Author: kannadanewsnow09

ಬೆಂಗಳೂರು: ನೋಂದಣಿ ಪ್ರಕ್ರಿಯೆಯಲ್ಲಿ ನಾಗರೀಕ ಸೇವೆಯನ್ನು ಮತ್ತಷ್ಟು ಸರಳ ಮತ್ತು ಜನಸ್ನೇಹಿಗೊಳಿಸುವ ಉದ್ದೇಶದಿಂದ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ-2024 ಮಂಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಬುಧವಾರ ವಿಧಾನಸಭೆಯಲ್ಲಿ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ-2024 ಅನ್ನು ಮಂಡಿಸಿ ಮಾತನಾಡಿದ ಅವರು, “ನೋಂದಣಿ ಕಚೇರಿಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸುವ ಸಲುವಾಗಿ ಎರಡು ಮಹತ್ವದ ತಿದ್ದುಪಡಿಗಳನ್ನು ತರಲಾಗಿದೆ. ಆ ಪೈಕಿ ಮೊದಲ ತಿದ್ದುಪಡಿ ಆಸ್ತಿ ಮಾರಾಟಗಾರರು ಹಾಗೂ ಕೊಳ್ಳುವವರು ಇಬ್ಬರ ಉಪಸ್ಥಿತಿಯೂ ಇಲ್ಲದೆ ತಾವಿದ್ದಲ್ಲಿದಂಲೇ ತಾಂತ್ರಿಕವಾಗಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ” ಎಂದು ಮಾಹಿತಿ ನೀಡಿದರು. ಮುಂದುವರೆದು, “ಈ ಹಿಂದೆ ಉಪ ನೋಂದಣಾಧಿಕಾರಿ ಕಚೇರಿಗೆ ಎರಡೂ ಕಡೆಯವರ ಉಪಸ್ಥಿತಿ ಅನಿವಾರ್ಯವಾಗಿತ್ತು. ಹೀಗಾಗಿ ಸರ್ಕಾರಿ ಕಚೇರಿಯಲ್ಲಿ ಜನಸಂದಣಿ ಹೆಚ್ಚಾಗಿತ್ತು. ಎಲ್ಲರಿಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಅಸಾಧ್ಯವಾಗಿತ್ತು. ಹೀಗಾಗಿ ಜನಸಾಮಾನ್ಯರು ಅನಗತ್ಯವಾಗಿ ಉಪ ನೋಂದಣಾಧಿಕಾರಿ ಕಚೇರಿಗೆ ಓಡಾಡುವುದನ್ನು ತಪ್ಪಿಸುವ ಸಲುವಾಗಿ ತಾಂತ್ರಿಕ ನೋಂದಣಿಗೆ ಅಂಕಿತ ಹಾಕಲಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ), ಕರ್ನಾಟಕ ಹೌಸಿಂಗ್ ಬೋರ್ಡ್,…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15 ಬಾರಿ ಬಜೆಟ್ ಮಂಡನೆ ಮಾಡಿ, ರಾಜ್ಯದಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡದೇ ಗ್ಯಾರೆಂಟಿ ಹೆಸರಿನಲ್ಲಿ ಕೇವಲ ಕಲ್ಯಾಣ ಕಾರ್ಯಗಳಿಗೆ ಹಣ ಖರ್ಚು ಮಾಡುತ್ತಿರುವುದು ಕಾಯಕವಿಲ್ಲದೇ ದಾಸೋಹ ಮಾಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿಗಳು 15ನೇ ಬಾರಿ ಬಜೆಟ್ ಮಂಡನೆ ಮಾಡಿ ಅದನ್ನು ಹೇಗೆ ನಿರ್ವಹಣೆ ಮಾಡುತ್ತಾರೆ ಎನ್ನುವುದು ನಮಗೆ ಕುತೂಹಲ ಇದೆ. ಕಾಯಕ ಮತ್ತು ದಾಸೋಹದ ಬಗ್ಗೆ ಮಾತನಾಡಿದ್ದಾರೆ. ಇದು ನಮ್ಮ ನಾಡಿನ ಸಂಸ್ಕೃತಿ. ಕಾಯಕ ಇದ್ದರೆ ಮಾತ್ರ ದಾಸೋಹ. ಕೇವಲ ದಾಸೋಹ ಮಾಡಿಕೊಂಡು ಹೋದರೆ ಉಪಯೋಗವಿಲ್ಲ. ಕಾಯಕಕ್ಕೆ ಪೂರಕವಾದ ಯೋಜನೆಗಳನ್ನು ಜಾರಿಗೊಳಿಸಬೇಕು. ಕಾಯಕದಿಂದ ಬಂದ ಆದಾಯದಿಂದ ದಾಸೋಹ ಮಾಡಿದ್ದರೆ ತಪ್ಪಿಲ್ಲ. ಇವರ ಬಜೆಟ್ಟನ್ನು ನೋಡಿದಾಗ ಕಾಯಕ ಎಷ್ಟು ಆಗಬೇಕೊ ಅಷ್ಟು ಆಗುತ್ತಿಲ್ಲ. ಉತ್ಪಾದನೆ ಮತ್ತು ಹಂಚಿಕೆಯನ್ನು ಸರಿಯಾಗಿ ತೆಗೆದುಕೊಂಡು ಹೋಗದಿದ್ದರೆ, ಕಾಯಕ ಮತ್ತು ದಾಸೋಹಕ್ಕೆ ಮಹತ್ವ ಇಲ್ಲ ಎಂದು…

Read More

ಬೆಂಗಳೂರು: ಕೇಂದ್ರಿದಿಂದ ಅನುದಾನ ಹಾಗೂ ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳ ಮೂಲಕವೂ ರಾಜ್ಯಕ್ಕೆ ಸಾಕಷ್ಟು ಅನುದಾನ ಹರಿದು ಬರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹಣಕಾಸಿನ ವಿಚಾರದಲ್ಲಿ ಕೇಂದ್ರ ಸರ್‌ಚಾರ್ಜ್, ಸೆಸ್ ತೆಗೆದುಕೊಳ್ಳುತ್ತದೆ. ಅದರಲ್ಲೂ ರಾಜ್ಯಕ್ಕೆ ಪಾಲು ಕೊಡಬೇಕು ಎಂದು ಹೇಳುತ್ತಾರೆ. ಸರ್‌ಚಾರ್ಜ್ ಮತ್ತು ಸೆಸ್ಸು 1958 ನಿಂದಲೇ ಇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್‌ಚಾರ್ಜ್ ಸೆಸ್ ಹಾಕಬಹುದು. ರಾಜ್ಯ ಸರ್ಕಾರ ಬೆಂಗಳೂರಿನ ಮೂಲ ಸೌಕರ್ಯ ಕಲ್ಪಿಸಲು ಸರ್‌ಚಾರ್ಜ್ ಸೆಸ್ ಹಾಕುತ್ತಿದ್ದಾರೆ. ಅದು ಬಂಡವಾಳವಾಗಿ ಪರಿವರ್ತನೆಯಾಗಿರುವುದರಿಂದ ರಾಜ್ಯದ ಅಭಿವೃದ್ಧಿಗೆ ಹಣ ಬಳಕೆಯಾಗುತ್ತಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ ಕಳೆದ ಆರೇಳು ವರ್ಷದಿಂದ ತಂಬಾಕು, ಸಿಗರೇಟ್, ದುಬಾರಿ ಕಾರು, ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ಸೆಸ್ ಹಾಕಿ ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ನೀಡುತ್ತದೆ. ಕೇಂದ್ರ ಸರ್ಕಾರ ಹಾಕಿರುವ ಸೆಸ್‌ನಲ್ಲಿ ಕರ್ನಾಟಕಕ್ಕೆ ೪೫…

Read More

ಬೆಂಗಳೂರು : ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳ ಇದೇ ತಿಂಗಳ 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ನಡೆಯಲಿರುವ ಯುವ ಸಮೃದ್ಧಿ ಸಮ್ಮೇಳನದ ಉದ್ಯೋಗ ಮೇಳ ಕುರಿತು ಬುಧವಾರ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಹಾಗೂ ಐಟಿ- ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಯವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಇದೇ ತಿಂಗಳ 26 ಮತ್ತು 27ರಂದು ಬೆಂಗಳೂರಿನ ಅರಮನೆಯಲ್ಲಿ ಯುವ ಸಮೃದ್ಧಿ ಸಮ್ಮೇಳನ ಎಂಬ ಹೆಸರಿನಡಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿರುವ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಒದಗಿಸಿಕೊಡುವ ಮೇಳ ಇದಾಗಿದೆ ಎಂದು ಹೇಳಿದರು. ಈಗಾಗಲೇ ಈ ಮೇಳಕ್ಕೆ ರಾಜ್ಯಾದ್ಯಂತ…

Read More

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಹುಕ್ಕಾಬಾರ್ ನಿಷೇಧ ಮಾಡಲಾಗಿದೆ. ಇದನ್ನು ಅಧಿಕೃತವಾಗಿ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿ, ಇಂದು ಅಂಗೀಕಾರ ಪಡೆಯಲಾಗಿದೆ. ಇದಲ್ಲದೇ 21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ಮಾಡುವುದನ್ನು ನಿಷೇಧಿಸುವ ಮಸೂದೆಗೂ ಅಂಗೀಕಾರದ ಮುದ್ರೆಯನ್ನು ಒತ್ತಲಾಗಿದೆ. ಇಂದು ಕರ್ನಾಟಕ ವಿಧಾನಸಭೆಯಲ್ಲಿ ಕೋಟ್ಪಾ ಕಾಯ್ದೆಗೆ (ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳು) ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ. ಈ ಮೂಲಕ ರಾಜ್ಯದಾದ್ಯಂತ ಎಲ್ಲಾ ಹುಕ್ಕಾ ಬಾರ್ ಗಳನ್ನು ನಿಷೇಧಿಸಿದಿಸಲಾಗಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಮಾರಾಟವನ್ನು ರಾಜ್ಯವು ನಿಷೇಧಿಸಿದೆ. https://kannadanewsnow.com/kannada/bmtc-gives-good-news-to-students-appearing-for-ii-puc-exams/ https://kannadanewsnow.com/kannada/icc-test-ranking-jaiswal-breaks-into-top-20/

Read More

ಶಿವಮೊಗ್ಗ: ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಫೆಬ್ರವರಿ 24ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ತಿಳಿಸಿದರು. ಅವರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆದಿರುವ ಫೆ. 24ರ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ನಂತರ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸರ್ಕಾರದ ಗ್ಯಾರಂಟಿ ಸೌಲಭ್ಯ ಪಡೆದ ಎಲ್ಲಾ ಫಲಾನುಭವಿಗಳು ಆಗಮಿಸಲಿದ್ದಾರೆ ಎಂದವರು ನುಡಿದರು. ಜಿಲ್ಲಾ ಮಟ್ಟದಲ್ಲಿ ಆಯೋಜನೆಗೊಳ್ಳುತ್ತಿರುವ ಈ ಕಾರ್ಯಕ್ರಮಕ್ಕೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಮಿಸಿ, ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ ಸಚಿವ ಸಂಪುಟದ ಕೆಲ ಸಚಿವರು ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರುಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯಲ್ಲಿರುವ ಐದು ಗ್ಯಾರೆಂಟಿ ಯೋಜನೆಗಳ ಎಲ್ಲಾ ಪಲಾನುಭವಿಗಳ ಅನುಕೂಲಕ್ಕಾಗಿ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳ ಜೊತೆಗೆ ಮಧ್ಯಾಹ್ನದ ಉಪಹಾರದ ವ್ಯವಸ್ಥೆ…

Read More

ಶಿವಮೊಗ್ಗ: ಸರ್ಕಾರದ ಐದು ಮಹತ್ವಕಾಂಕ್ಷಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನ ಭಾಗ್ಯ, ಶಕ್ತಿ ಮತ್ತು ಯುವನಿಧಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದ ರಾಜ್ಯದ ಜನಸಾಮಾನ್ಯರು ನೆಮ್ಮದಿಯ ಜೀವನ ನಡೆಸುವಂತಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲೆಯ ಸೊರಬ ತಾಲೂಕಿನ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ತಮ್ಮ ಕೌಟುಂಬಿಕ ನಿರ್ವಹಣೆಯ ಅನೇಕ ಸಂದಿಗ್ಧ ಸಂದರ್ಭಗಳಲ್ಲಿ ಸರ್ಕಾರ ಆರ್ಥಿಕ ನೆರವಿನ ಹಸ್ತ ನೀಡಿ ಸಹಕರಿಸುತ್ತಿದೆ. ಚುನಾವಣಾ ಪೂರ್ವದಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷನಾಗಿದ್ದೆ ಎಂಬ ಸಂತಸದ ಸಂಗತಿ ನನ್ನದಾಗಿದೆ ಎಂದರು. ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಾಗುತ್ತಿದೆ. ನಂಬಿಕೆ ಇಡಿ, ತಮ್ಮ ನಂಬಿಕೆಯನ್ನು ಹುಸಿಗೊಳಿಸುವುದಿಲ್ಲ. ಅಂತಯೇ ಇದು ನಿಮ್ಮದೇ ಸರ್ಕಾರ…

Read More

ಬೆಂಗಳೂರು: ಬ್ರಾಹ್ಮಣ ವಿದ್ಯಾರ್ಥಿಗಳಇಗೆ ಗುಡ್ ನ್ಯೂಸ್ ಎನ್ನುವಂತೆ ಸಾಂದೀಪನಿ ಶಿಷ್ಯವೇತನಕ್ಕೆ ಅರ್ಜಿ ದಿನಾಂಕ ಮಾರ್ಚ್ 01ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ಸಕಾಲದಲ್ಲಿ ನೀಡುವ ಸಾಂದೀಪನಿ ಶಿಷ್ಯವೇತನ ಯೋಜನೆಯನ್ನು ಮಾರ್ಚ್‌ 01ರ ವರೆಗೆ ವಿಸ್ತರಿಸಲಾಗಿದೆ ಎಂದಿದ್ದಾರೆ. ಸಾಂದೀಪನಿ ಶಿಷ್ಯವೇತನ ಯೋಜನೆಯ ಅಡಿಯಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅಂದರೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 15,000 ರೂ ವರೆಗೆ ವಿದ್ಯಾರ್ಥಿವೇತನ ನೀಡಲಾಗುವುದು. ಇನ್ನೂ ಸಿಇಟಿ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದ ಒಟ್ಟು ಮೊತ್ತದ 2/3 ಭಾಗ ಅಥವಾ ಗರಿಷ್ಠ ರೂ.1 ಲಕ್ಷದ ವರೆಗೆ ಶಿಷ್ಯವೇತನ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಸಮುದಾಯದ ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕಾಗಿ ಈ ಮೂಲಕ ತಿಳಿಸಿದ್ದಾರೆ.

Read More

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇಕಡ 50 ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024 ಅನ್ನು ವಿಧಾನಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು. ವಿಧಾನಸಭೆಯಲ್ಲಿ ಭೋಜನ ವಿರಾಮದ ನಂತರ ನಡೆದ ಕಲಾಪದಲ್ಲಿ ಬೆಂಗಳೂರು ನಗರಾಭಿವೃದ್ದಿ ಖಾತೆಯನ್ನೂ ಹೊಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಈ ವಿಧೇಯಕದಿಂದ ಬೆಂಗಳೂರಿನ ನಾಗರಿಕರಿಗೆ ತೆರಿಗೆ ಬಾಬತ್ತು, ದಂಡ ವಿನಾಯಿತಿ ಸೇರಿ ಸುಮಾರು ರೂ. 2,700 ಕೋಟಿ ರೂಪಾಯಿಯಷ್ಟು ಅನುಕೂಲವಾಗಲಿದೆ. ಜತೆಗೆ ಪಾಲಿಕೆಗೆ ಸುಮಾರು ರೂ.1,000 ಕೋಟಿಯಷ್ಟು ಆಸ್ತಿ ತೆರಿಗೆ ಬರಲಿದೆ. ಸುಮಾರು 5.51 ಲಕ್ಷ ತೆರಿಗೆ ಬಾಕಿದಾರರು, ಸುಮಾರು 5- 7 ಲಕ್ಷ ತೆರಿಗೆ ವ್ಯಾಪ್ತಿಗೆ ಬಾರದವರು ಹಾಗೂ 3 ಲಕ್ಷದಷ್ಟು ಮಂದಿ ಭಾಗಶಃ ತೆರಿಗೆ ಪಾವತಿದಾರರಿಗೆ ಒಟ್ಟಾರೆ 13 ರಿಂದ 15 ಲಕ್ಷ ಜನರಿಗೆ ಅನುಕೂಲವಾಗಲಿದೆ. ಈ ವಿಧೇಯಕದಲ್ಲಿ ಬಡ ಹಾಗೂ ದುರ್ಬಲ ವರ್ಗದವರಿಗೆ ವಿಶೇಷ…

Read More

ಬೆಂಗಳೂರು : “ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು ಪೂರೈಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ಕುಡಿಯುವ ನೀರನ್ನು ಮುಂದಿನ ಮೇ ತಿಂಗಳಲ್ಲಿ ಪೂರೈಸಲಾಗುವುದು. ಆದರೆ ಸೀವೇಜ್ ಪ್ಲಾಂಟ್ ಸೇರಿದಂತೆ ಇತರೇ ಕಾಮಗಾರಿಗಳು ಪೂರ್ಣಗೊಳ್ಳಲು 2 ವರ್ಷಗಳು ಬೇಕಾಗಬಹುದು” ಎಂದು ತಿಳಿಸಿದರು. “ಯಶವಂತಪುರ ಕ್ಷೇತ್ರದಲ್ಲಿ ಅರಣ್ಯ ಭೂಮಿಯ ಪಕ್ಕದಲ್ಲಿ ಇರುವ ಬಿಡಿಎ ಬಡಾವಣೆಗಳಿಗೆ ನೀರು ಹರಿಸಲು ಇದ್ದಂತಹ ತೊಡಕುಗಳನ್ನು ನಿವಾರಿಸಲಾಗುವುದು. ಈಗಾಗಲೇ ಅರಣ್ಯ ಇಲಾಖೆಯವರ ಜೊತೆಗೆ ಚರ್ಚೆ ನಡೆಸಲಾಗಿದೆ. ಯಶವಂತಪುರ ಕ್ಷೇತ್ರ ದೊಡ್ಡದಾಗಿದ್ದು, ನಗರ ಭಾಗದಷ್ಟೇ ವಿಸ್ತೀರ್ಣವನ್ನು ಗ್ರಾಮೀಣ ಭಾಗ ಹೊಂದಿದೆ. ಎಲ್ಲಾ ಸಮಸ್ಯೆಗಳನ್ನು ನಾನೇ ಖುದ್ದಾಗಿ ಬಗೆಹರಿಸುತ್ತೇನೆ” ಎಂದರು. ಬೆಂಗಳೂರು ವ್ಯಾಪ್ತಿಯ ಪ್ರತಿ ಶಾಸಕರಿಗೆ 10 ಕೋಟಿ ಅನುದಾನ: 11 ಸಾವಿರ ಕೊಳವೆ ಬಾವಿ ಕೊರೆಯಲು ಆದೇಶ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೊಳವೆಬಾವಿಗಳನ್ನು ಕೊರೆಸುವ ಸಂಬಂಧ ಬಿಜೆಪಿ…

Read More