Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಜ.16ರಂದು 2025ನೇ ಸಾಲಿನ ಇಂಜಿನಿಯರಿಂಗ್, ಯೋಗ ಸೇರಿದಂತೆ ವಿವಿಧ ಕೋರ್ಸ್ ಗಳ ವ್ಯಾಸಂಗಕ್ಕಾಗಿ ಸಿಇಟಿ 2025ರ ಪರೀಕ್ಷೆಗೆ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿತ್ತು. ಈ ಬೆನ್ನಲ್ಲೇ ಯುಜಿ ಸಿಇಟಿ 2025ರ ಪರೀಕ್ಷೆಗೆ ಪಠ್ಯಕ್ರಮವನ್ನು ಪ್ರಕಟಿಸಿದೆ. 2025ನೇ ಸಾಲಿನ ಇಂಜಿನಿಯರಿಂಗ್, ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ್ ಮತ್ತು ಫಾರ್ಮ್-ಡಿ, ಕೃಷಿ ವಿಜ್ಞಾನ ಕೋರ್ಸುಗಳು, ವೆಟರಿನರಿ ಹಾಗೂ ಬಿಎಸ್ಸಿ ನರ್ಸಿಂಗ್ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ದಿನಾಂಕ 16-04-2025 ಮತ್ತು 17-04-2025ರಂದು ನಡೆಸಲು ನಿಗದಿಪಡಿಸಲಾಗಿದೆ ಎಂಬುದಾಗಿ ತಿಳಿಸಿತ್ತು. ಹೀಗಿದೆ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ ವೇಳಾಪಟ್ಟಿ ದಿನಾಂಕ 16-04-2025ರ ಬುಧವಾರ ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ. ಮಧ್ಯಾಹ್ನ 2.30ರಿಂದ 3.50ರವರೆಗೆ ರಾಸಾಯನಶಾಸ್ತ್ರ. ದಿನಾಂಕ 17-04-2025ರ ಗುರುವಾರದಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಗಣಿತ ಶಾಸ್ತ್ರ. ಮಧ್ಯಾಹ್ನ 2.30ರಿಂದ 3.50ರವರೆಗೆ ಜೀವಶಾಸ್ತ್ರ ಪರೀಕ್ಷೆ. ಇನ್ನೂ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆಯನ್ನು ಬೆಂಗಳೂರು, ಬೆಳಗಾವಿ, ವಿಜಯಪುರ ಮತ್ತು…
ದಕ್ಷಿಣ ಕನ್ನಡ: ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನ ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸಚಿವರು ಮಾತನಾಡುತ್ತಿದ್ದರು. ಸಾರ್ವಜನಿಕರಿಗೆ ತಾಲೂಕು ಆಸ್ಪತ್ರೆಗಳಲ್ಲಿಯೇ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳನ್ನ ಒದಗಿಸಿಕೊಡುವುದು ಅತಿ ಮುಖ್ಯವಾಗಿದೆ. ಜನರು ಜಿಲ್ಲಾಸ್ಪತ್ರೆಗಳೆ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಜಿಲ್ಲಾಸ್ಪತ್ರೆಗಳಲ್ಲಿ ಸಿಗುವ ಸೌಲಭ್ಯಗಳನ್ನ ತಾಲೂಕು ಆಸ್ಪತ್ರೆಗಳಲ್ಲಿಯೇ ನೀಡುವ ಮೂಲಕ ಜನರ ಸಮೀಪಕ್ಕೆ ಆರೋಗ್ಯ ಸೇವೆಗಳನ್ನ ಒದಗಿಸುತ್ತ ಮುಂಬರುವ ಬಜೆಟ್ ನಲ್ಲಿ ಮಹತ್ವದ ಯೋಜನೆ ಘೋಷಣೆಯಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಈ ನಿಟ್ಟಿನಲ್ಲಿ ಪ್ರಸ್ತುತ ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಸಂಖ್ಯೆಯನ್ನ ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ. ಇದರಿಂದ ರಾತ್ರಿ ವೇಳೆಯಲ್ಲಿಯೂ ಆಸ್ಪತ್ರೆಗಳಿಗೆ ಬರುವ ಜನರಿಗೆ ತಜ್ಞ ವೈದ್ಯರ ಸೇವೆ ಲಭ್ಯವಾಗಲಿದೆ. ಅಲ್ಲದೇ ತಜ್ಞ ವೈದ್ಯರಿಗೆ ಬೇಕಾಗುವ ಎಲ್ಲ ವೈದ್ಯಕೀಯ ಪರಿಕರಿಗಳನ್ನ ಸರ್ಕಾರ ತಾಲೂಕು ಆಸ್ಪತ್ರೆಗಳಲ್ಲಿಯೂ…
ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ಎನ್ನುವಂತೆ ಏಪ್ರಿಲ್ ನಿಂದ ಪ್ರತಿ ತಿಂಗಳು 10,000 ಮುಂಗಡ ಪಾವತಿಗೆ ಸರ್ಕಾರ ನಿರ್ಧರಿಸಿದೆ. ಇಂದು ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಶಾಸಕ ಹರೀಶ್ ಪುಂಜಾ ವೇದಿಕೆಯ ಮೇಲಿದ್ದ ಸಚಿವ ದಿನೇಶ್ ಗುಂಡೂರಾವ್ ಎದುರು ಎರಡು ಬೇಡಿಕೆಯನ್ನ ಮುಂದಿಟ್ಟರು. ನಾನೊಬ್ಬ ಆಶಾ ಕಾರ್ಯಕರ್ತೆಯರ ಕುಟುಂಬದಿಂದ ಬಂದವನಾಗಿದ್ದು, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಿಸಬೇಕು. ಹಾಗೂ 70 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯನ್ನ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು. ಈ ಕುರಿತು ತಮ್ಮ ಭಾಷಣದ ವೇಳೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್ ಆಶಾ ಕಾರ್ಯಕರ್ತೆಯರಿಗೆ ಏಪ್ರಿಲ್ ತಿಂಗಳಿನಿಂದ 10 ಸಾವಿರ ಮುಂಗಡವಾಗಿ ನೀಡಲು ಈಗಾಗಲೇ ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಿನ ಸಹಕಾರ ನೀಡಲಾಗಿದೆ. ಆದರೆ ಕೇಂದ್ರ ಸರ್ಕಾರ ಗೌರವಧನ ಹೆಚ್ಚಿಸುವ ಕಾರ್ಯ ಮಾಡಬೇಕು. ನೀವು, ನಿಮ್ಮ ಸಂಸದರು ಕೇಂದ್ರದಲ್ಲಿ ಪ್ರಭಾವ…
ಹುಬ್ಬಳ್ಳಿ: “ಗೋಡ್ಸೆ ವಂಶಸ್ಥರು ನಿರಂತರವಾಗಿ ಗಾಂಧಿ ಅವರ ವಿಚಾರಧಾರೆಗಳನ್ನು ಹತ್ತಿಕ್ಕುತ್ತಲೇ ಬಂದಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪಕ್ಷದ ನಾಯಕರೊಂದಿಗೆ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ನಂತರ ಸುರ್ಜೆವಾಲ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಜತೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಸರ್ಕಾರದ ಹಣದಲ್ಲಿ ನಕಲಿ ಗಾಂಧಿಗಳು ಸಮಾವೇಶ ಮಾಡುತ್ತಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಜನವರಿ 30ರಂದು ಗಾಂಧಿ ಅವರ ಹತ್ಯೆಯಾದಾಗ ಅದು ಕೇವಲ ಅವರ ದೇಹದ ಹತ್ಯೆ ಮಾತ್ರವಲ್ಲ. ಗಾಂಧಿಜಿ ಅವರ ವಿಚಾರಧಾರೆಯ ಹತ್ಯೆಯಾಗಿದೆ. ಭಾರತದ ಸಂಸ್ಕೃತಿ ಹಾಗೂ ಸಂವಿಧಾನದ ವಿಚಾರವಾಗಿ ಇಂದಿಗೂ ಆ ಹೋರಾಟ ಮುಂದುವರಿಯುತ್ತಿದೆ. ಗೋಡ್ಸೆ, ಹಿಂಸೆ, ವಿಭಜನೆ ವಿಚಾರಧಾರೆ ಹಾಗೂ ಪ್ರೀತಿ, ಸೌಹಾರ್ದತೆಯ ವಿಚಾರ ನಡುವೆ ಸಂಘರ್ಷ ನಡೆಯುತ್ತಿದೆ. ಬಿಜೆಪಿಯವರು ಬೇಧ ಭಾವ ಮಾಡುತ್ತಾರೆ. ನಾವು ಎಲ್ಲರನ್ನು ಸಮನಾಗಿ ಕಾಣುತ್ತೇವೆ. ಬಿಜೆಪಿ ದಲಿತ, ಶೋಷಿತ, ಆದಿವಾಸಿ, ಬಡವರು, ಮಹಿಳೆಯರು, ಯುವಕರ…
ಬೆಂಗಳೂರು: ನೀವು ಮನೆಯಲ್ಲಿ ಬಳಸಿದ ನಂತ್ರ ಪ್ಲಾಸ್ಟಿಕ್ ವಸ್ತುಗಳನ್ನು ಸುಡಬೇಡಿ. ಹೀಗೆ ಸುಡುವಾಗ ಅದರಿಂದ ಹೊರ ಬರುವಂತ ಹೊಗೆಯನ್ನು ಸೇರಿಸುವುದರಿಂದ ಕ್ಯಾನ್ಸರ್ ತಂದೊಡ್ಡಬಹುದಂತೆ. ಹೀಗಾಗಿ ಸುಡದಂತೆ ಸರ್ಕಾರ ಮನವಿ ಮಾಡಿದೆ. ಹೌದು ಸುಟ್ಟ ಪ್ಲಾಸ್ಟಿಕ್ ತ್ಯಾಜ್ಯದಿದಂ ಹೊರಬರುವ ವಿಷಕಾರಿ ಅನಿಲವು ಕ್ಯಾನ್ಸರ್ ನಂತಹ ಮಾರಣಾಂತಿಕ ಕಾಯಿಲೆಯನ್ನು ತಂದೊಡ್ಡಬಹುದಾಗಿದೆ. ಈ ಹಿನ್ನಲೆಯಲ್ಲಿ ಎಚ್ಚರದಿಂದಿರಿ. ಪ್ಲಾಸ್ಟಿಕ್ ತ್ಯಾಜ್ಯವನ್ನು ಸುಡದಿರಿ. ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ತಗ್ಗಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ. https://twitter.com/KarnatakaVarthe/status/1880485379608084718 https://kannadanewsnow.com/kannada/passengers-watch-out-our-metro-traffic-will-be-disrupted-tomorrow/ https://kannadanewsnow.com/kannada/bpl-apl-cardholders-note-january-31-is-the-last-date-for-e-kyc-otherwise-the-ration-will-not-come/
ಬೆಂಗಳೂರು: ನಗರದ ನೇರಳೆ ಮಾರ್ಗದಲ್ಲಿ ಹಳಿಗಳ ನಿರ್ವಹಣೆಯ ಕಾರಣದಿಂದಾಗಿ ನಾಳೆ ಸಂಚಾರ ಸ್ಥಗಿತಗೊಳ್ಳುತ್ತಿದೆ. ಈ ಮೂಲಕ ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ನಮ್ಮ ಮೆಟ್ರೋ ನೇರಳ ಮಾರ್ಗದಲ್ಲಿ ಹಳಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಂಪೇಗೌಡ ಮೆಜೆಸ್ಟಿಕ್ನಿಂದ ಇಂದಿರಾನಗರದವರೆಗೆ ಜನವರಿ 19 ರಂದು ಬೆಳಗ್ಗೆ 7 ರಿಂದ ಬೆಳಗ್ಗೆ 10ರ ವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳ್ಳಲಿದೆ. ನೇರಳೆ ಮಾರ್ಗದಲ್ಲಿ ಚಲ್ಲಘಟ್ಟ – ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಹಾಗೂ ವೈಟ್ಫೀಲ್ಡ್ – ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 7 ರಿಂದಲೇ ಮೆಟ್ರೋ ಸಂಚಾರ ಇರಲಿದೆ. https://twitter.com/KarnatakaVarthe/status/1880522362875179208 https://kannadanewsnow.com/kannada/e-khata-mandatory-for-registration-of-immovable-properties-just-register-at-home/ https://kannadanewsnow.com/kannada/bpl-apl-cardholders-note-january-31-is-the-last-date-for-e-kyc-otherwise-the-ration-will-not-come/
ಬೆಂಗಳೂರು: ನಗರದಲ್ಲಿ ಸ್ಥಿರಾಸ್ತಿಗಳ ನೋಂದಣಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಈಗ ಕಚೇರಿಗೆ ಹೋಗಿಯೇ ಇ-ಖಾತಾಗೆ ಅರ್ಜಿ ಸಲ್ಲಿಸುವ ಅವಶ್ಯಕತೆಯಿಲ್ಲ. ಜಸ್ಟ್ ಮನೆಯಿಂದಲೇ ನೋಂದಾಯಿಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಆ ಬಗ್ಗೆ ಮುಂದೆ ಓದಿ. ಈ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಮಾಹಿತಿ ನೀಡಲಾಗಿದ್ದು, ಕಚೇರಿಗೆ ಅಲೆಯಬೇಕಾಗಿಲ್ಲ. ಅಧಿಕಾರಿಗಳನ್ನು ಭೇಟಿ ಮಾಡಬೇಕಿಲ್ಲ. ಮನೆಯಿಂದಲೇ ಸ್ಥಿರಾಸ್ತಿಗಳ ನೋಂದಣಿಗೆ ಇ-ಖಾತಾಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದೆ. ಅಗತ್ಯ ದಾಖಲೆಗಳನ್ನು ಆನ್ ಲೈನ್ ನಲ್ಲಿ ಸಲ್ಲಿಸಿ, ಇ-ಖಾತಾ ಪಡೆದುಕೊಳ್ಳಬಹುದು. ಸಾರ್ವಜನಿಕರು ತಮ್ಮ ಇ-ಖಾತಾವನ್ನು ತಾವೇ ಮುದ್ರಿಸಿಕೊಳ್ಳುವ ಅವಕಾಶ ಕೂಡ ಇದೆ ಅಂತ ಹೇಳಿದೆ. ಬಿಬಿಎಂಪಿಯ ಅಂತಿಮ ಇ-ಖಾತಾ ಪಡೆಯಲು ಬಹು ವಿಧಾನಗಳು: 1. ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ಆಸ್ತಿಗಳನ್ನು ತಕ್ಷಣವೇ ಮಾರಾಟ ಮಾಡಲು ಅಥವಾ ವರ್ಗಾಯಿಸಲು ಅಗತ್ಯವಿಲ್ಲದ ನಾಗರಿಕರು ಅಂತಿಮ ಇಖಾತಾ ಪಡೆಯಲು ಆತುರ ಅಗತ್ಯವಿಲ್ಲ. ಕರಡು ಇ-ಖಾತಾವನ್ನು ಡೌನ್ಲೋಡ್ ಮಾಡಿ ಮತ್ತು ನಂತರ ನಿಮ್ಮ ಅನುಕೂಲಕರ ಸಮಯದಲ್ಲಿ ಅಂತಿಮ ಇ-ಖಾತಾ ಪಡೆಯಲು ಹೆಚ್ಚುವರಿ ಮಾಹಿತಿಯನ್ನು ಆನ್ಲೈನ್ನಲ್ಲಿ ಸಲ್ಲಿಸಿ. ತುರ್ತಾಗಿ…
ಬೆಂಗಳೂರು: ನಗರದಲ್ಲಿ ತಾನು ಕಳೆದ ಬಾಲ್ಯದ ದಿನಗಳನ್ನು, ಶಾಲಾ ಕಾಲೇಜಿನ ಜೀವನನ್ನು ನಟ ರಜನಿಕಾಂತ್ ನೆನಪು ಮಾಡಿಕೊಂಡಿದ್ದಾರೆ. ಎಪಿಎಸ್ ಕಾಲೇಜಿನಲ್ಲಿ ಓದಿದಂತ ಶಾಲಾ ದಿನಗಳನ್ನು ನೆನಪಿಸಿಕೊಂಡು ವೀಡಿಯೋ ಮಾಡಿ ತಿಳಿಸಿದ್ದಾರೆ. ಈ ಬಗ್ಗೆ ಬ್ಯಾಂಕಾಂಕ್ ನಿಂದ ವೀಡಿಯೋ ಬಿಡುಗಡೆ ಮಾಡಿರುವಂತ ಅವರು, ಎಪಿಎಸ್ ಅಲ್ಯೂಮಿನಿಯ ವೇಳೆಯಲ್ಲಿ ನಾನು ಇರಬೇಕಿತ್ತು. ಆದರೇ ಇಲ್ಲಿ ಶೂಟಿಂಗ್ ಗೆ ಬಂದಿರುವ ಕಾರಣ, ಭಾಗಿಯಾಗೋದಕ್ಕೆ ಸಾಧ್ಯವಾಗಿಲ್ಲ ಅಂತ ವೀಡಿಯೋದಲ್ಲಿ ತಿಳಿಸಿದ್ದಾರೆ. ಎಲ್ಲರಿಗೂ ನಮಸ್ಕಾರ. ಎಪಿಎಸ್ ಹೈಸ್ಕೋಲ್ ನಲ್ಲಿ ಓದಿದೆ ಎನ್ನುವುದೇ ನನಗೆ ಹೆಮ್ಮೆ. ಗಂಗಾಧರೇಶ್ವರ ದೇವಸ್ಥಾನದ ಬಳಿಯಲ್ಲಿ ಪ್ರಾಥಮಿಕ ಶಾಲೆಯನ್ನು ಓದಿದ್ದು. ನಾನೇ ಕ್ಲಾಸಿಗೆ ಫಸ್ಟ್. ಮಾನಿಟರ್ ಕೂಡ ಆಗಿದ್ದೆ. ಪ್ರಾಥಮಿಕ ಶಾಲೆಯಲ್ಲೇ ಶೇ.98 ತೆಗೆದಿದ್ದೆ. ನಮ್ಮ ಅಣ್ಣ ನನ್ನು ಪ್ರೌಢ ಶಾಲೆಗೆ ಇಂಗ್ಲೀಷ್ ಮೀಡಿಯಂಗೆ ಹಾಕಿದರು. ನನಗೆ ಆಗ ಕಷ್ಟ ಆಗಿತ್ತು. 8, 9 ಹೇಗೋ ಪಾಸ್ಟ್ ಮಾಡಿದೆ. ಆದರೇ ಎಸ್ ಎಸ್ ಎಲ್ ಸಿಯಲ್ಲಿ ಫೇಲ್ ಆದೆ ಎಂದರು. ಕೆಮಿಸ್ಟ್ರಿ ಮಿಸ್ ಒಬ್ಬರು ನನಗೆ…
ವಿಜಯಪುರ: ಜಿಲ್ಲೆಯಲ್ಲಿ ಬುಲೆರೋ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಡಿಕ್ಕಿಯ ರಭಸಕ್ಕೆ ಬೈಕ್ ಸವಾರರ ರುಂಡ ದೇಹದಿಂದಲೇ ಬೇರ್ಪಟ್ಟಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ಬಳಿಯಲ್ಲಿ ಬುಲೆರೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ರಾಯಚೂರು ಜಿಲ್ಲೆಯ ಜಕ್ಕೇರ ತಾಂಡಾದ ವಜ್ರಮುನಿ ಚೌವ್ಹಾಣ್ ಎಂಬಾತ ರುಂಡವೇ ದೇಹದಿಂದ ಬೇರ್ಪಟ್ಟಿದೆ. ವಿಜಯಪುರಕ್ಕೆ ಕಬ್ಬು ಕಟಾವು ಮಾಡೋದಕ್ಕೆ ತೆರಳುತ್ತಿದ್ದಂತ ವೇಳೆಯಲ್ಲಿ ಈ ಅಪಘಾತ ಸಂಭವಿಸಿದೆ. ಬುಲೆರೋ ವಾಹನ ಡಿಕ್ಕಿಯಾದ ರಭಸಕ್ಕೆ ವಜ್ರಮುನಿ ದೇಹದಿಂದಲೇ ರುಂಡ ಹಾರಿ ಬೇರ್ಪಟ್ಟಿದೆ. ಸ್ಥಳಕ್ಕೆ ಆಗಮಿಸಿದಂತ ಬಸವನಬಾಗೇವಾಡಿ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/jee-main-session-1-admit-card-released-download-by-following-this-step/ https://kannadanewsnow.com/kannada/bpl-apl-cardholders-note-january-31-is-the-last-date-for-e-kyc-otherwise-the-ration-will-not-come/
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) ಜಂಟಿ ಪ್ರವೇಶ ಪರೀಕ್ಷೆ (Joint Entrance Examination -JEE) ಮೇನ್ 2025 ರ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಜೆಇಇ ಮೇನ್ 2025 ಹಾಲ್ ಟಿಕೆಟ್ಗಳನ್ನು ಅಧಿಕೃತ ವೆಬ್ಸೈಟ್ – jeemain.nta.nic.in ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಈ ವರ್ಷ, ಜೆಇಇ ಮೇನ್ 2025 ಸೆಷನ್ 1 ಅನ್ನು 2025 ರ ಜನವರಿ 22 ರಿಂದ 30 ರವರೆಗೆ ನಡೆಸಲಾಗುವುದು. ಅಧಿಕೃತ ಸೂಚನೆ ಮತ್ತು ಹಿಂದಿನ ಎನ್ಟಿಎ ಪ್ರವೃತ್ತಿಯ ಪ್ರಕಾರ, ಪರೀಕ್ಷಾ ದಿನಾಂಕಕ್ಕೆ ಮೂರು ದಿನಗಳ ಮೊದಲು ಹಾಲ್ ಟಿಕೆಟ್ಗಳನ್ನು ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅದಕ್ಕೆ ಅನುಗುಣವಾಗಿ ಪ್ರಯಾಣದ ವ್ಯವಸ್ಥೆಗಳನ್ನು ಮಾಡಬಹುದು ಎಂದು ಖಚಿತಪಡಿಸಿಕೊಳ್ಳಲು ಈ ತಿಂಗಳ ಆರಂಭದಲ್ಲಿ ಸಿಟಿ ಸ್ಲಿಪ್ ಅನ್ನು ಬಿಡುಗಡೆ ಮಾಡಲಾಯಿತು. ಜೆಇಇ ಮೇನ್ಸ್ ಪ್ರವೇಶ ಪತ್ರವು ಪರೀಕ್ಷೆಗೆ ಹಾಜರಾಗಲು ಅತ್ಯಗತ್ಯ ದಾಖಲೆಯಾಗಿದೆ ಎಂದು ಅಭ್ಯರ್ಥಿಗಳು ತಿಳಿದಿರಬೇಕು. ಅದಿಲ್ಲದೆ, ಅವರನ್ನು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.…