Author: kannadanewsnow09

ಬೆಂಗಳೂರು: ಬೆಂಗಳೂರಿನ ಖ್ಯಾತ ಉದ್ಯಮಿ ಸುನಿತಾ ತಿಮ್ಮೇಗೌಡ ಮತ್ತು ಅಶೋಕ್ ಶಂಕರ್ ಅವರ ಪುತ್ರ ಯುವ ಉದ್ಯಮಿ ಆರ್ಯಮನ್ ಅವರು, ಅಜ್ಜಿ ದಿ. ಸಾವಿತ್ರಮ್ಮ ತಿಮ್ಮೇಗೌಡ ಅವರ ಸ್ವಂತ ಊರಾದ ಕೊಳ್ಳೆಗಾಲದ ಸೆವೆನ್ತ್-ಡೇ ಅಡ್ವೆಂಟಿಸ್ಟ್ ಸ್ಕೂಲ್ ಫಾರ್ ಸ್ಪೀಚ್ ಆ್ಯಂಡ್ ಹಿಯರಿಂಗ್ (Seventh-Day Adventist School for Speech and Hearing) ಶಾಲೆಗೆ ಕ್ರೀಡಾ ಪರಿಕರಗಳು ಸೇರಿದಂತೆ ಹಲವು ವಸ್ತುಗಳನ್ನು ವಿತರಿಸಿದರು. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ತಮ್ಮ ಸಹಪಾಠಿಗಳೊಂದಿಗೆ ಕೊಳ್ಳೆಗಾಲಕ್ಕೆ ತೆರಳಿದ ಆರ್ಯಮನ್ ಅವರು ಕಾವೇರಿಪುರದಲ್ಲಿ ಬಂದಿಳಿದರು. ಅಲ್ಲಿಂದ ಅವರು ರಸ್ತೆ ಮಾರ್ಗವಾಗಿ ಸೆವೆನ್ತ್-ಡೇ ಅಡ್ವೆಂಟಿಸ್ಟ್ ಸ್ಕೂಲ್ ಫಾರ್ ಸ್ಪೀಚ್ ಆ್ಯಂಡ್ ಹಿಯರಿಂಗ್ ಶಾಲೆಗೆ ಭೇಟಿ ನೀಡಿ ಅವರೊಂದಿಗೆ ಸಮಯ ಕಳೆದರು. ಬಳಿಕ ಅಗತ್ಯ ಪರಿಕರಗಳನ್ನು ಆಶ್ರಮದ ಮಕ್ಕಳಿಗಾಗಿ ವಿತರಿಸಿದರು. ಯುವ ಉದ್ಯಮಿ ಆರ್ಯಮನ್‌ ಅವರು 11ನೇ ವರ್ಷದಲ್ಲಿ ಸಿಂಗಾಪುರಕ್ಕೆ ಶಿಕ್ಷಣಕ್ಕಾಗಿ ತೆರಳಿದ್ದರು. ವಿದ್ಯಾಭ್ಯಾಸದ ಅವಧಿಯಲ್ಲೇ ಅವರು ಉದ್ಯಮ ಕ್ಷೇತ್ರಕ್ಕೆ ಧುಮುಕಿದ್ದರು. 13ನೇ ವರ್ಷದಲ್ಲಿ ಅವರು ಲಿಮಿಟೆಡ್ ಎಡಿಷನ್ ಶೂಗಳ ಉದ್ಯಮ…

Read More

ಬೆಂಗಳೂರು : ಅರಣ್ಯದಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಮಾರಕವಾಗಿರುವ ಲಾಂಟನಾ ಕಳೆಯಿಂದ ಆನೆ, ಕಾಡೆಮ್ಮೆ, ಪೀಠೋಪಕರಣ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಆದಿವಾಸಿ ಸಮುದಾಯದವರಿಗೆ ತರಬೇತಿ ಮತ್ತು ಪೋತ್ಸಾಹ ನೀಡಲು 1 ಕೋಟಿ ರೂ. ನೆರವು ನೀಡುವ ಬಗ್ಗೆ ಪರಿಶೀಲಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನ ಲಾಲ್ ಬಾಗ್ ನಲ್ಲಿಂದು ಲಾಂಟನಾ ಕಡ್ಡಿಗಳಿಂದ ತಯಾರಿಸಿದ ಕಾಡೆಮ್ಮೆ ಮತ್ತು ಆನೆಯ ಆಕೃತಿಗಳನ್ನು ಅನಾವರಣ ಮಾಡಿ ಮಾತನಾಡಿದ ಅವರು, ಮುಳ್ಳಿನಿಂದ ಕೂಡಿದ ಲಾಂಟನಾ ರಾಜ್ಯದ ಬಂಡೀಪುರ, ನಾಗರಹೊಳೆ, ಬಿಳಿಗಿರಿ ರಂಗನ ಬೆಟ್ಟ ಮೊದಲಾದ ಅರಣ್ಯ ಪ್ರದೇಶಗಳಲ್ಲಿ ವ್ಯಾಪಕವಾಗಿ ವ್ಯಾಪಿಸಿದ್ದು, ಇದರಿಂದ ಆನೆ, ಜಿಂಕೆ ಇತ್ಯಾದಿ ಸಸ್ಯಹಾರಿ ಪ್ರಾಣಿಗಳಿಗೆ ಹುಲ್ಲೂ ಸಿಗದಂತಾಗಿದೆ. ಹೀಗಾಗಿ ಈ ಕಳೆಯನ್ನು ತೆಗೆಯುವುದು ಅನಿವಾರ್ಯವಾಗಿದ್ದು, ಆದಿವಾಸಿಗಳ ನೆರವಿನಿಂದ ಈ ಕಳೆ ತೆಗೆಸಿ, ಅಲಂಕಾರಿಕ ವಸ್ತು ತಯಾರಿಸಿದರೆ ಅದರಿಂದ ಜೀವನೋಪಾಯವೂ ಆಗುತ್ತದೆ, ಕಾಡಿನ ಕಳೆಯ ಸಮಸ್ಯೆಗೂ ಪರಿಹಾರ ಲಭಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಲಾಂಟನಾದಿಂದ ತಯಾರಿಸಿದ ಪೀಠೋಪಕರಣ,…

Read More

ಬೆಂಗಳೂರು: ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವ ಸರಕಾರ, ಶ್ರೀಮಂತ ದೇವಾಲಯಕ್ಕೂ ಕನ್ನ ಹಾಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇವಸ್ಥಾನದ ಹಣಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಡಿ. ‘ಸರಕಾರ ನಡೆಸಲು ನಮ್ಮ ಕೈಯಲ್ಲಿ ಆಗುತ್ತಿಲ್ಲ; ಹಣಕಾಸಿನ ತೊಂದರೆ ಇದೆ’ ಎಂದು ತಿಳಿಸಿ ಬಂದ ದಾನಿಗಳಿಂದ ಹಣ ಸಂಗ್ರಹಿಸಬಹುದು ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡುವುದಾಗಿ ತಿಳಿಸಿದರು. ಅತ್ಯಂತ ಶ್ರೀಮಂತ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಅತ್ಯಂತ ಹೆಚ್ಚು ತೆರಿಗೆಯನ್ನು ಅದು ಸಂಗ್ರಹ ಮಾಡುತ್ತದೆ. ಇಂಥ ಕರ್ನಾಟಕ ರಾಜ್ಯದ ಪರಿಸ್ಥಿತಿ ಹೀಗಾಗಿದೆ ಎಂಬುದು ನಿಜಕ್ಕೂ ದುರದೃಷ್ಟ. ಸರಕಾರ ಈ ಮಟ್ಟಕ್ಕೆ ಇಳಿದಿರುವುದು ನಿಜಕ್ಕೂ ತಲೆತಗ್ಗಿಸುವ ವಿಚಾರ ಎಂದು ಆಕ್ಷೇಪ ಸೂಚಿಸಿದರು. ಗ್ಯಾರಂಟಿಗೆ ನಮ್ಮ ಟೀಕೆ ಇಲ್ಲ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿಗಳನ್ನು ಘೋಷಿಸಿದ್ದು, ಅದನ್ನು ಅನುಷ್ಠಾನಕ್ಕೆ ತರುವುದು ಅವರ ಕರ್ತವ್ಯವಾಗಿದೆ. ಅವರು…

Read More

ಬೆಂಗಳೂರು: ಫೆಬ್ರವರಿ.23ರಂದು ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದಿಂದ ವಿಚಾರ ಸಂಕೀರ್ಣ ಹಮ್ಮಿಕೊಳ್ಳಲಾಗಿದೆ. ಈ ವಿಚಾರ ಸಂಕೀರ್ಣದಲ್ಲಿ ಭಾಗಿಯಾಗೋದಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಮಹಿಳಾ ಸರ್ಕಾರಿ ನೌಕರರಿಗೆ ಅರ್ಧ ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ದಿನಾಂಕ 23-02-2024ರಂದು ಅಖಿಲ ಕರ್ನಾಟಕ ಸರ್ಕಾರಿ ನೌಕರರ ಮಹಿಳಾ ಸಂಘದ ವತಿಯಿಂದ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನ ಅಂದರೆ ಟೌನ್ ಹಾಲ್ ನಲ್ಲಿ ವಿಚಾರ ಸಂಕೀರ್ಣ ನಡೆಯಲಿದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಇಲಾಖೆಯ ಮಹಿಳಾ ನೌಕರರು ಭಾಗವಹಿಸಲು ಅನುಕೂಲವಾಗುವಂತೆ ಅರ್ಧ ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಕೆಇಎಯಿಂದ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ರಾಜ್ಯದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು ಎಂದಿದೆ. ಹುದ್ದೆಗಳ ವಿವರ – 1000 ಹುದ್ದೆಗಳು ವೇತನ ಶ್ರೇಣಿ – ರೂ.21,400 ರಿಂದ 42,000 ಶೈಕ್ಷಣಿಕ ವಿದ್ಯಾರ್ಹತೆ – ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಿಂಚಣಿ ಸೌಲಭ್ಯ – NPS ವಯೋಮಿತಿ ಸಾಮಾನ್ಯ ವರ್ಗದವರಿಗೆ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು. ಅರ್ಜಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮಹತ್ವದ ಕ್ರಮ ಕೈಗೊಂಡಿದೆ. ಇದರ ಭಾಗವಾಗಿ ಗ್ಯಾರಂಟಿ ಸ್ವಯಂ ಸೇವಕರನ್ನು ನೇಮಕ ಮಾಡಿ ಆದೇಶಿಸಿದೆ. ಇವರು ಮನೆ ಮನೆಗಳಿಗೆ ಭೇಟಿ ನೀಡಿ, ಸಮೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಪ್ರಸ್ತಾವನೆಯಲ್ಲಿ ಸರ್ಕಾರವು ಬಡವರ ಹಾಗೂ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗ್ರಹಜ್ಯೋತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳನ್ನು ರೂಪಿಸಿದೆ. ರಾಜ್ಯದ ಪ್ರತಿ ಮನೆ ಮನೆಗೂ ಈ ಐದು ಗ್ಯಾರಂಟಿ ಯೋಜನೆಗಳು ಸರಿಯಾದ ರೀತಿಯಲ್ಲಿ ತಲುಪಿವೆಯೇ ಎಂಬ ಬಗ್ಗೆ ರಾಜ್ಯ ವ್ಯಾಪ್ತಿ ಸಮೀಕ್ಷೆ ಮಾಡಲು “ಗ್ಯಾರಂಟಿ ಸ್ವಯಂ-ಸೇವಕರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದಿದೆ. ಮುಂದುವರೆದು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳನ್ನು ಗ್ಯಾರಂಟಿ ಸ್ವಯಂ-ಸೇವಕರಾಗಿ…

Read More

ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಎನ್ನುವಂತೆ ಇಂದಿನಿಂದ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಮಿಶ್ರಿತ ಹಾಲು ವಿತರಣೆ ಮಾಡಲಾಗುತ್ತಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪ್ರಸ್ತುತ ವಾರದಲ್ಲಿ ಐದು ದಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇನ್ಮುಂದೆ ವಾರದಲ್ಲಿ ಮೂರು ದಿನ ಹಾಲಿಗೆ ನಿರ್ದಿಷ್ಟ ಪ್ರಮಾಣದ ರಾಗಿ ಮಾಲ್ಟ್ ಮಿಶ್ರಣ ಮಾಡಿ ಕೊಡಲಾಗುತ್ತದೆ. ಉಳಿದ ಎರಡು ದಿನಗಳಲ್ಲಿ ಹಾಲನ್ನು ಮಾತ್ರ ನೀಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪ್ರಸ್ತುತ ವಾರದಲ್ಲಿ ಐದು ದಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲು ನೀಡಲಾಗುತ್ತದೆ. ಇನ್ನು ಮುಂದೆ ವಾರದಲ್ಲಿ ಮೂರು ದಿನ ಹಾಲಿಗೆ ನಿರ್ದಿಷ್ಟ ಪ್ರಮಾಣದ ರಾಗಿ ಮಾಲ್ಟ್‌ ಮಿಶ್ರಣ ಮಾಡಿ ಕೊಡಲಾಗುತ್ತದೆ. ಉಳಿದ ಎರಡು ದಿನಗಳಲ್ಲಿ ಹಾಲನ್ನು ಮಾತ್ರ ನೀಡಲಾಗುವುದು ಎಂದಿದ್ದಾರೆ.

Read More

ಬೆಂಗಳೂರು: ರಾಜ್ಯದಲ್ಲಿ ತಾಯಿ ಮತ್ತು ಮಕ್ಕಳ ಆರೈಕೆಗಾಗಿ ಇನ್ಫೋಸಿಸ್ ಫೌಂಡೇಶನ್ ಸಿ.ಎಸ್.ಆರ್ ಫಂಡ್ ನೆರವಿನೊಂದಿಗೆ ಆರೋಗ್ಯ ಇಲಾಖೆ ನೂತನ ಎರಡು ತಂತ್ರಜ್ಞಾನಗಳನ್ನ ಸರ್ಕಾರಿ ಆಸ್ಪತ್ರೆಗಳಲ್ಲಿ ಅನುಷ್ಠಾನಗೊಳಿಸುತ್ತಿದೆ. ನೂತನ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಇನ್ಫೋಸಿಸ್ ಫೌಂಡೇಶನ್ ಹಾಗೂ ಸಿ. ಕ್ಯಾಂಪ್ ನವರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದರು. ಪ್ರಾಯೋಗಿಕವಾಗಿ 3 ಜಿಲ್ಲೆಗಳಲ್ಲಿ ತಂತ್ರಜ್ಞಾನ ಅಳವಡಿಕೆ ಕಾರ್ಯ ಆರಂಭವಾಗಿದ್ದು, ಧಾರವಾಡ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಜಿಲ್ಲಾಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ fetal monitoring technology ಮತ್ತು CPAP ತಂತ್ರಜ್ಞಾನಗಳನ್ನ ಅಳವಡಿಸಲಾಗುತ್ತಿದೆ. ಹಂತ ಹಂತವಾಗಿ ನಾಲ್ಕು ವರ್ಷಗಳಲ್ಲಿ ಒಟ್ಟು 8 ಜಿಲ್ಲೆಗಳ ಜಿಲ್ಲಾಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಂತ್ರಜ್ಞಾನ ಅಳವಡಿಕೆ ಕಾರ್ಯ ನೆಡೆಯಲಿದೆ. ಈ ತಂತ್ರಜ್ಞಾನಗಳ ಅಳವಡಿಕೆಗೆ ಇನ್ಫೋಸಿಸ್ ಫೌಂಡೇಶನ್ ಸಿಎಸ್ ಆರ್ ಯೋಜನೆಯಡಿ ಹಣಕಾಸಿನ ನೆರವು ಒದಗಿಸಲು ಮುಂದೆ ಬಂದಿದ್ದು, ಯೋಜನೆ ಅನುಷ್ಠಾನದಲ್ಲಿ ಸಿ – ಕ್ಯಾಂಪ್ ಅಗತ್ಯ ವೇದಿಕೆ ಕಲ್ಪಿಸಿದೆ. ಇನ್ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಇಲಾಖೆ…

Read More

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಕೆಇಎಯಿಂದ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ರಾಜ್ಯದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು ಎಂದಿದೆ. ಹುದ್ದೆಗಳ ವಿವರ – 1000 ಹುದ್ದೆಗಳು ವೇತನ ಶ್ರೇಣಿ – ರೂ.21,400 ರಿಂದ 42,000 ಶೈಕ್ಷಣಿಕ ವಿದ್ಯಾರ್ಹತೆ – ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಿಂಚಣಿ ಸೌಲಭ್ಯ – NPS ವಯೋಮಿತಿ ಸಾಮಾನ್ಯ ವರ್ಗದವರಿಗೆ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು. ಅರ್ಜಿ…

Read More

ಬೆಂಗಳೂರು: 58ನೇ ಬೆಂಗಳೂರು ವಿಶ್ವವಿದ್ಯಾಲಯದಿಂದ ಇಸ್ರೋ ಅಧ್ಯಕ್ಷ ಸೋಮನಾಥ್ ಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿತ್ತು. ಇಂತಹ ಗೌರವ ಡಾಕ್ಟರೇಟ್ ಅನ್ನು ಇಂದು ಅವರಿಗೆ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರದಾನ ಮಾಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದಿಂದ 58ನೇ ಘಟಿಕೋತ್ಸವವನ್ನು ಕೆಲ ದಿನಗಳ ಹಿಂದೆ ನಡೆಸಲಾಗಿತ್ತು. ಅಂದು ಪದವಿ ಪ್ರಮಾಣಪತ್ರ, ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿತ್ತು. ಆದ್ರೇ ಬೆಂಗಳೂರು ವಿವಿಯ ಘಟಿಕೋತ್ಸವದಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಭಾಗಿಯಾಗಿ ಗೌರವ ಡಾಕ್ಟರೇಟ್ ಅನ್ನು ಸ್ವೀಕರಿಸೋದಕ್ಕೆ ಸಾಧ್ಯವಾಗಿರಲಿಲ್ಲ. ಇಂದು ರಾಜಭವನದಲ್ಲಿ ರಾಜ್ಯಪಾಲತ ಥಾವರ್ ಚಂದ್ ಗೆಹ್ಲೋಟ್ ಅವರು ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಅನ್ನು ಪ್ರದಾನ ಮಾಡಿದರು. https://kannadanewsnow.com/kannada/delhi-chalo-protest-march-to-be-suspended-for-2-days-announces-farmer-leader-2/ https://kannadanewsnow.com/kannada/good-news-for-job-seekers-kea-invites-applications-for-the-post-of-1000-village-administration-officer/

Read More