Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವಂತ ಬ್ಯಾಕ್ ಲಾಗ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ವಿಶ್ವವಿದ್ಯಾಲಯಗಳ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿಯೇ ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1883126765201293347 https://kannadanewsnow.com/kannada/did-you-continue-to-eat-bananas-till-780000-complaints-were-received/ https://kannadanewsnow.com/kannada/breaking-wife-commits-suicide-over-husbands-loan-in-chamarajanagar/
ಶಿವಮೊಗ್ಗ: ರಾಷ್ಟ್ರದ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ತೊಡಗಿರುವ ಯುವ ಮತದಾರರನ್ನು ಸಶಕ್ತಗೊಳಿಸುವುದು ಅತ್ಯಗತ್ಯ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಎ.ಎಲ್.ಮಂಜುನಾಥ್ ಅಭಿಪ್ರಾಯಪಟ್ಟರು. ವಿಶ್ವವಿದ್ಯಾಲಯದ ಪಠ್ಯೇತರ ಚಟುವಟಿಕೆ ವಿಭಾಗ ಶನಿವಾರ ಜ್ಞಾನಸಹ್ಯಾದ್ರಿ ಆವರಣದಲ್ಲಿ ಏರ್ಪಡಿಸಿದ್ದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ಯಲ್ಲಿ ಪ್ರತಿಜ್ಞಾವಿಧಿಯನ್ನು ಬೋಧಿಸಿ ಅವರು ಮಾತನಾಡಿದರು. ಮತದಾನ ಪ್ರಕ್ರಿಯೆಯಲ್ಲಿ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು. ಪ್ರತಿಯೊಬ್ಬ ನಾಗರಿಕನು ಮತದಾನದ ಮೂಲಭೂತ ಹಕ್ಕನ್ನು ಹೊಂದಿದ್ದಾನೆ. ರಾಷ್ಟ್ರವನ್ನು ಪ್ರಗತಿಯತ್ತ ಕೊಂಡೊಯ್ಯುವ ಮತ್ತು ಸಾಮಾನ್ಯ ಜನರ ಕಾಳಜಿಯನ್ನು ಪರಿಹರಿಸುವ ಸಾಮರ್ಥ್ಯವನ್ನು ಹೊಂದಿರುವ ನಾಯಕರನ್ನು ಆಯ್ಕೆ ಮಾಡುವ ಅರಿವು ಎಲ್ಲರಿಗೂ ಇರಬೇಕು. ಸರಿಯಾದ ನಾಯಕರನ್ನು ಆಯ್ಕೆ ಮಾಡುವಲ್ಲಿ ನಾಗರಿಕರು ಸಕ್ರಿಯವಾಗಿ ಭಾಗವಹಿಸದಿದ್ದರೆ, ಒಂದು ದೇಶದ ಅಭಿವೃದ್ಧಿ ಮತ್ತು ಪ್ರಗತಿಗೆ ಅಡ್ಡಿಯಾಗುತ್ತದೆ. ಪ್ರಮುಖ ಯೋಜನೆಗಳು, ರಸ್ತೆಗಳು ಮತ್ತು ವಿದ್ಯುತ್ ಸಂಪರ್ಕಗಳಂತಹ ಮೂಲಸೌಕರ್ಯದ ಒದಗಿಸುವಲ್ಲಿ ನಾಯಕರು ಪ್ರಮುಖ ಪಾತ್ರ ವಹಿಸುತ್ತಾರೆ. ಹಾಗಾಗಿ ಮುಂಬರುವ ಪೀಳಿಗೆಗೆ ದೃಢವಾದ ಅಡಿಪಾಯವನ್ನು ಸ್ಥಾಪಿಸಲು ಯುವಕರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಅಗತ್ಯವಾಗಿದೆ ಎಂದರು. ಶಿಕ್ಷಣ ನಿಕಾಯದ ಡೀನ್ ಡಾ.ಜಗನ್ನಾಥ್…
ಬೆಂಗಳೂರು: ಮೀಟರ್ ಬಡ್ಡಿ ಸಂಗ್ರಹದ ದೂರುಗಳ ಕುರಿತು ಕೈಗೊಂಡ ಕ್ರಮದ ವಿಷಯದಲ್ಲಿ ರಾಜ್ಯ ಸರಕಾರ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಒತ್ತಾಯಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, 7 ಲಕ್ಷದ 80 ಸಾವಿರಕ್ಕೂ ಹೆಚ್ಚು ದೂರುಗಳು ಬರುವವರೆಗೂ ನೀವು ಬಾಳೆಹಣ್ಣು ತಿನ್ನುತ್ತಾ ಇದ್ರಾ? ಎಷ್ಟು ಕ್ರಮ ಕೈಗೊಂಡಿದ್ದೀರಿ? ಎಷ್ಟು ಜನರನ್ನು ಬಂಧಿಸಿದ್ದೀರಿ ಎಂದು ಪ್ರಶ್ನಿಸಿದರು. ಬೆಳಗಾವಿ ಒಂದೇ ಜಿಲ್ಲೆಯಲ್ಲಿ ಗರಿಷ್ಠ ಅಂದರೆ 2,71,466 ದೂರುಗಳು, ಬಾಗಲಕೋಟೆ ಜಿಲ್ಲೆಯಲ್ಲಿ 89,087, ಬಿಜಾಪುರ-75 ಸಾವಿರ, ಮಂಡ್ಯ ಜಿಲ್ಲೆಯಲ್ಲಿ 42,500,- ಹೀಗೆ ಕರ್ನಾಟಕದಾದ್ಯಂತ ಜನರು ನಮ್ಮನ್ನು ಶೋಷಿಸುತ್ತಿದ್ದಾರೆ; ದೌರ್ಜನ್ಯ ನಡೆದಿದೆ ಎಂದು ದೂರು ಕೊಟ್ಟಿದ್ದಾರೆ. ಮನೆ ಖಾಲಿ ಮಾಡಿಸಿದ, ಮನೆಗೆ ಬೀಗ ಹಾಕಿದ ದೂರುಗಳೂ ಇವೆ ಎಂದು ವಿವರಿಸಿದರು. ಮೀಟರ್ ಬಡ್ಡಿ ಹಾವಳಿಯಿಂದ ಬಡವರು ಮನೆಗಳು, ಹಳ್ಳಿಗಳನ್ನು ಖಾಲಿ ಮಾಡಿ ತೆರಳುತ್ತಿದ್ದಾರೆ. ಬಡ್ಡಿ ವ್ಯವಹಾರ ಮಾಡುವವರು ದೌರ್ಜನ್ಯ ಮಾಡಿ, ಬಾರುಕೋಲಿನಿಂದ ಹೊಡೆದಿದ್ದಾರೆ.…
ಬೆಂಗಳೂರು : ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ. ಮುಂಬರುವ ಫೆಬ್ರವರಿ 1ರಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ಈ ಬಜೆಟ್ ನಲ್ಲಿ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯವಾಗಿರುವ ಆರ್ಥಿಕ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. “ಬೆಂಗಳೂರು ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಂತ್ರಜ್ಞಾನ ಪ್ರಗತಿ ಹಾಗೂ ಬಂಡವಾಳ ಹೂಡಿಕೆ ಆಕರ್ಷಣೆಯ ತಾಣವಾಗಿ ಬೆಳೆಯುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ಮೂಲಕ ಬೆಂಗಳೂರು ಜಾಗತಿಕ ನಗರವಾಗಿ ರೂಪುಗೊಂಡಿದ್ದು, ದೇಶದ ಯುವಕರಿಗೆ ಉದ್ಯೋಗ ಸೃಷ್ಟಿಸಿ, ಆರ್ಥಿಕ ಪ್ರಗತಿಗೆ ನೆರವಾಗಿದೆ. ಬೆಂಗಳೂರು ನಿರೀಕ್ಷೆಗೂ ಮೀರಿ ಬೆಳೆಯುತ್ತಿರುವ ಪರಿಣಾಮ, ನಗರದ ಜನಸಂಖ್ಯೆ 1.50 ಕೋಟಿ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಅಮೆರಿಕದ ಮ್ಯಾಡಿಸನ್ ಕೀಸ್ ಶನಿವಾರ ಹಾಲಿ ಚಾಂಪಿಯನ್ ಆರ್ನಾ ಸಬಲೆಂಕಾ ಅವರನ್ನು ಮೂರು ಸೆಟ್ ಗಳ ರೋಚಕ ಪಂದ್ಯದಲ್ಲಿ ಸೋಲಿಸಿ 2025 ರ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದರು. ಇದು ಅವರ ವೃತ್ತಿಜೀವನದ ಮೊದಲ ಗ್ರ್ಯಾಂಡ್ ಸ್ಲಾಮ್ ಆಗಿದೆ. ಕೀಸ್ 6-3, 2-6, 7-5 ಸೆಟ್ ಗಳಿಂದ ಹರ್ಕ್ಯುಲಸ್ ಮೂರು ಸೆಟ್ ಗಳ ಹೋರಾಟದ ನಂತರ ಜಯಗಳಿಸಿದರು, ಅಂತಿಮವಾಗಿ ವಿಶ್ವದ 19 ನೇ ಶ್ರೇಯಾಂಕಿತ ಆಟಗಾರ ಅಂತಿಮವಾಗಿ ಮೂರು ಬಾರಿ ಗ್ರ್ಯಾಂಡ್ ಸ್ಲಾಮ್ ವಿಜೇತರನ್ನು ಹೊರಹಾಕುವುದರೊಂದಿಗೆ ಕೊನೆಗೊಂಡಿತು. ಫೈನಲ್ ತಲುಪಿದ್ದ ಸಬಲೆಂಕಾ ನಾಲ್ಕನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಾಗಿ ಹುಡುಕಾಟ ನಡೆಸುತ್ತಿದ್ದರೆ, ಸೆಮಿಫೈನಲ್ ನಲ್ಲಿ ಓಪನ್ ಫೇವರಿಟ್ ಇಗಾ ಸ್ವೈಟೆಕ್ ಅವರನ್ನು ಸೋಲಿಸಿದ ಹಸಿದ ಅಮೆರಿಕನ್ ಕೀಸ್ ತನ್ನ ಮೊದಲ ಓಪನ್ ಪ್ರಶಸ್ತಿ ಗೆಲುವಿನ ಬಳಿಕ ಕಣ್ಣಿಟ್ಟಿದ್ದರು. ಕೀಸ್ ಮತ್ತು ಸಬಲೆಂಕಾ ಈ ಹಿಂದೆ ಐದು ಬಾರಿ ಭೇಟಿಯಾಗಿದ್ದರು. ಬೆಲಾರಸ್ ಆಟಗಾರ ನಾಲ್ಕು ಬಾರಿ ಗೆದ್ದಿದ್ದರು, ಇತ್ತೀಚೆಗೆ ಕಳೆದ…
ಬೆಂಗಳೂರು: ನಗರದ ಪ್ರತಿಷ್ಠಿತ ಮಾಲ್ ಆಗಿರುವಂತ ಮಂತ್ರಿ ಮಾಲ್ 2ನೇ ಮಹಡಿಯಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವಂತ ಮಂತ್ರಿಮಾಲ್ ನ 2ನೇ ಮಹಡಿಯಿಂದ ಮಂಜುನಾಥ್ ಎಂಬುವರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 2 ಕೋಟಿ ಸಾಲ ಮಾಡಿಕೊಂಡಿದ್ದಂತ ಅವರು, ಸಾಲದ ಬಾಧೆ ತಾಳರಾರದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. 2 ಕೋಟಿ ಸಾಲದ ಬಾಧೆಯನ್ನು ತಾಳಲಾರದೇ ಮಂಜುನಾಥ್ ಮಲ್ಲೇಶ್ವರಂನಲ್ಲಿರುವಂತ ಮಂತ್ರಿ ಮಾಲ್ ನ 2ನೇ ಮಹಡಿಯಿಂದ ಹಾರಿ ಜನವರಿ.23, 2025ರ ರಾತ್ರಿ 8.30ರವ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ. https://kannadanewsnow.com/kannada/21-karnataka-police-personnel-conferred-with-presidents-medal/ https://kannadanewsnow.com/kannada/pm-home-minister-duo-severely-compromised-ecs-independence-congress/
ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕದ 21 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರಪತಿ ಪದಕದ ಗೌರವಕ್ಕೆ ಪಾತ್ರರಾಗಿದ್ದಾರೆ. ಇಬ್ಬರಿಗೆ ವಿಶಿಷ್ಟ ಸೇವಾ ಪದಕ ದೊರೆತರೇ, ಮಿಕ್ಕವರಿಗೆ ಶ್ಲಾಘನೀಯ ಸೇವಾ ಪದಕ ದೊರೆತಿದೆ. ಜನವರಿ 26ರ ಗಣರಾಜ್ಯೋತ್ಸವದಂದು ಕೊಡಲಾಗುವಂತ ರಾಷ್ಟ್ರಪತಿ ಪದಕ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಕರ್ನಾಟಕದ 21 ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ರಾಷ್ಟ್ರಪತಿ ಪದಕದ ಗೌರವ ಸಂದಿದೆ. ಇಬ್ಬರಿಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಹಾಗೂ 19 ಮಂದಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಪಾತ್ರರಾಗಿದ್ದಾರೆ. ಹೀಗಿದೆ ವಿಶಿಷ್ಟ ಸೇವಾ ಪದಕ ಪುರಸ್ಕೃತರ ಪಟ್ಟಿ ಬಸವರಾಜ ಶರಣಪ್ಪ ಜಿಳ್ಳೆ, ಡಿಐಜಿಪಿ, ಕೆ ಎಸ್ ಆರ್ ಪಿ, ಬೆಂಗಳೂರು ಹಂಜಾ ಹುಸೇನ್, ಕಮಾಂಡೆಂಟ್, ಕೆ ಎಸ್ ಆರ್ ಪಿ, ತುಮಕೂರು ಹೀಗಿದೆ ಶ್ಲಾಘನೀಯ ಸೇವಾ ಪದಕ ಪುರಸ್ಕೃತರ ಪಟ್ಟಿ ರೇಣುಕಾ ಕೆ ಸುಕುಮಾರ, ಡಿಐಜಿಪಿ, ಡಿಸಿಆರ್ಇ, ಬೆಂಗಳೂರು ಸಂಜೀವ ಎಂ ಪಾಟೀಲ್, ಎಐಜಿಪಿ, ಜನರಲ್, ಪೊಲೀಸ್ ಪ್ರಧಾನ ಕೇಂದ್ರ ಕಚೇರಿ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಬಳಿಕ ನಡೆಸಿದ ಸುದ್ದಿಗೋಷ್ಠಿಯ ಮುಖ್ಯಾಂಶಗಳನ್ನು ಈ ಕೆಳಗಿದೆ ಓದಿ. • ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ. • ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶ. • ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮ. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು ಕ್ರಮ. ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು. • ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ. ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ.…
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಬೆನ್ನಲ್ಲೇ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ. ಹೊಸ ಕಾನೂನು ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ಹೇಳಿದ್ದಾರೆ. ಅನಧಿಕೃತವಾಗಿ ವ್ಯವಹಾರ ನಡೆಸುತ್ತಿರುವಂತ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಹೊಸ ಕಾನೂನನ್ನು ಕೂಡಲೇ ಜಾರಿಗೊಳಿಸುತ್ತೇವೆ. ಮೆಕ್ರೋ ಫೈನಾನ್ಸ್ ಅಟ್ಟಹಾಸಕ್ಕೆ ಬ್ರೇಕ್ ಹಾಕಲಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ. ಮೈಕ್ರೋ ಫೈನಾನ್ಸ್ ಗಳು ಆರ್ ಬಿ ಐ ನಿಯಮಗಳ ಅಡಿಯಲ್ಲಿ ಬರುತ್ತವೆ. ಹೀಗಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಸಲಹೆ ಪಡೆಯುತ್ತೇವೆ. ಸಾಲ ಕೊಡಬೇಡಿ ಎಂದು ಯಾರಿಗೂ ಹೇಳುವುದಿಲ್ಲ. ಆದರೇ ವಸೂಲಿ ಮಾಡುವಾಗ ಕಿರುಕುಳ ಕೊಡಬಾರದು. ಆರ್ ಬಿ ಐ ನಿಯಮದಂತೆ ನಡೆದುಕೊಳ್ಳಬೇಕು.…
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಏಪ್ರಿಲ್ ಅಂತ್ಯಕ್ಕೆ 3000 ಲೈನ್ ಮೆನ್ ಹುದ್ದೆಗಳ ನೇಮಕಕ್ಕೆ ನಿರ್ಧರಿಸಲಾಗಿದೆ ಅಂತ ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ಖಾಲಿ ಇರುವ 3 ಸಾವಿರ ಲೈನ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಬರುವ ಏಪ್ರಿಲ್‌ನೊಳಗೆ ನೇಮಕಾತಿ ಪ್ರಕ್ರಿಯೆ ಮುಗಿಯಲಿದೆ. ಮೊದಲ ಬಾರಿಗೆ ಇಡೀ ರಾಜ್ಯದಲ್ಲಿ ಒಂದೇ ದಿನ ದೈಹಿಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಬಳಿಕ ಎಇಇ, ಜೆಇ ಸೇರಿದಂತೆ ಇತರೆ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲಾಗುವುದು ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. https://twitter.com/KarnatakaVarthe/status/1882785562681303234 https://kannadanewsnow.com/kannada/the-state-government-has-decided-to-promulgate-an-ordinance-to-regulate-the-use-and-use-of-the-land-of-the-palace-grounds-in-bengaluru/ https://kannadanewsnow.com/kannada/cnn-to-lay-off-200-jobs-cnn-layoffs/