Author: kannadanewsnow09

ಬೆಂಗಳೂರು: ಹೊಸಕೋಟೆ ಬಳಿಯ ಕರಿಬೀರನಹೊಸಹಳ್ಳಿ ಬಳಿಯಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರೋ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿಯಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ. ಮೃತರನ್ನು ಮುನಿಯಪ್ಪ(70), ಮುನಿಯಮ್ಮ (60) ಹಾಗೂ ಭಾರತಿ (40) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಹೊಸಕೋಟೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ. https://kannadanewsnow.com/kannada/bjp-is-tarnishing-the-image-of-the-state-for-political-gains-dk-shivakumar-shivakumars-speech/ https://kannadanewsnow.com/kannada/harsh-vardhan/

Read More

ಬೆಂಗಳೂರು : “ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ಕಾರಿದರು. ಇಂದು ಬಾಂಬ್ ಸ್ಫೋಟ ವಿಚಾರವಾಗಿ ಬಿಜೆಪಿ ನಾಯಕರ ರಾಜಕೀಯ ಹೇಳಿಕೆ ಬಗ್ಗೆ ಮಾಧ್ಯಮದವರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, “ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅವರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ತನಿಖೆ. ವಿಚಾರವಾಗಿ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಆಯಾಮದಲ್ಲೂ ತನಿಖೆ ಮಾಡಲಾಗುತ್ತಿದೆ. ಬೆಂಗಳೂರಿನ ಗೌರವ ರಕ್ಷಣೆಗೆ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದರು. ಈ ಮಧ್ಯೆ ಬಿಜೆಪಿ ನಾಯಕರು ಈ ವಿಚಾರವಾಗಿ ರಾಜಕೀಯ ಮಾಡಲು ಮುಂದಾಗಿದ್ದಾರೆ. ಅದಕ್ಕಾಗಿ ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಘನತೆಗೆ ಧಕ್ಕೆ ತರುತ್ತಿದ್ದಾರೆ. ಆಮೂಲಕ ತಮ್ಮ ಗೌರವವನ್ನೂ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದರು. ಅವರ ಕಾಲದಲ್ಲಿ ಏನೆಲ್ಲಾ ಆಗಿದೆ ಎಂದು ಮರೆತಿದ್ದಾರೆ. ಅವರು ತಮ್ಮ ಮುಖವನ್ನೊಮ್ಮೆ ಕನ್ನಡಿಯಲ್ಲಿ ನೋಡಿಕೊಳ್ಳಲಿ. ಈ ವಿಚಾರವಾಗಿ…

Read More

ಚಿಕ್ಕಮಗಳೂರು: ಮಲೆನಾಡ ಭಾಗದಲ್ಲಿ ಕಾಫಿ ಪ್ಲಾಂಟರ್ಸ್ ಗಳ ಬಹುದಿನಗಳ ಬೇಡಿಕೆಯಾಗಿದ್ದ ಕಾಫಿ ಪ್ಲಾಂಟೇಷನ್ ಲೀಸ್ ಮೇಲೆ ನೀಡುವ ಕುರಿತು ನಮ್ಮ ಸರ್ಕಾರ ತೀರ್ಮಾನ ಕೈಗೊಂಡಿದೆ. ಶೀರ್ಘದಲ್ಲಿ ಈ ಕುರಿತು ಅರ್ಜಿಗಳನ್ನು ಆಹ್ವಾನಿಸಲು ಕ್ರಮ ಕೈಗೊಳ್ಳಲಿದೆ. ಇದರಿಂದ ಕಾಫಿ ಬೆಳೆಗಾರ ಸಮುದಾಯಕ್ಕೆ ಮತ್ತು ಬಹಳಷ್ಟು ಜನರಿಗೆ ಅನುಕೂಲ‌ ಆಗಲಿದೆ ಎಂದು, ತಜ್ಷಣ ನಿಯಮಗಳನ್ನು ರೂಪಿಸುವಂತೆ DC, CEO ಗಳಿಗೆ ಸೂಚಿಸಿದರು. ಗ್ಯಾರಂಟಿ ಯೋಜನೆಗಳಿಂದ ಚಿಕ್ಕಮಗಳೂರು ಜಿಲ್ಲೆಯ ಜನರ ಖಾತೆಗೆ ಜಮೆ ಆದ ಹಣ ಎಷ್ಟು ಗೊತ್ತಾ? ಶಕ್ತಿ ಯೋಜನೆಯಲ್ಲಿ ಇದುವರೆಗೂ ಒಟ್ಟು 1 ಕೋಟಿ 52 ಲಕ್ಷ ಹೆಣ್ಣು ಮಕ್ಕಳು ವಿಶೇಷ ಪ್ರಯೋಜನ ಪಡೆದಿದ್ದಾರೆ. ಈ ಬಾಬ್ತು ರೂ.55 ಕೋಟಿ 71 ಲಕ್ಷ ವೆಚ್ಚವಾಗಿರುತ್ತದೆ. ಅಲ್ಲದೇ ಚಿಕ್ಕಮಗಳೂರು ಜಿಲ್ಲೆಯ ಧಾರ್ಮಿಕ ಸ್ಥಳಗಳಿಗೆ ಮತ್ತು ಪ್ರವಾಸಿ ತಾಣಗಳಿಗೆ ಬರುವ ಹೆಣ್ಣುಮಕ್ಕಳ ಸಂಖ್ಯೆಯಲ್ಲಿಯೂ ಗಣನೀಯವಾಗಿ ಹೆಚ್ಚಳವಾಗಿದೆ. ಈ ಮೂಲಕ ರಾಜ್ಯದ ಆರ್ಥಿಕ ಚಟುವಟಿಕೆಯೂ ಸಹ ಹೆಚ್ಚಾಗಿರುವುದನ್ನು ಗಮನಿಸಬಹುದಾಗಿದೆ ಎಂದರು. 200 ಯೂನಿಟ್‍ ಗಿಂತ ಕಡಿಮೆ ಗೃಹ ವಿದ್ಯುತ್…

Read More

ಚಿಕ್ಕಮಗಳೂರು: ಜೆಡಿಎಸ್, ಬಿಜೆಪಿ ನಾಯಕರಿಗೆ ತಾಕತ್ತು, ಧಮ್ ಇದ್ದರೇ ಒಂದೇ ವೇದಿಕೆಗೆ ಬರಲಿ. ಗ್ಯಾರಂಟಿ ಯೋಜನೆ ಜಾರಿ ಸಾಧ್ಯವಿಲ್ಲ ಎಂದು ಪಿಎಂ ಮೋದಿ ಹೇಳಿದ್ದರು. ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದಿದ್ದರು. ಆದರೇ ಆಯ್ತಾ.? ಈ ಬಗ್ಗೆ ಚರ್ಚಿಸಲು ಬಹಿರಂಗವಾಗಿ ವೇದಿಕೆಗೆ ಬರಲಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಸವಾಲ್ ಹಾಕಿದ್ದಾರೆ. ನಗರದಲ್ಲಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ನಾನಾ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮೌಲ್ಯವನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು ಸರ್ವರ ಉದಯಕ್ಕಾಗಿನೇ ಕಾಂಗ್ರೆಸ್ ಶ್ರಮಿಸುತ್ತಿದೆ. ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ನಾಲ್ಕೂವರೆ ಕೋಟಿ ಜನರ ಮನೆ ಬಾಗಿಲು ಬಡಿದಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು. ಬಿಜೆಪಿ ರಾಜ್ಯದ ಜನರ ಬದುಕನ್ನು ಪಕ್ಕಕ್ಕಿಟ್ಟು ಕೇವಲ ಭಾವನೆಗಳನ್ನು ಕೆರಳಿಸುತ್ತದೆ. ಇದುವರೆಗೂ ರಾಜ್ಯದಲ್ಲಿ ಬಿಜೆಪಿ ಒಂದು ಭಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರೇ ಹೊರತು ಸ್ವಂತ…

Read More

ಬೆಂಗಳೂರು : ಕಲಬುರಗಿ ಜಿಲ್ಲೆಯಲ್ಲಿ ಹತ್ಯೆಗಳಗಾದ ಪಕ್ಷದ ಇಬ್ಬರು ಕಾರ್ಯಕರ್ತರ ಕುಟುಂಬಗಳ ಸದಸ್ಯರನ್ನು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಸೋಮವಾರ ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. ಸೋಮವಾರ ಮಧ್ಯಾಹ್ನ ಕಲಬುರಗಿ ರೈಲು ನಿಲ್ದಾಣದಲ್ಲಿ ಅಯೋಧ್ಯೆಗೆ ತೆರಳಲಿರುವ ಭಕ್ತರ ಪ್ರಯಾಣಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಅವರು ಆಳಂದ ಮತ್ತು ಅಫಜಲಪುರ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದಾರೆ. ಆಳಂದ ತಾಲ್ಲೂಕಿನ ಸರಸಂಬ ಗ್ರಾಮಕ್ಕೆ ತೆರಳಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ಹನುಮಂತಪ್ಪ ಆಲೂರೆ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಆಲೂರೆ ಅವರ ಕುಟುಂಬ ಸದಸ್ಯರ ಜತೆ ಸಮಾಲೋಚನೆ ನಡೆಸಿ ಅವರಿಗೆ ಸಾಂತ್ವನ ಹೇಳಲಿದ್ದಾರೆ. ಬಳಿಕ ಅಫಜಲಪುರ ತಾಲ್ಲೂಕಿನ ಸಾಗನೂರ ಗ್ರಾಮಕ್ಕೆ ತೆರಳಿ ಹತ್ಯೆಗೊಳಗಾಗಿರುವ ಬುಜೆಪಿ ಯುವ ಮೋರ್ಚಾ ಕಾರ್ಯಕರ್ತ ಗಿರೀಶ್ ಚಕ್ರ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. ಬಳಿಕ ಬಾಗಲಕೋಟಗೆ ತೆರಳಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಮಂಗಳವಾರ ಬೆಳಗಾವಿಗೆ ಪ್ರಯಾಣ ಬೆಳೆಸುವ ಅಶೋಕ್ ಅವರು ಸಂಜೆ ಕೆಎಲ್…

Read More

3.3.2024 ತೇಯ್ಪರೈ ಅಷ್ಟಮಿ ಆರಾಧನೆ ಭಾನುವಾರ ಸಂಜೆ ಭೈರವ ಪೂಜೆ ಬಹಳ ವಿಶೇಷ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. 3.3.2024 ಭಾನುವಾರದ ಜೊತೆಗೆ ತೇಪಿರೈ ಅಷ್ಟಮಿ ತಿಥಿ. ಹಾಗಾಗಿ ಈ ದಿನ ಬಹಳ ವಿಶೇಷವಾದ ದಿನವಾಗಿದೆ. ಶತ್ರು ಬಾಧೆ ತೊಲಗಲು, ಋಣ ಬಾಧೆ ತೊಲಗಲು, ಕಂಡ್ರಿಯೂಷಿ ತೊಲಗಲು ಎಲ್ಲರೂ ನಾಳೆ ಭೈರವ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಬೇಕು. ನಾಳೆ ಭಾನುವಾರ. ಸಂಜೆ 4:30 ರಿಂದ 6:00 ರವರೆಗೆ ರಾಹುವಿನ ಸಮಯ. ಈ ವೇಳೆ ಎಲ್ಲ ಶಿವಾಲಯಗಳಲ್ಲಿ ಭೈರವನಿಗೆ ವಿಶೇಷ ಪೂಜೆಗಳು ನಡೆಯಲಿವೆ. ಅಲ್ಲಿಗೆ ಭೇಟಿ ನೀಡಲು ಮರೆಯದಿರಿ ಮತ್ತು ಹಾಜರಾಗಿ ನಿಮ್ಮ ಪೂಜೆಯನ್ನು ನೆರವೇರಿಸಿ. ಇದರೊಂದಿಗೆ ಸಾಲ ಬಾಧೆ ಇರುವವರು ನಾಳೆ ಮನೆಯಲ್ಲಿ ಮಾಡಬೇಕಾದ ಪೂಜೆಯನ್ನು ಈಗ ತಿಳಿಯೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ…

Read More

ಬೆಂಗಳೂರು : ಸಮಾಜಘಾತುಕ ಶಕ್ತಿಗಳು ಹಾಗೂ ಉಗ್ರಗಾಮಿ ಸಂಘಟನೆಗಳು ನಡೆಸುತ್ತಿರುವ ದುಷ್ಕೃತ್ಯಗಳ ಬಗ್ಗೆ ರಾಜ್ಯದ ಕಾಂಗ್ರೆಸ್‌ ಸರಕಾರ ಸಹಾನುಭೂತಿ ಮನೋಭಾವ ಪ್ರದರ್ಶಿಸುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು, ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶದ್ರೋಹ ಕೆಲಸ ಮಾಡುತ್ತಿರುವ ರಾಜ್ಯ ಸರಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗಿದೆ. ಜನವಿರೋಧಿ ಧೋರಣೆಯ ಈ ಸರಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸುವುದಕ್ಕೆ ಪೂರ್ವಭಾವಿಯಾಗಿ ಜನತೆಯಿಂದ ಅಭಿಪ್ರಾಯ ಸಂಗ್ರಹಿಸುವ “ಸಂಕಲ್ಪ ಅಭಿಯಾನ” ಕಾರ್ಯಕ್ರಮಕ್ಕೆ ಪಕ್ಷದ ಕಚೇರಿಯಲ್ಲಿ ಭಾನುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರಿಗೆ ಅವರು ಪ್ರತಿಕ್ರಿಯೆ ನೀಡಿದರು. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮತ್ತು ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಗಳಲ್ಲಿ ಸರಕಾರ ನಡೆದುಕೊಳ್ಳುತ್ತಿರುವ ರೀತಿ ಕಳವಳಕಾರಿಯಾಗಿದೆ. ದೇಶ ವಿದ್ರೋಹಿ ಶಕ್ತಿಗಳನ್ನೇ ಸಮರ್ಥನೆ ಮಾಡುವ,…

Read More

ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಸಿಸಿಬಿಯಿಂದ ಕೆಲವು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ಆಡುಗೋಡಿಯ ಟೆಕ್ನಿಕಲ್ ಸೆಲ್ ನಲ್ಲಿ ತೀವ್ರವಾಗಿ ವಿಚಾರಣೆಗೆ ಒಳಪಡಿಸುತ್ತಿರೋದಾಗಿ ತಿಳಿದು ಬಂದಿದೆ. ಸಿಸಿಬಿ ಪೊಲೀಸರಿಂದ ಆಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಶಂಕಿತರನ್ನು ಕರೆತಂದು ತೀವ್ರ ವಿಚಾರಣೆಯನ್ನು ನಡೆಸಲಾಗುತ್ತಿದೆ. ಈ ವಿಚಾರಣೆಯ ವೇಳೆಯಲ್ಲಿ ಅಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಈಶಾನ್ಯ ವಿಭಾಗ ಡಿಸಿಲಿ ಲಕ್ಷ್ಮೀ ಪ್ರಸಾದ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಶುಕ್ರವಾರದಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿತ್ತು. ಐದು ನಿಮಿಷಗಳಲ್ಲಿ ಎರಡು ಬಾರಿ ಸ್ಪೋಟ ಉಂಟಾಗಿತ್ತು. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://kannadanewsnow.com/kannada/harsh-vardhan/ https://kannadanewsnow.com/kannada/pakistan-shehbaz-sharif-elected-prime-minister-three-weeks/

Read More

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವಂತ 2500 ನಿರ್ವಾಹಕರ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನವಾಗಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ ದರ್ಜೆ-3 ಮೇಲ್ವಿಚಾರಕೇತರ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ಹುದ್ದೆಗಳ ವಿವರ ಮಿಕ್ಕುಳಿದ ವೃಂದ -2286 ಹುದ್ದೆಗಳು ಸ್ಥಳೀಯ ವೃಂದ – 199 ಹುದ್ದೆಗಳು ಹಾಗೂ ಹಿಂಬಾಕಿ 15 ಹುದ್ದೆಗಳು ಸೇರಿ 214 ಹುದ್ದೆಗಳು ಶೈಕ್ಷಣಿಕ ವಿದ್ಯಾರ್ಹತೆ ಪಿಯುಸಿ ಆರ್ಟ್ಸ್, ಕಾಮರ್ಸ್, ಸೈನ್ಸ್ ನಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 10+2 ಐಸಿಎಸ್ಇ, ಸಿಬಿಎಸ್ಇರಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾಹ್ರತೆ ಅಂದರೆ ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷಗಳ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರತಕ್ಕದ್ದು. ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್ ಅನ್ನು ಹೊಂದಿರಬೇಕು. ವಯೋಮಿತಿ ಸಾಮಾನ್ಯ ವರ್ಗದವರಿಗೆ 35 ವರ್ಷಗಳು. 2ಎ,…

Read More

ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಅದೇನು ಅಂದ್ರೇ ಜಸ್ಟ್ ಈ ನಂಬರ್ ಗೆ ವಾಟ್ಸಾಪ್ ( WhatsApp ) ಮಾಡಿ ಸಾಕು. ಅದು ಹೇಗೆ ಅಂತ ಮುಂದೆ ಓದಿ. ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಪಡೆಯಬಹುದಾಗಿದೆ. ಪಂಚಮಿತ್ರವು ಕರ್ನಾಟಕ ಗ್ರಾಮ ಪಂಚಾಯತಿಗಳ ಮುಖಪುಟವಾಗಿದ್ದು, ಸಾರ್ವಜನಿಕರ ಮಾಹಿತಿಯ ವೇದಿಕೆಯಾಗಿದೆ. ಯಾವುದೇ ಗ್ರಾಮ ಪಂಚಾಯಿತಿಯ ಚುನಾಯಿತ ಸದಸ್ಯರ, ಪಂಚಾಯಿತಿ ಸಿಬ್ಬಂದಿಗಳ, ಗ್ರಾಮ ಪಂಚಾಯಿತಿಯ ಸಭಾ ನಡುವಳಿಗಳು, ಮುಂಬರುವ ಸಭೆಗಳ ದಿನಾಂಕ ಮತ್ತು ಅದರಲ್ಲಿ ಚರ್ಚಿಸುವ ವಿಷಯಗಳು, ಗ್ರಾಮ ಪಂಚಾಯಿತಿಯ ಆದಾಯ, ಇತ್ಯಾದಿ ಮಾಹಿತಿಯನ್ನು ಸಾರ್ವಜನಿಕರು ತಿಳಿಯಬಹುದು. ವಾಟ್ಸಾಪ್‌ ಚಾಟ್‌ ಆರಂಭಿಸಲಾಗಿದ್ದು,…

Read More