Subscribe to Updates
Get the latest creative news from FooBar about art, design and business.
Author: ವಸಂತ್ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಅವರು ಪ್ರಮುಖವಾಗಿ Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಸಾಹಿತ್ಯ, ಸಾಮಾಜಿಕ ವರದಿಗಾರಿಕೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸುವುದರಲ್ಲಿ ಪ್ರಮುಖ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ತಾಜಾ ಸುದ್ದಿಗಳು, ಶಿಕ್ಷಕರ ಪ್ರಶಸ್ತಿಗಳ ಪಟ್ಟಿ, ಮತ್ತು ನ್ಯಾಯಾಂಗ ಸಂಬಂಧಿತ ವರದಿಗಳನ್ನು ನೀಡುತ್ತಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಇಂದು ಕನ್ನಡದ ಖ್ಯಾತ ಸಾಹಿತಿ, ಅಕ್ಷರ ಲೋಕದ ಮಾಂತ್ರಿಕ ಎಸ್ ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರವನ್ನು ಸೆಪ್ಟೆಂಬರ್.26ರ ಶುಕ್ರವಾರ ಮಧ್ಯಾಹ್ನದಂದು ಮೈಸೂರಲ್ಲಿ ಅಂತ್ಯಕ್ರಿಯೆ ನೆರವೇರಿಸುವುದಾಗಿ ಕುಟುಂಬಸ್ಥರ ಮೂಲಗಳಿಂದ ತಿಳಿದು ಬಂದಿದೆ. ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪನವರು ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಇಂದಿನಿಂದ ನಾಳೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜತೆಯಿಂದ ಸಾವನ್ನಪ್ಪಿದಂತ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ನಾಡಿದ್ದು ಶುಕ್ರವಾರ ಮಧ್ಯಾಹ್ನ ಮೈಸೂರಲ್ಲಿ ನೆರವೇರಿಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. https://kannadanewsnow.com/kannada/cabinet-approves-78-days-productivity-linked-bonus-for-railway-employees/ https://kannadanewsnow.com/kannada/breaking-veteran-writer-sl-bhyrappa-is-no-more-sl-bhyrappa-is-no-more/
ಬೆಂಗಳೂರು: ವಯೋಸಹಜವಾಗಿ ಕನ್ನಡ ಖ್ಯಾತ ಸಾಹಿತಿ, ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್ ಎಲ್ ಭೈರಪ್ಪ ( SL Bhyrappa ) ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರುಗಳು ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಸಂತಾಪ ಕನ್ನಡ ಸಾಹಿತ್ಯ ಲೋಕದ ಹಿರಿಯ ಸಾಹಿತಿ, ಅಕ್ಷರ ಮಾಂತ್ರಿಕ ಎಸ್ ಎಲ್ ಭೈರಪ್ಪ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ರೈಲ್ವೆ ಸಿಬ್ಬಂದಿಯ ಅತ್ಯುತ್ತಮ ಕಾರ್ಯಕ್ಷಮತೆಯನ್ನು ಗುರುತಿಸಿ 10,91,146 ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ಉತ್ಪಾದಕತೆ ಸಂಬಂಧಿತ ಬೋನಸ್ (PLB) ಅನ್ನು 1865.68 ಕೋಟಿ ರೂ.ಗಳಿಗೆ ಪಾವತಿಸಲು ಅನುಮೋದನೆ ನೀಡಿದೆ. ಪ್ರತಿ ವರ್ಷ ದುರ್ಗಾ ಪೂಜೆ / ದಸರಾ ರಜಾದಿನಗಳಿಗೆ ಮೊದಲು ಅರ್ಹ ರೈಲ್ವೆ ಉದ್ಯೋಗಿಗೆ PLB ಪಾವತಿಯನ್ನು ಮಾಡಲಾಗುತ್ತದೆ. ಈ ವರ್ಷವೂ ಸಹ, ಸುಮಾರು 10.91 ಲಕ್ಷ ಗೆಜೆಟೆಡ್ ಅಲ್ಲದ ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನಕ್ಕೆ ಸಮಾನವಾದ PLB ಮೊತ್ತವನ್ನು ಪಾವತಿಸಲಾಗುತ್ತಿದೆ. PLB ಪಾವತಿಯು ರೈಲ್ವೆ ನೌಕರರನ್ನು ರೈಲ್ವೆಯ ಕಾರ್ಯಕ್ಷಮತೆಯ ಸುಧಾರಣೆಗೆ ಕೆಲಸ ಮಾಡಲು ಪ್ರೇರೇಪಿಸಲು ಪ್ರೋತ್ಸಾಹಕವಾಗಿ ಕಾರ್ಯನಿರ್ವಹಿಸುತ್ತದೆ. ಪ್ರತಿ ಅರ್ಹ ರೈಲ್ವೆ ಉದ್ಯೋಗಿಗೆ 78 ದಿನಗಳ ವೇತನಕ್ಕೆ ಸಮಾನವಾದ PLB ಯ ಗರಿಷ್ಠ ಪಾವತಿಸಬಹುದಾದ ಮೊತ್ತ 17,951 ರೂ. ಮೇಲಿನ ಮೊತ್ತವನ್ನು ರೈಲ್ವೆ ಸಿಬ್ಬಂದಿಗಳಾದ ಹಳಿ ನಿರ್ವಹಣಾಕಾರರು, ಲೋಕೋ ಪೈಲಟ್‌ಗಳು, ರೈಲು…
ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಹಿರಿಯ ಸಾಹಿತಿ, ಅಕ್ಷರ ಮಾಂತ್ರಿಕ ಎಸ್ ಎಲ್ ಭೈರಪ್ಪ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳನ್ನು ಸೂಚಿಸಿದ್ದಾರೆ. https://twitter.com/siddaramaiah/status/1970787632062882109
ಶಿವಮೊಗ್ಗ : ಸಹಕಾರ ಸಂಸ್ಥೆ ಬೆಳೆಯಲು ಆಡಳಿತ ಮಂಡಳಿ ಹಾಗೂ ಷೇರುದಾರರ ಹೊಣೆಗಾರಿಕೆ ಮುಖ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಷೇರುದಾರರು ಸಂಘದಲ್ಲಿ ಮಾರಾಟಕ್ಕಿಟ್ಟಿರುವ ಪರಿಕರಗಳನ್ನು ಖರೀದಿ ಮಾಡುವ ಮೂಲಕ ಸಂಘದ ಬೆಳವಣಿಗೆಗೆ ಉತ್ತೇಜನ ನೀಡಬೇಕು ಎಂದು ಸೊರಬದ ಶ್ರೀಮಾರಿಕಾಂಬಾ ರೈತ ಉತ್ಪಾದಕರ ಸೌಹಾರ್ದ ಸಹಕಾರ ಸಂಘ ನಿಯಮಿತದ ಅಧ್ಯಕ್ಷ ಎಚ್.ಎನ್.ಚಂದ್ರಪ್ಪ ಗುಂಜನೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಚಿಕ್ಕಪೇಟೆಯಲ್ಲಿ ಕಾರ್ಯನಿರ್ವಹಿಸುವ ಶ್ರೀ ಮಾರಿಕಾಂಬಾ ರೈತ ಉತ್ಪಾದಕ ಸಹಕಾರ ಸಂಘದ ಪಕ್ಕದಲ್ಲಿರುವ ಶ್ರೀಸತ್ಯನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಎರಡನೇ ವರ್ಷದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹನಿಹನಿ ಕೂಡಿದರೆ ಹಳ್ಳ ಎನ್ನುವಂತೆ ನಾವು ಮಾಡುವ ಸಣ್ಣ ವಹಿವಾಟು ದೊಡ್ಡಮಟ್ಟದ ವ್ಯವಹಾರವಾಗಿ ಬದಲಾಗುತ್ತದೆ. ಜೊತೆಗೆ ಸಂಘದಲ್ಲಿ ಷೇರುದಾರರು ಬ್ಯಾಂಕಿನಲ್ಲಿ ಠೇವಣಿ ಇಡುವ ಬದಲು ನಮ್ಮ ಸಂಘದ ಹೂಡಿಕೆಯನ್ನು ಮಾಡಿದರೆ ಅತಿ ಅವಶ್ಯವಿರುವ ರೈತರಿಗೆ ಸಾಲ ನೀಡಲು ಅನುಕೂಲವಾಗುತ್ತದೆ. ಖಾಸಗಿ ಗೊಬ್ಬರದ ಅಂಗಡಿಗಳಲ್ಲಿ ಸರದಿ ಸಾಲಿನಲ್ಲಿ ನಿಂತು ಗೊಬ್ಬರ, ಕೀಟನಾಶಕಗಳನ್ನು…
ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 600 ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಒಂದು ಸಾರ್ವಜನಿಕ ಸೇವಾ ನಿರತ ಇಲಾಖೆಯಾಗಿದ್ದು, ಶುಶೂಷಾಧಿಕಾರಿ ಹುದ್ದೆಗಳನ್ನು ಒಳಗೊಂಡಂತೆ ವಿವಿಧ ವೃಂದದ ಅರೆ ವೈದ್ಯಕೀಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿಯನ್ನು ಕೋರುತ್ತಾ, ನೇರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ | ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ. ಆಯುಕ್ತಾಲಯದ ದಿನಾಂಕ: 01/09/2023ರ ಪುಸ್ತಾವನೆಗೆ ಸಂಬಂಧಿಸಿದಂತೆ ಮೇಲೆ ಓದಲಾದ ಕ್ರಮಾಂಕ(2)ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 1205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ…
ನವದೆಹಲಿ: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಹೊಸ ಕ್ಯಾಂಪಸ್ ಸ್ಥಾಪಿಸುವ ಪ್ರಸ್ತಾಪವನ್ನು ಆಕ್ಸೆಂಚರ್ ಹೊಂದಿದೆ. ಇದು ಭಾರತದಲ್ಲಿ ಸುಮಾರು 12,000 ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ ಎಂದು ಈ ವಿಷಯದೊಂದಿಗೆ ಪರಿಚಿತವಾಗಿರುವ ಮೂರು ಮೂಲಗಳು ರಾಯಿಟರ್ಸ್‌ಗೆ ತಿಳಿಸಿವೆ. ಉದ್ಯೋಗ ಸೃಷ್ಟಿಸಲು ಬದ್ಧವಾಗಿರುವ ದೊಡ್ಡ ಸಂಸ್ಥೆಗಳಿಗೆ ರಾಜ್ಯ ಸರ್ಕಾರವು ಎಕರೆಗೆ 0.99 ರೂಪಾಯಿ ($0.0112) ನಾಮಮಾತ್ರ ದರದಲ್ಲಿ ಗುತ್ತಿಗೆ ಭೂಮಿಯನ್ನು ನೀಡುತ್ತಿರುವುದರಿಂದ ಈ ಪ್ರಸ್ತಾಪ ಬಂದಿದೆ, ಈ ಹಿಂದೆ ಐಟಿ ದೈತ್ಯ ಕಂಪನಿಗಳಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಮತ್ತು ಕಾಗ್ನಿಜೆಂಟ್ ಈ ತಂತ್ರವನ್ನು ಬಳಸಿಕೊಂಡಿವೆ. ಭಾರತವು ಈಗಾಗಲೇ ಆಕ್ಸೆಂಚರ್‌ನ ಜಾಗತಿಕವಾಗಿ ಅತಿದೊಡ್ಡ ಕಾರ್ಯಪಡೆಯ ನೆಲೆಯಾಗಿದ್ದು, ಅದರ 790,000 ಉದ್ಯೋಗಿಗಳಲ್ಲಿ 300,000 ಕ್ಕೂ ಹೆಚ್ಚು ಜನರು ದೇಶದಲ್ಲಿದ್ದಾರೆ. ಮೂಲಗಳ ಪ್ರಕಾರ, ಕಂಪನಿಯು ಬಂದರು ನಗರವಾದ ವಿಶಾಖಪಟ್ಟಣದಲ್ಲಿ ಸುಮಾರು 10 ಎಕರೆ ಭೂಮಿಯನ್ನು ವಿನಂತಿಸಿದೆ ಮತ್ತು ರಾಜ್ಯ ಸರ್ಕಾರವು ಈ ಯೋಜನೆಯನ್ನು ಬೆಂಬಲಿಸುತ್ತಿದೆ ಎಂದು ವರದಿಯಾಗಿದೆ, ಆದರೂ ಅನುಮೋದನೆಗಳು ಸ್ವಲ್ಪ ಸಮಯ ತೆಗೆದುಕೊಳ್ಳುವ ನಿರೀಕ್ಷೆಯಿದೆ. “ಇದು ಆಕ್ಸೆಂಚರ್‌ನ…
ಬೆಂಗಳೂರು: ರಾಜ್ಯ ಸರ್ಕಾರವು ಅಧ್ಯಯನದ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳ ವಿದೇಶ ಪ್ರವಾಸವನ್ನು ಈ ಕೂಡಲೇ ಜಾರಿಗೆ ಬರುವಂತೆ ನಿರ್ಬಂಧಿಸಿ ಆದೇಶಿಸಿದೆ. ಈ ಮೂಲಕ ಅಧ್ಯಯನದ ಹೆಸರಿನಲ್ಲಿ ಅಧಿಕಾರಿಗಳು ಕೈಗೊಳ್ಳುತ್ತಿದ್ದ ವಿದೇಶ ಪ್ರವಾಸಕ್ಕೆ ಬ್ರೇಕ್ ಹಾಕಲಾಗಿದೆ. ಈ ಕುರಿತಂತೆ ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, 2024ನೇ ಸಾಲಿನ ಆಗಸ್ಟ್ ತಿಂಗಳಿನಿಂದ 2025ರ ಜುಲೈ ತಿಂಗಳವರೆಗೆ ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಅಧಿಕೃತ ವಿದೇಶ ಪ್ರವಾಸ ಕೈಗೊಂಡು ಅಧ್ಯಯನ ನಡೆಸಿ, ಕಲಿಕೆ ಹಾಗು ಶಿಫಾರಸ್ಸುಗಳೊಂದಿಗೆ ಸರ್ಕಾರಕ್ಕೆ ಅಧ್ಯಯನ ವರದಿಯನ್ನು ಒಂದು ವಾರದೊಳಗಾಗಿ ಸಲ್ಲಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಂದ ಸೂಚಿತವಾಗಿರುತ್ತದೆ ಎಂದಿದ್ದಾರೆ. ಆದರೆ, ಹಲವು ಅಧಿಕಾರಿಗಳು ಕೈಗೊಂಡಿರುವ ಅಧಿಕೃತ ವಿದೇಶ ಪ್ರವಾಸದ ವರದಿಗಳನ್ನು ಸಲ್ಲಿಸದಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಮುಂಬರುವ ದಿನಗಳಲ್ಲಿ ಅಧಿಕೃತ ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ಪ್ರಸ್ತಾವನೆಯನ್ನು ಸಲ್ಲಿಸುವ ಮುನ್ನ ಕಡ್ಡಾಯವಾಗಿ ಈ ಹಿಂದೆ ಕೈಗೊಂಡಿರುವ ಪ್ರವಾಸಗಳ ಕಲಿಕೆ ಹಾಗೂ ಅನುಷ್ಠಾನ ವರದಿ ನೀಡಿದ್ದಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ರೂಪಿಸಲಾಗಿರುವ ಕರ್ನಾಟಕ ರೋಗ್ಯ ಸಂಜೀವಿನಿ ಯೋಜನೆಯನ್ನು ಅಕ್ಟೋಬರ್.1, 2025ರಿಂದ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಅನುಷ್ಠಾನಗೊಳಿಸುವ ಸಂಬಂಧ ಮೇಲೆ ಕ್ರ.ಸಂ.(1) ರಿಂದ (6) ರಲ್ಲಿ ಓದಲಾದ ಸರ್ಕಾರದ ಆದೇಶ: ಸುತ್ತೋಲೆಗಳಲ್ಲಿ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ. ಯೋಜನೆಯಡಿ ಸರ್ಕಾರಿ ನೌಕರರ ನೋಂದಾವಣೆ, ಮಾಸಿಕ ವಂತಿಕೆ ಮತ್ತು ಯೋಜನೆಗೆ ಒಳಪಡಲು/ ಒಳಪಡದೇ ಇರಲು, ಆಯ್ಕೆ ವ್ಯಕ್ತಪಡಿಸುವುದು ಮುಂತಾದ ಅಂಶಗಳ ಕುರಿತು ಮೇಲೆ ಓದಲಾದ (6) ರ ದಿನಾಂಕ:…
ಬೆಂಗಳೂರು: ಆರ್ ಎಫ್ ಓ ವರ್ಗಾವಣೆಯಲ್ಲೂ ಭ್ರಷ್ಟಾಚಾರ ಎಂಬ ಪತ್ರಿಕೆಯೊಂದರ ವರದಿಯು ಸತ್ಯಕ್ಕೆ ದೂರವಾದದ್ದು ಹಾಗೂ ತಪ್ಪು ವರದಿಯಾಗಿದೆ ಎಂಬುದಾಗಿ ಕರ್ನಾಟಕ ರಾಜ್ಯ ವಲಯ ಅರಣ್ಯ ಅಧಿಕಾರಿಗಳ ಸಂಘವು ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ರಾಜ್ಯ ವಲಯ ಅರಣ್ಯ ಅಧಿಕಾರಿಗಳ ಸಂಘವು, ‘ಆರ್.ಎಫ್.ಓ. ವರ್ಗಾವಣೆಯಲ್ಲೂ ಭ್ರಷ್ಟಾಚಾರ: ಕರ್ನಾಟಕ ವಲಯ ಅರಣ್ಯ ಅಧಿಕಾರಿಗಳ ಸಂಘ’ ಎಂಬ ಶೀರ್ಷಿಕೆಯಡಿಯಲ್ಲಿ ಪತ್ರಿಕೆಯೊಂದರಲ್ಲಿ ಪ್ರಕಟಿಸಿರುವಂತ ವರದಿಯು ಸತ್ಯದೂರವಾಗಿರುವಂತದ್ದು. ನಮ್ಮ ಸಂಘ ಯಾವುದೇ ಸಂದರ್ಭದಲ್ಲೂ ಸಂದರ್ಭದಲ್ಲೂ ಆರ್.ಫ್.ಓ. ಆರ್.ಫ್.ಓ. ವರ್ಗಾವಣೆಯಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯರು ಭ್ರಷ್ಟಾಚಾರ ನಡೆದಿದೆ ಎಂದೂ ಹೇಳಿಲ್ಲ. ನಮ್ಮ ಸಂಘ ಅರಣ್ಯ ಸಚಿವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲೂ ಭ್ರಷ್ಟಾಚಾರ ಎಂಬ ಪದವನ್ನು ಬಳಕೆ ಮಾಡಿಲ್ಲ ಎಂದು ಹೇಳಿದೆ. ರಾಜ್ಯ ಸರ್ಕಾರವು ಈಗಾಗಲೇ ಅರಣ್ಯ ಇಲಾಖೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಮತ್ತು ಗಸ್ತು ವನಪಾಲಕ ಹುದ್ದೆಗಳಿಗೆ ಕಳೆದ 2 ವರ್ಷಗಳಿಂದ ಆನ್ ಲೈನ್ ಟ್ರಾನ್ಸಫರ್ ಕೌನ್ಸಲಿಂಗ್ ಪ್ರಕ್ರಿಯೆಯನ್ನು ಜಾರಿಗೆ ತಂದು…







