Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಹಿಳೆಯರ ಪ್ರೀಮಿಯರ್ ಲೀಗ್ (WPL) ಕ್ರಿಕೆಟ್ 2025 ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು ಪಂದ್ಯಗಳಿಗೆ ನಮ್ಮ ಮೆಟ್ರೋ ರೈಲು ಸೇವೆಗಳ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿ ಎಂ ಆರ್ ಸಿ ಎಲ್ ಮಾಹಿತಿ ನೀಡಿದ್ದು, ಟಾಟಾ ಮಹಿಳಾ ಪ್ರೀಮಿಯರ್ ಲೀಗ್ (WPL) T-20 ಕ್ರಿಕೆಟ್ ಪಂದ್ಯಗಳು ಬೆಂಗಳೂರಿನಲ್ಲಿ ಫೆಬ್ರವರಿ 21, 22, 24, 25, 26, 27, 28 ಮತ್ತು ಮಾರ್ಚ್ 01, 2025 ರಂದು ನಡೆಯಲಿವೆ ಎಂದಿದೆ. ಕ್ರಿಕೆಟ್ ಪಂದ್ಯಗಳಿಗೆ ಪ್ರಯಾಣಿಸಲು ಮತ್ತು ಹಿಂತಿರುಗಲು ಅನುಕೂಲವಾಗುವಂತೆ, ಬಿ.ಎಂ.ಆರ್.ಸಿ.ಎಲ್ ಈ ಮೇಲೆ ತಿಳಿಸಿದ ದಿನಗಳಲ್ಲಿ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗಿದೆ ಎಂದಿದೆ. ನೇರಳೆ ಮತ್ತು ಹಸಿರು ಮಾರ್ಗಗಲ್ಲಿನ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಾದ ಚಲ್ಲಘಟ್ಟ, ವೈಟ್ಫೀಲ್ಡ್, ಮಾದಾವರ ಮತ್ತು ರೇಷ್ಮೆ ಸಂಸ್ಥೆಯಿಂದ ಕೊನೆಯ ರೈಲು ಸೇವೆ ರಾತ್ರಿ 11.20 ರವರೆಗೆ ಮತ್ತು ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಎಲ್ಲಾ ನಾಲ್ಕು…
GOOD NEWS: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಎಲ್ಲಾ ಬಸ್ಸುಗಳಲ್ಲಿ ಸ್ಯಾನ್ ಮಾಡಿ, ಪೇ ಮಾಡಲು ಅವಕಾಶ
ಬೆಂಗಳೂರು: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಎಲ್ಲಾ ಬಸ್ಸುಗಳಲ್ಲಿ ಕ್ಯಾಶ್ ಲೆಸ್ ವ್ಯವಸ್ಥೆಯನ್ನು ಸರ್ಕಾರ ಜಾರಿಗೊಳಿಸಿದೆ. ಹೀಗಾಗಿ ಪ್ರಯಾಣಿಕರು ಟಿಕೆಟ್ ಖರೀದಿಸಿದಂತ ಹಣವನ್ನು ಸ್ಕ್ಯಾನ್ ಮಾಡಿ, ಪೇ ಮಾಡಬಹುದಾಗಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಕನ್ನಡಿಗರ ಸಂಚಾರನಾಡಿಯಾಗಿರುವ ಸಾರಿಗೆ ಬಸ್ಗಳಲ್ಲಿ ಡಿಜಿಟಲ್ ಯುಗ ಆರಂಭಗೊಂಡಿದೆ ಎಂದಿದ್ದಾರೆ. ರಾಜ್ಯದ ಸಾರಿಗೆ ಬಸ್ಗಳಲ್ಲಿ ಪ್ರಯಾಣ ಮಾಡುವ ಸಂದರ್ಭದಲ್ಲಿ ಪ್ರಯಾಣಿಕರಿಗೆ ಎದುರಾಗುತ್ತಿದ್ದ ಚಿಲ್ಲರೆ ಸಮಸ್ಯೆಗೆ ರಾಜ್ಯ ಸರ್ಕಾರ ಮುಕ್ತಿ ಹಾಡಿದ್ದು, ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಸುಖಕರವಾಗಿರಿಸಲು ಕ್ಯಾಶ್ಲೆಸ್ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ನೀವು ಗೂಗಲ್ಪೇ, ಫೋನ್ ಪೇ ಅಥವಾ ಇತರೆ ಯಾವುದೇ ಯುಪಿಐ ಆ್ಯಪ್ ಬಳಕೆ ಮಾಡುತ್ತಿದ್ದಲ್ಲಿ ಕ್ಯಾಷ್ನ ಚಿಂತೆ ಮರೆತು ನಿಶ್ಚಿಂತರಾಗಿ ಸಾರಿಗೆ ಬಸ್ಗಳಲ್ಲಿ ಪ್ರಯಾಣಿಸಬಹುದು ಎಂದು ಹೇಳಿದ್ದಾರೆ. https://twitter.com/siddaramaiah/status/1892170413297533129 https://kannadanewsnow.com/kannada/pakistans-opener-fakhar-zaman-ruled-out-of-champions-trophy-2025-reports/ https://kannadanewsnow.com/kannada/rs-315-crore-investment-in-vemagal-in-kolar-550-jobs-created-m-b-patil/
ಚಿಕ್ಕಬಳ್ಳಾಪುರ: ರಾಜ್ಯದಲ್ಲೊಂದು ವಿಚಿತ್ರ ಘಟನೆ ಎನ್ನುವಂತೆ ದೇವರ ಹುಂಡಿಯ ಖಾತೆಯಲ್ಲಿದ್ದಂತ 60 ಲಕ್ಷ ಹಣವನ್ನೇ ಸರ್ಕಾರಿ ಅಧಿಕಾರಿಯೊಬ್ಬ ತನ್ನ ಪತ್ನಿಯ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಇಂತಹ ಅಧಿಕಾರಿಯನ್ನು ಸರ್ಕಾರ ಅಮಾನತುಗೊಳಿಸಿದೆ. ದೊಡ್ಡಬಳ್ಳಾಪುರದ ಸಾಸಲು ಹೋಬಳಿಯ ರೆವೆನ್ಯೂ ಇನ್ಸ್ ಪೆಕ್ಟರ್ ಹೇಮಂತ್ ಕುಮಾರ್ ಎಂಬುವರೇ ಈ ರೀತಿಯ ಕೃತ್ಯವೆಸಗಿರುವಂತ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಸಾಸಲು ಹೋಬಳಿಗೆ ಬರುವ ಮೊದಲು ಹೇಮಂತ್ ಕುಮಾರ್ ಮುಜರಾಯಿ ಇಲಾಖೆಯ ಕೇಸ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲೇ ಸುಮಾರು 60 ಲಕ್ಷ ದೇವಸ್ಥಾನದ ಹುಂಡಿಯ ಹಣವನ್ನೇ ಪತ್ನಿ ಖಾತೆಗೆ ವರ್ಗಾವಣೆ ಮಾಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. 2023ರಿಂದ ಈವರೆಗೆ ಇಬ್ಬರು ತಹಶೀಲ್ದಾರ್, ಓರ್ವ ಕೇಸ್ ವರ್ಕರ್ ಸಹಿ ಹಾಗೂ ಸೀಲ್ ಪೋರ್ಜರಿ ಮಾಡಿ ಹೇಮಂತ್ ಕುಮಾರ್, 60 ಲಕ್ಷ ಹಣವನ್ನು ಹಲವು ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ರೆವೆನ್ಯೂ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆಗೊಂಡರೂ ಮುಜರಾಯಿ ಇಲಾಖೆಯ ಚೆಕ್ ಬುಕ್ ವಾಪಾಸ್ ನೀಡದೇ, ಅದರಿಂದಲೂ ಹಣ ಡ್ರಾ ಮಾಡಿಕೊಂಡ ಆರೋಪ…
ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಗೆ 2022-23 ರಲ್ಲಿ ಹಾಗೂ ನಂತರದ ಸಾಲಿನಲ್ಲಿ ಸ್ನಾತಕ ಪದವಿ/ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ತೇರ್ಗಡೆಯಾಗಿ ಉದ್ಯೋಗ ಸಿಗದೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯದೆ ಇರುವವರಿಗೆ ಫೆ. 24 ರಂದು ನಗರದ ಎ.ಟಿ.ಎನ್.ಸಿ. ಕಾಲೇಜು, ಮಹಾವೀರ ವೃತ್ತ ಇಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಈ ಮೇಳದಲ್ಲಿ ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಖಲಂದರ್ ಖಾನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದೂ.ಸಂ.: 08182-255293/ 9680663606 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/rs-315-crore-investment-in-vemagal-in-kolar-550-jobs-created-m-b-patil/ https://kannadanewsnow.com/kannada/pakistans-opener-fakhar-zaman-ruled-out-of-champions-trophy-2025-reports/
ಕೋಲಾರ : ಇತ್ತೀಚೆಗಷ್ಟೇ ಮುಕ್ತಾಯವಾದ ಜಿಮ್ ಇನ್ವೆಸ್ಟ್ ಕರ್ನಾಟಕ-25ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ ರೂ. 315 ಕೋಟಿ ರೂಪಾಯಿಗಳ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣದ ಅನುಷ್ಠಾನಕ್ಕೆ ಗುರುವಾರ ಆರಂಭಗೊಂಡಿತು. ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಕಂಪನಿ ನಿರ್ಮಿಸಲಿರುವ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಭೂಮಿಪೂಜೆ ನೆರವೇರಿಸುವುದರೊಂದಿಗೆ ಈ ಕಾರ್ಯಯೋಜನೆ ಚಾಲನೆ ಪಡೆಯಿತು. ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದ ವೇಳೆ ಈ ಒಪ್ಪಂದ ಏರ್ಪಡುವ ಮುನ್ನ, ಸಚಿವರ ನಿಯೋಗವು ಕಳೆದ ಡಿಸೆಂಬರ್ ನಲ್ಲಿ ಜರ್ಮನಿ ರೋಡ್ ಷೋ ವೇಳೆ ಕಂಪನಿಯ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿತ್ತು. ಆ ಸಂದರ್ಭದಲ್ಲಿ ನ್ಯೂಟ್ರಾಬ್ಲಿಂಗ್ ನಲ್ಲಿರುವ ಕಂಪನಿಯ ಪ್ರಧಾನ ಕಚೇರಿಯಲ್ಲಿ ಪೂರ್ವಭಾವಿ ಒಪ್ಪಂದ ಏರ್ಪಟ್ಟಿತ್ತು. ಇದೀಗ, ಉತ್ಪಾದನಾ ಘಟಕ ಸ್ಥಾಪನೆಗೆ ಭೂಮಿ ಪೂಜೆ ನೆರವೇರುವ ಮೂಲಕ, ಜಿಮ್ ನಲ್ಲಿ ಏರ್ಪಟ್ಟಿರುವ ಹೂಡಿಕೆ ಒಪ್ಪಂದಗಳನ್ನು ವಾಸ್ತವದಲ್ಲಿ ಕಾರ್ಯರೂಪಕ್ಕೆ…
ಬೆಂಗಳೂರು: ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ. ಮುಡಾ ನಿವೇಶನ ಹಂಚಿಕೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಪಾತ್ರವಿಲ್ಲ ಅಂತ ಸಿಎಂ ಡಿ.ಕೆ. ಶಿವಕುಮಾರ್ ಪುನರುಚ್ಚರಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎಂದು ಕೇಳಿದಾಗ, “ಈ ಪ್ರಕರಣದ ಪ್ರಾರಂಭದಲ್ಲೇ ನಾನು ಹೇಳಿದ್ದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡಿದಾಗಲೇ, ನಾನು ಏನು ಹೇಳಬೇಕೋ ಹೇಳಿದ್ದೆ. ಇದು ರಾಜಕೀಯ ಪ್ರೇರಿತ ಆರೋಪ ಎಂದರು. ಯಾವ ದಾಖಲೆಯಲ್ಲೂ ಸಿದ್ದರಾಮಯ್ಯ ಅವರ ಸಹಿ ಇಲ್ಲದಿರುವಾಗ, ಸಂಬಂಧವೇ ಇಲ್ಲದಿರುವಾಗ ಅವರ ಪಾತ್ರ ಹೇಗೆ ಬರುತ್ತದೆ. ಆಸ್ತಿ ಕಳೆದುಕೊಂಡವರು ಪರಿಹಾರ ಕೇಳುವುದು ಸಹಜ. ನಾವು ನೀವು ಕೂಡ ಕೇಳುತ್ತೇವೆ. ಅವರು ಕೊಟ್ಟಿದ್ದಾರೆ. ನಮಗೆ ಇಂತಹುದೇ ಜಾಗದಲ್ಲಿ ನಿವೇಶನ ನೀಡಿ ಎಂದು ಅವರು…
ಬೆಂಗಳೂರು: ನಗರದಲ್ಲಿ ಯೋಜಿತ ನಿರ್ವಹಣೆ ಮತ್ತು ಮರುನಿರ್ಮಾಣ ಕಾರ್ಯದ ಹಿನ್ನೆಲೆಯಲ್ಲಿ ಶುಕ್ರವಾರ ಮೂರು ರಿಂದ ಎಂಟು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸುಗಮ ನಿರ್ವಹಣಾ ಕಾರ್ಯವನ್ನು ಖಚಿತಪಡಿಸಿಕೊಳ್ಳಲು ವಿವಿಧ ಪ್ರದೇಶಗಳಲ್ಲಿ ವಿವಿಧ ಸಮಯಗಳಲ್ಲಿ ವಿದ್ಯುತ್ ಕಡಿತವನ್ನು ಕಾರ್ಯಗತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ. ಅನಾನುಕೂಲತೆಯನ್ನು ಕಡಿಮೆ ಮಾಡಲು ಸಿಲಿಕಾನ್ ಸಿಟಿಯ ನಿವಾಸಿಗಳು ತಮ್ಮ ದಿನವನ್ನು ಅದಕ್ಕೆ ಅನುಗುಣವಾಗಿ ಯೋಜಿಸುವಂತೆ ಸಲಹೆ ನೀಡಿದೆ. ವಿದ್ಯುತ್ ಕಡಿತದ ಸಮಯದೊಂದಿಗೆ ಪೀಡಿತ ಪ್ರದೇಶಗಳ ವಿವರಗಳು ಈ ಕೆಳಗಿನಂತಿವೆ. ನಿರ್ವಹಣಾ ಕಾರ್ಯವು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯಕ್ಕೆ ಕಾರಣವಾಗುತ್ತದೆ ಎಂದು ಬೆಸ್ಕಾಂ ಘೋಷಿಸಿದೆ. ಬೆಂಗಳೂರು ವಿದ್ಯುತ್ ಕಡಿತದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ (3 ಗಂಟೆಗಳು) -ವಿಶ್ವಪ್ರಿಯ ಲೇಔಟ್ -ಬೇಗೂರು ಕೊಪ್ಪ ರಸ್ತೆ -ದೇವರಚಿಕ್ಕನಹಳ್ಳಿ -ಅಕ್ಷಯನಗರ -ತೇಜಸ್ವಿನಿ ನಗರ – ಹಿರ್ನಾದಾನಿ ಅಪಾರ್ಟ್ಮೆಂಟ್ -ಬೆಳ್ಳಂದೂರು -RMZ -ದೇವರಬೀಸನಹಳ್ಳಿ -ಕರಿಯಮ್ಮನಪಾಳ್ಯ -ಅಕ್ಮೆ ಯೋಜನೆಗಳು -ಅನುಪಮಾ -…
ಶಿವಮೊಗ್ಗ: ಸಾಗರ ತಾಲ್ಲೂಕಿನ ಮಂಕೋಡು ಸರ್ವೆ ನಂ.12ರಲ್ಲಿ ಸರ್ಕಾರಿ ಭೂಮಿಗೆ ನಕಲಿ ದಾಖಲೆ ಸೃಷ್ಠಿಸಿ ಭೂಗಳ್ಳರ ಪಾಲಾಗುವಂತೆ ಸರ್ಕಾರಿ ಅಧಿಕಾರಿಗಳೇ ಕೃತ್ಯವೆಸಗಿದ್ದರು. ಈ ಕೃತ್ಯವೆಸಗಿರುವಂತ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಾಗರ ಉಪ ವಿಭಾಗೀಯ ಅಧಿಕಾರಿಗಳಿಗೆ ಸೂರನಗದ್ದೆಯ ಶ್ರೀ ಬೀರೇಶ್ವರ ಸೇವಾ ಸಮಿತಿ ಮನವಿ ಮಾಡಿದೆ. ಇಂದು ಸಾಗರ ನಗರದ ಎಸಿ ಕಚೇಯ ಮುಂದೆ ಪ್ರತಿಭಟನೆ ನಡೆಸಿದಂತ ಶ್ರೀ ಬೀರೇಶ್ವರ ಸೇವಾ ಸಮಿತಿಯ ಸದಸ್ಯರು, ಮಂಕೋಡು ಗ್ರಾಮದ ಸರ್ವೆ ನಂ.12ರಲ್ಲಿನ ಸರ್ಕಾರಿ ಭೂಮಿಗೆ ನಕಲಿ ದಾಖಲೆ ಸೃಷ್ಠಿ ಮಾಡಲಾಗಿದೆ. ಆ ಮೂಲಕ ಭೂಗಳ್ಳರ ಪಾಲಾಗುವಂತೆ ತಾಲ್ಲೂಕು ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು ನೆರವಾಗಿದ್ದಾರೆ ಎಂಬುದಾಗಿ ಆರೋಪಿಸಿದರು. ಸಾಗರ ತಾಲ್ಲೂಕಿನ ಭೀಮನೇರಿ ಗ್ರಾಮದ ಮಜರೆ ಸೂರನಗದ್ದೆಯ ಮಂಕೋಡು ಗ್ರಾಮದ ಸರ್ವೆ ನಂ.12ರಲ್ಲಿ 59 ಎಕರೆ 35 ಗುಂಟೆ ಸರ್ಕಾರಿ ಭೂಮಿ ಇದೆ. ಈ ಭೂಮಿಯನ್ನು ಅನಾಮಧೇಯ ವ್ಯಕ್ತಿಗಳಿಗೆ ಸರ್ಕಾರಿ ಅಧಿಕಾರಿಗಳೇ ಶಾಮೀಲಾಗಿ ನಕಲಿ ಹಕ್ಕು ಪತ್ರ ಸೃಷ್ಠಿಸಿರೋ ಬಗ್ಗೆ ತನಿಖೆ…
ಬೆಂಗಳೂರು: ನಾಡಿನ ಜನರ ಆರೋಗ್ಯ ರಕ್ಷಣೆಗಾಗಿ ಕಾರ್ಯ ನಿರ್ವಹಿಸುವ ಎನ್ಎಚ್ಎಂ ಗುತ್ತಿಗೆ ಸಿಬ್ಬಂದಿಯ ಸಾಮಾಜಿಕ ಭದ್ರತೆಗೆ ನಮ್ಮ ಸರ್ಕಾರ ಸದಾ ಸಿದ್ದ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್ಎಚ್ಎಂ) ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಎನ್ಎಚ್ಎಂ ನೌಕರರ ಹಿತದೃಷ್ಟಿಯಿಂದ ನಮ್ಮ ಸರ್ಕಾರ ವಿಮಾ ಕವಚ ಯೋಜನೆ ಜಾರಿಗೊಳಿಸಿದೆ ಎಂದಿದ್ದಾರೆ. ಎನ್ಎಚ್ಎಂ ಗುತ್ತಿಗೆ ನೌಕರರಿಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸುವ ಈ ವಿಮಾ ಕವಚ ಯೋಜನೆ ಅಡಿಯಲ್ಲಿ 60 ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಅಪಘಾತ ವಿಮೆ ಮತ್ತು 10 ಲಕ್ಷ ರೂಪಾಯಿಯ ಅವಧಿ ವಿಮೆ ಪರಿಚಯಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ನಮ್ಮ ಸರ್ಕಾರದ ಈ ಯೋಜನೆಯಿಂದಾಗಿ ರಾಜ್ಯದಲ್ಲಿ 25 ಸಾವಿರ ನೇರ ಗುತ್ತಿಗೆ ಉದ್ಯೋಗಿಗಳು ಪ್ರಯೋಜನ ಪಡೆಯಲಿದ್ದಾರೆ. ಆಕ್ಸಿಸ್ ಬ್ಯಾಂಕ್ ಉಚಿತವಾಗಿ ವಿಮಾ ಸೌಲಭ್ಯ ಕಲ್ಪಿಸಿದ್ದು, ನೌಕರರು ಯಾವುದೇ ಪ್ರೀಮಿಯಂ ಭರಿಸುವ ಅವಶ್ಯಕತೆಯಿಲ್ಲ. ನಾಡಿನ…
ನವದೆಹಲಿ: ವಿದ್ಯುತ್ ಮತ್ತು ಅಡುಗೆ ಅನಿಲದಂತಹ ಬಿಲ್ ಪಾವತಿಗಳಿಗೆ ಗೂಗಲ್ ಪೇ ( Google Pay ) ಸೇವಾ ಶುಲ್ಕವನ್ನು ಪರಿಚಯಿಸಿದೆ. ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳ ಮೂಲಕ ಪಾವತಿಸುವ ಬಳಕೆದಾರರಿಗೆ ಶುಲ್ಕಗಳು ಅನ್ವಯವಾಗುತ್ತವೆ. ಜಿಎಸ್ಟಿ ಜೊತೆಗೆ ವಹಿವಾಟಿನ ಮೌಲ್ಯದ 0.5% ರಿಂದ 1% ವರೆಗೆ ಶುಲ್ಕವಿದೆ. ಈ ಮೂಲಕ ಗೂಗಲ್ ಪೇ ಬಳಕೆದಾರರಿಗೆ ಬಿಗ್ ಶಾಕ್ ನೀಡಲಾಗಿದೆ. ಗೂಗಲ್ ಪೇ ಶುಲ್ಕ ವಿಧಿಸುವುದಾಗಿ ಘೋಷಿಸಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಮೊಬೈಲ್ ರೀಚಾರ್ಜ್ಗಳಿಗೆ 3 ರೂ.ಗಳ ಅನುಕೂಲಕರ ಶುಲ್ಕವನ್ನು ವಿಧಿಸಿತು. ಇತ್ತೀಚಿನ ಕ್ರಮವು ಯುಪಿ ಆಧಾರಿತ ವಹಿವಾಟುಗಳನ್ನು ಹಣಗಳಿಸುವತ್ತ ವಿಶಾಲ ಬದಲಾವಣೆಯನ್ನು ಸೂಚಿಸುತ್ತದೆ. ಏಕೆಂದರೆ ಫಿನ್ಟೆಕ್ ಕಂಪನಿಗಳು ಸುಸ್ಥಿರ ಆದಾಯ ಉತ್ಪಾದನೆಯೊಂದಿಗೆ ಬೆಳವಣಿಗೆಯನ್ನು ಸಮತೋಲನಗೊಳಿಸುವ ಗುರಿಯನ್ನು ಹೊಂದಿರುವುದರಿಂದ ಸಂಸ್ಕರಣಾ ವೆಚ್ಚಗಳನ್ನು ಸರಿದೂಗಿಸುವ ಮಾರ್ಗಗಳನ್ನು ಅನ್ವೇಷಿಸುತ್ತಿವೆ. ಅಂತೆಯೇ, ನೀರು, ವಿದ್ಯುತ್ ಮತ್ತು ಕೊಳವೆ ಅನಿಲ ಸೇರಿದಂತೆ ಬಿಲ್ಗಳಿಗೆ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ಗಳ ಮೂಲಕ ಮಾಡಿದ ಪಾವತಿಗಳಿಗೆ ಫೋನ್ಪೇ ಅನುಕೂಲಕರ ಶುಲ್ಕವನ್ನು…