Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಸೆಪ್ಟೆಂಬರ್.22ರಿಂದ ಆರಂಭಗೊಂಡಿದೆ. ಅಕ್ಟೋಬರ್.4ರವರೆಗೆ ನಡೆಸಲು ನಿರ್ಧರಿಸಿರುವಂತ ಸಮೀಕ್ಷಾ ಕಾರ್ಯಕ್ಕೆ ಸರ್ವರ್ ಸಮಸ್ಯೆ ಎದುರಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಎಲ್ಲಾ ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ವೀಡಿಯೋ ಸಂವಾದವನ್ನು ನಡೆಸಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕುರಿತಂತೆ ಎಲ್ಲಾ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಸಮೀಕ್ಷೆಗೆ ಸಂಬಂಧಿಸಿದಂತ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ತಪ್ಪದೇ ಭಾಗಿಯಾಗುವಂತೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ನಾಳೆಯ ಸಿಎಂ ಸಿದ್ಧರಾಮಯ್ಯ ನೇತೃತ್ವದ ವೀಡಿಯೋ ಸಂವಾದ ಸಭೆಯಲ್ಲಿ ಜಾತಿಗಣತಿಗೆ ಅಡ್ಡಿಯಾಗಿರುವಂತ ಸರ್ವರ್ ಸಮಸ್ಯೆ ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಚರ್ಚೆಯಾಗುವ ನಿರೀಕ್ಷೆಯಿದೆ. https://kannadanewsnow.com/kannada/important-information-from-bescom-for-griha-jyoti-beneficiaries/ https://kannadanewsnow.com/kannada/backward-class-leaders-decide-to-support-cm-siddaramaiah-for-caste-census-survey/
ಬೆಂಗಳೂರು: ಸಂವಿಧಾನ ಬದ್ಧವಾಗಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಹಾಗೂ ಮಾನ್ಯ ಮುಖ್ಯಮಂತ್ರಿಗಳಿಗೆ ಬೆಂಬಲವಾಗಿ ನಿಲ್ಲಲು ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಚಿವರು, ವಿಧಾನಸಭೆ ಸದಸ್ಯರು, ವಿಧಾನಪರಿಷತ್ ಸದಸ್ಯರು ಹಾಗೂ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಬಹುಮತದ ನಿರ್ಧಾರ ಕೈಗೊಳ್ಳಲಾಯಿತು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ತಿಳಿಸಿದರು. ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಮುಖಂಡರ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ರಸ್ತುತವಾಗಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಯಲ್ಲಿ ಹಿಂದುಳಿದ ವರ್ಗದ ಸಮಸ್ಯೆ ಜನರು ಸಕ್ರಿಯವಾಗಿ ಭಾಗವಹಿಸಬೇಕು ಹಾಗೂ ಅದನ್ನು ಯಶಸ್ವಿಗೊಳಿಸಬೇಕು. ಇದಕ್ಕಾಗಿ ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು ಹಾಗೂ ಹಿಂದುಳಿದ ವರ್ಗಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಬೇಕು ಎನ್ನುವ ನಿರ್ಧಾರ ತೆಗೆದುಕೊಳ್ಳಲಾಯಿತು. ಸಮೀಕ್ಷೆ ಸಂವಿಧಾನ ಬದ್ಧವಾದ ಹಕ್ಕು ಹಿಂದುಳಿದ ಜಾತಿಗಳು ಆರ್ಥಿಕವಾಗಿ ರಾಜಕೀಯ ವಾಗಿ ಶೈಕ್ಷಣಿಕ…
ತುಮಕೂರು : ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸಲು ನೆರವಾಗುವ ‘ಕುಸುಮ್ ಸಿ’ಯೋಜನೆಗೆ ಭೂಮಿ ಗುತ್ತಿಗೆ ನೀಡುವ ಮೂಲಕ ರೈತರು ಬೆಂಬಲ ನೀಡಬೇಕು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್ ಶಿವಶಂಕರ್ ಗುರುವಾರ ಮನವಿ ಮಾಡಿದ್ದಾರೆ. ಸೇವಾ ಪರ್ವ ಆಚರಣೆ ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ರಾಜಸ್ಥಾನದ ಬನ್ವಾರಾದಲ್ಲಿ ಕುಸುಮ್ ಸಿ ಯೋಜನೆಗೆ ಚಾಲನೆ ನೀಡಿದರು. ಈ ಕಾರ್ಯಕ್ರಮವನ್ನು ದೃಶ್ಯ ಮಾಧ್ಯಮದ ಮೂಲಕ ಇಂಧನ ಇಲಾಖೆ ಮತ್ತು ತುಮಕೂರು ಜಿಲ್ಲಾ ಆಡಳಿತದ ಸಂಯುಕ್ತಾಶ್ರಯದಲ್ಲಿ ತುಮಕೂರಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ನೇರ ಪ್ರಸಾರ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು,”ಪಿಎಂ ಕುಸುಮ್-ಸಿ ಯೋಜನೆ ರೈತರಿಗೆ ಅದರಲ್ಲೂ ಮುಖ್ಯವಾಗಿ ಬಯಲು ಸೀಮೆ ಭಾಗದ ರೈತರಿಗೆ ವರದಾನವಾಗಿದೆ. ಯೋಜನೆ ಜಾರಿಗೊಳಿಸಲು ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡುತ್ತಿದೆ. ಆದರೆ, ಅದಕ್ಕೆ ಭೂಮಿ ಕೊರತೆ ಇದೆ. ಹೀಗಾಗಿ ಸ್ಥಳೀಯ ಶಾಸಕರು ಆಸಕ್ತಿ ವಹಿಸಿ ಯೋಜನೆ ಅನುಷ್ಠಾನಗೊಳಿಸಲು ಸಹಕರಿಸಿದರೆ…
ಬೆಂಗಳೂರು : ಕರ್ನಾಟಕದಲ್ಲಿ ಕೌಶಲ್ಯ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಬೇಕು, ಯುವ ಸಮೂಹ ಜಾಗತಿಕ ಮಟ್ಟದಲ್ಲಿ ಉದ್ಯೋಗ ಗಿಟ್ಟಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕೆಂಬ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರ ಈಗ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ 2025–2032 ಜಾರಿಗೆ ತರಲು ಕ್ರಮ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಕೌಶಲ್ಯ ನೀತಿಗೆ ಅನುಮೋದನೆ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಅಭಿವೃದ್ಧಿ ನೀತಿಯಿಂದ ರಾಜ್ಯದ ಪ್ರಗತಿಗೆ ಅತ್ಯಂತ ಪೂರಕವಾದ ಯೋಜನೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, 2032 ರ ವೇಳೆಗೆ 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಯನ್ನು ಹೊಂದಲಾಗಿದ್ದು, ಇದನ್ನು ಸಾಕಾರಗೊಳಿಸಲು ನಾವು ಬದ್ಧವಾಗಿದ್ದೇವೆ ಎಂದು ಸಚಿವ ಡಾ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಕೌಶಲ್ಯ ನೀತಿಯ ಪ್ರಮುಖ ಅಂಶಗಳು • ಕಲಿಕೆ ಜೊತೆಗೆ ಕೌಶಲ್ಯ, ನನ್ನ ವೃತ್ತಿ ನನ್ನ…
ಬೆಂಗಳೂರು : ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿದ್ದರಿಂದ ಕೆಲ ಗೃಹ ಜ್ಯೋತಿ ಗ್ರಾಹಕರ ಬಿಲ್‌ನಲ್ಲಿ ಆಗಿದ್ದ ವ್ಯತ್ಯಯವನ್ನು ಸರಿಪಡಿಸಿ ಪರಿಷ್ಕೃತ ಬಿಲ್ ವಿತರಿಸಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಸೆಪ್ಟೆಂಬರ್ ತಿಂಗಳಲ್ಲಿ ಮೀಟರ್ ರೀಡರ್‌ಗಳು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಭಾಗವಾಗಿ ಮನೆಗಳನ್ನು ಪಟ್ಟಿ ಮಾಡುವ ಕಾರ್ಯ ಹಾಗೂ ಮೀಟರ್ ರೀಡಿಂಗ್‌ಅನ್ನು ಪ್ರೋಬ್‌ಗಳ ಮೂಲಕ ಮೊದಲ ಬಾರಿಗೆ ನಡೆಸುತ್ತಿರುವುದರಿಂದ ವಿದ್ಯುತ್ ಬಿಲ್ ವಿತರಣೆಯ ದಿನಾಂಕವನ್ನು ಸೆ.15ನೇ ತಾರಿಕಿನಿಂದ 25ನೇ ತಾರೀಕಿನವರೆಗೆ ವಿಸ್ತರಿಸಲಾಗಿತ್ತು. ಈ ಪ್ರಕ್ರಿಯೆಯಿಂದ ಕೆಲ ಪ್ರಕರಣಗಳಲ್ಲಿ ಗೃಹಜ್ಯೋತಿ ಗ್ರಾಹಕರಿಗೆ ಭಾಗಶಃ ಬಿಲ್ ಬಂದಿರುವುದು ಬೆಸ್ಕಾಂ ಗಮನಕ್ಕೆ ಬಂದಿದೆ. ಅವುಗಳನ್ನು ಕಳೆದ ತಿಂಗಳುಗಳ ಸರಾಸರಿಯಂತೆ ಲೆಕ್ಕ ಹಾಕಿ, ಪರಿಷ್ಕೃತ ಬಿಲ್ ನೀಡಲಾಗುತ್ತದೆ. ಈ ಮೂಲಕ ಗೃಹಜ್ಯೋತಿ ಫಲಾನುಭವಿಗಳಿಗೆ ಯೋಜನೆಯ ಲಾಭ ಪಡೆಯುವಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/instructions-to-start-social-and-educational-survey-work-immediately-chief-commissioner-maheshwar-rao/
ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸದಂತೆ ಇಂದು ವರ್ಚ್ಯುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮೀಕ್ಷೆ ಮಾಡಲು ವಿವಿಧ ಇಲಾಖೆಗಳಿಂದ ನಿಯೋಜಿಸಲ್ಪಟ್ಟ ಗಣತಿದಾರರಿಗೆ ಆಯಾ ನಗರ ಪಾಲಿಕೆಗಳಲ್ಲಿ ತರಬೇತಿ ನೀಡಿ ತ್ವರಿತವಾಗಿ ಸಮೀಕ್ಷಾ ಕಾರ್ಯ ಆರಂಭಿಸಲು ಸೂಚನೆ ನೀಡಿದರು. ನಗರದಲ್ಲಿ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಸಮೀಕ್ಷಾ ಕಾರ್ಯವನ್ನು ನಡೆಸಬೇಕು. ಜೊತೆಗೆ ಆಶಾ ಕಾರ್ಯಕರ್ತೆಯರನ್ನು ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಈ ಸಂಬಂಧ ಆಶಾ ಕಾರ್ಯಕರ್ತೆಯರಿಗೆ ನುರಿತ ತರಬೇತಿದಾರರಿಂದ ತರಬೇತಿ ನೀಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಸಮೀಕ್ಷಾ ಕಾರ್ಯದ ಮೇಲ್ವಿಚಾರಣೆಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಆಯಾ ನಗರ ಪಾಲಿಕೆಗಳ ಆಯುಕ್ತರು ತರಬೇತಿ ನಡೆಸುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸಮೀಕ್ಷಾ ಕಾರ್ಯಕ್ಕೆ ಗೈರು…
ಬೆಂಗಳೂರು: ನಗರದ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟದ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 2024ರ ಕಲಂ 241(7) ಅಡಿಯಲ್ಲಿ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದಲ್ಲಿ ವಸತಿ ಕಟ್ಟಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಬಾಗಲಕೋಟೆ ಇಲ್ಲಿ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಅವಶ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, ಬಾಲಕ, ಬಾಲಕಿಯರ ಹಾಸ್ಟೆಲ್‌ಗಳು, ಬೋಧಕ ಸಿಬ್ಬಂದಿಗಳ ವಸತಿಗೃಹಗಳು ಹಾಗೂ ಇತರೆ ಪೂರಕವಾದ ಕಾಮಗಾರಿಗಳಿಗೆ ಅವಶ್ಯವಿರುವ ರೂ.450 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ GRP (GLASS REINFORCED PLASTIC…
ಶಿವಮೊಗ್ಗ: ತ್ರೈಮಾಸಿಕ ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸೆಪ್ಟೆಂಬರ್.26, 2025ರ ನಾಳೆ ಸಾಗರ ತಾಲ್ಲೂಕಿನ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಸಾಗರ ಮೆಸ್ಕಾಂ ಇಲಾಖೆಯು ದಿನಾಂಕ: 26.09.2025 ರ ಶುಕ್ರವಾರದಂದು 110/33/11 ಕೆವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ದಿನಾಂಕ 26.09.2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-13 ರಾಮನಗರ ಇಂಡಸ್ಟ್ರಿಯಲ್ ಏರಿಯಾ, ಎಫ್-15 ಆರ್.ಎಂ.ಸಿ, ಎಫ್-17 ಎಸ್.ಎನ್.ನಗರ, ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಆವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಮನೆ, ಮಾಲ್ವೆ, ಭೀಮನೇರಿ,…
ಇತ್ತೀಚಿನ ದಿನಗಳಲ್ಲಿ, ಅನೇಕ ಯುವಕರು ತಮ್ಮ ಅಧ್ಯಯನವನ್ನು ಬದಿಗಿಟ್ಟು ಪ್ರೀತಿಯ ಹೆಸರಿನಲ್ಲಿ ದಾರಿ ತಪ್ಪುತ್ತಿದ್ದಾರೆ. ಕೆಲವರು ಕೆಟ್ಟ ಅಭ್ಯಾಸಗಳಿಗೆ ವ್ಯಸನಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹೀಗೆ ಶಾಲೆಗೆ ಹೋಗುತ್ತೇನೆ ಎಂಬುದಾಗಿ ಹೊರಟು ಹೋದಂತ ಮಗಳನ್ನು ಹಿಂಬಾಲಿಸಿ ತೆರಳಿದಂತ ತಾಯಿಗೆ ಕಂಡದ್ದು ಮಾತ್ರ ಶಾಕಿಂಗ್ ಆಗುವಂತದ್ದು. ಆ ಬಗ್ಗೆ ಮುಂದೆ ಓದಿ. ಇತ್ತೀಚೆಗೆ 18 ವರ್ಷ ತುಂಬದ ಕೆಲವು ಹುಡುಗಿಯರು ಪ್ರೀತಿಯ ಹೆಸರಿನಲ್ಲಿ ಮೋಸ ಹೋಗುವುದನ್ನು ನಾವು ನೋಡಿದ್ದೇವೆ. ಇನ್ನು ಕೆಲವರನ್ನು ಅವರ ಪೋಷಕರು, ಅವರ ಪ್ರೇಮಿಗಳು ಸೇರಿದಂತೆ ರೆಡ್ ಹ್ಯಾಂಡ್ ಆಗಿ ಹಿಡಿಯುತ್ತಿದ್ದಾರೆ. ಇಂತಹ ಘಟನೆಗಳ ವೀಡಿಯೊಗಳನ್ನು ನಾವು ಸಾಮಾಜಿಕ ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ. ಇಂತಹ ವೀಡಿಯೊವೊಂದು ಹರಿದಾಡುತ್ತಿದೆ. ಶಾಲೆಗೆ ಹೋಗುತ್ತಿದ್ದ ತನ್ನ ಮಗಳ ಮೇಲೆ ತಾಯಿಗೆ ಅನುಮಾನ ಬಂತು. ಅವಳು ಹಿಂದೆ ಹೋಗಿ ಕೊನೆಗೆ ಏನಾಯಿತು ಎಂದು ನೋಡಿದಳು. ಒಂದು ವಿಡಿಯೋ (ವೈರಲ್ ವಿಡಿಯೋ) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಶಾಲೆಗೆ ಹೋಗುತ್ತಿದ್ದ ಹುಡುಗಿ ಮನೆಯಿಂದ ಹೊರಟಿದ್ದಳು. ಆದರೆ, ಕೆಲವು…
ಬೆಂಗಳೂರು: ರಾಜ್ಯದಲ್ಲಿ ಲಕ್ಷಾಂತರ ರೇಷನ್ ಕಾರ್ಡ್ ಗಳು ದಿಢೀರ್ ರದ್ದುಗೊಂಡಿದ್ದಾವೆ. ರೇಷನ್ ತೆಗೆದುಕೊಂಡು ಬರೋದಕ್ಕೆ ನ್ಯಾಯಬೆಲೆ ಅಂಗಡಿಗೆ ತೆರಳಿದಂತ ಕುಟುಂಬಸ್ಥರಿಗೆ ಈ ಶಾಕ್ ಕೇಳಿ ಅಚ್ಚರಿ, ಆಘಾತ ಕೂಡ ಆಗಿದೆ. ಹಾಗಾದ್ರೇ ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ಒಂದು ವೇಳೆ ರೇಷನ್ ಕಾರ್ಡ್ ರದ್ದಾಗಿದ್ದರೇ ಏನು ಮಾಡಬೇಕು ಎಂಬುದಾಗಿ ಮುಂದೆ ಓದಿ. ರಾಜ್ಯಾಧ್ಯಂತ ಸುಮಾರು 2 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಕೂಡ ಕಾರಣ ಏನು ಅಂತ ರಿವೀಲ್ ಮಾಡಿದ್ದಾರೆ. ರೇಷನ್ ಕಾರ್ಡ್ ರದ್ದುಗೊಳ್ಳೋದಕ್ಕೆ ಮುಖ್ಯ ಕಾರಣ ಆ ಕುಟುಂಬದವರಲ್ಲಿ ಒಬ್ಬರು ಆದಾಯ ತೆರಿಗೆ ಪಾವತಿಸಿರೋದಾಗಿದೆ. ರೇಷನ್ ಕಾರ್ಡ್ ರದ್ದು ಮಾಡಿರೋದು ರಾಜ್ಯ ಸರ್ಕಾರವಲ್ಲ, ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ನೆನಪಿದ್ಯೋ ಇಲ್ಲವೋ ಗೊತ್ತಿಲ್ಲ ಮೊದಲು ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ, ಆ ಬಳಿಕ ಆಧಾರ್ ಗೆ ಪ್ಯಾನ್ ನಂಬರ್ ಕೂಡ ಲಿಂಕ್…









