Author: kannadanewsnow09

ಶಿವಮೊಗ್ಗ : 2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಫೆ. 29 ರೊಳಗಾಗಿ SSP ತಂತ್ರಾಂಶದಲ್ಲಿ ಲಾಗಿನ್ ಆಗಿ ಸಲ್ಲಿಸುವುದು. 2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿರುವುದಿಲ್ಲ. ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ. 2.50 ಲಕ್ಷ ಮೀರಿರಬಾರದು. ಆದಾರ ಪ್ರಮಾಣದೊಂದಿಗೆ ಅರ್ಜಿ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/bengaluru-brother-kills-brother-by-pouring-petrol-over-car-dispute/ https://kannadanewsnow.com/kannada/applications-invited-for-distribution-of-vegetable-seed-kits/

Read More

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ನನಗೆ ನಿರಂತರವಾಗಿ ಜೀವ ಬೆದರಿಕೆ ಕರೆಗಳು ಬರುತ್ತಿರೋದಾಗಿ ಗಂಭೀರ ಆರೋಪ ಮಾಡಿದ್ದಾರೆ. ಈ ಮೂಲಕ ತಮಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂಬುದಾಗಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ನಿರಂತರವಾಗಿ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡುತ್ತಿದ್ದೇನೆ. ಈ ಕಾರಣಕ್ಕೆ ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂಬುದಾಗಿ ಹೇಳಿದರು. ಕೆ ಆರ್ ಎಸ್ ಡ್ಯಾಂ ಸುತ್ತಮುತ್ತ ಗಣಿಗಾರಿಕೆಯನ್ನು ಮಾಡಬಾರದು ಎಂಬುದಾಗಿ ಹೈಕೋರ್ಟ್ ಆದೇಶಿಸಿದೆ. ಹೀಗಿದ್ದರೂ ಇದಕ್ಕೆ ಕ್ಯಾರೆ ಎನ್ನದೇ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ. ಇದರ ವಿರುದ್ಧ ನನ್ನ ಸಮರ ಮುಂದುವರೆಯಲಿದೆ ಎಂದರು. ಅಂದಹಾಗೇ ಕೆಲ ದಿನಗಳ ಹಿಂದಷ್ಟೇ ಹೈಕೋರ್ಟ್ ಕೆ ಆರ್ ಎಸ್ ಡ್ಯಾಂ ಸುತ್ತಾಮುತ್ತಲಿನ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ಹಾಗೂ ಇತರೆ ಚಟುವಟಿಕೆ ನಡೆಸದಂತೆ ತಾತ್ಕಾಲಿಕವಾಗಿ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಹೈಕೋರ್ಟ್ ಆದೇಶದಂತೆ ಜಿಲ್ಲಾಡಳಿತದಿಂದ ಗಣಿಗಾರಿಕೆ ನಿಷೇಧ ಮಾಡಲಾಗಿತ್ತು. https://kannadanewsnow.com/kannada/breaking-another-trouble-for-d-boss-sri-shakti-sangha-files-complaint-against-actor-darshan/ https://kannadanewsnow.com/kannada/bengaluru-brother-kills-brother-by-pouring-petrol-over-car-dispute/

Read More

ಶಿವಮೊಗ್ಗ : 2023-24 ನೇ ಸಾಲಿಗೆ ಶಿಕಾರಿಪುರ ತೋಟಗಾರಿಕೆ ಇಲಾಖೆ ವತಿಯಿಂದ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ತರಕಾರಿ ಬೆಳೆಯಲು ಉತ್ತೇಜನ ನೀಡಲು ತರಕಾರಿ ಬೀಜಗಳ ವಿತರಣೆ ಕಾರ್ಯಕ್ರಮದಡಿ ಫಲಾನುಭವಿಗೆ ರೂ.2000 ಮೊತ್ತದ ತರಕಾರಿ ಬೀಜಗಳ ಕಿಟ್‍ನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಗೆ ವಿತರಿಸಲಾಗುವುದು. ಆಸಕ್ತ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಜೆರಾಕ್ಸ್, ಬ್ಯಾಂಕ್ ಪಾಸ್‍ಪುಸ್ತಕ ಪ್ರತಿ ಹಾಗೂ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಫೆ.26 ರಿಂದ ತರಕಾರಿ ಬೀಜಗಳ ಕಿಟ್‍ಗಳನ್ನು ತೋಟಗಾರಿಕೆ ಇಲಾಖೆ, ಶಿಕಾರಿಪುರ ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ಮೊ.ಸಂ ಕಸಬಾ 8971370547, ಅಂಜನಾಪುರ 8151810552, ಹೊಸೂರು 6363095898, ಉಡುಗಣಿ 9108548454, ತಾಳಗುಂದ 6361767251 ನ್ನು ಸಂಪರ್ಕಿಸಬಹುದೆಂದು ಶಿಕಾರಿಪುರ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/breaking-another-trouble-for-d-boss-sri-shakti-sangha-files-complaint-against-actor-darshan/ https://kannadanewsnow.com/kannada/bengaluru-brother-kills-brother-by-pouring-petrol-over-car-dispute/

Read More

ಬೆಂಗಳೂರು: ಇಂದು ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದಿಂದ ವಿಚಾರ ಸಂಕೀರ್ಣ ಹಮ್ಮಿಕೊಳ್ಳಲಾಗಿದೆ. ಈ ವಿಚಾರ ಸಂಕೀರ್ಣದಲ್ಲಿ ಭಾಗಿಯಾಗೋದಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಇಂದು ಮಹಿಳಾ ಸರ್ಕಾರಿ ನೌಕರರಿಗೆ ಅರ್ಧ ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ದಿನಾಂಕ 23-02-2024ರ ಇಂದು ಅಖಿಲ ಕರ್ನಾಟಕ ಸರ್ಕಾರಿ ನೌಕರರ ಮಹಿಳಾ ಸಂಘದ ವತಿಯಿಂದ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನ ಅಂದರೆ ಟೌನ್ ಹಾಲ್ ನಲ್ಲಿ ವಿಚಾರ ಸಂಕೀರ್ಣ ನಡೆಯಲಿದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಇಲಾಖೆಯ ಮಹಿಳಾ ನೌಕರರು ಭಾಗವಹಿಸಲು ಅನುಕೂಲವಾಗುವಂತೆ ಇಂದು ಅರ್ಧ ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ.

Read More

ಬೆಂಗಳೂರು: ಸೇನೆಯಲ್ಲಿ ನೇಮಕಾತಿ ಪಡೆಯಲು, ಆಕಾಂಕ್ಷೆ ಹೊಂದಿರುವಂತ ಅಭ್ಯರ್ಥಿಗಳಿಗೆ ಪೂರ್ವಭಾವಿ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಭಾರತೀಯ ಸೇನೆಗಳಿಗೆ ಸೇರ ಬಯಸುವ, ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಮತ್ತು ವೃತ್ತಿ ಮಾರ್ಗದರ್ಶನ ಬಗ್ಗೆ ಪೂರ್ವಭಾವಿ ತರಬೇತಿಯನ್ನು ನೀಡಲಾಗುತ್ತದೆ ಎಂದಿದೆ. ಸೇನೆಗೆ ಸೇರ ಬಯಸಿ ಪೂರ್ವಭಾವಿ ತರಬೇತಿ ನಿರೀಕ್ಷೆಯಲ್ಲಿರುವಂತವರು https://dom.karnataka.gov.in ಜಾಲತಾಣಕ್ಕೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಸಂಬಂಧದ ಹೆಚ್ಚಿನ ಮಾಹಿತಿಗಾಗಿ 8277799990ಗೆ ಕರೆ ಮಾಡಿ ಪಡೆಯಬಹುದಾಗಿದೆ.

Read More

ಬೆಂಗಳೂರು: 2023-24ನೇ ಶೈಕ್ಷಣಿಕ ಸಾಲಿಗೆ 1 ರಿಂದ 4 ಮತ್ತು 06 ರಿಂದ 07ನೇ ತರಗತಿ ವಿದ್ಯಾರ್ಥಿಗಳಿಗೆ ಜಿಲ್ಲೆಯಾದ್ಯಂತ ಏಕರೂಪವಾಗಿ ವಾರ್ಷಿಕ ಪರೀಕ್ಷೆಯನ್ನು ನಿಗಧಿತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು 2023-24ನೇ ಶೈಕ್ಷಣಿಕ ಸಾಲಿಗೆ 1 ರಿಂದ 4 ಮತ್ತು 6 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಏಕರೂಪವಾಗಿ ಜಿಲ್ಲೆಗಳಲ್ಲಿ ವಾರ್ಷಿಕ ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ. ಅದರಂತೆ ವಾರ್ಷಿಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿರೋದಾಗಿ ತಿಳಿಸಿದೆ. ಹೀಗಿದೆ ಪ್ರಾಥಮಿಕ ಶಾಲಾ ಪರೀಕ್ಷಾ ವೇಳಾಪಟ್ಟಿ ( 1 ರಿಂದ 4ನೇ ತರಗತಿ) ದಿನಾಂಕ 25-03-2024, ಪ್ರಥಮ ಭಾಷೆ – ಕನ್ನಡ, ಉರ್ದು, ಇಂಗ್ಲೀಷ್ ದಿನಾಂಕ 26-03-2024, ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ ದಿನಾಂಕ 27-03-2024, ಗಣಿತ ದಿನಾಂಕ 28-03-2024, ಪರಿಸದ ಅಧ್ಯಯನ ಈ ಮೇಲ್ಕಂಡ ಪರೀಕ್ಷೆಯ ಬಳಿಕ, ದಿನಾಂಕ 08-04-2024ರಂದು 1 ರಿಂದ 4ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. ಹೀಗಿದೆ ಪ್ರಾಥಮಿಕ…

Read More

ಬೆಂಗಳೂರು: ರಾಜ್ಯದಲ್ಲಿನ ಖಾಸಗಿ ಆಸ್ಪತ್ರೆಗಳು ರೋಗಿಗಳ ಸುಲಿಗೆಗೆ ಇಳಿದಿವೆ. ತಮಗೆ ಇಷ್ಟ ಬಂದಂತೆ ಚಿಕಿತ್ಸಾ ದರವನ್ನು ವಿಧಿಸುತ್ತಿವೆ ಎಂಬುದಾಗಿ ಸಾರ್ವಜನಿಕರಿಂದ ಸರ್ಕಾರಕ್ಕೆ ದೂರುಗಳು ಸಲ್ಲಿಕೆಯಾಗಿದ್ದವು. ಈ ದೂರುಗಳ ಬೆನ್ನಲ್ಲೇ ಇನ್ಮುಂದೆ ರಾಜ್ಯಾಧ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಬೋರ್ಡ್ ಅಳವಡಿಸೋದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಮಾಡಿದೆ. ರಾಜ್ಯದಲ್ಲಿ ಖಾಸಗೀ ಆಸ್ಪತ್ರೆಗಳಲ್ಲಿ ಅವರದ್ದೇ ದರ್ಬಾರ್. ತಮಗೆ ಇಷ್ಟಬಂದಂತೆ ರೋಗಿಗಳಿಗೆ ಚಿಕಿತ್ಸೆಯ ದರವನ್ನು ವಿಧಿಸಲಾಗುತ್ತಿವೆ. ಈ ದರಪಟ್ಟಿಯಿಂದಾಗಿ ರಾಜ್ಯದಲ್ಲಿನ ಜನರು ಸುಲಿಗೆಗೆ ಒಳಗಾಗಿದ್ದು, ಬಡವರು, ಮಧ್ಯಮ ವರ್ಗದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಎಂಬುದೇ ಸಿಂಹಸ್ವಪ್ನವಾದಂತೆ ಆಗಿದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸರ್ಕಾರಕ್ಕೆ, ಆರೋಗ್ಯ ಇಲಾಖೆಗೆ ಸಾರ್ವಜನಿಕರು ವಿವಿಧ ಖಾಸಗಿ ಆಸ್ಪತ್ರೆಗಳ ವಿರುದ್ಧ ದೂರು ಸಲ್ಲಿಸಲಾಗಿತ್ತು. ಈ ದೂರಿನ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಖಾಸಗಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಚಿಕಿತ್ಸಾ ದರಪಟ್ಟಿ ಬೋರ್ಡ್ ಹಾಕುವುದನ್ನು ಕಡ್ಡಾಯಗೊಳಿಸುವಂತೆ ಆದೇಶ ಹೊರಡಿಸಲು ಆರೋಗ್ಯ ಇಲಾಖೆಗೆ ಸೂಚಿಸಿದ್ದರು. ಆರೋಗ್ಯ ಸಚಿವರ ಸೂಚನೆಯಂತೆ ಆರೋಗ್ಯ ಇಲಾಖೆಯಿಂದ ಖಾಸಗಿ…

Read More

*ವಸಂತ ಬಿ ಈಶ್ವರಗೆರೆ ಬೆಂಗಳೂರು: ಬಹುತೇಕ ಮಕ್ಕಳಿಗೆ ಬಾಂಬೆ ಮಿಠಾಯಿ ಅಂದ್ರೆ ತುಂಬಾನೇ ಪ್ರೀತಿ. ದಾರಿಯಲ್ಲಿ ಕಂಡ್ರೆ ಸಾಕು ಪೋಷಕರನ್ನು ಕಾಡಿ ಬೇಡಿ ಕೊಡಿಸಿಕೊಂಡು ತಿನ್ನೋ ಮಕ್ಕಳೇ ಜಾಸ್ತಿ. ಆದರೇ ಪೋಷಕರೇ ನೀವು ನಿಮ್ಮ ಮಕ್ಕಳಿಗೆ ಬಾಂಬೆ ಮಿಠಾಯಿ ಕೊಡಿಸ್ತಾ ಇದ್ದೀರಿ ಅಂದ್ರೇ, ಈಗ ಎಚ್ಚರಿಕೆ ವಹಿಸಬೇಕಿದೆ. ಅದು ಯಾಕೆ ಅನ್ನೋ ಶಾಕಿಂಗ್ ನ್ಯೂಸ್ ಮುಂದೆ ಓದಿ. ಗಂಟೆ ಅಲ್ಲಾಡಿಸಿಕೊಂಡು, ಬೀದಿ ಬೀದಿಯಲ್ಲಿ ಸುತ್ತುತ್ತಾ ಮಾರಾಟ ಮಾಡುವಂತ ಬಾಂಬೆ ಮಿಠಾಯಿ ಅರ್ಥಾತ್ ಕ್ಯಾಂಡಿಗೆ ಮಾರು ಹೋಗದ ಮಕ್ಕಳಿಲ್ಲ. ಅದರ ರುಚಿಗೆ ಜೋತು ಬಿದ್ದ ಅನೇಕ ಮಕ್ಕಳು ಗಂಟೆ ಶಬ್ದ ಕೇಳಿದರೇ ಸಾಕು ಪೋಷಕರಿಂದ ಹಣ ಪಡೆದು ಖರೀದಿಸಿ, ಬಾಯಿ ಚಪ್ಪರಿಸಿಕೊಂಡು ತಿಂದು ಬಿಡುತ್ತಾರೆ. ಈ ಮೂಲಕ ಕ್ಯಾಂಡಿಯ ಸ್ವಾದವನ್ನು ಸವಿಯುತ್ತಾರೆ. ತಮಿಳುನಾಡು, ಪುದುಚೇರಿಯಲ್ಲಿ ಕ್ಯಾಂಡಿ ಬ್ಯಾನ್ ಆದರೇ ಮಕ್ಕಳ ಫೇವರಿಟ್ ಬಾಂಬೆ ಮಿಠಾಯಿಯನ್ನು ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳಲ್ಲಿ ಸರ್ಕಾರವು ನಿಷೇಧಿಸಿದೆ. ಇದಕ್ಕೆ ಕಾರಣ ಅದರ ಬಣ್ಣದಲ್ಲಿ ಮಾರಣಾಂತಿಕ ಕ್ಯಾನ್ಸರ್ ಅಂಶ…

Read More

ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಶರದ್ ಚಂದ್ರ ಪವಾರ್ ಅವರಿಗೆ ಚುನಾವಣಾ ಆಯೋಗ ಗುರುವಾರ ಹೊಸ ಪಕ್ಷದ ಚಿಹ್ನೆಯಾದ ಮ್ಯಾನ್ ಬ್ಲೋಯಿಂಗ್ ತುರ್ಹಾವನ್ನು ಮಂಜೂರು ಮಾಡಿದೆ. ಚುನಾವಣಾ ಆಯೋಗವು ಅಜಿತ್ ಪವಾರ್ ಬಣಕ್ಕೆ ಎನ್ಸಿಪಿ ಹೆಸರು ಮತ್ತು ಚಿಹ್ನೆಯನ್ನು ನೀಡಿದ ಕೆಲವು ದಿನಗಳ ನಂತರ, ಪಕ್ಷದ ಸಂಸ್ಥಾಪಕ ಶರದ್ ಪವಾರ್ ನೇತೃತ್ವದ ಶಿಬಿರವು ಹೊಸ ಚಿಹ್ನೆಯನ್ನು ಸ್ವೀಕರಿಸಿದೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಶಾರದಚಂದ್ರ ಪವಾರ್) ಚಿಹ್ನೆಯು ‘ಮನುಷ್ಯ ಬೀಸುವ ತುರ್ಹಾ’ ಆಗಿದೆ. ‘ತುರ್ಹಾ’ ಎಂಬುದು ಸಾಂಪ್ರದಾಯಿಕ ತುತ್ತೂರಿಯಾಗಿದೆ. ಅಜಿತ್ ಪವಾರ್ ನೇತೃತ್ವದ ಬಣದ ಪರವಾಗಿ ಚುನಾವಣಾ ಆಯೋಗದ ನಿರ್ಧಾರವನ್ನು ಫೆಬ್ರವರಿ 7 ರಂದು ಹೊರಡಿಸಲಾಯಿತು. ಮುಂದಿನ ಆದೇಶದವರೆಗೆ ಶರದ್ ಪವಾರ್ ಬಣಕ್ಕೆ ನೀಡಲಾದ ಹೆಸರು ಉಳಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿತು. ಫೆಬ್ರವರಿ 7 ರ ಆದೇಶವನ್ನು ಪ್ರಶ್ನಿಸಿ ಶರದ್ ಪವಾರ್ ಬಣ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಪೀಠವು ಚಿಹ್ನೆಗಾಗಿ ಚುನಾವಣಾ ಆಯೋಗವನ್ನು ಸಂಪರ್ಕಿಸುವ ಹಕ್ಕನ್ನು ಎನ್ಸಿಪಿ ಸಂಸ್ಥಾಪಕರಿಗೆ…

Read More

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಹಾಜರಾಗುವಂತ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿಯಿಂದ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನಿಗಮ ಮಾಹಿತಿ ಹಂಚಿಕೊಂಡಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ದಿನಾಂಕ 01-03-2024 ರಿಂದ 22-03-2024ರವರೆಗೆ  ನಡೆಯಲಿರುವುದರಿಂದ ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ದ್ವಿತೀಯ ಪಿಯುಸಿವಾರ್ಷಿಕ ಪರೀಕ್ಷೆ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ತಿಳಿಸಿದೆ.

Read More