದ್ದಾರೆ. ಬುಧವಾರ – ದರ್ಶನ ಬೆಳಿಗ್ಗೆ…
ಬೆಂಗಳೂರು ಗ್ರಾಮಾಂತರ: ಲಂಚದ ಹಣವನ್ನು ಪಡೆಯುತ್ತಿದ್ದಂತ ಗ್ರಾಮ ಪಂಚಾಯ್ತಿ ಪಿಡಿಓ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋ ವೈರಲ್ ಬೆನ್ನಲ್ಲೇ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮ ಪಂಚಾಯ್ತಿ ಪಿಡಿಒ ಅಮಾನತುಗೊಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಇಒ ಅನುರಾಧಾ ಅವರು ಈ ಆದೇಶ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮ ಪಂಚಾಯ್ತಿ ಪಿಡಿಒ ಶಿವಾನಂದ ಮರಕೇರಿ ಲಂಚದ ಹಣ ಪಡೆಯುತ್ತಿದ್ದಂತ ವೀಡಿಯೋ ವೈರಲ್ ಆಗಿತ್ತು. ಈ ಕುರಿತಂತೆ ತನಿಖೆಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಇಓ ಅನುರಾಧಾ ಆದೇಶಿಸಿದ್ದರು. ವರದಿಯಲ್ಲಿ ಹಾದ್ರಿಪುರ ಗ್ರಾಮ ಪಂಚಾಯ್ತಿ ಪಿಡಿಓ ಶಿವಾನಂದ ಮರಕೇರಿ ಲಂಚ ಪಡೆದಿದ್ದು ಸಾಭೀತಾದ ಹಿನ್ನಲೆಯಲ್ಲಿ ಅವರನ್ನು ಸಸ್ಪೆಂಡ್ ಮಾಡಿ ಆದೇಶಿಸಿದ್ದಾರೆ. https://kannadanewsnow.com/kannada/fire-breaks-out-in-building-near-rashtrapati-bhawan/ https://kannadanewsnow.com/kannada/tomorrow-all-religious-endowment-department-temples-in-the-state-will-conduct-gopooja-government-official-order/
ನವದೆಹಲಿ: ಮಂಗಳವಾರ ಮಧ್ಯಾಹ್ನ ರಾಷ್ಟ್ರಪತಿ ಭವನದ ಗೇಟ್ ಸಂಖ್ಯೆ 31 ರ ಬಳಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಧಿಕಾರಿಗಳು ಐದು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕರೆಸಿಕೊಂಡಿರುವುದಾಗಿ ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ಗೃಹೋಪಯೋಗಿ ವಸ್ತುಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಧ್ಯಾಹ್ನ 1:51 ಕ್ಕೆ ಕರೆ ಬಂದಿದ್ದು, 20 ನಿಮಿಷಗಳಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. “ನಾವು ಐದು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಧಾವಿಸಿ ಬಂದಿದ್ದೇವೆ. ಮಧ್ಯಾಹ್ನ 2:15 ರ ಹೊತ್ತಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ” ಎಂದು ಡಿಎಫ್ಎಸ್ ಅಧಿಕಾರಿ ತಿಳಿಸಿದ್ದಾರೆ. https://kannadanewsnow.com/kannada/tomorrow-all-religious-endowment-department-temples-in-the-state-will-conduct-gopooja-government-official-order/
ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ ಅಂದರೆ ಬಲಿಪಾಡ್ಯಮಿಯ ನಾಳೆಯಂದು ಗೋಪೂಜೆ ಕಾರ್ಯಕ್ರಮ ನೆರವೇರಿಸುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋಪೂಜೆ ಕಾರ್ಯಕ್ರಮ ಆಚರಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು, ಕರ್ನಾಟಕ ಸರ್ಕಾರ ರವರ ಮೌಖಿಕ ನಿರ್ದೇಶನ ನೀಡಿದ್ದಾರೆ ಎಂದಿದ್ದಾರೆ. ಅವರ ಉಲ್ಲೇಖಿತ ಸುತ್ತೋಲೆಯನ್ವಯ ಹಿಂದೂ ಧರ್ಮದಲ್ಲಿ ಗೋವಿಗೆ ಗೋಮಾತೆ ಎಂಬ ಹೆಸರಿನಿಂದ, ವಿಶೇಷ ಸ್ಥಾನಮಾನವನ್ನು ನೀಡಿ ಪೂಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜನ ಜಾಗೃತಿ ಮೂಡಿಸಬೇಕಾಗಿರುವುದರಿಂದ ದೀಪಾವಳಿ(ಬಲಿಪಾಡ್ಯಮಿ) ದಿನದಂದು ಗೋವುಗಳಿಗೆ ಸ್ನಾನ ಮಾಡಿಸಿ ಅರಶಿನ ಕುಂಕುಮ ಹೂವುಗಳಿಂದ ಅಲಂಕರಿಸಿ ಅಕ್ಕಿ ಬೆಲ್ಲ ಹಣ್ಣು ಮುಂತಾದ ಗೋಗ್ರಾಸವನ್ನು ನೀಡಿ ಸಂಜೆ…
ಮಹಾರಾಷ್ಟ್ರ: ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಈ ಅಪಘಾತದಲ್ಲಿ ಬೀದರ್ ಮೂಲದ ನಾಲ್ವರು ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ. ಬೀದರ್ ಮೂಲದ ಸ್ನೇಹಿತರು ಸ್ವಾಮೀಜಿ ದರ್ಶನಕ್ಕೆ ತೆರಳಿದ್ದರು. ಹುಲಜಂತಿ ಮಾಳಿಂಗರಾಯ್ ಸ್ವಾಮೀಜಿ ದರ್ಶನಕ್ಕೆ ತೆರಳಿದ್ದರು. ದರ್ಶನ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ. ಕಾರು ಅಪಘಾತದಲ್ಲಿ ಬೀದರ್ ಮೂಲದ ನಾಲ್ವರು ದುರ್ಮರಣ ಹೊಂದಿದ್ದಾರೆ. ಇನ್ನೂ ಕೆಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/tomorrow-gopuja-is-mandatory-in-the-states-muzarai-temples-minister-ramalinga-reddy-orders/ https://kannadanewsnow.com/kannada/heart-disease-has-increased-among-indians-due-to-lifestyle-and-processed-food-habits-study/
ಬೆಂಗಳೂರು: ನಾಳೆ ರಾಜ್ಯದ ಎಲ್ಲಾ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಗೋಪೂಜೆಯನ್ನು ಕಡ್ಡಾಯವಾಗಿ ಮಾಡುವಂತೆ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ. ಈ ಸಂಬಂಧ ಅವರು ಮೌಖಿಕ ಆದೇಶ ನೀಡಿದ್ದಾರೆ ಎನ್ನಲಾಗಿದೆ. ನಾಳೆ ದೀಪಾವಳಿಯ ಬಲಿಪಾಡ್ಯಮಿಯ ಕಾರಣದಿಂದಾಗಿ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಗೋಪೂಜೆ ನೆರವೇರಿಸುವಂತೆ ಸೂಚಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ನಾಳೆ ರಾಜ್ಯದ ಎಲ್ಲಾ ಮುಜರಾತಿ ಇಲಾಖೆ ವ್ಯಾಪ್ತಿಯ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಪೂಜಿಸುವ ಕಾರಣದಿಂದಾಗಿ ಅವುಗಳಿಗೆ ಸ್ನಾನ ಮಾಡಿಸಿ, ದೇವಾಲಯಕ್ಕೆ ಕರೆತರಬೇಕು. ಆ ಬಳಿಕ ಗೋವುಗಳಿಗೆ ಅರಿಶಿಣ, ಕುಂಕುಮ ಹಚ್ಚಿ, ಹೂವುಗಳಿಂದ ಅಲಂಕರಿಸಿ, ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ನೀಡಿ ಅವುಗಳನ್ನು ಪೂಜಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. https://kannadanewsnow.com/kannada/karnataka-janapada-academy-award-winning-dalavai-chittappa-has-passed-away/ https://kannadanewsnow.com/kannada/heart-disease-has-increased-among-indians-due-to-lifestyle-and-processed-food-habits-study/














