Subscribe to Updates
Get the latest creative news from FooBar about art, design and business.
Author: kannadanewsnow09
ಮಳವಳ್ಳಿ : “ಶ್ರೀ ಸುತ್ತೂರು ಮಠವು ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ತಾಣ ಮತ್ತು ದೇಶದ ಅತ್ಯಂತ ಪ್ರಸಿದ್ಧ ಮಠಗಳಲ್ಲಿ ಒಂದಾಗಿದೆ. ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಈ ಮಠವು ಸಾಮಾಜಿಕ ಮತ್ತು ಧಾರ್ಮಿಕ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸಿದೆ” ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಆದಿ ಜಗದ್ ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿ ಮಹಾಸ್ವಾಮೀಜಿಯವರ 1066ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರೊಂದಿಗೆ ಭಾಗವಹಿಸಿ ಅವರು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. “ಆದಿ ಜಗದ್ ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಮಹಾಸ್ವಾಮಿಜಿ ಭಾರತೀಯ ಸಂತ ಪರಂಪರೆಯ ಪ್ರಕಾಶಮಾನವಾದ ಸ್ತಂಭವಾಗಿದ್ದರು. ಅವರ ಇಡೀ ಜೀವನವು ಕಠಿಣತೆ, ತ್ಯಾಗ, ಕರುಣೆ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಮೀಸಲಾಗಿತ್ತು. ಅವರ ಆಧ್ಯಾತ್ಮಿಕ ಅಭ್ಯಾಸದ ಮೂಲ ಉದ್ದೇಶ ಮಾನವರಲ್ಲಿ ಮಾನವೀಯತೆಯನ್ನು ಜಾಗೃತಗೊಳಿಸುವುದಾಗಿತ್ತು” ಎಂದರು. “ಶಿವಯೋಗ ಸಂಪ್ರದಾಯದ ಮೂಲಕ, ಅವರು ಆತ್ಮಸಾಕ್ಷಾತ್ಕಾರ, ಶಿಸ್ತು ಮತ್ತು ಸೇವೆಯನ್ನು ಸಾಮಾಜಿಕ…
ಮಂಡ್ಯ: ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ವಳವಳ್ಳಿಯಲ್ಲಿ ನಡೆಯುತ್ತಿರುವುದು ಮಳವಳ್ಳಿ ಜನತೆಯ ಭಾಗ್ಯ. ಮಳವಳ್ಳಿ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಕಾರ್ಯಕ್ರಮ ಇದಾಗಿದೆ. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಲೋಕ ಕಲ್ಯಾಣಕ್ಕಾಗಿ ಮಾಡಿದ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದು ಸುತ್ತೂರು ಜಗತ್ ಗುರು ಶ್ರೀ ವೀರ ಸಿಂಹಾಸನ ಮಹಾ ಸಂಸ್ಥಾನಧೀಶರಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು. ಇಂದು ವಳವಳ್ಳಿಯಲ್ಲಿ ಆಯೋಜಿಸಲಾಗಿದ್ದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವ ನಾನ ಜಿಲ್ಲೆಗಳಲ್ಲಿ ನಡೆದುಕೊಂಡು ಬರುತ್ತಿದೆ. ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಸಾವಿರಾರು ವರ್ಷಗಳ ಹಿಂದೆ ಎರಡು ರಾಜ ಮನೆತನಗಳ ನಡುವೆ ಇದಂತಹ ವೈಷಮ್ಯವನ್ನು ಹೋಗಲಾಡಿಸಿ ಸಮಾರಸ್ಯದ, ಪ್ರೀತಿಯ, ಸ್ನೇಹದ ಬೀಜವನ್ನು ಬಿತ್ತಿ ನಾಡಿಗೆ ಕಲ್ಯಾಣ ತಂದವರು ಎಂದು ಹೇಳಿದರು. ಅವರ ಹಾದಿಯಲ್ಲಿ ಬಂದಂತಹ ಎಲ್ಲಾ ಸುತ್ತೂರು…
ಮಂಡ್ಯ : ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ 66ನೇ ಜನ್ಮದಿನದ ಅಂಗವಾಗಿ ಮದ್ದೂರು ನಗರದ ವಿವಿಧ ದೇವಾಲಯಗಳ ಅರ್ಚಕರುಗಳು ಮಂಗಳವಾರ ಮಂತ್ರಾಕ್ಷತೆ ಮತ್ತು ಫಲ ತಾಂಬೂಲ ನೀಡಿ ಆಶೀರ್ವದಿಸಿದರು. ಹುಟ್ಟು ಹಬ್ಬದ ಅಂಗವಾಗಿ ಬೆಂಗಳೂರಿನಿಂದ ಮೈಸೂರಿನ ಶ್ರೀ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕುಮಾರಸ್ವಾಮಿ ಅವರು ಮದ್ದೂರು ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸುತ್ತಿದ್ದಂತೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಸಾವಿರಾರು ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಜೈಕಾರ ಹಾಕಿ ಬೃಹತ್ ಹೂವಿನ ಹಾರಗಳನ್ನು ಹಾಕಿ ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ, ಸಚಿವ ಕುಮಾರಸ್ವಾಮಿ ಅವರಿಗೆ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇಗುಲದ ಪ್ರಧಾನ ಅರ್ಚಕ ಪ್ರದೀಪ ಆಚಾರ್ಯ, ಸಹ ಅರ್ಚಕ ಸುರೇಶ ಆಚಾರ್ಯ, ಶ್ರೀ ಉಗ್ರ ನರಸಿಂಹ ಸ್ವಾಮಿ ದೇಗುಲದ ಅರ್ಚಕ ಪ್ರಶಾಂತ್, ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇಗುಲದ ಅರ್ಚಕ ರಾಘವೇಂದ್ರ ಅವರುಗಳ ತಂಡ ಕುಮಾರಸ್ವಾಮಿ ಅವರಿಗೆ ಶೇಷ ವಸ್ತ್ರ, ತೀರ್ಥ ಪ್ರಸಾದ…
ಬೆಳಗಾವಿ ಸುವರ್ಣಸೌಧ: ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು ರೂಪಿಸುವದರಿಂದ ತಡೆಗಟ್ಟಲು ಸಾಧ್ಯವಿಲ್ಲ. ಸಾಮಾಜಿಕ ಜಾಗೃತಿಯೂ ಬಹಳ ಮುಖ್ಯ. ಯಾಕೆಂದರೆ ಯಾರೂ ಒತ್ತಾಯ ಪೂರ್ವಕವಾಗಿ ಮಾಡಿಕೊಳ್ಳುತ್ತಿಲ್ಲ. ತಂತ್ರಜ್ಞಾನದ ಸಹಾಯವನ್ನೂ ಪಡೆದುಕೊಳ್ಳುತ್ತಿದ್ದಾರೆ. ಓರಲ್ ಔಷಧದ ಸೇವನೆಯಿಂದಲೂ ನಡೆಯುತ್ತಿದೆ. ಈಗಂತೂ ಅಲ್ಟ್ರಾಸೌಂಡ್ ಪೋರ್ಟೆಬಲ್ ಸ್ಕಾನಿಂಗ್ ಯಂತ್ರದಿಂದ ಅತ್ಯಂತ ಸಣ್ಣ ಸ್ಥಳದಲ್ಲಿಯೂ ಪರೀಕ್ಷೆ ನಡೆಸಬಹುದಾಗಿದೆ. ಪ್ರತಿ ಜಿಲ್ಲೆಯ ಡೇಟಾ ಪರಿಶೀಲನೆ ನಡೆಸಿ, ಹೆಚ್ಚು ಗಂಡುಮಕ್ಕಳು ಜನಿಸುವ ಆಸ್ಪತ್ರೆಗಳ ಮೇಲೆ ನಿಗಾ ಇಟ್ಟಿದ್ದೇವೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾಜಿಕ ಜಾಗೃತಿ ಮೂಡಿಸುತ್ತಿದ್ದೇವೆ. ಮಾಹಿತಿ ನೀಡಿದವರ ವಿವರ ಗೌಪ್ಯವಾಗಿಟ್ಟು ಬಹುಮಾನವನ್ನು ನೀಡುತ್ತಿದ್ದೇವೆ. ಪ್ರತಿ ಜಿಲ್ಲೆಗೂ ಒಬ್ಬ ನೋಡಲ್ ಅಧಿಕಾರಿ ನೇಮಕ ಮಾಡುತ್ತಿದ್ದೇವೆ. ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಗುಪ್ತ ಕಾರ್ಯಾಚರಣೆ ಸಹ ನಡೆಸುತ್ತಿದ್ದೇವೆ.…
ಬೆಳಗಾವಿ ಸುವರ್ಣಸೌಧ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸುಪ್ರಸಿದ್ಧ ಧಾರ್ಮಿಕ ಸ್ಥಳ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ತುಮರಿ- ಬ್ಯಾಕೋಡು ಭಾಗದಲ್ಲಿ ಹೊಸದಾಗಿ ಪೊಲೀಸ್ ಠಾಣೆಯನ್ನು ಆರಂಭಿಸುವಂತೆ ಸದನದಲ್ಲೇ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಪಟ್ಟು ಹಿಡಿದರು. ಇದಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪುನರ್ ಪರಿಶೀಲನೆ ನಡೆಸಲಾಗುವುದು ಎಂಬುದಾಗಿ ಉತ್ತರಿಸಿದೆ. ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು, ಈಗಾಗಲೇ ಶರಾವತಿ ನದಿಗೆ ಸೇತುವೆ ಕಟ್ಟಿರುವ ಹಿನ್ನೆಲೆಯಲ್ಲಿ ಸಿಗಂದೂರು ಚೌಡೇಶ್ವರಿ ಕ್ಷೇತ್ರಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬ್ಯಾಕೋಡು ಉಪಠಾಣೆ ಕಾರ್ಯ ನಿರ್ವಹಿಸುತ್ತಿದೆ. ಸದರಿ ಉಪ ಠಾಣೆಯಲ್ಲಿ ಮೇಲ್ದರ್ಜೆಗೆ ಏರಿಸಿ ಹೊಸ ಪೊಲೀಸ್ ಠಾಣೆ ಆರಂಭಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಗೃಹ ಸಚಿವ ಪರಮೇಶ್ವರ್, ಶರಾವತಿ ನದಿಗೆ ಸೇತುವೆ ಆಗಿರುವ ಹಿನ್ನೆಲೆಯಲ್ಲಿ…
ಬೆಳಗಾವಿ ಸುವರ್ಣಸೌಧ: ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಪಾಲಿಸದ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಪಟ್ಟ ಉಪ ನಿರ್ದೇಶಕರು (ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ನೋಟಿಸ್ ಜಾರಿ ಮಾಡಿ, ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಅನುಷ್ಠಾನಗೊಳಿಸಲಾಗಿದ್ದು, ಕನ್ನಡ ಭಾಷೆ ಕಲಿಕಾ ಅಧಿನಿಯಮವನ್ನು ಪಾಲಿಸದ ಖಾಸಗಿ ಶಾಲೆಗಳಿಗೆ ನಿಯಮದಂತೆ ದಂಡ ವಿಧಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಎನ್. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನು ನೊಂದಣಿ ಮಾಡುವಾಗ, ಕನ್ನಡ ಭಾಷೆ ಕಲಿಕಾ ಅಧಿನಿಯಮದಂತೆ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಬೋಧಿಸಲು ಇಲಾಖಾ ನಿಯಮಗಳನ್ನು ರೂಪಿಸಲಾಗಿದ್ದು, ಅದರಂತೆ ಷರತ್ತುಗಳಿಗೆ ಒಳಪಡಿಸಿ, ನೊಂದಣಿಯನ್ನು ನೀಡಲಾಗುತ್ತಿದೆ. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಮಾಡುವ ಸಂದರ್ಭದಲ್ಲಿಯೂ ಸಹ ಕನ್ನಡ ಭಾಷೆ ಕಲಿಕಾ ಅಧಿನಿಯಮದ ಷರತ್ತುಗಳಿಗೆ ಒಳಪಡಿಸಿ, ಮಾನ್ಯತೆಯನ್ನು ನೀಡಲಾಗುತ್ತಿದೆ ಎಂದರು. ಉಚಿತ ಹಾಗೂ ಕಡ್ಡಾಯ ಶಿಕ್ಷಣ ನಿಯಮದಡಿ ರಾಜ್ಯದಲ್ಲಿ…
ಬೆಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ-ನರೇಗಾ)ಯ ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಡವರು ಮತ್ತು ಮಹಾತ್ಮ ಗಾಂಧೀಜಿ ಬಗೆಗಿನ ತಮ್ಮ ದ್ವೇಷವನ್ನು ತಾವೇ ಬಯಲು ಮಾಡಿಕೊಂಡಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಇಪ್ಪತ್ತು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೊಳಿಸಿದ್ದ ನರೇಗಾ ಯೋಜನೆ ಗ್ರಾಮೀಣ ಪ್ರದೇಶದಲ್ಲಿನ ನಿರುದ್ಯೋಗ ಮತ್ತು ಬಡತನ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಪ್ರತಿಯೊಬ್ಬ ವ್ಯಕ್ತಿಗೂ ಉದ್ಯೋಗದ ಹಕ್ಕನ್ನು ಖಾತರಿಗೊಳಿಸಿದ ಈ ಯೋಜನೆ ದೇಶ-ವಿದೇಶದ ಆರ್ಥಿಕ ತಜ್ಞರ ಶ್ಲಾಘನೆಯನ್ನು ಪಡೆದಿದೆ. ನರೇಗಾವು ಉದ್ಯೋಗ ಖಾತರಿ ನೀಡುವ ಒಂದು ನೈಜ ಯೋಜನೆಯಾಗಿತ್ತು, ಆದರೆ ನರೇಂದ್ರ ಮೋದಿ ಅವರ ಸರ್ಕಾರದಡಿ ಪ್ರಸ್ತಾಪಿತ ಹೊಸ ರಚನೆಯು ಆ ಖಾತರಿಯನ್ನು ಕಸಿಯಲಿದೆ ಮತ್ತು ಉದ್ಯೋಗದ ಭರವಸೆಯನ್ನು ರಾಜಕೀಯ ನಾಯಕರ ಇಚ್ಛೆಗೆ ಬಿಟ್ಟುಬಿಡುತ್ತದೆ. ಇದು ಜಾತಿ ತಾರತಮ್ಯ ಮತ್ತು ಸಾಮಾಜಿಕ ಅಸಮಾನತೆಯನ್ನು ಇನ್ನಷ್ಟು…
ಬೆಂಗಳೂರು : ಮೊಟರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್–2025ರಲ್ಲಿ ಬೆಳ್ಳಿ ಪ್ರಶಸ್ತಿ ಪಡೆದು ಕರ್ನಾಟಕಕ್ಕೆ ರಾಷ್ಟ್ರೀಯ ಗೌರವ ತಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ). ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮೊಟರಿಂಗ್ ವರ್ಲ್ಡ್ ಗ್ರೀನ್ ಮೊಬಿಲಿಟಿ ಅವಾರ್ಡ್ಸ್–2025ರಲ್ಲಿ “ಇವಿ ಬಸ್ ಅಳವಡಿಕೆಗೆ ಅತ್ಯುತ್ತಮ ನಗರ” ವಿಭಾಗದಲ್ಲಿ ಬೆಳ್ಳಿ ಪ್ರಶಸ್ತಿ ಪಡೆದು, ಕರ್ನಾಟಕ ಸರ್ಕಾರಕ್ಕೆ ರಾಷ್ಟ್ರಮಟ್ಟದ ಗೌರವವನ್ನು ತಂದುಕೊಟ್ಟಿದೆ. ಸಾರ್ವಜನಿಕ ವಿದ್ಯುತ್ ಸಾರಿಗೆಯಲ್ಲಿ ಬೆಂಗಳೂರಿನ ನಾಯಕತ್ವವನ್ನು ಈ ಪ್ರಶಸ್ತಿ ಸ್ಪಷ್ಟವಾಗಿ ಗುರುತಿಸಿದೆ. ಈಗಾಗಲೇ 1,700ಕ್ಕೂ ಹೆಚ್ಚು ವಿದ್ಯುತ್ ಬಸ್ಗಳನ್ನು ಕಾರ್ಯಾಚರಣೆಗೆ ತಂದು, ಮುಂದಿನ ಹಂತದಲ್ಲಿಯೂ ಇವಿ ಬಸ್ ಸೇವೆಯನ್ನು ವಿಸ್ತರಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವ ಸಾಧನೆಗೆ ಈ ಗೌರವ ಲಭಿಸಿದೆ. ದತ್ತಾಂಶ ಆಧಾರಿತ ಯೋಜನೆ, ಒಪ್ಪಂದಾಧಾರಿತ ಖರೀದಿ ವ್ಯವಸ್ಥೆ ಹಾಗೂ ಸಮಗ್ರ ಬಹುಮಾಧ್ಯಮ ಸಾರ್ವಜನಿಕ ಸಾರಿಗೆ ದೃಷ್ಟಿಕೋನವು ಈ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ. ಈ ಪ್ರಶಸ್ತಿಯನ್ನು ಡಿಸೆಂಬರ್ 16, 2025ರಂದು ನವದೆಹಲಿಯ ಟ್ರಾವಂಕೋರ್ ಪ್ಯಾಲೇಸ್ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ…
ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿಯೂ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿರುತ್ತದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಕುಶಾಲಪ್ಪ ಎಂ. ಪಿ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಕಿದ್ವಾಯಿ ಆಸ್ಪತ್ರೆಗೆ ಇತರೆ ಜಿಲ್ಲೆಗಳಿಂದ ರೋಗಿಗಳನ್ನು ಕರೆತರಲು ಕಷ್ಟವಾಗುತ್ತಿದ್ದು, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಬೆಂಗಳೂರು ಸಹಯೋಗದೊಂದಿಗೆ ರಾಜ್ಯದ ಇನ್ನಿತರೆ ಜಿಲ್ಲೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಪ್ರಾರಂಭಿಸಲು ಕ್ರಮವಹಿಸಲಾಗುತ್ತಿದೆ. ಕಲ್ಬುರ್ಗಿಯಲ್ಲಿ ಪೆರಿಫೆರಲ್ ಕ್ಯಾನ್ಸರ್ ಕೇಂದ್ರವನ್ನು 1990ರಲ್ಲಿ ಸ್ಥಾಪಿಸಲಾಗಿದ್ದು, ಸದರಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದ್ದು, ಸಿವಿಲ್ ಕಾಮಗಾರಿಯು ಪ್ರಗತಿಯಲ್ಲಿದೆ. ಮೈಸೂರು, ತುಮಕೂರು, ಶಿವಮೊಗ್ಗ, ಬೆಳಗಾವಿ ಈ ಜಿಲ್ಲೆಗಳಲ್ಲಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ. ರಾಯಚೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಹಾಗೂ ಬೀದರ್ ವೈದ್ಯಕೀಯ ವಿಜ್ಞಾನಗಳ…
ಬೆಳಗಾವಿ ಸುವರ್ಣ ವಿಧಾನಸೌಧ : ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 05 ವರ್ಷಗಳ ಸ್ಟ್ರಾಟೆಜಿಕ್ ಪ್ಲಾನ್ ತಯಾರಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ, ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು. ಪರಿಷತ್ತಿನಲ್ಲಿ ಡಿ.16ರಂದು ಪ್ರಶ್ನೋತ್ತರ ವೇಳೆ ಸದಸ್ಯರಾದ ಡಾ.ಡಿ.ತಿಮ್ಮಯ್ಯ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾನವ ಪ್ರಾಣಹಾನಿಗೆ ಕಾರಣವಾದ ಹುಲಿ ಹಾಗೂ ಆನೆಯನ್ನು ನಿರ್ದಿಷ್ಟವಾಗಿ ಗುರುತಿಸಿ ಸೆರಹಿಡಿಯಲಾಗಿರುತ್ತದೆ. ಮಾನವ-ವನ್ಯಜೀವಿ ಸಂಘರ್ಷ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಳ್ಳಬೇಟೆ ಶಿಬಿರಗಳ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ ಸಂಘರ್ಷ ಸಂಭವಿಸುತ್ತಿರುವ ಅರಣ್ಯದಂಚಿನ ಗಡಿರೇಖೆಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮಕೈಗೊಳ್ಳಲಾಗಿರುತ್ತದೆ. ಶಿಬಿರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸಂಘರ್ಷವಿರುವ ವಲಯಗಳಲ್ಲಿ ನಿರಂತರವಾಗಿ ಮುಂದಿನ ಮೂರು ತಿಂಗಳವರೆಗೆ ಗಸ್ತು ನಡೆಸಿ, ಮಾನವ ವನ್ಯಪ್ರಾಣಿ ಸಂಘರ್ಷವನ್ನು ತಡೆಗಟ್ಟಲು ಕ್ರಮವಹಿಸಲಾಗಿದೆ. ಮಾನವ-ವನ್ಯಜೀವಿ ಸಂಘರ್ಷ ಸಮಸ್ಯೆ ಇರುವ ಪ್ರತಿಯೊಂದು ವನ್ಯಜೀವಿ’ ವಲಯಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಉಂಟಾಗುವ ಸಂದರ್ಭದಲ್ಲಿ ತಕ್ಷಣದ ಪ್ರತಿಕ್ರಿಯೆಗಾಗಿ ಕ್ಷಿಪಸ್ಪಂದನ ವಾಹನ ಹಾಗೂ ಡೋನ್ ಒಳಗೊಂಡಂತೆ ಇತರೆ…














