Author: kannadanewsnow09

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಪ್ರಕಟಿಸುವ ಮೂಲಕ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿರುವುದನ್ನು ಕೆಯುಡಬ್ಲ್ಯುಜೆ ಸ್ಮರಿಸಿದ್ದು, ಅಭಿನಂದನೆ ಸಲ್ಲಿಸಿದೆ. ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಇಂದಿನ ಬಜೆಟ್ ನಲ್ಲಿ ಬಂಪರ್ ಗಿಫ್ಟ್ ನೀಡಲಾಗಿದೆ. ನಗರದಲ್ಲಿನ ಪ್ರವಾಸಿ ತಾಣಗಳನ್ನು ಆಕರ್ಷಕವಾಗಿ ಅಭಿವೃದ್ಧಿಗೊಳಿಸುವುದಲ್ಲದೇ, ವಿವಿಧ ಕಾರಿಡಾರ್ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಇಂದು ರಾಜ್ಯ ಬಜೆಟ್ ಮಂಡಿಸಿ ವಿಧಾನಸಭೆಯಲ್ಲಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಬೆಂಗಳೂರಲ್ಲಿ ಆಕರ್ಷಕ ಪ್ರವಾಸಿ ತಾಣಗಳನ್ನು ನಿರ್ಮಾಣ ಮಾಡಲಾಗುತ್ತದೆ. ಇದಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ. ಬಿಸಿನೆಸ್ ಕಾರಿಡಾರ್ ರೂಪಿಸಲಾಗುತ್ತದೆ ಎಂದರು. 27 ಸಾವಿರ ಕೋಟಿ ವೆಚ್ಚದಲ್ಲಿ 73 ಕಿಲೋಮೀಟರ್ ರಸ್ತೆ ಅಭಿವೃದ್ಧಿಗೊಳಿಸಲಾಗುತ್ತದೆ. ಸ್ಕೈಡ್ ವಾಕರ್ ನಿರ್ಮಾಣ ಮಾಡಲಾಗುತ್ತದೆ. ನಗರಾಭಿವೃದ್ಧಿ ಅಂಗ ಸಂಸ್ಥೆಗಳಾದಂತ ಬಿಎಂಆರ್ ಸಿಎಲ್, ಬಿಬಿಎಂಪಿ, ಬಿಡಬ್ಲ್ಯೂ ಎಸ್ ಎಸ್ ಬಿ ಸೇರಿದಂತೆ ವಿವಿಧ ಸಂಸ್ಥೆಗಳಿಗೆ ಅನುದಾನ ಒದಗಿಸೋದಾಗಿ ತಿಳಿಸಿದ್ದಾರೆ. ಇನ್ನೂ ಸೋಲಾರ್ ಪಾರ್ಕ್ ಅನ್ನು ನಿರ್ಮಾಣ ಮಾಡುವುದಾಗಿಯೂ ಘೋಷಿಸಿರುವಂತ ಸಿದ್ಧರಾಮಯ್ಯ ಅವರು, ಬೆಂಗಳೂರಿಗೆ ರಾಜ್ಯ ಬಜೆಟ್ 2024-25ರಲ್ಲಿ ಬಂಪರ್ ಗಿಫ್ಟ್ ನೀಡಿದ್ದಾರೆ. https://kannadanewsnow.com/kannada/good-news-for-women-repaying-loans-state-govt-to-provide-subsidy-at-6-interest-rate/ https://kannadanewsnow.com/kannada/breaking-online-registration-process-of-marriages-to-be-launched-on-trial-basis-to-be-extended-across-the-state-soon/

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ಸಾಲ ಮರು ಪಾವತಿ ಮಾಡುವಂತ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಶೇ.6ರ ಬಡ್ಡಿದರದಲ್ಲಿ ಸಹಾಯಧನ ಸೌಲಭ್ಯವನ್ನು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದಂತ ಅವರು ರಾಜ್ಯದಲ್ಲಿ ಸಾಲ ಮರು ಪಾವತಿ ಮಾಡುವಂತ ಮಹಿಳೆಯರಿಗೆ ಶೇ.6ರ ಬಡ್ಡಿದರದಲ್ಲಿ ಸಹಾಯಧನ ನೀಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಶಕ್ತಿ, ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸಲಾಗಿದೆ. ಈ ಬೆನ್ನಲ್ಲೇ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಸಹಾಯಧನ ಸೌಲಭ್ಯವನ್ನು ಒದಗಿಸೋ ಯೋಜನೆಯನ್ನು ಸಿಎಂ ಸಿದ್ಧರಾಮಯ್ಯ ಇಂದಿನ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. https://kannadanewsnow.com/kannada/breaking-online-registration-process-of-marriages-to-be-launched-on-trial-basis-to-be-extended-across-the-state-soon/

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಲಬುರ್ಗಿಯಲ್ಲಿ ವಚನ ಮಂಟಪ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಸ್ಪಂದಿಸಿದ್ದಾರೆ. ಈ ಕುರಿತಂತೆ ನಿನ್ನೆಯಷ್ಟೇ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬೆಂಗಳೂರು ಅಥವಾ ಕಲಬುರಗಿಯಲ್ಲಿ ‘ವಚನ ಮಂಟಪ’ ಹಾಗೂ ‘ವಚನ ವಿಶ್ವವಿದ್ಯಾಲಯ’ ಸ್ಥಾಪಿಸುವಂತೆ ಮತ್ತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರದ ಮೂಲಕ ಮನವಿ ಮಾಡಿದ್ದರು. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಕನ್ನಡ ನಾಡು ಇಂದು ಇಡೀ ವಿಶ್ವದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನಗಳಿಸಿ, ಭಾರತ ದೇಶದ ಆರ್ಥಿಕ ಯಂತ್ರವಾಗಿ ಕಾರ್ಯ ನಿರ್ವಹಿಸುತ್ತಾ ಒಂದು ಅಮೋಘ ರಾಜ್ಯವಾಗಿ ರೂಪುಗೊಳ್ಳಲು ನಮ್ಮ ನಾಡಿನ ತಾತ್ವಿಕ ಅಡಿಪಾಯವೇ ಕಾರಣ. ಈ ತತ್ವಗಳ ಆಶಯವನ್ನು ಜಗತ್ತಿಗೆ ತಿಳಿಸಲು ಇರುವ ಭಾಷೆಯ ಅಂತರಕ್ಕೆ ಸೇತುವೆ ಕಟ್ಟುವ ಮಹತ್ತರವಾದ ಕೆಲಸ ಮಾಡುವ ನಿಟ್ಟಿನಲ್ಲಿ ಈ ಕೆಳಗಿನ ಎರಡು ಮನವಿಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದರು. 1) ವಚನ ಮಂಟಪ: ನಾಡಿನ ರಾಜಧಾನಿಯಾದ ಬೆಂಗಳೂರಿನಲ್ಲಿ ಅಥವಾ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಂಪರ್ ಕೊಡುಗೆಯನ್ನು ಘೋಷಿಸಲಾಗಿದೆ. ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ವ್ಯವಸ್ಥೆ, ರೋಪ್ ವೇ ನಿರ್ಮಿಸೋ ನಿರ್ಧಾರವನ್ನು ಕೈಗೊಳ್ಳಲಾಗಿದೆ. ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಗಳ ಅಭಿವೃದ್ಧಿ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ನಿರ್ಮಿಸೋದಕ್ಕೆ ಅನುದಾನವನ್ನು ಒದಗಿಸೋ ಘೋಷಣೆಯನ್ನು ಇಂದಿನ ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ. ಅಂಜನಾದ್ರಿ ಬೆಟ್ಟದ ಸುತ್ತಾಮುತ್ತಾ ಅಭಿವೃದ್ಧಿ ಮಾಡೋಲಾಗುತ್ತದೆ. ಬೆಂಗಳೂರಿನ ಆಕರ್ಷಕ ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸಲಾಗುತ್ತದೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂಬುದಾಗಿ ಹೇಳುವ ಮೂಲಕ ಪ್ರವಾಸೋದ್ಯಮಕ್ಕೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ ನೀಡಲಾಗಿದೆ. https://kannadanewsnow.com/kannada/state-govt-to-hike-beer-prices-again/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಇಂದಿನ ಬಜೆಟ್ ನಲ್ಲಿ ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಲಾಗಿದೆ. ಮತ್ತೆ ಬಿಯರ್ ದರವನ್ನು ಹೆಚ್ಚಿಸೋದಕ್ಕೆ ಇಂದಿನ ಬಜೆಟ್ ನಲ್ಲಿ ನಿರ್ಧರಿಸಲಾಗಿದೆ. ಇಂದು ವಿಧಾನಸಭೆಯಲ್ಲಿ ರಾಜ್ಯ ಬಜೆಟ್ 2024-25 ಮಂಡಿಸಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮದ್ಯದ ದರ ಮತ್ತೆ ಹೆಚ್ಚಿಸೋ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರದಿಂದ ಮದ್ಯ ಪ್ರಿಯರಿಗೆ ಮತ್ತೆ ಶಾಕ್ ನೀಡಲಾಗಿದೆ. ಈಗಾಗಲೇ ಹಲವು ಬಾರಿ ಮದ್ಯದ ದರವನ್ನು ಹೆಚ್ಚಳ ಮಾಡಲಾಗಿತ್ತು. ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ದರ ಹೆಚ್ಚಳ ಮಾಡಲಾಗಿತ್ತು. ಈಗ ರಾಜ್ಯ ಬಜೆಟ್ ಮಂಡನೆಯಲ್ಲೂ ಮತ್ತೆ ಬಿಯರ್ ದರವನ್ನು ಹೆಚ್ಚಳ ಮಾಡೋ ನಿರ್ಧಾರವನ್ನು ಪ್ರಕಟಿಸಲಾಗಿದೆ. ಈ ಮೂಲಕ ಮದ್ಯ ಪ್ರಿಯರಿಗೆ ಮತ್ತೆ ಶಾಕ್ ನೀಡಲಾಗಿದೆ. https://kannadanewsnow.com/kannada/breaking-online-registration-process-of-marriages-to-be-launched-on-trial-basis-to-be-extended-across-the-state-soon/

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ 15ನ ಬಾರಿಯ ಚೊಚ್ಚಲ ರಾಜ್ಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸೋದಕ್ಕೆ ಆರಂಭಿಸಿದ್ದಾರೆ. ಈ ಮೂಲಕ ಬಜೆಟ್ ಮಂಡನೆಯನ್ನು ಶುರು ಮಾಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 15ನೇ ಬಾರಿ ರಾಜ್ಯ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ವಿಧಾನಸಭೆಯಲ್ಲಿ ತಮ್ಮ ಚೊಚ್ಚಲ ಅಯವ್ಯಯವನ್ನು ಮಂಡಿಸುತ್ತ ಮಾತನಾಡಿದಂತ ಅವರು, ನನ್ನ 15ನೇ ಬಜೆಟ್ ಅನ್ನು ಮಂಡಿಸುತ್ತಿದ್ದೇನೆ. ಬಸವಾದಿ ತತ್ವ ನಮಗೆ ಪ್ರೇರಣೆಯಾಗಿದೆ. ದಾಸರ ಚಿಂತನೆ, ಸಂಪತ್ತಿನ ಸಮಾನ ಹಂಚಿಕೆಗೆ ಆಧಾರವಾಗಿದೆ ಎಂದರು. ಆಗದು ಎಂದು, ಕೈಲಾಗದು ಎಂದು, ಕೈ ಕಟ್ಟಿ ಕುಳಿತರೇ ಸಾಗದು ಕೆಲಸವು ಮುಂದೆ ಎಂಬುದಾಗಿ ರಾಜ್ ಕುಮಾರ್ ಅವರ ಸಂಪತ್ತಿಗೆ ಸವಾಲ್ ಹಾಡುನ್ನು ಉಲ್ಲೇಖಿಸುತ್ತಾ, ಆರ್ ಎನ್ ಜಯಗೋಪಾಲ್ ಹಾಡು ಹಾಡಿ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಆರಂಭಿಸಿದರು. https://kannadanewsnow.com/kannada/sbi-clerk-prelims-result-2024-declared-check-result-here/ https://kannadanewsnow.com/kannada/breaking-online-registration-process-of-marriages-to-be-launched-on-trial-basis-to-be-extended-across-the-state-soon/

Read More

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಸ್ಬಿಐ ಕ್ಲರ್ಕ್ ಪ್ರಿಲಿಮ್ಸ್ ಫಲಿತಾಂಶ 2024 ಅನ್ನು ಪ್ರಕಟಿಸಿದೆ. ಜೂನಿಯರ್ ಅಸೋಸಿಯೇಟ್ ಪ್ರಿಲಿಮಿನರಿ ಫಲಿತಾಂಶಗಳನ್ನು ಅಭ್ಯರ್ಥಿಗಳು ಎಸ್ಬಿಐನ ಅಧಿಕೃತ ವೆಬ್ಸೈಟ್ನಲ್ಲಿ sbi.co.in ನಲ್ಲಿ ಪರಿಶೀಲಿಸಬಹುದು. ಕ್ಲರ್ಕ್ ಪ್ರಿಲಿಮಿನರಿ ಪರೀಕ್ಷೆಯನ್ನು ಜನವರಿ 5, 6, 11 ಮತ್ತು 12, 2024 ರಂದು ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಆಬ್ಜೆಕ್ಟಿವ್ ಪರೀಕ್ಷೆಗಳಲ್ಲಿ ತಪ್ಪು ಉತ್ತರಗಳಿಗೆ ಪೂರ್ವಭಾವಿ ಪರೀಕ್ಷೆಯಲ್ಲಿ ನಕಾರಾತ್ಮಕ ಅಂಕಗಳು ಇರುತ್ತವೆ. ಪ್ರತಿ ಪ್ರಶ್ನೆಗೆ ನಿಗದಿಪಡಿಸಿದ ಅಂಕಗಳ 1/4 ಭಾಗವನ್ನು ಪ್ರತಿ ತಪ್ಪು ಉತ್ತರಕ್ಕೆ ಕಡಿತಗೊಳಿಸಲಾಗುತ್ತದೆ. ಎಸ್ಬಿಐ ಕ್ಲರ್ಕ್ ಪ್ರಿಲಿಮ್ಸ್ ಫಲಿತಾಂಶ 2024: ಚೆಕ್ ಮಾಡುವುದು ಹೇಗೆ? ಪ್ರಿಲಿಮ್ಸ್ ಪರೀಕ್ಷೆಗೆ ಹಾಜರಾದ ಎಲ್ಲಾ ಅಭ್ಯರ್ಥಿಗಳು ಈ ಕೆಳಗಿನ ಸರಳ ಹಂತಗಳ ಮೂಲಕ ಫಲಿತಾಂಶಗಳನ್ನು ಪರಿಶೀಲಿಸಬಹುದು. sbi.co.in ಗಂಟೆಗೆ ಎಸ್ಬಿಐನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ. ಪುಟದಲ್ಲಿ ಲಭ್ಯವಿರುವ ವೃತ್ತಿಜೀವನ ಲಿಂಕ್ ಅನ್ನು ಕ್ಲಿಕ್ ಮಾಡಿ. ಹೊಸ ಪುಟ ತೆರೆಯುತ್ತದೆ, ಅಲ್ಲಿ ಅಭ್ಯರ್ಥಿಗಳು ಕ್ಲರ್ಕ್ ನೇಮಕಾತಿ ಲಿಂಕ್…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 15ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಅದಕ್ಕೂ ಮುನ್ನ ಇಂದು ಅವರ ನೇತೃತ್ವದಲ್ಲಿ ನಡೆದಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯನ್ನು ಪಡೆದಿದ್ದಾರೆ. ಈ ಬಳಿಕ ವಿಧಾನಸಭೆಗೆ ತೆರಳಲಿರುವಂತ ಅವರು, 173 ಪುಟಗಳ ಅಯವ್ಯಯವನ್ನು ಮಂಡನೆ ಮಾಡಲಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಬಜೆಟ್ ಮಂಡನೆಗೂ ಮುನ್ನವೇ ಇಂದು ವಿಶೇಷ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. ಈ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಸಲ್ಲಿಸಿ ಅನುಮೋದನೆ ಪಡೆದರು. ಇದೀಗ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಗೆ ಅನುಮೋದನೆ ಪಡೆದ ಬಳಿಕ ವಿಧಾನಸಭೆಗೆ ತೆರಳಿ ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2024-25 ಅನ್ನು ಮಂಡಿಸಲಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ್ಯ ಬಜೆಟ್ ಮಂಡನೆ ಆರಂಭಗೊಳ್ಳಲಿದ್ದು, 173 ಪುಟಗಳನ್ನು ಇಂದು ಸಿಎಂ ಸಿದ್ಧರಾಮಯ್ಯ ಮಂಡಿಸಲಿರುವಂತ ಅಯವ್ಯಯ ಒಳಗೊಂಡಿದೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/paytm-payments-bank-goes-missing-from-list-of-32-banks-for-buying-fastags/ https://kannadanewsnow.com/kannada/breaking-online-registration-process-of-marriages-to-be-launched-on-trial-basis-to-be-extended-across-the-state-soon/

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 15ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಅದಕ್ಕೂ ಮುನ್ನ ಇಂದು ಅವರ ನೇತೃತ್ವದಲ್ಲಿ ನಡೆದಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯನ್ನು ಪಡೆದಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಬಜೆಟ್ ಮಂಡನೆಗೂ ಮುನ್ನವೇ ಇಂದು ವಿಶೇಷ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. ಈ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಸಲ್ಲಿಸಿ ಅನುಮೋದನೆ ಪಡೆದರು. ಇದೀಗ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಗೆ ಅನುಮೋದನೆ ಪಡೆದ ಬಳಿಕ ವಿಧಾನಸಭೆಗೆ ತೆರಳಿ ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2024-25 ಅನ್ನು ಮಂಡಿಸಲಿದ್ದಾರೆ. https://kannadanewsnow.com/kannada/paytm-payments-bank-goes-missing-from-list-of-32-banks-for-buying-fastags/

Read More