Author: kannadanewsnow09

ನವದೆಹಲಿ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಕ್ಷಮಿಸಿ, “ಪಕ್ಷದ ಹಿತಾಸಕ್ತಿಗಿಂತ ಹೆಚ್ಚು ಮುಖ್ಯವೆಂದು ಪರಿಗಣಿಸಲಾದ ಅವರ ಮಾವನ ನಿರಂತರ ಪ್ರಭಾವಕ್ಕೆ ಒಳಗಾಗಿದ್ದಕ್ಕಾಗಿ” ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಂತರ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡರು. X ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ತಮ್ಮ ಸೋದರಳಿಯನಿಗೆ ಅವರಿಗೆ ಇನ್ನೂ ಒಂದು ಅವಕಾಶ ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಆಕಾಶ್ ಆನಂದ್ ಅವರು ಇಂದು X ನಲ್ಲಿ ತಮ್ಮ ತಪ್ಪುಗಳನ್ನು ಒಪ್ಪಿಕೊಂಡರು. ಹಿರಿಯ ನಾಯಕರ ಬಗ್ಗೆ ಸಂಪೂರ್ಣ ಗೌರವವನ್ನು ವ್ಯಕ್ತಪಡಿಸಿದರು ಮತ್ತು ಭವಿಷ್ಯದಲ್ಲಿ ತಮ್ಮ ಮಾವನಿಂದ ಪ್ರಭಾವಿತರಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು. ಇದರಲ್ಲಿ ಅವರು ತಮ್ಮ ತಪ್ಪುಗಳನ್ನು ಒಪ್ಪಿಕೊಂಡರು. ಹಿರಿಯ ನಾಯಕರ ಬಗ್ಗೆ ಸಂಪೂರ್ಣ ಗೌರವವನ್ನು ವ್ಯಕ್ತಪಡಿಸಿದರು. ಅವರಿಗೆ ಇನ್ನೂ ಒಂದು ಅವಕಾಶ ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಯಾವತಿ ಹೇಳಿದರು. https://twitter.com/Mayawati/status/1911432602566672637 ನನ್ನ ವಿಷಯದಲ್ಲಿ, ನಾನು…

Read More

ನವದೆಹಲಿ: ಹಿಂದಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕಾಂಗ್ರೆಸ್ ಮುಖಂಡರು ಪ್ರಧಾನಿಯನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಆಕ್ಷೇಪಾರ್ಹ ಭಾಷೆಯನ್ನು ಬಳಸಿದ್ದಾರೆ ಎಂದು ಬಿಹಾರ ಬಿಜೆಪಿ ಹೇಳಿದೆ. ಅಲ್ಲದೇ ಆರ್ ಎಸ್ ಎಸ್, ಬಿಜೆಪಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಕನ್ಹಯ್ಯ ಕುಮಾರ್ ವಿರುದ್ಧ ದೂರು ನೀಡಿದೆ. ಭಾರತೀಯ ಜನತಾ ಪಕ್ಷದ ಬಿಹಾರ ರಾಜ್ಯ ಮಾಧ್ಯಮ ಉಸ್ತುವಾರಿ ಡ್ಯಾನಿಶ್ ಇಕ್ಬಾಲ್ ಅವರು ಪಾಟ್ನಾದ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ ದೂರಿನ ಮೇರೆಗೆ ಬಿಹಾರ ಪೊಲೀಸರು ಭಾನುವಾರ (ಏಪ್ರಿಲ್ 13, 2025) ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ. ಹಿಂದಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕನ್ಹಯ್ಯ ಕುಮಾರ್ ಅವರು ಪ್ರಧಾನಿಯನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತರಿಗೆ ಆಕ್ಷೇಪಾರ್ಹ ಭಾಷೆಯನ್ನು ಬಳಸಿದ್ದಾರೆ ಎಂದು ದೂರಿನಲ್ಲಿ  ಇಕ್ಬಾಲ್ ಆರೋಪಿಸಿದ್ದಾರೆ. ದೇಶದ ಪ್ರಜಾಪ್ರಭುತ್ವ ರಚನೆಯಲ್ಲಿ ಆಯ್ಕೆಯಾದ ಪ್ರಧಾನಿಯನ್ನು ಭಯೋತ್ಪಾದಕ ಎಂದು…

Read More

ಬೆಂಗಳೂರು: ನಗರದಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ನಡೆದಿದೆ. ಬೆಂಗಳೂರಲ್ಲಿ ಅಪಾರ್ಮೆಂಟ್ 4ನೇ ಮಹಡಿಯಿಂದ ಜಿಗಿದು ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಅಪಾರ್ಮೆಂಟ್ ಒಂದರ 4ನೇ ಮಹಡಿಯಿಂದ ಜಿಗಿದು ದಂತ ವೈದ್ಯಕೀಯ ವಿದ್ಯಾರ್ಥಿನಿ ಸೌಮ್ಯ(19) ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಪರೀಕ್ಷೆ ವಿಚಾರವಾಗಿ ಭಯಗೊಂಡಿದ್ದಂತ ವಿದ್ಯಾರ್ಥಿನಿ ಸೌಮ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗುತ್ತಿದೆ. ಈ ಹಿಂದೆಯೂ ಆತ್ಮಹತ್ಯೆಗೆ ಡೆಂಟಲ್ ವಿದ್ಯಾರ್ಥಿನಿ ಸೌಮ್ಯ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/india-successfully-test-fires-laser-based-weapons-for-the-first-time/ https://kannadanewsnow.com/kannada/5-year-old-girls-murder-case-in-hubballi-accused-shot-dead-by-police/

Read More

ಹುಬ್ಬಳ್ಳಿ: ಇಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರ ಮೂಲದ ರಿತೇಶ್ ಎಂಬಾತ ಕರೆದೊಯ್ದು ಹತ್ಯೆ ಮಾಡಿದ್ದನು. ಇಂದು ಆತನನ್ನು ಬಂಧಿಸೋದಕ್ಕೆ ತೆರಳಿದ್ದಂತ ಸಂದರ್ಭದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳೋದಕ್ಕೆ ಹಲ್ಲೆಗೆ ಮುಂದಾಗಿದ್ದನು. ಈ ವೇಳೆ ಪೊಲೀಸರು ನಡೆಸಿದಂತ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಇಡೀ ರಾಜ್ಯವೇ ಮಮ್ಮಲ ಮರುಗಿದ್ದಂತ ಹುಬ್ಬಳ್ಳಿಯ 5 ವರ್ಷದ ಬಾಲಕಿ ಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ಬಂಧಿಸೋದಕ್ಕೆ ತೆರಳಿದಂತ ವೇಳೆಯಲ್ಲಿ ಬಿಹಾರ ಮೂಲದ ಆರೋಪಿ ರಿತೇಶ್ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದನು. ಈ ಸಂದರ್ಭದಲ್ಲಿ ಓರ್ವ ಪಿಎಸ್ಐ, ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದರು. ಪೊಲೀಸರು ಆತ್ಮ ರಕ್ಷಣೆಗಾಗಿ ನಡೆಸಿದಂತ ಗುಂಡಿನ ದಾಳಿಯಲ್ಲಿ ಆರೋಪಿ ರಿತೇಶ್ ಎದೆ ಸೀಳಿತ್ತು. ಹೀಗಾಗಿ ಸ್ಥಳದಲ್ಲೇ ಹುಬ್ಬಳ್ಳಿಯ 5 ವರ್ಷದ ಬಾಲಕಿ ಹತ್ಯೆ ಆರೋಪಿ ಬಲಿಯಾಗಿದ್ದಾನೆ.

Read More

ನವದೆಹಲಿ: ವೈಮಾನಿಕ ಬೆದರಿಕೆಗಳ ವಿರುದ್ಧ ಲೇಸರ್ ಆಧಾರಿತ ಶಸ್ತ್ರಾಸ್ತ್ರವನ್ನು ಪರೀಕ್ಷಿಸಿದ ಭಾರತವು ಮೊದಲ ಬಾರಿಗೆ ಯುಎಸ್, ಚೀನಾ ಮತ್ತು ರಷ್ಯಾದೊಂದಿಗೆ ಸೇರಿಕೊಂಡಿದೆ. ಪ್ರಮುಖ ತಾಂತ್ರಿಕ ಪ್ರಗತಿಯಲ್ಲಿ, ಡ್ರೋನ್ಗಳು ಮತ್ತು ಇತರ ವೈಮಾನಿಕ ಬೆದರಿಕೆಗಳನ್ನು ತಟಸ್ಥಗೊಳಿಸಲು ಹೆಚ್ಚಿನ ಶಕ್ತಿಯ ಲೇಸರ್ ಶಸ್ತ್ರಾಸ್ತ್ರಗಳನ್ನು ನಿಯೋಜಿಸುವ ಸಾಮರ್ಥ್ಯ ಹೊಂದಿರುವ ಆಯ್ದ ರಾಷ್ಟ್ರಗಳ ಗುಂಪಿಗೆ ಭಾರತ ಸೇರಿಕೊಂಡಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ತನ್ನ ದೇಶೀಯವಾಗಿ ಅಭಿವೃದ್ಧಿಪಡಿಸಿದ ಎಂಕೆ -2 (ಎ) ಲೇಸರ್-ಡೈರೆಕ್ಟ್ ಎನರ್ಜಿ ವೆಪನ್ (ಡಿಇಡಬ್ಲ್ಯು) ವ್ಯವಸ್ಥೆಯನ್ನು ಕರ್ನೂಲ್ನ ರಾಷ್ಟ್ರೀಯ ಮುಕ್ತ ವಾಯು ಶ್ರೇಣಿಯಲ್ಲಿ (ಎನ್ಒಎಆರ್) ಯಶಸ್ವಿಯಾಗಿ ಪ್ರದರ್ಶಿಸಿತು. https://twitter.com/ANI/status/1911368349537181977 ಸುದ್ದಿ ಸಂಸ್ಥೆ ಎಎನ್ಐ ಉಲ್ಲೇಖಿಸಿದ ಡಿಆರ್ಡಿಒ ಅಧಿಕಾರಿಗಳ ಪ್ರಕಾರ, 30 ಕಿಲೋವ್ಯಾಟ್ ಲೇಸರ್ ಕಿರಣದಿಂದ ಚಾಲಿತವಾದ ಈ ವ್ಯವಸ್ಥೆಯು ಸ್ಥಿರ-ರೆಕ್ಕೆ ಡ್ರೋನ್ಗಳು, ಸಮೂಹ ಡ್ರೋನ್ಗಳು, ಕಣ್ಗಾವಲು ಸಂವೇದಕಗಳು ಮತ್ತು ಆಂಟೆನಾಗಳನ್ನು ಮಿಂಚಿನ ವೇಗ ಮತ್ತು ನಿಖರತೆಯೊಂದಿಗೆ ತೊಡಗಿಸಿಕೊಳ್ಳಬಹುದು ಮತ್ತು ನಾಶಪಡಿಸಬಹುದು. ಈ ಯಶಸ್ವಿ ಪ್ರಯೋಗವು ಇದೇ ರೀತಿಯ ಉನ್ನತ-ಶಕ್ತಿಯ ಲೇಸರ್ ಸಾಮರ್ಥ್ಯಗಳನ್ನು…

Read More

ಕೊಪ್ಪಳ: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್ ಕಾಂತರಾಜು ನೇತೃತ್ವದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವರದಿ ಬಗ್ಗೆ ವಾಸ್ತವ ಸತ್ಯ ತಿಳಿಯದೆ ಮಾತನಾಡುವುದು ಸರಿಯಲ್ಲ. ಎಲ್ಲಾ ಸಚಿವರಿಗೂ ವರದಿ ಪ್ರತಿ ಕಳುಹಿಸಲಾಗುತ್ತಿದೆ. ವರದಿ ಓದಿ ತಿಳಿದುಕೊಳ್ಳಬೇಕು ಎಂದುಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್‌.ತಂಗಡಗಿ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣತಿ ವಾಸ್ತವ ಸತ್ಯ ಯಾರಿಗೂ ಗೊತ್ತಿಲ್ಲ. ಈಗಾಗಲೇ 26 ಮಂತ್ರಿಗಳಿಗೆ ವರದಿ ಪ್ರತಿ ಕಳುಹಿಸಲಾಗಿದೆ. ಎಲ್ಲಾ ಮಂತ್ರಿಗಳಿಗೂ ಪ್ರತಿ ಕಳುಹಿಸಲಾಗುವುದು. ಜಾತಿ ಲೆಕ್ಕ ಹಾಕಲು ಗಣತಿ ಮಾಡಿಲ್ಲ. ಎಲ್ಲ ಸಮುದಾಯಗಳಲ್ಲಿ ವಿದ್ಯಾವಂತರು, ಅವಿದ್ಯಾವಂತರು ಎಷ್ಟಿದ್ದಾರೆ? ಆಸ್ತಿ ಎಷ್ಟಿದೆ? ಬಡವರು ಎಷ್ಟಿದ್ದಾರೆ? ಉದ್ಯೋಗದಲ್ಲಿ ಎಷ್ಟು ಮಂದಿ ಇದ್ದಾರೆ ಇತ್ಯಾದಿ ಮಾಹಿತಿ ಸಂಗ್ರಹಿಸಲು ಈ ಜಾತಿ ಗಣತಿ ಮಾಡಿಸಲಾಗಿದೆ ಎಂದು ತಿಳಿಸಿದರು. ಇಲ್ಲಿ ನಮಗೆ ಜಾತಿ ಲೆಕ್ಕವಲ್ಲ. ರಾಜ್ಯದ ಪ್ರತಿ ವಿಧಾನಸಭಾವಾರು ಸಮುದಾಯಗಳ ಸ್ಥಿತಿಗತಿ ಕುರಿತ ಮಾಹಿತಿ ಒಳಗೊಂಡ 50…

Read More

ಹುಬ್ಬಳ್ಳಿ: ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಹತ್ಯೆಗೈದಿದ್ದಂತ ಬಿಹಾರ ಮೂಲದ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಲಾಗಿತ್ತು. ಪೊಲೀಸರು ನಡೆಸಿದಂತ ಎನ್ ಕೌಂಟರ್ ನಲ್ಲಿ ಬಿಹಾರ ಮೂಲದ ರಿತೇಶ್ ಬಲಿಯಾಗಿರೋದಾಗಿ ತಿಳಿದು ಬಂದಿದೆ. ಹುಬ್ಬಳ್ಳಿಯಲ್ಲಿ ಬಿಹಾರದ ಯುವಕನಿಂದ ಐದು ವರ್ಷದ ಬಾಲಕಿಯನ್ನು ಹತ್ಯೆ ಮಾಡಿದಂತ ಆರೋಪಿಯನ್ನು ಬಂಧಿಸೋದಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಂತ ಸಂದರ್ಭದಲ್ಲಿ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದರು ಎನ್ನಲಾಗಿತ್ತು. ಆದರೇ ಆ ಬಳಿಕ ಪೊಲೀಸರು ನಡೆಸಿದಂತ ಎನ್ ಕೌಂಟರ್ ನಲ್ಲಿ ಬಿಹಾರ ಮೂಲದ ರಿತೇಶ್ ಬಲಿಯಾಗಿದ್ದಾನೆ ಎಂಬುದಾಗಿ ಕಮೀಷನರ್ ಶಶಿಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಇನ್ನೂ ಈ ದಾಳಿಯಲ್ಲಿ ಓರ್ವ ಪಿಎಸ್ಐ, ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಗಾಯಾಳು ಪೊಲೀಸರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Read More

ಬೆಂಗಳೂರು : ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಮಾಡಿಸಿದ್ದಾರೆ. ಈ ವರದಿಯನ್ನು ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಹಾಗೂ ಧರ್ಮಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ. ಮೊದಲು ರಾಜ್ಯದಲ್ಲಿ ಅತಿ ದೊಡ್ಡ ಜಾತಿ ಲಿಂಗಾಯತರು, ಎರಡನೇ ಅತಿ ದೊಡ್ಡ ಜಾತಿ ಒಕ್ಕಲಿಗರು ಹಾಗೂ ಮೂರನೆಯವರು ದಲಿತರು ಎಂದಿತ್ತು. ಆದರೆ ಈಗ ಮುಸ್ಲಿಮರು ಅತಿ ದೊಡ್ಡ ಜಾತಿ ಎನ್ನಲಾಗಿದೆ. ಮುಸ್ಲಿಮರಲ್ಲೇ ವಿವಿಧ ಜಾತಿಗಳಿದ್ದು, ಅದನ್ನು ಬೇರೆ ಮಾಡಿಲ್ಲ. ಒಕ್ಕಲಿಗರಲ್ಲೇ ಕೆಲವು ಜಾತಿಗಳನ್ನು ವಿಂಗಡಣೆ ಮಾಡಿದ್ದಾರೆ. ಕಾಂಗ್ರೆಸ್ ಗೆ ಹೆಚ್ಚು ಮತ ನೀಡುವವರ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಲಾಗಿದೆ. ಒಕ್ಕಲಿಗರಿಗೆ, ಲಿಂಗಾಯತರಿಗೆ, ದಲಿತರಿಗೆ ನಾಮ ಹಾಕಿದ್ದಾರೆ ಎಂದು ದೂರಿದರು. ಸಿಎಂ ಸಿದ್ದರಾಮಯ್ಯ ಪಕ್ಷ, ಜಾತಿ, ಧರ್ಮ ಒಡೆಯುವುದರಲ್ಲಿ ನಂ.1 ಆಗಿದ್ದಾರೆ. ಸಿದ್ದರಾಮಯ್ಯ ಪ್ರಾಯೋಜಿತವಾದ ಈ ವರದಿ ಅವೈಜ್ಞಾನಿಕ.…

Read More

ಬೀದರ್ : ಕೇಂದ್ರ ಸರ್ಕಾರ ಉಡಾನ್ ಸಬ್ಸಿಡಿ ನಿಲ್ಲಿಸಿದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬೀದರ್- ಬೆಂಗಳೂರು ನಾಗರಿಕ ವಿಮಾನಯಾನ ಪುನಾರಂಭಿಸಲು ಕೆಕೆಆರ್.ಡಿ.ಬಿ.ಯಿಂದ ಈ ವರ್ಷ 14 ಕೋಟಿ ಮೀಸಲಿಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಜಿಲ್ಲಾ ಪಂಚಾಯ್ತಿ ಕಾರ್ಯಾಲಯದಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಏ.16ರಂದು ಸಂಜೆ 4 ಗಂಟೆಗೆ ಬೀದರ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ವಿಮಾನ ನಿಲ್ದಾಣದ ಹೊರಗೆ ನಡೆಯುವ ಕಾರ್ಯಕ್ರಮದಲ್ಲಿ 17ರಂದು ಬೆಳಗ್ಗೆ ಬೀದರ್ ನಿಂದ ಬೆಂಗಳೂರಿಗೆ ತೆರಳಲಿರುವ ಆಯ್ದ 5 ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ವಿತರಿಸುವ ಮೂಲಕ ನಾಗರಿಕ ವಿಮಾನಯಾನ ಸೇವೆಯ ಪುನಾರಂಭಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ ಎಂದರು. ಕರುನಾಡಿಗೆ ಕಿರೀಟಪ್ರಾಯವಾಗಿರುವ ಬೀದರ್ ಜಿಲ್ಲೆ, ಸರ್ವಧರ್ಮಸಮನ್ವಯದ ನಾಡು. ಜಿಲ್ಲೆಯಲ್ಲಿ ಇತಿಹಾಸ ಪ್ರಸಿದ್ಧ ಬಸವಕಲ್ಯಾಣದ ಅನುಭವಮಂಟಪ, ಝರಣಿ ನರಸಿಂಹಸ್ವಾಮಿ ಕ್ಷೇತ್ರ, ಪಾಪನಾಶ, ನಾನಕ್ ಝೀರಾ ಗುರುದ್ವಾರ, ಮಹಮದ್ ಗವಾನ್ ಮದರಸಾ ಹಾಗೂ ಮೆಥೋಡಿಸ್ಟ್ ಚರ್ಚ್…

Read More

ಹುಬ್ಬಳ್ಳಿ: ಬಿಜೆಪಿ ಅವಧಿಯಲ್ಲಿ ಒಂದೇ ಒಂದು ಮನೆ ಕೊಟ್ಟಿರೋದು ಸಾಬೀತು ಪಡಿಸಿದ್ರೇ, ನಾಳಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಜಮೀರ್ ಅಹ್ಮದ್ ಖಾನ್ ಸವಾಲ್ ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮ್ಮ ಸರ್ಕಾರದ ಅಧಿಕಾರದಲ್ಲಿದ್ದಾಗ ಈ ಹಿಂದೆ ಈ ಮನೆಗಳನ್ನು ಮಂಜೂರು ಮಾಡಲಾಗಿತ್ತು. ಆ ಬಳಿಕ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮನೆಗಳ ಯಾವುದೇ ಅಭಿವೃದ್ಧಿ ಆಗಲಿಲ್ಲ ಎಂಬುದಾಗಿ ಕಿಡಿಕಾರಿದರು. ಬಿಜೆಪಿ ಸರ್ಕಾರ ತಮ್ಮ ಅವಧಿಯಲ್ಲಿ ಒಂದೇ ಒಂದು ಮನೆ ಮಂಜೂರು ಮಾಡಿಲ್ಲ. ಈ ಹಿಂದೆ ನಮ್ಮ ಸರ್ಕಾರ ಇದ್ದಾಗಲೇ ಮಂಜೂರು ಮಾಡಿರೋ ಮನೆಗಳನ್ನು ನಿರ್ಮಾಣ ಮಾಡಲು 8 ವರ್ಷ ಬೇಕಾಯಿತು ಎಂಬುದಾಗಿ ಕಿಡಿಕಾರಿದರು. ರಾಜ್ಯದಲ್ಲಿ ಮುಂದಿನ ತಿಂಗಳು 42,000 ಮನೆ ಹಂಚಿಕೆ ಮಾಡಲಾಗುತ್ತಿದೆ. ಹುಬ್ಬಳ್ಳಿ ಒಂದಕ್ಕೆ ಒಂದು ಸಾವಿರಕ್ಕೂ ಹೆಚ್ಚು ಮನೆ ನೀಡುತ್ತಿದ್ದೇವೆ. ಈ ಮನೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ದೊಡ್ಡ ಕಾರ್ಯಕ್ರಮದಲ್ಲಿ ಹಂಚಿಕೆ ಮಾಡುವುದಾಗಿ ತಿಳಿಸಿದರು. https://kannadanewsnow.com/kannada/karnataka-caste-census-report-favours-increasing-obc-quota-from-32-to-51/ https://kannadanewsnow.com/kannada/if-you-follow-these-five-things-no-one-can-stop-your-income/

Read More