Subscribe to Updates
Get the latest creative news from FooBar about art, design and business.
Author: kannadanewsnow09
ಮಧ್ಯಪ್ರದೇಶ: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಂತ ವ್ಯಕ್ತಿಗೆ ಎಷ್ಟೇ ಎಚ್ಚರಿಕೆ ನೀಡಿದರೂ, ತನ್ನ ಚಾಳಿಯನ್ನು ಮುಂದುವರೆಸಿದ್ದನು. ಈ ಸಿಟ್ಟಿನಿಂದ ಪತ್ನಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಂತ ಬಾಯ್ ಫ್ರೆಂಡ್ ಜನನಾಂಗವನ್ನೇ ಕತ್ತರಿಸಿ ಠಾಣೆಗೆ ತಂದಂತ ಪತಿಯೊಬ್ಬ, ಪೊಲೀಸರ ಮುಂದೆ ಶರಣಾಗಿದ್ದಾನೆ. ಮಧ್ಯಪ್ರದೇಶದ ಇಂದೋರ್ ನ ದೆಹರಿ ಗ್ರಾಮದಲ್ಲಿ ಇಂತಹ ಘಟನೆ ನಡೆದಿದೆ. ಈಶ್ವರ್ ಸಿಂಗ್ ಎಂಬಾತ ಕಾಲು ಸಿಂಗ್ ಎಂಬುವರ ಪತ್ನಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದನು. ಈ ಕಾರಣಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿ, ಎಚ್ಚರಿಕೆಯನ್ನು ನೀಡಲಾಗಿತ್ತು. ಆದರೇ ಇದಕ್ಕೂ ಡೋಂಟ್ ಕೇರ್ ಎನ್ನುವಂತೆ ಕಾಲು ಸಿಂಗ್ ಪತ್ನಿಯೊಂದಿಗೆ ಅಕ್ರಮ ಸಂಬಂಧ ಮುಂದುವರೆಸಿದ್ದನು. ಇಂದು ಕಾಲು ಸಿಂಗ್ ತನ್ನ ನಾಲ್ವರು ಸ್ನೇಹಿತರೊಂದಿಗೆ ಈಶ್ವರ್ ಸಿಂಗ್ ಹಿಡಿದು, ಆತನ ಜನನಾಂಗವನ್ನೇ ಕತ್ತರಿಸಿದ್ದಾನೆ. ಕತ್ತರಿಸಿದಂತ ಜನನಾಂಗದೊಂದಿಗೆ ಬರೋಡ್ ಪೊಲೀಸ್ ಠಾಣೆಗೆ ತೆರಳಿ ಕಾಲು ಸಿಂಗ್ ಪೊಲೀಸರ ಮುಂದೆ ಶರಣಾಗಿದ್ದಾನೆ. ಇನ್ನೂ ಜನನಾಂಗ ಕತ್ತರಿಸಿದ್ದರಿಂದ ಗಾಯಗೊಂಡಿದ್ದಂತ ಈಶ್ವರ್ ಸಿಂಗ್ ನನ್ನು ಆಸ್ಪತ್ರೆಗೆ ದಾಖಲಿಸಿ…
ಬೆಂಗಳೂರು: ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಜನಿವಾರ ತೆಗೆಯಬೇಕು ಎಂಬ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಅತಿರೇಖದ ವರ್ತನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನೂ ಸರ್ಕಾರ ಹೊರಡಿಸಿಲ್ಲ. ಈ ಬಗ್ಗೆ ಕೆಇಎ ಅಧಿಕಾರಿಗಳು ಹಾಗು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ. ಇಂತಹ ಅತಿರೇಖದ ವರ್ತನೆ ತೋರಿ, ವಿದ್ಯಾರ್ಥಿಗಳಿಗೆ ಹಾಗು ಬ್ರಾಹ್ಮಣ ಸಮುದಾಯಕ್ಕೆ ಅಪಚಾರ ಎಸಗಿದ ಅಧಿಕಾರಿಯ ವಿರುದ್ಧ ಸರ್ಕಾರ ಶಿಸ್ತುಕ್ರಮ ಕೈಗೊಳ್ಳಲಿದೆ. ಕಾನೂನು ನಿರ್ವಹಿಸುವ ವೇಳೆ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಬೇಕು ಮತ್ತು ಅನಗತ್ಯ ಗೊಂದಲಗಳಿಗೆ ಆಸ್ಪದ ಮಾಡಿಕೊಡಬಾರದು ಎಂದಿದ್ದಾರೆ. ಈ ಕಾರ್ಯನಿರ್ವಹಣೆಯಲ್ಲಿ ಯಾವುದೇ ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕೇ ವಿನಃ ಮನಸೋ ಇಚ್ಛೆ ವರ್ತಿಸಿ ಸಮಾಜದ ಸ್ವಾಸ್ತ್ಯ ಕೆಡಿಸಿದರೆ ಅದಕ್ಕೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ. https://twitter.com/dineshgrao/status/1913195005487010114 https://kannadanewsnow.com/kannada/shimoga-dc-orders-suspension-of-two-home-guards-for-removing-janivara/ https://kannadanewsnow.com/kannada/shocking-man-chops-off-wifes-lovers-genitals-brings-him-to-police-station/
ಶಿವಮೊಗ್ಗ: ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ ನಡೆದ ಜನಿವಾರ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಜನಿವಾರ ಪ್ರಕರಣದ ಕುರಿತು ಸಂಬಂಧ ಪಟ್ಟ ಅಧಿಕಾರಿಗಳ ವಿಚಾರಣೆ ಹಾಗೂ ಸಿಸಿ ಟಿವಿ ವಿಡಿಯೋವನ್ನು ಸಂಪೂರ್ಣವಾಗಿ ಪರಿಶೀಳಿಸಲಾಗಿದೆ. ಸಿಸಿ ಟಿವಿ ವಿಡಿಯೋದಲ್ಲಿ ಒಬ್ಬ ವಿದ್ಯಾರ್ಥಿ ಬರುತ್ತಾರೆ, ಇಬ್ಬರು ಸೆಕ್ಯೂರಿಟಿಗಳಿಗೆ ಆ ವಿದ್ಯಾರ್ಥಿಯೇ ಜನಿವಾರ ತೆಗೆದು ತೋರಿಸುತ್ತಾರೆ. ಇದಕ್ಕೆ ಅನುಮತಿ ಇದೆಯೇ ಎಂದಾಗ, ಆಗ ಸೆಕ್ಯೂರಿಟಿರವರು ಇಲ್ಲ ಎನ್ನುತ್ತಾರೆ. ಆ ವಿದ್ಯಾರ್ಥಿಯೇ ಪಕ್ಕಕ್ಕೆ ಹೋಗಿ ಜನಿವಾರ ತೆಗೆದುಕೊಂಡು ಬರುತ್ತಾರೆ. ಇನ್ನೂರ್ವ ವಿದ್ಯಾರ್ಥಿ ಬಂದಾಗ ಸೆಕ್ಯೂರಿಟಿರವರು ಜನಿವಾರ ಹಾಕಿಕೊಂಡು ಪರೀಕ್ಷಾ ಕೊಠಡಿಗೆ ಅವಕಾಶ ಇಲ್ಲ ಎಂದಾಗ, ವಿದ್ಯಾರ್ಥಿ ಇಲ್ಲ ನಾನು ಜನಿವಾರ ತೆಗೆಯುವುದಿಲ್ಲ ಎಂದು ಪರೀಕ್ಷಾರ್ಥಿಯನ್ನು ಸೆಕ್ಯೂರಿಟಿರವರು ಪರೀಕ್ಷಾ ಕೇಂದ್ರದ ಒಳಗೆ ಬಿಡದೆ ಅಲ್ಲೆ ಕೂರಿಸುತ್ತಾರೆ. ಆಗ ಕಾಲೇಜಿನ ಪ್ರಾಂಶುಪಾಲರು ಅಲ್ಲಿ ಬಂದು ವಿದ್ಯಾರ್ಥಿ ಕುಳಿತು ಕೊಂಡಿರುವ ಕುರಿತು ವಿಚಾರಿಸಿದಾಗ ಜನಿವಾರದ…
ಬೆಂಗಳೂರು: ರಾಜ್ಯಾಧ್ಯಂತ ನಡೆಯುತ್ತಿದ್ದಂತ ಲಾರಿ ಮುಷ್ಕರ ಅಂತ್ಯಗೊಂಡಿದೆ. ಕೇವಲ ಎರಡು ದಿನಗಳೊಳಗೆ ಮುಷ್ಕರಕ್ಕೆ ತೆರೆಬಿದ್ದಿದೆ. ಹೀಗೆ ತೆರೆ ಬೀಳೋದರ ಹಿಂದಿನ ಗುಟ್ಟೇನು ಎಂಬುದೇ ಈಗ ಹಾಟ್ ಟಾಪಿಕ್. ಅಲ್ಲದೇ ಸಚಿವ ರಾಮಲಿಂಗಾರೆಡ್ಡಿ ಚಾಣಾಕ್ಯತೆಯೇ ಇದಕ್ಕೆ ಕಾರಣವೆಂದೇ ಹೇಳಲಾಗುತ್ತಿದೆ. ಆ ಬಗ್ಗೆ ಮುಂದೆ ಓದಿ. ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರವನ್ನು ರಾಜ್ಯ ಲಾರಿ ಮಾಲೀಕರ ಹಾಗೂ ಏಜೆಂಟರ ಸಂಘ ಗುರುವಾರ ವಾಪಸ್ ಪಡೆಯಲಾಗಿದೆ. ಮೊದಲನೇ ದಿನ ಸುಮಾರು ಸ್ವಲ್ಪಮಟ್ಟಿಗೆ ಯಶಸ್ಸು ಕಂಡಿದ್ದ ಮುಷ್ಕರ, ಆದರೆ ಚೆನ್ನಾರೆಡ್ಡಿ ಲಾರಿ ಮಾಲೀಕರ ಮತ್ತೊಂದು ಬಣ ಬಹಿರಂಗವಾಗಿ ಸದರಿ ಮುಷ್ಕರಕ್ಕೆ ಬೆಂಬಲ ನೀಡದೇ ಇದ್ದ ಕಾರಣದಿಂದಾಗಿ ಎರಡನೇ ದಿನಕ್ಕೆ ಮುಷ್ಕರವು ತನ್ನ ವೇಗವನ್ನು ಕಳೆದುಕೊಂಡು ಸಹಜ ಸ್ಥಿತಿಗೆ ಬರಲು ಪ್ರಾರಂಭವಾದ ಕಾರಣ. .ಜಿ.ಆರ್ ಷಣ್ಮುಖಪ್ಪರವರು ಸಾರಿಗೆ ಸಚಿವರನ್ನು ತಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಲು ಭೇಟಿ ಮಾಡಿದರು. ಹೇಗಿದ್ದರೂ ಮಾರನೆ ದಿನ ಮತ್ತಷ್ಟು ಸಹಜ ಸ್ಥಿತಿಗೆ ಬರುತ್ತಿದ್ದ ಮುಷ್ಕರವು ತಮ್ಮ ಕೈತಪ್ಪಲಿದೆ ಎಂಬುದನ್ನು ಅರಿತ ಸಂಘಟಕರು ಮಾತುಕತೆಗೆ…
ಬೆಂಗಳೂರು: ಜಾತಿಗಣತಿ ವರದಿ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಲು ಸಚಿವರಿಗೆ ಹೇಳಿದ್ದಾರೆ. ಮೊನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಎಲ್ಲರು ಚರ್ಚೆಯಲ್ಲಿ ಭಾಗವಹಿಸಿದ್ದರು. ಚರ್ಚೆ ಮುಂದುವರಿದಿದ್ದು ಅವರವರ ಅಭಿಪ್ರಾಯ ತಿಳಿಸಲಿದ್ದಾರೆ. ಎಲ್ಲರ ಅಭಿಪ್ರಾಯ ಕೇಳಿದ ಬಳಿಕ ಸರ್ಕಾರ ಅಂತಿಮ ತೀರ್ಮಾನ ತಗೆದುಕೊಳ್ಳಲಿದೆ. ಇದು ಒಬ್ಬರ ತೀರ್ಮಾನ ಅಗುವುದಿಲ್ಲ. ಕ್ಯಾಬಿನೆಟ್ ತೀರ್ಮಾನ ಅಗುತ್ತದೆ. ಇದು ಮುಖ್ಯಮಂತ್ರಿಯೊಬ್ಬರ ತೀರ್ಮಾನವೂ ಅಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು. ಪ್ರತಿ ಪಕ್ಷಗಳ ಟೀಕೆಗಳನ್ನು ಗಮನಿಸಿದ್ದೇವೆ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಿರುವುದು ಯಾವ ಸಮುದಾಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ತಿಳಿಸುವುದು. ಸ್ವಾಭಾವಿಕವಾಗಿ ಯಾವ ಸಮುದಾಯ ಎಷ್ಟೆಷ್ಟು ಜನಸಂಖ್ಯೆ ಇದೆ ಎಂಬ ಅಂಕಿ-ಅಂಶಗಳನ್ನು ಸರ್ಕಾರಕ್ಕೆ ಕೊಟ್ಟಿದ್ದಾರೆ. ಅದರ ಮೇಲೆ ಚರ್ಚೆಯಾಗುತ್ತಿದೆ. ಅಂತಿಮವಾಗಿ ಸರ್ಕಾರ ಒಪ್ಪಬೇಕು. ಮುಂದೆ ಯೋಜನೆಗಳನ್ನು ಮಾಡಬೇಕು ಎಂದು ಅಭಿಪ್ರಾಯಪಟ್ಟರು. ಕೆಲ ಸಮುದಾಯದವರು ತಮ್ಮ ಆತಂಕವನ್ನು ವ್ಯಕ್ತ ಮಾಡಿದ್ದಾರೆ. ವರದಿಯನ್ನು ನಾನು ಓದಿದ್ದೇನೆ…
ಬೆಂಗಳೂರು : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಅಧಿಕಾರಿಗಳನ್ನು ಕೇಳಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಯಾಳುವನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದರು. ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಳೆದ ವರ್ಷಕ್ಕೆ ಹೋಲಿಸಿದರೆ ಎಲ್ಲ ಪ್ರಕರಣಗಳು ಕಡಿಮೆಯಾಗಿವೆ.ಸೈಬರ್ ಪ್ರಕರಣಗಳು ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲ ಎಂದರೆ ಯಾವ ಆಧಾರದ ಮೇಲೆ ಹೇಳುವುದು. ಈ ಬಗ್ಗೆ ಆರೋಪ ಮಾಡುವವರು ಸ್ವಲ್ಪ ಯೋಚಿಸಿ ಮಾತನಾಡಬೇಕು ಎಂದು ಎಚ್ಚರಿಸಿದರು
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯಲು ನಾಲ್ವರು ಬ್ರಾಹ್ಮಣ ವಿದ್ಯಾರ್ಥಿಗೆ ತಮ್ಮ ಪವಿತ್ರ ದಾರವನ್ನು (ಜನಿವಾರ) ತೆಗೆಯುವಂತೆ ಹೇಳಿದ ನಂತರ ಕರ್ನಾಟಕ ಸರ್ಕಾರವು ಟೀಕೆಗಳನ್ನು ಎದುರಿಸುತ್ತಿದ್ದು, ಈ ಘಟನೆಗಳನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಶುಕ್ರವಾರ ಖಂಡಿಸಿದ್ದಾರೆ ಮತ್ತು ವರದಿಯನ್ನು ಕೋರಿದ್ದಾರೆ. ಸಿಇಟಿ ನಡೆಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಗುರುವಾರ ಘಟನೆ ನಡೆದ ಬೀದರ್ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿಗಳಿಂದ ವಿವರವಾದ ವರದಿಗಳನ್ನು ಪಡೆದು ತನಿಖೆಗೆ ಆದೇಶಿಸಿದೆ. ಪರೀಕ್ಷಾ ಪ್ರೋಟೋಕಾಲ್ನಲ್ಲಿ ಜಾನಿವಾರನನ್ನು ತೆಗೆದುಹಾಕುವ ಅಗತ್ಯವಿಲ್ಲ. ಇದು ಹಿಂದೆಂದೂ ಸಂಭವಿಸಿಲ್ಲ. ನಾವು ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ನಾವು ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಾನು ಅದನ್ನು ಖಂಡಿಸುತ್ತೇನೆ. ಈ ಬಗ್ಗೆ ವರದಿ ಕೇಳಿದ್ದೇನೆ ಎಂದು ಸುಧಾಕರ್ ಹೇಳಿದ್ದಾರೆ. ವರದಿಯನ್ನು ಸ್ವೀಕರಿಸಿದ ನಂತರ, ತಪ್ಪಿತಸ್ಥ ಸಿಬ್ಬಂದಿಯ ವಿರುದ್ಧ ನಾವು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು. ಎಂಜಿನಿಯರಿಂಗ್ ನಂತಹ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಗೇಟ್ ವೇ ಆಗಿದೆ. ಬೀದರ್ನ…
ಬೆಂಗಳೂರು: ಕೃಷಿಕರಿಗೆ ಬೆಳೆ ವಿಮೆ ಸೌಲಭ್ಯ ಕಲ್ಪಿಸುವಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ಇದೇ ಕಾರಣದಿಂದಾಗಿ ಕೇಂದ್ರ ಸರ್ಕಾರದಿಂದ ಪ್ರಶಸ್ತಿಯನ್ನು ಕೂಡ ಗಳಿಸಿದೆ. ಈ ಮಾಹಿತಿಯನ್ನು ಎಕ್ಸ್ ನಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹಂಚಿಕೊಂಡಿದ್ದು, 2024ರ ಖಾರೀಫ್ ಹಾಗೂ 2023-24ನೇ ಸಾಲಿನ ರಬಿ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (#PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿರುವ ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದಿದ್ದಾರೆ. ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ಅಗ್ರ 3 ಸ್ಥಾನದಲ್ಲಿರುವ ದೇಶದ ಮೂರು ಜಿಲ್ಲೆಗಳ ಪೈಕಿ ರಾಜ್ಯದ ಹಾವೇರಿ ಮತ್ತು ಕೊಪ್ಪಳ ಸ್ಥಾನ ಪಡೆದಿರುವುದು ವೈಯಕ್ತಿಕವಾಗಿ ಸಂತಸವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದು ರೈತರನ್ನು ಅನಿಶ್ಚಿತ ನಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ನಮ್ಮ ಕೃಷಿ ಇಲಾಖೆ ಹಾಗೂ ಸ್ಥಳೀಯ ಕೃಷಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ…
ಬೆಂಗಳೂರು: ಸಮಾನತೆ ಸಾರುವ ಸಂವಿಧಾನವನ್ನು ವಿರೋಧಿಸುವವರನ್ನು ದೂರ ಇಡಿ. ಹತ್ತಿರ ಸೇರಿಸಬೇಡಿ. ಸಂವಿಧಾನ ವಿರೋಧಿಗಳ ಜೊತೆ ಕೈ ಜೋಡಿಸುವುದು ಮಡಿವಾಳ ಮಾಚಿದೇವರಿಗೆ ಮಾಡುವ ಅವಮಾನ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. https://twitter.com/siddaramaiah/status/1913228718593450318 ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು. 12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಿ ಅಸಮಾನತೆ ಹೆಚ್ಚಾಯಿತು ಎಂದು ವಿವರಿಸಿದರು. ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಹೋರಾಡಿದ್ದನ್ನು…
ಬೀದರ್: ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 38,500 ಕೋಟಿ ಹಣವನ್ನು ಕಾಂಗ್ರೆಸ್ ಸರಕಾರವು ದುರುಪಯೋಗ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಂದು ಇಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು, ಸರಕಾರ ಜವಾಬ್ದಾರಿ ಮರೆತಿವೆ. ಅವರನ್ನು ಎಚ್ಚರಿಸುವ ಕೆಲಸವನ್ನು ವಿಪಕ್ಷವಾಗಿ ನಾವು ಮಾಡುತ್ತಿದ್ದೇವೆ. ಅದಕ್ಕಾಗಿ ಈ ಜನಾಕ್ರೋಶದ ಯಾತ್ರೆ ಎಂದು ತಿಳಿಸಿದರು. ರಾಜ್ಯದ ಸಿಎಂ ಆಗಿ ರೈತರ ಕಣ್ಣೀರು ಒರೆಸಿದ್ದೀರಾ? ಬಡವರ ಕಣ್ಣೀರು ಒರೆಸಿದ್ದೀರಾ? ಪರಿಶಿಷ್ಟ ಜಾತಿ, ಪಂಗಡದವರ ನೋವಿಗೆ ಸ್ಪಂದಿಸಿದ್ದೀರಾ ಎಂದು ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರು. ರಾಜ್ಯವು ಹಿಂದೆ ಯಡಿಯೂರಪ್ಪನವರ ನೇತೃತ್ವದಲ್ಲಿ ಅಭಿವೃದ್ಧಿ ವಿಚಾರದಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿತ್ತು ಎಂದು ವಿವರಿಸಿದರು. ರಾಜ್ಯವು ಈಗ ಭ್ರಷ್ಟಾಚಾರದಲ್ಲಿ ನಂಬರ್ ವನ್ ಸ್ಥಾನ ಪಡೆದಿದೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಈ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ತಿಳಿಸಿದರು. ಬಡವರ, ರೈತರ, ಪರಿಶಿಷ್ಟ ಜಾತಿ, ಪಂಗಡದ ಪರವಾಗಿದ್ದ ಕಾಳಜಿ ಎಲ್ಲಿ ಹೋಗಿದೆ ಸಿದ್ದರಾಮಯ್ಯನವರೇ ಎಂದು ಕೇಳಿದರು.…














