Author: kannadanewsnow09

ಮಂಡ್ಯ: ಜಿಲ್ಲೆಯಲ್ಲಿ ಇಂದು ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ ನಡೆದಿರುವಂತ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಈ ಹೆಜ್ಜೇನು ದಾಳಿಯಲ್ಲಿ ಮೂವರು ಪ್ರವಾಸಿಗರು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಮ್ ಬಳಿಯ ಪ್ರವಾಸಿ ಸ್ಥಾನ ಕಾವೇರಿ ಸಂಗಮದಲ್ಲಿ ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ ನಡೆದಿದೆ. 15ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿರೋದಾಗಿ ತಿಳಿದು ಬಂದಿದೆ. ಹೆಜ್ಜೇನು ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವಂತ ಮೂವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನುಳಿದ ಗಾಯಾಳುಗಳನ್ನು ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/govt-didnt-put-up-a-proper-argument-on-cauvery-water-sharing-issue-r-ashoka/ https://kannadanewsnow.com/kannada/jds-files-complaint-against-rahul-gandhi-for-mass-rape-of-400-women-by-prajwal-revanna/

Read More

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರ ಸರಿಯಾದ ವಾದ ಮಂಡಿಸದೆ ರೈತರಿಗೆ ಅನ್ಯಾಯ ಮಾಡಿದೆ. ರಾಜ್ಯದಿಂದ ಹಣ ಲೂಟಿ ಮಾಡಿ ದೆಹಲಿಗೆ ಕಳುಹಿಸುವುದರಲ್ಲೇ ಕಾಂಗ್ರೆಸ್‌ ನಾಯಕರು ನಿರತರಾಗಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹರಿಹಾಯ್ದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಪದೇ ಪದೆ ಎಡವುತ್ತಿದೆ. ಕಾವೇರಿ ಟ್ರಿಬ್ಯೂನಲ್‌ ಮತ್ತೆ ಎರಡೂವರೆ ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಲು ಆದೇಶಿಸಿದೆ. ಆದರೆ ಕಾಂಗ್ರೆಸ್‌ ಸರ್ಕಾರ ದುಡ್ಡು ಹೊಡೆಯಲು ಗಮನ ಕೊಡುತ್ತಿದೆಯೇ ಹೊರತು ನೀರುಳಿಸಲು ಗಮನ ನೀಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಧಿಕರಣದಲ್ಲಿ ಸರಿಯಾದ ವಾದ ಮಾಡಲು ವ್ಯವಸ್ಥೆ ಮಾಡುತ್ತಿಲ್ಲ. ಕಾವೇರಿ ನೀರಿನ ಬಗ್ಗೆ ಹಾಗೂ ರೈತರ ಬಗ್ಗೆ ಈ ಸರ್ಕಾರ ನಿರ್ಲಕ್ಷ್ಯ ತಾಳಿದೆ. ರೈತರು ಹೋರಾಟ ಮಾಡುತ್ತಿದ್ದರೂ, ಕಾಂಗ್ರೆಸ್‌ ನಾಯಕರು ದೆಹಲಿಗೆ ಎಷ್ಟು ಹಣ ಎಟಿಎಂನಲ್ಲಿ ಕಳುಹಿಸಬೇಕೆಂದು ಯೋಚನೆ ಮಾಡುತ್ತಿದ್ದಾರೆ. ಕಾವೇರಿ ನದಿ ಪ್ರದೇಶದ ಜನರು ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಸರ್ಕಾರ…

Read More

ಬೆಂಗಳೂರು: ಹಾವೇರಿ ಜಿಲ್ಲೆಗೆ ಅಗತ್ಯವಿರುವ ಡಿಎಪಿ, ಯುರಿಯಾ ಹಾಗೂ ಕಾಂಪ್ಲೆಕ್ಸ್ ಗೊಬ್ಬರವನ್ನು ಕೂಡಲೇ ಸರಬರಾಜು ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃಷಿ ಸಚಿವ ಚಲುವರಾಯಸ್ವಾಮಿಗೆ ಆಗ್ರಹಿಸಿದ್ದಾರೆ. ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಪತ್ರ ಬರೆದಿರುವ ಅವರು, ತಮಗೆ ಈಗಾಗಲೇ ಮಾಹಿತಿಯಿರುವಂತೆ ಕಳೆದ ಒಂದು ವರ್ಷ ನಮ್ಮ ರೈತರು ಬರಗಾಲದಿಂದ ತತ್ತರಿಸಿ ಹೋಗಿದ್ದಾರೆ. ಕಳೆದ ವರ್ಷ ಅವರು ಬಿತ್ತನೆ ಬೀಜ, ಗೊಬ್ಬರ ಹಾಗೂ ಇತರೆ ಕೃಷಿ ಚಟುವಟಿಕೆಗಳಿಗೆ ವೆಚ್ಚವನ್ನು ಮಾಡಿ ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಹಾಗೂ ಸಾಲದ ಹೊರೆ ರೈತರ ಮೇಲೆ ಹೆಚ್ಚಾಗಿ ಇದ್ದು, ಕೆಲವರಂತೂ ಆತ್ಮಹತ್ಯೆಗೆ ಶರಣಾಗಿರುತ್ತಾರೆ. ತಾವು ರೈತರಿಗೆ ಪರಿಹಾರ ಕೊಟ್ಟಿರುವುದು ಅತ್ಯಲ್ಪ ಹಾಗೂ ತಡವಾಗಿದೆ ಮತ್ತು ತಮ್ಮ ಇಲಾಖೆ ತಿಳಿಸಿದಂತೆ ಆಹಾರ ಧಾನ್ಯ ಉತ್ಪಾದನೆಯಲ್ಲಿ ಶೇಖಡ 50% ಕಡಿಮೆಯಾಗಿದೆ. ಮೇಲೆ ಕಾಣಿಸಿದ ಎಲ್ಲಾ ಕಾರಣಗಳು ಮತ್ತು ಇತ್ತೀಚಿಗೆ ಬೀಳುತ್ತಿರುವ ಮುಂಗಾರು ಮಳೆಯಿಂದ ರೈತರು ಉತ್ಸುಕರಾಗಿ ಬಿತ್ತನೆ ಮಾಡಲು ಸಿದ್ದರಾಗಿದ್ದು, ಅದಕ್ಕಾಗಿ ಗೊಬ್ಬರ ಪಡೆದುಕೊಳ್ಳಲು ಮುಂದೆ ಬಂದ ಸಂದರ್ಭದಲ್ಲಿ…

Read More

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರವಾದ ವಿಧಾನ ಸೌಧ ಮತ್ತು ವಿಕಾಸ ಸೌಧದ ಮಧ್ಯಭಾಗದ ತೆರೆದ ಪ್ರದೇಶದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಧ್ಯಾನಾಸಕ್ಮ ಕಂಚಿನ ಪ್ರತಿಮೆಗೆ ಪಕ್ಷಿಗಳ ಮಲ-ಮೂತ್ರಗಳಿಂದ ಉಂಟಾಗುವ ತ್ಯಾಜ್ಯ ಹಾಗೂ ಮಾಲಿನ್ಯದಿಂದ ಪ್ರತಿಮೆಗೆ ಉಂಟಾಗುತ್ತಿದ್ದನ್ನು ಬಹಳ ನೋವಿನಿಂದ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರದ ಗಮನ ಸೆಳೆದು ಗಾಂಧಿಜೀ ಪುತ್ಥಳಿಯನ್ನು ತ್ಯಾಜ್ಯ ಮುಕ್ತವನ್ನಾಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೇಶದ ಪ್ರತಿಷ್ಠಿತ ಕಟ್ಟಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಧಾನ ಸೌಧದ ವೀಕ್ಷಣೆಗೆ ನಿತ್ಯವೂ ದೇಶ ವಿದೇಶಗಳಿಂದ, ರಾಜ್ಯ, ಅಂತಾರಾಜ್ಯಗಳಿಂದ ಗಣ್ಯರು, ಪ್ರವಾಸಿಗರು, ಹಾಗೂ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಆ ಸಂದರ್ಭದಲ್ಲಿ ಎಲ್ಲರೂ ಕಡ್ಡಾಯವಾಗಿ ಮಹಾತ್ಮ ಗಾಂಧೀಜಿಯವರ ಪ್ರತಿಮೆ ವೀಕ್ಷಿಸಿ ಅಲ್ಲಿ ಛಾಯಾ ಚಿತ್ರಗಳನ್ನು ತೆಗೆದುಕೊಳ್ಳುವ ದೃಶ್ಯವು ನಿತ್ಯ ಸದೃಶ್ಯವಾದುದ್ದು. ಆದರೆ ಸದರಿ ಪ್ರತಿಮೆಯು ತೆರೆದ ಪ್ರದೇಶದಲ್ಲಿರುವುದರಿಂದ ವಾತಾವರಣ ಹಾಗೂ ಪಕ್ಷಿಗಳ ಮಲ-ಮೂತ್ರಗಳಿಂದ ಉಂಟಾಗುವ ತ್ಯಾಜ್ಯ ಹಾಗೂ ಮಾಲಿನ್ಯದಿಂದ ಪ್ರತಿಮೆಯ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತಿತ್ತು. ಇದನ್ನು ಗಮನಿಸಿ ಮಹಾತ್ಮ ಗಾಂಧಿಜೀಯವರ ಪುತ್ಥಳಿಗೆ ತೋರಲಾಗುತ್ತಿರುವ ಅಗೌರವದ…

Read More

ಬೆಳ್ತಂಗಡಿ: ಪೊಲೀಸ್ ಇನ್ಸ್ ಪೆಕ್ಟರಿಗೆ ಧಮ್ಕಿ ಪ್ರಕರಣದಲ್ಲಿ ಶಾಸಕ ಹರೀಶ್ ಪೂಂಜ ನಿಸಾವದ ಮುಂದೆ ಇಂದು ಹೈಡ್ರಾಮಾವೇ ನಡೆಯಿತು. ಬಿಜೆಪಿಯ ನಾಯಕರು ಸೇರಿದಂತೆ ಕಾರ್ಯಕರ್ತರ ದಂಡೇ ಅವರನ್ನು ಬಂಧಿಸದಂತೆ ಒತ್ತಾಯಿಸಿತ್ತು. ಜೊತೆಗೆ ಶಾಸಕ ಹರೀಶ್ ಪೂಂಜಾ ಮೂರು ದಿನ ಕಾಲಾವಕಾಶ ಕೋರಿದ್ದರಿಂದ, ಅವಕಾಶ ನೀಡಿ ಪೊಲೀಸರು ನೋಟಿಸ್ ನೀಡಿ, ಬಂಧಿಸದೇ ತೆರಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಠಾಣೆಯ ಪಿಎಸ್ಐಗೆ ಧಮ್ಕು ಹಾಕಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ ಎದುರಿಸುತ್ತಿದ್ದರು. ಈ ಸಂಬಂಧ ಪಿಎಸ್ಐ ನೀಡಿದಂತ ದೂರಿನಲ್ಲಿ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಇಂದು ಶಾಸಕ ಹರೀಶ್ ಪೂಂಜ ಅವರನ್ನು ಪೊಲೀಸರು ಬಂಧಿಸಲಿದ್ದಾರೆ ಎನ್ನಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ಬೆಳ್ತಂಗಡಿಯ ಗಾರ್ಡಿಯ ಗ್ರಾಮದ ನಿವಾಸದ ಮುಂದೆ ಹೈಡ್ರಾಮವೇ ಏರ್ಪಟ್ಟಿತ್ತು. ಇದರ ಮುಧ್ಯೆ ಶಾಸಕ ಹರೀಶ್ ಪೂಂಜ ವಿಚಾರಣೆಗೆ ಹಾಜರಾಗೋದಕ್ಕೆ ಕಾಲಾವಕಾಶವನ್ನು ಕೋರಿದ್ದರು. ಈ ಹಿನ್ನಲೆಯಲ್ಲಿ ಪೊಲೀಸರು 3 ದಿನಗಳ…

Read More

ಬೆಂಗಳೂರು: ಬಿಜೆಪಿ ಸಂಖ್ಯಾಬಲದ ಆಧಾರದಲ್ಲಿ ವಿಧಾನಪರಿಷತ್ತಿಗೆ 3 ಸ್ಥಾನಗಳು ನಮಗೆ ಲಭಿಸಲಿವೆ. ಇದನ್ನು ಆಧರಿಸಿ 3 ಸ್ಥಾನಗಳಿಗೆ ಅಂತಿಮವಾಗಿ ಅಭ್ಯರ್ಥಿಗಳನ್ನು ನಿರ್ಣಯಿಸುವ ಕಾರ್ಯವನ್ನು ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮಾಡುತ್ತಾರೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 40ಕ್ಕೂ ಹೆಚ್ಚು ಹೆಸರುಗಳು ಚರ್ಚೆ ಆಗಿವೆ. 3 ಸ್ಥಾನಗಳಿಗೆ 40ಕ್ಕೂ ಹೆಚ್ಚು ಹೆಸರುಗಳು ಚರ್ಚೆ ಆಗಿವೆ. ಆಕಾಂಕ್ಷಿಗಳನ್ನು ಮಾತ್ರ ನಾವು ಚರ್ಚೆಗೆ ಪರಿಗಣಿಸಿಲ್ಲ. ಆಕಾಂಕ್ಷಿಗಳಲ್ಲದವರನ್ನೂ ಚರ್ಚೆಗೆ ತೆಗೆದುಕೊಂಡಿದ್ದೇವೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆಸಲಾಗಿದೆ. ಪಕ್ಷದ ಹಿರಿಯ ಮುಖಂಡ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.…

Read More

ಬೆಳ್ತಂಗಡಿ: ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜ ಅವರನ್ನು ಬಂಧಿಸಿದ್ರೆ ನಾಳೆ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬಂದ್ ಮಾಡೋದಾಗಿ ಸಂಸದ ನಳೀನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ. ಇಂದು ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನ್ಯಾಯ ಕೇಳಿ ಬಿಜೆಪಿ ಶಾಸಕ ಹರೀಶ್ ಪೂಂಜ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಅಂತವರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಹಲವು ಪ್ರಕರಣಗಳನ್ನು ದಾಖಲಿಸಿದೆ ಎಂಬುದಾಗಿ ಕಿಡಿಕಾರಿದರು. ನಾವು ಯಾವುದೇ ಕಾರಣಕ್ಕೂ ಶಾಸಕರನ್ನ ಬಿಟ್ಟುಕೊಡೋ ಮಾತೇ ಇಲ್ಲ. ನಮ್ಮ ಶಾಸಕರನ್ನು ನಾವು ಬಿಟ್ಟುಕೊಡೋ ಪ್ರಶ್ನೆಯೂ ಇಲ್ಲ. ಒಂದು ವೇಳೆ ಶಾಸಕ ಹರೀಶ್ ಪೂಂಜ ಬಂಧಿಸಿದ್ದೇ ಆದ್ರೇ, ನಾಳೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬಂದ್ ಮಾಡಿ ಖಂಡಿಸೋದಾಗಿ ಎಚ್ಚರಿಕೆ ನೀಡಿದರು. https://kannadanewsnow.com/kannada/jds-files-complaint-against-rahul-gandhi-for-mass-rape-of-400-women-by-prajwal-revanna/ https://kannadanewsnow.com/kannada/army-doesnt-want-agniveer-we-will-throw-it-in-dustbin-rahul-gandhi/

Read More

ಅಹ್ಮದಾಬಾದ್: ಬಾಲಿವುಡ್ ನಟ ಶಾರುಖ್ ಖಾನ್ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಅಹಮದಬಾದ್ ನ ಕೆಡಿ ಆಸ್ಪತ್ರೆಗೆ ಶಾರುಖ್ ಖಾನ್ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಅಹಮದಾಬಾದ್ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಖದ ಆಘಾತದಿಂದಾಗಿ ಅವರು ಅನಾರೋಗ್ಯಕ್ಕೆ ಒಳಗಾದರು. ಐಪಿಎಲ್ ನ ಮೊದಲ ಪ್ಲೇ ಆಫ್ ಪಂದ್ಯವನ್ನು ವೀಕ್ಷಿಸಲು ಕಿಂಗ್ ಖಾನ್ ನಿನ್ನೆ ಅಹಮದಾಬಾದ್ ಗೆ ಬಂದಿದ್ದರು. https://twitter.com/AdityaRajKaul/status/1793265704818360569 https://kannadanewsnow.com/kannada/farmer-activist-jayashree-guran-passes-away/ https://kannadanewsnow.com/kannada/jds-files-complaint-against-rahul-gandhi-for-mass-rape-of-400-women-by-prajwal-revanna/

Read More

ಖಾನಾಪುರ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ರೈತ ಹೋರಾಟಗಾರ್ತಿ ಎಂದೇ ಗುರ್ತಿಸಿಕೊಂಡಿದ್ದ ಜಯಶ್ರೀ ಗುರನ್ನವರ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಈ ಮೂಲಕ ರೈತ ಹೋರಾಟಗಾರ್ತಿ ‘ಜಯಶ್ರೀ ಗುರನ್ನವರ’ ಇನ್ನಿಲ್ಲವಾಗಿದ್ದಾರೆ. ಖಾನಾಪುರ ತಾಲೂಕಿನ ತೋಲಗಿ ಗ್ರಾಮದ ರೈತ ಹೋರಾಟಗಾರ್ತಿ, ರೈತರ, ದೀನ ದಲಿತರ ಹಾಗೂ ಬಡವರ ಪರವಾಗಿ ನಿರಂತರ ಹೋರಾಟ ಮಾಡಿರುವ ಜಯಶ್ರೀ ಗುರನ್ನವರ ಅವರು, ಅನಾರೋಗ್ಯಕ್ಕೆ ತುತ್ತಾಗಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದ ಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಹೀಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅಂದಹಾಗೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಮ್ಮ ಆಪ್ತ ಸಹಾಯಕನ ಮುಖಾಂತರ ರೈತ ಹೋರಾಯಗಾರ್ತಿ ಜಯಶ್ರೀ ಗುರನ್ನವರ್ ಅವರಿಗೆ ಆರ್ಥಿಕವಾಗಿ ಸಹಾಯ ಮಾಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದರು. https://kannadanewsnow.com/kannada/jds-files-complaint-against-rahul-gandhi-for-mass-rape-of-400-women-by-prajwal-revanna/ https://kannadanewsnow.com/kannada/army-doesnt-want-agniveer-we-will-throw-it-in-dustbin-rahul-gandhi/

Read More

ಬೆಂಗಳೂರು: ಕಾವೇರಿ ನದಿ ನೀರಿಗೆ ಸಂಬಂಧಿಸಿ ರಾಜ್ಯ ಸರಕಾರವು ತನ್ನ ಸಮರ್ಥ ನಿಲುವನ್ನು ಕೋರ್ಟ್ ಮುಂದೆ ತಿಳಿಸಬೇಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದುಡ್ಡು ಹೊಡೆಯೋಕೆ, ಲೂಟಿ ಮಾಡಲು ಈ ಸರಕಾರ ಸಮಯ ಕಳೆಯುತ್ತಿದೆ. ಕಾವೇರಿ ನೀರನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಕರ್ನಾಟಕದ ಕಾಂಗ್ರೆಸ್ ಸರಕಾರ ಮಾಡಿಲ್ಲ ಎಂದು ಟೀಕಿಸಿದರು. ಕೋರ್ಟ್, ಕಾವೇರಿ ಟ್ರಿಬ್ಯೂನಲ್‍ನಲ್ಲಿ ಪದೇಪದೇ ಹಿನ್ನಡೆ ಆಗುತ್ತಿದ್ದರೂ ಕೂಡ ಮುಖ್ಯಮಂತ್ರಿಗಳು ಸಭೆ ಕರೆದು ನಮ್ಮ ನಿಲುವನ್ನು ಕೋರ್ಟ್ ಮತ್ತು ಟ್ರಿಬ್ಯೂನಲ್‍ನಲ್ಲಿ ಮಂಡಿಸಲು ವ್ಯವಸ್ಥೆ ಮಾಡಿಲ್ಲ ಎಂದು ಆಕ್ಷೇಪಿಸಿದರು. ಕಾವೇರಿ ಜಲಾನಯನ ಪ್ರದೇಶದ ರೈತರು ನಿರಂತರ ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ರೈತರನ್ನು ಸರಕಾರ ಕಡೆಗಣಿಸುತ್ತಿದೆ ಎಂದು ತಿಳಿಸಿದ ಅವರು, ಈ ಬಗ್ಗೆ ಪ್ರಶ್ನಿಸಿದರೆ ದುರಹಂಕಾರದ ಮಾತನಾಡುತ್ತಾರೆ ಎಂದು ದೂರಿದರು. ಶಾಸಕ ಹರೀಶ್ ಪೂಂಜ ಅವರ ಬಂಧನ ಪ್ರಯತ್ನ ಕುರಿತ ಪ್ರಶ್ನೆಗೆ ಉತ್ತರಿಸಿದ…

Read More