Author: kannadanewsnow09

ಶಿವಮೊಗ್ಗ : ಶಿವಮೊಗ್ಗ ರಂಗಾಯಣವು ಪ್ರತಿ ವರ್ಷದಂತೆ ಈ ಬಾರಿಯೂ ಮಕ್ಕಳಿಗಾಗಿ ರಂಗತರಬೇತಿ ಶಿಬಿರ ‘ಚಿಣ್ಣರ ಸಿಹಿಮೊಗೆ-2026’ ಎಂಬ ಹೆಸರಿನಲ್ಲಿ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಏಪ್ರಿಲ್ 14 ರಿಂದ ಮೇ 03 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ಬೇಸಿಗೆ ಶಿಬಿರವನ್ನು ಏರ್ಪಡಿಸಿದೆ. ಶಿಬಿರದಲ್ಲಿ ಅನುಭವವಿರುವ ಕರ್ನಾಟಕದ ಕ್ರೀಯಾಶೀಲ ರಂಗನಿರ್ದೇಶಕರು, ರಂಗಭೂಮಿಯ ನೇಪಥ್ಯ ಕೆಲಸಗಳಲ್ಲಿ ಪರಿಣಿತರಾಗಿರುವ ಸಾಧಕರು, ವಿವಿಧ ಕಲಾಕ್ಷೇತ್ರಗಳಲ್ಲಿ ಪರಿಣಿತ ಹೊಂದಿರುವ ರಾಜ್ಯದ ಕಲಾವಿದರು ಸಂಪನ್ಮೂಲ ವ್ಯಕ್ತಿಗಳಾಗಿ ಕೆಲಸ ನಿರ್ವಹಿಸಲಿದ್ದಾರೆ. ನಾಟಕ, ಹೋಳಿ, ರಂಗಾಟ, ರಂಗಗೀತೆ, ಜನಪದ ಆಟ, ಮಣ್ಣಿನ ಆಟ, ಮ್ಯಾಜಿಕ್ ಷೋ, ಮಕ್ಕಳ ಸಂತೆ, ರಂಗಜಾಥಾ, ಮುಖವಾಡ ತಯಾರಿ, ಚಿತ್ರಕಲೆ, ಮಕ್ಕಳ ಸಿನಿಮಾ, ನಾಟಕ ವೀಕ್ಷಣೆ, ಪ್ರವಾಸ, ಮಡಿಕೆ ತಯಾರಿ, ಪರಿಸರದ ಜೊತೆ ಒಡನಾಟ, ಹೊರಸಂಚಾರ ಹೀಗೆ ಹಲವು ಮಜಲುಗಳನ್ನು ಪ್ರಾಯೋಗಿಕವಾಗಿ ಅಭ್ಯಾಸ ಮಾಡಿಸುತ್ತಾ ನಾಟಕಕ್ಕೆ ಸಂಬAಧಿತ ಪೂರಕ ಕಲೆಗಳನ್ನು ಶಿಬಿರದಲ್ಲಿ ಕಲಿಸಲಾಗುವುದು. ಶಿಬಿರದ ಕೊನೆಯ ಎರಡು ದಿನಗಳು ಮೇ 02 ಮತ್ತು…

Read More

ದಾವಣಗೆರೆ: ಈ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗ್ಯಾರಂಟಿ ಸರ್ಕಾರಕ್ಕೆ ಗೆಲುವು ಸಹ ಗ್ಯಾರಂಟಿ. ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಅಭಿವೃದ್ಧಿಗೆ ಜನಮನ್ನಣೆ ಸಿಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನತೆ ಶಾಮನೂರು ಶಿವಶಂಕರಪ್ಪ ಅವರ ಮೇಲೆ ಅಪಾರ ಗೌರವ ಹೊಂದಿದ್ದಾರೆ. ಎಲ್ಲಾ ಸಮುದಾಯದವರಿಗೂ ಸೌಲಭ್ಯ ಕಲ್ಪಿಸಿದ್ದಾರೆ. ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರದಲ್ಲಿ ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಸಮರ್ಥ ಶಾಮನೂರು ಮಲ್ಲಿಕಾರ್ಜುನ ಅವರ ‘ಕೈʼ ಹಿಡಿಯಲಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವುದು ನಿಶ್ಚಿತ. ವಿಧಾನಸಭೆಯಲ್ಲಿ ನಮ್ಮ ಶಾಸಕರ ಸಂಖ್ಯೆ 138ರಿಂದ 140ಕ್ಕೆ ಏರಿಕೆಯಾಗಲಿದೆ ಎಂದರು. ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ ಟೀಕಿಸಿದ್ದರು. ಗ್ಯಾರಂಟಿ ಜಾರಿಗೆ ತರಲು ಅಸಾಧ್ಯ, ರಾಜ್ಯ ದಿವಾಳಿ ಆಗುತ್ತದೆ. ರಾಜ್ಯದ ಅಭಿವೃದ್ಧಿಗೆ ಹಿನ್ನಡೆ ಆಗುತ್ತದೆ ಎಂದರು. ಆದರೆ ಕಾಂಗ್ರೆಸ್ ಸರ್ಕಾರ ನುಡಿದಂತೆ ಗ್ಯಾರಂಟಿ…

Read More

ಮಂಡ್ಯ : ಗ್ರಾಮಗಳ ಅಭಿವೃದ್ಧಿಗೋಸ್ಕರ 4 ಗ್ರಾಮ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರಿಸಲಾಗಿದೆಯೇ ಹೊರತು ಇದರಲ್ಲಿ ನನ್ನ ವೈಯಕ್ತಿಕ ಹಿತಾಸಕ್ತಿ ಏನೂ ಇಲ್ಲ ಎಂಬುವುದನ್ನು ಸ್ಥಳಿಯ ಗ್ರಾಮಸ್ಥರುಗಳು ಅರ್ಥಮಾಡಿಕೊಳ್ಳಬೇಕು ಎಂದು ಶಾಸಕ ಕೆ.ಎಂ.ಉದಯ್ ಸ್ಪಷ್ಟಪಡಿಸಿದರು. ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದಲ್ಲಿ ಶನಿವಾರ 8.15 ಕೋಟಿ ರೂ ವೆಚ್ಚದಲ್ಲಿ ಬಿ.ಎಂ.ರಸ್ತೆಯಿಂದ ಮರಕಾಡುದೊಡ್ಡಿ, ಗೊರವನಹಳ್ಳಿ ಮುಖಾಂತರ ಮದ್ದೂರು ಕ್ರೀಡಾಂಗಣ ಬಳಿ ಪೇಟೆ ಬೀದಿ ಸೇರಿರುವ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಗೆಜ್ಜಲಗೆರೆ, ಗೊರವನಹಳ್ಳಿ ಸೇರಿದಂತೆ ನಾಲ್ಕು ಗ್ರಾಮ ಪಂಚಾಯಿತಿಗಳ ಕೆಲವು ಗ್ರಾಮಗಳು ನಗರ ಸಭೆಗೆ ಸೇರ್ಪಡೆಯಾಗಿರುವುದರಿಂದ ಹೆಚ್ಚಿನ ಸೌಕರ್ಯಗಳು ಸಿಗಲಿದೆ. ಗ್ರಾಮಗಳ ಅಭಿವೃದ್ಧಿಗೋಸ್ಕರ 4 ಗ್ರಾಮ ಪಂಚಾಯಿತಿಗಳನ್ನು ನಗರಸಭೆಗೆ ಸೇರಿಸಲಾಗಿದೇ ಹೊರತು ಇದರಲ್ಲಿ ನನ್ನ ವೈಯಕ್ತಿಕ ಹಿತಾಸಕ್ತಿ ಏನೂ ಇಲ್ಲ ಎಂಬುವುದನ್ನು ಸ್ಥಳಿಯ ಗ್ರಾಮಸ್ಥರುಗಳು ಅರ್ಥಮಾಡಿಕೊಳ್ಳಬೇಕು ಎಂದರು. ಕೆಲ ರಾಜಕೀಯ ಪಕ್ಷಗಳ ಮುಖಂಡರು ಮಾಡುತ್ತಿರುವ ರಾಜಕೀಯ ದುರುದ್ದೇಶಗಳಿಂದ ಕೆಲವು ಮುಗ್ದ ಜನರನ್ನು…

Read More

ಮಂಡ್ಯ : ಶೋಷಣೆಗೆ ಒಳಗಾಗುವ ಎಸ್ಸಿ, ಎಸ್ಟಿ ಜನಾಂಗದವರ ಸಮಸ್ಯೆಗಳಿಗೆ ತಾಲೂಕು ಹಂತದಲ್ಲೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಎಲ್. ಮೂರ್ತಿ ಹೇಳಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಶೋಷಣೆಗೆ ಒಳಗಾಗುವ ಎಸ್ಸಿ, ಎಸ್ಟಿ ಜನಾಂಗದವರು ಯಾರೇ ಆಗಿರಲಿ ಆಯೋಗಕ್ಕೆ ಬಂದು ನಿರ್ಭೀತಿಯಿಂದ ಪ್ರಕರಣ ದಾಖಲಿಸಬಹುದು. ಅನುಸೂಚಿತ ಜಾತಿಗಳು ಮತ್ತು ಬುಡಕಟ್ಟುಗಳ ಅಯೋಗ ಸದಾ ನಿಮ್ಮೊಂದಿಗೆ ಇರುತ್ತದೆ. ನಾನು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮದ್ದೂರು ತಾಲೂಕಿನಿಂದ ಈಗಾಗಲೇ 48 ಅರ್ಜಿಗಳು ಆಯೋಗಕ್ಕೆ ಸಲ್ಲಿಕೆಯಾಗಿತ್ತು. ಅದರಲ್ಲಿ ನ್ಯಾಯಾಲಯದ ಮುಖಾಂತರ 12 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಜನರು ಆಯೋಗಕ್ಕೆ ಅಲೆದಾಡಬಾರದು ಎಂಬ ಉದ್ದೇಶದಿಂದ ಕೆಲವು ಅರ್ಜಿಗಳನ್ನು ತಾಲೂಕು ಮಟ್ಟದಲ್ಲೆ ವಿಲೇವಾರಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಮದ್ದೂರು ನಗರಸಭೆಯಲ್ಲಿ 2023 ರಿಂದ 2025 ರವರೆಗೆ ಶೇ. 25…

Read More

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಗಲಕೋಟೆ ಉಪಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆತಿದೆ. ಎಲ್ಲೆಡೆ ಅಭೂತಪೂರ್ವ ಸ್ಪಂದನೆ ಸಿಗುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಬಡವರಿಗಾಗಿ ರೂಪಿಸಿಸಲ್ಪಟ್ಟಿವೆ. ಎಲ್ಲಾ ಜಾತಿ, ಧರ್ಮ, ಭಾಷೆಗಳಿಗೆ ಸೇರಿದ ಜನರಿಗೆ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದು, ಗ್ಯಾರಂಟಿ ಯೋಜನೆಗಳು ಸಾಮಾಜಿಕ ಬದ್ಧತೆಯನ್ನು ಒದಗಿಸುವ ಹೂಡಿಕೆಯಾಗಿದೆ. ಇದೂ ಕೂಡ ಅಭಿವೃದ್ದಿಯೇ ಎಂದರು. ಅಭಿವೃದ್ಧಿಯೆಂದರೆ ಕೇವಲ ರಸ್ತೆ, ಸೇತುವೆ, ಕಟ್ಟಡಗಳು ಮಾತ್ರವಲ್ಲ. ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವುದು ಕೂಡ ಆಗಿದೆ ಎಂದರು. ಸಾಮಾಜಿಕ ಯೋಜನೆಗಳನ್ನು ಘೋಷಿಸಿದ ಮೇಲೆ ಬಿಜೆಪಿ ಅಂದಿನಿಂದ ಇಂದಿನವರೆಗೆ ವಿರೋಧಿಸುತ್ತಲೇ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಎಲ್ಲರೂ ರಾಜ್ಯ ಆರ್ಥಿಕವಾಗಿ…

Read More

ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ತೃತೀಯ ಭಾಷೆಯಾದ ಹಿಂದಿಗೆ ಅಂಕಗಳ ಬದಲಾಗಿ ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿರುವುದು ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ರಾಜ್ಯಪಾಲರ ಈ ನಡೆಯನ್ನು ತೀವ್ರವಾಗಿ ಖಂಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ), ಸೋಮವಾರ ರಾಜಭವನ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದೆ. ಘಟನೆಯ ಹಿನ್ನೆಲೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ಅಂಕಗಳನ್ನು ಒಟ್ಟು ಫಲಿತಾಂಶಕ್ಕೆ ಪರಿಗಣಿಸದೆ ಕೇವಲ ಗ್ರೇಡ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದರು. ‘ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ’ ನೀಡಿದ ಮನವಿಯ ಮೇರೆಗೆ ರಾಜ್ಯಪಾಲರು ಈ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಕರವೇ ಆಕ್ರೋಶ: ರಾಜ್ಯಪಾಲರ ಈ ನಡೆಯ ಬಗ್ಗೆ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಹೇಳಿರುವ ಪ್ರಮುಖ ಅಂಶಗಳು ಹೀಗಿವೆ: ಒಕ್ಕೂಟ…

Read More

ದಾವಣಗೆರೆ: ಭೂಮಿ ಸರ್ವೆ ಕಾರ್ಯಕ್ಕೆ ಸಂಬಂಧಿಸಿದಂತೆ ವೈದ್ಯರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ (RI) ಚಂದ್ರಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಶನಿವಾರ ರೆಡ್‌ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಘಟನೆಯ ವಿವರ: ದಾವಣಗೆರೆ ಜಿಲ್ಲೆಯ ಕಂದಾಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಪ್ಪ ಅವರು, ಭೂಮಿಯ ಸರ್ವೆ ಕೆಲಸ ಮಾಡಿಕೊಡಲು ವೈದ್ಯರೊಬ್ಬರಿಂದ 50,000 ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ಇಚ್ಛಿಸದ ವೈದ್ಯರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ಕಾರ್ಯಾಚರಣೆ: ದೂರಿನ ಅನ್ವಯ ಇಂದು ವೈದ್ಯರಿಂದ 50 ಸಾವಿರ ರೂ. ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಚಂದ್ರಪ್ಪ ಅವರನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್‌ಪಿ ಎಂ.ಎಸ್. ಕೌಲಾಪುರ ಅವರ ನೇತೃತ್ವದಲ್ಲಿ ನಡೆದ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು. ಸದ್ಯ ಆರೋಪಿ ಚಂದ್ರಪ್ಪ ಅವರನ್ನು ಬಂಧಿಸಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು, ನೌಕರರು ಲಂಚಕ್ಕೆ…

Read More

ಬೆಂಗಳೂರು : “ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದ ಮತಕ್ಕಿಂತ ಈ ಬಾರಿಯ ಉಪಚುನಾವಣೆಯಲ್ಲಿ ಹೆಚ್ಚು ಮತ ಬೀಳಲಿದ್ದು, ನಮ್ಮ ಅಭ್ಯರ್ಥಿಗಳು ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ” ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಉಪಚುನಾವಣೆ ಪ್ರಚಾರದ ಬಗ್ಗೆ ಕೇಳಿದಾಗ, “ದಾವಣಗೆರೆ ಹಾಗೂ ಬಾಗಲಕೋಟೆಯ ಉಪಚುನಾವಣೆ ಪ್ರಚಾರ ಮಾಡಿ ಬಂದಿದ್ದೇನೆ. ನಮ್ಮ ಕಾರ್ಯಕರ್ತರು ಬಹಳ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರತಿ ಮನೆ ಮನೆಗೆ ಹೋಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮನವರಿಕೆ ಮಾಡುತ್ತಿದ್ದಾರೆ. ಗ್ಯಾರಂಟಿ ಫಲಾನುಭವಿಗಳಲ್ಲಿ ಕಳೆದ ಬಾರಿ ಬಿಜೆಪಿಗೆ ಮತ ಹಾಕಿರುವವರೂ ಕೂಡ ಈ ಬಾರಿ ಕಾಂಗ್ರೆಸ್ ಗೆ ಮತ ಹಾಕುವುದಾಗಿ ತಿಳಿಸಿದ್ದಾರೆ. ಬೇಲೆ ಏರಿಕೆಯಾಗುತ್ತಿರುವ ಪರಿಸ್ಥಿತಿಯಲ್ಲಿ ಗ್ಯಾರಂಟಿ ಯೋಜನೆ ಎಷ್ಟು ನೆರವಾಗುತ್ತಿವೆ ಎಂದು ಸ್ಮರಿಸುತ್ತಿದ್ದಾರೆ. ಇವುಗಳನ್ನು ಉಳಿಸಿಕೊಳ್ಳಲು ಜನ ತೀರ್ಮಾನಿಸಿದ್ದಾರೆ” ಎಂದು ತಿಳಿಸಿದರು. ಕೇರಳ ಚುನಾವಣಾ ಪ್ರಚಾರಕ್ಕೆ ತೆರಳುತ್ತಿರುವ…

Read More

ಶಿವಮೊಗ್ಗ: ಕಷ್ಟಪಟ್ಟು ದುಡಿಯುವ ಕಾಯಕದ ನಡುವೆಯೂ ಸಮಾಜದ ಅಸಹಾಯಕರಿಗೆ ನೆರವಾಗುವ ಮೂಲಕ ಸಾಗರದ ಓಮಿನಿ ಚಾಲಕರು ಮತ್ತು ಮಾಲೀಕರ ಸಂಘವು ಎಲ್ಲರಿಗೂ ಮಾದರಿಯಾಗಿದೆ. ಶನಿವಾರ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಮುಗದೂರು ಬಳಿಯ ದೇವಸ್ಥಳದಲ್ಲಿರುವಂತ ‘ಪುನೀತ್ ರಾಜ್‌ಕುಮಾರ್ ಅನಾಥಾಶ್ರಮ ಸೇವಾ ಸಮಿತಿ’ಗೆ ಭೇಟಿ ನೀಡಿದ ಸಂಘದ ಪದಾಧಿಕಾರಿಗಳು, ಸುಮಾರು 20 ಸಾವಿರ ರೂ. ಮೌಲ್ಯದ ಅಕ್ಕಿ ಹಾಗೂ ಜೀವನಾವಶ್ಯಕ ಪಡಿತರ ವಸ್ತುಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ವೃದ್ಧರ ಮೌನ ವೇದನೆಗೆ ದನಿಯಾದ ಸಂಘ: ವಿಡಿಯೋದಲ್ಲಿ ಕಂಡುಬರುವಂತೆ, ಸಂಘದ ಸದಸ್ಯರು ಆಶ್ರಮದ ವೃದ್ಧರೊಂದಿಗೆ ಸಮಯ ಕಳೆದು ಅವರ ಯೋಗಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಕಾನೂನು ಸಲಹೆಗಾರರಾದ ವಿ. ಶಂಕರ್, “ನಾವು ದಿನವಿಡೀ ಓಮಿನಿ ಗಾಡಿ ಓಡಿಸಿ ದುಡಿದ ಹಣದಲ್ಲಿ ಒಂದು ಸಣ್ಣ ಪಾಲನ್ನು ಈ ರೀತಿಯ ಸಮಾಜಮುಖಿ ಕಾರ್ಯಕ್ಕೆ ಮೀಸಲಿಡುತ್ತಿದ್ದೇವೆ. ವಯಸ್ಸಾದ ಕಾಲದಲ್ಲಿ ಹೆತ್ತವರನ್ನು ಬೀದಿಗೆ ತಳ್ಳುವುದು ಅಥವಾ ಅನಾಥಾಶ್ರಮಕ್ಕೆ ಸೇರಿಸುವುದು ಕಾನೂನು ಮತ್ತು ಧರ್ಮ ಎರಡರಲ್ಲೂ ಅಪರಾಧ. ಆದರೆ,…

Read More

ಸಾಗರ: ಮಲೆನಾಡು ಭಾಗದ ರೈತರು ದಶಕಗಳಿಂದ ಎದುರಿಸುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಕಾನ ಒತ್ತುವರಿ ಮತ್ತು ಕೆಪಿಸಿ ಭೂಮಿ ಹಂಚಿಕೆ ಸೇರಿದಂತೆ 25ಕ್ಕೂ ಹೆಚ್ಚು ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಮಲೆನಾಡು ರೈತ ಹಿತರಕ್ಷಣಾ ಸಮಿತಿಯ ಮುಖಂಡ ತೀನಾ ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಜನಪ್ರತಿನಿಧಿಗಳ ಬೇಜವಾಬ್ದಾರಿತನವನ್ನು ತೀವ್ರವಾಗಿ ಖಂಡಿಸಿದರು. ವರದಿಯ ಪ್ರಮುಖ ಅಂಶಗಳು ಇಲ್ಲಿವೆ: ​ಸರ್ಕಾರ ಮತ್ತು ಶಾಸಕರ ವಿರುದ್ಧ ಗಂಭೀರ ಆರೋಪಗಳು ​ವ್ಯರ್ಥ ಭರವಸೆಗಳು: ಬೆಳಗಾವಿ ಅಧಿವೇಶನದಲ್ಲಿ ಮಲೆನಾಡು ರೈತರ ಬಗ್ಗೆ ಚರ್ಚಿಸಲು ಅವಕಾಶ ನೀಡಿದ್ದರೂ, ಶಾಸಕರು ಕೇವಲ ಐದು ನಿಮಿಷವೂ ರೈತರ ಪರವಾಗಿ ಧ್ವನಿ ಎತ್ತಲಿಲ್ಲ. ​ಸತ್ತ ಕಡತಗಳು: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರೂ, ಸಿಎಂ ಸಹಿ ಹಾಕಿದ್ದರೂ ಸಹ ಆ ಕಡತಗಳು ಇಂದಿಗೂ…

Read More