Author: kannadanewsnow09

ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ಭಾನುವಾರ ನಡೆದ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಂದಿನ ನೂರು ದಿನಗಳು ಪಕ್ಷಕ್ಕೆ ಮುಖ್ಯ ಎಂದು ಹೇಳಿದರು. ಅಧಿಕಾರಕ್ಕೆ ಬಂದ ನಂತರವೂ ಬಿಜೆಪಿ ಕಾರ್ಯಕರ್ತರು ಸಮಾಜಕ್ಕಾಗಿ ತುಂಬಾ ಮಾಡುತ್ತಾರೆ. ಅವರು ಹಗಲು ರಾತ್ರಿ ಓಡುತ್ತಾರೆ. ಅವರು ಅದನ್ನು ಭಾರತ ಮಾತೆಯ ವೈಭವಕ್ಕಾಗಿ ಮಾತ್ರ ಮಾಡುತ್ತಾರೆ ಎಂದು ಅವರು ಹೇಳಿದರು. ಇಲ್ಲಿ ಹಾಜರಿರುವ ಎಲ್ಲಾ ಕಾರ್ಮಿಕರನ್ನು ನಾನು ಅಭಿನಂದಿಸುತ್ತೇನೆ. ಬಿಜೆಪಿ ಕಾರ್ಯಕರ್ತರು ವರ್ಷದ ಪ್ರತಿದಿನವೂ ದೇಶ ಸೇವೆಗಾಗಿ ಏನನ್ನಾದರೂ ಮಾಡುತ್ತಲೇ ಇರುತ್ತಾರೆ. ಆದರೆ ಈಗ ಮುಂದಿನ 100 ದಿನಗಳು ಹೊಸ ಶಕ್ತಿ, ಹೊಸ ಉತ್ಸಾಹ, ಹೊಸ ಉತ್ಸಾಹ, ಹೊಸ ಆತ್ಮವಿಶ್ವಾಸ, ಹೊಸ ಉತ್ಸಾಹದೊಂದಿಗೆ ಕೆಲಸ ಮಾಡುತ್ತಾ ಸಾಗಬೇಕು. ಮುಂದಿನ 100 ದಿನ ಎಚ್ಚರಿಕೆಯಿಂದ ಇರಬೇಕು ಎಂಬುದಾಗಿ ಅವರು ಹೇಳಿದರು. ಕಳೆದ 10 ವರ್ಷಗಳಲ್ಲಿ ಭಾರತ ಸಾಧಿಸಿದ ವೇಗದ ಬಗ್ಗೆ ಜಗತ್ತು ಮಾತನಾಡುತ್ತಿದೆ. ಇದು ಪ್ರತಿಯೊಂದು ಕ್ಷೇತ್ರದಲ್ಲೂ ಎತ್ತರವನ್ನು ಸಾಧಿಸಿದೆ. ಇವು…

Read More

ಮಂಡ್ಯ : ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು 28 ಕ್ಕೆ 28 ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದರು. ಅವರಿಗೆ ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ ಮಾಡುತ್ತಿದ್ದಾರೆ ಎಂದು ತಿಳಿದಿದೆ. ಅದಕ್ಕೆ ಸುಳ್ಳು ಹೇಳುತ್ತಿದ್ದಾರೆ ಎಂದರು. ಸ್ಥಳೀಯ ಮುಖಂಡರು ಸೂಚಿಸಿದವರಿಗೆ ಟಿಕೆಟ್ ಸ್ಥಳೀಯವಾಗಿ ಶಾಸಕರು, ಜಿಲ್ಲಾ ಬ್ಲಾಕ್ ಸಮಿತಿ ಅಧ್ಯಕ್ಷರು, ಮುಖಂಡರು ಯಾರನ್ನು ಸೂಚಿಸುತ್ತಾರೋ ಅವರಿಗೆ ಲೋಕಸಭಾ ಚುನಾವಣೆ ಸ್ಪರ್ಧಿಸಲು ಟಿಕೆಟ್ ನೀಡುವುದಾಗಿ ಹೇಳಿದರು. ಡಾಲಿ ಧನಂಜಯಗೆ ಟಿಕೆಟ್ : ಈ ಬಗ್ಗೆ ಗೊತ್ತಿಲ್ಲ ಚಿತ್ರ ನಟ ಡಾಲಿ ಧನಂಜಯ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮ ಪಕ್ಷದಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ ಇದರ ಬಗ್ಗೆ ನನಗೆ ಗೊತ್ತೂ…

Read More

ಮೇಷನಿಮ್ಮಂತೆಯೇ ಇತರರೂ ಸ್ವಾತಂತ್ರ್ಯ ಹಾಗೂ ಸಂತೋಷವಾಗಿರಬೇಕೆಂಬ ಮನೋಭಾವದಿಂದಾಗಿ ಹೆಚ್ಚಿನ ಗೌರವವನ್ನು ಪಡೆದುಕೊಳ್ಳುವಿರಿ. ತಾಯಿ ಜಗನ್ಮಾತೆ ದುರ್ಗಾಪರಮೇಶ್ವರಿಯ ಆರಾಧನೆ ಶುಭ ತರಲಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು…

Read More

ಶಿವಮೊಗ್ಗ: ಜಿಲ್ಲೆಯ ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪದಲ್ಲಿ ನಿಗೂಢ ವಸ್ತು ಸ್ಪೋಟಗೊಂಡ ಪರಿಣಾಮ, ಇಬ್ಬರು ಗಾಯಗೊಂಡಿರೋ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪ ಬ್ಯಾಗ್ ನಲ್ಲಿ ಇಟ್ಟಿದ್ದಂತ ವಸ್ತು ಸ್ಪೋಟಗೊಂಡಿದೆ. ಉಮೇಶ್ ಎಂಬಾತ ಇಟ್ಟುಹೋಗಿದ್ದಂತ ಬ್ಯಾಗ್ ನಲ್ಲಿದ್ದ ವಸ್ತುವೊಂದು ಸ್ಪೋಟಗೊಂಡ ಪರಿಣಾಮ ಬೆಡ್ ಶೀಟ್ ಮಾರಲು ಬಂದಿದ್ದಂತ ಆಂಥೋನಿ ಸೇರಿದಂತೆ, ಇಬ್ಬರು ಗಾಯಗೊಂಡಿರೋದ್ದಾರೆ. ಗಾಯಾಳುಗಳನ್ನು ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದಂತ ಶಿರಾಳಕೊಪ್ಪ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/power-india-use/ https://kannadanewsnow.com/kannada/fir-lodged-against-59-people-for-throwing-slippers-at-rambhapuri-seers-car/

Read More

ಬಾಲಕೋಟೆ: ಜಿಲ್ಲೆಯಲ್ಲಿ ರಂಭಾಪುರಿ ಶ್ರೀಗಳ ಕಾರಿನ ಮೇಲೆ ಮಹಿಳೆಯೊಬ್ಬರು ಚಪ್ಪಲಿ ಎಸೆದಿದ್ದ ಘಟನೆ ನಿನ್ನೆ ನಡೆದಿತ್ತು. ಈ ಘಟನೆ ಸಂಬಂಧ ಮಹಿಳೆಯರು ಸೇರಿದಂತೆ 59 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯ ಕಲಾದಗಿ ಪೊಲೀಸ್ ಠಾಣೆಯಲ್ಲಿ ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆದ ಘಟನೆ ಸಂಬಂಧ ಪುರುಷರು, ಮಹಿಳೆಯರು ಸೇರಿದಂತೆ 59 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಂಭಾಪುರಿ ಶ್ರೀಗಳ ಭಕ್ತರ ಕಡೆಯಿಂದ ದೂರು ನೀಡಲಾಗಿತ್ತು. ಈ ದೂರು ಆಧರಿಸಿ, ಕಲಾದಗಿ ಠಾಣೆಯ ಪೊಲೀಸರು ಮಹಿಳೆಯರು, ಪುರುಷರು ಸೇರಿದಂತೆ 59 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ವಿವಾದ ಕೋರ್ಟ್ ನಲ್ಲಿ ಇರುವಾಗಲೇ ಕಾನೂನು ಸುವ್ಯವಸ್ಥೆ ಹಾಳು ಮಾಡಲಾಗಿದೆ. ಶಾಂತಿ ಕದಡುವಂತ ಉದ್ದೇಶದಿಂದ ಗಲಾಟೆ, ಶ್ರೀಗಳಿಗೆ ಅವಮಾನ ಮಾಡಲಾಗಿದೆ. ಶ್ರೀಗಳಿಗೆ ಆದಂತ ಅವಮಾನ ಎಲ್ಲವನ್ನು ಪರಿಗಣಿಸಿ, ಸಲ್ಲಿಸಲಾದಂತ ದೂರಿನ ಹಿನ್ನಲೆಯಲ್ಲಿ ಪೊಲೀಸರು FIR ದಾಖಲಿಸಿದ್ದಾರೆ. https://kannadanewsnow.com/kannada/power-india-use/ https://kannadanewsnow.com/kannada/several-injured-as-bag-explodes-at-shiralakoppa-in-shivamogga/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಬ್ಯಾಗ್ ನಲ್ಲಿ ವ್ಯಕ್ತಿಯೊಬ್ಬರು ಇಟ್ಟುಹೋಗಿದ್ದಂತ ವಸ್ತುವೊಂದು ಸ್ಟೋಗೊಂಡು ಹಲವರು ಗಾಯಗೊಂಡಿರೋ ಘಟನೆ ಇಂದು ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಬೆಡ್ ಶೀಟ್ ಮಾರಲು ಆಂಥೋನಿ ಎಂಬಾತ ತೆರಳಿದ್ದರು. ಅವರ ಬಳಿಯಲ್ಲಿ ಉಮೇಶ್ ಎಂಬಾತ ಬ್ಯಾಗ್ ಒಂದನ್ನು ಇಟ್ಟು ಹೋಗಿದ್ದನಂತೆ. ಉಮೇಶ್ ಎಂಬಾತ ಇಟ್ಟುಹೋಗಿದ್ದಂತ ಬ್ಯಾಗ್ ನಲ್ಲಿದ್ದ ವಸ್ತುವೊಂದು ಸ್ಪೋಟಗೊಂಡ ಪರಿಣಾಮ ಬೆಡ್ ಶೀಟ್ ಮಾರಲು ಬಂದಿದ್ದಂತ ಆಂಥೋನಿ ಸೇರಿದಂತೆ, ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದಂತ ಶಿರಾಳಕೊಪ್ಪ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/breaking-rajkumar-santoshi/ https://kannadanewsnow.com/kannada/power-india-use/

Read More

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಂದ ನಂತ್ರ, ಮಹಿಳೆಯರು ಪುಲ್ ಖುಷ್ ಆಗಿದ್ದಾರೆ. ಬಡತನದ ಬೇಗೆಯಲ್ಲಿ ಇದ್ದಂತ ಅದೆಷ್ಟೋ ಯಜಮಾನಿಯರಿಗೆ ಗೃಹ ಲಕ್ಷ್ಮೀ ಯೋಜನೆ ಸಂಸಾರದ ನೊಗವನ್ನೇ ಮುನ್ನೆಡೆಸೋ ಶಕ್ತಿಯನ್ನು ನೀಡಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಅನಾರೋಗ್ಯದಿಂದ ಸಾವನ್ನಪ್ಪಿದಂತ ಮಗನ ಶವದ ಮುಂದೆ ತಾಯಿಯೊಬ್ಬಳು ಕಣ್ಣೀರಿಡುತ್ತಲೇ ಗೃಹಲಕ್ಷ್ಮೀ ಯೋಜನೆ ಬಗ್ಗೆ ಆಡುವ ಮಾತು ಮನ ಮಿಡಿಸುತ್ತದೆ. ಆ ಬಗ್ಗೆ ಮುಂದೆ ಓದಿ. ಸೋಷಿಯಲ್ ಮೀಡಿಯಾದಲ್ಲಿ ಒಂದು ವೀಡಿಯೋ ವೈರಲ್ ಆಗಿದೆ. ಸತ್ತ ಮಗನ ಶವಕ್ಕೆ ಹಾರ ಹಾಕುತ್ತ, ಆ ತಾಯಿ ಕಣ್ಣೀರು ಇಡೋದು ಎಂಥವರನ್ನು ಕಣ್ಣೀರು ತರಿಸುವಂತಿದೆ. ಮಗನ ಶವಕ್ಕೆ ಹಾರ ಹಾಕುತ್ತಲೇ, ಆಸ್ಪತ್ರೆಗೆ ತೋರಿಸಿಕೊಳ್ಳೋ ಅಂದಿದ್ದೆ. ತೋರಿಸಿಕೊಂಡಿದ್ರೇ ಹಿಂಗೆ ಆಗುತ್ತಿರಲಿಲ್ಲ. ಅಯ್ಯೋ ಮಗನೆ ಎಂಬುದಾಗಿ ದುಖ ತೋಡಿಕೋಳ್ಳೋದನ್ನು ಕಾಣ ಬಹುದಾಗಿದೆ. ಸವದತ್ತಿ ತಾಲೂಕು ಮರಕುಂಬಿ ಗ್ರಾಮದ ವಿಶ್ವನಾಥ ಶಿವಲಿಂಗಪ್ಪ ಗುರಕ್ಕನವರ(34) ಅನಾರೋಗ್ಯದಿಂದ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ವೇಳೆ ಮೃತ ವಿಶ್ವನಾಥನ ತಾಯಿ‌ ನೀಲವ್ವಗೆ ಯಂಗ್ ಬೆಲಗಾಮ್…

Read More

ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳೂ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬ್ತುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಗ್ರಾಮ ಪಂಚಾಯತಿ ಆಯವ್ಯಯ (ಪಂಚಾಯತ್‌ ಬಜೆಟ್) ಕಡ್ಡಾಯವಾಗಿ ತಯಾರಿಸಿ ಮಾರ್ಚ್‌ 10ನೆ ತಾರೀಕಿನ ಒಳಗೆ ಗ್ರಾಮ ಪಂಚಾಯತಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಗ್ರಾಮ ಪಂಚಾಯತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳಡಿ ದೊರೆಯುವ ಅನುದಾನದ ಜೊತೆಗೆ ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ ಈ ಎಲ್ಲ ಮೂಲಗಳನ್ನು ಕ್ರೋಢೀಕರಿಸಿ ಗ್ರಾಮ ಪಂಚಾಯತಿಗಳು ಆಯವ್ಯಯವನ್ನು ಸಿದ್ಧಪಡಿಸಿ ಅನುಮೋದನೆ ಪಡೆದುಕೊಳ್ಳಲು ಸಚಿವರು ಪತ್ರದಲ್ಲಿ ಎಲ್ಲಾ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ವೈಯಕ್ತಿಕವಾಗಿ ಬರೆದಿರುವ ಪತ್ರಗಳಲ್ಲಿ ಕೋರಿದ್ದಾರೆ. ಗ್ರಾಮ ಪಂಚಾಯತಿ ಸಭೆಯಲ್ಲಿ ಅನುಮೋದನೆಯಾದ ಆಯವ್ಯಯವನ್ನು ತಾಲ್ಲೂಕು ಪಂಚಾಯಿತಿಗೆ ಕಳುಹಿಸಿಕೊಡಬೇಕು ಎಂದು ಹೇಳಿರುವ ಸಚಿವರು ಗ್ರಾಮ ಪಂಚಾಯತಿ ಆಯವ್ಯಯವು (ಪಂಚಾಯತ್‌ ಬಜೆಟ್)…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಎಎಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಖಾಲಿ ಇರುವಂತ 504 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರ ಬೀಳಲಿದೆ. ಈ ಬಗ್ಗೆ ವಿಧಾನಪರಿಷತ್ತಿನಲ್ಲಿ ನಿರಾಣಿ ಹಣಮಂತ್ ರುದ್ರಪ್ಪ ಅವರು ಕೇಳಿದಂತ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿರುವಂತ ಸಿಎಂ ಸಿದ್ಧರಾಮಯ್ಯ ಅವರು, ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿ ಇರುವಂತ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಆರ್ಥಿಕ ಇಲಾಖೆಗೆ ಒಟ್ಟು 656 ಹುದ್ದೆಗಳ ಭರ್ತಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಇವುಗಳಲ್ಲಿ 504 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯು ಸಹಮತಿ ನೀಡಿದೆ. ಈ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ. ಒಟ್ಟಾರೆಯಾಗಿ ಗ್ರೂಪ್-ಎ 159, ಗ್ರೂಪ್-ಬಿ 225 ಸೇರಿದಂತೆ ಒಟ್ಟು 504 ಹುದ್ದೆಗಳ ಭರ್ತಿಗೆ ಶೀಘ್ರವೇ ಕೆಪಿಎಸ್ಸಿಯಿಂದ ಅಧಿಸೂಚನೆ ಹೊರ ಬೀಳಲಿದೆ. ಕೆಎಎಸ್ ಹುದ್ದೆಯ ಆಕಾಂಕ್ಷಿಗಳು…

Read More

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳಾಗಿ ಸಾವಿರಾರು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತ ಸರ್ಕಾರಕ್ಕೆ ಮನವಿ ಮಾಡಿದ್ದರು. ಈಗ ವಾರ್ಷಿಕ ವೇತನ ಹೆಚ್ಚಳಕ್ಕಾಗಿ ರಾಜ್ಯ ಸರ್ಕಾರವು ತಾತ್ವಿಕ ಒಪ್ಪಿಗೆಯನ್ನು ನೀಡಿದೆ. ಈ ಮೂಲಕ ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಸಮುದಾಯ ಆರೋಗ್ಯ ಅಧಿಕಾರಿ ( Community Health Officer – CHO)ಗಳಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಸಾರ್ವತ್ರಿಕ ಆರೋಗ್ಯ ಪಾಲನೆಯಡಿ (ಯುಹೆಚ್‌ಸಿ) ಸಮಗ್ರ ಪ್ರಾಥಮಿಕ ಆರೋಗ್ಯ ಆರೈಕಾ ಸೇವೆಗಳನ್ನು (ಸಿಪಿಹೆಚ್‌ಸಿ) ಆಯುಷ್ಮಾನ್ ಆರೋಗ್ಯ ಮಂದಿರಗಳ ಮುಖೇನ ನೀಡಲಾಗುತ್ತಿದೆ. ಈ ಕೇಂದ್ರಗಳು ಸಮಾಜದ ಎಲ್ಲಾ ವರ್ಗಕ್ಕೆ ಸಾಕಷ್ಟು ಪ್ರಮಾಣದ ಆರೋಗ್ಯ ರಕ್ಷಣಾ ಸೇವೆಗಳನ್ನು ಮುಟ್ಟಲು ಪೂರಕವಾದ ಅನುಷ್ಠಾನ ಕ್ರಮಗಳನ್ನು ರೂಪಿಸಿ, ಆಯುಷ್ಮಾನ್ ಆರೋಗ್ಯ ಮಂದಿರಗಳಿಗೆ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ನಿಯೋಜಿಸಿ, ಗರಿಷ್ಟ ಪ್ರಮಾಣದಲ್ಲಿ ಉಚಿತ ಪ್ರಾಥಮಿಕ ಆರೋಗ್ಯ…

Read More