Author: kannadanewsnow09

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ರಾಜ್ಯಬಜೆಟ್ 2024-25 ಮಂಡಿಸುತ್ತಿದ್ದಾರೆ. ಇಂದಿನ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಬಂಫರ್ ಗಿಫ್ಟ್ ನೀಡಿದ್ದಾರೆ. ಅದು ಏನು ಅನ್ನೋ ಸಂಪೂರ್ಣ ಮಾಹಿತಿ ಮುಂದೆ ಓದಿ.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿಪಡಿಸಲು ಪ್ರಗತಿ ಪಥ ಯೋಜನೆಯನ್ನು ಬಾಹ್ಯ ನೆರವಿನೊಂದಿಗೆ ಪ್ರಾರಂಭಿಸಲಾಗುವುದು. ಈ ಯೋಜನೆ ಅಡಿಯಲ್ಲಿ 189 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ 50 ಕಿ.ಮೀ. ಉದ್ದದ ರಸ್ತೆಗಳಂತೆ, ಒಟ್ಟಾರೆಯಾಗಿ 9,450 ಕಿ.ಮೀ. ಉದ್ದದ ರಸ್ತೆ ಸಂಪರ್ಕ ಜಾಲವನ್ನು 5,200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು. ಕಲ್ಯಾಣ ಪಥ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಮಾದರಿಯಲ್ಲಿ ಒಟ್ಟು 1,150 ಕಿ.ಮೀ. ರಸ್ತೆಗಳನ್ನು 1,000…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ರಾಜ್ಯಬಜೆಟ್ 2024-25 ಮಂಡಿಸುತ್ತಿದ್ದಾರೆ. ಇಂದಿನ ಬಜೆಟ್ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕೊಟ್ಟ ಕೊಡುಗೆ ಏನು ಎಂಬುದಾಗಿ ಮುಂದೆ ಸಂಪೂರ್ಣ ಮಾಹಿತಿ ಓದಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ ಎಂದು ಹೇಳಿದರು. 2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು…

Read More

ಬೆಂಗಳೂರು: ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ನೀಡುತ್ತಿರುವ ಕೋರ್ಸುಗಳಲ್ಲಿ ವಿಷಯಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು 25,000 ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು. ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆ ಉದ್ಯೋಗಾಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರುವ ಮೂಲಕ ಯುವಸಮೃದ್ಧಿ ಉದ್ಯೋಗ ಮೇಳವನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದಂತ ಅವರು,  ನಿರುದ್ಯೋಗಿ ಯುವಜನರಲ್ಲಿ ಭರವಸೆ ತುಂಬಿ, ಉದ್ಯೋಗ ಪಡೆದುಕೊಳ್ಳುವತ್ತ ಬೆಂಬಲ ನೀಡುವ ಯೋಜನೆ ಯುವನಿಧಿ. ಸ್ವಾಮಿ ವಿವೇಕಾನಂದರವರ ಜನ್ಮದಿನವಾದ ರಾಷ್ಟ್ರೀಯ ಯುವ ದಿನಾಚರಣೆದಂದು ಚಾಲನೆಗೊಂಡ ಯುವನಿಧಿ ಯೋಜನೆಯಡಿ ಪದವಿ ಪಡೆದು ಆರು ತಿಂಗಳಾದರೂ ನಿರುದ್ಯೋಗಿಗಳಾಗಿರುವ ಪದವೀಧರ ಯುವಕರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು,…

Read More

ಬೆಂಗಳೂರು: ರಾಜ್ಯದ ಕೊಳಗೇರಿ ನಿವಾಸಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರಧಾನ ಮಂತ್ರಿ ಅವಾಸ್ ಯೋಜನೆಯ ವಂತಿಗೆ ಮಿತಿಯನ್ನು ಐದು ಲಕ್ಷದಿಂದ 1 ಲಕ್ಷಕ್ಕೆ ಇಳಿಕೆ ಮಾಡಲಾಗಿದೆ. ಈ ಮೂಲಕ ಕೊಳಗೇರಿ ನಿವಾಸಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್ ಮಂಡಿಸಿ ಮಾತನಾಡಿ, ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ. ನಮ್ಮ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ. ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದ್ದು, 2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುತ್ತಿದೆ. 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ವಸತಿರಹಿತರ ಸಂಖ್ಯೆಯನ್ನು ಗುರುತಿಸಲು ಒಂದು ಸಮೀಕ್ಷೆಯನ್ನು ನಡೆಸಲಾಗುವುದು ಎಂದರು. ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್‌…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ರಾಜ್ಯ ಬಜೆಟ್ 2024-25ಅನ್ನು ಮಂಡಿಸಿ, ಕೃಷಿ ಕ್ಷೇತ್ರಕ್ಕೆ ಬಂಪರ್ ಗಿಫ್ಟ್ ನೀಡಿದ್ದಾರೆ. ಹಾಗಾದ್ರೇ ಅವರು ಇಂದಿನ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಏನು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ. ಕೃಷಿ     ಹೊಲವನುತ್ತು ಬಿತ್ತೋರು ಬೆಳೆಯ ಕುಯ್ದು ಬೆವರೋರು ಬಿಸಿಲಿನಲ್ಲಿ ಬೇಯೋರು ನನ್ನ ಜನಗಳು – ಪದ್ಮಶ್ರೀ ಡಾ|| ಸಿದ್ದಲಿಂಗಯ್ಯ ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ರೈತರಿಗೆ ಕೆಳಕಂಡ ವಿಷಯಗಳಲ್ಲಿ ಮಾರ್ಗದರ್ಶನ ಹಾಗೂ ಬೆಂಬಲ ನೀಡಲು ಕ್ರಮ ಕೈಗೊಳ್ಳಲಾಗುವುದು; ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು. ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ…

Read More

ಬೆಂಗಳೂರು: ಲಿಂಗತ್ವ ಅಲ್ಪಸಖ್ಯಾತರ ಬದುಕನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂಗಳಿಂದ 1,200ಕ್ಕೆ ಹೆಚ್ಚಿಸಲಾಗುತ್ತದೆ. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆ ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ ವೆಚ್ಚದಲ್ಲಿ 75,938 ಸ್ಮಾರ್ಟ್ ಪೋನ್ ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು ಎಂದರು. ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದರು. ವಿವಿಧ ಖಾಯಿಲೆಯಿಂದ ಬಳಲುತ್ತಿರುವಂತ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1000 ರೂ ಪ್ರೋತ್ಸಾಹ ನೀಡಲಾಗುತ್ತದೆ. ಯಂತ್ರಚಾಲಿತ ದ್ವಿಚಕ್ರ ವಾಹನಗಳ್ನು ಒದಗಿಸಲು ಇನ್ನೂ ಬಾಕಿ ಇರುವ 1500 ವಿಶೇಷ ಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು ಎಂದು ಹೇಳಿದರು. https://kannadanewsnow.com/kannada/paytm-payments-bank-goes-missing-from-list-of-32-banks-for-buying-fastags/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿರಯರಿಗೆ ಗ್ರಾಚ್ಯುಟಿ ಸವಲತ್ತು ಘೋಷಣೆ ಮಾಡಲಾಗಿದೆ. ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದರು. ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ ವೆಚ್ಚದಲ್ಲಿ 75,938 ಸ್ಮಾರ್ಟ್ ಪೋನ್ ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು ಎಂದರು. ವಿವಿಧ ಖಾಯಿಲೆಯಿಂದ ಬಳಲುತ್ತಿರುವಂತ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1000 ರೂ ಪ್ರೋತ್ಸಾಹ ನೀಡಲಾಗುತ್ತದೆ. ಯಂತ್ರಚಾಲಿತ ದ್ವಿಚಕ್ರ ವಾಹನಗಳ್ನು ಒದಗಿಸಲು ಇನ್ನೂ ಬಾಕಿ ಇರುವ 1500 ವಿಶೇಷ ಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು ಎಂದರು. ಲಿಂಗತ್ವ ಅಲ್ಪಸಖ್ಯಾತರ ಬದುಕನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂಗಳಿಂದ 1,200ಕ್ಕೆ ಹೆಚ್ಚಿಸಲಾಗುತ್ತದೆ. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆ ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಲಾಗುವುದು…

Read More

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯದವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ ನೀಡಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದ ಜನರಿಗೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸೆ ಸೇವೆಗಳನ್ನು ಒದಗಿಸಲು 35 ಕೋಟಿ ರೂ ಗಳ ಕಾರ್ಪಸ್ ಫಂಡ್ ಸ್ಥಾಪಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರ ಅನುದಾನ ನೀಡಲಾಗುವುದು ಎಂದರು. ಸಮಾಜಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ  ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಭೋಜನ ಮಾಸಿಕ ಭೋಜನ ವೆಚ್ಚ ತಲಾ 100 ರೂ ಹೆಚ್ಚಳ ಮಾಡಲಾಗುವುದು ಎಂದರು. ಕ್ರೈಸ್ಟ್ ಅಡಿಯಲ್ಲಿ 638 ಕೋಟಿ ರೂಗಳ ಅಂದಾಡು ವೆಚ್ಚದಲ್ಲಿ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಮಾಡಲಾಗುತ್ತದೆ. 20 ಹೋಬಳಿಗಳಲ್ಲಿ…

Read More

ಬೆಂಗಳೂರು: ರಾಜ್ಯದ ಮೀನುಗಾರರಿಗೆ ಮತ್ಸ್ಯ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು ರೂ.3000ಕ್ಕೆ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಅವರು ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವುದಾಗಿ ತಿಳಿಸಿದರು. ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀಗಿದೆ 7 ಕೋಟಿ ರೂ ನೀಡಲಾಗುತ್ತದೆ. ವಿವಿಧ ವಸತಿ ಯೋಜನೆಗಳಡಿ 10000 ವಸತಿ ರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ ನೀಡಲಾಗುತ್ತದೆ ಎಂಬುದಾಗಿ ಘೋಷಿಸಿದರು. https://kannadanewsnow.com/kannada/good-news-for-silk-growers-in-the-state-bivoltine-cocoon-incentive-increased-to-rs-30/

Read More

ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ರೇಷ್ಮೆ ಬೆಳೆಗಾರರಿಗೆ ಬಂಪರ್ ಗಿಫ್ಟ್ ನೀಡಲಾಗಿದೆ. ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ 250 ಕೋಟಿ ರ ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಎರಡನೇ ಹಂತದ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಬೈವೋಲ್ಟೀನ್ ರೇಷ್ಮೆಗೂಡುಗಳಿಗೆ ನೀಡುವ ಪ್ರೋತ್ಸಾಹಧನವನ್ನು ಪ್ರತಿ ಕೆಜಿಗೆ ರೂ.30 ಹೆಚ್ಚಳ ಮಾಡಲಾಗಿದೆ. ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹ ಧನ ನೀಡಲು 12 ಕೋಟಿ ರೂ ಅನುದಾನ ನೀಡಲಾಗುತ್ತದೆ ಎಂದರು. https://kannadanewsnow.com/kannada/breaking-online-registration-process-of-marriages-to-be-launched-on-trial-basis-to-be-extended-across-the-state-soon/

Read More