Author: kannadanewsnow09

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟಂತ ಪ್ರಯಾಣಿಕರಿಗೆ ಗುಡ್ ನ್ಯೂಸ್ ಅನ್ನು ಕೆ ಎಸ್ ಆರ್ ಟಿಸಿ ನೀಡಿದೆ. ಯುಗಾದಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ದಿನಾಂಕ: 30.03.2025 ರಂದು ಚಂದ್ರಮಾನ ಯುಗಾದಿ, ದಿನಾಂಕ 31.03.2025ರಂದು ರಂಜಾನ್ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:28.03.2025 ರಿಂದ 30.03.2025 gವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:31.03.2025ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ,…

Read More

ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ನೌಕರರು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ಪದೋನ್ನತಿ ಪಡೆಯುವ ಸಂಬಂಧ ಕಡ್ಡಾಯವಾಗಿ ನಿಗದಿಪಡಿಸಿದ ತರಬೇತಿಯನ್ನು ಪೂರ್ಣಗೊಳಿಸಬೇಕು ಎಂಬುದಾಗಿ ಆದೇಶಿಸಿದೆ. ಈ ಮೂಲಕ ಪದೋನ್ನತಿ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುಮ ಬಿ.ಎಸ್ ಅವರು, ರಾಜ್ಯ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳ ಎಲ್ಲಾ ಅಧಿಕಾರಿ / ನೌಕರರು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ಪದೋನ್ನತಿ ಪಡೆಯುವ ಪೂರ್ವದಲ್ಲಿ ಕಡ್ಡಾಯವಾಗಿ ನಿಗದಿಪಡಿಸಿದ ತರಬೇತಿಯನ್ನು ಪೂರ್ಣಗೊಳಿಸಿದ್ದಲ್ಲಿ ಮಾತ್ರ ಮುಂದಿನ ಹುದ್ದೆಗೆ ಪದೋನ್ನತಿ ಪಡೆಯಲು ಅರ್ಹತೆಯನ್ನು ನಿಗದಿಪಡಿಸುವ ಸಂಬಂಧ ‘ಕರ್ನಾಟಕ ರಾಜ್ಯ ನಾಗರಿಕ ಸೇವಾ (ಮುಂಬಡ್ತಿ ಹೊಂದಲು ತರಬೇತಿ ಕಡ್ಡಾಯ) ನಿಯಮಗಳು, 2025″ ಎಂಬ ಕರಡು ನಿಯಮವನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಸದರಿ…

Read More

ಬೆಂಗಳೂರು: ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಮಧ್ಯ ರೈಲ್ವೇಯು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮುಂಬೈ ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ 13 ಟ್ರಿಪ್‌ಗಳ ಬೇಡಿಕೆಯ ಮೇರೆಗೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಸಂಚರಿಸಲು ನಿರ್ಧರಿಸಿದೆ. ಈ ವಿಶೇಷ ರೈಲು ಸೇವೆಗಳ ವಿವರಗಳು ಹೀಗಿವೆ: ರೈಲು ಸಂಖ್ಯೆ 01013/01014 ಸಿಎಸ್ಎಂಟಿ ಮುಂಬೈ-ಎಸ್ಎಂವಿಟಿ ಬೆಂಗಳೂರು-ಸಿಎಸ್ಎಂಟಿ ಮುಂಬೈ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಖ್ಯೆ 01013 ಸಿಎಸ್ಎಂಟಿ ಮುಂಬೈ – ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 5, 12, 19, 26; ಮೇ 3, 10, 17, 24, 31; ಮತ್ತು ಜೂನ್ 7, 14, 21, 28 (ಶನಿವಾರ) ರಂದು ಸಿಎಸ್ಎಂಟಿ ಮುಂಬೈನಿಂದ 00:30 ಗಂಟೆಗೆ ಹೊರಟು, ಅದೇ ದಿನ 23:55 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ತಲುಪಲಿದೆ. ರೈಲು ಸಂಖ್ಯೆ 01014 ಎಸ್ಎಂವಿಟಿ ಬೆಂಗಳೂರು – ಸಿಎಸ್ಎಂಟಿ ಮುಂಬೈ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 6, 13, 20,…

Read More

ನವದೆಹಲಿ: ದೇಶಾದ್ಯಂತ ಹಲವಾರು ಗ್ರಾಹಕರು ಎಲ್ಲಾ ಅಪ್ಲಿಕೇಶನ್‌ಗಳಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಗಳಲ್ಲಿ ಸ್ಥಗಿತಗೊಂಡ ಸಮಯವನ್ನು ಅನುಭವಿಸಿದ್ದಾರೆ. ಸಂಜೆ 7:50 ರ ಹೊತ್ತಿಗೆ, ಡೌನ್‌ಡೆಕ್ಟರ್ UPI ಸಮಸ್ಯೆಯ ಕುರಿತು 2,750 ದೂರುಗಳನ್ನು ಸ್ವೀಕರಿಸಿದೆ. ವೆಬ್‌ಸೈಟ್ ಪ್ರಕಾರ, Google Pay ಗ್ರಾಹಕರು 296 ದೂರುಗಳನ್ನು ವರದಿ ಮಾಡಿದ್ದಾರೆ. ಅದೇ ರೀತಿ, Paytm ಅಪ್ಲಿಕೇಶನ್‌ಗೆ ಸಂಬಂಧಿಸಿದಂತೆ 119 ದೂರುಗಳು ಬಂದಿದ್ದರೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ಸ್ಥಗಿತಗೊಂಡಿರುವ ಬಗ್ಗೆ 376 ಗ್ರಾಹಕರು ದೂರು ನೀಡಿದ್ದಾರೆ. ಹೆಚ್ಚಿನ SBI ಗ್ರಾಹಕರು ತಮ್ಮ ನಗದು ವರ್ಗಾವಣೆ ಮತ್ತು ಆನ್‌ಲೈನ್ ಬ್ಯಾಂಕಿಂಗ್ ಸೇವೆಗಳು ಅಡ್ಡಿಪಡಿಸಲ್ಪಟ್ಟಿವೆ ಎಂದು ಹೇಳಿಕೊಂಡಿದ್ದಾರೆ. “ನನ್ನ ಜೀವನದಲ್ಲಿ ಮೊದಲ ಬಾರಿಗೆ ನಾನು UPI ಸ್ಥಗಿತಗೊಂಡಿರುವ ಸಮಯವನ್ನು ಅನುಭವಿಸಿದ್ದೇನೆ. ಬ್ಯಾಂಕ್‌ಗಳು ಅಥವಾ ಗೇಟ್‌ವೇಗಳಲ್ಲ, ಆದರೆ @UPI_NPCI ಸ್ವತಃ btw, ಫೆಬ್ರವರಿಯಲ್ಲಿ ಅಪ್‌ಟೈಮ್ 100% ಆಗಿತ್ತು,” ಎಂದು X ಬಳಕೆದಾರರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು X ನಲ್ಲಿ ಪೋಸ್ಟ್ ಮಾಡಿದ್ದಾರೆ, “ಇದು…

Read More

ಬೆಂಗಳೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಿಗೆ ಇ-ಸ್ವತ್ತು ನೀಡುವ ಸಂಬಂಧದಲ್ಲಿ ಸರ್ಕಾರ ಮಸೂದೆ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಇ-ಸ್ವತ್ತು ಪದ್ಧತಿಯಲ್ಲಿಸುಧಾರಣೆ ತರಲು ಹಾಗೂ ಅವಶ್ಯವಿದ್ದಲ್ಲಿ ಸೂಕ್ತ ನೀತಿ ನಿಯಮಗಳನ್ನು ರೂಪಿಸುವ ಸಲುವಾಗಿ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸರ್ಕಾರ ಈ ವರ್ಷದ ಜನಸ್ನೇಹಿ ಆಯವ್ಯಯವನ್ನು ಮಂಡಿಸಿದ ನಂತರ ನೂತನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೆ ತರುವ ಸಂಬಂಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಚಿವರು ಈ ಅಂಶವನ್ನು ಪ್ರಕಟಿಸಿದರು. ಉದ್ದೇಶಿತ ಸಮಿತಿಯಲ್ಲಿ ಅಧಿಕಾರಿಗಳು ಮಾತ್ರವಲ್ಲದೆ ಸಂಬಂಧಿಸಿದ ಕ್ಷೇತ್ರದಲ್ಲಿ ಪರಿಣಿತರಾದ ಅಧಿಕಾರೇತರ ಸದಸ್ಯರೂ ಇರುತ್ತಾರೆ, ಸಮಿತಿಯ ಕಾರ್ಯವ್ಯಾಪ್ತಿ, ಕಾಲಾವಧಿ ಮುಂತಾದ ನಿಯಮಗಳನ್ನು ರೂಪಿಸಿ ಸಮಿತಿಯನ್ನು ರಚಿಸಲಾಗುವುದು ಎಂದೂ ಸಚಿವರು ಸಭೆಗೆ ತಿಳಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂಪಿಸಲಾದ ಬಡಾವಣೆಗಳಲ್ಲಿ ಹಾಗೂ ಗ್ರಾಮಠಾಣ ಹೊರತು ಪಡಿಸಿದಂತೆ ನಿರ್ಮಿಸಿದ ಕಟ್ಟಡಗಳನ್ನು ಸಕ್ರಮ ಗೊಳಿಸುವ ಸಲುವಾಗಿ ಇ-ಸ್ವತ್ತುಖಾತ ಒದಗಿಸಲು ಅವಕಾಶ ಮಾಡಿಕೊಡುವ ಮಸೂದೆಗೆ ವಿಧಾನಮಂಡಲದ ಉಭಯ ಸದನಗಳೂ…

Read More

ಬೆಂಗಳೂರು: 2024-25 ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಿದರು. ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳ 168 ಪರಿಶಿಷ್ಟ ಜಾತಿ ಹಾಗೂ 32 ಪರಿಶಿಷ್ಟ ಪಂಗಡದ ಪತ್ರಕರ್ತರು ಸೇರಿ ಒಟ್ಟು 200 ಜನ ಪತ್ರಕರ್ತರು ಈ ಯೋಜನೆಯಡಿ ಲ್ಯಾಪ್‌ಟಾಪ್ ಹಾಗೂ ಕ್ಯಾಮೆರಾ ಒಳಗೊಂಡ ಮಾಧ್ಯಮ ಕಿಟ್ ಪಡೆಯುತ್ತಿದ್ದಾರೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ,ಶಾಸಕ ಹಾಗೂ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎಂ.ನರೇಂದ್ರ ಸ್ವಾಮಿ,ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್,ವಾರ್ತಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ.ಕಾವೇರಿ,ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಸೇರಿದಂತೆ ಹಲವರು ಇದ್ದರು. https://kannadanewsnow.com/kannada/minister-orders-increase-in-fine-punishment-for-illegal-tree-felling-in-state/ https://kannadanewsnow.com/kannada/shivamogga-power-outages-in-these-areas-of-the-district-on-march-28/

Read More

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ಆರಂಭಿಸುವುದಾಗಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್‌ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1904878768076054867

Read More

ಬೆಂಗಳೂರು: 2024-25ನೇ ಸಾಲಿನಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಆರ್ಥಿಕವಾಗಿ ಹಿಂದುಳಿದ ಆರ್ಯ ವೈಶ್ಯ ಸಮುದಾಯದ 1893 ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿದ ಕಂದಾಯ ಸಚಿವರು ಹಾಗೂ ನಿಗಮದ ಅಧ್ಯಕ್ಷರು ಕೃಷ್ಣ ಬೈರೇಗೌಡ ಆದೇಶಿಸಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಬಡ ಆರ್ಯ ವೈಶ್ಯ 1893 ವಿದ್ಯಾರ್ಥಿಗಳಿಗೆ ರೂ.2.80 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಿ ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆಗೊಳಿಸಲಾಗಿದೆ ಎಂದು ಕಂದಾಯ ಸಚಿವರು ಹಾಗೂ ನಿಗಮದ ಅಧ್ಯಕ್ಷರು ಕೃಷ್ಣ ಬೈರೇಗೌಡ ರವರು ಬುಧವಾರ ವಿಕಾಸ ಸೌಧದ ಕಛೇರಿಯಲ್ಲಿ ತಿಳಿಸಿದರು. ಇಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಆರ್ಯ ವೈಶ್ಯ ಸಮುದಾಯದ 1893 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲಾಗಿದೆ. ಅವರಲ್ಲಿ ಪದವಿ ಪೂರ್ವ (ಪಿಯುಸಿ), ಸಾಮಾನ್ಯ ಪದವಿ ವ್ಯಾಸಂಗ ಮಾಡುತ್ತಿರುವ 1,006 ವಿದ್ಯಾರ್ಥಿಗಳಿಗೆ ರೂ. 57.98 ಲಕ್ಷಗಳು, ವೈದ್ಯಕೀಯ, ದಂತ ವೈದ್ಯಕೀಯ, ಅಭಿಯಂತರ ಮತ್ತು…

Read More

ಶಿವಮೊಗ್ಗ: ಆಲ್ಕೋಳ. ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.28 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಎಪಿಎಂಸಿ ಮಾರುಕಟ್ಟೆ, ಆರ್.ಎಂ.ಸಿ. ಸಾಗರ ರಸ್ತೆ, ಶುಭಮಂಗಳ ಕಲ್ಯಾಣ ಮಂದಿರ, ವಿನೋಬನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮಾಚೇನಹಳ್ಳಿ 110/11 ಕೆವಿ ವಿ.ವಿ.ಕೇಂದ್ರದ ಎಂಸಿ.ಎಫ್-18 ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ. 28 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/bangalore-meteorological-department-invites-applications-for-internship/ https://kannadanewsnow.com/kannada/good-news-for-brahmin-students-in-the-state-scholarships-to-be-paid/

Read More

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿ ಮಾಡಿ ಸರ್ಕಾರ ಆದೇಶಿಸಿದೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3,351 ವಿದ್ಯಾರ್ಥಿಗಳಿಗೆ ರೂ.5.16 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ ತಿಳಿಸಿದ್ದಾರೆ. https://twitter.com/KarnatakaVarthe/status/1904801882767266055 https://kannadanewsnow.com/kannada/bangalore-meteorological-department-invites-applications-for-internship/ https://kannadanewsnow.com/kannada/minister-ramalinga-reddy-responded-to-bjp-mla-aravind-bellads-allegations-with-statistics/

Read More