Author: kannadanewsnow09

ಬೆಂಗಳೂರು: 2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ ಅಂತ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ (Procurement Rates) ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ. ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯ ರಾಜ್ಯ ಬೀಜ ನಿ., ಕರ್ನಾಟಕ ಎಣ್ಣೆಬೀಜ ಬೆಳೆಗಾರರ…

Read More

ಬೆಂಗಳೂರು: ಬಿಎಂಟಿಸಿಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಸಂಬಂಧ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಅರ್ಜಿಯನ್ನು ಸಲ್ಲಿಸಿರುವಂತ ವಿದ್ಯಾರ್ಥಿಗಳಿಗೆ ಜೂನ್.1ರಿಂದ ವಿದ್ಯಾರ್ಥಿ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದೆ. ಈ ಸಂಬಂಧ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ಸರ್ಕಾರದ ನಿರ್ದೇಶನದಂತೆ ಉಚಿತ/ರಿಯಾಯಿತಿ ದರದಲ್ಲಿ  ವಿದ್ಯಾರ್ಥಿ ಪಾಸುಗಳನ್ನು ವಿತರಣೆ ಮಾಡುತ್ತಿದೆ. ಅದರಂತೆ 2024-25 ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ದಿನಾಂಕ 29.05.2024 ರಿಂದ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ದಿನಾಂಕ 01.06.2024 ರಿಂದ ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು ಎಂದಿದೆ. 2024-25ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸಿನ ಆನ್‌ಲೈನ್ ಅರ್ಜಿಯು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿದ್ಯಾರ್ಥಿ ಪಾಸಿಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿ ಪಾಸುಗಳನ್ನು ಬೆಳಿಗ್ಗೆ 0800 ಗಂಟೆಯಿಂದ ಸಂಜೆ 18.30 ಗಂಟೆಯವರೆಗೆ ವಾರದ ಎಲ್ಲಾ ದಿನಗಳಲ್ಲಿ  ಬೆಂಗಳೂರು ಒನ್ ಕೇಂದ್ರಗಳಲ್ಲಿ…

Read More

ಬೆಂಗಳೂರು: ಡಿ ದೇವರಾಜ ಅರಸು ಟ್ರಕ್ ಟರ್ಮಿನಲ್ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿದ್ದಂತ ಮಾಜಿ ಎಂ.ಡಿ ಶಂಕರಪ್ಪಗೆ ಕೋರ್ಟ್ 2 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಮಾಜಿ ಎಂ ಡಿ ಶಂಕರಪ್ಪ ಅವರ ವಿರುದ್ಧದ 47.10 ಕೋಟಿ ಡಿ.ದೇವರಾಜ ಅಸರು ಟ್ರಕ್ ಟರ್ಮಿನಲ್ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಾಣಿಜ್ಯ ಪ್ರಚಾರ ಶಾಖೆಯ ಉಪನಿರ್ದೇಶಕರಾಗಿದ್ದ ಎಸ್. ಶಂಕರಪ್ಪ ಅವರು, ಡಿಡಿಯೂಟಿಟಿಎಲ್ ನಲ್ಲಿ ಎಂ ಡಿ ಅಗಿ ಕೆಲಸ ಮಾಡ್ತಿದ್ದರು. ಇವರ ಅಧಿಕಾರ ಅವಧಿಯಲ್ಲಿ ಅಕ್ರಮ ನಡೆದಿರುವ ಪುರಾವೆಗಳು ಲಭ್ಯವಾಗಿತ್ತು. ಡಿಡಿಯೂಟಿಟಿಎಲ್ 2021 ರಿಂದ 2023ರ ಅವಧಿಯಲ್ಲಿ ಅಕ್ರಮ ಎನ್ನಲಾದ ಅಕ್ರಮ ಬಗ್ಗೆ ಹಾಲಿ ಎಂಡಿ ಸಿ ಎನ್ ಶಿವಪ್ರಕಾಶ್ ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದರು. 2023 ಸೆಪ್ಟೆಂಬರ್ 23ರಂದು ಎಫ್ ಐ ಆರ್ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನ ರಾಜ್ಯ ಸರ್ಕಾರ ಸಿಐಡಿಗೆ ವಹಿಸಲಾಗಿತ್ತು. ಡಿಡಿಯೂಟಿಟಿಎಲ್ 2021 ಅಕ್ಟೋಬರ್ 25ರಂದು 194ನೇ…

Read More

ಶಿವಮೊಗ್ಗ: ಮಹರ್ಷಿ ವಾಲ್ಮೀಕ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಸಂಬಂಧ, ಸಿಐಡಿ ಅಧಿಕಾರಿಗಳು ಮೃತ ನೌಕರರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆಯಲ್ಲಿ ಅವರ ನಿವಾಸದಿಂದ ಡೆತ್ ನೋಟ್, ಪೆನ್ ಡ್ರೈವ್ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ವಿನೋಬನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಕೆಂಚಪ್ಪ ಲೇಔಟ್ ನಲ್ಲಿ ವಾಲ್ಮೀಕ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದಂತ ಚಂದ್ರಶೇಖರ್ ಡೆತ್ ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿತ್ತು. ಈ ಬೆನ್ನಲ್ಲೇ ಶಿವಮೊಗ್ಗದ ಮೃತ ನೌಕರನನ ಮನೆಗೆ ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಡಿವೈಎಸ್ಪಿ ಮೊಹಮ್ಮದ್ ರಫಿ ನೇತೃತ್ವದ ಆರು ಅಧಿಕಾರಿಗಳ ತಂಡ ಭೇಟಿ ನೀಡಿತು. ಮೃತ ಅಧಿಕಾರಿ ಚಂದ್ರಶೇಖರ್ ಅವರ ಪತ್ನಿಯೊಂದಿಗೆ ಸುಮಾರು 45 ನಿಮಿಷಗಳ ಕಾಲ ಚರ್ಚೆ ನಡೆಸಿತು. ಅವರಿಂದ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಹಿತಿಯನ್ನು ಪಡೆದರು. ಈ ಬಳಿಕ ಚಂದ್ರಶೇಖರ್ ಅವರಿಗೆ ಸಂಬಂಧಿಸಿದಂತ ಕೆಲ ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಮನೆಯಲ್ಲಿದ್ದಂತ…

Read More

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಇಂದು ಮತ್ತೆ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಏಕಕಾಲಕ್ಕೆ ಹಾಸನ ಜಿಲ್ಲೆಯ 3 ಕಡೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ನೋಂದಿಗೆ ಆಗಮಿಸಿರುವಂತ ಎಸ್ಐಟಿ ಪೊಲೀಸರು, ಹಾಸನ ಜಿಲ್ಲೆಯ 3 ಕಡೆ ದಾಳಿ ನಡೆಸಿದ್ದಾರೆ. ಹತ್ತಾರು ಅಧಿಕಾರಿಗಳ ತಂಡದಿಂದ ಮೂರು ಕಡೆ ಶೋಧಕಾರ್ಯ ನಡೆಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀ ವೀಡಿಯೋ ಪ್ರಕರಣ ಸಂಬಂಧ ಹೊಳೆನರಸೀಪುರ ರೇವಣ್ಣ ಮನೆ, ಹಾಸನದ ಎಂ.ಪಿ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಇದಲ್ಲದೇ ಚನ್ನರಾಯಪಟ್ಟಣದ ಗನ್ನಿಕಡ ತೋಟದ ಮನೆಯಲ್ಲೂ ಎಸ್ಐಟಿ ಶೋಧ ನಡೆಸುತ್ತಿದೆ. ಇನ್ಸ್ ಪೆಕ್ಟರ್ ರಾವ್ ಗಣೇಶ್, ಶೋಭಾ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ. ಎಫ್ ಎಸ್ ಎಲ್ ತಂಡದೊಂದಿಗೆ ಎಸ್ಐಟಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/breaking-three-arrested-for-smearing-ink-on-veer-savarkar-flyover-signboard/ https://kannadanewsnow.com/kannada/swati-maliwal-assault-case-arvind-kejriwals-aide-bibhav-kumars-police-custody-extended-for-3-days/

Read More

ನವದೆಹಲಿ: ದೆಹಲಿ ಮಹಿಳಾ ಆಯೋಗದ ಮಾಜಿ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರನ್ನು ದೆಹಲಿಯ ತಿಸ್ ಹಜಾರಿ ನ್ಯಾಯಾಲಯವು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಅಭಿನವ್ ಕುಮಾರ್ ಅವರ ನಾಲ್ಕು ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಸಂಬಂಧದ ಅರ್ಜಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ನಡೆಸಿದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಅಭಿನವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಐದು ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ನೀಡುವಂತೆ ಕೋರಿದ್ದರು. ಕುಮಾರ್ ಅವರ ಕಸ್ಟಡಿ ವಿಚಾರಣೆಗಾಗಿ ದೆಹಲಿ ಪೊಲೀಸರ ಮನವಿಯನ್ನು ಅವರ ವಕೀಲರು ವಿರೋಧಿಸಿದರು. ಅವರನ್ನು ವಿಚಾರಣೆಗೆ ಒಳಪಡಿಸೋದು ಏನು ಇಲ್ಲ ಅಂತ ವಾದಿಸಿದರು. ಅಂತಿಮವಾಗಿ ವಾದ, ಪ್ರತಿವಾದ ಆಲಿಸಿದಂತ ದೆಹಲಿ ತಿಸ್ ಹಜಾರಿ ನ್ಯಾಯಾಲಯವು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ…

Read More

ಬಳ್ಳಾರಿ : ಗ್ರಾಮೀಣ ಜೆಸ್ಕಾಂ ವಿಭಾಗದ ವ್ಯಾಪ್ತಿಯಲ್ಲಿ ಮಳೆಗಾಲ ಸಮಯದಲ್ಲಿ ವಿದ್ಯುತ್ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚಿದ್ದು, ಯಾವುದೇ ವಾಹಕಗಳು ತುಂಡಾಗಿ ಬಿದ್ದಲ್ಲಿ ಮತ್ತು ಕಂಬಗಳು ನೆಲಕ್ಕೆ ಉರುಳಿದ್ದಲ್ಲಿ ವಿದ್ಯುತ್ ಪರಿವರ್ತಕದ ಮೇಲೆ ಬೆಂಕಿ ಕಾಣಿಸಿಕೊಂಡರೆ, ವಿದ್ಯುತ್ ಗ್ರಾಹಕರು ಮುಂಜಾಗ್ರಾತರಾಗಿ ಯಾವುದೇ ವಿದ್ಯುತ್ ಸಂಪರ್ಕಕ್ಕೆ ಹೋಗದೇ ಈ ಕೆಳಕಂಡ ಜೆಸ್ಕಾಂ ಅಧಿಕಾರಿಗಳಿಗೆ ಸಂಪರ್ಕಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಂಗನಾಥಬಾಬು ಅವರು ತಿಳಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಉಪ ವಿಭಾಗ (ಬಳ್ಳಾರಿ ಗ್ರಾಮೀಣ ಮತ್ತು ಕುರುಗೋಡು ತಾಲ್ಲೂಕಿಗೆ ಸಂಬಂಧಪಟ್ಟ) ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊ.9448482161, ಘಟಕ-01 (ಕೋಳೂರು, ಕೊರ್ಲಗುಂದಿ, ಹರಗಿನಡೋಣಿ ಭಾಗದ ಗ್ರಾಮಗಳ) ಶಾಖಾಧಿಕಾರಿ ಮೊ.9449597337, ಘಟಕ-02 (ಎಸ್‍ಜೆ ಕೋಟೆ, ಶಂಕರಬಂಡೆ, ಮಿಂಚೇರಿ ಭಾಗದ ಗ್ರಾಮಗಳ) ಶಾಖಾಧಿಕಾರಿ ಮೊ.9449597338, ಘಟಕ-03 (ಗುಗ್ಗರಹಟ್ಟಿ, ಹಲಕುಂದಿ, ಅಂದ್ರಾಳ್ ಭಾಗದ ಗ್ರಾಮಗಳ) ಶಾಖಾಧಿಕಾರಿ ಮೊ.9449597351, ಕುಡತಿನಿ ಶಾಖಾಧಿಕಾರಿ ಮೊ.9449597345, ಮೋಕಾ ಶಾಖಾಧಿಕಾರಿ ಮೊ.9449597346, ಪಿ.ಡಿ ಹಳ್ಳಿ ಶಾಖಾಧಿಕಾರಿ ಮೊ.9449597352, ಕುರುಗೋಡು…

Read More

ಬಳ್ಳಾರಿ : ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅವಶ್ಯವಿರುವ ಬಿತ್ತನೆ ಬೀಜಗಳಾದ ತೊಗರಿ, ಸಜ್ಜೆ, ನವಣೆ, ಜೋಳ, ಮೆಕ್ಕೆಜೋಳ, ಶೇಂಗಾ ಮುಂತಾದ ಬಿತ್ತನೆ ಬೀಜಗಳು ದಾಸ್ತಾನೀಕರಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ರೈತರು ಸಹಾಯಧನದಡಿ ಬಿತ್ತನೆ ಬೀಜ ಪಡೆಯಲು ತಮ್ಮ ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ಪುಸ್ತಕ ಪ್ರತಿ, ಪಹಣಿ ಹಾಗೂ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ರೈತರು ಖಾಸಗಿ ಮಳಿಗೆಯಲ್ಲಿ ಬಿತ್ತನೆ ಬೀಜ ಖರೀದಿಸಿದರೆ ಕಡ್ಡಾಯವಾಗಿ ರಶೀದಿಯನ್ನು ಪಡೆಯಬೇಕು. ಬಿತ್ತನೆ ಬೀಜಗಳನ್ನು ಬಿತ್ತುವ ಮುನ್ನ ಬೀಜೋಪಚಾರ ಮಾಡುವುದರಿಂದ ಮುಂದೆ ಸಂಭವಿಸಬಹುದಾದ ರೋಗ ಹಾಗೂ ಕೀಟಭಾದೆ ತಡೆಗಟ್ಟಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/head-constable-suspended-for-throwing-oil-party-at-police-station/ https://kannadanewsnow.com/kannada/breaking-three-arrested-for-smearing-ink-on-veer-savarkar-flyover-signboard/

Read More

ಬೆಳಗಾವಿ: ನಿನ್ನೆ ರಾತ್ರಿ ಪೊಲೀಸ್ ಠಾಣೆಯಲ್ಲೇ ಭರ್ಜರಿ ಎಣ್ಣೆ ಪಾರ್ಟಿಯನ್ನು ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಒಬ್ಬರು ಮಾಡಿದ್ದರು. ಈ ಎಲ್ಲಾ ಪೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಹೆಡ್ ಕಾನ್ಸ್ ಸ್ಟೇಬಲ್ ಅನ್ನು ಅಮಾನತುಗೊಳಿಸಿ ಎಸ್ ಪಿ ಆದೇಶಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ ಸ್ಟೇಬಲ್ ರಾಮಚಂದ್ರಪ್ಪ ಎಂಬುವರು ಎಣ್ಣೆ ಪಾರ್ಟಿ ಮಾಡಿದ್ದರು. ಪೊಲೀಸ್ ಠಾಣೆಯಲ್ಲಿ ಮದ್ಯ ಸೇವನೆ ಮಾಡಿದ ಖಾಲಿ ಬಾಟಲಿಗಳು ಟೇಬಲ್ ಮೇಲೆ ಇದ್ದಂತ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ತನಿಖೆಗೆ ಸೂಚಿಸಿದ್ದರು. ಈ ತನಿಖೆಯಲ್ಲಿ ನಿನ್ನೆ ರಾತ್ರಿ ಅಂಕಲಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ರಾಮಚಂದ್ರಪ್ಪ ಎಣ್ಣೆ ಪಾರ್ಟಿ ಮಾಡಿದ್ದು ಖಚಿತಗೊಂಡಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ್ದಾರೆ. https://kannadanewsnow.com/kannada/no-question-of-protecting-anyone-in-valmiki-nigam-case-minister-b-nagendra/ https://kannadanewsnow.com/kannada/breaking-three-arrested-for-smearing-ink-on-veer-savarkar-flyover-signboard/

Read More

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ನಿಗಮದ ಕೇಂದ್ರ ಕಛೇರಿಯ ಅಧೀಕ್ಷಕರಾದ ಚಂದ್ರಶೇಖರ್ ರವರ ಆತ್ಮಹತ್ಯೆ ಪ್ರಕರಣ ನನಗೆ ಅತೀವ ನೋವು ತಂದಿದೆ ಈ ಹಣ ದುರುಪಯೋಗ ಪ್ರಕರಣದಲ್ಲಿ ನಮ್ಮ ಇಲಾಖೆ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳು ಯಾರೇ ಇರಲಿ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರ ತಿಳಿಸಿದರು. ಮಂಗಳವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮುಖ್ಯ ಖಾತೆಯಲ್ಲಿ ಹಿಂದಿನ ಸಾಲಿನ ಹಾಗೂ 2024-25 ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ಮೊತ್ತದಲ್ಲಿ 88 ಕೋಟಿ ಹಣವನ್ನು ನನಗೆ ಹಾಗೂ ನಿಗಮದ ಅಧ್ಯಕ್ಷರ ಗಮನಕ್ಕೂ ಬಾರದೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ…

Read More