Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: “ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆ (ಸರ್ಕಾರಿ ಹಾಗೂ ಖಾಸಗಿ) ಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ನೂತನವಾಗಿ ಪ್ರತಿಷ್ಟಾಪಿಸಿರುವ ಭುವನೇಶ್ವರಿಯ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಾತನಾಡಿದರು. “ನಮ್ಮ ಮಾತೃಭಾಷೆ, ಈ ನೆಲ, ಜಲ ಕಾಪಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಬೆಂಗಳೂರಿನಲ್ಲಿ 107 ಭಾಷೆ ಮಾತನಾಡುವ ಜನರಿದ್ದಾರೆ. ಕಳೆದ ವರ್ಷ ಎಲ್ಲಾ ಸಂಘ ಸಂಸ್ಥೆಗಳಲ್ಲೂ ನವೆಂಬರ್ 1 ರಂದು ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕನ್ನಡದ ಧ್ವಜ ಹಾರಿಸುವಂತೆ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದೆ. ನಾನು ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ, ಆದರೆ ಮುಂದಿನ ದಿನಗಳಲ್ಲಿ ಇದನ್ನು ಕಡ್ಡಾಯ ಮಾಡುವ ಆದೇಶವನ್ನು ಹೊರಡಿಸಲಾಗುವುದು. ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅಥವಾ ಪಾಲಿಕೆ ವತಿಯಿಂದ ಎಲ್ಲಾ ಸಂಸ್ಥೆಗಳಿಗೂ ಕನ್ನಡ ಬಾವುಟ ಪೂರೈಸುವ ಕೆಲಸ ಮಾಡುತ್ತೇವೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ…
ನವದೆಹಲಿ: ದೆಹಲಿಯ ಬುರಾರಿ ಪ್ರದೇಶದಲ್ಲಿ ನಿರ್ಮಾಣ ಹಂತದ 4 ಅಂತಸ್ತಿನ ಕಟ್ಟಡವೊಂದು ಕುಸಿದಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (Delhi Fire Services -DFS) ಇಲಾಖೆ ತಿಳಿಸಿದೆ. ಡಿಎಫ್ಎಸ್ ಪ್ರಕಾರ, ಬುರಾರಿಯ ಕೌಶಿಕ್ ಎನ್ಕ್ಲೇವ್ನ ಆಸ್ಕರ್ ಪಬ್ಲಿಕ್ ಸ್ಕೂಲ್ ಬಳಿಯ ಮನೆಯೊಳಗೆ ಹಲವಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಈಗಾಗಲೇ 8 ಮಂದಿಯನ್ನು ರಕ್ಷಿಸಲಾಗಿದೆ. ಒಟ್ಟು ಒಂಬತ್ತು ಅಗ್ನಿಶಾಮಕ ಟೆಂಡರ್ ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಕಟ್ಟಡ ಕುಸಿತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಕುಸಿದ ಸ್ಥಳದಿಂದ ದೃಶ್ಯಗಳು ಪ್ರದೇಶದ ಸುತ್ತಲೂ ಹರಡಿರುವ ಬೃಹತ್ ಅವಶೇಷಗಳು ಮತ್ತು ಅವಶೇಷಗಳನ್ನು ತೋರಿಸಿದೆ. ಅನೇಕ ಆಂಬ್ಯುಲೆನ್ಸ್ ಗಳು ಸಹ ಸ್ಥಳಕ್ಕೆ ತಲುಪಿದವು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಈ ಘಟನೆ ತುಂಬಾ ದುಃಖಕರವಾಗಿದೆ. ಬುರಾರಿಯ ನಮ್ಮ ಶಾಸಕ ಸಂಜೀವ್ ಝಾ ಜಿ ಅವರಿಗೆ ಪಕ್ಷದ ಕಾರ್ಯಕರ್ತರೊಂದಿಗೆ ತಕ್ಷಣ ಅಲ್ಲಿಗೆ ಹೋಗಿ ಪರಿಹಾರ ಮತ್ತು ರಕ್ಷಣಾ…
ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ಕೊಟ್ಟು, ಜನರಿಗೆ ಕಟ್ಟೋದಕ್ಕೆ ಕಿರುಕುಳ ನೀಡೋದು ಜಾಸ್ತಿಯಾಗಿತ್ತು. ಈ ಕಾರಣಕ್ಕೆ ಕೆಲವೆಡೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ಈ ಬೆನ್ನಲ್ಲೇ ಸೂಕ್ತ ಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದರು. ಈ ಸೂಚನೆ ಬೆನ್ನಲ್ಲೇ ಅಲರ್ಟ್ ಆಗಿರುವಂತ ಪೊಲೀಸರು ಐದು ಮೆಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಮೈಸೂರಿನಲ್ಲಿ ಸಿಎಂ ಸಿದ್ಧರಾಮಯ್ಯ ತವರು ಕ್ಷೇತ್ರದಲ್ಲೇ ಬಾಲ ಬಿಚ್ಚಿದಂತ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ ಸಾಲ ಪಡೆದವರಿಗೆ ಕಿರುಕುಳ ನೀಡುತ್ತಿದ್ದಂತ ಐದು ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮೈಸೂರಿನ ಮೇಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತೆ ಆತ್ಮಹತ್ಯೆ ಮಾಡಿಕೊಂಡ ಸಂಬಂಧ ನಂಜನಗೂಡಿನ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಇದಲ್ಲದೇ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಧರ್ಮಸ್ಥಳ ಮಹಿಳಾ ಸ್ವಸಹಾಯ ಸಂಘ ಸೇರಿ ಐದು ಖಾಸಗಿ ಫೈನಾನ್ಸ್ ಕಂಪನಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.…
ನವದೆಹಲಿ: 2020 ರಿಂದ ಸ್ಥಗಿತಗೊಂಡಿದ್ದ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಭಾರತ ಮತ್ತು ಚೀನಾ ಸೋಮವಾರ ನಿರ್ಧರಿಸಿವೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ನಡುವಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನೇರ ವಿಮಾನಯಾನವನ್ನು ಪುನರಾರಂಭಿಸಲು ಎರಡೂ ಕಡೆಯವರು ತಾತ್ವಿಕವಾಗಿ ಒಪ್ಪಿಕೊಂಡರು. ಭಾರತ ಮತ್ತು ಚೀನಾ ಜನರ ನಡುವಿನ ಸಂಪರ್ಕವನ್ನು ಉತ್ತೇಜಿಸಲು ಮತ್ತು ಸುಗಮಗೊಳಿಸಲು ಒಪ್ಪಿಕೊಂಡವು. ವಿಶೇಷವಾಗಿ ಮಾಧ್ಯಮ ಮತ್ತು ಚಿಂತಕರ ಚಾವಡಿಗಳ ನಡುವೆ ಈ ನಿರ್ಧಾರಕ್ಕೆ ಬರಲಾಗಿದೆ. https://kannadanewsnow.com/kannada/shocking-class-8-student-dies-after-collapsing-due-to-low-bp-in-hostel/ https://kannadanewsnow.com/kannada/good-news-for-village-accountants-helpers-state-govt-disburses-incentives/
ಬೆಂಗಳೂರು: ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಾಸ್ ಪಡೆಯುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದರು. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು. ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವವನ್ನು ಆರಂಭಿಸಿ ಇಡೀ ವರ್ಷ ಆಚರಿಸಲು ನಿರ್ಧರಿಸಿದೆವು. ಕನ್ನಡ ಭಾಷೆ, ಸಂಸ್ಕೃತಿ ವಿಚಾರದಲ್ಲಿ ಇದು ನಮ್ಮ ಬದ್ಧತೆ ಎಂದು ಸ್ಪಷ್ಟಪಡಿಸಿದರು. ಕನ್ನಡ ಭಾಷೆ, ಸಂಸ್ಕೃತಿ, ಕಲೆಯನ್ನು ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮೆಲ್ಲರ ಅಭಿಮಾನವಾಗವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮಭಾಷೆಯಾಗುತ್ತದೆ ಎಂದರು.…
ಪೋಷಕರು ಬುಧವಾರದಂದು 27 ಬಾರಿ ಈ ಮಂತ್ರವನ್ನು ಪಠಿಸಬೇಕು. ನಿಮ್ಮ ಮಕ್ಕಳು ಚೆನ್ನಾಗಿ ಓದುತ್ತಾರೆ ಮತ್ತು ಅವರ ಭವಿಷ್ಯ ಉಜ್ವಲವಾಗುತ್ತದೆ. ಇದು ಪರೀಕ್ಷೆ ಹತ್ತಿರ ಸಮೀಪಿಸುತ್ತಿದೆ, ಮಕ್ಕಳು ಚೆನ್ನಾಗಿ ಓದಲು ಪೋಷಕರು ಪ್ರಾರ್ಥಿಸಲು ಹೇಳಬೇಕಾದ ಮಂತ್ರವಾಗಿದೆ. ಪರೀಕ್ಷೆಯ ತಯಾರಿಗಾಗಿ ತಮ್ಮ ಮಕ್ಕಳು ಚೆನ್ನಾಗಿ ಓದಿ ಜೀವನದಲ್ಲಿ ಉತ್ತಮ ಸ್ಥಾನಮಾನ ಪಡೆಯಬೇಕು ಎಂಬುದು ಎಲ್ಲ ತಂದೆ ತಾಯಿಯರ ಒಂದೇ ಕನಸು. ಮಕ್ಕಳ ಶ್ರೀಮಂತ ಜೀವನಕ್ಕಾಗಿ ಅವರು ತಮ್ಮ ಎಲ್ಲಾ ವೈಯಕ್ತಿಕ ಆಸೆಗಳನ್ನು ಬದಿಗಿಟ್ಟು ತಮ್ಮ ಜೀವನದುದ್ದಕ್ಕೂ ಶ್ರಮಿಸುತ್ತಾರೆ. ಅಂತಹ ಬದುಕು ಕಟ್ಟಿಕೊಳ್ಳಲು ಹಗಲಿರುಳು ಶ್ರಮಿಸುತ್ತಾರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು,…
ಬೆಂಗಳೂರು: ರೈಲು ಸಂಖ್ಯೆ 22692 ಹಜರತ್ ನಿಜಾಮುದ್ದೀನ್ – ಕೆ.ಎಸ್. ಆರ್ ಬೆಂಗಳೂರು ರಾಜಧಾನಿ ಎಕ್ಸ್ ಪ್ರೆಸ್ ರೈಲಿಗೆ ಯಾದಗಿರಿ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಹಸಿರು ನಿಶಾನೆ ತೋರಿಸಲಿದ್ದಾರೆ. ಜನವರಿ 28 ರಂದು ರಾತ್ರಿ 07.30 ಗಂಟೆಗೆ ಗಣ್ಯರು ಮತ್ತು ರೈಲ್ವೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ರೈಲು ಸಂಖ್ಯೆ 22692 ಹಜರತ್ ನಿಜಾಮುದ್ದೀನ್ – ಕೆಎಸ್ಆರ್ ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್ ರೈಲಿಗೆ ಪ್ರಾಯೋಗಿಕ ಹೆಚ್ಚುವರಿ ನಿಲುಗಡೆಗೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ. ದಕ್ಷಿಣ ಮಧ್ಯ ರೈಲ್ವೆಯ ಗುಂತಕಲ್ ವಿಭಾಗದಲ್ಲಿರುವ ಯಾದಗಿರಿ ನಿಲ್ದಾಣವು ಉಪನಗರವಲ್ಲದ ಗ್ರೇಡ್-3 (ಎನ್ಎಸ್ ಜಿ-3) ನಿಲ್ದಾಣದ ವರ್ಗಕ್ಕೆ ಸೇರುತ್ತದೆ. ಯಾದಗಿರಿ ಜಿಲ್ಲಾ ಕೇಂದ್ರವಾಗಿದ್ದು, ಕರ್ನಾಟಕದ ರಾಜಧಾನಿಯಾದ ಬೆಂಗಳೂರು ಸೇರಿದಂತೆ ದೇಶದ ವಿವಿಧ ಸ್ಥಳಗಳಿಗೆ ಪ್ರಯಾಣಿಸಲು ಮುಖ್ಯವಾಗಿ ರೈಲು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತನಾಡಿದರು. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಭಾರತ-ಯುಎಸ್ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಲು ದೂರವಾಣಿ ಕರೆ ಮೂಲಕ ಸುದೀರ್ಘವಾಗಿ ಮಾತನಾಡಿದರು. ವಿಶೇಷವೆಂದರೆ, ಯುಎಸ್ ಸರ್ಕಾರದ ಆಹ್ವಾನದ ಮೇರೆಗೆ ಜನವರಿ 20 ರಂದು ಟ್ರಂಪ್ ಅವರ ಪ್ರಮಾಣವಚನ ಸಮಾರಂಭದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾರತವನ್ನು ಪ್ರತಿನಿಧಿಸಿದರು ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಟ್ರಂಪ್ಗೆ ಬರೆದ ಪತ್ರವನ್ನು ಒಯ್ದರು. https://kannadanewsnow.com/kannada/only-fan-model-dies-after-falling-from-balcony-while-having-sex-onlyfans-death/ https://kannadanewsnow.com/kannada/man-commits-suicide-after-writing-suicide-note-as-wife-commits-suicide-in-karnataka/
ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಂಶ್ವರಿ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅನಾವರಣಗೊಳಿಸಿದರು. ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ’ ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಅದರಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ಪ್ರತಿಮೆಯ ವೈಶಿಷ್ಟ್ಯತೆ * ನೆಲಮಟ್ಟದಿಂದ ಪ್ರತಿಮೆಯ ಎತ್ತರ – 43 ಅಡಿ 6 ಇಂಚು * ಪ್ರತಿಮೆಯ ಲೋಹದ ಒಟ್ಟು ತೂಕ – 31.50 ಟನ್ * ಭುವನೇಶ್ವರಿ ಪ್ರತಿಮೆ – 20 ಟನ್ * ಕರ್ನಾಟಕ ನಕ್ಷೆ – 11.50 ಟನ್ * ಭುವನೇಶ್ವರಿ ಪ್ರತಿಮೆಯ ಒಟ್ಟು ವಿಸ್ತೀರ್ಣ (ಉದ್ಯಾನವನ ಸೇರಿದಂತೆ) – 4500 ಚ.ಮೀ * ಕಲ್ಲು ಕಟ್ಟಡದ ಪೀಠದ ವಿವರ – ಕಲ್ಲಿನ ಹೊಯ್ಸಳ ಶೈಲಿಯ…
ಬೆಂಗಳೂರು : ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ. ಸಾಲ ನೀಡುವಾಗ ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು. ಓರ್ವ ವ್ಯಕ್ತಿಗೆ 2ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್ಬಿಐ ಗೈಡ್ಲೈನ್ಸ್ ಇದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ ಮೈಕ್ರೋ…