Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಉನ್ನತ ಗುಣಮಟ್ಟದ ಸೋಲಾರ್ ಫೋಟೋವೋಲ್ಟಾಯಿಕ್ ಕೋಶಗಳು ಮತ್ತು ಮಾಡ್ಯೂಲ್ ಉತ್ಪಾದನೆಗೆ ಹೆಸರಾಗಿರುವ, ಬೆಂಗಳೂರು ಮೂಲದ ಎಮ್ವಿ ಎನರ್ಜಿ ಕಂಪನಿಯು ತನ್ನ ಉತ್ಪಾದನಾ ಘಟಕ ಆರಂಭಿಸಲು ಹಂತಹಂತವಾಗಿ 15 ಸಾವಿರ ಕೋಟಿ ರೂಪಾಯಿ ಹೂಡಲು ತೀರ್ಮಾನಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಗುರುವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕಂಪನಿಯ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ಅವರು ಈ ಸಂಬಂಧ ಸಭೆ ನಡೆಸಿದರು. ಕಂಪನಿಯೊಂದಿಗೆ ಹೂಡಿಕೆ ಸಂಬಂಧ ಇತ್ತೀಚಿಗೆ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿದ್ದು, ಕಾರ್ಯರೂಪಕ್ಕೆ ಬರುತ್ತಿರುವುದು ಸಂತಸದ ಸಂಗತಿ ಎಂದು ಸಚಿವರು ಹೇಳಿದ್ದಾರೆ. ಕಂಪನಿಯು ಮೊದಲ ಹಂತದಲ್ಲಿ 5,000 ಕೋಟಿ ರೂಪಾಯಿ ಹೂಡಿಕೆ ಮಾಡಲಿದ್ದು, 5 ಗಿಗಾವ್ಯಾಟ್ ಸಾಮರ್ಥ್ಯದ ಉತ್ಪಾದನೆ ಮಾಡಲಿದೆ. ಒಟ್ಟು ಯೋಜನೆಯಿಂದ 10 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದಿದ್ದಾರೆ. ಎಮ್ವಿ ಎನರ್ಜಿ ಕಂಪನಿಯು ಬೆಂಗಳೂರಿನ ಐಟಿಐಆರ್ ವಲಯದಲ್ಲಿ 120 ಎಕರೆ ಜಮೀನನ್ನು ಕೇಳಿದೆ. ಇದನ್ನು ಸಕಾರಾತ್ಮಕವಾಗಿ ಪರಿಶೀಲಿಸಿ,…
ಬೆಂಗಳೂರು: ನಾಳೆ ಬೆಂಗಳೂರಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ (WPL) ಕ್ರಿಕೆಟ್ 2025 ನಡೆಯಲಿದೆ. ಈ ಹಿನ್ನಲೆಯಲ್ಲಿ ವೀಕ್ಷಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರು ಪಂದ್ಯಗಳಿಗೆ ಮೆಟ್ರೋ ರೈಲು ಸೇವೆಗಳ ವಿಸ್ತರಣೆ ಮಾಡಲಾಗಿದೆ. ಟಾಟಾ ಮಹಿಳಾ ಪ್ರೀಮಿಯರ್ ಲೀಗ್ (WPL) T-20 ಕ್ರಿಕೆಟ್ ಪಂದ್ಯಗಳು ಬೆಂಗಳೂರಿನಲ್ಲಿ ಫೆಬ್ರವರಿ 21, 22, 24, 25, 26, 27, 28 ಮತ್ತು ಮಾರ್ಚ್ 01, 2025 ರಂದು ನಡೆಯಲಿವೆ. ಕ್ರಿಕೆಟ್ ಪಂದ್ಯಗಳಿಗೆ ಪ್ರಯಾಣಿಸಲು ಮತ್ತು ಹಿಂತಿರುಗಲು ಅನುಕೂಲವಾಗುವಂತೆ, ಬಿ.ಎಂ.ಆರ್.ಸಿ.ಎಲ್ ಈ ಮೇಲೆ ತಿಳಿಸಿದ ದಿನಗಳಲ್ಲಿ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಿದೆ. ನೇರಳೆ ಮತ್ತು ಹಸಿರು ಮಾರ್ಗಗಲ್ಲಿನ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಾದ ಚಲ್ಲಘಟ್ಟ, ವೈಟ್ಫೀಲ್ಡ್, ಮಾದಾವರ ಮತ್ತು ರೇಷ್ಮೆ ಸಂಸ್ಥೆಯಿಂದ ಕೊನೆಯ ರೈಲು ಸೇವೆ ರಾತ್ರಿ 11.20 ರವರೆಗೆ ಮತ್ತು ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ರಾತ್ರಿ 11:55 ಕ್ಕೆ ಹೊರಡುತ್ತವೆ. ಪ್ರಯಾಣಿಕರು…
ಬೆಂಗಳೂರು: ರಾಜ್ಯ ಸರ್ಕಾರ ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ ಮಾಡಿದ್ದು, ಮುಂದಿನ ಬಜೆಟ್ ನಲ್ಲಿ ಇನ್ನಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಇದರಿಂದ ಕೃಷಿಕರ ಉತ್ಪಾದನೆ ಹೆಚ್ಚಳ ಹಾಗೂ ಉತ್ಪನ್ನಗಳ ಮೌಲ್ಯವರ್ಧನೆಗೆ ಅನುಕೂಲವಾಗಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ನಗರದ ಬಹುಮಹಡಿಗಳ ಕಟ್ಟಡದ ಐಟಿ ,ಬಿಟಿ ಸಭಾಂಗಣಲ್ಲಿಂದು ಕೃಷಿ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ವತಿಯಿಂದ ಆಯೋಜಿಸಲಾಗಿದ್ದ ಅಗ್ರಿ ಸ್ಟಾರ್ಟ್ ಅಪ್ ಉದ್ದಿಮೆದಾರರೊಂದಿಗೆ 2025-26ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನಗಳ ಅಳವಡಿಕೆಯೊಂದಿಗೆ ನವೋದ್ಯಮಗಳು ಪ್ರಾರಂಭವಾಗುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದರು. ಕೃಷಿ ಇಲಾಖೆ ವತಿಯಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಕೃಷಿ ನವೋದ್ಯಮ ಅನುಷ್ಠಾನಗೊಂಡಿದ್ದು, ನವೋದ್ಯಮಗಳಿಗೆ ರೂ.808 ಲಕ್ಷಗಳ ಅನುದಾನ ವೆಚ್ಚ ಮಾಡಲಾಗಿದೆ. ರೂ.678 ಲಕ್ಷಗಳ ಬ್ಯಾಂಕ್ ಸಾಲಗಳ ಮೂಲಕ ಒದಗಿಸಲಾಗಿದೆ ಎಂದು ಚಲುವರಾಯಸ್ವಾಮಿ ಮಾಹಿತಿ ನೀಡಿದರು. ಕೃಷಿಯಲ್ಲಿನ ನವೀನ ತಾಂತ್ರಿಕತೆಗಳು ಹಾಗೂ ನೂತನ ಪರಿಕಲ್ಪನೆಗಳಿಂದ ಕೃಷಿಯಲ್ಲಿ ನವೋದ್ಯಮಗಳನ್ನು ಪ್ರಾರಂಭಿಸಿ ಕೃಷಿ…
ಬೆಂಗಳೂರು: ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ಪೂರ್ವ ಕರಾವಳಿ ರೈಲ್ವೆಯು ಭುವನೇಶ್ವರ ಮತ್ತು ಯಶವಂತಪುರ ನಿಲ್ದಾಣಗಳ ನಡುವಿನ ಸಾಪ್ತಾಹಿಕ ವಿಶೇಷ ರೈಲು ಸೇವೆಗಳನ್ನು ಹೆಚ್ಚುವರಿ 9 ಟ್ರಿಪ್ಗಳಿಗೆ ವಿಸ್ತರಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 02811 ಭುವನೇಶ್ವರ-ಯಶವಂತಪುರ ಸಾಪ್ತಾಹಿಕ ವಿಶೇಷ ರೈಲು ಮಾರ್ಚ್ 1, 8, 15, 22, 29; ಏಪ್ರಿಲ್ 5, 12, 19 ಮತ್ತು 26, 2025 ರಂದು ಭುವನೇಶ್ವರ ನಿಲ್ದಾಣದಿಂದ 19:15 ಗಂಟೆಗೆ ಹೊರಟು, ಮೂರನೇ ದಿನ 00:15 ಗಂಟೆಗೆ ಯಶವಂತಪುರ ನಿಲ್ದಾಣಕ್ಕೆ ಆಗಮಿಸಲಿದೆ. ಅದೇ ರೀತಿ ರೈಲು ಸಂಖ್ಯೆ 02812 ಯಶವಂತಪುರ-ಭುವನೇಶ್ವರ ಸಾಪ್ತಾಹಿಕ ವಿಶೇಷ ರೈಲು ಮಾರ್ಚ್ 3, 10, 17, 24, 31; ಏಪ್ರಿಲ್ 7, 14, 21 ಮತ್ತು 28, 2025 ರಂದು ಯಶವಂತಪುರದಿಂದ 04:30 ಗಂಟೆಗೆ ಹೊರಟು, ಮರುದಿನ 06:00 ಗಂಟೆಗೆ ಭುವನೇಶ್ವರವನ್ನು ತಲುಪಲಿದೆ. ಈ ರೈಲುಗಳ ಪರಿಷ್ಕೃತ ಸಮಯಗಳ ಮಾಹಿತಿಗಾಗಿ, ಪ್ರಯಾಣಿಕರು ಭಾರತೀಯ ರೈಲ್ವೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು. https://kannadanewsnow.com/kannada/udayagiri-police-station-stone-pelting-case-maulvi-mustaq-sent-to-14-day-judicial-custody/…
ಬೆಂಗಳೂರು : ಪ್ರಸ್ತುತ ವರ್ಷ ಫೆಬ್ರವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯನ್ ಬಿಸಿಲು ಅಧಿಕವಾಗಿದ್ದರೆ, ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಪಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಪ್ರಸ್ತುತ 2025 ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚಿಸಲಾಯಿತು. ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, “ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಏಪ್ರಿಲ್-ಮೇ ತಿಂಗಳುಗಳಲ್ಲಿ ಉತ್ತಮ ಮಳೆಯಾಗಲಿದೆ. ಫೆಬ್ರವರಿ-ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಹೆಚ್ಚು ಮಳೆ ಸಾಧ್ಯತೆ ಇದೆ. ಆದರೆ, ಹಿಂಗಾರಿನಲ್ಲಿ ಪ್ರಸ್ತುತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಲಿದೆ” ಎಂದು ಮಾಹಿತಿ ನೀಡಿದರು. ಪ್ರಸ್ತುತ ವರ್ಷ ಫೆಬ್ರವರಿಯಲ್ಲೇ ಬಿಸಿಲಿನ ತಾಪ ಹೆಚ್ಚಾಗಿದೆ. ಈ ಪ್ರಮಾಣ ವಾಡಿಕೆಗಿಂತ 2.5…
ಮೈಸೂರು: ಕಳೆದ ಕೆಲವು ದಿನಗಳ ಹಿಂದೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದನಾಕಾರಿ ಭಾಷಣ ಮಾಡಿ ಪರಾರಿಯಾಗಿದ್ದ ಮುಸ್ಲಿಂ ಮುಖಂಡ ಮುಸ್ತಾಕ್ ನನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಬಂಧಿತ ಆರೋಪಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹೌದು ಮೈಸೂರಿನಲ್ಲಿ ಕಳೆದ 11 ದಿನಗಳ ಹಿಂದೆ ಉದಯಗಿರಿ ಠಾಣೆಯ ಮೇಲೆ ಉದ್ರಿಕ್ತರ ಗುಂಪೊಂದು ಕಲ್ಲುತೂರಾಟ ನಡೆಸಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿ ಮುಸ್ತಾಕ್ ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ಮುಂಜಾಗ್ರತ ಕ್ರಮವಾಗಿ ಉದಯಗಿರಿ ಠಾಣೆ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆರೋಪಿ ಮುಸ್ತಾಕ್ ನನ್ನು ಬಂಧಿಸಿ ಇದೀಗ ಪೊಲೀಸರು ವಿಚಾರಣೆ ನಡೆಸಿದ್ದರು. ಆ ಬಳಿಕ ಮೈಸೂರಿನ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಧೀಶರು, ಆರೋಪಿ ಮೌಲ್ವಿ ಮುಸ್ತಾಕ್ ನನ್ನು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಈ ಬಾರಿಯ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಲಾಗಿದೆ. ಈ ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಂದು ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ (ಎಸ್.ಎಸ್.ಕೆ) ಭವನದಲ್ಲಿ “2024-25ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆ”ಯ ಪೂರ್ವಸಿದ್ದತೆಗಳ ಕುರಿತು ಶಿಕ್ಷಣ ಇಲಾಖೆ, ಗೃಹ ಇಲಾಖೆ ಹಾಗೂ ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆನಡೆಸಲಾಯಿತು. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಸೇರಿದಂತೆ ಜಿಲ್ಲಾಮಟ್ಟದ ಉನ್ನತ ಅಧಿಕಾರಿಗಳೊಂದಿಗೆ “ಪರೀಕ್ಷಾ ಸಂಬಂಧ ಕೈಗೊಗೊಳ್ಳಬೇಕಾಗಿರುವ ಭದ್ರತೆಗಳ” ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಕೆಲವು ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು. ಈ ಸಭೆಯಲ್ಲಿ ಚರ್ಚಿಸಿ, ಕೈಗೊಂಡಿರುವ ಕ್ರಮಗಳು ♦️ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 01ರಿಂದ 20ರ ವರೆಗೆ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯು ಮಾರ್ಚ್ 21 ರಿಂದ ಏಪ್ರಿಲ್ 04ರವರೆಗೆ ನಡೆಯಲಿದ್ದು ಅಗತ್ಯ ಕ್ರಮ ಕೈಗೊಳ್ಳುವ ಕುರಿತು. ♦️ರಾಜ್ಯದ ಎಲ್ಲ…
ಧಾರವಾಡ: ಮುಡಾ ಹಗರಣ ಸಂಬಂಧ ಇಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಸಮನ್ಸ್ ನೀಡಲಾಗಿತ್ತು. ಈ ಸಮನ್ಸ್ ಗೆ ಹೈಕೋರ್ಟ್ ತಡೆಯಾಜ್ಞೆಯನ್ನು ವಿಸ್ತರಿಸಿ ಆದೇಶಿಸಿದೆ. ಇಂದು ಧಾರವಾಡದ ವಿಭಾಗೀಯ ಹೈಕೋರ್ಟ್ ನ್ಯಾಯಪೀಠದಲ್ಲಿ ಇಡಿ ಸಮನ್ಸ್ ರದ್ದು ಕೋರಿ ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು. ಇಡಿ ಹಾಗೂ ಸಿಎಂ ಪತ್ನಿ ಪಾರ್ವತಿ, ಬೈರತಿ ಸುರೇಶ್ ಎರಡು ಕಡೆಯ ವಾದ, ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿತು. ಅಲ್ಲದೇ ಇಡಿ ಸಮನ್ಸ್ ಗೆ ತಡೆಯಾಜ್ಞೆಯನ್ನು ವಿಸ್ತರಿಸಿ ಆದೇಶಿಸಿದೆ. ಅಂದಹಾಗೇ ಸಿಎಂ ಸಿದ್ಧಾರಮಯ್ಯ ಪತ್ನಿ ಪರವಾಗಿ ಹಿರಿಯ ವಕೀಲ ಸಂದೇಶ್ ಚೌಟಾ ಅವರು, ಇಡಿಯು ಮೂಲ ಅಂಶಗಳೇ ಇಲ್ಲದೇ ಇಸಿಆರ್ ದಾಖಲಿಸಿದೆ. ಸೈಟ್ ಹಿಂದಿರಸಿರುವ ಅಪರಾಧ ಒಪ್ಪಿಕೊಂಡಂತೆ ಅಲ್ಲ. ಸಿಎಂ ಮೇಲೆ ಆರೋಪ ಬಂದಿದ್ದಕ್ಕೆ ಆಗಿದೆ ಎಂಬುದಾಗಿ ವಾದಿಸಿದರು. ಇಡಿ ಪರವಾಗಿ ಎಎಸ್ ಜೆ…
ಬೆಂಗಳೂರು: ನಗರದ ಪಿಯುಸಿ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಪರೀಕ್ಷೆ-1ಕ್ಕೆ ತಮ್ಮ ನಿವಾಸದಿಂದ ಪರೀಕ್ಷಾ ಕೇಂದ್ರಕ್ಕೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಹೌದು. ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ, ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಲಿವೆ. ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. https://twitter.com/KarnatakaVarthe/status/1892518023392788601 https://kannadanewsnow.com/kannada/cm-siddaramaiah-arrives-at-vidhana-soudha-in-toyota-vellfire-car/ https://kannadanewsnow.com/kannada/meenakshi-negi-appointed-as-first-woman-chief-of-forest-force-by-state-government/
ಬೆಂಗಳೂರು: ರಾಜ್ಯ ಸರ್ಕಾರದಿಂದ ಅರಣ್ಯ ಪಡೆಗೆ ಪ್ರಥಮ ಮಹಿಳಾ ಮುಖ್ಯಸ್ಥೆಯಾಗಿ ಐಎಫ್ಎಸ್ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪೋಸ್ಟಿಂಗ್ಗಾಗಿ ಕಾಯುತ್ತಿರುವ) ಮೀನಾಕ್ಷಿ ನೇಗಿ (ಕೆಎನ್: 1989) ಅವರನ್ನು ಕರ್ನಾಟಕದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ (ಅರಣ್ಯ ಪಡೆ ಮುಖ್ಯಸ್ಥರು) ತಕ್ಷಣದಿಂದ ಜಾರಿಗೆ ಬರುವಂತೆ 2,25,000 ರೂ.ಗಳ (ನಿಗದಿತ) ಅಪೆಕ್ಸ್ ಸ್ಕೇಲ್-ಲೆವೆಲ್ -17 ರಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಲಾಗಿದೆ ಎಂದಿದೆ. ಇನ್ನೂ ಮುಂದಿನ ಆದೇಶದವರೆಗೆ ಐಎಫ್ಎಸ್ ಸುಭಾಷ್ ಕೆ ಮಲ್ಖೇಡೆ ಅವರನ್ನು ಸಮವರ್ತಿ ಉಸ್ತುವಾರಿಯಿಂದ ಮುಕ್ತಗೊಳಿಸಲಾಗಿದೆ ಎಂಬುದಾಗಿ ತಿಳಿಸಿದೆ. https://kannadanewsnow.com/kannada/deputy-cm-dk-shivakumar-inaugurates-3-day-namma-road-2025-workshop-exhibition-conference/ https://kannadanewsnow.com/kannada/cm-siddaramaiah-arrives-at-vidhana-soudha-in-toyota-vellfire-car/ https://kannadanewsnow.com/kannada/breaking-producer-k-manjus-son-shreyas-escapes-unhurt-in-car-accident/