Author: kannadanewsnow09

ನವದೆಹಲಿ: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದಾಗ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಇಬ್ಬರು ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಅಬುಜ್ಮಾದ್ ಪ್ರದೇಶದ ಕೊಡ್ಲಿಯಾರ್ ಗ್ರಾಮದ ಬಳಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡಗಳು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. https://kannadanewsnow.com/kannada/bomb-attack-on-japans-ruling-party-headquarters-suspect-arrested-on-the-spot/ https://kannadanewsnow.com/kannada/breaking-muda-scam-cm-faces-trouble-again-wife-parvathy-accused-of-land-irregularities/

Read More

ಹೈದರಾಬಾದ್: ತೆಲಂಗಾಣ ಲೋಕಸೇವಾ ಆಯೋಗ (Telangana Public Service Commission – TPSC) ಗ್ರೂಪ್ 1 ಸೇವೆಗಳ ಆಕಾಂಕ್ಷಿಗಳು ಮುಖ್ಯ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ( Union Minister Bandi Sanjay Kumar ) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೈದರಾಬಾದ್ನ ನಾಗರಿಕ ಸೇವೆಗಳು ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ಸಂಸ್ಥೆಗಳ ಕೇಂದ್ರವಾದ ಅಶೋಕ್ ನಗರದಲ್ಲಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. ಆಕಾಂಕ್ಷಿಗಳನ್ನು ಭೇಟಿಯಾದ ನಂತರ, ಕೇಂದ್ರ ಸಚಿವರು ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಲು ಮತ್ತು ಆಕಾಂಕ್ಷಿಗಳ ಕಳವಳಗಳನ್ನು ತಿಳಿಸಲು “ಚಲೋ ಸೆಕ್ರೆಟರಿಯೇಟ್” ರ್ಯಾಲಿಯನ್ನು ನಡೆಸಿದರು. ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಮತ್ತು ನೇಮಕಾತಿ ಪ್ರಕ್ರಿಯೆ ಮತ್ತು ಮೀಸಲಾತಿಯ ಮೇಲೆ ಕೆಲವು ಸರ್ಕಾರಿ ಆದೇಶಗಳ ಪರಿಣಾಮದ ಬಗ್ಗೆ ಆಕಾಂಕ್ಷಿಗಳು ತಮ್ಮ ಕಳವಳಗಳನ್ನು ವ್ಯಕ್ತಪಡಿಸಿದರು. https://kannadanewsnow.com/kannada/farmers-should-not-be-disheartened-state-government-is-pro-farmer-madhu-bangarappa/ https://kannadanewsnow.com/kannada/bengaluru-power-outages-in-these-areas-from-tomorrow-till-october-23/

Read More

ಶಿವಮೊಗ್ಗ: ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ. ಯಾವುದೇ ರೈತರು ಧೃತಿಗೆಡಬಾರದು. ಸರ್ಕಾರ ರೈತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಲೋಕೋಪಯೋಗಿ ಭವನದಲ್ಲಿನ ಸಭೆ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಅ.21 ಕ್ಕೆ ಸಾಗರದಲ್ಲಿ ಅರಣ್ಯ ಭೂಮಿ ಸಮಸ್ಯೆ ಕುರಿತು ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ಕೆಲಸ ಮಾಡುತ್ತಿದೆ. ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ಉತ್ತಮ ನ್ಯಾಯವಾದಿಗಳನ್ನು ನೇಮಿಸಿ ಐಎ ಹಾಕಲಾಗುವುದು. ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿ ಮತ್ತು ನ್ಯಾಯ ಒದಗಿಸಲು ಎಲ್ಲ ಪ್ರಯತ್ನವನ್ನು ಸರ್ಕಾರ ನಡೆಸುತ್ತಿದೆ. ರೈತರಿಗೆ ಒಳ್ಳೆಯ ಸುದ್ದಿಯನ್ನೇ ನಿಡುತ್ತೇವೆ. ಕೋರ್ಟ್ ವಿಚಾರ ಸೂಕ್ಷö್ಮವಾಗಿದ್ದು ಹುಷಾರಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಇಂದಿನ ಸಮಸ್ಯೆಯಲ್ಲ. ಹಾಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಸಂತ್ರಸ್ತರು ಧೃತಿಗೆಡಬಾರದು ಎಂದರು. ಸಂತ್ರಸ್ತರ ಪರವಾದ ಹೋರಾಟವನ್ನು ನಿಲ್ಲಿಸುವುದಿಲ್ಲ. ಅದಕ್ಕಾಗಿ ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು. ಮುಳುಗಡೆಗೆ ಸಂಬಂಧಪಟ್ಟಂತೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ…

Read More

ಬಾಡಿದ ತುಳಸಿಗಿಡವನ್ನು ಏನು ಮಾಡಬೇಕು? ಉತ್ತರ: ತುಳಸಿ ಒಂದು ಸಸ್ಯ. ಆ ಸಸ್ಯದಲ್ಲಿರುವ ಜೀವಕ್ಕೆ ಎಷ್ಟು ಆಯುಷ್ಯವಿದೆಯೋ ಅಷ್ಟು ದಿವಸ ಇರುತ್ತದೆ. ಆ ನಂತರ ಗಿಡ ಬಾಡಿ(ಸತ್ತು) ಹೋಗುತ್ತದೆ. ತುಳಸಿಕಟ್ಟೆಯ ಅಥವ ಮನೆಯ ಹತ್ತಿರದ ಬಾಡಿ ಹೋದ ತುಳಸೀ ಗಿಡವನ್ನು ಅವಶ್ಯವಾಗಿ ತೆಗೆಯಬಹುದು. ತೆಗೆದು ಹೊಸ ಸಸಿಯನ್ನು ತಂದು ನೆಡಬೇಕು. ಬಾಡಿ ಹೋದ ಗಿಡವನ್ನು, ಮಂಗಳವಾರ, ಶುಕ್ರವಾರ, ಅಮಾವಾಸ್ಯಾ, ಪೌರ್ಣಮಿ, ಸಂಕ್ರಾಂತಿಗಳಂದು ತೆಗೆಯಬಾರದು.. ದ್ವಾದಶಿಯಂತೂ ಸರ್ವಥಾ ತೆಗೆಯಬಾರದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ…

Read More

ಬೆಂಗಳೂರು: ನಗರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ ನಾಳೆಯಿಂದ ಭಾನುವಾರದವರೆಗೆ ಅಂದರೆ ಅಕ್ಟೋಬರ್.23ರವರೆಗೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಬೆಂಗಳೂರು: “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ದಿನಾಂಕ 20.10.2024 ರಿಂದ 23.10.2024 ರವರೆಗೆ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 22:00 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದೆ. ನಾಳೆಯಿಂದ ಅಕ್ಟೋಬರ್.23ರವರೆಗೆ ಈ ಏರಿಯಾದಲ್ಲಿ ಕರೆಂಟ್ ಇರೋದಿಲ್ಲ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಓಬಳೇಶ್ ಕಾಲೋನಿ, ರ‍್ಸಸ್ ಗರ‍್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗರ‍್ಡನ್, ರ‍್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಪರ‍್ಕ್ ನಾವು ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ…

Read More

ಶಿವಮೊಗ್ಗ: ಮೂರು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವ ಮತ್ತು 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು ಮಾಡಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಚಿವ ಮಧು ಎಸ್ ಬಂಗಾರಪ್ಪ ಸೂಚಿಸಿದ್ದಾರೆ. ಈ ಮೂಲಕ ಬಗರ್ ಹುಕುಂ ಸಾಗುವಳಿದಾರರಿಗೆ ಬಿಗ್ ರಿಲೀಫ್ ನೀಡಿದ್ದಾರೆ. ಇಂದು ಶಿವಮೊಗ್ಗದ ಲೋಕಪಯೋಗಿ ಭವನದಲ್ಲಿ “ಅರಣ್ಯ ಇಲಾಖೆ”ಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಅರಣ್ಯ ಒತ್ತುವರಿ ತೆರವು ಕಾನೂನು ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಮೂರು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವ ಮತ್ತು 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು ಮಾಡಬೇಕು ಎಂಬ ಸ್ಪಷ್ಟ ಸೂಚನೆಯನ್ನು ಈಗಾಗಲೇ ಸಚಿವರು ತಿಳಿಸಿದ್ದಾರೆ. ಆದರೆ ಅರಣ್ಯ ಇಲಾಖೆಯ ಕೆಲ ಅಧಿಕಾರಿಗಳು ಮುಗ್ದ ಹಾಗೂ ಬಡ ರೈತರ ಜಮೀನು ಒತ್ತುವರಿ ವಿಚಾರದಲ್ಲಿ 3 ಎಕರೆ ಹೊಂದಿರುವ ರೈತರಿಗೂ ತೊಂದರೆ ನೀಡಿ ಒಕ್ಕಲೆಬ್ಬಿಸುವ ಕಾರ್ಯದಲ್ಲಿ ತೊಡಗಿರುವ ವಿಷಯ ನನ್ನ ಗಮನಕ್ಕೆ ಬಂದಿದ್ದು, ಈ ವರ್ತನೆ ಸರಿಯಲ್ಲ. ಅಧಿಕಾರಿಗಳು ರೈತರೊಂದಿಗೆ ತಾಳ್ಮೆಯಿಂದ…

Read More

ಬೆಂಗಳೂರು: ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ʼಶಿಕ್ಷಣ ಕೋಪೈಲಟ್‌ʼ ಆ್ಯಪ್‌ ರಚಿಸಲಾಗಿದ್ದು, ಶಿಕ್ಷಕರಿಗೆ ಅಗತ್ಯವಾಗಿರುವ ಪಠ್ಯಕ್ರಮ, ಭಾಷೆ, ಸಂದರ್ಭಕ್ಕೆ ಅನುಸಾರವಾಗಿ ಸಮಗ್ರ ಬೋಧನಾ ಸಂಪನ್ಮೂಲ, ಕಲಿಕಾ ಅನುಭವಗಳನ್ನು ಸೃಷ್ಟಿಸಲು ಈ ಆ್ಯಪ್ ಸಹಕಾರಿಯಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. https://twitter.com/KarnatakaVarthe/status/1847601542876029332 ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ನಿಟ್ಟಿನಲ್ಲಿ “ಶಿಕ್ಷಣ ಕೋಪೈಲಟ್” ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಚಾಲಿತ ಡಿಜಿಟಲ್ ಸಂಶೋಧನಾ ಯೋಜನೆ ಜಾರಿಮಾಡಲಾಗಿದೆ. ಶಿಕ್ಷಕರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ “ಶಿಕ್ಷಣ ಫೌಂಡೇಶನ್” ಮತ್ತು “ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾ” ನಡುವಿನ ಸಹಯೋಗದೊಂದಿಗೆ ಈ ಕಾರ್ಯಕ್ರಮ ತರಲಾಗಿದೆ. ಶಿಕ್ಷಕರು ಮಕ್ಕಳ ಶಕ್ತಿ ಮತ್ತು ದೌರ್ಬಲ್ಯವನ್ನು ಗುರುತಿಸಿ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ಚಿಂತನೆಯ ಕಾರ್ಯಕ್ರಮ ಇದಾಗಿದೆ. ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದ್ದು ಸ್ಥಳೀಯ ಪಠ್ಯಕ್ರಮ, ಭಾಷೆ, ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷಕರನ್ನು ಸಶಕ್ತಗೊಳಿಸಿ…

Read More

ಬೆಂಗಳೂರು: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂಕೋರ್ಟ್ ತನ್ನ ಹಲು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ರಾತ್ರಿ 8 ರಿಂದ 10ಗಂಟೆ ವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ. ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ. ಹಸಿರು ಪಟಾಕಿ ಮಾತ್ರವೇ ಬಳಸಿ: ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು…

Read More

ಹೈದರಾಬಾದ್: ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದ ನಂತರ ಹೈದರಾಬಾದ್ ಪೊಲೀಸರು ಪಬ್ ಮೇಲೆ ದಾಳಿ ನಡೆಸಿದ ನಂತರ 42 ಮಹಿಳೆಯರು ಸೇರಿದಂತೆ 100 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸ್ ತಂಡವು ಶುಕ್ರವಾರ ನಗರದ ಐಷಾರಾಮಿ ಬಂಜಾರಾ ಹಿಲ್ಸ್ ಪ್ರದೇಶದ ಟಿಒಎಸ್ ಪಬ್ ಮೇಲೆ ದಾಳಿ ನಡೆಸಿ ಅಶ್ಲೀಲ ನೃತ್ಯ ಪ್ರದರ್ಶನಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 140 ಜನರನ್ನು ಬಂಧಿಸಿದೆ ಎಂದು ಹೈದರಾಬಾದ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಂಧಿತರಲ್ಲಿ ಪಬ್ನ ಮ್ಯಾನೇಜರ್, ಕ್ಯಾಷಿಯರ್ ಮತ್ತು ಡಿಜೆ ಆಪರೇಟರ್ ಸೇರಿದ್ದಾರೆ. ಪುರುಷ ಪೋಷಕರನ್ನು ಆಕರ್ಷಿಸಲು ಮತ್ತು ಲಾಭವನ್ನು ಹೆಚ್ಚಿಸಲು ಅಶ್ಲೀಲ ನೃತ್ಯಗಳನ್ನು ಪ್ರದರ್ಶಿಸಲು ಪಬ್ ವಿವಿಧ ರಾಜ್ಯಗಳ ಮಹಿಳೆಯರನ್ನು ನೇಮಿಸಿಕೊಂಡಿದೆ ಎಂದು ಆರೋಪಿಸಲಾಗಿದೆ. ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವೆಂಕಟ್ ರಮಣ ನೇತೃತ್ವದ ಪೊಲೀಸ್ ತಂಡವು ನಗರದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ದಮನದ ಭಾಗವಾಗಿ ಪಬ್ ಮೇಲೆ ದಾಳಿ ನಡೆಸಿದೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ದಾಳಿಯ…

Read More

ಮಂಡ್ಯ: ಎರಡು ದಿನಗಳ ಕಾಲ ನಗರದಲ್ಲಿ ನಡೆದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳದಲ್ಲಿ 6150 ಅರ್ಜಿಗಳು ಬಂದಿದ್ದು, ಆ ಪೈಕಿ 1,122 ಅಭ್ಯರ್ಥಿಗಳಿಗೆ ನೇರ ನೇಮಕಾತಿ ಪತ್ರ ನೀಡಲಾಗಿದೆ ಇಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಉದ್ಯೋಗ ಮೇಳದ ನಂತರ ಈ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ಸಚಿವರು; ಉಳಿದ ಅಭ್ಯರ್ಥಿಗಳಿಗೆ ಡಿಸೆಂಬರ್ ತಿಂಗಳ ಒಳಗಾಗಿ ಉದ್ಯೋಗ ಕೊಡಿಸಲಾಗುವುದು. ಅದಕ್ಕಾಗಿ ಮಂಡ್ಯದ ಸಂಸದರ ಕಚೇರಿಯಲ್ಲಿ ಸುಸಜ್ಜಿತ ವಾರ್ ರೂಮ್ ತೆರೆಯಲಾಗುವುದು ಹಾಗೂ ದೆಹಲಿಯ ನನ್ನ ಸಚಿವಾಲಯದಲ್ಲಿ ವಿಶೇಷ ಸೆಲ್ ತೆರೆಯಲಾಗುವುದು. ಈ ಬಗ್ಗೆ ನಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು. ಮಂಡ್ಯದಲ್ಲಿ ಸಮರೋಪವಾದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳ ನಿರೀಕ್ಷೆಗೂ ಮೀರಿ ಅಭೂತಪೂರ್ವ ಯಶಸ್ಸು ಆಗಿದೆ. ನನಗೆ ಬಹಳ ಸಂತೋಷವಾಗಿದ್ದು, ನನ್ನ ಕ್ಷೇತ್ರದ, ರಾಜ್ಯದ ವಿವಿಧ ಜಿಲ್ಲೆಗಳ ರೈತಾಪಿ ಜನರ ಮಕ್ಕಳಿಗೆ…

Read More